Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಜನತೆಯಲ್ಲಿ ಅತೀ ಮಳೆಯಿಂದ ಭೂಮಿ ಕಂಪಿಸಿದ್ದು, ಜನ ಭಯದಿಂದ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಇದರ ಕುರಿತು ಜಿಲ್ಲಾಡಳಿತ ತಂತ್ರಾಂಶದಿಂದ ಇನ್ನಷ್ಟು ಮಾಹಿತಿ ಕಲೆ ಹಾಕಿ ಜನರಲ್ಲಿರುವ ಭಯ ಹೋದಲಾಡಿಬೇಕು ಎಂದು ಜಿಲ್ಲಾ ವಕ್ತಾರ ಹಾಗೂ ತಾಲೂಕು ಉಸ್ತುವಾರಿ ಚನ್ನಪ್ಪಗೌಡ ಬಿರಾದಾರ ಮನವಿ ಮಾಡಿಕೊಂಡಿದ್ದಾರೆ.ಸಿಂದಗಿ ಜಯ ಕರ್ನಾಟಕ ಸಂಘಟನೆ ತಾಲೂಕಾ ಘಟಕದ ವತಿಯಿಂದ ತಹಶೀಲ್ದಾರ್ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸುವ ಮೊದಲು ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಸತತವಾಗಿ ಸುರಿದ ಮಳೆ ಮತ್ತು ಭೀಮಾ ನದಿಯ ಪ್ರವಾಹದಿಂದ ಹತ್ತಿ, ತೊಗರಿ, ಕಬ್ಬು, ಉದ್ದು, ಈರುಳ್ಳಿ, ಸೂರ್ಯಕಾಂತಿ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದ್ದು, ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು.ಈ ವೇಳೆ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ಸಂತೋಷ ಮನಗೂಳಿ ಮಾತನಾಡಿ, ಸತತವಾಗಿ ಸುರಿದ ಮಳೆಯಿಂದ ಆಲಮೇಲ ಮತ್ತು ಸಿಂದಗಿ ತಾಲೂಕಿನ ರೈತರ ಬೆಳೆಗಳು ಹಾನಿಯಾಗಿದ್ದು, ಕೂಡಲೇ ಸಮೀಕ್ಷೆ ಮಾಡಿ ರೈತರಿಗೆ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ಸಂಸದ ಖೇಲ್ ಅಬಿಯಾನದ ಅಂಗವಾಗಿ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಮತ್ತು ರಂಗೋಲಿ ಬಿಡಿಸುವ ಪಂದ್ಯಾವಳಿಯ ಅಂತಿಮ ಪಂದ್ಯಗಳು ಶುಕ್ರವಾರ ಕೊಲ್ಹಾರ ಪಟ್ಟಣದಲ್ಲಿ ನಡೆಯುತ್ತವೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದಲ್ಲಿ ಸಾಯಂಕಾಲ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಒಂಬತ್ತು ಜಿಲ್ಹಾ ಪಂಚಾಯತ ಮತ್ತು ಪಟ್ಟಣ ಪಂಚಾಯತ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಪಂದ್ಯಾವಳಿಗಳು ಜರುಗಿದ್ದು ಮಹಿಳೆಯರಿಗಾಗಿ ನಡೆದ ರಂಗೋಲಿ ಸ್ಪರ್ಧೇಯಲ್ಲಿ ಅಂತಿಮ ಹಂತಕ್ಕೆ 27 ಜನರು ಆಯ್ಕೆಯಾಗಿದ್ದು ಹಗ್ಗ ಜಗ್ಗಾಟದಲ್ಲಿ 18 ತಂಡಗಳು ಆಯ್ಕೆಯಾಗಿವೆ ಎಂದು ತಿಳಿಸಿದ ಅವರು ಅಂತಿಮ ಪಂದ್ಯಗಳಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನ ಕೊಡಲಾಗುವದು ಎಂದರು.ಪ್ರತಿ ವರುಷದಂತೆ ಈ ವರುಷವೂ ಕೂಡಾ ಬನ್ನಿ ವಿನಿಮಯ ಕಾರ್ಯಕ್ರಮ ಪಟ್ಟಣದ ಸ್ವಗ್ರಹದಲ್ಲಿ ನಡೆಸಲಾಗುವದು ಅವಳಿ ಜಿಲ್ಹೆಯಿಂದ ಆಗಮಿಸುವ ಅಭಿಮಾನಿಗಳು ಹಾಗೂ ಕ್ಷೇತ್ರದ ಸಾರ್ವಜನಿಕ ಬಂದುಗಳೊಂದಿಗೆ ಪರಸ್ಪರ ಬನ್ನಿ ವಿನಿಮಯದ ಸ್ನೇಹ ಮೀಲನ ಹಮ್ಮಿಕೊಳ್ಳಲಾಗಿದೆ ಎಂದರು.
ರಾಷ್ಟ್ರೀಯ ಪೋಷಣ ಮಾಸಾಚರಣೆ-ಸ್ವಸ್ಥನಾರಿ- ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆ ಸ್ವಸ್ಥವಾಗಿರಲು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು.ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಬಿ.ಎಲ್.ಡಿ.ಇ ಕಾನೂನು ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
ಪ್ರವಾಹದಿಂದ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ | ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಹ ಪರಿಸ್ಥಿತಿಯನ್ನು “ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ” ಎಂದು ಪ್ರತಿಪಕ್ಷ ಬಿಜೆಪಿ ಮಂಗಳವಾರ ಆರೋಪಿಸಿದೆ.ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡುವ ಬದಲು ವೈಮಾನಿಕ ಸಮೀಕ್ಷೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕಲಬುರಗಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಮಹಾರಾಷ್ಟ್ರದ ಉಜನಿ ಮತ್ತು ನೀರಾ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗಿ ಅಲ್ಲಿನ ಅಧಿಕಾರಿಗಳು ಮತ್ತು ರೈತರೊಂದಿಗೆ ಕುಳಿತು ಬೆಳೆಗಳಿಗೆ ಪರಿಹಾರ ಘೋಷಿಸಬೇಕಾಗಿತ್ತು ಮತ್ತು ಹಾಳಾದ ರಸ್ತೆಗಳು, ಶಾಲೆಗಳು ಮತ್ತು ಅಂಗನವಾಡಿಗಳ ಪುನಶ್ಚೇತನಕ್ಕೆ ಹಣ…
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಕರೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೆಂಗಳೂರಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಒಕ್ಕಲಿಗರ ಸಂಘ ಹಾಗೂ ಬ್ರಾಹ್ಮಣ ಮಹಾಸಭಾಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಾಜಕೀಯ ಪ್ರೇರಿತ ಜಾತಿಗಣತಿ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿ ಮಹತ್ವದ ಮಧ್ಯಂತರ ಸೂಚನೆ ನೀಡಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರು ಇದನ್ನು ಬಹಿಷ್ಕರಿಸಬೇಕು. ಇಡೀ ಜಾತಿಗಣತಿ ಸಂಪೂರ್ಣವಾಗಿ ಐಚ್ಚಿಕ, ಗಣತಿದಾರರು ಯಾರನ್ನು ಮಾಹಿತಿ ನೀಡುವಂತೆ ಒತ್ತಾಯಿಸುವಂತಿಲ್ಲ. ಮತ್ತು ಸಾರ್ವಜನಿಕರ ಖಾಸಗಿತನ ಮತ್ತು ವ್ಯಕ್ತಿಯ ಸ್ವಾತಂತ್ರö್ಯ ಎತ್ತಿ ಹಿಡಿದಿರುವುದರಿಂದ ಸಾಮಾಜಿಕ ಸಮೀಕ್ಷೆ ಬಹಿಷ್ಕರಿಸಬೇಕು. ಈ ಕರೆಗೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದರು.ಈ ವೇಳೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್ ಜೀ ಫೌಂಡೇಶನ್ ರವರ ಸಹಯೋಗದೊಂದಿಗೆ ಔಪಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲೀಷ, ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಬೋಧಿಸಲು ಜಿಲ್ಲಾ ಹಂತದಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ:೦೪-೧೦-೨೦೨೫ ಕೊನೆಯ ದಿನಾಂಕ ಇರುತ್ತದೆ. ಒಂದು ಮದರಸಾಗೆ ತಲಾ ಎರಡು ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳು https://docs.google.com/forms/d/e/1FAIpQLSeJ76UQIEXjbAA2Wkak_E5BXBrIGDnRcHu0eYtGf RGXZx5_qA/viewform?usp=headerಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೂರವಾಣಿ ಸಂಖ್ಯೆ:೦೮೩೫೨-೨೯೫೫೨೩ ಹಾಗೂವಿಜಯಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಮೊಬೈಲ್ ಸಂಖ್ಯೆ: ೮೧೨೩೭೧೦೭೬೬, ಬಸವನ ಬಾಗೇವಾಡಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: ೯೯೭೨೩೪೦೭೩೨೧, ಮುದ್ದೇಬಿಹಾಳ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: ೮೭೨೨೪೪೫೫೫೨, ಸಿಂದಗಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: ೯೦೩೫೫೫೮೬೦೯, ಇಂಡಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನಿಸಿದೆ.ಮೇಸನ್, ಇಲೇಕ್ಟ್ರೀಕಲ್,ಟೈಲ್ಸ್ ಮತ್ತು ವೆಲ್ಡಿಂಗ್‌ಟೋಲ್‌ಗಳನ್ನು ಕಾರ್ಮಿಕರಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು,ನೋಂದಾಯಿತ ಕಟ್ಟಡ ಕಾರ್ಮಿಕರು ಅರ್ಜಿಗಳೊಂದಿಗೆ ಚಾಲ್ತಿಯಲ್ಲಿರುವ ಗುರುತಿನ ಚೀಟಿ, ಆಧಾರ ಕಾರ್ಡ್, ಭಾವಚಿತ್ರವನ್ನು ಲಗತ್ತಿಸಬೇಕು.ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು, ಕಾರ್ಮಿಕರ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ಫಲಾನುಭವಿಸಗಳಿಗೆ ವಿತರಿಸಲಾಗುವುದು.ಬಸವನ ಬಾಗೇವಾಡಿಯಲ್ಲಿನ ವೀರಭದ್ರೇಶ್ವರ ನಗರ ಹೋಟಲ್ ವಿಮೋಚನ ಹಿಂದುಗಡೆ ಇರುವ ಕಾರ್ಮಿಕ ನಿರೀಕ್ಷಕರ ಕಚೇರಿ, ವಿನಾಯಕ ನಗರ ನಿಡಗುಂದಿ ಹಾಗೂ ಕೊಲ್ಹಾರದ ಬಸವ ವೃತ್ತ ಮುಖ್ಯ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಕ್ಟೋಬರ್ ೬ ರಿಂದ ೧೬ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಸವನ ಬಾಗೇವಾಡಿಯ ಕಾರ್ಮಿಕ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮತಕ್ಷೇತ್ರದ ಮಾಜಿಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅವರ ಸ್ವಗ್ರಹ ವಿಜಯಪುರದಲ್ಲಿ ದಿ:೩ ರಂದು ಶುಕ್ರವಾರ ಸಾಂಪ್ರದಾಯಿಕ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಜರುಗಲಿದೆ.ಮತಕ್ಷೇತ್ರದ ಶಾಸಕರ ಅಭಿಮಾನಿಗಳು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯ ದಶಮಿ ಅಂಗವಾಗಿ ಅ.2ರ ಗುರುವಾರ ದಂದು ಸಂಜೆ ಸಿದ್ದೇಶ್ವರ ದೇವಸ್ಥಾನ ಆವರಣಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಲಿದ್ದು, ಮರು ದಿನ ಅ.3 ರ ಶುಕ್ರವಾರ ಸಿಂದಗಿ ರಸ್ತೆಯಲ್ಲಿರುವ ತೋಟದ ಮನೆಯಲ್ಲಿ ಬನ್ನಿ ವಿನಿಮಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ರದ್ದುಪಡಿಸಲಾಗಿದೆ ಎಂದು ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ರೈತರು, ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳು, ವಿಜಯಪುರ ನಾಗರಿಕರು ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರು ತಮಗೂ ತಮ್ಮ ಕುಟುಂಬಕ್ಕೂ ಆರೋಗ್ಯ, ಸುಖ, ಶಾಂತಿ, ಸಮೃದ್ಧಿ ಅಷ್ಟ ಐಶ್ವರ್ಯ ಭಾಗ್ಯ ದಯಪಾಲಿಸಲಿ ಎಂದು ಶಾಸಕರು ಶುಭ ಹಾರೈಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪೇಪರ್ ಪುನರುತ್ಪಾದನಾ ಘಟಕದ ವತಿಯಿಂದ ಇತ್ತೀಚಿಗೆ ಆಯೋಜಿಸಿದ್ದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ಅಡಿಯಲ್ಲಿ ‘ಪೇಪರ್ ಪುನರುತ್ಪಾದನಾ ತಂತ್ರಜ್ಞಾನ’ದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ. ಪರಿಸರಕ್ಕೆ ಹಾನಿಯಾಗುವಂತಹ ಚಟುವಟಿಕೆಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹುಬ್ಬಳ್ಳಿಯ ಕೀರ್ತಿ ಪೇಪರ್ಸ್ ಪ್ರೈವೇಟ್ ಲಿಮಿಟೆಡ್‌ನ ತಾಂತ್ರಿಕ ಸಿಬ್ಬಂದಿ ನಿಂಗಪ್ಪ ಗೊಂಡಿ ಮಾತನಾಡಿ, ಇಂದು ಪುನರುತ್ಪಾದನಾ ತಂತ್ರಜ್ಞಾನದಿಂದ ತಯಾರಿಸಲ್ಪಟ್ಟ ವಸ್ತುಗಳಿಗೆ ಉತ್ತಮ ಬೇಡಿಕೆ ಇದೆ. ಈ ವಸ್ತುಗಳನ್ನು ತಯಾರಿಸಲು ಬೃಹತ್ ಯಂತ್ರೋಪಕರಣಗಳ ಅಗತ್ಯವಿಲ್ಲ, ಕಾರ್ಖಾನೆಗಳ ಅಗತ್ಯವೂ ಇಲ್ಲ. ಸಣ್ಣ ಪ್ರಮಾಣದ ಯಂತ್ರಗಳನ್ನು ಅಳವಡಿಸಿ ಈ…
