Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿಯಲ್ಲಿ ಕಬ್ಬಿನ ದರ ನಿಗದಿಗಾಗಿ ರೈತ ಸಂಘಟನೆಗಳ ನೇತೃತ್ವದಲ್ಲಿ ಬೆಳೆಗಾರರ ಹೋರಾಟ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಬ್ಬಿನ ದರ ನಿಗದಿಗಾಗಿ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ದಿಂದ ಪ್ರಾರಂಭವಾದ ರೈತರ ಪ್ರತಿಭಟನೆಯ ಕಿಡಿ ಇದೀಗ ರಾಜ್ಯದಾದ್ಯಂತ್ಯ ವ್ಯಾಪಿಸಿದೆ. ನ್ಯಾಯಯುತ ಬೆಲೆ ಪಡೆದೇ ತೀರುವ ದಿಸೆಯಲ್ಲಿ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಗೌರವಾಧ್ಯಕ್ಷ ದಾನಪ್ಪಗೌಡ ಚನಗೊಂಡ ಹೇಳಿದರು.ಸಿಂದಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹಾಗೂ ಕಬ್ಬು ಬೆಳೆಗಾರರ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಅವರ ಮೂಲಕ ಸಿಎಂ ಮತ್ತು ಸಚಿವರಿಗೆ ಮನವಿ ಸಲ್ಲಿಸುವ ಪೂರ್ವದಲ್ಲಿ ಮಾತನಾಡಿದ ಅವರು, ಕಬ್ಬಿನ ದರ ನಿಗದಿಗಾಗಿ ರೈತರು ಮಾಡುತ್ತಿರುವ ಹೋರಾಟಕ್ಕೆ ಸರಕಾರ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ನ್ಯಾಯ ದೊರೆಯುವವರೆಗೂ ರೈತರ ಹೋರಾಟ ಮುಂದುವರೆಯಲಿದೆ. ರಾಜ್ಯದಲ್ಲಿ ಇಷ್ಟೆಲ್ಲ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದರು ಸಕರಾರ ಕ್ಯಾರೆ ಎನ್ನುತ್ತಿಲ್ಲ ಎಂದರೆ ಇದು…
ಕೊಲ್ಹಾರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ | ಜಿಲ್ಲಾಧಿಕಾರಿ & ಮುಖ್ಯಮಂತ್ರಿಗೆ ರೈತ ಸಂಘ ಮುಖಂಡರಿಂದ ಮನವಿ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ಯುಕೆಪಿಯ ಕೊರೆಮ್ಮ ದೇವಿ ದೇವಸ್ಥಾನದ ಹತ್ತಿರ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52 (218) ರಲ್ಲಿ ಒಂದು ಟನ್ ಕಬ್ಬಿಗೆ 3400 ದರ ನಿಗದಿಪಡಿಸಬೇಕು ಎಂದು ಸುಮಾರು ಒಂದು ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಸಂತೋಷ ಮ್ಯಾಗೇರಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ರೈತ ಸಂಘದ ಮುಖಂಡರು ಮನವಿ ಸಲ್ಲಿಸಿದರು.ಈ ವೇಳೆ ತಾಲೂಕಾಧ್ಯಕ್ಷ ಸೋಮು ಬಿರಾದಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯುವಂತಹ ಶುಕ್ರವಾರದ ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳಿಗೆ ಪ್ರತಿ ಟನ್ ಕಬ್ಬಿಗೆ ಯಾವ ಬೆಂಬಲ ಬೆಲೆ ನಿಗದಿ ಘೋಷಣೆ ಮಾಡುತ್ತಿರೋ, ವಿಜಯಪುರ ಜಿಲ್ಲೆಯ ರೈತರಿಗೂ ಕೂಡಾ ಅದೇ ದರವನ್ನು ನೀಡಬೇಕು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ…
ಕಳೆದ ಒಂದು ವಾರದಿಂದ ನಡೆಸುತ್ತಿದ್ದ ಪ್ರತಿಭಟನೆ | ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ | ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ.ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಿದ್ದಾರೆ.ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್‌ಗೆ 3,200 ರೂಪಾಯಿಗಳಿಗಿಂತ ಹೆಚ್ಚು ನೀಡಲು…
ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿ ಬೆಂಬಲಿಸಿದ ವ್ಯಾಪಾರಸ್ಥರು ಉದಯರಶ್ಮಿ ದಿನಪತ್ರಿಕೆ ಇಂಡಿ: ಕಬ್ಬಿಗೆ ರೂ ೩೫೦೦ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧ್ಯಕ್ಷ ಎಸ್.ಬಿ.ಕಂಬೋಗಿ ಇವರ ನೇತೃತ್ವದಲ್ಲಿ ನಡೆದ ಅನಿರ್ದಿಷ್ಠ ಸತ್ಯಾಗ್ರಹ ಇಂದು ಇಂಡಿ ಬಂದ್ ಮಾಡುವ ಮೂಲಕ ಯಶಸ್ವಿಯಾಗಿದೆ.ಕೃಷಿ ಮಾರುಕಟ್ಟೆ, ವರ್ತಕರ ಸಂಘ, ಪಟ್ಟಣದ ವಿವಿಧ ವ್ಯಾಪಾರಸ್ಥರು ಬಂದದಲ್ಲಿ ಸ್ವಯಂ ಪ್ರೇರಿತ ಅಂಗಡಿಗಳನ್ನು ಬಂದು ಮಾಡಿ ಭಾಗಿಯಾದುದಲ್ಲದೆ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಅವಶ್ಯಕ ಸೇವೆ ಹೊರತು ಪಡಿಸಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟುಗಳು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಕಾಯಿಪಲ್ಲೆ ಮಾರುವವರು, ಚಹಾ ಅಂಗಡಿಗಳು ಹೋಟೆಲಗಳು ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟು ಬಂದದಲ್ಲಿ ಪಾಲ್ಗೊಂಡಿದ್ದವು.ಅವಶ್ಯಕ ಸೇವೆಗಳಾದ ಬ್ಯಾಂಕು ವ್ಯವಹಾರ, ಆಸ್ಪತ್ರೆ ಮತ್ತು ಔಷದ ಅಂಗಡಿ ಮತ್ತು ಪೋಟ್ರೋಲ ಪಂಪ ಮಾತ್ರ ರಿಯಾಯತಿ ನೀಡಿ ರೈತರು ಯಾವದೇ ರೀತಿಯ ತೊಂದರೆ ಮಾಡಲಿಲ್ಲ.ಬೇರೆ ಊರುಗಳಿಂದ ಬರುವ ಪ್ರಯಾಣಿಕರಿಗೆ ಅತೀವ ತೊಂದರೆಯಾಯಿತು. ಅದಲ್ಲದೆ ಬಂದ ನಿಮಿತ್ಯ ಪ್ರತಿಭಟನಾಕಾರರು ಬಿಟ್ಟರೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ವಿವಿಧ ರೈತಪರ ಸಂಘಟನೆಗಳಿಂದ ಪ್ರತಿ ಟನ್ ಕಬ್ಬಿಗೆ ಬೆಂಬಲ ಬೆಲೆ ೩೫೦೦ ರೂ.ಗಳನ್ನು ನೀಡಲು ಹಾಗೂ ಕೆಲವು ಕಾನೂನು ತೋಡಕುಗಳ ಕುರಿತು ಹಕ್ಕೋತ್ತಾಯ ಮಂಡನೆಗಾಗಿ ಆಗ್ರಹಿಸಿ, ಜೊತೆಗೆ ಬೆಳಗಾವಿ, ಬಾಗಲಕೋಟ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಕೈಗೊಂಡು, ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ಧರಣಿ ಕುಳಿತು ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಶುಕ್ರವಾರ ಸೇರಿದ ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿ ಟನ್ ಕಬ್ಬಿಗೆ ಬೆಂಬಲ ಬೆಲೆ ನೀಡದ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟು, ಬಸ್‌ನಿಲ್ದಾಣ ಮಾರ್ಗದ ಮೂಲಕ ಡಾ.ಅಂಬೇಡಕರ್ ವೃತ್ತದಲ್ಲಿ ಹೆದ್ದಾರಿ ಬಂದ್ ಮಾಡಿ ಧರಣಿ ಕುಳಿತರು.ಈ ಸಂದರ್ಭದಲ್ಲಿ ಅಜೀಜ್ ಯಲಗಾರ, ಸೋಮಶೇಖರ ಹಿರೇಮಠ, ಕಾಶೀಪತಿ ಕುದರಿ, ಮುನೀರ್ ಅಹ್ಮದ್ ಮಳಖೇಡ, ರಾಜಕುಮಾರ ಸಿಂದಗೇರಿ, ಶಿವಾನಂದ ಯಡಹಳ್ಳಿ, ಶಂಕರಗೌಡ ಹಿರೇಗೌಡರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ರೈತ ಸಮುದಾಯದ ಬೆಂಬಲಕ್ಕೆ ನಿಂತು…
ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ತಾಲ್ಲೂಕಿನ ಕಣಮುಚನಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಜನ್ಯ ಹಾಲಳ್ಳಿಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ -2025ಸಮಾಲೋಚನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಮುಖ್ಯೋಪಾಧ್ಯಾಯ ಆರ್. ಬಿ. ಪಾಟೀಲ್, ಸಿಬ್ಬಂದಿ ವರ್ಗ, ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣಗೌಡ ಬಿರಾದಾರ ಮತ್ತು ಸದಸ್ಯರು, ಮಾರ್ಗದರ್ಶಕ ಶಿಕ್ಷಕಿ ಡಾ. ಎ.ಟಿ ಲಗಟಗೇರ ಹಾಗೂ ಊರಿನ ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಲಬುರ್ಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದ ಶ್ರೀ ವೀರಭದ್ರೇಶ್ವರರ ಜಾತ್ರಾ ಮಹೋತ್ಸವ ಅಸಂಖ್ಯಾತ ಜನಸ್ಥೋಮದ ಮಧ್ಯೆ ಶ್ರದ್ಧಾ ಭಕ್ತಿಯಿಂದ, ಅತ್ಯಂತ ಅದ್ಧೂರಿಯಾಗಿ ನೆರವೇರಲಿದೆ.ನ8 ರಂದು ರಾತ್ರಿ 1ಗಂಟೆಗೆ ಮೈಲಾರಲಿಂಗ ದೇವಸ್ಥಾನದಲ್ಲಿ ಕಳ್ಳ ಸರಪಳಿ, ರಾಜ್ಯದ ಮೂಲೆ ಮೂಲೆಯ ಸೇರಿದಂತೆ ಸುತ್ತಮುತ್ತಲಿನ ರಾಜ್ಯದ ಭಕ್ತಾದಿಗಳು ಬಂದು ಸೇವೆ ನೀಡುವ ಪ್ರವಿತ್ರ ಅಗ್ನಿ ಕುಂಡದ ಪ್ರವೇಶ ನ9 ರಂದು ರಾತ್ರಿ 11ಕ್ಕೆ ಜರುಗಲಿದೆ.ನ10 ರಂದು ಸಂಜೆ ಮದ್ದು ಸುಡುವ ಕಾರ್ಯಕ್ರಮ ಬಳಿಕ ಭವ್ಯ ರಥೋತ್ಸವ ಜರುಗಲಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನವೆಂಬರ್ 10 ರಿಂದ 15ರ ವರೆಗೆ ಆರು ದಿನಗಳ ಕಾಲ ಚರ್ಮ ರೋಗ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಪಂಚಕರ್ಮ ಚಿಕಿತ್ಸೆ ಶಿಬಿರ ನಡೆಯಲಿದೆ.ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಸೋರಿಯಾಸಿಸ್ ಅಥವಾ ದೇಹದಲ್ಲಿ ಕೆಂಪು ಬಣ್ಣದ ಕಲೆಗಳು, ತೀವ್ರ ತುರಿಕೆ , ಬಿಳಿ ಹೊಟ್ಟು ಉದುರುವಿಕೆಯಂಥಚರ್ಮರೋಗ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ತಪಾಸಣೆ ಮತ್ತು ಚಿಕಿತ್ಸೆ ಪಡೆಯಬಹುದಾಗಿದೆ.ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಯುರ್ವೇದ ಹೈಟೆಕ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೈದ್ಯ ಡಾ. ಸ್ಮಿತಾ ಚೌಧರಿ ಮೊ. ನಂ. 89046070881 ಮತ್ತು 9513397413 ಸಂಪರ್ಕಿಸಬಹುದಾಗಿದೆ.
೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭ್ರೂಣ ಲಿಂಗ ಪತ್ತೆ ಕಾನೂನಿನ ಪ್ರಕಾರ ಅಪರಾಧ. ಇಂತಹ ಪ್ರಕರಣಗಳ ಸುಳಿವು ಸಿಕ್ಕಲ್ಲಿ ಸಂಬಂಧಿಸಿದ ಅಧಿಕಾರಿಗಳು, ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ, ಯಾವ ಪ್ರಭಾವಕ್ಕೂ ಒಳಗಾಗದೇ ಕೂಡಲೇ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಕರೆ ನೀಡಿದರು.ಪಟ್ಟಣದ ಕೆಬಿಎಂಪಿಎಸ್ ಹೈಸ್ಕೂಲ್ ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹ್ಮಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ವರದಿಗಳ ಪ್ರಕಾರ ಹಲವು ರಾಜ್ಯಗಳಲ್ಲಿ ಹೆಣ್ಣು ಜನನ ಅನುಪಾತ ತಗ್ಗುತ್ತಿರುವದು ಆತಂಕದ ವಿಷಯ. ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತವನ್ನು ಕಾನೂನುಬದ್ಧವಾಗಿ ನಿಷೇಧಿಸಲ್ಪಟ್ಟರೂ ಇನ್ನೂ ಕೆಲವು ಪ್ರದೇಶಗಳಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಯುತ್ತಿರುವದು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನಕದಾಸರ ೫೩೮ನೆಯ ಜಯಂತ್ಯುತ್ಸವ ನಿಮಿತ್ತ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನ.೦೮ರಂದು ಬೆಳಿಗ್ಗೆ ೯ಗಂಟೆಗೆ ಕುಂಭ ಮೇಳದೊಂದಿಗೆ ಕನಕದಾಸರ ಭವ್ಯ ಮೆರವಣಿಗೆ, ೧೦ಗಂಟೆಗೆ ಎತ್ತನ ಗಾಡಿ ಸ್ಪರ್ಧೆ, ೧೧ಗಂಟೆಗೆ ಕುದರಿ ಗಾಡಿ ಸ್ಪರ್ಧೆ, ೧೨ಗಂಟೆಗೆ ಗುಂಡು ಮತ್ತು ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಗಳು ಭಕ್ತ ಕನಕದಾಸ ವೃತ್ತದಲ್ಲಿ ಹಾಗೂ ಮದ್ಯಾಹ್ನ ೩ಗಂಟೆಗೆ ಅಂತರರಾಷ್ಟ್ರೀಯ ಜಂಗಿ ಕುಸ್ತಿ ಪಂದ್ಯಾವಳಿಯು ಪರಮಾನಂದ ಪ್ರೌಢಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿದ ನಾಗಪ್ಪ ಶಿವೂರ ಹೇಳಿದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದ ಕುಸ್ತಿಪಟು ಭಾರತ ಕೇಸರಿ ಸಿಕಂದರ ಶೇಖ ಮತ್ತು ಇರಾನ್ ದೇಶದ ಕೇಸರಿ ಮೀರ್ಜಾ ನಡುವೆ ಸೆಣಸಾಟ ನಡೆಯಲಿದೆ. ಇಲ್ಲಿ ೩೦ಜನ ಕುಸ್ತಿಪಟುಗಳ ಮಧ್ಯದಲ್ಲಿ ಜಂಗಿ ಕುಸ್ತಿ ನಡೆಯುವುದು. ಜಂಗಿ ಕುಸ್ತಿಯಲ್ಲಿ ವಿಜೇತರಾದವರಿಗೆ ರೂ.೫ಲಕ್ಷ ಬಹುಮಾನ ನೀಡಲಾಗುವುದು ಎಂದರು.ಈ ವೇಳೆ ಸಿದ್ದು ಬುಳ್ಳಾ, ತಾಲೂಕು ಕುರುಬ ಸಮಾಜದ ತಾಲೂಕಾಧ್ಯಕ್ಷ ನಿಂಗಣ್ಣ…
