Author: editor.udayarashmi@gmail.com

ಲೇಖನ- ಸುಮನ್ ಪಾಟೀಲ್ಪತ್ರಿಕೋದ್ಯಮ ವಿದ್ಯಾರ್ಥಿನಿವಿಜಯಪುರ ಉದಯರಶ್ಮಿ ದಿನಪತ್ರಿಕೆ ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರವೂ ಮಹಿಳಾ ಉದ್ಯೋಗಿಗಳ ಯೋಗ ಕ್ಷೇಮದ ಹಿತದೃಷ್ಟಿ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡುವ ಹಿತ ನಿಟ್ಟಿನಲ್ಲಿ”ಮುಟ್ಟಿನ ರಜೆ ನೀತಿ 2025 ” ಒಂದು ದಿನ ವೇತನ ಸಹಿತ ರಜೆ ನೀಡುವ ನೀತಿಗೆ ಅನುಮೋದನೆ ನೀಡಿರುವುದು ಮಹತ್ವದ ಹೆಜ್ಜೆ ಕೇರಳ, ಸಿಕ್ಕಿಂ, ಬಿಹಾರ, ಒಡಿಶಾ ರಾಜ್ಯಗಳು ಈ ಹಿಂದೆಯೇ ಋತುಚಕ್ರ ರಜೆ ನೀತಿ ಯನ್ನು ಅಳವಡಿಸಿವೆ. ಈಗ ಕರ್ನಾಟಕ ಸರ್ಕಾರ ವೂ ಕೂಡ ಇದಕ್ಕೆ ಮುಂದಾಗಿರುವುದು ಒಳ್ಳೆಯ ನಡೆ. ಋತುಚಕ್ರ ಎಂಬುದು ಹೆಣ್ಣಿನ ದೇಹದಲ್ಲಿ ನಡೆಯುವ ಅತ್ಯಂತ ಸಹಜ ಕ್ರಿಯೆ. ಪಿರಿಯಡ್ಸ ಅಥವಾ ಮುಟ್ಟು ಇದೊಂದು ನೈಸರ್ಗಿಕ ವಿದ್ಯಮಾನವಾದರೂ ಇದು ಬರುವ ಒಂದು ವಾರ 15 ದಿನಗಳ ಮುಂಚೆ ಆಕೆಯ ಮನಸ್ಥಿತಿಯಲ್ಲಿ ಹಲವಾರು ರೀತಿಯ ಬದಲಾವಣೆಗಳಾಗುತ್ತವೆ. ಇದು ಪ್ರಾರಂಭವಾದ ಮೊದಲ 3,4 ದಿನಗಳು ಮಹಿಳೆಯರು ತುಂಬ ನೋವನ್ನು ಅನುಭವಿಸುತ್ತಾರೆ.ಆ ದಿನಗಳಲ್ಲಿ ಹಾರ್ಮೋನಗಳ ಬದಲಾವಣೆಯಿಂದಾಗಿ ಅವರಲ್ಲಿ ತಲೆನೋವು, ಸುಸ್ತು , ಹೊಟ್ಟೆನೋವು,…

Read More

ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಜರುಗಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೌದ್ಧಿಕ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲಜೀ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದೂತ್ವ ಎಂದರೆ ಕೇವಲ ಅಭಿಮಾನವಲ್ಲ, ಅದೊಂದು ಸ್ವಾಭಿಮಾನ, ಕೇರಳ, ತಮಿಳುನಾಡಿನಲ್ಲಿಯೂ ಹಿಂದೂತ್ವ ವಾತಾವರಣ ಬೆಳೆಯುತ್ತಿದೆ, ಹಿಂದೂತ್ವ ಭಾವ ಜಾಗೃತವಾಗುತ್ತಿದೆ, ಕಾಶ್ಮೀರದಲ್ಲಿ ಹಿಂದೂ ಗುರುಕುಲಗಳು ಆರಂಭವಾಗುತ್ತಿವೆ ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲಜೀ ಹೇಳಿದರು.ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ವಿಜಯದಶಮಿ ಹಾಗೂ ಸಂಘ ಪರಿವಾರದ ೧೦೦ ವಸಂತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೌದ್ಧಿಕ ಕಾರ್ಯಕ್ರಮದಲ್ಲಿ ತಮ್ಮ ಚಿಂತನೆಗಳನ್ನು ವ್ಯಕ್ತಪಡಿಸಿದ ಅವರು, ತಮಿಳುನಾಡು, ಕೇರಳದಲ್ಲಿ ರಾಮನ ಪ್ರತಿಮೆಗಳಿಗೆ ಅವಮಾನ ಮಾಡಲಾಗುತ್ತಿತ್ತು, ಆದರೆ ಅಲ್ಲಿಯೂ ಹಿಂದೂತ್ವದ ಭಾವನೆ ಜಾಗೃತಗೊಂಡಿದೆ. ಇದಕ್ಕೆ ಸಂಘ ಪರಿವಾರದ ಶ್ರಮವೇ ಕಾರಣ ಎಂದರು.ಕಾಶ್ಮೀರದಲ್ಲಿ ಅಂದು ಇದ್ದ ಪರಿಸ್ಥಿತಿಯಿಂದ ಹಿಂದೂಗಳು ಪಲಾಯನ ಮಾಡಬೇಕಾದಂತಹ ಅನಿವಾರ್ಯ ಪರಿಸ್ಥಿತಿ ಸೃಜನೆಯಾಗಿತ್ತು, ಆದರೆ ಈಗ ಹಿಂದೂಗಳು ಪಲಾನಯವಾದಿಗಳಲ್ಲ ಬದಲಿಗೆ ಪರಾಕ್ರಮಿಗಳು, ಈಗ ಕಾಶ್ಮೀರದಲ್ಲಿ…

Read More

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ | ಕೆಲವು ಮಾಧ್ಯಮಗಳಿಂದ ಸುದ್ದಿ ತಿರುಚಿ ವಿವಾದ ಸೃಷ್ಟಿ | ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದು ತಿಳಿಸಿದರು. ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ.…

Read More

ಲೇಖನ- ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪ್ರಿಯ ಮನೋಜ,ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ ಸೃಷ್ಟಿಸಿವೆ. ನಿನ್ನ ಬಿಟ್ಟು ಈ ಜೀವಕೆ ಜೀವದುಸಿರು ಕಲ್ಪಿಸಿಕೊಳ್ಳುವುದು ಅಸಾಧ್ಯವೇ ಸರಿ. ನಿನ್ನ ಕಂಡರೆ ಸಾಕು ಈ ತನು ಮನ ತನ್ನಿಂದ ತಾನೆ ಅರಳುವುವು ಕಣೋ. ನಿನ್ನಾಸರೆ ಒಂದಿದ್ದರೆ ಸಾಕು ಬದುಕೆಲ್ಲ ಹಾಯಾಗಿರ್ತಿನಿ. ಕೂಡಿ ನಲಿಯುವ ಆಸೆ ಮನದಲ್ಲಿ ತುಂಬಿ ತನುವೆಲ್ಲ ಪುಳಕಿತವಾಗುತಿದೆ. ಅಬ್ಬಬ್ಬಾ! ನಂಬಲಾಗದಷ್ಟು ಮೋಹಕ ಶಕ್ತಿಯಿದೆ ನಿನ್ನೀ ಒಲವಿಗೆ. ಪ್ರೀತಿಯ ಮಾಯಾ ಶಕ್ತಿಯ ಕುರಿತು ಅದೆಷ್ಟೋ ಜನರು ಹೇಳಿದರೂ ನಂಬಿರದ ನನಗೆ ಇದೀಗ ಅರಿವಾಗಿದೆ. ಎದುರಿಗೆ ನೀನಿಲ್ಲವಾದರೂ ನನ್ನನ್ನು ಬಾಚಿ ತಬ್ಬಿ ಮುದ್ದಾಡುವ ನಿನ್ನ ಬಿಂಬ ಕನ್ನಡಿಯಲ್ಲಿ ಮೂಡುವುದು. ನೀ ಬಾಚಿ ತಬ್ಬಿದೆ ರೀತಿಗೆ ನಾಚಿ ನಿಂತ ನನ್ನ ಕಂಡು ನನಗೆ ಸೋಜಿಗವೆನಿಸುತ್ತದೆ. ಅದೊಂದು ವಿಶೇಷ ಖುಷಿಯನ್ನು…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ರಾಜ್ಯದಲ್ಲಿ ಧರ್ಮಸ್ಥಳ ಸಂಸ್ಥೆಯು ಸ್ವ-ಸಹಾಯ ಸಂಸ್ಥೆಗಳಿಗೆ ಆರ್ಥಿಕ ಸಹಾಯ ಮಾಡುವುದಷ್ಟೇ ಅಲ್ಲ ಸಮಾಜಮುಖಿ ಕೆಲಸ ಮಾಡುತ್ತಿದೆ ಹೀಗಾಗಿ ಧರ್ಮಸ್ಥಳ ಸಂಸ್ಥೆಯವ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಾಸಕ ಎಂ.ವೈ.ಪಾಟೀಲ ಹೇಳಿದರು.ಅವರು ಪಟ್ಟಣದ ಶ್ರೀ ಮಳೇಂದ್ರ ಶಿವಾಚಾರ್ಯ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ನಡೆದ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮದ್ಯವೇಸನದಂತ ಕೆಟ್ಟ ಚಟಗಳಿಂದ ದೂರವಿದ್ದು ಸುಂದರ ಜೀವನ ನಡೆಸಬೇಕು. ಇತ್ತೀಚಿಗೆ ಮದ್ಯ ಸೇವನೆ ಅತೀಯಾಗಿ ಮಾಡುತ್ತಿರುವುದು ಕಂಡು ಬರುತ್ತಿದೆ. ಕುಡಿತದಿಂದ ಕುಟುಂಬಗಳು ಹಾಳಾಗಿವೆ ಎಂದ ಅವರು ಧರ್ಮಸ್ಥಳ ಸಂಸ್ಥೆಯವರು ಮದ್ಯವ್ಯಸನಕ್ಕೆ ದಾಸರಾದವರನ್ನು ಸರಿ ದಾರಿಗೆ ತರುವ ಕೆಲಸ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.ಇನ್ನೂ ಗ್ರಾಮೀಣ ಭಾಗದಲ್ಲಿ ಮದ್ಯ ಸೇವನೆ ಅತೀಯಾಗಿ ಕಂಡು ಬರುತ್ತಿದೆ. ಸರಾಯಿ ಸೇವನೆ ನಿರ್ಬಂಧ ಹೇರವುದು ಸರಕಾರಕ್ಕೂ ಸಾಧ್ಯವಾಗುವುದಿಲ್ಲ. ಸ್ಥಳೀಯ ಮಹಿಳೆಯರು ಒಗ್ಗಟ್ಟಾಗಿ ಸರಾಯಿ ಸೇವನೆ ನಿರ್ಬಂಧ ಹೇರುವ ಕೆಲಸ ಮಾಡಬೇಕು ಎಂದರು.ಇಂದು ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಪ್ರವೇಶ ಪಡೆದುಕೊಂಡವರು ದುಶ್ಚಟಗಳಿಂದ ದೂರವಿದ್ದು…

Read More

ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯ ಬೆಳವಣಿಗೆಗಳಿಗೆ ತಾರ್ಕಿಕ ಅಂತ್ಯ | ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿನ ಹಲವಾರು ರಾಜಕೀಯ ಬೆಳವಣಿಗೆಗಳು ತಾರ್ಕಿಕ ಅಂತ್ಯವನ್ನು ತಲುಪುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.ಇತ್ತೀಚಿನ ಬೆಳವಣಿಗೆಗಳು ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ಎಲ್ಲವೂ ಸರಿಯಿಲ್ಲ’ ಎಂಬುದನ್ನು ಸೂಚಿಸುತ್ತವೆ. ಆಡಳಿತ ಪಕ್ಷದ ಸದಸ್ಯರೇ ಈ ಬಗ್ಗೆ ಸುಳಿವು ನೀಡುತ್ತಿದ್ದಾರೆ ಎಂದರು.ನವೆಂಬರ್‌ನಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯ ಅರ್ಧವನ್ನು ತಲುಪಿದಾಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಬಗ್ಗೆ ವ್ಯಾಪಕ ಊಹಾಪೋಹಗಳು ಹರಡಿವೆ. ಕೆಲವರು ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದಿದ್ದಾರೆ.’ಆಡಳಿತ ಪಕ್ಷದ ಸಚಿವರು ಮತ್ತು ಶಾಸಕರ ಪ್ರತಿಕ್ರಿಯೆಗಳು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತವೆ. ಬಿಹಾರ ಚುನಾವಣೆಯ ನಂತರ, ರಾಜ್ಯದಲ್ಲಿ ಈಗಾಗಲೇ ಪ್ರಾರಂಭವಾಗಿರುವ ಅನೇಕ ರಾಜಕೀಯ ಬೆಳವಣಿಗೆಗಳು ತಾರ್ಕಿಕ ಅಂತ್ಯವನ್ನು ತಲುಪುತ್ತವೆ. ಆಡಳಿತ ಪಕ್ಷದಲ್ಲಿರುವವರೇ ಇದರ…

Read More

ಪದ್ಮವಿಭೂಷಣ ಡಾ. ಗಂಗೂಬಾಯಿ ಹಾನಗಲ್ ಜನಿಸಿದ ಮನೆ ಜೀರ್ಣೋದ್ಧಾರಕ್ಕಾಗಿ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದೂಸ್ತಾನಿ ಸಂಗೀತದ ಮೇರು ಗಾಯಕರಾದ ಪದ್ಮವಿಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರು ಜನಿಸಿದ ಮನೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡುವಂತೆ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.ಡಾ.ಗಂಗೂಬಾಯಿ ಹಾನಗಲ್ ಅವರ ಗೌರವಾರ್ಥವಾಗಿ ಧಾರವಾಡ ನಗರದಲ್ಲಿ ನಿರ್ಮಾಣವಾಗಿದ್ದ ಸ್ಮಾರಕ, ಗಂಗೋತ್ರಿ ಹೆಸರಿನ ವಸ್ತು ಸಂಗ್ರಹಾಲಯ ಹಾಗೂ ಸಂಗೀತ ಶಾಲೆ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಸದರಿ ಸ್ಮಾರಕ ಕಟ್ಟಡವು ಹತ್ತೇ ವರ್ಷದಲ್ಲಿ ಪಾಳು ಬಿದ್ದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಸಡ್ಡೆಗೆ ಹಿಡಿದ ಕೈಗನ್ನಡಿ.ಸಂಗೀತ ಕ್ಷೇತ್ರದ ಬೆಳವಣಿಗೆಗೆ ತಮ್ಮ ಜೀವನದುದ್ದಕ್ಕೂ ಸೇವೆಯನ್ನು ಸಲ್ಲಿಸಿ, ನಮ್ಮ ನಾಡು ಹಾಗೂ ದೇಶದ ಕೀರ್ತಿಯನ್ನು ವಿಶ್ವವ್ಯಾಪಿ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗೂಬಾಯಿ ಅವರು ಜನಿಸಿದ ಮನೆಯನ್ನು ಸಂಪೂರ್ಣವಾಗಿ ನವೀಕರಿಸಿ ಅವರಿಗೆ ಗೌರವ ಸಲ್ಲಿಸಬೇಕಾದದ್ದು ಸರ್ಕಾರದ ಕರ್ತವ್ಯ. ಅವರು ಜನಿಸಿದ ಮನೆಯ ಜಾಗದಲ್ಲಿ ಸರ್ಕಾರ…

Read More

ರೈತಸಂಘ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅಗ್ರಹ ಉದಯರಶ್ಮಿ ದಿನಪತ್ರಿಕೆ ತಾಳಿಕೋಟಿ: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಹಾಗೆ ಬಹು ವಾರ್ಷಿಕ ಬೆಳೆಗಳಿಗೆ 2ಲಕ್ಷ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅಗ್ರಹ ಮಾಡಿದರುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಳಿಕೋಟಿ ತಾಲೂಕು ದಂಡಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ…

Read More

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು.ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿದ ನರ್ಸಿಂಗ್ ಕಾಲೇಜು ಹಾಗೂ ಮನೋಜ್ಯೋತಿ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ವಿಜೇತರರು ಹಾಗೂ ಹಿರಿಯ ಮನೋರೋಗ ತಜ್ಞ ಡಾ|| ಸಿ.ಆರ್. ಚಂದ್ರಶೇಖರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದಲ್ಲಿ ೨೦೨೫-೨೬ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಜುಲೈ ಆವೃತ್ತಿಯ ಪ್ರವೇಶಾತಿ ಆರಂಭಗೊಂಡಿದ್ದು, ಆಸಕ್ತರು ಅಕ್ಟೋಬರ್ ೧೫ರೊಳಗಾಗಿ www.ksoumysuru.ac.inವೆಬ್‌ಸೈಟ್ ಅಥವಾ ಪ್ರಾದೇಶಿಕ ಕಚೇರಿಗೆ ನೇರವಾಗಿ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದಾಗಿದೆ.ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಎಸ್ಸಿ(ಐ.ಟಿ), ಬಿ.ಎಸ್ಸಿ (೧೪ ಕಾಂಬಿನೇಷನ್ಸ್), ಬಿಎಸ್‌ಡಬ್ಲೂö್ಯ, ಬಿ.ಎಲ್.ಐ.ಎಸ್ಸಿ, ಎಂ.ಎ (೧೪ ವಿಷಯಗಳಲ್ಲಿ), ಎಂ.ಕಾA, ಎಂ.ಬಿ.ಎ (೮ ಕಾಂಬಿನೇಷನ್ಸ್), ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ (೧೭ ವಿಷಯಗಳಲ್ಲಿ), ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಪಿ.ಜಿ ಸರ್ಟಿಫಿಕೇಟ್ ಪ್ರೋಗ್ರಾಮ್ಸ್, ಡಿಪ್ಲೊಮಾ ಪ್ರೋಗ್ರಾಮ್ಸ್ ಹಾಗೂ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಜಯಪುರ ನಗರದ ನ್ಯಾಟಲೈಟ್ ಬಸ್ ನಿಲ್ದಾಣದ ಹತ್ತಿರ ಅಂಬಾ ಭವಾನಿ ದೇವಸ್ಥಾನದ ಎದುರಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಅಥವಾ ಮೊಬೈಲ್ ಸಂಖ್ಯೆ ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಹಾಗೂ ೯೧೧೦೨೫೬೭೩೮ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More