Author: editor.udayarashmi@gmail.com

ವಿಜಯಪುರ ಜಿಲ್ಲೆಯಲ್ಲಿ ಹೆಸರಾಂತ ಕಂಪನಿಗಳು ಹೂಡಿಕೆಗೆ ಆಸಕ್ತಿ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಡಾ. ಎಂ.ಬಿ.ಪಾಟೀಲ ಭವಿಷ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರದ ನಾಡು ಎಂಬ ಹಣೆಪಟ್ಟಿ ಅಂಟಿಕೊಂಡಿದ್ದ ವಿಜಯಪುರ ಜಿಲ್ಲೆಯಲ್ಲಿ ಹೆಸರಾಂತ ರಾಷ್ಟ್ರೀಯ-ಅಂತರರಾಷ್ಟ್ರೀಯ ಮಟ್ಟದ ಕಂಪನಿಗಳು ಹೂಡಿಕೆ ಮಾಡಲು ಆಸಕ್ತಿ ತೋರಿದ್ದು, ಈ ಭಾಗದಲ್ಲಿ ವಿವಿಧ ಕಾರ್ಖಾನೆ ಕಂಪನಿಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗುವುದಲ್ಲದೇ, ಭವಿಷ್ಯದಲ್ಲಿ ವಿಜಯಪುರ ಜಿಲ್ಲೆಯ ಮ್ಯಾನುಫ್ಯಾಕ್ಚರ್ ಕ್ಲಸ್ಟರ್‌ವಾಗಿ ರೂಪಗೊಳ್ಳಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತದ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ,ನಂತರ ಧ್ವಜವಂದನೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿ, ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ಸ್ವಿಟ್ಜರ್ಲೆಂಡ್ ದೇಶದ ದಾವೋಸ್ ನಗರದಲ್ಲಿ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ನಾನು ನೋಕಿಯಾ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಿರಾಣಿ ಸಮೂಹ ಸಂಸ್ಥೆಯ ಸಹಕಾರಿ ಸಂಘದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.ಪಟ್ಟಣದಲ್ಲಿ ಭಾನುವಾರ ವಿಶಾಲ ಎಂಆರ್‌ಎನ್ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಜಮಖಂಡಿ ಇದರ ೧೦ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಲಾಕರ್ ಉದ್ಘಾಟಿಸಿ ಮಾತನಾಡಿದರು.ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಗಳು ಅತಿ ಹೆಚ್ಚು ಸಕ್ಕರೆ ಉತ್ಪಾದಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿವೆ ಎಂದರು.ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಶಾಖೆ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಜನತೆ ಆರ್ಥಿಕವಾಗಿ ಸಬಲರಾಗಿರುವುದರಿಂದ ಈ ಸೌಹಾರ್ದ ಸಂಘ ಅತ್ಯುತ್ತಮ ಶಾಖೆಯಾಗಿ ಹೊರಹೊಮ್ಮಲಿದೆ ಎಂದರು.ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸೌಹಾರ್ದ ಸಂಘ ನೊಂದಣಿಯಾಗಿ ೫ ವರ್ಷಗಳಾಗಿದ್ದು, ಒಟ್ಟು ೬೩೦೦ ಸದಸ್ಯರನ್ನು ಹೊಂದಿದೆ. ಜೊತೆಗೆ ೨೪೦ ಕೋಟಿಗೂ ಹೆಚ್ಚು ಠೇವಣಿಯನ್ನು ಹೊಂದಿದೆ. ಸದಸ್ಯರಿಗೆ ಕೋರ ಬ್ಯಾಂಕಿಂಗ್, ಎಸ್‌ಎಂಎಸ್ ಸೌಲಭ್ಯದೊಂದಿಗೆ ಆರ್‌ಟಿಜಿಎಸ್ ಹಾಗೂ ನೆಪ್ಟ್ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ೨೫ ಶಾಖೆಗಳು,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ಷೇತ್ರದ ಸರ್ವಾಂಗೀಣ ಅಭಿವೃಧ್ಧಿಗೆ ಶ್ರಮಿಸುತ್ತಿದ್ದು, ಮತಕ್ಷೇತ್ರದಲ್ಲಿ ಇನ್ನೂ ಆಗಬೇಕಾದ ಕಾರ್ಯಗಳನ್ನು ಶೀಘ್ರವೇ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿಕಾರಿ ವರ್ಗ ಉತ್ತಮ ಕಾರ್ಯ ಮಾಡುತ್ತಿರುವುದರಿಂದಲೇ ಸರಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟುತ್ತಿವೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.ಅವರು ನಗರದ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆರಿಸಿದ್ದು, ಈಗಾಗಲೆ ಜನರಿಗೆ ೨೪*೭ ನೀರು ಒದಗಿಸಲಾಗುತ್ತಿದೆ. ತಾಲ;ಊಕಿನಲ್ಲಿ ಹತ್ತು ಹಲವು ಕಾಲೇಜುಗಳನ್ನು ತಂದು ಶೈಕ್ಷಣಿಕ ರಂಗದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅತ್ಯತ್ತಮವಾಗಿ ಪರೀಕ್ಷೆ ಬರೆಯಲು ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ. ಮುಂದಿನ ವರ್ಷ ಜಿಟಿಟಿಸಿ ಕಾಲೇಜು ಆರಂಭಗೊಳ್ಳಲಿದೆ ಎಂದು ತಿಳಿಸಿದರು.ಲಿಂಬೆ ಅಭಿವೃಧ್ಧಿ ಮಂಡಳಿ ಮುಖಾಂತರ ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಕೋಲ್ಡ ಸ್ಟೋರೇಜ್ ಸೇರಿದಂತೆ ಇನ್ನಿತರ ಕಾರ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲೇ ಲಿಂಬೆ ಅಭಿವೃಧ್ಧಿ ಮಂಡಳಿಯಲ್ಲಿ ನಡೆದಿರುವ ಕಾರ್ಯಕ್ರಮಗಳು ಹಾಗೂ ಆಗಬೇಕಾದ ಕಾರ್ಯಗಳ ಕುರಿತು ಒಂದು ದಿನ ಸೆಮಿನಾರ್ ಮಾಡಲಾಗುವುದು ಎಂದು ತಿಳಿಸಿದರು.ಕೈಗಾರಿಕೆ ಅಭಿವೃಧ್ದಿಗೆ ಸಂಬಂಧಿಸಿದಂತೆ ಕೈಗಾರಿಕೆ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಶೋಷಿತ ವರ್ಗದ ಏಳಿಗೆಗಾಗಿ, ನೊಂದವರ ಧ್ವನಿಯಾಗಿ, ಅನ್ಯಾಯಗೊಳಗಾದ ಸರ್ವ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ರಾಜ್ಯವ್ಯಾಪಿ ಶ್ರಮಿಸುತ್ತಾ ಬರುತ್ತಿರುವ ಕರ್ನಾಟಕ ರಾಜ್ಯ ಭೀಮ್ ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.ಪಟ್ಟಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಅವರನ್ನು ಅಲ್ಪಸಂಖ್ಯಾತರ ಘಟಕದ ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ಅಪ್ಸರ್ ಪಾಷಾ ಅವರನ್ನು ಅಲ್ಪಸಂಖ್ಯಾತರ ಘಟಕದ ಹೆಚ್ ಡಿ ಕೋಟೆ ತಾಲೂಕು ಅಧ್ಯಕ್ಷರನ್ನಾಗಿ ಮತ್ತು ನಜೀರ್ ಅಹಮದ್ ಅವರನ್ನು ತಾಲೂಕು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ನೇಮಕಾತಿ ಪ್ರಮಾಣ ಪತ್ರ ನೀಡಲಾಯಿತು.ಸಂಸ್ಥಾಪಕ ಕಂ. ರಾಜ್ಯಾಧ್ಯಕ್ಷ ಸರ್ವೇಶ್ ಮಾತನಾಡಿ, ಸಂಘಟನೆ ವತಿಯಿಂದ ಫೆಬ್ರವರಿ 23 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ನಿರುದ್ಯೋಗ ಯುವಕ, ಯುವತಿಯರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಅಲ್ಪ ಸಂಖ್ಯಾತರ ಯುವ ಘಟಕದ ರಾಜ್ಯಾಧ್ಯಕ್ಷ ನಯಾಜ್ ಪಾಷಾ, ವಕ್ಫ್ ಸಲಹಾ ಸಮಿತಿಯ ಮೈಸೂರು ಜಿಲ್ಲಾ ಸದಸ್ಯ ಶರಪುದ್ದೀನ್ ಮಾತನಾಡಿದರು.ಮೈಸೂರು…

Read More

ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಈ ಭಾಗದ ಲಕ್ಷಾಂತರ ಜನರ ಜೀವನಾಡಿಯಾಗಿದೆ. ಈಗಾಗಲೇ ಯುಕೆಪಿ ಹಂತ-೧ ಮತ್ತು ಹಂತ-೨ ನ್ನು ಯಶಸ್ವಿಯಾಗಿ ನಿರ್ವಹಿಸಿ ೬ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರೊದಗಿಸಲಾಗಿದೆ, ಈಗ ಹಂತ-೩ ರ ಕಾಮಗಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಸವಾಲು ನಮ್ಮ ಮುಂದಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಅಭಿಪ್ರಾಯಪಟ್ಟರು.ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಜರುಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಬಹುದಿನಗಳ ಬೇಡಿಕೆಯಾಗಿರುವ ಆಲಮಟ್ಟಿಯ ಎಚ್ಪಿಎಸ್ ಶಾಲೆಯ ಮೈದಾನವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.ವಿಶ್ವದ ಅತಿ ದೊಡ್ಡ ಸಂವಿಧಾನ ಹೊಂದಿದ ಭಾರತದಲ್ಲಿ ಪ್ರತಿ ಪ್ರಜೆಗೂ ಸಮಾನ ಹಕ್ಕು ಮತ್ತು ಘನತೆಯನ್ನು ನೀಡಿದೆ. ಸಂವಿಧಾನದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದು ಕಾನೂನು ಕೃತಿಯನ್ನು ಸ್ವೀಕರಿಸಿದ ದಿನ. ವಿವಿಧ ದೇಶಗಳಿಗೆ ತುಲಾನಾತ್ಮಕವಾಗಿ ಹೊಲಿಸಿ ನೋಡಿದಾಗ ಭಾರತ ದೇಶದ ಸಂವಿಧಾನ ವಿಶ್ವದ ಅತೀ ದೊಡ್ಡ ಸಂವಿಧಾನವಿದೆ. ದೇಶದ ಏಕತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸುತ್ತದೆ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡ ೭೭ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವವು ನಮ್ಮ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೆನಪಿಸುತ್ತದೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸುವ ಸಂಕಲ್ಪ ಮಾಡುವುದು ಈ ದಿನದ ನಿಜವಾದ ಮಹತ್ವವಾಗಿದೆ ಎಂದರು.ಪರೇಡನಲ್ಲಿ ಬಾಗವಹಿಸಿದ ಪಿಎಸ್‌ಐ ಆರೀಫ ಮುಷಾಪುರಿ, ಅಗ್ನಿ ಶಾಮಕ ಅದಿಕಾರಿ, ಗೃಹ ರಕ್ಷಕ ದಳ, ಲೋಯಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆರ್.ಡಿ.ಪಾಟೀಲ ಕಾಲೇಜಿನ ರರ‍್ಸ್ ಮತ್ತು ರೆರ‍್ಸ್, ಜ್ಞಾನ ಭಾರತಿ ಪ್ರೌಡಶಾಲೆ, ಕೆಜಿಎಸ್, ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು.ಕಾರ್ಯಕ್ರಮಕ್ಕೂ ಮುನ್ನ ತಹಶೀಲ್ದಾರ ಕರೆಪ್ಪ ಬೆಳ್ಳಿ ಸಂವಿಧಾನ ಪೀಠಿಕೆ ಓದಿದರು.ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾಪಂಚಾಯತಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶದ ಸ್ವಾತಂತ್ರ‍್ಯ ಹೋರಾಟ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಪರಂಪರೆಯನ್ನು ಸ್ಮರಿಸುವ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಂದ ರೂಪುಗೊಂಡಿರುವ ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ‍್ಯ ಮತ್ತು ಭ್ರಾತೃತ್ವ ತತ್ವಗಳ ಮೇಲೆ ನಿಂತಿದ್ದು, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಮತ್ತು ಗೌರವ ಒದಗಿಸುವ ಶಾಶ್ವತ ದಾಖಲೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಹೊಣೆಗಾರಿಕೆಯನ್ನು ಪಾಲಿಸುವುದೇ ನಿಜವಾದ ರಾಷ್ಟ್ರಭಕ್ತಿ, ಸಾರ್ವಜನಿಕ ಬದುಕಿನಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಜನರ ನಂಬಿಕೆಗೆ ಪಾತ್ರರಾಗುವಂತೆ ಪಾರದರ್ಶಕತೆ ಮತ್ತು ಸೇವಾ ಭಾವನೆಯೊಂದಿಗೆ ಕೆಲಸ ಮಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದರು.ಯುವಜನರು ಸಂವಿಧಾನದ ಆಶಯಗಳನ್ನು ಅರಿತು ದೇಶದ ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಬೇಕು. ಸಾಮಾಜಿಕ ಏಕತೆ, ಸೌಹಾರ್ದತೆ ಹಾಗೂ ಪರಸ್ಪರ ಗೌರವದಿಂದ ಶಕ್ತಿಶಾಲಿ ಭಾರತ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಜಗತ್ತಿನ ಶಕ್ತಿ ಶಾಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಶೇ. ೫೫ ಯುವ ಜನರನ್ನು ಹೊಂದಿರುವ ಸಮೃದ್ಧ ದೇಶ ನಮ್ಮದಾಗಿದೆ ಎಂದು ಪ್ರಾಚಾರ್ಯೆ ಡಾ.ಆರ್.ಎಂ ಮಿರ್ಧೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ೭೭ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತ ಜಗತ್ತಿಗೆ ಶ್ರೇಷ್ಠ ವಿಜ್ಞಾನಿಗಳನ್ನು, ಸಾಹಿತಿಗಳನ್ನು, ವೈದ್ಯರನ್ನು ನೀಡಿದೆ ನಾವೆಲ್ಲರೂ ಭಾರತಾಂಬೆಯ ಹೆಮ್ಮೆಯ ಮಕ್ಕಳು. ವಿಜ್ಞಾನ-ತಂತ್ರಜ್ಞಾನ, ಕೃಷಿ, ಬಾಹ್ಯಕಾಶ್, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಕೊಡುಗೆ ಅಪಾರ. ನಮ್ಮ ಐಐಟಿ, ವೈದ್ಯಕೀಯ-ತಾಂತ್ರಿಕ ಮಹಾವಿದ್ಯಾಲಯಗಳು ಅನೇಕ ಸಾಧಕರನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿವೆ ಎಂದರು.ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡಾ.ಅನೀಲ ಭೀ. ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಎ ಎಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಬಿ.ಕಮತಿ, ಪಿಯುಸಿ ಪ್ರಾಚಾರ್ಯ ಪ್ರೊ.ಎಸ್. ಜೆ ಜೀರಗಾಳಿ, ಎನ್‌ಸಿಸಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡಿಜಿಟಲ್ ಸ್ಮಾರ್ಟ್ ತರಗತಿಗಳು ಮಕ್ಕಳ ಭವಿಷ್ಯ ವೃದ್ಧಿಗೆ ತುಂಬಾ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಇದರ ಉಪಯೋಗವನ್ನು ಬಳಕೆ ಮಾಡಿಕೊಳ್ಳುವ ಮೂಲಕ ಇಂದಿನ ತಾಂತ್ರಿಕ ಯುಗಕ್ಕೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಅಂಜುಮನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಮ್.ಪಾಟೀಲ, ಗಣಿಹಾರ ಹೇಳಿದರು.ಸಿಂದಗಿ ಪಟ್ಟಣದ ಅಂಜುಮನ್ ಐಟಿಐ ಕಾಲೇಜಿನಲ್ಲಿ ನಡೆದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಹಾಗೂ ಸೇವಿಂಗ್ ಟೆಕ್ನಾಲಜಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಅಂಜುಮನ್ ಸಂಸ್ಥೆಯ ಅಂಗ ಸಂಸ್ಥೆಗಳಲ್ಲಿ ಒಂದಾದ ಐಟಿಐ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತಹ ವಾತಾವರಣ ನಿರ್ಮಾಣಮಾಡವ ನಿಟ್ಟಿನಲ್ಲಿ ಸಂಸ್ಥೆ ಶ್ರಮವಹಿಸಿದೆ.ಈ ಭಾಗದ ವಿದ್ಯಾರ್ಥಿಗಳಿಗೂ ಪ್ರಸ್ತುತ ಡಿಜಿಟಲ್ ಶಿಕ್ಷಣ ತುಂಬಾ ಅವಶ್ಯವಾಗಿದೆ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ತಾಂತ್ರಿಕ ಕೌಶಲ್ಯಕ್ಕೆ ಪ್ರಸ್ತುತ ಡಿಜಿಟಲ್ ಶಿಕ್ಷಣ ತುಂಬಾ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಹಾಗೂ ಸೇವಿಂಗ್ ಟೆಕ್ನಾಲಜಿ ಸೇರಿದಂತೆ ಎಲ್ಲಾ ವೃತ್ತಿಗಳಿಗೆ ನೂತನ ಯಂತ್ರೋಪಕರಣಗಳ ಸೌಲಭ್ಯವನ್ನು ಒದಗಿಸಲಾಗಿದೆ ವಿದ್ಯಾರ್ಥಿಗಳು ಇದರ ಸದುಪಯೋಗ…

Read More

ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿರುವ ಕಲ್ಯಾಣಿ ಚಾಲುಕ್ಯರ ಕಾಲಘಟ್ಟಕ್ಕೆ ಸೇರಿದ ದೇಗುಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಾನಯೋಗಿ ಸಂಘದ ವತಿಯಿಂದ 11ನೇ ಶತಮಾನದ ಪ್ರಾಚೀನ ಶಿವಾಲಯದ ಸ್ವಚ್ಛತಾ ಸೇವೆ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿರುವ ಕಲ್ಯಾಣಿ ಚಾಲುಕ್ಯರ ಕಾಲಘಟ್ಟಕ್ಕೆ ಸೇರಿದ (ಕ್ರಿ.ಶ. 11ನೇ ಶತಮಾನ) ನಕ್ಷತ್ರಾಕಾರದ ವಾಸ್ತುಶೈಲಿಯ ಪ್ರಾಚೀನ ಶಿವ ದೇವಾಲಯ ನಮ್ಮ ಇತಿಹಾಸ ಹಾಗೂ ಶೈವ ಪರಂಪರೆಯ ಅಮೂಲ್ಯ ಸಾಕ್ಷಿಯಾಗಿದೆ. ಕಲ್ಯಾಣಿ ಚಾಲುಕ್ಯರು (ಪಶ್ಚಿಮ ಚಾಲುಕ್ಯರು) ಕಾಲದಲ್ಲಿ, ಸುಮಾರು ಕ್ರಿ.ಶ. 1050–1100ರ ಅವಧಿಯಲ್ಲಿ ನಿರ್ಮಾಣಗೊಂಡಿದೆ ಎನ್ನಲಾದ ಈ ದೇವಾಲಯವು ಚಾಲುಕ್ಯರ ವಾಸ್ತುಶೈಲಿಯ ಉತ್ತಮ ಉದಾಹರಣೆಯಾಗಿದೆ.ಈ ಏಕೂಟ ಶಿವಾಲಯವು ಎತ್ತರವಾದ ಅಧಿಷ್ಠಾನದ ಮೇಲೆ ನಿರ್ಮಿತವಾಗಿದ್ದು, ಎರಡು ಮುಖದ ಮಂಟಪ, ನವರಂಗ, ಅಂತರಾಳ ಮತ್ತು ಲಿಂಗ ಪ್ರತಿಷ್ಠಿತ ಗರ್ಭಗೃಹವನ್ನು ಒಳಗೊಂಡಿದೆ. ದೇವಾಲಯದ ಗೋಡೆಗಳ ಮೇಲೆ ಸೂಕ್ಷ್ಮ ಶಿಲ್ಪಕಲಾ ಕೆಲಸ, ಅಲಂಕಾರಿಕ ಕಂಬಗಳು ಹಾಗೂ ಲತಾಪಾತ್ರ ವಿನ್ಯಾಸಗಳು ಕಂಡುಬರುತ್ತವೆ. ದೇವಾಲಯದ ಹೊರಾಂಗಣ ಶೈಲಿ ಐಹೊಳೆಯ ದುರ್ಗಾ ದೇವಾಲಯದ ಶೈಲಿಗೆ…

Read More