Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯುಪಿಎಸ್ ನಾಗರೀಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ಮತ್ತು ಗ್ರೂಪ್-ಸಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ವಿಜಯಪುರ ನಗರದಲ್ಲಿ ನ.೮ ಹಾಗೂ ೯ ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ.ನ.೮ ರಂದು ಗ್ರೂಪ್ ಸಿ ಪರೀಕ್ಷೆ ಪೂರ್ವ ತರಬೇತಿಗಾಗಿ ಹಾಗೂ ನವೆಂಬರ್ ೯ರಂದು ಯುಪಿಎಸ್ ನಾಗರಿಕ ಸೇವೆ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆಯ್ಕೆಗಾಗಿ ನಗರದ ಗಾಂಧಿ ಚೌಕದಲ್ಲಿರುವ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿವೆ.ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿಯೊಂದಿಗೆ ಹಾಜರಾಗಯವಂತೆಯೂ, ಪ್ರವೇಶ ಪತ್ರವನ್ನು https;//sevasindhu.karnataka.gov.inಮೂಲಕ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಈ ಬಗ್ಗೆ ಯಾವುದೇ ಗೊಂದಲ ಉದ್ಭವಿಸಿದಲ್ಲಿ ಜಿಲ್ಲಾ ಕಚೇರಿಯನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಪ್ರಶಾಂತ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಬ್ಬು ಬೆಳೆಗಾರರ ತಾಳ್ಮೆಯನ್ನು ಪರೀಕ್ಷಿಸಬೇಡಿ, ರೈತರ ತಾಳ್ಮೆ ಕಟ್ಟೆ ಒಡೆದರೆ ಮುಂದೆ ಆಗುವ ಬಹುದೊಡ್ಡ ಅನಾಹುತಗಳಿಗೆ ಸಕ್ಕರೆ ಕಾರ್ಖಾನೆಗಳು ಹೆಸರು ಹೆಳದೆ ತುಕ್ಕು ಹಿಡಿದು ಮೂಲೆಗುಂಪಾಗುತ್ತವೆ, ಕೂಡಲೇ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕಬ್ಬಿಗೆ ೩೫೦೦ ಹಣವನ್ನು ಕೊಡಿಸಬೇಕು ಹಾಗೂ ಸರ್ಕಾರಕ್ಕೆ ಬರುವ ತೆರಿಗೆಯಲ್ಲಿ ೧೦೦೦ ಹಣ ಹಾಕಿ ಕೊಡಬೇಕು ಎಂದು ಮಾಜಿ ಸಚಿವರಾದ ಎಸ್.ಕೆ ಬೆಳ್ಳುಬ್ಬಿ ಮಾತನಾಡಿ ಆಗ್ರಹಿಸಿದರು.ಕಳೆದ ೩ ದಿನಗಳಿಂದ ನಗರದ ಗಗನ ಮಹಲ್ ಹತ್ತಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಬ್ಬು ಬೆಳೆಗಾರರು ಹಾಗೂ ಸಮಸ್ತ ರೈತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಲ್ಲಿ ಹಮ್ಮಿಕೊಂಡಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ವಿವಿಧ ರೈತ ಗೀತೆ, ಹಂತಿ ಪದವನ್ನು ಸಂಘಡಿಗರೊಂದಿಗೆ ಹಾಡಿ ನಾವೂ ಕೂಡಾ ರೈತರು ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುವವರೆಗೂ ನಿಮ್ಮಜೊತೆ ಇರುತ್ತೆವೆ ಎಂದರುಈ ವೇಳೆ ಹುಲಿಜಂತಿ ಮಾಳಿಂಗರಾಯ ಮಹಾರಾಜರು ಹೋರಾಟವನ್ನು ಉದ್ದೇಶಿಸಿ…
ಉತ್ತರ ಕರ್ನಾಟಕದ 26 ಸಕ್ಕರೆ ಕಾರ್ಖಾನೆಗಳ ಕಾರ್ಯಾಚರಣೆ ಸ್ಥಗಿತ | ಕಹಿಯಾದ ಕಬ್ಬು | ಇಕ್ಕಟ್ಟಿನಲ್ಲಿ ಸರ್ಕಾರ | ಬೆಳಗಾವಿ: ಭಾರತದ ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಿಸುವ ರಾಜ್ಯವಾದ ಕರ್ನಾಟಕದಲ್ಲಿ ಕಬ್ಬು ಬೆಳೆಯುವ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ತೀವ್ರ ಬಿಕ್ಕಟ್ಟು ಉಂಟಾಗಿದೆ. ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಸಾವಿರಾರು ರೈತರು ತಮ್ಮ ಬೆಳೆಗೆ ಟನ್‌ಗೆ 3,500 ರೂಪಾಯಿಗಳ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ತೀವ್ರಗೊಳಿಸಿದ್ದಾರೆ.ಸಕ್ಕರೆ ಕಾರ್ಖಾನೆಗಳು, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ನಿರ್ಬಂಧಗಳನ್ನು ಉಲ್ಲೇಖಿಸಿ, ಪ್ರತಿ ಟನ್‌ಗೆ 3,200 ರೂಪಾಯಿಗಳಿಗಿಂತ ಹೆಚ್ಚಿನ ಬೆಲೆ ನೀಡಲು ನಿರಾಕರಿಸಿವೆ. ಈ ಬಿಕ್ಕಟ್ಟು ಉತ್ತರ ಕರ್ನಾಟಕದ ಸುಮಾರು 26 ಸಕ್ಕರೆ ಕಾರ್ಖಾನೆಗಳ ಕಾರ್ಯಾಚರಣೆಯನ್ನು ಕುಂಠಿತಗೊಳಿಸಿದೆ, ರೈತರು ಹೆದ್ದಾರಿಗಳು ಮತ್ತು ಕಾರ್ಖಾನೆಗಳ ದ್ವಾರಗಳನ್ನು ತಡೆದು, ಕಬ್ಬು ಪೂರೈಕೆ ಮತ್ತು ಕಬ್ಬು ಪುಡಿಮಾಡುವ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರದಲ್ಲಿ ಕಬ್ಬು ರೈತರು ಆರಂಭಿಸಿರುವ ಅನಿರ್ದಿಷ್ಟಾವಧಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿಗಳಾದ, ನಮ್ಮೆಲ್ಲರ ಹೆಮ್ಮೆಯ ನಿವೃತ್ತ ಆದರ್ಶ ಶಿಕ್ಷಕರು, ತಮ್ಮ ಇಡೀ ಜೀವನವನ್ನು ಮಕ್ಕಳ ಕಲ್ಯಾಣಕ್ಕಾಗಿ ದುಡಿದಿರುವ ಹ.ಮ ಪೂಜಾರ ಗುರುಗಳಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತದ್ದು, ನಮ್ಮೆಲ್ಲರಿಗೂ ಅಭಿಮಾನದ ಸಂಗತಿ. ಅವರನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಪರವಾಗಿ ಅಭಿನಂದಿಸುವುದೆಂದರೆ, ಈ ನಾಡಿನ ಸಮಸ್ತ ಮಕ್ಕಳನ್ನು ಅಭಿನಂದಿಸಿದ ಹಾಗೆ ಎನ್ನುವ ಸಂತೃಪ್ತಿ ನಮ್ಮೆಲ್ಲರದಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಅವರು ಸಿಂದಗಿ ಪಟ್ಟಣದಲ್ಲಿರುವ ಪೂಜಾರ ಗುರುಗಳ ನಿವಾಸಕ್ಕೆ ಭೇಟಿ ನೀಡಿ, ಅವರನ್ನು ಅಕಾಡೆಮಿಯ ಪರವಾಗಿ ಸನ್ಮಾನಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮಕ್ಕಳ ಸಾಹಿತಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಶಿಕ್ಷಕ ಬಂದುಗಳು ಸಿಂದಗಿಯ ಹಲವಾರು ಜನ ಗಣ್ಯರು ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ಬಾರಿ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ಟಿವಿ9 ವಾಹಿನಿಯ ಹಿರಿಯ ವರದಿಗಾರ ಅಶೋಕ ಯಡಳ್ಳಿ ಸ್ಪರ್ಧೆ ಮಾಡಿದ್ದು, ಅವರನ್ನು ಗೆಲ್ಲಿಸಲು ಮಾಧ್ಯಮ ಮಿತ್ರರು ಕೈಜೋಡಿಸಬೇಕೆಂದು ಇನ್ ನ್ಯೂಜ್ ವಾಹಿನಿ ಜಿಲ್ಲಾ ವರದಿಗಾರ ವಿಜಯಕುಮಾರ ಸಾರವಾಡ ಮನವಿ ಮಾಡಿಕೊಂಡಿದ್ದಾರೆ.ಗುರುವಾರ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಅಶೋಕ ಯಡಳ್ಳಿ ಅವರು ಮಾಧ್ಯಮ ಕ್ಷೇತ್ರದಲ್ಲಿ ತಮ್ಮ ನಿಷ್ಠೆ, ಪ್ರಾಮಾಣಿಕತೆ ಹಾಗೂ ಧೈರ್ಯಶಾಲಿ ವರದಿಗಾರಿಕೆಯಿಂದ ಹೆಸರುವಾಸಿಯಾಗಿದ್ದಾರೆ. ಪತ್ರಕರ್ತರ ಹಿತಕ್ಕಾಗಿ ಸದಾ ಕಾಳಜಿ ವಹಿಸುವ ಮನೋಭಾವ ಇವರಿಗಿದೆ. ಜಿಲ್ಲೆಯ ಅನೇಕ ಸಾಮಾಜಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ತಮ್ಮ ವರದಿಗಳ ಮೂಲಕ ಬೆಳಕಿಗೆ ತಂದು, ಅವುಗಳ ಪರಿಹಾರಕ್ಕಾಗಿ ಶ್ರಮಿಸಿದ್ದಾರೆ. ಕಾರಣ ಅವರಂತಹ ನಿಷ್ಠಾವಂತ, ಸಹೃದಯಿ ಪತ್ರಕರ್ತ ಸಂಘದ ಅಧ್ಯಕ್ಷನಾದರೆ ನಮ್ಮೆಲ್ಲರ ಧ್ವನಿಗೂ ಬಲ ದೊರೆಯುತ್ತದೆ, ಪತ್ರಕರ್ತರ ಹಿತಾಸಕ್ತಿ ಇನ್ನಷ್ಟು ಬಲಪಡುತ್ತದೆ. ಹೀಗಾಗಿ ಈ ಚುನಾವಣೆಯಲ್ಲಿ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ, ಮನರಂಜನೆಯ ಮತ್ತಷ್ಟು ಮೆರಗು ನೀಡುವ ವಿನೂತನವಾದ ಮಾಧ್ಯಮ ನಮ್ಮ ಸಂಸ್ಥೆಯಲ್ಲಿ ಬಿಎಲ್ ಡಿ ಇ ದ್ವನಿ ಸಮುದಾಯ ರೇಡಿಯೋ ಪ್ರಾರಂಭಗಿದೆ. ಬೋಧಕರು ವಿದ್ಯಾರ್ಥಿಗಳ ಈ ರೇಡಿಯೋ ಮಾಧ್ಯಮವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಪ್ರತಿಭೆ ಅನಾವರಣಕ್ಕೆ ಮುಕ್ತ ವೇದಿಕೆ ಕಲ್ಪಿಸಲಾಗಿದೆ ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ ೦೫-೧೧-೨೦೨೫ ಬುಧವಾರ ದಂದು ಬಿಎಲ್ ಡಿ ಇ ದ್ವನಿ ಸಮುದಾಯ ರೇಡಿಯೋ ಕೇಂದ್ರದಿಂದ ಬಿಲ್ ಡಿ ಇ ದ್ವನಿ ಎಫೆ ಎಂ ೯೮.೬ ಪರಿಚಯಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿ ಅವರು ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ಅವಕಾಶ ಹಾಗೂ ವಿವಿಧ ಕಾರ್ಯಕ್ರಮಗಳು ಪ್ರಸಾರಗೊಳ್ಳುತ್ತಿವೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಈ ವೇಳೆಯಲ್ಲಿ…
ಪ್ರಕೃತಿ ವೈವಿಧ್ಯತೆ ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨//೪೧೬೦ ಉದಯರಶ್ಮಿ ದಿನಪತ್ರಿಕೆ ಕರ್ನಾಟಕದ ಎರಡನೇ ಅತೀ ದೊಡ್ಡ ಜಲಪಾತವೆಂದು ಗೋಕಾಕ ಜಲಪಾತವನ್ನು ಕರೆಯಲಾಗುತ್ತದೆ. ಇದು ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಿಂದ ೬ ಕಿ.ಮೀ ದೂರದಲ್ಲಿರುವ ಈ ಜಲಪಾತವು ಘಟಪ್ರಭ ನದಿಯಿಂದ ಉಂಟಾಗುತ್ತದೆ. ಇದು ಕೆನಡಾ ಮತ್ತು ಅಮೇರಿಕ ದೇಶದ ನಡುವೆ ಇರುವ ನಯಾಗರ ಜಲಪಾತದಂತೆ ಕಾಣಿಸುವುದರಿಂದ ಇದನ್ನು ಭಾರತದ ನಯಾಗರವೆಂದು ಕರೆಯುತ್ತಾರೆ.ಸುಮಾರು ೧೮೦ ಅಡಿ ಎತ್ತರದಿಂದ ಧುಮುಕುವ ನೀರು ಇಲ್ಲಿ ರಮಣೀಯವಾಗಿ ಕಾಣುತ್ತದೆ. ಮಳೆಗಾಲದ ಜೂನ್ ತಿಂಗಳಿನಿಂದ ಡಿಸೆಂಬರ್ ಅಂತ್ಯದವರೆಗೂ ಈ ಜಲಪಾತದಲ್ಲಿ ಹೇರಳ ನೀರಿರುವುದರಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಬಹುದು. ಮಳೆಗಾಲದಲ್ಲಿ ಕೆಂಪು ಬಣ್ಣದ ನೀರಿನೊಂದಿಗೆ ಈ ಜಲಪಾತವು ಭೋರ್ಗರೆಯುತ್ತಾ ಧುಮುಕುತ್ತದೆ.ತೂಗು ಸೇತುವೆ ಗೋಕಾಕ ಫಾಲ್ಸ್ನ ಮತ್ತೊಂದು ವಿಶೇಷತೆ ಎಂದರೆ ಜಲಪಾತದ ನೀರು ಧುಮುಕುವ ಸ್ಥಳಕ್ಕೆ ಹೋಗಲು ಸಹಾಯ ಆಗುವಂತೆ ಬ್ರಿಟಿಷರ ಕಾಲದಲ್ಲಿ ಮರದ ಕಟ್ಟಿಗೆ (ಪಳಿಗಳು) ಮತ್ತು…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ ಪರವಾಗಿ ಹೇಳುವುದೇನಾದರೂ ಇದ್ದರೆ ಹೇಳಬಹುದು ಎಂದು ಹೇಳಿದಾಗ ಅದಕ್ಕೆ ಆತ ನ್ಯಾಯಾಧೀಶರೇ, ನನ್ನ ಹೊತೆಗೆ ನನ್ನ ತಂದೆ ತಾಯಿಗೂ ಶಿಕ್ಷೆ ವಿಧಿಸಿ. ಅವರನ್ನೂ ಜೈಲಿಗೆ ಕಳಿಸಿ ಎಂದ. ನ್ಯಾಯಾಧೀಶರು ಕಾರಣ ಕೇಳಿದಾಗ ಕಳ್ಳ ಹೇಳಿದ ’ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಒಂದು ಪೆನ್ಸಿಲ್ ಕದ್ದೆ ನಮ್ಮ ತಂದೆ ತಾಯಿಗೆ ಗೊತ್ತಾದರೂ ಅವರು ಏನನ್ನೂ ಹೇಳಲಿಲ್ಲ. ನಂತರ ಬೇರೆ ಬೇರೆ ವಸ್ತುಗಳನ್ನು ಕದ್ದು ತರತೊಡಗಿದೆ. ಕಳ್ಳತನದ ವಿಷಯ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಏನೂ ಹೇಳುತ್ತಿರಲಿಲ್ಲ. ನನ್ನ ಕುಕೃತ್ಯವನ್ನು ಅವರು ನಿರ್ಲಕ್ಷಿಸಿದರು. ಬರಬರುತ್ತ ನನಗೆ ಕಳ್ಳತನ ಚಟವಾಯಿತು. ಇಂದು ನಾನು ದೊಡ್ಡ ಪ್ರಮಾಣದ ಕಳ್ಳನಾಗಲು ಅವರೇ ಕಾರಣ ಹೀಗಾಗಿ ನನ್ನೊಂದಿಗೆ ಅವರನ್ನೂ ಶಿಕ್ಷಿಸಿ.’ ಎಂದುತ್ತರಿಸಿದ. ಕಳ್ಳ ಹೇಳಿದ್ದು ಸರಿಯಾಗಿದೆ. ಪಾಲಕರು ತಮ್ಮ ಜವಬ್ದಾರಿಯನ್ನು ನಿರ್ವಹಿಸದೇ ಇದ್ದುದರಿಂದ ಅಪರಾಧದಲ್ಲಿ ಪಾಲುದಾರರಾದರು. ಈ ದೃಷ್ಟಾಂತವು ಯಾವುದೇ ಕೆಟ್ಟದ್ದನ್ನು…
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು ಕನ್ನಡದ ಆಸ್ಮಿತೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಕನ್ನಡ ಭಾಷೆಯನ್ನ ಬಳಸಬೇಕು ಮತ್ತು ಬೆಳೆಸಬೇಕು. ಆ ನಿಟ್ಟಿನಲ್ಲಿ ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಾಡಿನ ಕನ್ನಡ ಮಾಧ್ಯಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದು 625 ಕ್ಕೆ 625 ಅಂಕ ಪಡೆದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ವಿಶೇಷವಾದ ಅಧ್ಯಯನ ಪ್ರವಾಸವನ್ನು ಏರ್ಪಡಿಸಿದೆ. ನವೆಂಬರ್ 14ರ ಒಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಸಾಧಕ ಮಕ್ಕಳು ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದ್ದಾರೆ.ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿರುವ ಸರಕಾರಿ ಶಾಲೆಗಳಲ್ಲಿ ಓದಿ ಸಾಧನೆ ಮಾಡಿರುವ ಕನ್ನಡ ಮಾಧ್ಯಮದ ಮಕ್ಕಳನ್ನು ಪ್ರೋತ್ಸಾಹಿಸುವುದು ಅಕಾಡೆಮಿಯ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.ಅವರು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಸಂಕಷ್ಟದಲ್ಲಿದ್ದ ಆರು ಜನ ಎುದುರಿಸುತ್ತಿದ್ದ ಆರು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹಣಕಾಸು ನೆರವು ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.ರವಿವಾರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಆರು ಜನ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಕೋರ್ಸಿನ ಪ್ರಥಮ ವರ್ಷದ ಬೋಧನಾ ಶುಲ್ಕ, ಊಟ ಮತ್ತು ವಸತಿ(ಹಾಸ್ಟೇಲ್ ಮತ್ತು ಮೆಸ್)ಕ್ಕೆ ಅಗತ್ಯವಾಗಿರುವ ಹಣದ ಚೆಕ್ ನ್ನು ವಿತರಿಸಿದರು.ಬಳಿಕ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ತಮ್ಮ ಶಿಕ್ಷಣಕ್ಕೆ ಅಗತ್ಯವಾಗಿರುವ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು, ತಮ್ಮ ಊರು ಮತ್ತು ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿ ಶುಭ ಹಾರೈಸಿದರು. ಆರು ಜನ ವಿದ್ಯಾರ್ಥಿಗಳಿಗೆ ಒಟ್ಟು…
