Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅ.೧೯ರಿಂದ ೨೫ ರವರೆಗೆ ಆಚರಿಸುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦ ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಪಟಾಕಿ ಮಾರಾಟ ವರ್ತಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಹಾಗೂ ಪರಿಸರ ಹಾನಿ ಉಂಟಾಗುವ ಯಾವುದೇ ಪಟಾಕಿಗಳನ್ನು ಮಾರಾಟ ಮಾಡದಂತೆ ತಿಳಿಸಲಾಗಿದ್ದು, ಸಾರ್ವಜನಿಕರು ಹಸಿರು ಪಟಾಕಿ ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ನವೆಂಬರ್ ೧ರಂದು ಸನ್ಮಾನ ಮಾಡಲು ಉದ್ದೇಶಿಸಲಾಗಿದೆ.ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ, ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನು ಒಳಗೊಂಡಂತೆ ತಮ್ಮ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೭-೧೦-೨೦೨೫ ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸನಾತನಿಗಳ ಸಹವಾಸದಿಂದ ದೂರ ಇರಿ | ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ ಮೈಸೂರು: ರಾಜ್ಯದ ಜನತೆ ‘ಸನಾತನಿಗಳ’ ಸಹವಾಸವನ್ನು ತಪ್ಪಿಸಬೇಕು ಮತ್ತು ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.RSS ಹಾಗೂ ಸಂಘಪರಿವಾರ ಬಿ ಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಐತಿಹಾಸಿಕವಾಗಿ ವಿರೋಧಿಸಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.”ನಿಮ್ಮ ಸಹವಾಸವನ್ನು ಸರಿಯಾಗಿ ಇಟ್ಟುಕೊಳ್ಳಿ. ಸಾಮಾಜಿಕ ಬದಲಾವಣೆಯನ್ನು ವಿರೋಧಿಸುವವರೊಂದಿಗೆ ಅಥವಾ ‘ಸನಾತನಿಗಳ’ ಸಹವಾಸ ಬಿಡಿ, ಸಮಾಜಕ್ಕಾಗಿ ನಿಲ್ಲುವವರೊಂದಿಗೆ ಸಹವಾಸ ಮಾಡಿ”ಎಂದು ಮೈಸೂರು ವಿಶ್ವವಿದ್ಯಾಲಯದ ಬೆಳ್ಳಿ ಮಹೋತ್ಸವ ಆಚರಣೆಯನ್ನು ಉದ್ಘಾಟಿಸಿ ಮತ್ತು ಹೊಸ ಜ್ಞಾನ ದರ್ಶನ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ನಂತರ ಸಿದ್ದರಾಮಯ್ಯ ಕರೆ ನೀಡಿದ್ದಾರೆ.ಭಾರತದ ಮುಖ್ಯ ನ್ಯಾಯಮೂರ್ತಿ (ಬಿ ಆರ್ ಗವಾಯಿ) ಮೇಲೆ ಇತ್ತೀಚೆಗೆ ಶೂ ಎಸೆದ ಘಟನೆಯನ್ನು ಉಲ್ಲೇಖಿಸಿ, ಮುಖ್ಯಮಂತ್ರಿಗಳು, “ಒಬ್ಬ ‘ಸನಾತನಿಗಳು’ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವುದು ಸಮಾಜದಲ್ಲಿ ‘ಸನಾತನಿಗಳು’ ಮತ್ತು ಸಾಂಪ್ರದಾಯಿಕ ಅಂಶಗಳು ಇನ್ನೂ ಅಸ್ತಿತ್ವದಲ್ಲಿವೆ ಎಂಬುದನ್ನು ತೋರಿಸುತ್ತದೆ. ಈ…
ರಸ್ತೆ ಅಗಲೀಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸರ್ಕಾರ ರಸ್ತೆ ಅಗಲೀಕರಣ ಮಾಡಲು ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿನ ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮಾಡುವ ಈ ನಿಯಮಾವಳಿಗಳನ್ನು ಗಾಳಿ ತೂರಿ ರಸ್ತೆ ಅಗಲೀಕರಣ ಮಾಡುವ ಮೂಲಕ 142 ಕುಟುಂಬಗಳು ನಿರಾಶ್ರಿತರಾಗುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಅನ್ಯಾಯವಾದ ಜನರಿಗೆ ನ್ಯಾಯ ಸಿಗುವವರೆಗೂ ಈ ಹೋರಾಟಕ್ಕೆ ಸದಾ ನನ್ನಬೆಂಬಲವಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಮಿನಿವಿಧಾನಸೌಧದ ಆವರಣಗೋಡೆಗೆ ಹೊಂದಿಕೊಂಡಂತೆ ಹಾಕಲಾಗಿರುವ ಶಾಮಿಯಾನದಲ್ಲಿ ಕಳೆದ ಮೂರು ದಿನಗಳಿಂದ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ರಸ್ತೆ ಅಗಲೀಕರಣ ನೆಪದಲ್ಲಿ ಸ್ವಂತ ಮನೆಗಳನ್ನು ದ್ವಂಸಮಾಡಿ 142 ಕುಟುಂಬಗಳನ್ನು ಬೀದಿಗೆ ತಳ್ಳಿದ ಕ್ರಮವನ್ನು ಖಂಡಿಸಿ ಹಾಗೂ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡುವದು, ತಪಿಸ್ಥತ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಬತಗುಣಕಿ ಗ್ರಾಮದಲ್ಲಿ ಇತ್ತೀಚೆಗೆ ಬಯಲಾಟ ಕಲಾವಿದರ ಸಮೀಕ್ಷೆಯನ್ನು ನಡೆಸಲಾಯಿತು.ಗ್ರಾಮದ ಬಸವಣ್ಣ ದೇವರ ಗುಡಿಯ ಆವರಣದಲ್ಲಿ ಹಲವಾರು ಕಲಾವಿದರು ಪಾಲ್ಗೊಂಡು ತಮ್ಮ ತಮ್ಮ ಮಾಹಿತಿಯನ್ನು ದಾಖಲಿಸಿದರು.ರಾಜ್ಯ ಬಯಲಾಟ ಅಕಾಡೆಮಿ ಅಧ್ಯಕ್ಷ ಕೆ.ಆರ್. ದುರ್ಗಾ ದಾಸ್ ಅವರ ನಿರ್ದೇಶನದ ಮೇರೆಗೆ ವಿಜಯಪುರದ ಡಾ. ಮೀನಾಕ್ಷಿ ಪಾಟೀಲ್ ಅವರು ಕಲಾವಿದರ ಸಮೀಕ್ಷಾ ಕಾರ್ಯವನ್ನು ನಡೆಸಿದರು.ಇಂಡಿ ತಾಲೂಕಿನ ಬತಗುಣಕಿ ಗ್ರಾಮದಲ್ಲಿ ಬಯಲಾಟ ತಂಡದ ಮುಖ್ಯಸ್ಥರಾದ ಕಾಶಿನಾಥ ಪಾಟೀಲ್ ಅವರ ಮುಖಂಡತ್ವದಲ್ಲಿ ಸುಮಾರು 60ಕ್ಕಿಂತ ಹೆಚ್ಚು ಕಲಾವಿದರು ತಮ್ಮ ಹೆಸರನ್ನು ನೋಂದಾಯಿಸಿದರು.ಗ್ರಾಮೀಣ ಜನತೆ ತಮ್ಮ ನಿತ್ಯದ ಕೃಷಿ ಕಾಯಕದೊಂದಿಗೆ ಈಗಲೂ ಈ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಅಭಿಮಾನದ ಸಂಗತಿ ಎಂದು ಕಲಾವಿದರನ್ನು ಕುರಿತು ಡಾ. ಮೀನಾಕ್ಷಿ ಪಾಟೀಲ್ ಮಾತನಾಡಿದರು. ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಇಂಥ ಅಪರೂಪದ ಮೂಲ ಕಲೆಗಳು ಮರೆಯಾಗುತ್ತಿರುವುದನ್ನು ಮನಗಂಡು, ಮತ್ತೆ ಅದನ್ನು ಪುನಶ್ಚೇತನಗೊಳಿಸುವ ಪ್ರಯತ್ನವಾಗಿ ಆಗಾಗ ಬಿಡುವಿನ ವೇಳೆಯಲ್ಲಿ ಬಯಲಾಟ ಪ್ರದರ್ಶನವನ್ನು ಮಾಡುತ್ತಿರುವ ಕಲಾವಿದರ ಬಗ್ಗೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ೨೦೨೫-೨೬ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಮತ್ತು ಭೀಮಾ ನದಿಯಿಂದ ಉಂಟಾಗಿರುವ ಪ್ರವಾಹದಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು ಸರಕಾರದ ಮಾರ್ಗಸೂಚಿಯಂತೆ ಬೆಳೆ ಹಾನಿ ಸಮೀಕ್ಷೆಯನ್ನು ಕೃಷಿ, ತೋಟಗಾರಿಕೆಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳ ತಣಡವನ್ನು ರಚಿಸಿ ಜಂಟಿ ಸಮೀಕ್ಷೆ ಮಾಡಲಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.ಇಂಡಿ ತಾಲೂಕಿನಲ್ಲಿ ೬೪೦೭೨ ಹೆಕ್ಟರ ಪ್ರದೇಶದಲ್ಲಿ ತೊಗರಿ, ಮೆಕ್ಕೆಜೋಳ, ಹತ್ತಿ, ಮತ್ತು ಈರುಳ್ಳಿ ಬೆಳೆಗಳ ಹಾನಿಯ ಜಂಟಿ ಸಮೀಕ್ಷೆಯ ವರದಿಯನ್ನು ಗ್ರಾ.ಪಂ ಗ್ರಾಮಗಳಲ್ಲಿ ನೋಟಿಸ ಬೋರ್ಡು ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ಪಡಿಸಲಾಗಿದೆ.ಈ ಕುರಿತು ರೈತರಲ್ಲಿ ಹಾನಿ ಕ್ಷೇತ್ರ, ಬೆಳೆಗಳ ವಿವರ, ಮತ್ತು ನೀರಾವರಿ ಮಳೆಯಾರ್ಷಿತ ಕುರಿತಂತೆ ಯಾವುದೇ ಆಕ್ಷೆಪಣೆಗಳಿದ್ದಲ್ಲಿ ತಕ್ಷಣ ಸುಕ್ತ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ಅಥವಾ ತಹಸೀಲ್ದಾರ ಕಚೇರಿಗೆ ಅಕ್ಷೆಪಣೆಸಲ್ಲಿಸಬಹುದು.ಪರಿಹಾರ ಸಂದಾಯವಾಗಲು ಪ್ರುಟ್ ಐಡಿ ಕಡ್ಡಾಯ ವಾಗಿದ್ದು ಪ್ರುಟ್ ಐಡಿ ಎಫ್ ಐ ಡಿ ಯಾಗದ ರೈತರು ಕೂಡಲೆ ಆಧಾರ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕನ್ನಡಪರ ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘಟನೆಗಳ ಸಹಕಾರದಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ಜರುಗಿದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಶರಣ ಸಾಹಿತ್ಯ, ಚುಟುಕು ಸಾಹಿತ್ಯ ಪರಿಷತ್‌ಗಳು, ದಲಿತಪರ ಸಂಘಟನೆಗಳ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದ ಪ್ರಮುಖರು ಹಾಗೂ ವಿವಿಧ ರಂಗಗಳ ಸಾಧಕರು ಸೇರಿದಂತೆ ನಿವೃತ್ತ ಯೋಧರನ್ನು ಸನ್ಮಾನಿಸುವುದರ ಮೂಲಕ ಅವಿಸ್ಮರಣೀಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶಿಷ್ಟವಾಗಿ ಆಚರಿಸೋಣ ಎಂದರು.ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿದರು.ಶಿರಸ್ತೇದಾರ ಸುರೇಶ ಮ್ಯಾಗೇರಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಚ್.ವಾಲೀಕಾರ, ಕಾರ್ಯದರ್ಶಿ ಜಿ.ಪಿ.ಬಿರಾದಾರ, ಬಸವಶರಣ ಸೇವಾ ಸಮೀತಿ…
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆಗಳು ಸಮೀಪಿಸುತ್ತಿದ್ದು ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ನೀಡಿದರು.ವಿಜಯಪುರದ ಸ್ಟಾರ್ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೀಜಾ ನದಾಫ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ, ಈ ಎಲ್ಲ ಜನಪರ ಕಾರ್ಯಗಳನ್ನು ಮಹಿಳಾ ಕಾರ್ಯಕರ್ತೆಯರು ಜನರ ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು, ಆ ಮೂಲಕ ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆಗಳಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಯ್ಕೆಯಗುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.ಮಹಿಳಾ ಕಾರ್ಯಕರ್ತೆಯರು ತಮ್ಮ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು, ಅರೊಗ್ಯದ ಬಗ್ಗೆ ಕಾಳಜಿ ವಹಿಸಿದಾಗ ಮಾತ್ರ ಹೆಚ್ಚು ಹೆಚ್ಚು…
ಕನೇರಿ ಶ್ರೀಗಳ ಪುರ ಪ್ರವೇಶ ನಿರ್ಬಂಧ ಆದೇಶ | ಸಚಿವ ಎಂಬಿಪಿ ವಿರುದ್ಧ ಗುಡುಗಿದ ಮಾಜಿ ಶಾಸಕ ನಡಹಳ್ಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳ ಜಿಲ್ಲಾ ಪ್ರವೇಶದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರೇ ಕಾರಣ, ಈ ಹಿಂದೆಯೂ ರಂಭಾಪೂರಿ, ಶ್ರೀಶೈಲ ಜಗದ್ಗುರುಗಳ ಬಗ್ಗೆ ಅತ್ಯಂತ ಅಗೌರವಯುತವಾಗಿ ಅವರು ನಡೆದುಕೊಂಡಿದ್ದರು ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ವಿರುದ್ಧ ಗುಡುಗಿದರು.ನಾಲ್ಕು ದಿನಗಳಲ್ಲಿ ಶ್ರೀಗಳ ನಿಷೇಧ ಆದೇಶ ವಾಪಾಸ್ಸು ಪಡೆಯದೇ ಹೋದರೆ ಬಬಲೇಶ್ವರ ಮತಕ್ಷೇತ್ರದಿಂದಲೇ ಹೋರಾಟ ಆರಂಭಿಸುವೆ ಎಂದು ನಡಹಳ್ಳಿ ಗುಡುಗಿದರು.ವಿಜಯಪುರದಲ್ಲಿ ಕನೇರಿ ಸ್ವಾಮೀಜಿಗಳ ಪ್ರವೇಶ ನಿರ್ಬಂಧವನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಹಿಂದೂ ಜಾಗೃತ ವೇದಿಕೆ ನೇತೃತ್ವದಲ್ಲಿ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರು ರಂಭಾಪುರಿ, ಶ್ರೀಶೈಲ ಮೊದಲಾದ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಬರಡೋಲ ಗ್ರಾಮದಲ್ಲಿ ಶನಿವಾರ ಉಪವಿಭಾಗಾಧಿಕಾರಿ ಇಂಡಿ ಇವರ ಆದೇಶದನ್ವಯ ಮಲ್ಲಿಕಾರ್ಜುನ ದೇವಾಲಯದ ಆವರಣದಲ್ಲಿ ಸರಕಾರದ ಜನಕಲ್ಯಾಣ ಯೋಜನೆಗಳು ಗ್ರಾಮ ಮಟ್ಟದಲ್ಲಿ ಫಲಾನುಭವಿಗಳಿಗೆ ತಲುಪುವಲ್ಲಿ ಸಹಾಯಕವಾದ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು.ಚಡಚಣ ಉಪ ತಹಶೀಲದಾರ ಕೆ.ವಾಯ್.ಹೊಸಮನಿ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರದಿಂದ ಬಡ ಹಾಗೂ ವಿಧವೆಯರು,ವಯೊವೃದ್ಧ ಮಹಿಳೆ ಅಥವಾ ಪುರುಷರು, ಸುಕನ್ಯೆಯರು, ವಿಕಲಚೇತನರಿಗೆ ಹೀಗೆ ಹಲವಾರು ಯೋಜನೆಗಳ ಸರಕಾರದ ಜನಕಲ್ಯಾಣ ಯೋಜನೆಗಳಲ್ಲಿ ಒಂದಾದ (ಮಾಶಾಸನ)ಪಿಂಚಣಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತವೆ ಎಂದು ಹೇಳಿದರು.ಬರಡೋಲ ಗ್ರಾಮದಿಂದ ವಿವಿಧ ಯೋಜನೆಗಳಲ್ಲಿ ೧೨ ಜನರು ನಮ್ಮ ಚಡಚಣ ತಹಶೀಲ್ದಾರ ಕಾರ್ಯಾಲಯಕ್ಕೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು ಅದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ಯನ್ನು ಕೊಟ್ಟಿದ್ದಾರೆ ಅದರ ಫಲವಾಗಿ ಇಂದು ಪಿಂಚಣಿ ಅದಾಲತ್‌ನಲ್ಲಿ ವಿವಿಧ ಯೋಜನೆಗಳಲ್ಲಿ ೧೨ ಫಲಾನುಭವಿಗಳನ್ನು ಆಯ್ಕೆಮಾಡಿ ಪಿಂಚಣಿ ಆದೇಶ ಪತ್ರವನ್ನು ನೀಡಲಾಗುತ್ತಿದೆ ಎಂದು ಉಪ ತಹಶೀಲದಾರ ಕೆ.ವಾಯ್.ಹೊಸಮನಿ ಹೇಳಿದರು.ಈ ಸಂದರ್ಭದಲ್ಲಿ ಬರಡೋಲ…
