Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ್ಯತ್ನಾಳ್ ಹಲಾಲ್ ಪ್ರಮಾಣ ಪತ್ರ ಹೊಂದಿರುವ ಸಂಸ್ಥೆಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದಾರೆ.ಉತ್ತರ ಪ್ರದೇಶದಲ್ಲಿ ಈಗಾಗಲೇ ಹಲಾಲ್ ಉತ್ಪನ್ನಗಳನ್ನು ನಿಷೇದಿಸಲಾಗಿದೆ, ಇದೆ ರೀತಿ ದೇಶಾದ್ಯಂತ ಹಲಾಲ್ ಉತ್ಪನ್ನಗಳು ಹಾಗೂ ಅದನ್ನು ಪ್ರಮಾಣೀಕರಿಸುವ ಸಂಸ್ಥೆಗಳು ನಿಷೇದವಾಗಬೇಕೆಂದು ಮಾನ್ಯ ಗೃಹ ಸಚಿವರಲ್ಲಿ ಆಗ್ರಹಿಸುತ್ತೇನೆ ಎಂದು ಪತ್ರ ಬರೆಯುವ ಮೂಲಕ ರಾಜ್ಯ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಚ್ಛ ಭಾರತ ಮಿಷನ್-2.0ರ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ವತಿಯಿಂದ ಅಕ್ಟೋಬರ್ 26 ರಂದು ಸೈಕ್ಲೊಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ.ಸೈಕ್ಲೊಥಾನ್ ಕಾರ್ಯಕ್ರಮವು ಅಂದು ಬೆಳಿಗ್ಗೆ 6.30 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು, ಗೋಲಗುಮ್ಮಟ, ಡಾ.ಬಿ.ಆರ್.ಅಂಬೇಡ್ಕರ ವೃತ್ತ, ಮಹಾತ್ಮಾ ಗಾಂಧಿ ವೃತ್ತ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್, ಶ್ರೀ ಬಿ.ಎಮ್.ಪಾಟೀಲ ವೃತ್ತ, ಬಿ.ಎಲ್.ಡಿ.ಇ.ಕ್ಯಾಂಪಸ್ ಲಿಂಗದ ಗುಡಿ, ಶ್ರೀ ಸಿದ್ದೇಶ್ವರ ದೇವಸ್ಥಾನ, ಮಹಾತ್ಮಾ ಗಾಂಧಿ ವೃತ್ತದಿಂದ ಸಂಚರಿಸಿ. ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ.ನಗರದ ಯುವ ಸಮೂಹ, ಸಾರ್ವಜನಿಕರು ಈ ಸೈಕ್ಲೋಥಾನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಪಠ್ಯದ ಲೇಖಕರೊಂದಿಗೆ ಸಂವಾದ’ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಇಂಡಿ: ಕನ್ನಡ ನೆಲದ ಆಸ್ಮಿತೆಯನ್ನು ಗಡಿಭಾಗದ ಶಾಲಾಕಾಲೇಜುಗಳು ನಿರ್ವಹಿಸುತ್ತಿರುವುದು ಅತ್ಯಂತ ಸಮಾಧಾನಕರ ಸಂಗತಿ, ಕನ್ನಡತನ ಮರೆತು ಹೋಗುವ ವಿಷಾಧದ ದಿನಗಳಿವು ಎಂದು ಬೆಂಗಳೂರು ಜೈನ್ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ರಾಜಕುಮಾರ ಬಡಿಗೇರ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಹಮ್ಮಿಕೊಂಡಿದ್ದ ” ಪಠ್ಯದ ಲೇಖಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜು ವಿದ್ಯಾರ್ಥಿಗಳಲ್ಲಿ ಕನ್ನಡ ಓದು ಮತ್ತು ಬರಹವನ್ನು ಹೆಚ್ಚಿಸುವ ಇಂತಹ ಕಾರ್ಯಕ್ರಮಗಳು ನಡೆಯಬೇಕಾದ ಸಂಗತಿಯಾಗಿದ್ದು, ಲೇಖಕರೊಂದಿಗೆ ವಿದ್ಯಾರ್ಥಿಗಳು ಬೆರೆಯುವ ಮತ್ತು ಪಠ್ಯದ ಜೊತೆಗೆ ಸಾಂಸ್ಕೃತಿಕ ಮುಖಾಮುಖಿಯಾಗುವ ಕೆಲಸ ಇಲ್ಲಿ ನಡೆಯುತ್ತಿರುವುದು ಮಾದರಿಯಾಗಿ ನಾಡಿನ ಶೈಕ್ಷಣಿಕ ವಲಯಗಳಲ್ಲಿ ಅನುಸರಿಸಬೇಕಾದ ಮಹತ್ವದ ಕಾರ್ಯವೆಂದು ಬಣ್ಣಿಸಿದರು.ಪಠ್ಯದ ಲೇಖಕ ಡಾ.ಪ್ರಕಾಶ ಖಾಡೆ ಮಾತನಾಡಿ ‘ ಪಠ್ಯ ಮತ್ತು ಕವಿ’ ಸಮಪಾತಳಿಯ ಭಿನ್ನ ಆಲೋಚನೆಯ ಭಾಗವಾಗಿರುತ್ತಾನೆ, ಸದಾ ಪಠ್ಯದ ಒಂದು ಭಾಗವಾಗಿ ನೆಲೆಯೂರಿರುತ್ತಾನೆ ಎಂದರು.ಇನ್ನೊಬ್ಬ ಕತೆಗಾರ, ಬಿಎ…
ಪ್ರೇಮ ಬರಹ ಕೋಟಿ ತರಹ(ಪ್ರಣಯ ಪಕ್ಷಿಗಳ ಮೋಹಕ ಪದಗಳ ಗುಚ್ಛ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಳೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮಿಂಚು ಕಂಗಳ ಚೆಲುವೆನೀನು ಕಣ್ಣಿಗೆ ಬಿದ್ದಾಗಲಿಂದ ಮನಸ್ಸು ಹಿಡಿತಕೆ ಸಿಗುತಿಲ್ಲ. ಹೊತ್ತು ಗೊತ್ತು ಗೊತ್ತಿಲ್ಲದೇ ಜೀವ ತಿಂತಿದೆ. ಕನಸಿನ ಮುತ್ತುಗಳನು ಪೋಣಿಸುತಿದೆ. ಜಗತ್ತಿನ ಗತ್ತು ಗೊತ್ತಿರದ ಹರೆಯದ ಹೃದಯಕೆ ನಿನ್ನ ಒಡನಾಟವೇ ಬೇಕಂತೆ. ಕಿರು ಬೆರಳಿನಲ್ಲೇ ಜೇನಿನ ಜಾತ್ರೆಗೆ ಕರೆಯುವ ಅಂದಗಾತಿಯ ಮೋಹಕೆ ಸೋತಿದೆ ಈ ಹೃದಯ. ಕಣ್ಣಲ್ಲೇ ಕಚಗುಳಿ ಇಡುವ ನಿನಗಾಗಿಯೇ ರಾಶಿ ರಾಶಿ ಕನಸುಗಳ ಗುಡ್ಡೆ ಹಾಕಿರುವೆ. ನಿನ್ನ ಒಲವಿನ ಪೂಜೆಗೆ ಹೃದಯ ವೇದಿಕೆ ಸಿದ್ಧಗೊಳಿಸಿರುವೆ. ನೂರಾರು ಬಯಕೆಗಳನು ಮನಸ್ಸಿನಲ್ಲಿ ಬೆಚ್ಚಗೆ ಸಾಕುತಿರುವೆ ಕಣೆ. ಕೆಂಪಾದ ಕೆನ್ನೆಗೆ ಗಾಯ ಮಾಡಲು ಕಾದಿರುವೆ. ಅಲೆದಾಡುವ ಮನಸ್ಸಿಗೆ ಮತ್ತಷ್ಟು ಅಲೆದಾಟ ಹಚ್ಚಿರುವ ಚೆಲುವಿ ನೀನು. ಮರುಳಾದ ಹೃದಯಕೆ ನಿನ್ನ ಕೆಂದುಟಿಯ ರಂಗು ಬೇಕಂತೆ. ಮಳೆ ಚಳಿ ಬಿಸಿಲು ಯಾವುದೇ ಇರಲಿ ಅಂತರಂಗ ನಿನ್ನ ಚೆಲುವಿನ ಆಹ್ವಾನಕೆ ಹಂಬಲಿಸುತಿದೆ. ಕಾಮನ ಬಿಲ್ಲಿನ…
ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ಚುನಾವಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು “ಉದಯರಶ್ಮಿ” ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಅವರಿಗೆ ನಾಮಪತ್ರ ಸಲ್ಲಿಸಿದರು.ಈ ವೇಳೆ ಹಿರಿಯ ಪತ್ರಕರ್ತರಾದ ಅಶೋಕ ಯಡಳ್ಳಿ, ಮಹೇಶ ಶೆಟಗಾರ, ಶರಣು ಮಸಳಿ, ಪ್ರಕಾಶ ಬೆಣ್ಣೂರ, ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ಸಂಗನಗೌಡ ಪಾಟೀಲ, ಗುರು ಗದ್ದನಕೇರಿ, ಶಶಿ ಮೆಂಡೆಗಾರ, ರಾಹುಲ್ ಆಪ್ಟೆ, ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಗೋಪಾಲ ಕನಿಮಣಿ, ಚಿದಂಬರ (ಪುಟ್ಟು) ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಸುನೀಲ ಭಾಸ್ಕರ, ಪವನ ಕುಲಕರ್ಣಿ, ರಾಜೇಂದ್ರಕುಮಾರ ಹಜೇರಿ, ಸುಧೀಂದ್ರ ಕುಲಕರ್ಣಿ ಸೇರಿದಂತೆ ಹಲವರಿದ್ದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅಭಿಮತ ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಮಕ್ಕಳಿಗೆ ಒಳ್ಳೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರವನ್ನು ನೀಡಿ ಅವರ ಭವಿಷ್ಯ ಉಜ್ವಲ ಆಗುವ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ಮಾಡಿದೆ. ಇದರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ನಿಮಗೆ ಬೇಕಾದ ಸಹಕಾರ ನಾನು ನೀಡುತ್ತೇನೆ. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳಿಗೆ ಅನುಕೂಲವಾಗುತ್ತದೆ. ನಿಕಟಪೂರ್ವ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ ಗ್ರಾಮದಲ್ಲಿ ೭ ಕೋಟಿ ೭೫ ಲಕ್ಷದ ಕಟ್ಟಡ ಮಂಜೂರಾತಿಯಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುತ್ತಿದೆ. ಜೊತೆಗೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೆಳೆ ಸಮೀಕ್ಷೆದಾರರಿ(ಪಿಆರ್‌ಗಳಿ)ಗೆ ಸೇವಾಭದ್ರತೆ ಹಾಗೂ ಜೀವವಿಮೆ ಒದಗಿಸಿ ಮತ್ತು ದಿನಗೂಲಿ ಕಾರ್ಮಿಕರನ್ನಾಗಿ ನೇಮಕಗೊಳಿಸಲು ಆಗ್ರಹಿಸಿ ತಾಲ್ಲೂಕು ಬೆಳೆ ಸಮೀಕ್ಷೆದಾರರು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಗುರುವಾರ ಬೆಳೆಸಮೀಕ್ಷೆದಾರರು ಶಾಸಕ ರಾಜುಗೌಡ ಪಾಟೀಲರನ್ನು ಕಂಡು ತಮ್ಮ ಮನವಿ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ತಾಲ್ಲೂಕು ಬೆಳೆ ಸಮೀಕ್ಷೆದಾರರ ಸಂಘದ ಅಧ್ಯಕ್ಷ ಶಿವಾನಂದ ಹೊಸಮನಿ ಮಾತನಾಡಿ, ನಾವು ಸುಮಾರು ೭-೮ ವರ್ಷಗಳಿಂದ ಬೆಳೆ ಸಮೀಕ್ಷೆ ದಾರರೆಂದೂ ಸೇವೆ ಸಲ್ಲಿಸುತ್ತಿದ್ದೇವೆ. ನಾವು ಜಮೀನುಗಳಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡಕ್ಕೆ ಒಳಗಾಗುವುದು ಹಾಗೂ ಹಾವು, ನಾಯಿ, ಕಾಡುಹಂದಿ, ತೋಳ, ನರಿಗಳ ದಾಳಿಗೆ ಒಳಗಾಗುವ ಸಾಧ್ಯತೆಗಳಿದ್ದು, ಈಗಾಗಲೇ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಹಾಗೂ ಕೋಡ್ಲಾ ಗ್ರಾಮಗಳಲ್ಲಿ ಇಬ್ಬರು ಪಿಆರ್‌ಗಳಿಗೆ ಹಾವು ಕಚ್ಚಿದ ಘಟನೆಗಳು ಸಂಭವಿಸಿ, ಆ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು ಸ್ಪಂದಿಸದೇ ಇರುವುದನ್ನು ಕಾಣಬಹುದಾಗಿದೆ. ವರ್ಷದ ೨-೩ ತಿಂಗಳುಗಳ ಕಾಲ ಅಧಿಕಾರಿಗಳ ಅಣತಿಯಂತೆ ಶ್ರದ್ಧೆಯಿಂದ…
ಯತೀಂದ್ರ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಮಾತನಾಡಬೇಕಾದ ವ್ಯಕ್ತಿಯೊಂದಿಗೆ ಮಾತನಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ತಂದೆಯಂತೆಯೇ ಪ್ರಗತಿಪರ ಸೈದ್ಧಾಂತಿಕ ಚಿಂತನೆಯನ್ನು ಹೊಂದಿರುವ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ನಾನು ಈಗ ಮಾತನಾಡುವುದಿಲ್ಲ, ಆದರೆ ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದರು.ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದ ಯತೀಂದ್ರ ಅವರಿಗೆ ನೋಟಿಸ್ ಏಕೆ ನೀಡುತ್ತಿಲ್ಲ ಎಂದು ಕೇಳಿದ ವರದಿಗಾರರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಅವರು, “ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಇಂತಹ ಸಮಯದಲ್ಲಿ,…
ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತ ಸರಕಾರವು ಗ್ರಾಮೀಣ ಪ್ರದೇಶದ ಜನರಿಗಾಗಿ ರೂಪಿಸಿರುವ ಅಂಚೆ ಜೀವವಿಮೆ ಯೋಜನೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ನೀಡಲಾಗುವ ‘ಸಾಮ್ರಾಟ ಚೆನ್ನ’ ಜಿಲ್ಲಾ ಮಟ್ಟದ ಪ್ರಶಸ್ತಿಗೆ ರೇವತಗಾಂವ ಗ್ರಾಮದ ಅಂಚೆ ಅಧೀಕ್ಷಕ ಜಯರಾಮ ವಾಲಿಕಾರರವರು ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ‘ಸಾಮ್ರಾಟ ಚೆನ್ನ’ ಪ್ರಶಸ್ತಿಗೆ ಆಯ್ಕೆಯಾದ ಜಯರಾಮ ವಾಲಿಕಾರರವರಿಗೆ ಗ್ರಾಮಸ್ಥರು ಹರ್ಷವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ಜಯಂತಿಗಳಂದು ಎಲ್ಲ ಸಮುದಾಯದವರು ಭಾಗವಹಿಸುವಂತಾಗಬೇಕು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಹೇಳಿದರು.ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಜರುಗಿದ ರಾಣಿ ಚನ್ನಮ್ಮಳ ೨೪೭ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದು ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಶರಣರು, ಮಹನೀಯರನ್ನು ಒಂದೊಂದು ಸಮುದಾಯಕ್ಕೆ ಸಿಮೀತಗೊಳಿಸುತ್ತಿರುವುದು ಖೇದಕರ. ಇಂಥ ರೂಢಿ ಬದಲಾಗಿ ಎಲ್ಲರೂ ಭಾಗವಹಿಸುವಂತಾಗಬೇಕು ಎಂದರು.ತಾಲ್ಲೂಕು ಆಡಳಿತದಿಂದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ ಮಾತನಾಡಿದರು. ನಂತರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಚನ್ನಮ್ಮಳಿಗೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ಆರಂಭದಲ್ಲಿ ಚನ್ನಮ್ಮಳ ವೃತ್ತನ್ನು ಸಿಂಗರಿಸಿ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಭಾವಚಿತ್ರಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಲಾಯಿತು.ತಹಶೀಲ್ದಾರ ಪ್ರಕಾಶ ಸಿಂದಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಉಪಾಧ್ಯಕ್ಷ…
