Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಇದನ್ನು ಮಹಾತ್ಮರಿಂದಲೇ ಪಡೆದುಕೊಳ್ಳಬೇಕೆಂದು ಖೇಡಗಿ ವಿರಕ್ತಮಠದ ಶಿವ ಬಸವರಾಜೇಂದ್ರ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಬುಧವಾರ ತಾಲೂಕಿನ ಅಗಡಖೇಡ ಗ್ರಾಮದಲ್ಲಿ ಲಿಂ. ಪ್ರಭುಲಿಂಗೇಶ್ವರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾವು ಬದುಕಿನಲ್ಲಿ ಒಳ್ಳೆಯ ರೀತಿಯಾಗಿ ಇನ್ನೊಬ್ಬರಿಗೆ ಸಹಾಯ ಹಸ್ತ ನೀಡುವಂತ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಈ ಸಮಾಜ ಸುಂದರವಾಗಿ ಬೆಳೆಯಬಹುದೆಂದು ಅವರು ತಿಳಿಸಿ ಭಕ್ತರಲ್ಲಿ ಹೃದಯ ಶ್ರೀಮಂತಿಕೆ ಇರಬೇಕು. ದೈವಭಕ್ತಿ ಇರುವವರಿಗೆ ಗುರವಿನ ಆಶೀರ್ವಾದ ಇರುತ್ತದೆ ಎಂದರು.ಇಂಚಗೇರಿ ಬೃಹನ್ಮಮಠದ ಶಂಭುಲಿಂಗ ಶಿವಾಚಾರ್ಯರು ಹಾಗೂ ಚಡಚಣ ವಿರಕ್ತಮಠದ ಷಡಕ್ಷರಿ ಮಹಾಸ್ವಾಮಿಗಳು ಉಪಸ್ಥಿರಿದ್ದು ಆಶೀರ್ವಚನ ನೀಡಿ, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮಾಂತರ ಪ್ರದೇಶಗಳಲ್ಲಿ ನಡೆದಾಗ ಮಾತ್ರ ಸಮಾಜದಲ್ಲಿ ನಾವು ಹಲವಾರು ವಿಷಯಗಳನ್ನು ತಿಳಿಯುತ್ತೇವೆ ಎಂದರುಜಾತ್ರಾ ಮಹೋತ್ಸವ ಅಂಗವಾಗಿ ಬೆಳಗ್ಗೆ ಲಿಂಗೈಕ್ಯ ಪ್ರಭುಲಿಂಗೇಶ್ವರ ಶಿವಯೋಗಿಗಳ ಕತೃ ಗದ್ದುಗೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು ತಾಲೂಕಿನಾದ್ಯಂತ ಶಾಂತಿಯುತವಾಗಿ ನಡೆದಿದೆ. ಪ್ರಥಮ ಭಾಷೆ ಕನ್ನಡ ಉರ್ದು ಮತ್ತು ಇಂಗ್ಲೀಷ್ ಮಾದ್ಯಮದಲ್ಲಿ ಆಯಾ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.ಅನೇಕ ಕಡೆ ವಿದ್ಯಾರ್ಥಿಗಳನ್ನು ಹೂವು ನೀಡಿ ಬರಮಾಡಿಕೊಂಡರೆ ತಾಂಬಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ನು ನೀಡಿ ಸ್ವಾಗತಿಸಿದರು.ಒಟ್ಟು ೪೭೪೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು ೪೬೫೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ೮೮ ವಿದ್ಯಾರ್ಥಿಗಳು ಪರೀಕ್ಷೆ ಗೈರಾಗಿದ್ದರು ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಎ.ಒ.ಹೂಗಾರ ತಿಳಿಸಿದ್ದಾರೆ.ಸ್ಥಳಿಯ ಜಾಗೃತದಳದ ತಹಸೀಲ್ದಾರ ಬಿ.ಎಸ್.ಕಡಕಬಾವಿ, ತಾ.ಪಂ ಇಒ ಭೀಮಾಶಂಕರ ಕನ್ನೂರ ಮತ್ತು ಕ್ಷೇತ್ರಶಿಕ್ಷಣಾಧಿಕಾರಿ ಸಯಿದಾ ಮುಜಾವರ ಹಲವಾರು ಕೇಂದ್ರಗಳಿಗೆ ಭೇಟಿ ನೀಡಿದರು.ಸ್ಥಾನಿಕ ಜಾಗೃತದಳದವರು ಎಲ್ಲ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದರು. ೧೯ ಕೇಂದ್ರಗಳಲ್ಲೂ ಸಿ.ಸಿ.ಕ್ಯಾಮೇರಾ ಅಳವಡಿಸಲಾಗಿತ್ತು. ಜಿಲ್ಲಾಧಿಕಾರಿಯಾಗಲೀ ಶಿಕ್ಷಣ ಇಲಾಖೆ ಯಾವದೇ ಹಿರಿಯ ಅಧಿಕಾರಿಗಳು ತಮ್ಮ ಕಚೇರಿಯಿಂದಲೇ ಯಾವದೇ ಕೇಂದ್ರದ ಪರೀಕ್ಷೆ ನೋಡುವ ವ್ಯವಸ್ಥೆ ಮಾಡಲಾಗಿತ್ತು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಹೊರ ವಲಯದ ಹಂಚನಾಳ ಕೆರೆಯ ಕಲುಷಿತ ನೀರನ್ನು ಸಂಸ್ಕರಿಸಬೇಕು ಹಾಗೂ ಕೆರೆ ಅಭಿವೃದ್ಧಿಪಡಿಸಿ ಸೌಂದರ್ಯೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ಇತ್ತೀಚೆಗೆ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಉಸ್ತವಾರಿ ಸಚಿವರು, ಪ್ರಾಧಿಕಾರದ ವತಿಯಿಂದ ೨೦೨೫-೨೬ ನೇ ಸಾಲಿನಲ್ಲಿ ಹಂಚನಾಳ ಕೆರೆಯ ಪುನರುಜ್ಜೀವನ ಹಾಗೂ ಸೌಂದರೀಕರಣ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.ಜೊತೆಗೆ ಹಾಲಿ ಇರುವ ಎಸ್.ಟಿ.ಪಿಯನ್ನು ಉನ್ನತೀಕರಿಸಿ, ಸಂಸ್ಕರಿಸಿದ ಶುದ್ದ ನೀರನ್ನು ಮಾತ್ರ ಹಂಚನಾಳ ಕೆರೆಗೆ ಬಿಡಬೇಕೆಂದು ಸೂಚಿಸಿದ್ದರು.ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕೈಗೊಂಡು ಬುಧವಾರ ಹಂಚನಾಳ ಕೆರೆಗೆ ಭೇಟಿ ನೀಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೆರೆಯ ಸುತ್ತಲೂ ೩೦ ಮೀ. ಅಗಲದ ಬಫರ್ ಕಡ್ಡಾಯವಾಗಿ ಮೀಸಲಿರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ನಗರಾಭಿವೃದ್ದಿ…
ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ, ಅಂತಹ ಮಕ್ಕಳಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವ ಮೂಲಕ ಅಪೌಷ್ಠಿಕತೆ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಕೈ ಜೋಡಿಸಬೇಕು ಎಂದರು.ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪೌಷ್ಟಿಕತೆ ನಿವಾರಣಾ ಕೇಂದ್ರದಲ್ಲಿ ದಾಖಲಾಗುವ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಕುರಿತಾಗಿ…
ಎಲ್ಲೆಲ್ಲೂ ಭಕ್ತಿ ಭಾವರಸಗಳ ಪರಿಮಳ | ಪಲ್ಲಕ್ಕಿಗಳ ಕಲರವ | ಕೃಷ್ಣೆಯ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಬುಧವಾರ ಬೆಳ್ಳಂಬೆಳಿಗ್ಗೆ ನೂರಾರು ದೇವ, ದೇವತೆಗಳ ಪಲ್ಲಕ್ಕಿಗಳ ಮಹಾಪೂರವೇ ಹರಿದು ಬಂದವು. ಕೃಷ್ಣಾ ನದಿ ತೀರದತ್ತ ಲಗ್ಗೆಯಿರಿಸಿ ಭಕ್ತಿ ಭಾವ ರಸಗಳ ಪರಿಮಳ ಬೀರಿದವು.ಎಲ್ಲೆಲ್ಲೂ ಪಲ್ಲಕ್ಕಿಗಳ ಕಲರವ. ಕೃಷ್ಣೆಯ ಪವಿತ್ರ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ ನೋಡುವುದೇ ಒಂದು ಸುಂದರ ಅನುಭವದಂತಿತ್ತು. ಡೊಳ್ಳಿನ ನಿನಾದ. ಸಹಸ್ರಾರು ಜನರು ಪಲ್ಲಕ್ಕಿಯಲ್ಲಿ ದೇವರ ಮೂರ್ತಿ ತರುತ್ತಿರುವ ದೃಶ್ಯ, ಪಲ್ಲಕ್ಕಿಗಳ ಸ್ನಾನ, ಗುಂಪಾಗಿ ಅಡುಗೆ ಮಾಡಿ, ನೈವೇದ್ಯ ಸಮರ್ಪಿಸುವ ದೃಶ್ಯ ಕಂಡುಬಂದಿತು. ಭಾರತೀಯ ಪರಂಪರೆಯ ಪ್ರಕಾರ ಯುಗಾದಿಯಿಂದ ಹೊಸ ವರ್ಷ ಆರಂಭ. ಯುಗಾದಿಯು ವರ್ಷದ ಮೊದಲ ಹಬ್ಬ. ಧಾರ್ಮಿಕ ಚೌಕಟ್ಟಿನಲ್ಲಿ ವಿಶೇಷ ಮಹತ್ವ ಹೊಂದಿರುವ ಈ ದಿನ ಹೊಸ ವರ್ಷಕ್ಕೆ ಮುನ್ನುಡಿ ಬರೆದಿದೆ. ಹಾಗಾಗಿ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಲ್ಲಿ ದೇವರ ಉತ್ಸವ ಮೂರ್ತಿಗಳಿಗೆ ಸ್ನಾನ ಮಾಡಿಸುವುದು ಉತ್ತರ ಕರ್ನಾಟಕದ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಯಲಗೂರು ಗ್ರಾಮ ಪಂಚಾಯ್ತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬುಧವಾರ ಜರುಗಿತು.ಅಧ್ಯಕ್ಷರಾಗಿ ಯಲಗೂರು ಗ್ರಾಮದ ಶೃತಿ ಭೀಮಣ್ಣ ತಳವಾರ, ಉಪಾಧ್ಯಕ್ಷರಾಗಿ ಯಲ್ಲಮ್ಮನಬೂದಿಹಾಳ ಗ್ರಾಮದ ಚಂದ್ರಮ್ಮ ಬಸವರಾಜ ಅಮಾತಿಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ನಿಡಗುಂದಿ ತಾ.ಪಂ ಇಓ ವೆಂಕಟೇಶ ವಂದಾಲ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.ಆಯ್ಕೆಯಾದ ನಂತರ ಚುನಾಯಿತ ಇಬ್ಬರ ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮುಖಂಡ ಶ್ಯಾಮ ಪಾತರದ, ಭೀಮಣ್ಣ ಅವಟಗೇರ, ಗುಂಡಪ್ಪ ತಳವಾರ, ರಾಜು ಪಲ್ಲಕ್ಕಿ, ಶ್ರೀಶೈಲ ಡೆಂಗಿ, ಬಸವರಾಜ ಹೂಗಾರ, ಗುಂಡಪ್ಪ ಪೂಜಾರ, ರಂಗಣ್ಣ ಪೂಜಾರ, ಕೃಷ್ಣಾ ದಾಸರ, ಯಲಗೂರೇಶ ಮುದಿಯಪ್ಪನವರ, ಯಂಕಣ್ಣ ಪೂಜಾರ, ರಾಜು ಮೇಟಿ ಮತ್ತೀತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ವಿದ್ಯಾರ್ಥಿಗಳು ಕೇವಲ ಪುಸ್ತಕ ಜ್ಞಾನಕ್ಕೆ ಸೀಮಿತವಾಗದೆ ಉತ್ತಮ ಮೌಲ್ಯಗಳು, ಶಿಸ್ತು ಹಾಗೂ ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಂದಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರವಿಂದ ಡೋಣುರ ಹೇಳಿದರು.ಸಿಂದಗಿ ನಗರದ ಕಲ್ಯಾಣ ನಗರದಲ್ಲಿರುವ ಶ್ರೀ ಹೀರಾಮಾತಾ ಹಿರಿಯ ಪ್ರಾಥಮಿಕ ಶಾಲೆಯ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ಬಿ.ಸಿ.ಪಾಟೀಲ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣವನ್ನು ಸರಿಯಾಗಿ ಕಲಿತು ತಂದೆ-ತಾಯಿ, ಶಾಲೆ ಹಾಗೂ ಸಂಸ್ಥೆಗೆ ಕೀರ್ತಿ ತರುವಂತೆ ಸಾಧನೆ ಮಾಡಬೇಕು ಎಂದರು.ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ವಹಿಸಿದ ಬೋರಗಿ—ಪುರದಾಳದ ತಪೋರತ್ನ ಮಹಾಲಿಂಗೇಶ್ವರ ಪೂಜ್ಯರು ಆಶೀರ್ವಚನ ನೀಡಿದರು.ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಂಸ್ಥೆಯ ಅಧ್ಯಕ್ಷೆ ಲಲಿತಾಬಾಯಿ ರಾಥೋಡ, ಅಯ್.ಎಸ್.ಟಕ್ಕೆ, ಎಸ್.ಎಸ್.ತಳ್ಳೊಳ್ಳಿ, ಡಿ.ಬಿ.ಮುಲ್ಲಾ, ಎನ್.ಎಸ್.ತಿಳುಗೂಳ, ಜಯಶ್ರೀ ಹದನೂರು, ಬುಳ್ಳಪ್ಪ ಡಿ, ಬಂಗಾರಿ ಕೊಡಿಯಾ, ಬಸವರಾಜ ಚವಾಣ, ಪ್ರಶಾಂತ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಗತ್ತಿನಲ್ಲಿ ಸುಮಾರು ೬೦೦೦ ಕ್ಕೂ ಅಧಿಕ ಭಾಷೆಗಳಿದ್ದು ಅವುಗಳಲ್ಲಿ ೨೫೦೦ ಕ್ಕೂ ಹೆಚ್ಚು ಭಾಷೆಗಳು ಭಾರತದಲ್ಲಿವೆ. ಇನ್ನು ಕೆಲವು ಭಾಷೆಗಳು ಅಳಿವಿನಂಚಿನಲ್ಲಿವೆ. ಇವುಗಳ ಮಧ್ಯದಲ್ಲಿ ಸಾವಿಲ್ಲದ, ಕೊನೆಯಿಲ್ಲದ ಭಾಷೆ ಎಂದರೆ ಅದು ನಮ್ಮ ಕನ್ನಡ ಭಾಷೆ ಎಂದು ಸಿಂದಗಿಯ ಜಿ.ಪಿ.ಪೋರವಾಲ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ನಾಗರಾಜ ಮುರಗೋಡ ಹೇಳಿದರು.ಸಿಂದಗಿ ನಗರದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಕನ್ನಡ ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡವೆಂದರೆ ಕೇವಲ ನುಡಿ, ಭಾಷೆಯಲ್ಲ ನಾವಾಡುವ ಪ್ರತಿ ಭಾವನೆಯಾಗಿದೆ. ಉದ್ಯೋಗಕ್ಕಾಗಿ ಅನ್ಯ ಭಾಷೆಗಳನ್ನು ಕಲಿಯಿರಿ ಆದರೆ ಮನೆ ಮಾತು ಶಿಕ್ಷಣದ ಮಾಧ್ಯಮ ಕನ್ನಡವಾಗಿರಲಿ ಎಂದರು.ಈ ವೇಳೆ ಸಾರಂಗಮಠದ ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಲಬುರಗಿಯ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಡಾ.ಶಿವುಕುಮಾರ ಹುಣಚಾಳ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಜೆ.ಸಿ.ನಂದಿಕೋಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಅಧ್ಯಕ್ಷ ದಾನಯ್ಯ ಮಠಪತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಬಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು .ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವ್ಹಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸುವುದು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ. ಬಿ. ಕುಂಬಾರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ಟಿ. ಎಸ್. ಕೊಲ್ಹಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಪಿ.ಯು.ಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ ಎನ್‌ಇಇಟಿ, ಜೆಇಇ,ಕೆ-ಸಿಇಟಿ,ಐಸಿಎಆರ್,ಸಿಎ-ಫೌಂಡೇಶನ್,ಸಿಎಲ್ ಎಟಿ,ಸಿಯುಇಟಿ ಪರೀಕ್ಷಾ ಪೂರ್ವ ಉಚಿತ ತರಬೇತಿಗಾಗಿ ಆನ್‌ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಜಾಲತಾಣ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್.೩೧ ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗೆ ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೮೯೭೦೭೦೪೯೮೬, ಇಂಡಿ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೯೯೦೦೨೨೯೭೮೦, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ:೮೧೨೩೭೧೦೭೬೬, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಬ.ಬಾಗೇವಾಡಿ ಮೊ:೯೯೭೨೩೪೦೭೨೧, ಮುದ್ದೇಬುಹಾಳ ಮೊ:೮೭೨೨೪೪೫೫೫೨, ಇಂಡಿ ಮೊ:೯೯೦೦೧೦೯೭೫೯ ಹಾಗೂ ಸಿಂದಗಿ ಮೊ:೯೦೩೫೫೫೮೬೦೯ ಅದರಂತೆ ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹುಬ್ಬಳ್ಳಿ ಮೊ: ೯೬೨೦೮೨೮೧೮೫, ಹಾಲಹಳ್ಳಿ ಮತ್ತು ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಚಂದ್ರ ಕಾಂಬಳೆ ಮೊ:೭೮೯೨೩೭೧೭೦೯, ಸಿಂದಗಿ ಅಲ್ಪಸಂಖ್ಯಾತರ…
