Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳ ಸಹಯೋದಲ್ಲಿ ಅಕ್ಟೋಬರ್ ೦೪ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦:೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೌರವ ಉಪಸ್ಥಿತರಿರಲಿದ್ದು, ನಗರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಸಬಲೀಕರಣಕ್ಕೆ ಉದ್ಯಮಶೀಲತಾ ಯೋಜನೆಗಳು ನೆರವು ನೀಡುತ್ತವೆ. ಅಲ್ಲದೇ ಮಹಿಳೆಯರು ಸ್ವಯಂ ಉದ್ಯೋಗ ಕೈಕೊಳ್ಳಲು ಅವಕಾಶ ಕಲ್ಪಿಸುತ್ತವೆ ಎಂದು ಮುಕುಂದ ಝಳಕಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ‘ಉದ್ಯಮಶೀಲತೆಯ ಮೂಲಕ ಮಹಿಳೆಯರ ಸಬಲೀಕರಣ ಮತ್ತು ಸ್ವಯಂ ಉದ್ಯೋಗ ಯೋಜನೆಗಳು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರನ್ನು ಸಬಲೀಕರಣಗೊಳಿಸಲು ಉದ್ಯಮಶೀಲತಾ ಅಭಿವೃದ್ದಿ ಯೋಜನೆಗಳು ಸಹಾಯಕವಾಗಿವೆ. ಸರ್ಕಾರ ಹಣಕಾಸಿನ ನೆರವು, ಕೌಶಲ್ಯ ತರಬೇತಿ ಹಾಗೂ ವ್ಯವಹಾರ ಪ್ರಾರಂಭಿಸಲು ಅಗತ್ಯವಾದ ಅವಕಾಶಗಳನ್ನು ಒದಗಿಸುತ್ತದೆ. ಜೊತೆಗೆ ರೂಡಸೆಟ್ ಸಂಸ್ಥೆಯು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ, ಸಶಕ್ತರನ್ನಾಗಿ ಮಾಡಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಡಾ. ಮಲ್ಲಿಕಾರ್ಜುನ ಹತ್ತಿ ಮಾತನಾಡಿ, ಆರ್ಥಿಕ ಸ್ವಾತಂತ್ರ‍್ಯವನ್ನು ಗುರಿಯಾಗಿಟ್ಟುಕೊಂಡು ಮಹಿಳೆಯರಿಗೆ ಸ್ವ–ಉದ್ಯೋಗಕ್ಕಾಗಿ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ನವರಾತ್ರಿ, ದಸರಾ ಹಬ್ಬದ ನಿಮಿತ್ತ ಗ್ರಾಮದಲ್ಲಿ ಕಳೆದ ಹತ್ತು ದಿನಗಳ ಕಾಲ ಸಡಗರ ಸಂಭ್ರಮ ಜರುಗಿತು, ವಿವಿಧ ಸಂಘಟನೆಗಳಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಭಾಗಗಳಲ್ಲಿಯೂ ಹಬ್ಬದ ವಾತಾವರಣ ನಿರ್ಮಾಣ ಮಾಡಿತ್ತು.ಗ್ರಾಮದ ಗ್ರಾಮದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದೇವಿ ಚಾಮುಂಡೇಶ್ವರಿಯ ವಿಗ್ರಹ ಪ್ರತಿಷ್ಠಾಪಿಸಿ ಪ್ರತಿದಿನ ಒಂದೊಂದು ಸ್ಥಳಗಳಂತೆ ಪ್ರತಿದಿನವೂ ಹುಗ್ಗಿ, ಸಜ್ಜಕ, ಹೋಳಿಗೆ, ಮಾದೇಲಿಯ ಮಹಾಪ್ರಸಾದವನ್ನು ಭಕ್ತರಿಗೆ ಬಡಿಸಲಾಯಿತು.ಮಲ್ಲಯ್ಯನ ಗುಡಿ ಗಜಾನನ ಕಮೀಟಿಯಿಂದ ಪ್ರತಿದಿನ ಸಾಯಂಕಾಲ ೬-೩೦ಘಂ.ಗೆ ಕೋಲಾಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗ್ರಾಮದ ಯಂಗ್ ಸ್ಟಾರ್ ಸಮೀತಿಯಿಂದ ದ್ವಿತೀಯ ಬಾರಿಗೆ ಸಂಗೀತ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಸತತ ಮಳೆಯ ಕಾರಣ ಕಾರ್ಯಕ್ರಮ ಮುಂದೂಡಲಾಯಿತು. ಕೊನೆಯ ದಿನವಾದ ಗುರುವಾರ ಬನ್ನಿ ಬಂಗಾರವನ್ನು ಪರಸ್ಪರ ಹಂಚಿ “ನಾವು ನೀವು ಬಂಗಾರದಂತೆ ಇರೋಣು” ಎಂದು ಆಲಿಂಗಣ, ಹಿರಿಯರ ಪಾದ ಸ್ಪರ್ಶಿಸಿ ನಮಸ್ಖರಿಸುವ ಮೂಲಕ ಬಾಂಧವ್ಯ ಬೆಸೆಯಲಾಯಿತು.ಸ್ಥಳಿಯ ವಿರಕ್ತಮಠದ ಚನ್ನ ಬಸವೇಶ್ವರ ಸಭಾ ಮಂಟಪದಲ್ಲಿ ಶ್ರೀ ಪ್ರಭು ಮಹಾಸ್ವಾಮಿಗಳಿಗೆ ಗ್ರಾಮದ ಪ್ರಮುಖರು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೧೦/೩೩/೧೧ಕೆವ್ಹಿ ಆಹೇರಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಸಿಂದಗಿ ನಗರ-೦೧ರ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಕೆಹೆಚ್‌ಬಿ ಕಾಲೋನಿ, ಬಂದಾಳ ಕ್ರಾಸ್, ವಿವೇಕಾನಂದ ವೃತ್ತ ಬಜಾರ್ ಏರಿಯಾ, ಕನಕದಾಸ ವೃತ್ತ, ಸಂಗಮೇಶ್ವರ ಕಾಲೋನಿ ಹಾಗೂ ಆದರ್ಶ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.೦೪ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದ ಸ್ವಾತಂತ್ರ‍್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ‍್ಯ ಚಳುವಳಿಯನ್ನು ಮುನ್ನಡೆಸಿದ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದು ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಹೇಳಿದರು.ಸಿಂದಗಿ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಗುರುವಾರದಂದು ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗಾಂಧೀಜಿ ಅವರ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಪಂಡಿತ ಯಂಪುರೆ, ಶಾಂತು ರಾಣಾಗೋಳ, ಅಂಬರೀಷ ಚೌಕಲೆ ಸೇರಿದಂತೆ ಅನೇಕರು ಇದ್ದರು.ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರ:ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಕಲಕೇರಿ ರಸ್ತೆಯಲ್ಲಿರುವ ಎಲೈಟ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆ ಹಾಗೂ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರ ಉಪಸ್ಥಿತಿಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಪೂರ್ವಭಾವಿ ಸಭೆಯನ್ನು ಅ.೪ರಂದು ಬೆಳಗ್ಗೆ ೧೦ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ ಖಾಸಗಿ ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಚಾರ್ಯರು ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಶಾಂತೇಶ ದುರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆರ್ಯುವೇದ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್. ಆರ್ಯುವೇದ ಮಹಾವಿದ್ಯಾಲಯದ ವಾಗ್ಭಟ ಸಂಭಾಂಗಣದಲ್ಲಿ ಅಕ್ಟೋಬರ್ ೧೫ರ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ.೧೫ ರಿಂದ ೨೯ ವರ್ಷದೊಳಗಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಜನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಒಂದು ತಂಡದಲ್ಲಿ ೧೦ ಸ್ಪರ್ಧಿಗಳನ್ನು ಹಾಗೂ ೧೫ ನಿಮಿಷ ಅವಧಿ ನಿಗದಿಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯನ್ನು ಆಯ್ದುಕೊಳ್ಳಬಹುದಾಗಿದೆ. ಜನಪದ ಗೀತೆಯಲ್ಲಿ ಭಾಗವಹಿಸಲು ಒಂದು ತಂಡದಲ್ಲಿ ೧೦ ಸ್ಪರ್ಧಿಗಳನ್ನು ಹಾಗೂ ೦೭ ನಿಮಿಷದ ಅವಧಿ ನಿಗದಿ ಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯನ್ನು ಆಯ್ದುಕೊಳ್ಳಬಹುದಾಗಿದೆ.ಕಥೆ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವವರು ೬೦ ನಿಮಿಷಗಳಲ್ಲಿ ೧೦೦೦ ಪದಗಳಿಗೆ ಮೀರದಂತೆ ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಗಳಲ್ಲಿ ಕಥೆ ಬರೆಯಬಹುದಾಗಿದೆ.…

Read More

ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರುದಂತೆ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪ್ರಥಮ ಆದ್ಯತೆ ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಹಾನಿಗೀಡಾದ ಕಟ್ಟಡಗಳ ಸಮೀಕ್ಷೆ ಕಾರ್ಯ ಕೈಗೊಂಡು ಜಿ.ಪಿ.ಎಸ್ ಪೋಟೊ ಸಮೇತ ವರದಿ ಸಲ್ಲಿಸಬೇಕು. ಚೆಕ್ ಡ್ಯಾಮ್‌ಗಳು, ಸಣ್ಣ ಸಣ್ಣ…

Read More

ಇನ್ನು ಮುಂದೆ ಯಾವುದೇ ಅಪಾಯವಿಲ್ಲ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು ೧೦ ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು ೧೯೭೨ ರಲ್ಲಿ ನಿರ್ಮಾಣ ಮಾಡಲಾಗಿದ್ದು.ಈ ಕೆರೆಯ ಸಾಮರ್ಥ್ಯವು ೧೯.೫೦ ಎಂ.ಸಿ.ಎಫ್.ಟಿ. ಇದ್ದು, ಕೆರೆಯ ವಿಸ್ತೀರ್ಣ ೧೮ ಹೆಕ್ಟೆರ್ ಇರುತ್ತದೆ. ಏರಿಯ ಎತ್ತರ ೧೧ ಮೀಟರ ಹಾಗೂ ಉದ್ದ ೪೦೦ ಮೀ ಇದ್ದು, ಪ್ರಸ್ತುತ ಈ ಕೆರೆಯನ್ನು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಇಲಾಖೆಯ ವತಿಯಿಂದ ಕೆರೆ ತುಂಬವ ಯೋಜನೆಯಡಿ ಕೆರೆ ತುಂಬಿಸಲಾಗಿರುತ್ತದೆ.ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಈ ಕೆರೆಯ ಕೋಡಿಯಿಂದ ಸುಮಾರು ಒಂದು ತಿಂಗಳಿಂದ ನೀರು…

Read More

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ ಬೆಂಗಳೂರು: ಬಿಜೆಪಿಯು ‘ವೋಟ್ ಚೋರಿ’ (ಮತ ಕಳ್ಳತನ) ಮೂಲಕ ಜನರ ಆದೇಶವನ್ನು ಕದಿಯಲು ‘ಯೋಜಿತ ಪಿತೂರಿ’ ನಡೆಸುತ್ತಿದೆ. ಇದು ‘ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಆರೋಪಿಸಿದ್ದಾರೆ.’ವೋಟ್ ಚೋರಿ’ ಕೇವಲ ಮಹದೇವಪುರ ವಿಧಾನಸಭಾ ಕ್ಷೇತ್ರ ಅಥವಾ ಆಳಂದ ಅಥವಾ ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಅವರು ಹೇಳಿದ್ದಾರೆ.ಪುಲಕೇಶಿನಗರದಲ್ಲಿ ನಡೆದ ಮತ ಕಳ್ಳತನದ ವಿರುದ್ಧ ಸಹಿ ಅಭಿಯಾನವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರ ಆದೇಶವನ್ನು ಕದಿಯುವ ‘ವೋಟ್ ಚೋರಿ’ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ಬಿಜೆಪಿಯ ದುಷ್ಟ ಶಕ್ತಿಗಳು ನಿಮ್ಮ ಆಯ್ಕೆಯ ವ್ಯಕ್ತಿಯನ್ನು ಆಯ್ಕೆ ಮಾಡುವ ನಿಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿವೆ’ ಎಂದು ತಿಳಿಸಿದರು.ಅಂಬೇಡ್ಕರ್, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ…

Read More