Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗೀತ ಸಂಗೀತ ಅಕಾಡೆಮಿ (ರಿ) ಟ್ರಸ್ಟ್, ಕಲ್ಪತರು ಸಾಹಿತ್ಯ ಕಲಾ ಟ್ರಸ್ಟ್ (ರಿ) ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಸಭಾಂಗಣದಲ್ಲಿ ಶರಣೋತ್ಸವ, ವಚನ ಗಾಯನ, ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಭಾನುವಾರ (28.09.2025) ಮಧ್ಯಾಹ್ನ 3:00 ಗಂಟೆಗೆ ಜರುಗಲಿದೆ.ಇದೇ ವೇಳೆ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಬಸವ ಕಾಯಕ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಎಂ.ವಿ ಷಡಕ್ಷರಿ ಹಾಗೂ ಸಂಗೀತ ನಿರ್ದೇಶಕ ರಾಜು ಎಮ್ಮಿಗನೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಯರನಾಳ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ರೈತ ಬಾಂಧವರು ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಬುಧವಾರ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ,ಶೇಂಗಾ, ಮೆಣ್ಣೆಹೋಳ, ಹತ್ತಿ, ಈರುಳ್ಳಿ ಸೇರಿದಂತೆ ಇನ್ನುಳಿದ ಬೆಳೆಗಳು ವಿಪರೀತ ಮಳೆಯಿಂದ ಸಂಪೂರ್ಣ ಹಾನಿಗೊಳಗಾಗಿವೆ. ವೈಜ್ಞಾನಿಕ ಸಮೀಕ್ಷೆ ನಡೆಸಿ ಎಲ್ಲಬೆಳೆಗಳಿಗೂ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರ ಮೂಲಕ ಮನವಿ ಸಲ್ಲಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಪ್ರತಿ ವರ್ಷ ರೈತರು ಒಂದಿಲ್ಲೊಂದು ರೀತಿಯಿಂದ ಬೆಳೆಗಳು ಹಾನಿಯಾಗಿ ಒಂದಿಲ್ಲೊಂದು ರೀತಿಯಿಂದ ಬೆಳೆಗಳು ಹಾನಿಯಾಗಿ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಬೆಳೆ ಕೈ ಸೇರದೆ ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಚಿಂತೆಗೀಡಾಗಿದ್ದಾರೆ. ಕೂಡಲೇ ಸರ್ಕಾರ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ಸೂಕ್ತ ವರದಿಯನ್ನು ಸರ್ಕಾರ ತರಿಸಿಕೊಂಡು ಪ್ರತಿ ಬೆಳೆಗೆ ಎಕರೆಯಂತೆ ಸೂಕ್ತ ಪರಿಹಾರ ಒದಗಿಸಬೇಕು. ಕಳೆದ ವರ್ಷ ಸರಿಯಾಗಿ ಸಮೀಕ್ಷೆ ಮಾಡದೇ ಎಲ್ಲೋ ಕಛೇರಿಯಲ್ಲಿ ಕುಳಿತು ಸರ್ಕಾರಕ್ಕೆ ತಪ್ಪು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮನುಷ್ಯ ಜನ್ಮ ಸಾರ್ಥಕತೆ ಹೊಂದುವುದು ಸೇವೆಯಿಂದ ಮಾತ್ರ. ಸೇವೆಯ ಪ್ರತಿಫಲ ಸೇವೆಯೇ ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಶೈಲ ಬಳವಾಟ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಸೇವಾ ಯೋಜನಾ ಘಟಕದ ಸಂಸ್ಥಾಪನಾ ದಿನದಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಈ ಜಗತ್ತಿನಲ್ಲಿ ಹಣ,ಐಶ್ವರ್ಯದಿಂದ ಶಾಶ್ವತ ಕೀರ್ತಿ ಪಡೆಯಲು ಸಾಧ್ಯವಿಲ್ಲ. ಸೇವೆಯಿಂದ ಮಾತ್ರ ಶಾಶ್ವತ ಕೀರ್ತಿ ಪಡೆಯಲು ಸಾಧ್ಯ.ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಬಿ. ಹೊಸಮನಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಗ್ರಾಮಗಳ ಉದ್ಧಾರದ ಕನಸಿಗೆ ಎನ್.ಎಸ್.ಎಸ್ ಚಟುವಟಿಕೆಗಳು ಪೂರಕವಾಗಿವೆ. ಎಲ್ಲಾ ವಿದ್ಯಾರ್ಥಿಗಳು ಸ್ವಯಂ ಸ್ಫೂರ್ತಿಯಿಂದ ಸೇವೆ ಮಾಡಬೇಕೆಂದರು.ಕಾರ್ಯಕ್ರಮದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಡಾ.ಅಮಿತ್ ಮಿರ್ಜಿ,ದೈಹಿಕ ಶಿಕ್ಷಣ ನಿರ್ದೇಶಕಿ ರೇಣುಕಾ ಅಂಬಲಿ , ಇಂಗ್ಲೀಷ್ ವಿಭಾಗದ ಪ್ರಿಯಾಂಕ ಜಿಂದೆ ಇತರರು ಇದ್ದರು.…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ಸಿಎಂ ಅವರಿಗೆ ಬರೆದ ಮನವಿಯನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಸಲ್ಲಿಸಲಾಯಿತು.ಅವರು ಸಲ್ಲಿಸಿದ ಮನವಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡುವುದನ್ನು ಕೂಡಲೇ ನಿಲ್ಲಿಸಬೇಕು. ನಾಯಕ ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ಆದೇಶದಂತೆ ಅಂತಹವರ ಮೇಲೆ ಮತ್ತು ಅಂತಹ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಆಧಿಕಾರಿಗಳ ಆದೇಶದಂತೆ ಅಂತಹವರ ಮೇಲೆ ಮತ್ತು ಅಂತಹ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಆಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದೆ. ಈ ನಕಲಿ ಜಾತಿ ಪ್ರಮಾಣ ಪತ್ರಗಳಿಗೆ ಮೂಲ ಕಾರಣ ವೃತ್ತಿಗಾಗಿ ನಾಯಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವಕರಲ್ಲಿ ಸಮಾಜಸೇವಾ ಮನೋಭಾವ, ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುವ ರಾಷ್ಟ್ರೀಯ ಸೇವಾ ಯೋಜನೆ ತನ್ನ ೫೬ನೇ ವರ್ಷದ ಪಯಣವನ್ನು ಪೂರೈಸಿದೆ ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶದ ಅ.ಬ, ಸ್ನಾತಕ, ಮುಕ್ತ ಮತ್ತು ಶಿಕ್ಷಣ ಘಟಕಗಳ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಮಹಾತ್ಮಾ ಗಾಂಧಿಜಿಯವರ ಜನ್ಮ ಶತಾಬ್ದಿ ವರ್ಷದಲ್ಲಿ ೧೯೬೯ರ ಸೆಪ್ಟೆಂಬರ್ ೨೪ರಂದು ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆ, ಯುವಕರು ಶಿಕ್ಷಣದ ಜೊತೆಗೆ ಸಮಾಜಸೇವಾ ಕಾರ್ಯಗಳಲ್ಲಿ ತೊಡಗುವಂತೆ ಮಾಡುವ ಉದ್ದೇಶದಿಂದ ರೂಪುಗೊಂಡಿದೆ. ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ಕಟ್ಟಿಕೊಡಲು ಈ ಯೋಜನೆ ನೆರವಾಗುತ್ತಿದೆ. ವಿಶೇಷವಾಗಿ ವಿದ್ಯಾರ್ಥಿನಿಯರಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆದು, ನಾಯಕತ್ವದ ಗುಣಗಳನ್ನು ಕಲಿಯಲು ಎನ್‌ಎಸ್‌ಎಸ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.ವಿವಿಯ ಎನ್‌ಎಸ್‌ಎಸ್ ಕೋಶದ ಸಂಯೋಜಕ ಪ್ರೊ.ಅಶೋಕಕುಮಾರ ಸುರಪುರ, ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಹಕಾರಿ ಸಂಘಗಳ ಬೆಳವಣಿಗೆಯ ನಿಟ್ಟಿನಲ್ಲಿ ಸದಸ್ಯರ ಸಹಕಾರ ಹಾಗೂ ಪ್ರೋತ್ಸಾಹ ಬಹಳ ಮುಖ್ಯವಾಗಿದೆ ಎಂದು ಮುಳಸಾವಳಗಿ ಸಿದ್ದಾರೂಢ ಕೈವಲ್ಯಧಾಮ ಆಶ್ರಮದ ದಯಾನಂದ ಸ್ವಾಮೀಜಿ ಹೇಳಿದರು.ಮುಳಸಾವಳಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ನಡೆದ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದರು.ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿ ಆಶೀರ್ವಚನ ನೀಡಿದರು.ಸಂಘದ ಅಧ್ಯಕ್ಷ ಸಂಗನಗೌಡ ಬಿರಾದಾರ ಮಾತನಾಡಿ, ಪರಸ್ಪರ ಸಹಕಾರದ ಮೂಲಕ ಸಹಕಾರ ಸಂಘಗಳು ಹಾಗೂ ರೈತರ ಏಳಿಗೆಗೆ ಶ್ರಮಿಸೋಣ ಎಂದು ಹೇಳುತ್ತಾ, ಸಂಘದ ಕಳೆದ ವರ್ಷದ ಲೆಕ್ಕಪತ್ರದ ವಿವರಗಳನ್ನು ಮಂಡಿಸಿದರು.ಇಂಡಿ ಕೃಷಿವಿಜ್ಞಾನ ಕೇಂದ್ರದ ಡಾ.ಪ್ರಸಾದ ಹಾಗೂ ಡಾ.ಪ್ರೇಮಚಂದ್ರ ಮಾತನಾಡಿ, ರೈತರಿಗೆ ಬೆಳೆಗಳ ನಿರ್ವಹಣೆ, ಸಾವಯವ ಗೊಬ್ಬರ, ಜಾನುವಾರುಗಳ ನಿರ್ವಹಣೆ ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ರೈತರಿಗೆ ತಿಳಿಸಿದರು.ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಅಮಿತ ಖಂಡೇಕರ, ಸಾವಯವ ಕಂಪನಿಯ ಸುನೀಲ ಮಾತನಾಡಿದರು. ನಂತರ ಕೃಷಿಯಲ್ಲಿ ವಿಶೇಷ ಸಾಧನೆಗೈದ ರೈತರನ್ನು ಸನ್ಮಾನಿಸಲಾಯಿತು.ಸಂಘದ ಉಪಾಧ್ಯಕ್ಷ ಕಲ್ಲಪ್ಪ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಈರನಗೌಡ ಪಾಟೀಲ ಅವರು ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ಸಾರ್ಥಕ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಕಲಬುರ್ಗಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಪ್ರತಿ ವರ್ಷ ಸುಭದ್ರ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿರುವ ಜಿಲ್ಲೆಯ ಆಯ್ದ ವಿಶೇಷ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಸದ್ಯ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಕಲಬುರ್ಗಿಯ ಎಂ.ಎಸ್. ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿರುವ ಐ.ಕೆ.ಪಾಟೀಲ ಆಯ್ಕೆಯಾಗಿದ್ದಾರೆ.ಸೆಪ್ಟೆಂಬರ್ ೨೬ ರಂದು ಬೆಳಿಗ್ಗೆ ೧೧ ಘಂಟೆಗೆ ಕಲಬುರ್ಗಿ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು , ಹೈದರಾಬಾದ ಕರ್ನಾಟಕ ಶಿಕ್ಷಣಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿಸದಸ್ಯ ರಾಜೇಶ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನ್ ರಾಷ್ಟ್ರೀಯವಾದಿ ಪಂ. ದೀನ್ ದಯಾಳ ಉಪಾಧ್ಯಾಯರ ಜಯಂತೋತ್ಸವವನ್ನು ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ವಾರ್ಡ್ ನಂ.೬ ರ ವ್ಯಾಪ್ತಿಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆ ಸಂದೇಶ ಸಾರಿದರೆ, ಬಿಜೆಪಿ ನಗರ ಮಂಡಳ ವತಿಯಿಂದ ಶ್ರೀ ಶಿವಾಜಿ ಮಹಾರಾಜರ ವೃತ್ತದಲ್ಲಿ ಪಂ.ದೀನದಯಾಳ ಉಪಾದ್ಯಾಯರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದೇಶದಲ್ಲಿಯೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬಿಜೆಪಿ ಬೆಳೆಯುವಲ್ಲಿ ಪಂ.ದೀನದಯಾಳ ಉಪಾಧ್ಯಾಯ ಅವರ ಸಮರ್ಪಣಾ ಮನೋಭಾವ, ದೂರದೃಷ್ಟಿಯ ಜನಪರ ಚಿಂತನೆ ಕಾರಣ, ಅನೇಕ ತ್ಯಾಗಗಳನ್ನು ಮಾಡಿ ಈ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ, ಈ ಪಕ್ಷ ನಮಗೆ ಮಾತೃ ಸಮಾನ, ಅವರು ಕಟ್ಟಿದ ಪಕ್ಷ ಇಂದು ಹೆಮ್ಮರವಾಗಿ ಬೆಳೆದಿದೆ, ದಿ. ಅಟಲ್ ಬಿಹಾರಿ ವಾಜಪೇಯಿ, ದಿ.ಲಾಲ್ ಕೃಷ್ಣ ಅಡ್ವಾಣಿ, ಪ್ರಸ್ತುತ ನರೇಂದ್ರ ಮೋದಿಜಿ ಸೇರಿದಂತೆ ಅನೇಕ ನಾಯಕರಿಗೆ ಪಂಡಿತ ದಯಾಳ ಉಪಾಧ್ಯಾಯರ ಆದರ್ಶಗಳೇ ಸ್ಪೂರ್ತಿ ತುಂಬಿವೆ, ಸರಳ ವ್ಯಕ್ತಿತ್ವದ ಪಂ.ದೀನದಯಾಳ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನಲ್ಲಿ ಮಳೆಯಿಂದಾದ ಹಾನಿ ಮತ್ತು ಭೀಮ ನದಿ ಪ್ರವಾಹದಿಂದ ಉಂಟಾಗಿರುವ ಬೆಳೆ ಹಾನಿಯನ್ನು ದ್ರೋಣ ಕ್ಯಾಮೆರಾ ಮೂಲಕ ಸಮೀಕ್ಷೆ ಮಾಡುವ ಕಾರ್ಯ ನಡೆದಿದೆಈ ಕುರಿತು ಮಾಹಿತಿ ನೀಡಿರುವ ದೇವಣಗಾಂ ಗ್ರಾಮ ಲೆಕ್ಕಾಧಿಕಾರಿ ಎಂ ಕೆ ಪೂಜಾರಿ ಮಾತನಾಡಿ ಈ ವರ್ಷ ಅತಿಯಾಗಿ ಮಳೆಯಾಗಿದ್ದು ರೈತರ ಬೆಳೆಗಳು ಹಾನಿಗೊಳಗಾಗಿವೆ. ಆದ್ದರಿಂದ ಅವುಗಳ ಸಮೀಕ್ಷೆ ಮಾಡಲೇಬೇಕಾಗಿದೆ ಆದರೆ ಮಳೆ ಹೆಚ್ಚಾಗಿರುವ ಪರಿಣಾಮ ಹೊಲಗಳಲ್ಲಿ ಸಂಚರಿಸುವುದು ಕಷ್ಟವಾಗುವದರಿಂದ ಪ್ರಾಥಮಿಕವಾಗಿ ದ್ರೋಣ ಕ್ಯಾಮೆರಾ ಮೂಲಕ ಸಮೀಕ್ಷೆ ಮಾಡಿ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಗಳಾದ ತೊಗರಿ, ಹತ್ತಿ, ಹೆಸರು ಮುಂತಾದ ಬೆಳೆಗಳ ಸರ್ವೆ ಮಾಡಲಾಗುತ್ತಿದೆ.ಸರ್ವೆ ಮಾಡಿದ ನಂತರ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಪ್ರಕಟಿಸಲಾಗುವುದು ಆಕ್ಷೇಪಣೆಗಾಗಿ ಒಂದು ವಾರ ಕಾಲಾವಕಾಶ ನೀಡಿ ಕಣ್ತಪ್ಪಿನಿಂದ ಯಾವುದಾದರೂ ರೈತರ ಸಮೀಕ್ಷೆ ಉಳಿದಿದ್ದರೆ ಅವುಗಳನ್ನು ಸರಿಪಡಿಸಿ ಅಂತಿಮ ಪಟ್ಟಿಯನ್ನು ಸಲ್ಲಿಸಲಾಗುವುದು.ಸದ್ಯ ಈಗಲೂ ಕೂಡ ಮಳೆ ಬರುತ್ತಿದೆ ನದಿಯ ನೀರು ಕೂಡ ಎಲ್ಲೆಂದರಲ್ಲಿ ನುಸುಳುತ್ತಿದೆ ಅವುಗಳ ಪಟ್ಟಿಯನ್ನು…
ಟೆಂಡರ್ ಕರೆಯದೆ ಲ್ಯಾಂಡ್ ಆರ್ಮಿ ಅಧೀನದಲ್ಲಿಟ್ಟುಕೊಂಡು ಅನುದಾನ ಲೂಟಿ | ಶಾಸಕ ಪಾಟೀಲ್ ನಾಪತ್ತೆ, ತಾಲೂಕು ಆಡಳಿತ ಮಗನ ಕೈಗೆ | ಬಿಜೆಪಿ ಮುಖಂಡ ನಿತೀನ್ ಗುತ್ತೇದಾರ ಗಂಭೀರ ಆರೋಪ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ತಾಲೂಕಿನಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕಾಗಿ 2 ಕೋಟಿ ಅನುದಾನ ಮಂಜೂರು ಮಾಡಿಸಿ ಗುಂಡಿ ಮುಚ್ಚದೆ ಎಲ್ಲಾ ಅನುದಾನ ಶಾಸಕ ಎಂ.ವೈ ಪಾಟೀಲ್ ಮನೆ ಸೇರಿದೆ ಎಂದು ಬಿಜೆಪಿ ಮುಖಂಡ ನಿತೀನ್ ಗುತ್ತೇದಾರ ಗಂಭೀರ ಆರೋಪ ಮಾಡಿದರು.ಅವರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಅಫಜಲಪುರ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡುತ್ತಾ ಶಾಸಕ ಎಂ.ವೈ ಪಾಟೀಲ್ ಜನರಿಂದ ಆಯ್ಕೆಯಾರೂ ಕೂಡ ಜನರ ಸೇವೆ ಮಾಡುತ್ತಿಲ್ಲ. ಪ್ರವಾಹದ ಸಂದರ್ಭದಲ್ಲಿ ಶಾಸಕ ಎಂ.ವೈ ಪಾಟೀಲ್ ಜನರ ಸಮಸ್ಯೆ ಆಲಿಸಲು ಬರಬೇಕಾಗಿತ್ತು. ಆದರೆ ಎಲ್ಲಿ ನಾಪತ್ತೆ ಆಗಿದ್ದಾರೋ? ಅಥವಾ ಶಾಸಕರಿಗೆ ಮುಚ್ಚಿಟ್ಟಿದ್ದಾರೋ ಅರ್ಥವಾಗುತ್ತಿಲ್ಲ. ಶಾಸಕರ ಹೆಸರಲ್ಲಿ ಅವರ ಮಗನೇ ಕಾರುಬಾರು ಮಾಡುತ್ತಿದ್ದಾನೆ. ಜನರಿಂದ ಆಯ್ಕೆಗೊಳ್ಳದಿದ್ದರೂ ತಾನೇ ಶಾಸಕ ಎನ್ನುವ…
