Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿ ಗಾಪಂ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳೆ ಜಿಲ್ಲಾಡಳಿತ ಹಾನಿಗೊಳಗಾದ ರೈತರ ಪಟ್ಟಿ ಲಗತ್ತಿಸಬೇಕು. ನಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ರೈತರಿಗೆ ಅನ್ಯಾಯ ಮಾಡುವ ಪ್ರಯತ್ನ ಮಾಡಿದರೆ ಕಾನೂನು ಮೀರಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಕೂಡಲೇ ಬೇಡಿಕೆಗಳು ಈಡೇರಿಕೆ ಮಾಡದೇ ಹೋದಲ್ಲಿ ಗ್ರಾಮ, ಹೋಬಳಿ, ತಾಲೂಕು ಕೇಂದ್ರಗಳಲ್ಲಿರುವ ಕಛೇರಿಯ ಮುಂಭಾಗ ಹಾಗೂ ಮುಖ್ಯ ರಸ್ತೆಗಳನ್ನು ತಡೆದು ಬೇಡಿಕೆ ಈಡೇರಿಕೆ ಮಾಡುವವರೆ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಎಚ್ಚರಿಕೆ ನೀಡಿದರು.ಸಿಂದಗಿ ಪಟ್ಟಣದ ತಹಶೀಲ್ದಾರ್ ಆವರಣದಲ್ಲಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡ ಅಹೋರಾತ್ರಿ ೪ನೆಯ ದಿನದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಅವರು, ಆಲಮೇಲ ಮತ್ತು ಸಿಂದಗಿ ತಾಲೂಕುಗಳ ರೈತರು ಬೆಳೆದ ಸಾವಿರಾರು ಹೆಕ್ಟ್ರ ಪ್ರದೇಶದ ಬೆಳೆಯನ್ನು ಪ್ರಕೃತಿ ವಿಕೋಪದಿಂದ ಸಂಪೂರ್ಣ ನಷ್ಟವೆಂದು ಘೋಷಿಸಿ ತಾಲೂಕುಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಸರಕಾರಕ್ಕೆ ಕೂಡಲೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಮೂಲಕ ಸಬಲೀಕರಣದತ್ತ ಸಾಗಬೇಕು ಎಂದು ಮಹಿಳಾ ವಿವಿಯ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಲಕ್ಷ್ಮಿದೇವಿ ವೈ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ತಿಕೋಟಾ ಗ್ರಾಮದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳೆಯರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಶಿವಮೊಗ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ.ಶುಭಾ ಮರವಂತೆ ಮಾತನಾಡಿ, ಗ್ರಾಮೀಣ ಮಹಿಳೆಯರು ಸಕಲ ಕೌಶಲ್ಯಗಳನ್ನು ಹೊಂದಿದ್ದು, ಅವುಗಳ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಸುಮನ ಕೋಲ್ಹಾರ ಮಾತನಾಡಿ, ಗ್ರಾಮೀಣ ಮಹಿಳೆಯರಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡಿದೆ. ಅವುಗಳ ಸದುಪಯೋಗವನ್ನು ಮಾಡಿಕೊಳ್ಳಬೇಕು. ಮಹಿಳೆಯ ರಾಜಕೀಯ ಸಬಲೀಕರಣಕ್ಕಾಗಿ ಮೀಸಲಾತಿಯ ಅಸ್ತçವನ್ನು ಸಮರ್ಥವಾಗಿ ಉಪಯೋಗಿಸಬೇಕು. ಅಧಿಕಾರದಲ್ಲಿ ಇರುವುದು ಮಾತ್ರ ಸಾಕಾಗುವುದಿಲ್ಲ, ಅದನ್ನು ಪ್ರಯೋಗಿಸಿದಾಗ ಮಾತ್ರ ಗ್ರಾಮಗಳ ಹಾಗೂ ಮಹಿಳಾ ಸಮುದಾಯದ ನಿಜವಾದ ಅಭಿವೃದ್ಧಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಬಲೇಶ್ವರದಲ್ಲಿ ಬಯಲಾಟ ಕಲಾವಿದರ ಸಮೀಕ್ಷೇಯನ್ನು ಇತ್ತೀಚಿಗೆ ನಡೆಸಲಾಯಿತು. ಪಟ್ಟಣದ ಹನುಮಾನ ದೇವಸ್ಥಾನದ ಆವರಣದಲ್ಲಿ ತಾಲೂಕಿನ ಹಲವಾರು ಜನ ಕಲಾವಿದರು ಪಾಲ್ಗೊಂಡು ತಂತಮ್ಮ ಮಾಹಿತಿಯನ್ನು ಹಂಚಿಕೊಂಡು ದಾಖಲಿಸಿದರು.ರಾಜ್ಯ ಬಯಲಾಟ ಅಕಾಡೆಮಿಯ ಅಧ್ಯಕ್ಷ ಕೆ. ಆರ್. ದುರ್ಗಾದಾಸ ಅವರ ಸೂಚನೆಯ ಮೇರೆಗೆ ವಿಜಯಪುರ ಜಿಲ್ಲೆಯಲ್ಲಿ ಕಲಾವಿದರ ಸಮೀಕ್ಷಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಸಮೀಕ್ಷಕಿ, ನಿವೃತ್ತ ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ಮೀನಾಕ್ಷಿ ಪಾಟೀಲ (ಕಲ್ಯಾಣಿ) ಹೇಳಿದರು.ಬಯಲಾಟ ಆಸಕ್ತರಲ್ಲಿ ಹಲವಾರು ಜನ ಡಾಕ್ಟರೇಟ್ ಪದವಿ ಪಡೆದವರಾಗಿದ್ದಾರೆ. ಗ್ರಾಮೀಣ ಜನತೆ ತಮ್ಮ ನಿತ್ಯದ ಕೃಷಿ ಕಾಯಕದೊಂದಿಗೆ ಈಗಲೂ ಈ ಕಲೆಯನ್ನು ಉಳಿಸಿ-ಬೆಳೆಸಿಕೊಂಡು ಹೋಗುತ್ತಿರುವುದು ಅಭಿಮಾನದ ಸಂಗತಿ ಎಂದರು. ಆಧುನಿಕ ತಂತ್ರಜ್ಞಾನ ಕಾಲದಲ್ಲಿ ಇಂಥ ಅಪರೂಪದ ಮೂಲ ಕಲೆಗಳು ಮರೆಯಾಗುತ್ತಿರುವುದನ್ನು ಮನಗಂಡು, ಮತ್ತೆ ಅದನ್ನು ವರ್ತಮಾನ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಕಲೆಯನ್ನು ಜೀವಂತವಾಗಿರಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕಾಗಿದೆ ಎಂದರು.ಬಬಲೇಶ್ವರ ತಾಲೂಕಿನ ಬಯಲಾಟ ತಜ್ಞರು ಭಾಗಿಯಾಗಿ ಹಂಚಿಕೊಂಡ ಮಾಹಿತಿಯನ್ನು ದಾಖಲಿಸಿಕೊಳ್ಳಲಾಯಿತು.ಇದೇ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ, ಹತ್ತಿ, ಮೆಕ್ಕೆಜೋಳ ಮತ್ತು ಸಜ್ಜಿ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿವೆ. ದ್ರಾಕ್ಷಿ, ದಾಳಿಂಬೆ, ಲಿಂಬೆ ಹಾಗೂ ಬಾಳೆ ನೀರು ನಿಂತು ಹಾಳಾಗಿವೆ. ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ, ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ ೧೫ದಿನದೊಳಗಾಗಿ ಜಿಲ್ಲೆಯ ಎಲ್ಲರಿಗೂ ರೈತರಿಗೆ ಪರಿಹಾರ ಬರಲೇಬೇಕೆಂದು ರೈತ ಸಂಘ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಒತ್ತಾಯಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ರೈತರಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ತಾಲೂಕು ದಂಡಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸುರಿದ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಬ್ಬ ರೈತರಿಗೂ ಒಣ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಮತ್ತು ವಿಜಯ ದಶಮಿ ನಿಮಿತ್ಯ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅ.೧೮ ಶನಿವಾರದಂದು ಮದ್ಯಾಹ್ನ ೩ಗಂಟೆಗೆ ಪಟ್ಟಣದ ಸಾರಂಗಮಠದಿಂದ ನಾನಾ ವೃತ್ತ, ರಸ್ತೆಗಳ ಮಾರ್ಗವಾಗಿ ಆರ್.ಡಿ.ಪಾಟೀಲ ಕಾಲೇಜಿನ ಆವರಣದವರೆಗೆ ಪಥ ಸಂಚಲನ ನಡೆಯಲಿದೆ. ಬಳಿಕ ಆರ್.ಡಿ.ಪಾಟೀಲ ಕಾಲೇಜಿನ ಮೈದಾನದಲ್ಲಿ ನಡೆಯುವ ಸಭೆಯಲ್ಲಿ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಾಂತ ಸಹ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ ಆಗಮಿಸಲಿದ್ದಾರೆ ಎಂದು ಸಂಘದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಮತ್ತು ವಿಜಯ ದಶಮಿ ನಿಮಿತ್ಯ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅ.೧೮ ಶನಿವಾರದಂದು ಮದ್ಯಾಹ್ನ ೩ಗಂಟೆಗೆ ಪಟ್ಟಣದ ಸಾರಂಗಮಠದಿಂದ ನಾನಾ ವೃತ್ತ, ರಸ್ತೆಗಳ ಮಾರ್ಗವಾಗಿ ಆರ್.ಡಿ.ಪಾಟೀಲ ಕಾಲೇಜಿನ ಆವರಣದವರೆಗೆ ಪಥ ಸಂಚಲನ ನಡೆಯಲಿದೆ. ಬಳಿಕ ಆರ್.ಡಿ.ಪಾಟೀಲ ಕಾಲೇಜಿನ ಮೈದಾನದಲ್ಲಿ ನಡೆಯುವ ಸಭೆಯಲ್ಲಿ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಾಂತ ಸಹ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ ಆಗಮಿಸಲಿದ್ದಾರೆ ಎಂದು ಸಂಘದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಿದ್ಯಾರ್ಥಿಗಳು ಪದವಿ ಅಧ್ಯಯನದ ಜೊತೆಗೆ ಉತ್ತಮ ಆಲೋಚನೆಗಳು, ಭಾವನೆಗಳು, ನಡವಳಿಕೆಗಳು, ಮೈಗೂಡಿಸಿಕೊಂಡಾಗ ಮಾದರಿ ವ್ಯಕ್ತಿಯಾಗಲು ಸಾಧ್ಯ ಎಂದು ಯುವ ಮುಖಂಡ ಆದಿತ್ಯ ಗೌಡ ಪೊಲೀಸ್ ಪಾಟೀಲ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗಾಬಾಯಿ ಶಾಂತಗೌಡ ಪೋಲಿಸ್ ಪಾಟೀಲ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಐ.ಕ್ಯೂ.ಎ.ಸಿ. ಮತ್ತು ಸಾಂಸ್ಕೃತಿಕ ಘಟಕದ ಸಹಯೋಗದಲ್ಲಿ 2025-26ನೇ ಸಾಲಿನ ವಿವಿಧ ಸಮಿತಿಗಳ ಉದ್ಘಾಟನೆ ಹಾಗೂ ಬಿಎ ಬಿಕಾಂ ಮತ್ತು ಬಿಎಸ್ಸಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಿಕೆಯ ಜೊತೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ತುಂಬುವ ಕೆಲಸ ಮಾಡುವ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿ ವರ್ಗದವರ ಕಾರ್ಯ ಶ್ಲಾಘನೀಯ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಸಿದ್ಧಲಿಂಗ ರಾಥೋಡ್ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಕಾಲೇಜಿನ ವಿವಿಧ ಸಮಿತಿಗಳು ಆದ್ಯತೆ ನೀಡುತ್ತಿದ್ದು, ಐ ಕ್ಯೂ ಎ ಎಸ್ ನಲ್ಲಿ ಸುಲಭವಾದ ಮಾಹಿತಿ ಸಿಗಲಿದೆ ದೈಹಿಕವಾಗಿ ಭೌತಿಕವಾಗಿ ಇವುಗಳ ಸದುಪಯೋಗ ಪಡಿಸಿಕೊಳ್ಳಬೇಕು…
ಉದಯರಶ್ಮಿ ದಿನಪತ್ರಿಕೆ ಚಡಚಣ: “ಎನಿತು ಇನಿದು ಈ ಕನ್ನಡ ನುಡಿಯು, ಮನವನು ತಣಿಸುವ ಮೋಹನ ಸುಧೆಯು” ಎಂಬ ಹಾಡಿನ ಮೂಲಕ ಚಿರಪರಿಚಿತರಾದ ಆನಂದಕಂದರು ತಮ್ಮ ಕವನ, ಸಣ್ಣಕಥೆ, ಕಾದಂಬರಿ, ರೂಪಕ, ಚರಿತ್ರೆ, ಶಿಶು ಸಾಹಿತ್ಯ, ಮೀಮಾಂಸೆ, ವಿಮರ್ಶೆ, ಸಂಶೋಧನೆ, ಸಂಪಾದನೆ, ಜಾನಪದ ಮತ್ತು ಪತ್ರಿಕಾ ಸಂಪಾದನೆಗಳಂತಹ ನಿರಂತರ ಕಾಯಕಗಳ ಮೂಲಕ ಇಡೀ ನಾಡನ್ನು ಬೆಳಗಿ ಕನ್ನಡ ನಾಡಿನ ಅಸಂಖ್ಯಾತ ಪ್ರತಿಭೆಗಳನ್ನೂ ಹುಟ್ಟುಹಾಕಿದ ವಿಶಿಷ್ಟ ಸಾಹಿತಿ ಎಂದು ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ನ ಸದಸ್ಯ ರವೀಂದ್ರ ಕುಲಕರ್ಣಿ ಹೇಳಿದರು.ಸ್ಥಳೀಯ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಗುರುವಾರ ಆಯೋಜಿಸಿದ ಡಾ. ಬೆಟಗೇರಿ ಕೃಷ್ಣಶರ್ಮ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ ಹಾಗೂ ಕಾವ್ಯ ಗಾಯನ ಕಾರ್ಯಕ್ರಮ ಆಶಯ ನುಡಿಗಳನ್ನಾಡಿದ ಅವರು ಭಾರತದ ಸ್ವಾತಂತ್ರ‍್ಯ ಪ್ರಾಪ್ತಿ, ಕರ್ನಾಟಕತ್ವದ ಜಾಗೃತಿ ಮತ್ತು ಕರ್ನಾಟಕ ಏಕೀಕರಣಗಳಿಗೆ ತಮ್ಮ ಶಕ್ತಿ ಸರ್ವಸ್ವವನ್ನೂ ಧಾರೆಯೆರೆದು ದುಡಿದ ಕನ್ನಡ ಸಾಹಿತಿಗಳಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಮೇಲೆ ಷೂ ದಾಳಿ ಖಂಡನಾರ್ಹ, ಆದರೆ ಇದು ಮುಗಿದು ಹೋದ ಅಧ್ಯಾಯ, ಈ ವಿಷಯವಾಗಿ ಬಂದ್ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವ ಅಗತ್ಯತೆ ಇರಲಿಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಷೂ ಎಸೆದ ಪ್ರಕರಣ ಮುಗಿದು ಹೋದ ಅಧ್ಯಾಯ, ಆದರೆ ಈ ವಿಷಯ ಮುಂದಿಟ್ಟುಕೊಂಡು ಬಂದ್ ಕರೆ ನೀಡಿ ಬಡವರನ್ನು ತೊಂದರೆ ನೀಡಿದ್ದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.ಒತ್ತಾಯಪೂರ್ವಕವಾಗಿ ಎಪಿಎಂಸಿಯಲ್ಲಿ ಅಂಗಡಿ ಬಂದ್ ಮಾಡಿ ಜನಸಾಮಾನ್ಯರನ್ನು ತೊಂದರೆಗೆ ದೂಕಿದ್ದು ಯಾಕೆ? ಎಂದು ಪ್ರಶ್ನಿಸಿದರು.ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ಸಂಘ ಪರಿವಾರ ಒಂದೇ ಒಂದು ದೇಶ ವಿರೋಧಿ ಕಾರ್ಯದಲ್ಲಿ ಭಾಗಿಯಾಗಿದ್ದು ತೋರಿಸಲಿ ಎಂದು ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ ಸವಾಲು ಹಾಕಿದರು.ಸಂಘ ಪರಿವಾರವನ್ನು ನಿಷೇಧ ಮಾಡಿದ ನೆಹರೂ ಅವರೇ ಮುಂದೆ…
ವಿಜಯಪುರದಲ್ಲಿ ಬಿಜೆಪಿ ಮುಖಂಡ ಡಾ.ಸುರೇಶ ಬಿರಾದಾರ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿಷೇಧಿಸಿ ತಡೆಯಾಜ್ಞೆ ನೀಡಿರುವುದು ಖಂಡನೀಯ,ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದ್ದು, ಕೂಡಲೇ ಈ ನಿಷೇಧ ಆದೇಶವನ್ನು ಹಿಂಪಡೆದು, ಶ್ರೀಗಳ ಬಗ್ಗೆ ಅಗೌರವದಿಂದ ನಡೆದುಕೊಂಡಿರುವ ಕಾಂಗ್ರೆಸ್ ನಾಯಕರು ಕೂಡಲೇ ಶ್ರೀಗಳಿಗೆ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಡಾ.ಸುರೇಶ ಬಿರಾದಾರ ಒತ್ತಾಯಿಸಿದರು.ಲಿಂಗಾಯತ ಒಕ್ಕೂಟದ ಮಠಾಧೀಶರು ರಾಜ್ಯ ಸರ್ಕಾರದ ಮೂಲಕ ಕನೇರಿ ಶ್ರೀಗಳನ್ನು ಹತ್ತಿಕ್ಕುವ ಬದಲು ಬಹಿರಂಗ ಚರ್ಚೆಗೆ ಬರಬೇಕು, ವೇದಿಕೆಯಲ್ಲಿ ಕನೇರಿ ಶ್ರೀಗಳು ಭಾಗವಹಿಸುತ್ತಾರೆ, ಎಲ್ಲ ವಿಷಯಗಳು ಆ ವೇದಿಕೆಯಲ್ಲಿಯೇ ಸಮಗ್ರ ಚಿಂತನೆಯಾಗಲಿ ಎಂದು ಹೇಳಿದರು.ನಾವೆಲ್ಲರೂ ಹಿಂದೂಗಳಾಗಿ ಇರೋಣ, ಭಿನ್ನಾಭಿಪ್ರಾಯ ಬಿಡೋಣ, ಈ ಬಗ್ಗೆ ಬಹಿರಂಗ ಚರ್ಚೆ ಮೂಲಕ ಸಿದ್ಧಾಂತ ಪ್ರತಿಪಾದಿಸೋಣ, ಜನ ಯಾರನ್ನು ಒಪ್ಪಿಕೊಳ್ಳುತ್ತಾರೋ ಒಪ್ಪಿಕೊಳ್ಳಲಿ ಎಂದರು.ಬುದ್ದ, ಬಸವ, ಡಾ.ಅಂಬೇಡ್ಕರ್ ಅವರ ಚಿಂತನೆಗಳಿಂದ ವಿಮುಖರಾಗಿ ಹಿಂಸೆ ಪ್ರತಿಪಾದಿಸುವ ಕಾರ್ಲಮಾರ್ಕ್ಸ ಸಿದ್ಧಾಂತದತ್ತ ವಾಲಿದ್ದಾರೆ, ಭಾರತೀಯ ಸಂವಿಧಾನವನ್ನು ವಿರೋಧಿಸಿದ್ದೆ ಈ ಕಮ್ಯೂನಿಸ್ಟರು ಎಂದರು.ಎಂದು ರಾಜ್ಯದಲ್ಲಿ…
