Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಮಯ ಪ್ರಜ್ಞೆಯಿಂದ ಸಾಹಸ ಪ್ರದರ್ಶಿಸಿ, ಇತರರ ಪ್ರಾಣ ರಕ್ಷಣೆ ಮಾಡಿದ ೬ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಮಕ್ಕಳ ದಿನಾಚರಣೆ-೨೦೨೫ ಪ್ರಯುಕ್ತ ನೀಡಲಾಗುವ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದೆ.೨೦೨೪ ಆಗಸ್ಟ್ ೧ ರಿಂದ ೨೦೨೫ ಜುಲೈ ೩೧ರರೊಳಗೆ ಸಾಹಸ ಪ್ರದರ್ಶಿಸಿ ಪ್ರಾಣ ರಕ್ಷಣೆ ಮಾಡಿದ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ೧೦,೦೦೦/- ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪ್ರಧಾನ ಮಾಡಲಾಗುವುದು.ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೦೫ ವರ್ಷ ಅತ್ಯುತ್ತಮ ಸೇವೆ ಮಾಡಿದ ವ್ಯಕ್ಯಿಗಳಿಗೆ ಹಾಗೂ ಸಂಸ್ಥೆಗಳಿಗೆ ಕ್ರಮವಾಗಿ ತಲಾ ೨೫,೦೦೦ ರೂ. ಹಾಗೂ ೧ ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಕನ್ನಡ ಭಾಷೆಯಲ್ಲಿ ಅರ್ಜಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ , ತಳವಾರ ಸಮಾಜಕ್ಕೆ ಸಿಕ್ಕ ಸುವರ್ಣ ಅವಕಾಶ ಕೈ ಚೆಲ್ಲಬೇಡಿ ಎಂದು ಸಮಾಜ ಬಂದುಗಳಲ್ಲಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ಹೇಳಿದರು.ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆ ಕಾಣುತ್ತಿದ್ದೆವೆ. ಆದರೆ ಪ್ರಬಲ ಸಮುದಾಯದಗಳು ಸಮೀಕ್ಷೆಯಲ್ಲಿ ವಿಶೇಷವಾಗಿ ಕಾಳಜಿವಹಿಸಿ ತಮ್ಮ ತಮ್ಮ ಸಮುದಾಯದ ಹಿತರಕ್ಷಣೆ ಮಾಡುತ್ತಿದ್ದಾರೆ. ಅದರಂತೆ ನಮ್ಮ ತಳವಾರ ಸಮಾಜದ ಬಂಧುಗಳು ನಮ್ಮ ಸಮಾಜದ ಹಿರಿಯ ಮುಖಂಡ ಮಾಜಿ ಶಾಸಕ ಶರಣಪ್ಪ ಸುಣಗಾರ, ಇಂಡಿ ತಾಲ್ಲೂಕು ತಳವಾರ & ಪರಿವಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಧರ್ಮರಾಜ ವಾಲಿಕಾರ ಹಾಗೂ ನಮ್ಮ ಸಮಾಜದ ಮುಖಂಡರು ಹೇಳಿದಂತೆನಾವು ಸಮೀಕ್ಷೆಯಲ್ಲಿ ವಿಶೇಷವಾಗಿ ಪಾಲ್ಗೊಂಡು ಯಾವುದೇ ವ್ಯಕ್ತಿ ಮತ್ತು ಕುಟುಂಬ ಹೊರಗೆ ಉಳಿದಂತೆ ನೋಡಿಕೊಳ್ಳಬೇಕು. ಈ ಹಿಂದಿನ ಸಮೀಕ್ಷೆಯಲ್ಲಿ ನಮ್ಮ ಸಮುದಾಯ ದಾರಿ ತಪ್ಪಿದ್ದು ನಮ್ಮ…
ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ | ವಿಜಯಪುರ ಡಿಎಚ್ಓ ಡಾ.ಸಂಪತ್ ಗುಣಾರಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದಲ್ಲಿ ಪ್ರತಿವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬಿಸ್ ಮಹಾಮಾರಿಗೆ ಬಲಿಯಾಗುತ್ತಿದ್ದು, ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದಾಗ ನಿರ್ಲಕ್ಷಿಸದೇ ಲಸಿಕೆ ಹಾಕಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಅಶ್ವಿನಿ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಸಾಯಿನ್ಸ್ ಕಾಲೇಜ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ರೇಬಿಸ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ನಾಯಿ ಕಡಿತಕ್ಕೆ ತುತ್ತಾದ ೨೩ ಸಾವಿರ ಜನರಿಗೆ ಚಿಕಿತ್ಸೆ ನೀಡಲಾಗಿದೆ. ಸಾರ್ವಜನಿಕರು ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದ್ದಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.ಡಾ. ಅಪ್ಪಾಸಾಹೇಬ ಇನಾಮದಾರ ಅವರು ಮಾತನಾಡಿ, ರೇಬಿಸ್ ಅನ್ನುವುದು ಸಸ್ತನಿಗಳಲ್ಲಿ ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ನೇರವಾಗಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮತಕ್ಷೇತ್ರದ ಗ್ರಾಮಗಳಲ್ಲಿನ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಬಿದ್ದ ಮನೆಗಳ ಸಮೀಕ್ಷೆ, ವಿಂಗಡಣೆ ಹಾಗೂ ಅಗತ್ಯ ಪರಿಹಾರಗಳಿಗೆ ಕ್ರಮವಹಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜರುಗಿದ ಪ್ರವಾಹ ಹಾಗೂ ಮಳೆಯಿಂದಾದ ಹಾನಿಗಳಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಡೋಣಿ ಪ್ರವಾಹ ಹಾಗೂ ಅತಿವೃಷ್ಠಿಯಿಂದ ಕ್ಷೇತ್ರದ ಬಹುತೇಕ ಗ್ರಾಮಗಳ ಜಮೀನುಗಳಲ್ಲಿನ ತೊಗರಿ, ಹತ್ತಿ, ಉಳ್ಳಾಗಡ್ಡಿ ಬೆಳೆಗಳು ನಾಶವಾಗಿವೆ. ಇವುಗಳ ಸಮೀಕ್ಷೆ ಕೈಗೊಳ್ಳಬೇಕು ಹಾಗೂ ಬೆಳೆವಿಮೆಯ ಕುರಿತು ಸಂಬಂಧಿಸಿದ ವಿಮಾ ಕಂಪನಿಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜೊತೆಗೆ ಕಡ್ಲೇಬೀಜ ದಾಸ್ತಾನು ಹಾಗೂ ವಿತರಣೆ ಕುರಿತು ಕ್ರಮ ವಹಿಸಬೇಕು. ಜೊತೆಗೆ ಶಾಲೆಯ ಕೋಣೆಗಳ ಲಭ್ಯತೆ, ಅಂಗನವಾಡಿ ಕಟ್ಟಡಗಳ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಬೇಕು ಇದನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಸಣ್ಣ ಸಣ್ಣ ವಿಷಯಕ್ಕೂ ಶಾಸಕರಿಗೆ ಕರೆ ಮಾಡಿ ಸಾರ್ವಜನಿಕರು ತಮ್ಮ ಕುಂದುಕೊರತೆ ನಿವಾರಿಸಿ ಎನ್ನುವಂತಾಗಬಾರದು. ಅದಕ್ಕಾಗಿ ವಿಶೇಷವಾಗಿ ಕ್ಷೇತ್ರದಲ್ಲಿ ಮೂಲಭೂತ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಭೈರವಾಡಗಿ ಗ್ರಾಮದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ದಶಮಾನೋತ್ಸವ ಹಾಗೂ ಸಹಕಾರಿಸೌಧ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಗ್ರಾಮದ ಸಾಹಿತಿ ಸಂಗಮೇಶ ಕೆರೆಪ್ಪಗೋಳ ರಚಿಸಿದ “ಭೈರವಾಡಗಿ ಪ್ರದಕ್ಷಿಣ ಕೈಲಾಸ ದರ್ಶನ(ಚರಿತ್ರೆ ಗ್ರಂಥ) ಪುಸ್ತಕವನ್ನು ಕೃಷಿ ಮಾರುಕಟ್ಟೆ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷ ಗುರುಪ್ರಸಾದ ಸ್ವಾಮೀಜಿ ಹಾಗೂ ನಿರ್ದೇಶಕರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪುರುಷರ ದೈಹಿಕ ಸಾಮರ್ಥ್ಯವನ್ನು ಮತ್ತು ಮಹಿಳೆಯರ ಜ್ಞಾನ ವೃದ್ದಿಯನ್ನು ಕಲೆಯನ್ನು ಬಿಂಬಿಸಲು ಕಲಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಮಾತ್ರ ಸಾಧ್ಯವಾಗುತ್ತದೆ ಇದು ನಮ್ಮ ಹಿರಿಯರು ಹಾಕಿಕೊಟ್ಟ ಗ್ರಾಮೀಣ ಪ್ರದೇಶದ ಆಟಗಳಲ್ಲಿ ಒಂದಾಗಿವೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಪಟ್ಟಣದ ಸರಕಾರಿ ಕನ್ನಡ ಗಂಡುಮಕ್ಕಳ ಶಾಲಾ ಆವರಣದಲ್ಲಿ ಗ್ರಾಮೀಣ ಆಟಗಳಲ್ಲಿ ಒಂದಾದ ಹಗ್ಗ ಜಗ್ಗಾಟ, ಮತ್ತು ರಂಗೋಲಿ ಸ್ಪರ್ದೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಂಗೋಲಿ ಬಿಡಿಸುವದು ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವದಲ್ಲದೇ ಕಲೆಯ ಅನಾವರಣವನ್ನು ನಾಡಿಗೆ ಪರಿಚಯಿಸುವದಾಗಿದ್ದರೆ ಹಗ್ಗ ಜಗ್ಗಾಟ ಪುರುಷರ ಕೌಶಲ್ಯವನ್ನು ಎತ್ತಿ ತೋರಿಸುತ್ತದೆ ಎಂದರು.ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ ಪ್ರದಾನಿ ನರೇಂದ್ರ ಮೋದಿಯವರ ಸಂಕಲ್ಪದಂತೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಆಟಗಳನ್ನು ಇಂದಿನ ಯುವಕರು ಮರೆಯಬಾರದು ಅಂತಹ ಹಳೆಯ ಆಟಗಳಲ್ಲಿ ಅವರು ತೊಡಗಿಕೊಂಡು ಉತ್ತೇಜನ ಪಡೆಯುವಂತಾಗಲು ಹಗ್ಗ ಜಗ್ಗಾಟ ಕುಸ್ತಿ ಕಬಡ್ಡಿ ಇನ್ನೀತರ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕ್ರೀಡೆಗಳನ್ನು ಪರಿಚಯಿಸುವದಲ್ಲದೇ ಪಾಲ್ಗೊಳ್ಳುವಂತೆ ಮಾಡುವದೇ ಉದ್ದೇಶವಾಗಿದೆ ಎಂದು ಹೇಳಿದರು.ಈ ಸಂಧರ್ಭದಲ್ಲಿ ದಿಗಂಬರೇಶ್ವರ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಗ್ರಾಮ ಪಟ್ಟಣ ನಗರ ಸೇರಿದಂತೆ ದೇಶದ ಪ್ರತಿಯೊಂದು ಪ್ರಜೆಯು ನಿಸ್ವಾರ್ಥ ಮನೋಭಾವದಿಂದ ಸಂಘಟನಾತ್ಮಕವಾಗಿ ಉರಿಯುವ ದೀಪದಂತೆ ಸದಾ ಸೇವೆಯೆಂಬ ಯಜ್ಞದಲ್ಲಿ ತೊಡಗಿಕೊಳ್ಳುವ ಜಗತ್ತಿನ ಏಕೈಕ ಸಂಘಟನೆ ಎಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವಾಗಿದೆ ಎಂದು ಮುಖ್ಯ ವಕ್ತಾರ ಜಿಲ್ಲಾ ಸಂಸ್ಕೃತ ಭಾರತದ ಅಧ್ಯಕ್ಷ ನೀಲಕಂಠ ವಾಲಿಕಾರ ಹೇಳಿದರು.ಆರ್‌ಎಸ್‌ಎಸ್ ಸಂಘಟನೆಯು ಜನ್ಮತಾಳಿ ನೂರು ವರ್ಷದ ಸಂಭ್ರಮಾಚರಣೆ ಆಚರಿಸುತ್ತಿರುವ ಪ್ರಯುಕ್ತ ಕೊಲ್ಹಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಪಟ್ಟಣದ ಸಮುದಾಯ ಭವನದಲ್ಲಿ ಹಮ್ಮಿಕೊಂಡ ವಿಜಯದಶಮಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಹಳ್ಳಿ ನಮ್ಮದು ದೇಶ ನಮ್ಮದು ಎಂದು ಪೂಜ್ಯ ಭಾವನೆಯಿಂದ ಹೆತ್ತ ತಾಯಿಯಂತೆ ನಿತ್ಯವೂ ಆರಾಧಿಸುವ ಒಂದು ದೈತ್ಯಪಡೆಯನ್ನು ಭರತಖಂಡ ಅಷ್ಟೇ ಅಲ್ಲದೇ ಜಗತ್ತಿನ ಮೂಲೆಮೂಲೆಯಲ್ಲಿ ಸ್ವಯಂ ಸೇವಕರನ್ನು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುವಂಥಹ ಸಶಕ್ತ ಯುವಕರ ಹಿರಿಯರ ಮಹಿಳೆಯರ ಪಡೆಯನ್ನು ಕೊಟ್ಟಂತಹ ಸಂಘದ ಶಕ್ತಿ ಅಘಾದವಾಗಿದೆ ಎಂದರು.ಮುಖ್ಯ ಅತಿಥಿಗಳಾಗಿ ಜಿ.ಐ.ಗೋಡ್ಯಾಳ ಮಾತನಾಡಿ, ಪ್ರತಿಯೊಂದು ಹಳ್ಳಿಗಳಲ್ಲಿ ಶಾಖಾ ನಡೆಸುವಂತಹ ಪ್ರಮುಖರನ್ನು ಸೃಷ್ಟಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.ಇತ್ತೀಚೆಗೆ ಗೋವಾದಲ್ಲಿ ನಡೆದ ೧೯ನೆಯ ಗ್ಲೋಬಲ್ ಕಮ್ಯುನಿಕೇಶನ್ ಸಮ್ಮೇಳನದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹಾಗೂ ಸಹಾಯಕ ಪ್ರಾಧ್ಯಾಪಕ ಸಂದೀಪ್ ಅವರಿಗೆ ಸ್ವಿಟ್ಜರ್ಲೆಂಡ್‌ನ ಡೆಲ್ಲಾ ವಿಶ್ವವಿದ್ಯಾನಿಲಯದ ಮಾಧ್ಯಮ ತಜ್ಞ ಹಾಗೂ ಮಾಧ್ಯಮ ಅಧ್ಯಯನ ವಿಭಾಗದ ಡೀನ್ ಪ್ರೊ.ಮ್ಯಾಥ್ಯೂ ಹಿಬರ್ಡ್ ಮತ್ತು ಚಿತ್ರ ನಟ ಹಾಗೂ ನಿರ್ದೇಶಕ ಮತ್ತು ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.ದೇಶದ ವಿವಿಧ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿ ಮಾರ್ಗದರ್ಶನ ಮತ್ತು ಬೆಂಬಲ ನೀಡುವ ಶ್ರೇಷ್ಠ ಸಾಧನೆಗಾಗಿ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಇದಾಗಿದೆ.ರಾಷ್ಟ್ರ ಮಟ್ಟದ ಈ ಶ್ರೇಷ್ಠ ಪ್ರಶಸ್ತಿಗೆ ಕಾರಣಕರ್ತರಾಗಿರುವ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಹಾಯಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಭೀಮಾ ನದಿಗೆ ಪ್ರವಾಹ ಮತ್ತು ತಾಲೂಕಿನಲ್ಲಿ ಮಳೆಯಿಂದ ಆದ ಬೆಳೆ ಹಾನಿ ಕುರಿತು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಸಚಿವ ಎಂ.ಬಿ.ಪಾಟೀಲರು ಹೇಳಿದರು.ತಾಲೂಕಿನ ರೋಡಗಿ ಗ್ರಾಮದಲ್ಲಿ ಭೀಮಾ ನದಿಗೆ ಪ್ರವಾಹ ವೀಕ್ಷಿಸಲು ಆಗಮಿಸಿದ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಈಗಾಗಲೇ ಮುಖ್ಯಮಂತ್ರಿಯವರು ಚರ್ಚಿಸಿದ್ದು ಅವರಿಗೆ ಮನವರಿಕೆ ಮಾಡಲಾಗಿದೆ. ಈ ಬಾರಿ ವಿಜಯಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅದಲ್ಲದೆ ವಿಜಯಪುರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳು ಪ್ರವಾಹ ಎದುರಿಸುತ್ತಿವೆ. ಕಾರಣ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ ಎಂದರು.ರೋಡಗಿ ಗ್ರಾಮವನ್ನು ಸ್ಥಳಾಂತರಿಸುವ ಕುರಿತು ಮನವಿ ಸಲ್ಲಿಸಿದ್ದು ಅದನ್ನು ಸರಕಾರ ಗಮನಕ್ಕೆ ಸದನದ ಗಮನಕ್ಕೆ ತರುವದಾಗಿ ತಿಳಿಸಿದರು.ಇದೇ ಮೊದಲ ಬಾರಿಗೆ ಸೀನಾ ನದಿಯಿಂದ ಹೆಚ್ಚಿನ ಪ್ರಮಾಣ ನೀರು ಬಿಟ್ಟಿದ್ದು ಸಮಸ್ಯೆಗೆ ಕಾರಣ ವಾಗಿದೆ ಎಂದರು.ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ ಈಗಾಗಲೇ ಇಂಡಿ ತಾಲೂಕಿನಲ್ಲಿ ೪೭೬ ಕೋಟಿ ನಷ್ಟ ವಾಗಿದೆ ಎಂದು ಅಂದಾಜಿಸಲಾಗಿದೆ. ಅದಲ್ಲದೆ ದೀರ್ಘಾವಧಿ ಮತ್ತು ಅಲ್ಪಾವಧಿ ಪರಿಹಾರ ಪಡೆದು ಕೊಳ್ಳುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ.ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
