Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಹಾರಾಷ್ಟçದ ಭೀಮಾನದಿಯ ತಟದಲ್ಲಿ ಈ ವರ್ಷ ವಿಪರೀತ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಭೀಮಾನದಿಗೆ ಹೊಂದಿಕೊಂಡಿರುವ ಜಮೀನುಗಳು ಜಲಾವೃತವಾಗಿ ಮುಂಗಾರು ಬೇಳೆಹಾನಿ ಕುರಿತುಸೋಮವಾರ ಇಂಡಿ ಉಪವಿಭಾಗಾಧಿಕಾರಿ ಅನುರಾಧ ವಸ್ತ್ರದ ಪುನರ್ ಪರಿಶೀಲಿಸಿದರು.ರೈತರಿಗೆ ಬೆಳೆ ಹಾನಿಯ ಪರಿಹಾರ ಸರಕಾರದಿಂದ ಕೊಡಿಸುವ ಸಲುವಾಗಿ ಈ ಮೊದಲು ಚಡಚಣ ತಹಶೀಲ್ದಾರರ ಸಿಬ್ಬಂದಿ ಕೃಷಿ ಹಾಗೂ ತೊಟಗಾರಿಕೆ ಅಧಿಕಾರಿಗಳು ಬೆಳೆ ಹಾನಿ ಕುರಿತು ಸಮಗ್ರವಾಗಿ ಪರಿಶೀಲಿಸಿ ಫಸಲು(ಬೇಳೆ)ಹಾನಿಗೊಳಗಾದ ರೈತರ ಜಮೀನಿನ ಜಿಪಿಎಸ್ ಪೋಟೊ ದೊಂದಿಗೆ ಯಾವ ಬೆಳೆ ಹಾನಿಯಾಗಿದೆ ಎಷ್ಟು ಹೆಕ್ಟೇರ್ ಹಾನಿಯಾಗಿದೆ, ರೈತನ ಹೆಸರು ಹೀಗೆ ಹಲವಾರು ವಿಷಯ ಕುರಿತು ಅಧಿಕಾರಿಗಳು ಸಮೀಕ್ಷೆ ಮಾಡಿದ್ದರು. ತಾಲೂಕಿನ ೧೩ ಗ್ರಾ.ಪಂ.ಗಳಲ್ಲಿ ಈ ಎಲ್ಲ ಸಮೀಕ್ಷೆಯ ವರದಿ ಲಗತ್ತಿಸಿ ರೈತರಿಗೆ ಒಂದು ವಾರ ಆಕ್ಷೇಪಣೆಗೆ ಅವಕಾಶ ಕಲ್ಪಿಸಿದ್ದರು. ಸೋಮವಾರ ಆಕ್ಷೇಪಣೆಯ ಅವಧಿ ಮುಗಿದಿದ್ದರಿಂದ ಎಲ್ಲ ಸಮೀಕ್ಷಾ ವರದಿಗಳು ಸರಿಯಾಗಿದೆಯೊ ಅಥವಾ ಇಲ್ಲವೋ ಎಂದು ಪುನರ್‌ಪರಿಶೀಲನೆ ಮಾಡಿ ಸರಕಾರಕ್ಕೆ ಅಂತಿಮ ವರದಿ ಸಲ್ಲಿಸಬೇಕಾಗಿರುವದರಿಂದ ಪುನರ್ ಪರಿಶೀಲಿಸಲಾಯಿತು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಅಭಿನವ ವಿದ್ಯಾ ಸಂಸ್ಥೆಯಲ್ಲಿ ಸೆ.೧೪ ರಂದು ಪ್ರಥಮ ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟನೆ ಕಾರ್ಯಕ್ರಮ ಜರುಗಿತು.ಉದ್ಘಾಟಕರಾಗಿ ಕೆ ಜಿ, ಎಸ್ ಎಸ್ ಸಂಸ್ಥೆ, ಮಾನಸ ಗಂಗೋತ್ರಿ ವಸತಿ ಶಾಲೆ ತಿಡಗುಂದಿಯ ಸಂಸ್ಥಾಪಕ, ಅಧ್ಯಕ್ಷ ಬಸನಗೌಡ ಬಿ ಹರನಾಳ, ಅಧ್ಯಕ್ಷರಾಗಿ ಮೋಹನ ದಳವಾಯಿ, ಅಧ್ಯಕ್ಷರು ಶ್ರೀ ಅಭಿನವ ವಿದ್ಯಾ ಸಂಸ್ಥೆ, ವಿಜಯಪುರ, ಮುಖ್ಯ ಅತಿಥಿಯಾಗಿ ತಮ್ಮಾರಾಯ ಪೋದ್ದಾರ, ಅಮೃತ ಕೌಲಗಿ, ಹಾಗು ಅಖಿಲ ಕರ್ನಾಟಕ ಸೂರ್ಯನಮಸ್ಕಾರ ಸಂಸ್ಥೆಯ, ಸಂಸ್ಥಾಪಕ ಪ್ರದಾನ ಕಾರ್ಯದರ್ಶಿ ಬಸವರಾಜ ನಂ ಬಾಗೇವಾಡಿ, ನಿರೂಪಕರಗಿ ಜ್ಯೋತಿ ನಿ ಪುಜಾರಿ, ಸಂಜೆಯಸ್ವಾಮಿ ತೋನಶ್ಯಾಳಮಠ ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವದ ಯಶಸ್ಸಿಗೆ ಮುಖ್ಯವಾಗಿ ಚುನಾವಣೆಗಳಲ್ಲಿ ಸಕಾರಾತ್ಮಕವಾಗಿ ಭಾಗವಹಿಸಬೇಕು ಹಾಗೂ ತಮ್ಮ ತಮ್ಮ ಮತಗಳನ್ನು ಹಣ ಮತ್ತು ಇತರೆ ಪ್ರಲೋಭನೆಗಳಿಗೆ ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ನೀಡಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಪರಿಕಲ್ಪನೆ, ಅದರ ಹುಟ್ಟು ಹಾಗೂ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಅದು ಬೆಳೆದುಬಂದ ದಾರಿಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ನಿರ್ದೇಶಕ ಪ್ರೊ.ಮಲ್ಲಿಕಾರ್ಜುನ.ಎನ್.ಎಲ್. ಅವರು, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ ಅಗತ್ಯ. ಒಂದೊಮ್ಮೆ ಪ್ರಜಾಪ್ರಭುತ್ವ ಸಡಿಲಗೊಂಡರೆ ಅರಾಜಕತೆ ಉಂಟಾಗುವ ಅಪಾಯಗಳಿವೆ ಎಂದರು.ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಮಾನ್ಯ…
ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ಗೊಳಸಂಗಿ: ಕೆಲವೇ ಕೆಲವು ಶಿಕ್ಷಕರಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ಕಳಂಕ ಬರುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಆದರ್ಶಮಯ ಜೀವನದ ಮೂಲಕ ಆದರ್ಶ ಸಮಾಜ ರೂಪಿಸುವ ಶಿಲ್ಪಿಗಳಾಗಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.ಸೋಮವಾರ ಗೊಳಸಂಗಿ ಗ್ರಾಮದ ಅಪ್ಪಣ್ಣ ದಳವಾಯಿ ಪ್ರೌಢ ಶಾಲಾ ಸಭಾಭವನದಲ್ಲಿ ಬಸವವನಬಾಗೇವಾಡಿ ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊಲ್ಹಾರ, ನಿಡಗುಂದಿ ಹಾಗೂ ಬಸವವನಬಾಗೇವಾಡಿ ತಾಲೂಕ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರ್ಕಾರ ತನ್ನ ಆದಾಯದಲ್ಲಿ ಅತಿಹೆಚ್ಚು ಅನುದಾನವನ್ನು ಶಿಕ್ಷಣ ಹಾಗೂ ವೈದ್ಯಕೀಯ ಇಲಾಖೆಗಳಿಗೆ ಆರ್ಥಿಕ ವೆಚ್ಚ ಮಾಡುತ್ತಿದೆ. ಹೀಗಾಗಿ ಶಿಕ್ಷಕರು ಗುಣಮಟ್ಟ ಹಾಗೂ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಸಮಾಜ ತಮ್ಮ ಮೇಲೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಸೋಮವಾರ ರಕ್ತದಾನ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ ಮೂಲಕ ದೇಶದ ಅಭಿವೃದ್ಧಿಗೆ ಅವರದೇ ಆದ ಕೊಡುಗೆ ನೀಡಿದ್ದಾರೆ. ತಮ್ಮ ಜನ್ಮದಿನವನ್ನು ರಾಷ್ಟ್ರೀಯ ಎಂಜಿನಿಯರ್ ದಿನವನ್ನಾಗಿ ಆಚರಿಸುವಂತೆ ಕರೆ ನೀಡಿದ್ದು, ಅವರು ತಮ್ಮ ವೃತ್ತಿ ಮತ್ತು ವೃತ್ತಿ ಬಾಂಧವರ ಬಗ್ಗೆ ಹೊಂದಿರುವ ಪ್ರೀತಿ, ವಿಶ್ವಾಸ, ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಸಂಯೋಜನಾಧಿಕಾರಿ ಆನಂದ ಚವ್ಹಾಣ, ಎಂ. ಎಸ್. ಹಿರೇಮಠ, ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕರ ಹೊರತಾದ ಸಿಬ್ಬಂದಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನಿಂದ ವಿಜಯಪುರ ನಗರದಿಂದ-ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಿದೆ.ವಿದ್ಯಾರ್ಥಿಗಳು, ರೈತರು ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲುಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.ಪ್ರತಿದಿನ ಎರಡು ಬಸ್ಸುಗಳು ವಿಜಯಪುರದಿಂದ ಖತಿಜಾಪುರ, ಸಾರವಾಡ, ಬಬಲೇಶ್ವರ, ಯಕ್ಕುಂಡಿ, ಅರ್ಜುಣಗಿ ಮಾರ್ಗವಾಗಿ ಚಿಕ್ಕಲಕಿ ಕ್ರಾಸ್ ವರೆಗೆ ಸಂಚರಿಸಲಿವೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಚಾರ್ಯೆ ಡಾ. ರಾಬಿಯಾ. ಎಂ. ಮಿರ್ಧೆ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ. ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ, ಮಾನವ ಹಕ್ಕುಗಳ ರಕ್ಷಣಾ ಕೋಶ ಹಾಗೂ ಸಮಾನ ಅವಕಾಶ ಕೋಶಗಳ ಸಹಯೋಗದಲ್ಲಿ ಸೋಮವಾರ ಅಯೋಜಿಸಲಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.ವಿಶ್ವದ ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು,ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ ಸೆ.೧೫ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.ಈ ವೇಳೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ತರನ್ನುಮ್ ಜಬೀನ್ ಖಾನ್ ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಆಶಯ ಮತ್ತು ಮಹತ್ವದ ಬಗ್ಗೆ ಹೇಳಿ, ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಮಾನವ ಹಕ್ಕುಗಳ ರಕ್ಷಣಾ ಕೋಶದ ಅಧ್ಯಕ್ಷ ಡಾ.ಧರ್ಮಗುರು ಪ್ರಸಾದ್, ಸಮಾನ…
ವಿಚಾರ ಕ್ರಾಂತಿ ಕೃತಿಯ ವಿಚಾರ ಸಂಕಿರಣದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಶಿವಶರಣಪ್ಪ ಮೂಳೆಗಾಂವ ಅಭಿಮತ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಧಾರ್ಮಿಕ ಮೌಢ್ಯ ಮತ್ತು ಸಾಮಾಜಿಕ ಮೌಢ್ಯ ಜನರ ಬದುಕನ್ನು ಹಾಳು ಮಾಡುತ್ತಿದೆ, ಹೀಗಾಗಿ ಕುವೆಂಪು ಸಾಹಿತ್ಯ ಅಧ್ಯಯನದಿಂದ ಜನರಲ್ಲಿ ವೈಚಾರಿಕ ಮನೋಭಾವ ವೃದ್ದಿಯಾಗಿ ಸರಳ ಜೀವನ ನಡೆಸಲು ಸಾಧ್ಯವಾಗಲಿದೆ ಎಂದು ನಿವೃತ್ತ ಡಿಡಿಪಿಐ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಶಿವಶರಣಪ್ಪ ಮೂಳೆಗಾಂವ ಅಭಿಪ್ರಾಯ ಪಟ್ಟರು.ಅವರು ಪಟ್ಟಣದ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಅಫಜಲಪುರ ಘಟಕದ ವತಿಯಿಂದ ಬರಗೂರು ರಾಮಚಂದ್ರಪ್ಪ ಸಂಪಾದಿತ ಕುವೆಂಪು ವಿಚಾರ ಕ್ರಾಂತಿ ಕೃತಿಯ ಕುರಿತು ವಿಚಾರ ಸಂಕಿರಣದಲ್ಲಿ ಭಾಗಿಯಾಗಿ ಮಾತನಾಡುತ್ತಾ, ಮೌಢ್ಯ ಮತ್ತು ಮೂಢ ನಂಬಿಕೆಗಳನ್ನು ನಮ್ಮ ಮೇಲೆ ಶತಮಾನಗಳಿಂದ ಹೇರಲಾಗುತ್ತಿದೆ, ಸತ್ಯ ಹೇಳಿದರೆ ನಂಬದ ಜನ, ಸುಳ್ಳನ್ನು ಬಹು ಬೇಗ ನಂಬಿ ಆಚರಣೆ ಮಾಡುತ್ತಾರೆ. ಇವುಗಳ ನಡುವೆ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಜನರಲ್ಲಿ ಬಿತ್ತುವುದು ಬಹಳ ಸವಾಲಿನ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಜನಪ್ರಿಯತೆ ಹೊಂದಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ ಸಿದ್ದಲಿಂಗ ರಾಠೋಡ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಶ್ವದ ಪ್ರಜೆಗಳಾಗಿ ವಿಶ್ವದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವಜನತೆ ಎಚ್ಚೆತ್ತುಕೊಳ್ಳಿ ಎಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ ಮಾತನಾಡಿ ಪ್ರತಿ ವರ್ಷವೂ ಸೆಪ್ಟೆಂಬರ್ 15 ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾದುದು, ಎಲ್ಲಾ ದಾನಗಳಲ್ಲಿ ಮತದಾನದ ಶ್ರೇಷ್ಠವಾದದ್ದು. ವಿದ್ಯಾರ್ಥಿಗಳು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಮೂಲಕ ಕಡ್ಡಾಯ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲು ಸಾಧ್ಯ ಎಂದರು.ಪ್ರಮುಖರಾದ ಕಾಲೇಜು…
ಮುಳುಗಡೆ ಸಂತ್ರಸ್ತರ ಬೇಡಿಕೆಯಂತೆ ಪ್ರತಿ ಎಕರೆ ನೀರಾವರಿ ಭೂಮಿಗೆ 55 ಲಕ್ಷ ರೂ, ಒಣ ಬೇಸಾಯ ಭೂಮಿ ಪ್ರತಿ ಎಕರೆಗೆ 45 ಲಕ್ಷ ರೂ. ಬೆಲೆ ನಿಗದಿಗೆ ಮಾಜಿ ಸಚಿವ ಬೆಳ್ಳುಬ್ಬಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಸಂತ್ರಸ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಯುಕೆಪಿಯ ಪ್ರವಾಸಿ ಮಂದಿರದ ಮುಂದೆ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳಗಡೆಯಾಗುವ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ ಪ್ರತಿ ಎಕರೆ ನೀರಾವರಿ ಭೂಮಿಗೆ 55 ಲಕ್ಷ ರೂಪಾಯಿ, ಒಣ ಬೇಸಾಯಿಗೆ ಭೂಮಿ ಪ್ರತಿ ಎಕರೆಗೆ 45 ಲಕ್ಷ ರೂಪಾಯಿ ಬೆಲೆ ನಿಗಧಿ ಮಾಡಿ ಫರಿಹಾರ ನೀಡುವುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.ರಾಜ್ಯ ಸರ್ಕಾರ…
