Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಇದೇ ಮೊದಲ ಬಾರಿಗೆ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದ ಹಿರೇಮಠದಲ್ಲಿ ನಡೆಯಲಿರುವ ಪವಾಡ ಪುರುಷ ಶ್ರೀ ಸದ್ಗುರು ಗುರುಪಾದೇಶ್ವರ ಮಹಾಸ್ವಾಮಿಗಳ ಮಹಾರಥೋತ್ಸವಕ್ಕೆ ನೂತನವಾಗಿ ತಯಾರಿಸಲಾದ ರಥವನ್ನು, ಭಕ್ತರು ಶ್ರದ್ಧಾ ಭಕ್ತಿಯಿಂದ ಮುದ್ದೇಬಿಹಾಳ ಪಟ್ಟಣದಿಂದ ತಮ್ಮೂರಿಗೆ ಕರೆದೊಯ್ದರು.ನೂತನ ರಥಕ್ಕೆ ಪೂಜೆ ಸಲ್ಲಿಸಿ ಮಠದ ಆಡಳಿತಾಧಿಕಾರಿ ಸೋಮಶೇಖರಯ್ಯ ಹಿರೇಮಠ ಅವರು ಮಾತನಾಡಿ, ಗುರುಪಾದೇಶ್ವರ ಮಹಾಸ್ವಾಮಿಗಳು ಮಹಾನ್ ತಪಸ್ವಿಗಳು. ನಂಬಿದ ಭಕ್ತರನ್ನು ಎಂದಿಗೂ ಕೈಬಿಡದವರು. ಇವರು ಕೇವಲ ಒಂದು ಸಮಾಜದ ಗುರುಗಳಾಗದೇ ಎಲ್ಲ ಸಮಾಜಗಳ ಗುರುಗಳಾಗಿ, ಅನೇಕ ಪವಾಡಗಳನ್ನು ಮಾಡಿದವರು. ತಮ್ಮ ಮಠ, ಐಕ್ಯ ಮಂಟಪ ಮತ್ತು ಗುಹೆಯನ್ನು ತಾವೇ ಸ್ಥಾಪಿಸಿಕೊಂಡು ದೀಪಾವಳಿ ಹಬ್ಬದ ನೀರು ತುಂಬುವ ದಿನದಂದು ಲಿಂಗೈಕ್ಯರಾದವರು. ಇವರ ೫೮ನೇ ಪುಣ್ಯ ಸ್ಮರಣೆಯ ನಿಮಿತ್ಯವಾಗಿ ನೂತನ ರಥವನ್ನು ಗ್ರಾಮದ ಎಲ್ಲ ಸಮಾಜಗಳ ಗುರು ಹಿರಿಯರು, ಮುಖಂಡರು, ದೈವದವರ ಸಹಕಾರದೊಂದಿಗೆ ನಿರ್ಮಿಸಲಾಗಿದೆ. ರಥಶಿಲ್ಪಿ ಪರಶುರಾಮ ಪವಾರ ಅವರು ರಥವನ್ನು ಅದ್ಭುತವಾಗಿ ನಿರ್ಮಿಸಿದ್ದಾರೆ. ಇಂದು ರಥದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಹರಗುರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂದಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿರವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ, ಸರಳತೆ, ಪ್ರಾಮಾಣಿಕತೆ ಮತ್ತು ದೇಶಕ್ಕಾಗಿ ತ್ಯಾಗದ ಮಹತ್ವ. ಕೇವಲ ಐದೂವರೆ ಅಡಿ ಎತ್ತರದ ಈ ಪುಟ್ಟ ಮನುಷ್ಯ, ತನ್ನ ವ್ಯಕ್ತಿತ್ವ ಮತ್ತು ನಾಯಕತ್ವದಿಂದ ಹಿಮಾಲಯದಷ್ಟು ಎತ್ತರಕ್ಕೆ ಏರಿ ನಿಂತರು. ಅವರ ಆದರ್ಶಗಳನ್ನು ಅನುಸರಿಸುವ ಮೂಲಕ, ನಾವೆಲ್ಲರೂ ಒಂದು ಬಲಿಷ್ಠ, ಸ್ವಾಭಿಮಾನಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮ್ಮ ಪಾಲನ್ನು ನಿರ್ವಹಿಸೋಣ ಎಂದರು.ಜಿಲ್ಲಾ ಕಾರ್ಯದರ್ಶಿ ಕೃಷ್ಣಾ ಗುನ್ನಾಳಕರ ಮಾತನಾಡಿ ಜಗದ್ಗುರು ಮಧ್ವಾಚಾರ್ಯರ 787 ನೇ ಜಯಂತಿ ಆಚರಿಸಲಾಗುತ್ತಿದೆ. ದೈತ ವೇದಾಂತ ತತ್ವಶಾಸ್ತ್ರದ ಪ್ರಮುಖ ಪ್ರತಿಪಾದಕರು. ಹಿಂದೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ:‌ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ.ಅರುಣ ಚಂ.‌ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಲಾಲ ಬಹಾದ್ದೂರ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ದೇಶದ ಸೈನಿಕರು ಮತ್ತು ರೈತರ ಮಹತ್ವವನ್ನು ನೆನಪಿಸುವ ಶಾಶ್ವತ ಸಂದೇಶವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಹಂಗಾಮಿ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ, ಡಾ. ಆರ್.…

Read More

ಜಯದೇವ ಜಗದ್ಗುರುಗಳ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮೀಕ್ಷೆಯಲ್ಲಿ ಗಾಣಿಗರು ಧರ್ಮದ ಜಾಗದಲ್ಲಿ “ಹಿಂದೂ” ಹಾಗೂ ಜಾತಿ, ಉಪಜಾತಿ ಜಾಗದಲ್ಲಿ “ಗಾಣಿಗ” ಎಂದು ಬರೆಸಿ ಎಂದು ಅಖಿಲ‌ ಭಾರತ ಗಾಣಿಗ ಸಮಾಜ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಸಮುದಾಯಕ್ಕೆ ತಿಳಿಸಿದರು.ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘ ಹಾಗೂ ಜಗದ್ಗುರು ಶ್ರೀ ಜಯದೇವ ಶಿವಯೋಗೇಶ್ವರ ಟ್ರಸ್ಟ್ ಸಹಯೋಗದಲ್ಲಿ ನಗರದ ಜಿ.ಪಂ ರಸ್ತೆಯಲ್ಲಿರುವ ವನಶ್ರೀ ಸಂಸ್ಥಾನಮಠದಲ್ಲಿ ಜರುಗಿದ ಜಯದೇವ ಜಗದ್ಗುರಗಳ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿ, ಸಾಮಾಜಿಕವಾಗಿ ಹಿಂದುಳಿದ ಗಾಣಿಗರು ರಾಜ್ಯದಲ್ಲಿ ಸುಮಾರು 35-40 ಲಕ್ಷ‌ ಜನಸಂಖ್ಯೆ ಹೊಂದಿದ್ದರೂ, ಇತ್ತೀಚೆಗೆ ಜಯಪ್ರಕಾಶ ಹೆಗ್ಡೆ ಅವರು ಸಲ್ಲಿಸಿದ ಕಾಂತರಾಜು ಆಯೋಗದ ವರದಿಯಲ್ಲಿ‌ ಸಮುದಾಯ ಕೇವಲ ಸುಮಾರು 7 ಲಕ್ಷ ಜನಸಂಖ್ಯೆ ತೋರಿಸಲಾಗಿದೆ. ಸಮುದಾಯದ ಏಲ್ಗೆ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಮಾಜ ಸಂಘಟನೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಮತ್ತು ಮಾಜಿ ಪ್ರದಾನಮಂತ್ರಿ ಲಾಲ ಬಹಾದ್ದೂರ ಶಾಸ್ತ್ರೀಜಿಯವರ ಜಯಂತಿಯನ್ನು ಆಚರಿಸಲಾಯಿತು.ಇಂದು ಗ್ರಾಮಸ್ವರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧೀಜಿಯವರ ೧೫೬ನೇ ವರ್ಷದ ಜಯಂತಿ ಅಹಿಂಸಾ ಮಾರ್ಗವನ್ನು ಅನುಸರಿಸುತ್ತಾ ಶಾಂತಿಯಿಂದ ಭಾರತರಾಷ್ಟ್ರವನ್ನು ಸ್ವಾತಂತ್ರ್ಯಗೊಳಿಸಲು ರಾಷ್ಟಾçದ್ಯಂತ ಚಳುವಳಿಗಳ ಮೂಲಕ ಭಾರತವನ್ನು ಸ್ವಾತಂತ್ರ್ಯ ತಂದುಕೊಡುವಲ್ಲಿ ವಹತ್ವದ ಪಾತ್ರವನ್ನು ವಹಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಮತ್ತು ಮಾಜಿ ಪ್ರದಾನಮಂತ್ರಿ ಲಾಲ ಬಹಾದ್ದೂರ ಶಾಸ್ತ್ರಿ ಸರಳ ಜೀವಿ ‘ಜೈಜವಾನ ಜೈಕಿಸಾನ’ ಎಂಬ ಘೋಷವಾಕ್ಯದೊಂದಿಗೆ ದೇಶದ ಅನ್ನದಾತ ರೈತರ ಬಗ್ಗೆ ಅರ್ಥಪೂರ್ಣವಾದ ಮತ್ತು ರೈತನು ಕೂಡ ದೇಶ ಕಾಯುವ ಸೈನಿಕ ಎಂದು ಸೈನಿಕ ಮತ್ತು ರೈತರು ದೇಶ ಕಾಯುವ ಕಾಯಕ ಯೋಗಿಗಳೆಂದು ತೋರಿಸಿಕೊಟ್ಟ ಮಾಜಿ ಪ್ರಧಾನಮಂತ್ರಿ ಲಾಲ ಬಹಾದ್ದೂರ ಶಾಸ್ತ್ರಿ ಯವರ ೧೨೧ನೇ ಜಯಂತಿಯನ್ನು ಕೂಡಾ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಸದಸ್ಯರು, ಕಾಂಗ್ರೆಸ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಗುರುವಾರದಂದು ಶ್ರೀ ಶಿವಶರಣೆ ನಿಂಬೆಕ್ಕ ವಿದ್ಯಾ ಸಂಸ್ಥೆಯ ಅಡಿಯಲ್ಲಿನ ಶ್ರೀ ಡಿ.ಎಂ. ಕುಮಾನಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಶ್ರೀ ಶಿವಶರಣೆ ನಿಂಬೆಕ್ಕ ಪ್ರೌಢ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರ ೧೫೬ ಹಾಗೂ ಲಾಲ್ ಬಹಾದ್ದೂರ ಶಾಸ್ತೀಯವರ ೧೨೧ನೇ ಜಯಂತಿ ಆಚರಣೆ ಸಮಾರಂಭ ಜರುಗಿತು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಸ್.ಡಿ. ಕುಮಾನಿ ಇವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಆದರ್ಶಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.ಮಲ್ಲಿಕಾರ್ಜುನ ಮಾಲಗಾರ ಅತಿಥಿಗಳಾಗಿ ಆಗಮಿಸಿದ್ದರು. ಪ್ರಾಚಾರ್ಯ ಎಸ್.ಎಂ. ಪಾಠಕ ಎಸ್.ಎಂ. ಮಣಿಯಾರ ಬಿ.ಜೆ. ಗರೇಬಾಳ ಪಿ.ಎಸ್. ಕುಮಾಣಿ ಇತರರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ಸಾಗುವ ಮೂಲಕ ಗಾಂಧೀಜಿ ಬ್ರಿಟಿಷ್ ಆಡಳಿತವನ್ನು ಕಿತ್ತೊಗೆದರು. ದೇಶದ ಏಕತೆ, ಪರಸ್ಪರ ಸಹೋದರತ್ವ ಮತ್ತು ಸಾಮಾಜಿಕ ಏಕತೆಗಾಗಿ ಅವರು ಶ್ಲಾಘನೀಯ ಕೆಲಸ ಮಾಡಿದರು ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ ಹೇಳಿದರು.ನಗರದ ಬಂಜಾರಾ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಮಹಾತ್ಮ ಗಾಂಧಿಯವರ ಜೀವನವನ್ನು ಎತ್ತಿ ತೋರಿಸಿದರು ಹಾಗೂ ಅವರು ಪ್ರಾರಂಭಿಸಿದ ಅಸಹಕಾರ ಚಳುವಳಿ, ನಾಗರಿಕ ಅಸಹಕಾರ ಚಳುವಳಿ, ರೌಲಟ್ ಕಾಯ್ದೆಯ ವಿರುದ್ಧ ಸತ್ಯಾಗ್ರಹ, ಚಂಪಾರಣ್ ಚಳುವಳಿ, ಕ್ವಿಟ್ ಇಂಡಿಯಾ ಚಳುವಳಿ ಮುಂತಾದ ಚಳುವಳಿಗಳನ್ನು ಸ್ಮರಿಸಿದರು.ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಎಲ್.ಚವ್ಹಾಣ್‌ರವರು ಮಾತನಾಡುತ್ತ. ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ. ಗಾಂಧೀಜಿಯವರು ದೇಶಕ್ಕಾಗಿ ಹೋರಾಟ ನಡೆಸಿದರೂ ಅವರ ಮೂಲತತ್ವವು ಅಹಿಂಸೆಯನ್ನು ಉತ್ತೇಜಿಸುವುದಾಗಿತ್ತು. ಗಾಂಧಿ ಅವರು ರಾಜಕಾರಣಿ, ತತ್ವ ಸಿದ್ದಾಂತಗಳಿಂದಲೇ ದೇಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸತ್ಯ, ಶಾಂತಿ, ಅಹಿಂಸೆ, ಸತ್ಯಾಗ್ರಹ ಮತ್ತು ತ್ಯಾಗಗಳೆಂಬ ಪಂಚ ಮೂಲ ಮಂತ್ರಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಹೋರಾಡಿದ ನಾಯಕರಲ್ಲಿ ಮಹಾತ್ಮಾ ಗಾಂಧೀಜಿಯವರು ಅಗ್ರಗಣ್ಯರಾಗಿದ್ದರು. ಗಾಂಧೀಜಿ ಅವರು ಕೇವಲ ಒಬ್ಬ ವ್ಯಕ್ತಿಯಲ್ಲ. ಅದ್ಭುತ ಶಕ್ತಿಯಾಗಿದ್ದರು. ದೇಶ, ಕಾಲಗಳನ್ನು ಮೀರಿದ ಅವರು ಇಡೀ ಜಗತ್ತಿಗೆ ದಾರಿದೀಪವಾಗಿದ್ದಾರೆ. ಶಾಂತಿ-ಕ್ರಾಂತಿ ಮತ್ತು ಅಹಿಂಸೆ ಎಂಬ ಅಸ್ತ್ರವನ್ನು ಹಿಡಿದು ಇಡೀ ರಾಷ್ಟçವನ್ನೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲು ಪ್ರೇರಣೆ ನೀಡಿದ್ದರು. ಆದ್ದರಿಂದ ನಾವೆಲ್ಲರೂ ಗಾಂಧೀಜಿಯವರ ಜೀವನ, ಆದರ್ಶ-ತತ್ವ, ಸಿದ್ದಾಂತಗಳನ್ನು ಅಳವಡಿಸಿಕೊಳ್ಳಬೇಕೆಂದು ಮುಖ್ಯ ಅತಿಥಿ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಎಂ.ಎಸ್.ಖೊದ್ನಾಪೂರ ಸಲಹೆ ನೀಡಿದರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜರುಗಿದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ ಬಹಾದ್ದೂರ ಶಾಸ್ತ್ರೀಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಗಾಂಧೀಜಿಯವರ ಪ್ರಾಮಾಣಿಕತೆ, ಶಿಸ್ತು, ಸತ್ಯ ನಿಷ್ಠೆ, ಶಾಂತಿ-ಅಹಿಂಸೆ ಮತ್ತು ಸಾಮಾಜಿಕ ಸಮಾನತೆಯಂತಹ ಸದ್ಗುಣಗಳನ್ನು ಗುರುತಿಸಿದ ರವೀಂದ್ರನಾಥ ಟ್ಯಾಗೋರ ಅವರು ಮಹಾತ್ಮಾ ಎಂಬ ಬಿರುದು ನೀಡಿದರು.…

Read More

ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಮ್ಮ ಬಳಿ ಇಲ್ಲದೆ ಇರುವ ವಸ್ತುಗಳನ್ನು ಪಡೆಯುವ ನಿಟ್ಟಿನಲ್ಲಿ ನಾವು ಬದುಕಿನಲ್ಲಿ ನಾಗಾಲೋಟದ ಪಯಣ ಸಾಗಿಸಿದ್ದೇವೆ. ಆದರೆ ಯಾವುದನ್ನು ನಾವು ಬೇಕು ಎಂದು ಬಯಸಿ ಪಡೆಯಲು ಆಶಿಸುತ್ತಿರುವೆವೋ ಅದನ್ನು ಈಗಾಗಲೇ ಸಾಕಷ್ಟು ಜನ ತಮ್ಮ ಪ್ರಯತ್ನದ ಮೂಲಕ ಪಡೆದುಕೊಂಡಿದ್ದಾರೆ ಎಂಬುದು ನಾವು ಮರೆತಿರುವ ಒಂದು ಸತ್ಯ ಸಂಗತಿ.ನಿರ್ಜನ ದ್ವೀಪವೊಂದರಲ್ಲಿ ಸಿಲುಕಿಕೊಂಡಿರುವ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಹಾದು ಹೋಗುತ್ತಿರುವ ಹಡಗೊಂದನ್ನು ಕಂಡು ತಾನು ಬಚಾವಾದೆ ಎಂದುಕೊಳ್ಳುತ್ತಾನೆ ಆದರೆ ಅದೇ ಸಮುದ್ರದಲ್ಲಿ ಹಡಗಿನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕ ಎತ್ತ ಹೋಗಬೇಕು ಎಂದು ಅರಿಯದೆ ದಿಕ್ಕು ತಪ್ಪಿದ್ದು ದ್ವೀಪವನ್ನು ಕಂಡೊಡನೆ ಅಬ್ಬ! ಅಂತೂ ನೆಲ ಸಿಕ್ಕಿತು ಎಂದು ಸಂತಸ ಪಡುತ್ತಾನೆ ಇದೇ ಬದುಕಿನ ವಿಪರ್ಯಾಸ ಅಲ್ಲವೇ ಸ್ನೇಹಿತರೆ?ಘಟನೆ ಒಂದೇ, ದೃಶ್ಯವೂ ಅದೇ ಆದರೆ ಎರಡು ವಿಭಿನ್ನ ಗ್ರಹಿಕೆಗಳು ನಮ್ಮನ್ನು ಆಳುತ್ತವೆ ಎಂಬ ಮಾತು ಆಳವಾಗಿ ಮನದಲ್ಲಿ ಚಿಂತನೆಯನ್ನು ಹುಟ್ಟು ಹಾಕುತ್ತದೆ. ನಾವು ಬಯಸುವ ವಸ್ತುವನ್ನು ನಮಗಿಂತ ಮುಂಚೆಯೇ ಆಶಿಸಿ…

Read More

ಲೇಖನ- ಸಂತೋಷ್ ರಾವ್. ಪೆರ್ಮುಡಪಟ್ರಮೆ ಗ್ರಾಮ & ಅಂಚೆ,ಬೆಳ್ತಂಗಡಿ ತಾಲೂಕುದ.ಕ ಜಿಲ್ಲೆದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ‘ಉದ್ಯೋಗಂ ಪುರುಷ ಲಕ್ಷಣಂ’ ಎಂಬ ಮಾತು ಬಹುವಾಗಿ ಪ್ರಚಲಿತದಲ್ಲಿದ್ದ ಕಾಲವೊಂದಿತ್ತು. ಆದರೆ ಕಾಲ ಬದಲಾಗಿದ್ದು, ಅದೇ ಮಾತು ಈಗ ‘ಉದ್ಯೋಗಂ ಸರ್ವ ಲಕ್ಷಣಂ’ ಎಂಬಂತಾಗಿ ಉದ್ಯೋಗವಿಲ್ಲದ ವ್ಯಕ್ತಿಗೆ ಬೆಲೆಯೇ ಇಲ್ಲ ಎನ್ನುವ ಸ್ಥಿತಿ ಇದೆ. ಜೊತೆಗೆ ಉದ್ಯೋಗವಿಲ್ಲದ ಮನುಷ್ಯನಿಗೆ ಕವಡೆ ಕಾಸಿನ ಬೆಲೆಯೂ ಇಲ್ಲವಾಗಿದ್ದು, ಬೆಳೆಯುತ್ತಿರುವ ಆಧುನಿಕ ಯುಗದಲ್ಲಿ ಎಲ್ಲ ವಸ್ತುಗಳ ಬೆಲೆಯೂ ಗಗನಮುಖಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕುಟುಂಬದ ನಿರ್ವಹಣೆಗೆ ಬೇಕಾಗುವ ಆದಾಯವನ್ನು ಗಳಿಸುವ ಜವಾಬ್ದಾರಿಯನ್ನು ಕೇವಲ ಗಂಡಸು ಮಾತ್ರ ನಿರ್ವಹಿಸಿದರೆ ಸಾಲದಾಗಿದ್ದು, ಹೆಣ್ಣೂ ಕೂಡ ಉದ್ಯೋಗವನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿರುವುದು ಸುಳ್ಳಲ್ಲ. ಸಂಸಾರದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಮಹಿಳೆಯರು ಸ್ಥಳೀಯವಾಗಿ ಉದ್ಯೋಗವನ್ನು ಮಾಡುತ್ತಿರುವ ಇಂದಿನ ದಿನಗಳಲ್ಲಿ ತಮ್ಮ ತಮ್ಮ ಉದ್ಯೋಗಗಳಲ್ಲಿ ತಾವು ಪೂರ್ತಿಯಾಗಿ ಕಳೆದು ಹೋಗುವವರೇ ಹೆಚ್ಚು. ಇಂತಹ ವ್ಯಕ್ತಿಗಳು ತಮ್ಮ ತಮ್ಮ ಔದ್ಯೋಗಿಕ ಬದುಕಲ್ಲಿ ಯಶಸ್ವೀ ವ್ಯಕ್ತಿಗಳಾದರೂ, ವೈಯಕ್ತಿಕ (ಸಾಂಸಾರಿಕ) ಜೀವನದಲ್ಲಿ ವಿಫಲರಾಗುವ…

Read More