Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ, (ಜಮಖಂಡಿ): ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ (IPPB) 9ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಏಪ್ರಿಲ್‌ 2026ರಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಬ್ಯಾಂಕಿಂಗ್‌ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಪಡಸಲಗಿ ಐಬಿಸಿ (IBC) ಸಿದ್ರಾಮ್ ಇಟ್ಟಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಐಪಿಪಿಬಿ ಬ್ಯಾಂಕಿಂಗ್‌ ಸೇವೆಗಳ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಅನುಕೂಲವಾಗುತ್ತಿರುವ ಕುರಿತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. “ಜನರ ವಿಶ್ವಾಸವೇ ನಮ್ಮ ಶಕ್ತಿ. ಅವರ ಸೇವೆ ಮಾಡುವುದೇ ನಮ್ಮ ಮುಖ್ಯ ಉದ್ದೇಶ” ಎಂದು ಸಿದ್ರಾಮ್ ಇಟ್ಟಿ ಪತ್ರಿಕೆಗೆ ಪ್ರತಿಕ್ರಿಯಿಸಿದರು.

Read More

ಜಮ್ಮಲದಿನ್ನಿ ಕ್ರಾಸ್ ಬಳಿ ನಡೆದ | ಘಟನೆ ಪತ್ನಿಗೆ ಗಂಭೀರ ಗಾಯ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ರಸ್ತೆ ಬದಿಯಲ್ಲಿ ಯಾವುದೇ ಮುನ್ಸೂಚನೆ, ಇಂಡಿಕೇಟರ್ ಅಥವಾ ಸಿಗ್ನಲ್ ಇಲ್ಲದೆ ನಿಲ್ಲಿಸಿದ್ದ ಟಿಪ್ಪರ್ ವಾಹನಕ್ಕೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿಗೆ ಗಂಭೀರ ಗಾಯಗಳಾದ ಘಟನೆ ಬುಧವಾರಂದು ಮದ್ಯಾಹ್ನ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಜಮ್ಮಲದಿನ್ನಿ ಕ್ರಾಸ್ ಬಳಿ ನಡೆದಿದೆ.ಮೃತನನ್ನು ತಾಳಿಕೋಟೆ ತಾಲೂಕಿನ ಅಸ್ಕಿ ಗ್ರಾಮದ ಲಾಲಸಾಬ ಚಂದಾಸಾಬ ಗೋಗಿ (೪೦) ಎಂದು ಗುರುತಿಸಲಾಗಿದೆ. ಅವರ ಪತ್ನಿ ಆಸ್ಮಾ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಾಲಸಾಬ ಹಾಗೂ ಅವರ ಪತ್ನಿ ಆಸ್ಮಾ ಅವರು ತಮ್ಮ ಮಗನನ್ನು ಭೇಟಿಯಾಗಲು ಇಣಚಗಲ್‌ನ ಅಲ್ಪಸಂಖ್ಯಾತರ ಶಾಲೆಗೆ ಕೆಎ-೨೮, ಎಚ್‌ಜೆ-೮೧೭೦ ಸಂಖ್ಯೆಯ ಹೋಂಡಾ ಶೈನ್ ಬೈಕ್‌ನಲ್ಲಿ ತಾಳಿಕೋಟೆಯಿಂದ ಮುದ್ದೇಬಿಹಾಳ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಜಮ್ಮಲದಿನ್ನಿ ಕ್ರಾಸ್ ಸಮೀಪ ರಸ್ತೆ ಮೇಲೆ ನಿಲ್ಲಿಸಲಾಗಿದ್ದ ಕೆಎ-೩೬, ಸಿ-೧೨೪೭ ಸಂಖ್ಯೆಯ ಅಶೋಕ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಬಸರಕೋಡ ಗ್ರಾಮದ ಆರಾಧ್ಯ ದೈವ ಪವಾಡ ಬಸವೇಶ್ವರರ ಬೆಲೆಬಾಳುವ ಬೆಳ್ಳಿ ಮೂರ್ತಿ ಕದ್ದ ಪ್ರಕರಣದಲ್ಲಿ ಕರ್ತವ್ಯ ನಿಷ್ಠೆ ಮೆರೆದ ಇಲ್ಲಿನ ಪಿಎಸ್‌ಐ ಸಂಜೀವ ತಿಪರೆಡ್ಡಿ ಅವರನ್ನು ಚಕ್ರವರ್ತಿ ನ್ಯೂಸ್ ತಂಡದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ನ್ಯೂಸ್ ನ ಸಂಪಾದಕ ಹಾಗೂ ನ್ಯಾಯವಾದಿ ಚೇತನ ಶಿವಶಿಂಪಿ ಮಾತನಾಡಿ, ಕಳ್ಳತನ ನಡೆದ ನಂತರ ದೂರು ದಾಖಲಿಸಿಕೊಂಡು ಸುಮ್ಮನಾಗದೆ, ಪ್ರಕರಣದ ಪ್ರತಿಯೊಂದು ಸುಳಿವನ್ನೂ ಗಂಭೀರವಾಗಿ ಪರಿಗಣಿಸಿ, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆ ನಡೆಸಿ ಆರೋಪಿಗಳ ಜಾಡು ಹಿಡಿಯುವಲ್ಲಿ ಪಿಎಸ್‌ಐ ಹಾಗೂ ಅವರ ತಂಡ ಯಶಸ್ವಿಯಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಪೊಲೀಸ್ ಠಾಣೆಯ ಬಾಗಿಲು ತಟ್ಟುವ ಪ್ರತಿಯೊಬ್ಬ ಸಂತ್ರಸ್ತನಿಗೂ ನ್ಯಾಯ ಸಿಗಬೇಕು ಎಂಬ ಕಾಳಜಿಯಿಂದ ಪೊಲೀಸರು ಕಾರ್ಯನಿರ್ವಹಿಸಿದಾಗ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಆಶಯ ಸಾಕಾರಗೊಳ್ಳುತ್ತದೆ. ಅಪರಾಧಿಗಳನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ನಿಲ್ಲಿಸುವ ಪೊಲೀಸರ ಪ್ರತಿಯೊಂದು ಯಶಸ್ಸು ಕೇವಲ ಇಲಾಖೆಯ ಸಾಧನೆಯಲ್ಲ, ಅದು ಸಮಾಜದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು…

Read More

ಹೊಸ ಪಠ್ಯಕ್ರಮ ತರಬೇತಿ ಕಾರ್ಯಕ್ರಮದಲ್ಲಿ ಡಯಟ್ ಪ್ರಾಚಾರ್ಯೆ ಎಸ್.ಎ. ಮುಜಾವರ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಆಗುತ್ತಿರುವ ಬದಲಾವಣೆಗಳಿಗೆ ಶಿಕ್ಷಕರು ಹೊಂದಿಕೊಳ್ಳುವುದರ ಜೊತೆಗೆ, ಹೊಸ ಪಠ್ಯಕ್ರಮದ ಕ್ಲಿಷ್ಟತೆ ಹಾಗೂ ಕಠಿಣತೆಯನ್ನು ಅರ್ಥಮಾಡಿಕೊಂಡು ಪರಿಣಾಮಕಾರಿಯಾಗಿ ಬೋಧಿಸುವ ಸಿದ್ಧತೆ ಹೊಂದಬೇಕು ಎಂದು ಡಯಟ್ ಪ್ರಾಚಾರ್ಯೆ ಎಸ್.ಎ. ಮುಜಾವರ ಹೇಳಿದರು.ನಿಡಗುಂದಿಯ ಕಮದಾಳ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಿಡಗುಂದಿ ತಾಲ್ಲೂಕಿನ ಶಿಕ್ಷಕರಿಗಾಗಿ ವಿಜ್ಞಾನ ಹಾಗೂ ಗಣಿತ ವಿಷಯದ ಹೊಸ ಪಠ್ಯಕ್ರಮ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬುಧವಾರ ಅವರು ಮಾತನಾಡಿದರು.೬, ೭ ಮತ್ತು ೮ನೇ ತರಗತಿಗಳ ಪಠ್ಯಕ್ರಮದಲ್ಲಿ ಆಗಿರುವ ಬದಲಾವಣೆಗಳನ್ನು ಶಿಕ್ಷಕರು ಸಮಗ್ರವಾಗಿ ಅರಿತುಕೊಳ್ಳಬೇಕು. ಕೇಂದ್ರದ ಎನ್ ಸಿ ಇಆರ್ ಟಿ ಪಠ್ಯಕ್ರಮ ಆಧಾರದಲ್ಲಿಯೇ ಈ ರಾಜ್ಯ ಪಠ್ಯಕ್ರಮವಿದೆ. ಮೊದಲಿನಂತೆ ಸಾಂಪ್ರದಾಯಿಕವಾಗಿ ಬೋಧಿಸಲು ಅಸಾಧ್ಯ, ವಿದ್ಯಾರ್ಥಿಗಳ ಕಲಿಕೆಯನ್ನು ಜೀವನದ ನಿತ್ಯದ ಚಟುವಟಿಕೆಗಳಿಗೆ ಅನ್ವಯಿಸುವಂತೆ ಮಾಡುವುದು ಇಂದಿನ ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ ಎಂದರು.ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕ್ರೀಡಾಕೂಟವು ಗೆಲುವು–ಸೋಲಿನಾಚೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ತಾಳ್ಮೆ, ನಾಯಕತ್ವ ಹಾಗೂ ಸವಾಲುಗಳನ್ನು ಎದುರಿಸುವ ಮನೋಭಾವ ಬೆಳೆಸುವ ವೇದಿಕೆಯಾಗಿದೆ. ಸಮಗ್ರ ಶಿಕ್ಷಣದಲ್ಲಿ ಕ್ರೀಡೆಗೆ ಅವಿಭಾಜ್ಯ ಸ್ಥಾನವಿದೆ ಎಂದು ಬಸವನಬಾಗೇವಾಡಿ ತಾಲ್ಲೂಕಿನ ನೂತನ ದೈಹಿಕ ಶಿಕ್ಷಣ ಪರಿವೀಕ್ಷಕ ರುದ್ರಪ್ಪ ನರೇಗಲ್ಲ ಹೇಳಿದರು.ಮಂಗಳವಾರ ಆಲಮಟ್ಟಿಯ ಶಾಲಾ ಮೈದಾನದಲ್ಲಿ ಚಿಮ್ಮಲಗಿ ಭಾಗ–೧ಎ ಸರ್ಕಾರಿ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಆಯೋಜಿಸಿದ್ದ ಆಲಮಟ್ಟಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಂಗಮೇಶ ಬಿರಾದಾರ ಕ್ರೀಡಾಜ್ಯೋತಿ ಸ್ವೀಕರಿಸಿದರು.ಚಿಮ್ಮಲಗಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದೇವೇಂದ್ರಪ್ಪ ಕಾರಬಾರಿ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಣ ಸಂಯೋಜಕ ಯು.ವೈ. ಬಶೆಟ್ಟಿ, ಎಂ.ವಿ. ಗಬ್ಬೂರ, ಸುರೇಶ ಹುರಕಡ್ಲಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಲೀಂ ದಡೇದ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಎಂ. ಮುಲ್ಲಾ, ಬಿ.ಎಸ್. ಯರವಿನತೆಲಿಮಠ, ಬಿ.ಡಿ. ಚಲವಾದಿ, ಸಿ.ಎಸ್. ಚಿಮ್ಮಲಗಿ, ರವಿಶಂಕರ ಕೋತಿನ, ಎಚ್.ಎಫ್. ಕಟ್ಟಿಮನಿ, ರಾಘವೇಂದ್ರ ಕುಲಕರ್ಣಿ, ಶಿವಾಜಿ ಕಟ್ಟಿಮನಿ, ತುಕಾರಾಂ ಕಟ್ಟಿಮನಿ,…

Read More

ವಿಜಯಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಡಾ. ಗಂಗಾಧರ ಸಂಬಣ್ಣಿ ಅಭಿಮತ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಅತ್ಯಂತ ಪೂರಕವಾಗಿವೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಎಸ್. ಸಂಬಣ್ಣಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಈ ದೇಶದ ಯುವಕ-ಯುವತಿಯರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸದೃಢ ದೇಹವನ್ನು ಹೊಂದುವುದರ ಮೂಲಕ, ಬಲಶಾಲಿ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.ಭಾರತ ಸರ್ಕಾರದ ರಾಷ್ಟ್ರೀಯ ವಚನ ಸಮಿತಿ ಸದಸ್ಯ ಹಾಗೂ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ್ ಎಂ. ಜಮಾದಾರ್ ಅಧ್ಯಕ್ಷತೆ ವಹಿಸಿ, ಪ್ರತಿಯೊಬ್ಬ ಕ್ರೀಡಾಪಟುವು ಕ್ರೀಡೆಯಲ್ಲಿ ನಿರಂತರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೧೮ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಮಹಾನಿಂಗ ನಂದಗಾಂವಿ ಅವರು ವಿಜಯಪುರದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಸೆ.೨ರಂದು ವಹಿಸಿಕೊಂಡಿದ್ದಾರೆ.ವಿಜಯಪುರ ಲೋಕಾಯುಕ್ತ ಕಚೇರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ದೂರುಗಳು ಅಥವಾ ಅಹವಾಲುಗಳನ್ನು ಹೊಂದಿದ್ದಲ್ಲಿ ನೇರವಾಗಿ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅಲ್ಲದೆ, ಮೊಬೈಲ್ ಸಂಖ್ಯೆ ೯೩೬೪೦೬೨೫೨೮ ಅಥವಾ ಕಚೇರಿ ದೂರವಾಣಿ ಸಂಖ್ಯೆ ೦೮೩೫೨-೨೯೫೦೭೪ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಇಂಡಿ ತಾಲೂಕಿನ ವಿವಿಧ ಗ್ರಾ.ಪಂ ಗಳ ವಿಬಿ–ಜಿ ರಾಮ್–ಜಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಜಿ.ಪಂ. ಸಿಇಓ ರಿಷಿ ಆನಂದ ಕೂಲಿ ಕಾರ್ಮಿಕರಿಗೆ ಅಭಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಅವರಿಗೆ ಸ್ವಗ್ರಾಮದಲ್ಲಿಯೇ ನಿರಂತರ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚಿಸಿದರು.ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ನಾಳ, ಬಬಲಾದ, ಬಳ್ಳೊಳ್ಳಿ ಹಾಗೂ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆ (ವಿಬಿ–ಜಿ ರಾಮ್–ಜಿ) ಯಡಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಆರಂಭದಲ್ಲಿ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ನಾಳ ಗ್ರಾಮದ ಕಾಲುವೆ ಪುನಶ್ಚೇತನ ಕಾಮಗಾರಿ, ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಿರ್ಮಾಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ‘ಪ್ರೊ. ಎಚ್.ಟಿ. ಪೋತೆ ವಿಮರ್ಶೆ ಹಸ್ತಪ್ರತಿ’ ರಾಜ್ಯಮಟ್ಟದ ಪ್ರಶಸ್ತಿಗೆ ಹಸ್ತಪ್ರತಿಗಳನ್ನು ಹಾಗೂ ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ನೀಡುವ ‘ಬೆರಗು ಪುಸ್ತಕ ಪ್ರಶಸ್ತಿ’ಗೆ ಪ್ರಕಟಿತ ಕೃತಿಗಳನ್ನು ಆಹ್ವಾನಿಸಿದೆ.‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಮುದ್ರಣಕ್ಕೆ ಸಿದ್ಧವಾದ ವಿಮರ್ಶೆ ಮತ್ತು ವಿಚಾರ ಸಾಹಿತ್ಯಕ್ಕೆ ಸಂಬಂಧಿತ ಹಿನ್ನೆಲೆಯ ಹಸ್ತಪ್ರತಿಗಳನ್ನು ಆಯ್ಕೆಗಾಗಿ ಸಲ್ಲಿಸಬಹುದು. ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಟೈಪ್ ಮಾಡಿದ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದು.ಆಸಕ್ತರು ಹಸ್ತಪ್ರತಿಯ ಎರಡು ಪ್ರತಿಗಳನ್ನು ವಿಜಯಲಕ್ಷ್ಮೀ ರಮೇಶ ಕತ್ತಿ, ಪ್ರಕಾಶಕರು, ಬೆರಗು ಪ್ರಕಾಶನ ಸಂಸ್ಥೆ, ವಿನಾಯಕ ನಗರ, ಆಲಮೇಲ–586202, ವಿಜಯಪುರ ಜಿಲ್ಲೆ, ಮೊ. 7795341335 ವಿಳಾಸಕ್ಕೆ ಅಕ್ಟೋಬರ್ 10ರೊಳಗೆ ಕಳುಹಿಸಬೇಕು. ಬಾಕ್ಸ್ ’ಬೆರಗು ಪುಸ್ತಕ ಪ್ರಶಸ್ತಿ–2025’ಕ್ಕೆ ಪ್ರಕಟಿತ ಕೃತಿಗಳ ಆಹ್ವಾನ ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ನೀಡುವ ‘ಬೆರಗು ಪುಸ್ತಕ ಪ್ರಶಸ್ತಿ–2025’ಕ್ಕೆ 2025ನೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವ್ಯಕ್ತಿತ್ವ ವಿಕಸನವು ಹೊರಗಿನ ಆಡಂಬರದಿಂದ ರೂಪುಗೊಳ್ಳುವುದಿಲ್ಲ. ಆತ್ಮಾನುಸಂಧಾನ, ಆತ್ಮಾವಲೋಕನ ಹಾಗೂ ಅಂತರಂಗದ ಶುದ್ಧಿಯ ಮೂಲಕವೇ ವ್ಯಕ್ತಿತ್ವದ ನಿಜವಾದ ಅನಾವರಣವಾಗುತ್ತದೆ ಎಂದು ಇಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರವಿಕುಮಾರ ಅರಳಿ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ (IQAC) ಅಡಿಯಲ್ಲಿ ಹಮ್ಮಿಕೊಂಡಿದ್ದ ‘ಯುವಕರಲ್ಲಿ ವ್ಯಕ್ತಿತ್ವ ವಿಕಸನದ ಮಹತ್ವ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಡಗಿರುವ ಸಾಮರ್ಥ್ಯವನ್ನು ಗುರುತಿಸಿ, ಉತ್ತಮ ಮೌಲ್ಯಗಳು, ಶಿಸ್ತು, ಸಮಯಪ್ರಜ್ಞೆ ಹಾಗೂ ಮಾನವೀಯ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸಂವಹನ ಕೌಶಲ್ಯ, ನಾಯಕತ್ವ ಗುಣ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ಸೋಲನ್ನು ಅನುಭವದ ಪಾಠವನ್ನಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಹಳೆಮನಿ ಮಾತನಾಡಿ, ಇಂತಹ ವಿಶೇಷ ಉಪನ್ಯಾಸಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು,…

Read More