Author: editor.udayarashmi@gmail.com

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖ ನಾಗೇಶ ಗೋಲಶೆಟ್ಟಿ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕಕ್ಕೆ ನಿತ್ಯ ಅನ್ಯಾಯವಾಗುತ್ತಿದೆ, ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ, ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಹೋರಾಟವನ್ನು ನಾವು ಇನ್ನಷ್ಟೂ ತೀವ್ರಗೊಳಿಸಲಿದ್ದೇವೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖರಾದ ನಾಗೇಶ ಗೋಲಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಡು ವಿಭಜನೆ ಮಾಡುತ್ತಿಲ್ಲ, ಇದು ವಿಭಜನೆಯಲ್ಲ, ಕಳೆದ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ದೊಡ್ಡ ಪ್ರಮಾಣದ ಅನ್ಯಾಯವಾಗುತ್ತಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಹೇರಳವಾದ ಸಂಪನ್ಮೂಲಗಳಿದ್ದರೂ ಉ.ಕ. ಭಾಗದ ಜನತೆ ದೊಡ್ಡ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸುವಂತಾಗಿದೆ, ರಾಜು ಕಾಗೆ ಸೇರಿದಂತೆ ಅನೇಕ ಶಾಸಕರು ಈ ನಿಲುವಿನ ಪರವಾಗಿದ್ದಾರೆ ಎಂದರು.ಇತ್ತೀಚೆಗೆ ಪ್ರತ್ಯೇಕ ಮೈಸೂರು ರಾಜ್ಯ ರಚನೆಗೆ ಆ ಭಾಗದ ಹೋರಾಟಗಾರರು ಆಗ್ರಹಿಸಿದ್ದು ಉತ್ತರ ಕರ್ನಾಟಕ ಹೋರಾಟ ಸಮಿತಿಯು ಸ್ವಾಗತಿಸಿದೆ. ಕಾಗೆಯವರ ಪತ್ರಕ್ಕೆ ಈಗಾಗಲೇ ಆನೇಕ ಶಾಸಕರು ಬೆಂಬಲವನ್ನು ವ್ಯಕ್ತಪಡಿಸಿದ್ದು ಉತ್ತರ ಕರ್ನಾಟಕ ಭಾಗದ ಎಲ್ಲಾ ಜನಪ್ರತಿನಿಧಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಣ್ಣ ಅವರ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದೆ. ನಿಮ್ಮ ಈ ದರಿದ್ರ ರಾಜಕಾರಣದಿಂದ ಕರ್ನಾಟಕ ಜನತೆ ಶಾಪವಾಗಿ ಪರಿಗಣಿಸಿದೆ, ಇನ್ನು ಗೃಹ ಸಚಿವರು ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಕಡು ಶಬ್ದಗಳಲ್ಲಿ ಟೀಕಿಸಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಸಂಪೂರ್ಣ ಹಾಳಾಗಿದೆ, ಹಾಡುಹಗಲೇ ಕೊಲೆ, ಸುಲಿಗೆ ನಡೆಯುತ್ತಿವೆ. ಬೆಂಗಳೂರಿನಲ್ಲಿಯೇ ಹಾಡು ಹಗಲೇ ಏಳು ಕೋಟಿ ರೂ. ದೋಚಲಾಗಿದೆ, ವಿಜಯಪುರದಲ್ಲಿ ಎರಡು ಬ್ಯಾಂಕುಗಳು ದರೋಡೆಯಾಗಿ ೧೦೦ ಕೋಟಿ ರೂ.ಗೂ ಅಧಿಕ ಸ್ವೊತ್ತು ಕಳ್ಳತನವಾಗಿದೆ, ಒಟ್ಟಾರೆಯಾಗಿ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ದಿನ ಬೆಳಗಾದರೆ ಈ ರೀತಿಯ ಬೆಚ್ಚಿಬೀಳಿಸುವ ಘಟನೆಗಳು ಸಾಮಾನ್ಯವಾಗಿವೆ, ಪ್ರತಿಯೊಬ್ಬರು ಮನೆಯಿಂದ ಹೊರಬರಲು ಅಂಜುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಅತ್ತ ಉಗ್ರಗಾಮಿಗಳಿಗೆ ಜೈಲಿನಲ್ಲಿ ಆತಿಥ್ಯ…

Read More

ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ )ಕಲ್ಬುರ್ಗಿ ಇವರು 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ, ಕವಿಗೋಷ್ಠಿ, ಪುಸ್ತಕ ಬಿಡುಗಡೆ, ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಯಡ್ರಾಮಿ ಪಟ್ಟಣದ ಉದಯೋನ್ಮುಖ ಯುವ ಬರಹಗಾರ, ಡಾ.ಮಲ್ಲಿಕಾರ್ಜುನ ಎಸ್ ಆಲಮೇಲ ರಚಿಸಿರುವ ಫಿಲಿಫೈನ್ ಕಾವ್ಯ ಪ್ರಕಾರವಾದ, ತನಗಾ ಸಂಕಲನ, ‘ಅಂತರಂಗದ ಪ್ರಣತಿ’ ಕಲ್ಬುರ್ಗಿ ಜಿಲ್ಲೆಯ ಪ್ರಪ್ರಥಮ ತನಗ ಸಂಕಲನವಾಗಿ, ಅನ್ನಪೂರ್ಣ ಕ್ರಾಸಲ್ಲಿ ಇರುವ ಕಲಾ ಮಂಡಳ ಸಭಾಭವನದಲ್ಲಿ ಲೋಕಾರ್ಪಣೆಯಾಗಲಿದೆ.ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮದ ಆಯೋಜಕರಾದ ಬಿ ಹೆಚ್ ನಿರಗುಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ನಮ್ಮ ಹೋರಾಟ ಯಾವುದೇ ಜಾತಿ–ಧರ್ಮದ ವಿರುದ್ದವಲ್ಲ; ಅನ್ಯಾಯವನ್ನು ಪೋಷಿಸುವ ರಾಜಕೀಯ ಹೀತಾಶಕ್ತಿಗಳ ವಿರುದ್ದ, ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.ಚಡಚಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ‘ಸಮಾನತಾವಾದಿಗಳೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಮ ಸಮಾಜ ನಿರ್ಮಾಣಕ್ಕಾಗಿ ಪರ್ಯಾಯ ರಾಜಕಾರಣದ ಸಸಿ ನೆಡುತ್ತಿದ್ದೇವೆ. ಸತ್ಯ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದೊಂದಿಗೆ ಆರಂಭಿಸಿರುವ ನಮ್ಮ ಚಳವಳಿ ಮುಂದಿನ ಪೀಳಿಗೆಗೆ ಹೆಮ್ಮರವಾಗಿ ಬೆಳೆಯಲಿದೆ ಎಂಬ ವಿಶ್ವಾಸವಿದೆ. ಅನ್ಯಾಯ, ಅವ್ಯವಸ್ಥೆಯ ವಿರುದ್ಧ ದನಿ ಎತ್ತುವ ಸಾರ್ವಜನಿಕರನ್ನು ಒಗ್ಗೂಡಿಸುವ ಕೆಲಸ ಕೈಗೆತ್ತಿಕೊಂಡಿದ್ದೇವೆ, ಎಂದು ಹೇಳಿದರು.ಡಾ. ಅಂಬೇಡ್ಕರ್, ಪೆರಿಯಾರ್, ಕಾನ್ಸಿರಾಮ್ ಬಿಟ್ಟರೆ ಭವ್ಯಭಾರತದ ಸಮಾನತೆಯ ಸಮಾಜ ನಿರ್ಮಿಸಲು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ ಸುಮಾರು ೭೮ ವರ್ಷಗಳೂ ಗತಿಸಿದರು ರಾಜಕೀಯವಾಗಿ ಯಾರೂ ಮುಂದೆ ಬಂದಿಲ್ಲ ಹಾಗೂ ಮುಂದುವರಿದಿಲ್ಲ. ಇಂದಿನ ರಾಜಕಾರಣಿಗಳು ರಸ್ತೆ–ಕಟ್ಟಡ ನಿರ್ಮಾಣಕ್ಕೆ ಮಾತ್ರ ಸೀಮಿತ. ಭ್ರಷ್ಟಾಚಾರವನ್ನು ಮುಂದುವರೆಸುತ್ತಾ ಅಧಿಕಾರಕ್ಕಾಗಿ ಓಡುವುದನ್ನು ಮಾತ್ರ ನೋಡುತ್ತಿದ್ದೇವೆ. ಆದರೆ ಸಮ ಸಮಾಜ ನಿರ್ಮಿಸುವ ದೃಷ್ಟಿಕೋನ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸೂರ್ಯ ಫೌಂಡೇಶನ್ ಹಾಗೂ ಸ್ಟಾರ್ಕ್ ಅಕಾಡೆಮಿ (ರಿ) ಬೆಂಗಳೂರು ಇವರು ಕೊಡಮಾಡುವ ರಾಜ್ಯ ಮಟ್ಟದ ಶಿಕ್ಷಣ ಸಿಂಧು ರಾಜ್ಯ ಪ್ರಶಸ್ತಿಗೆ ತಾಲೂಕಿನ ಮುಳವಾಡ ಗ್ರಾಮದ ಜನತಾ ಕಾಲೋನಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀಶೈಲ ಬಸಪ್ಪ ವಂದಾಲ ಅವರನ್ನು ಆಯ್ಕೆ ಮಾಡಲಾಗಿದೆ.2025-26ನೇ ಸಾಲಿನ ‘ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ’ದಲ್ಲಿ ‘ಶಿಕ್ಷಣ ಸಿಂಧು’ ರಾಜ್ಯ ಪ್ರಶಸ್ತಿ ನೀಡಲು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ವಿಶಿಷ್ಟ ಶಿಕ್ಷಕರಾಗಿ, ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರನ್ನು ಗುರುತಿಸಿ ನವೆಂಬರ 23 ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪೂರ್ಣಿಮ ಡಿ.ಎನ್ ಹಾಗೂ ಸೋಮೇಶ್ ನವೋದಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸಹಕಾರ ಎಂಬ ಪದವೇ ಎಷ್ಟು ಚಂದ ಅಲ್ಲವೇ!ಪ್ರತಿ ಹಳ್ಳಿ, ಪ್ರತಿ ಪಟ್ಟಣಗಳಲ್ಲಿ ಪರಸ್ಪರರ ಸಹಕಾರದಿಂದ ಮದುವೆ, ಮುಂಜಿ, ಜಾತ್ರೆ, ಉತ್ಸವ ಮುಂತಾದ ಕಾರ್ಯಕ್ರಮಗಳು ನಡೆಯುತ್ತವೆ. ಇಂತಹ ಎಲ್ಲಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರೂ ತಮ್ಮಶಕ್ತ್ಯಾನುಸಾರ ಸೇವೆ ಸಲ್ಲಿಸುತ್ತಿದ್ದರು. ಒಬ್ಬೊಬ್ಬರು ಒಂದೊಂದು ಕೆಲಸಗಳ ಉಸ್ತುವಾರಿಯನ್ನು ವಹಿಸಿಕೊಳ್ಳಲು ಅನುಕೂಲವಾಗುವಂತೆ ಸಮಿತಿಯನ್ನು ರಚಿಸಿ ಅದಕ್ಕೆ ಅಧ್ಯಕ್ಷ ಉಪಾಧ್ಯಕ್ಷ ಕಾರ್ಯದರ್ಶಿ ಖಜಾಂಚಿ ಹಾಗೂ ಉಳಿದ ಸದಸ್ಯರನ್ನು ಆಯ್ಕೆ ಮಾಡಿ ಅವರ ಮೂಲಕ ಎಲ್ಲ ಕಾರ್ಯಕ್ರಮಗಳು ಸುಸೂತ್ರವಾಗಿ ಸಾಗುವಂತೆ ನಿರ್ವಹಣೆಯನ್ನು ವಹಿಸುತ್ತಿದ್ದರು. ಹೀಗೆ ಮಾಡುವ ಮೂಲಕ ಸಂಘಟಿತರಾಗಿ ಕಾರ್ಯನಿರ್ವಹಿಸುವ, ಸೇವೆಯನ್ನು ಸಲ್ಲಿಸಲು ದೊರೆತ ಅವಕಾಶವೆಂದು ಭಾವಿಸುತ್ತಿದ್ದರು. ನಾಯಕತ್ವ ಗುಣ ಬೆಳೆಯಲು ಸಹಕಾರಿಯಾಗುವ ಈ ಸಮಿತಿಗಳು ಸಹಕಾರ ತತ್ವವನ್ನು ಪ್ರತಿಪಾದಿಸುತ್ತಿದ್ದವು.ಹತ್ತು ಹಲವು ಭಿನ್ನಾಭಿಪ್ರಾಯಗಳಿದ್ದರೂ ಒಳನೋಟಗಳಿದ್ದರೂ ಕೂಡ ಒಂದು ನಿಶ್ಚಿತ ಉದ್ದೇಶಕ್ಕಾಗಿ ದುಡಿಯುವ ಕಾರ್ಯ ನಿರ್ವಹಿಸುವ ಈ ಸಹಕಾರ ತತ್ವವು ಯಾವುದೇ ರೀತಿಯ ಕಾರ್ಯಕ್ರಮದ ಯಶಸ್ಸಿಗೆ ಮುನ್ನುಡಿ ಬರೆಯುತ್ತದೆ ಎಂಬುದು ನಮ್ಮ ಹಿರಿಯರಿಗೆ ಅನುಭವ ವೇದ್ಯವಾಗಿತ್ತು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಂಜಾರಾ ಪ್ರೌಢ ಶಾಲೆಗೆ ಬುಧವಾರದಂದು ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿ, ಡಯಟ್ ಉಪನ್ಯಾಸಕರಾದ ಎ.ಆರ್.ಮುಜಾವರ ಹಾಗೂ ಸಿಆರ್‌ಸಿ ಬಿ.ಎ.ಬಿರಾದಾರರ ಅವರು ಭೇಟಿ ನೀಡಿ ೨೦೨೫-೨೬ ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಪಠ್ಯಕ್ರಮದ ೮ ರಿಂದ ೧೦ ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿರುವ ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೆಕೋಠಿಯನ್ನು(ಎಲ್.ಬಿ.ಎ) ಬಳಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಸಾಧಿಸಿರುವ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ವಯಸ್ಕರ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿಯವರು. ವಿದ್ಯಾರ್ಥಿಗಳ ಕಲಿಕೆಯನ್ನು ಸುಧಾರಿಸಲು ಹಾಗೂ ಪ್ರತಿ ಪಾಠದ ನಂತರ ಮಗುವಿನ ಕಲಿಕೆಯನ್ನು ದೃಢೀಕರಿಸಿಕೋಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುತ್ತದೆ. ವಿದ್ಯಾರ್ಥಿಗಳ ಕಲಿಕೆಯನ್ನು ನಿರಂತರವಾಗಿ ಮೇಲ್ವೀಚಾರಣೆ ಮಾಡಿ, ಪ್ರತಿ ಹಂತದ ವಿದ್ಯಾರ್ಥಿಯ ಕಲಿಕೆಯನ್ನು ಪೋಷಕರ ಗಮನಕ್ಕೆ ತರಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ಎ.ಎಂ.ನಾಗೊAಡ, ಆರ್.ವ್ಹಿ.ಭುಜಂಗನವರ, ಎಸ್.ಬಿ.ಒಡೆಯರ, ಜೆ.ಕೆ.ರಾಠೋಡ, ಎಸ್.ಡಿ.ಚವ್ಹಾಣ್, ಎಸ್.ಕೆ.ಶಿಂಧೆಯವರುಗಳು ಸೇರಿದಂತೆ ಸಹ ಶಿಕ್ಷಕ ಸಿಬ್ಬಂದಿ ವರ್ಗದವರು…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಬಸವೆಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಿಡಗುಂದಿಯ ಗ್ರಾಮಿಣ ವಿಧ್ಯಾವರ್ಧಕ ಸಂಘದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಪಿಯು ಕಾಲೇಜುಗಳ ಜಿಲ್ಲಾ ಮಟ್ಟದ ಸೌಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕಾವೇರಿ ಪತ್ತಾರ ಪೃಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಜಾನಪದ ನೃತ್ಯ ಸ್ಪರ್ಧೆಯಲ್ಲಿ ಐಶ್ವರ್ಯ ರಾಠೋಡ ಮತ್ತು ಸಂಗಡಿಗರಾದ ಪೂಜಾ ಸಾಲುಂಕೆ, ಶ್ರೀದೇವಿ ಪವಾರ, ರಕ್ಷೀತಾ ತಳವಾರ, ಸೌಭಾಗ್ಯ ಹೊಸಮನಿ (ಗುಂಪು ನೃತ್ಯ) ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿಧ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರಾದ ಶ್ರೀ ಬಿ ಜಿ ಚನಗೊಂಡ ಅಭಿನಂದಿಸಿ ಮಾತನಾಡಿ, ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವದ ಮೂಲಕ ಪಿಯು ಕಾಲೇಜುಗಳ ವಿಭಾಗಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು ಸಂತಸ ತಂದಿದ್ದು ಮಕ್ಕಳಿಗೆ ಪಠ್ಯದ ಜೋತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನಿಡಬೇಕು…

Read More

ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ’ನನ್ನ ನಾಡು’ ಪತ್ರಿಕೆ ಬಳಗದಿಂದ ಸನ್ಮಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅಶೋಕ ಯಡಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಅವರು ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಅಭಿವೃದ್ಧಿಪಡಿಸಲು ಪಣ ತೊಡಬೇಕೆಂದು ಹಿರಿಯ ಪತ್ರಕರ್ತ ಹಾಗೂ ’ನನ್ನ ನಾಡು’ ದಿನಪತ್ರಿಕೆ ಸಂಪಾದಕ ಮಾಧವರಾವ್ ಕುಲಕರ್ಣಿ ಸಲಹೆ ನೀಡಿದರು.ನಗರದ ಕನಕದಾಸ ಬಡಾವಣೆಯ ತಮ್ಮ ಕಾರ್ಯಾಲಯದಲ್ಲಿ ಕಾನಿಪ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಇಂದು ನಮಗೆಲ್ಲ ದೊರೆತ ಈ ಸನ್ಮಾನ ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ನಮಗೆಲ್ಲ ಶುಭಹಾರೈಸಿ ಸನ್ಮಾನಿಸಿದ ಮಾಧವರಾವ್ ಕುಲಕರ್ಣಿ ಸೇರಿದಂತೆ ಹಿರಿಯ ಪತ್ರಕರ್ತರು ಕಾನಿಪ ಸಂಘದ ಆಸ್ತಿಯಾಗಿದ್ದಾರೆ. ಅವರ ಸಲಹೆ-ಸೂಚನೆ ನಮಗೆಲ್ಲ ಸದಾ ಅವಶ್ಯಕ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಹಿರಿಯ…

Read More

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಆತ್ಮವಿಶ್ವಾಸವೇ ಸಾಧನೆಯ ಪ್ರಥಮ ಮೆಟ್ಟಿಲು. ನಮ್ಮ ಜೀವನದಲ್ಲಿ ಸಮಸ್ಯೆಗಳು, ತೊಂದರೆಗಳು, ಅಡ್ಡಿ-ಆತಂಕ, ಅಡಚಣೆ- ಸಂಕಷ್ಟ, ನೋವು-ನಲಿವು, ಸೋಲು-ಗೆಲುವುಗಳಿಂದ ಕೂಡಿದ್ದರೆ ಅದಕ್ಕೊಂದು ಬೆಲೆ ಮತ್ತು ಮಹತ್ವ ದೊರೆಯುತ್ತದೆ. ನಾವು ದೇವರಿಗೆ ಸದಾ ಜೀವನದಲ್ಲಿ ಯಾವುದೇ ಸಮಸ್ಯೆ-ತೊಂದರೆ, ಸಂಕಷ್ಟಗಳು ಬರದಂತೆ ನಮ್ಮ ಕಾಪಾಡು ಎಂದು ಬೇಡಿಕೊಳ್ಳುವುದಕ್ಕಿಂತ ಆ ಎಲ್ಲ ಸಮಸ್ಯೆಗಳನ್ನು ಎದುರಿಸುವ ಶಕ್ತಿಯನ್ನು ದಯಪಾಲಿಸೆಂದು ಬೇಡಿಕೊಳ್ಳಬೇಕು. ನಮ್ಮಲ್ಲಿರುವ ಶಕ್ತಿ-ಸಾಮರ್ಥ್ಯಗಳನ್ನು ಓರೆಗಲ್ಲಿಗೆ ಹಚ್ಚಲು ನನಗೊಂದು ಅವಕಾಶ ನೀಡೆಂದು ಪ್ರಾರ್ಥಿಸಬೇಕು. ಇದರಿಂದ ನಮಗೆ ಮನೋಬಲವು ಸದೃಢಗೊಂಡು ನೂರು ಆನೆ ಬಲದಷ್ಟು ಶಕ್ತಿ-ಆತ್ಮಸ್ಥೈರ್ಯ ಬರುತ್ತದೆ. ಹೀಗೆ ಆ ಎಲ್ಲ ಸಮಸ್ಯೆಗಳು ಮತ್ತು ಕೊರತೆಗಳೇ ನಮಗೆ ವರವಾಗಿ ಯಶಸ್ಸಿನ ದಡವನ್ನು ತಲುಪಲು ಸಹಕಾರಿಯಾಗುತ್ತವೆ. ಇಂದು ಬಹುತೇಕ ಜನರ ವಿಫಲತೆಗೆ ಮುಖ್ಯ ಕಾರಣವೇ ಆತ್ಮವಿಶ್ವಾಸದ ಕೊರತೆ. ನಮ್ಮಲ್ಲಿರುವ ದೌರ್ಬಲ್ಯಗಳೇ ನಮ್ಮನ್ನು ವೈಫಲ್ಯಗೊಳಿಸುತ್ತವೆ. ದೈಹಿಕವಾಗಿ ದುರ್ಬಲನಾಗಿದ್ದರೂ ಅವನಲ್ಲಿ ಆತ್ಮವಿಶ್ವಾಸವೊಂದಿದ್ದರೆ ಅವನಿಗಿಂತ ಶಕ್ತಿಶಾಲಿ ಈ ಜಗತ್ತಿನಲ್ಲಿಲ್ಲ. ಧೈರ್ಯಂ ಸರ್ವತ್ರ ಸಾಧನಂಜೀವನವೆಂದರೆ ಎಲ್ಲದಕ್ಕೂ ಎಲ್ಲರಿಗೂ ಹೆದರಿ…

Read More