Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಾರಾಷ್ಟ್ರದ ಉಜನಿ, ವೀರ, ಸೀನಾ ಜಲಾಶಯದಿಂದ 3.50 ಲಕ್ಷ ಕ್ಯೂಸೆಕ್ ನೀರು ಭೀಮಾನದಿಗೆ ಹರಿಬಿಟ್ಟಿರುವುದರಿಂದ ಭೀಮಾನದಿ ತೀರದಲ್ಲಿ ಪ್ರವಾಹ ಉಂಟಾಗಿರುವುದರಿಂದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.ತಾಲೂಕಿನ ಹಾವನೂರ,ಶಿರವಾಳ,ಗೌರ(ಬಿ),ನಂದರಗಾ, ಜೇವರ್ಗಿ(ಬಿ), ಮಣ್ಣೂರ, ಸೊನ್ನ ಬ್ಯಾರೇಜ್,ಘತ್ತರಗಾ ಗ್ರಾಮಗಳಿಗೆ ಭೇಟಿ ನೀಡಿ, ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಪ್ರವಾಹ ಸೃಷ್ಟಿಯಾಗಿದೆ.ಹೀಗಾಗಿ ಜನರು ನದಿ ದಡದ ಕಡೆ ಹೋಗದೆ ಜಾಗೃತಿಯಿಂದ ಇರಬೇಕು. ಮನೆಗಳಿಗೆ ನುಗ್ಗಿರುವ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಮಣ್ಣೂರ ಮತ್ತು ದೇವಲ ಗಾಣಗಾಪುರ ಗ್ರಾಮದಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ದಿನನಿತ್ಯದ ನೀರಿನ ಪ್ರಮಾಣವನ್ನು ಜನರಿಗೆ ತಿಳಿಯುವಂತೆ ಗ್ರಾಮದಲ್ಲಿ ಡಂಗುರ ಸಾರಿ ತಿಳಿಸಲಾಗುವುದು. ಹೀಗಾಗಿ ಗ್ರಾಮಸ್ಥರೆಲ್ಲರೂ ಯಾವುದೇ ರೀತಿಯಲ್ಲೂ ಭಯಪಡುವ ಅಗತ್ಯವಿಲ್ಲ,ನಿಮ್ಮ ಜತೆ ಜಿಲ್ಲಾಡಳಿತ ಗಟ್ಟಿಯಾಗಿ ನಿಂತಿದೆ ಎಂದರು.ಜಿಪಂ ಸಿಇಒ ಭಂವರಾಸಿಂಗ್ ಮೀನಾ ಮಾತನಾಡಿ, ಪ್ರವಾಹದಿಂದ ಉಂಟಾಗಿರುವ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನವು ಜಾನಪದ ವಿದ್ವಾಂಸರಿಗೆ ಕೊಡಮಾಡುವ ರಾಜ್ಯಮಟ್ಟದ ದೇಸಿ ಸನ್ಮಾನ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಹೆಚ್.ಟಿ.ಪೋತೆ ಅವರಿಗೆ ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯು ೧೧ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಇದರ ಜೊತೆಗೆ ಪ್ರಶಸ್ತಿ ಪುರಸ್ಕೃರ ಸಾಹಿತ್ಯ ಸಾಧನೆ ಕುರಿತು ಕಿರು ಗ್ರಂಥ ಪ್ರಟಕಣೆ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಡಾ.ಚನ್ನಪ್ಪ ಕಟ್ಟಿ ತಿಳಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬನ್ನಟ್ಟಿ ಪಿಎ ಗ್ರಾಮದಲ್ಲಿ ದಲಿತ ವ್ಯಕ್ತಿಯ ಕೊಲೆಯ ಪ್ರಕರಣದ ಕುರಿತಾಗಿ ಕಳೆದ ನಾಲ್ಕು ತಿಂಗಳಿನಿಂದಲೂ ಆರೋಪಿಯನ್ನು ಬಂಧಿಸದ ಪೊಲೀಸರ ವಿರುದ್ಧ ಎಲ್ಲಾ ದಲಿತಪರ ಸಂಘಟನೆಗಳ ಪ್ರಮುಖರು ಡಾ.ಬಿ.ಆರ್.ಅಂಬೇಡ್ಕರ್ ವೃತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ೭ನೇ ದಿನಕ್ಕೆ ಕಾಲಿಟ್ಟಿದೆ.ಈ ವೇಳೆ ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹೊಳಿ ಬಂಟನೂರ ಮಾತನಾಡಿ, ಒಬ್ಬ ಪರಿಶಿಷ್ಟ ಜಾತಿಯ ವ್ಯಕ್ತಿ ಕೊಲೆಯಾಗಿ ೪ತಿಂಗಳುಗಳ ಕಾಲ ಕಳೆದರೂ ಕೊಲೆಗಾರರನ್ನು ಬಂಧಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆರಂಭವಾದ ಅಹೋರಾತ್ರಿ ಧರಣಿ ಸತ್ಯಾಗ್ರಹ ೭ನೆಯ ದಿನಕ್ಕೆ ಕಾಲಿಟ್ಟಿದೆ. ಮಾನವೀಯತೆ ನೆಲೆಗಟ್ಟಿನ ಮೇಲೆ ಸೌಜನ್ಯಕ್ಕೂ ಸಾವಿನ ಮನೆಗೆ ಭೇಟಿ ನೀಡದ ಹಾಲಿ ಹಾಗೂ ಮಾಜಿ ಶಾಸಕರ ನಡೆಗೆ ಧಿಕ್ಕಾರ ಎಂದು ಖಂಡಿಸಿದ್ದಾರೆ. ದೀನದಲಿತರು, ಹಿಂದುಳಿದವರ ಮತಗಳನ್ನು ಪಡೆದು ಅವರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನಲ್ಲಿ ಹರಿಯುವ ಭೀಮಾನದಿಯ ಪ್ರವಾಹಕ್ಕೆ ಒಳಗಾಗಿರುವ ಜನರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮೇಲೆ ಮಳೆ.. ಕೆಳಗೆ ಹೊಳೆ.. ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಜನತೆ ಬದುಕುತ್ತಿದ್ದಾರೆ.ನದಿ ಪಾತ್ರದ ಜನರು ಕಳೆದ ಒಂದು ವಾರದಿಂದ ಏರುತ್ತದೆ ಸಾಗಿರುವ ಭೀಮಾನದಿಯ ನೀರಿನ ಹರಿವಿನ ಪ್ರಮಾಣ ಗುರುವಾರ ರಾತ್ರಿ ಇಡೀ ಏರಿಕೆ ಕಂಡು ಶುಕ್ರವಾರ ಬೆಳಗಿನಿಂದ ಸಾಯಂಕಾಲದವರೆಗೆ ಅದೇ ಸ್ಥಿತಿಯಲ್ಲಿ ಮುಂದುವರೆದಿದೆ. ಈ ಎರಡು ದಿನವಿಡೀ ಸುರಿದ ಮಳೆಗೆ ಜನ ಕಂಗಾಲಾಗಿದ್ದಾರೆ. ಎರಡು-ಮೂರು ದಿನಗಳಿಂದ ವಿಶ್ರಾಂತಿ ಕೊಟ್ಟಿದ್ದ ಮಳೆರಾಯ ಶುಕ್ರವಾರ ಇಡಿ ದಿನ ಮಳೆಸುರಿದ ಪರಿಣಾಮ ಜನತೆಯಲ್ಲಿ ಭಯ ಹುಟ್ಟಿಸುವಂತಾಗಿದೆ, ಮಳೆಯೊಂದಿಗೆ ತಂಪಾದ ಗಾಳಿ ಬೀಸುತ್ತಿದ್ದು ಇದು ಕೂಡ ಜನರ ಜೀವನದ ಮೇಲೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುವತ್ತ ಸಾಗಿದೆ.ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ ನಲ್ಲಿ ಗುರುವಾರ 3 ಲಕ್ಷ 50 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿತ್ತು ಶುಕ್ರವಾರ ಬೆಳಗಿನ ಶುಭೋದಯ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಸಾಯಂಕಾಲದವರಿಗೆ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಭೀಮಾ ನದಿ ಪ್ರವಾಹಕ್ಕೆ ಒಳಗಾಗಿರುವ ಗ್ರಾಮಗಳಿಗೆ ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ನಿರಾಶ್ರಿತರ ತೊಂದರೆಗಳನ್ನು ಆಲಿಸಿದರು.ಭೀಮಾ ನದಿಯ ಪ್ರವಾಹ ಸಂಕಷ್ಟಕ್ಕೆ ಒಳಗಾಗಿರುವ ಕುಮಸಗಿ ಗ್ರಾಮದ ನದಿ ಅಂಚಿನಲ್ಲಿರುವ ಮನೆಗಳಲ್ಲಿ ನೀರು ತುಂಬಿಕೊಂಡಿದ್ದು ಒಟ್ಟು 40 ಕುಟುಂಬಗಳು ತೊಂದರೆಗೆ ಸಿಲುಕಿದ್ದವು ಅಂತ ಜನರ ಸಮಸ್ಯೆ ಆಲಿಸಿ ನಿರಾಶ್ರಿತರ ಜೊತೆಗೆ ನಾನಿರುತ್ತೇನೆ ಸರ್ಕಾರದ ಮೇಲೆ ಒತ್ತಡ ಹೇರಿ ತಮಗೆ ಶಾಶ್ವತ ಪರಿಹಾರ ಕಲ್ಪಿಸಲು ಅಧಿಕಾರಿಗಳ ಜೊತೆ ಮಾತನಾಡಿ ಸಾಧ್ಯವಾದರೆ ತಮ್ಮೊಂದಿಗೆ ಹೋರಾಟ ಮಾಡುವ ಮೂಲಕ ನಿಮಗೆ ಶಾಶ್ವತ ಸೂರು ಕಲ್ಪಿಸಿ ಕೊಡುತ್ತೇನೆ, 2-3 ಎಕರೆ ಜಮೀನು ದೊರೆತರೆ ನೆರೆಪೀಡಿತ ಕುಟುಂಬಗಳನ್ನು ಸ್ಥಳಾಂತರ ಮಾಡಬಹುದು ನನ್ನ ಅವಧಿಯಲ್ಲಿ ಏಳು ಹಳ್ಳಿಗಳನ್ನು ಸ್ಥಳಾಂತರ ಮಾಡಿದ್ದೇನೆ ಕುಮಸಗಿ ಮಾತ್ರ ಉಳಿದಿದೆ ಇಲ್ಲಿ ಕೂಡ ಜಮೀನು ಪಡೆದು ಸರ್ಕಾರ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದರು.ನಂತರ ಇಂಡಿ ಎಸಿ ಅನುರಾಧ ವಸ್ತ್ರದ ಅವರ ಜೊತೆಗೆ ಮಾತನಾಡಿ ಆಲಮೇಲ ತಾಲೂಕಿನ ಕುಮಸಿಗಿ ಗ್ರಾಮದ ಹಲವು ಕುಟುಂಬಗಳು…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಾರಾಷ್ಟ್ರದಿಂದ ಅತಿಯಾದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಪ್ರವಾಹ ಹೆಚ್ಚಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರುಅವರು ತಾಲೂಕಿನ ಸೊನ್ನ ಬ್ಯಾರೇಜ್ ಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು.ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರನ್ನು ಭೀಮ ನದಿಗೆ ಹರಿಬಿಟ್ಟ ಕಾರಣ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಮಹಾರಾಷ್ಟ್ರದಿಂದ ಈವರೆಗೂ ಸುಮಾರು 3.20 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಹರಿಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಜನರ ಓಡಾಟಕ್ಕೆ ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಭೀಮಾ ನದಿ ನೀರಿನ ಮಟ್ಟ ಏರಿಕೆಯಿಂದ ನೆರೆ ಸೃಷ್ಟಿಯಾಗಿದ್ದು, ನದಿ ತೀರದಲ್ಲಿರುವ ನಿವಾಸಿಗಳಿಗೆ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಹಾಗೆಯೇ ಅಗತ್ಯ ಇರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರ ವೇಳೆಗೆ ಸರಾಸರಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮತಕ್ಷೇತ್ರದ ಸಿಂದಗಿ ಮತ್ತು ಆಲಮೇಲ ತಾಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಈಗಾಗಲೇ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸಮೀಕ್ಷೆ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆಲಮೇಲ ಮತ್ತು ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಶಾಸಕ ಅಶೋಕ ಮನಗೂಳಿ ಮನವಿ ಸಲ್ಲಿಸಿದ್ದಾರೆ.ಈ ವೇಳೆ ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ ಸೇರಿದಂತೆ ಅನೇಕರು ಇದ್ದರು.
ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಂತ್ರಜ್ಞಾನ, ಆಹಾರ ಉತ್ಪಾದನೆ, ನ್ಯಾಯದಾನ ವ್ಯವಸ್ಥೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅನೇಕ ಸುಧಾರಣೆಗಳನ್ನು ತರಲಾಗಿದ್ದು ಆತ್ಮನಿರ್ಭರ ಸಾಕ್ಷಾತ್ಕಾರವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಅಂಗವಾಗಿ ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾವಲಂಬನೆ ಹಾಗೂ ಸ್ವದೇಶಿ ಉತ್ಪಾದನೆಗೆ ಆದ್ಯತೆ ಕಲ್ಪಿಸಿದ ಪರಿಣಾಮ ಆತ್ಮ ನಿರ್ಭರ ಭಾವ ಸಾಕಾರ ರೂಪ ತೆಳೆದಿದೆ ಎಂದರು.೨೦೧೪ ರಲ್ಲಿ ಕೇವಲ ೨೫.೫ ಕೋಟಿ ಅಂತರ್ಜಾಲ ಸಂಪರ್ಕವಿದ್ದು, ಈ ಸಂಖ್ಯೆ ೯೭ ಕೋಟಿಗೆ ಏರಿಕೆಯಾಗಿದ್ದು, ಅಂತರ್ಜಾಲ ಬಳಕೆ ಶೇ.೨೮೫ಕ್ಕೆ ಏರಿಕೆಯಾಗಿರುವುದು ಗಮನಾರ್ಹ ಸಾಧನೆಗಳಲ್ಲಿ ಒಂದು, ೨.೧೪ ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕವನ್ನು ಕಲ್ಪಿಸಿ ಆಧುನಿಕತೆ ಸ್ಪರ್ಶ ಸಾಧ್ಯವಾಗಿದೆ ಎಂದರು.ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ,…
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸೆ.೨೬ ರಿಂದ ೨೮ರವರೆಗೆ ಬಿರುಗಾಳಿಯೊಂದಿಗೆ ಭಾರಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ಸೆ.೨೯ ರಿಂದ ಅ.೦೩ರವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಹಾಗೂ ಕೆಎಸ್‌ಎನ್‌ಡಿಎಂಸಿ ಮುನ್ಸೂಚನೆಗಳನ್ನು ನೀಡಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು ಮತ್ತು ರಜೆ ಮೇಲೆ ತೆರಳಲು-ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದ್ದಾರೆ.ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯ ಮಳೆ-ಗಾಳಿಯಿಂದ ಜನ-ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಹಾಗೂ ಅನಾನೂಕೂಲತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಉಪವಿಭಾಗ-ಜಿಲ್ಲಾ-ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ನೊಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು ದಿನದ ೨೪/೭ ಕಾರ್ಯನಿರ್ವಹಿಸಿ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಿಜಯಪುರದ ಮಾಧ್ಯಮ ಪ್ರತಿನಿಧಿಗಳಿಗೆ “ವಾರ್ತಾಲಾಪ” ಕಾರ್ಯಾಗಾರ | ಸಂಸದ ರಮೇಶ ಜಿಗಜಿಣಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಕೇಂದ್ರ ಸಂವಹನ ಇಲಾಖೆ, ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕೀಯರ ಸಂಘ (ರಿ) ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ “ವಾರ್ತಾಲಾಪ” ಕಾರ್ಯಾಗಾರ ಆಯೋಜಿಸಲಾಗಿತ್ತು.ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಅವರು, ಕೇಂದ್ರ ಸರ್ಕಾರದ ಅನೇಕ ಯೋಜನೆಗಳಿಂದ ಜನರು ಫಲಾನುಭವಿಗಳಾಗುತ್ತಿದ್ದಾರೆ. ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್ ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್ ಗಳನ್ನು ಜನರು ವ್ಯಾಪಕವಾಗಿ…
