Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿ.ಎಲ್.ಡಿ.ಇ ಅಸೋಸಿಯೇಶನ್ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಹಾಸ್ಪಿಟಲ್ ಮತ್ತು ರಿಸರ್ಚ ಸೆಂಟರ್ ಹಾಗೂ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರವನ್ನು ಬಿ.ಎಲ್.ಡಿ.ಇ ಅಸೋಸಿಯೇಶನ್ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ವಾಗ್ಭಟ ಸಭಾಂಗಣದಲ್ಲಿ ಅಕ್ಟೋಬರ್ ೧೫ರಂದು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦.೩೦ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್…
ಹಾಸ್ಟೆಲ್ ಮೆಂಟರ್-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಹಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ರವರಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ. ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆಯಲು ತಮ್ಮ ಕುಟುಂಬದಿಂದ ದೂರವಾಗಿರುತ್ತಾರೆ. ವಾರಕ್ಕೊಮ್ಮೆಯಾದರೂ ಒಂದು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಓತಿಹಾಳ ಗ್ರಾಮಕ್ಕೆ ಸಂಬಂಧಿಸಿದ ಹಳ್ಳದ ನೀರು ಎಸ್‌ಸಿ/ಎಸ್‌ಟಿ ಕಾಲೋನಿಗೆ ನುಗ್ಗಿ ಅಲ್ಲಿ ವಾಸಿಸುವ ಜನರ ಜೀವನ ಅಸ್ತವ್ಯಸ್ಥಗೊಂಡಿದ್ದು, ಮಕ್ಕಳಿಗೆ, ವಯಸ್ಕರಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದ್ದು, ಈ ವಿಷಯವಾಗಿ ಸುಮಾರು ವರ್ಷಗಳಿಂದ ಗ್ರಾಮ ಪಂಚಾಯತ್ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ ಎಂದು ಗ್ರಾಮಸ್ಥರು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಲ್ಲಿ ತಮ್ಮ ಅಳಲನ್ನು ತೊಡಿಕೊಂಡರು.ಸಿಂದಗಿ ತಾಲೂಕಿನ ಓತಿಹಾಳ ಗ್ರಾಮದ ಹಳ್ಳಕ್ಕೆ ಸಮೀಪವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಅಕಾಲಿಕ ಮಳೆಯಿಂದ ಜಮೀನು ಮತ್ತು ಹಳ್ಳಕ್ಕೆ ಬಂದ ನೀರು ಇದ್ದಕ್ಕಿದ್ದಂತೆ ಅಲ್ಲಿನ ನಿವಾಸಿಗಳ ಮನೆಗಳಿಗೆ ನುಗ್ಗಿ ತಿರುಗಾಡಲು ಬಾರದೆ ಅಸ್ತವ್ಯಸ್ಥವಾಗಿರುವ ಕಾರಣ ಸಿಂದಗಿ ತಹಶೀಲ್ದಾರ್ ಕಚೇರಿಗೆ ಗ್ರಾಮಸ್ಥರು ಏಕಾಏಕಿ ಬಂದು ಪ್ರತಿಭಟಿಸಿದ ಘಟನೆ ನಡೆದಿದೆ.ಗ್ರಾಮಕ್ಕೆ ಸಂಬಂಧಿಸಿದ ಹಳ್ಳದ ನೀರು ಎಸ್‌ಸಿ/ಎಸ್‌ಟಿ ಕಾಲೋನಿಗೆ ನುಗ್ಗಿ ಅಲ್ಲಿ ವಾಸಿಸುವ ಜನರ ಜೀವನ ಅಸ್ತವ್ಯಸ್ಥಗೊಂಡಿದ್ದು, ಮಕ್ಕಳಿಗೆ, ವಯಸ್ಕರಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದ್ದು, ಈ ವಿಷಯವಾಗಿ ಸುಮಾರು…
ಅವ್ಯವಸ್ಥೆಯ ಆಗರವಾದ ವಸತಿ ನಿಲಯ | ಕುಡುಕರ ಅಡ್ಡೆಯಾಗಿ ಪರಿವರ್ತನೆ ಉದಯರಶ್ಮಿ ದಿನಪತ್ರಿಕೆ ವರದಿ: ರಶ್ಮಿ ಮಹಾಂತೇಶ ನೂಲಾನವರಸಿಂದಗಿ: ನಗರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲಾಗಿದೆ. ಈ ವಸತಿ ನಿಲಯ ಪೂರ್ಣಗೊಂಡು ಅನೇಕ ವರ್ಷಗಳೇ ಗತಿಸಿದ್ದು, ಇಲ್ಲಿಯವರೆಗೂ ಈ ವಸತಿ ನಿಲಯದ ಕಟ್ಟಡ ವಿದ್ಯಾರ್ಥಿಗಳಿಗೆ ಬಳಕೆಯಾಗಿಲ್ಲದಿರುವುದು ವಿಪರ್ಯಾಸ. ಹೀಗಾಗಿ ಈ ಕಟ್ಟಡ ಇದ್ದು ಇಲ್ಲದಂತಾಗಿದೆ. ಹಲವು ವರ್ಷಗಳಿಗೆ ಬಳಕೆಯಾಗದ ಕಟ್ಟಡ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಿರ್ಮಿಸಲಾದ ಈ ಕಟ್ಟಡ ಉದ್ಘಾಟನೆಗೊಳ್ಳದೆ ಪಾಳು ಬಿದ್ದ ಕಾರಣ ಬಾಗಿಲು, ಕಿಟಕಿಗಳನ್ನು ಕಿಡಕೇಡಿಗಳು ಒಡೆದು ಹಾಕುತ್ತಿದ್ದಾರೆ. ತಿಂಗಳಿಗೆ ಬಾಡಿಗೆ ರೂಪದಲ್ಲಿ ಮಕ್ಕಳಿಗೆ ಹಣವನ್ನು ಸರಕಾರ ಬರಿಸುತ್ತದೆ. ಆದರೆ ಇಷ್ಟು ಸುಂದರವಾದ ಕಟ್ಟಡವನ್ನು ನಿರ್ಮಿಸಿ, ಉದ್ಘಾಟನೆಗೊಳಿಸದೆ, ಬಳಸಿಕೊಳ್ಳದೆ ಸಮಾಜ ಕಲ್ಯಾಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವುದು ಖೇದಕರ ಸಂಗತಿ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಅನೈತಿಕ ಚಟುವಟಿಕೆಯ ಅಡ್ಡೆ: ಸರಕಾರ ಮಕ್ಕಳ…
ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನೆ | ಪೂರ್ವಭಾವಿ ಸಭೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಇದೇ ದಿ: ೧೩ ರಂದು ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಟನಾ ಮೆರವಣಿಗೆಯ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಸಮಾನ ಮನಸ್ಕರ ಒಕ್ಕೂಟ ಸದಸ್ಯರು ಪಾಲ್ಗೊಂಡರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜರುಗಿದ ಸಭೆಯಲ್ಲಿ ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಲಾಯಿತು.ಜೊತೆಗೆ ಇದೇ ದಿ: ೧೩ ರಂದು ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದಿಂದ ಡಾ.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಳ್ಳುವ ಕುರಿತು ಚರ್ಚಿಸಿ, ನಿರ್ಧರಿಸಲಾಯಿತು.ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ಮುನೀರ್ ಅಹ್ಮದ್ ಮಳಖೇಡ, ಚಂದ್ರಶೇಖರ ಕಡಕೋಳ, ರಾಜಕುಮಾರ ಸಿಂದಗೇರಿ, ರಮೇಶ ದಳವಾಯಿ, ಹುಯೋಗಿ ತಳ್ಳೋಳ್ಳಿ, ಸುನೀಲ ಮಾಗಿ, ಗುರುನಾಥ ಮುರುಡಿ, ಸರಿತಾ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ರಾವುತರಾಯ ಮಲ್ಲಯ್ಯ ಜಾತ್ರಾ ಮಹೋತ್ಸವಕ್ಕೆ ತುಂಬು ಸಹಕಾರ ನೀಡಿ ಯಶಸ್ವಿಗೊಳಿಸಿದ ಕಮಿಟಿ ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಹೇಳಿದರು.ಪಟ್ಟಣದ ಮಲ್ಲಯ್ಯ ದೇವಸ್ಥಾನದ ಆವರಣದಲ್ಲಿ ಉದ್ದಿಮೆದಾರರಾದ ಕಾಶೀನಾಥ ಸಾಲಕ್ಕಿ ಹಾಗೂ ಕೆ.ಎಸ್.ಕೋರಿ ಹಮ್ಮಿಕೊಂಡ ಜಾತ್ರಾ ಕಮಿಟಿ ಸದಸ್ಯರ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.ದೇವಸ್ಥಾನದ ಅಭಿವೃದ್ಧಿ ಸಹಿತ ಜಾತ್ರೆಯ ಅಂಗವಾಗಿ ಯೋಜನೆ ರೂಪಿಸಿ ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಯಶಸ್ವಿಗೊಳಿಸಿದ ಸಮಿತಿಯ ಕಾರ್ಯವನ್ನು ಗುರುತಿಸಿ ಅಭಿನಂದಿಸುತ್ತಿರುವುದು ಉತ್ತಮ ಕಾರ್ಯ ಎಂದರು.ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗುರುರಾಜ ಕುಲಕರ್ಣಿ ಹಾಗೂ ಸನ್ಮಾನಿತರಾದ ಕಮಿಟಿಯ ಖಜಾಂಚಿ ಕಾಶೀನಾಥ ತಳಕೇರಿ, ಸದಸ್ಯ ಪ್ರಕಾಶ ಮಲ್ಲಾರಿ,ಉಪಾಧ್ಯಕ್ಷ ಶ್ರೀಧರ ನಾಡಗೌಡ ಅಧ್ಯಕ್ಷ ವಿನೋದಗೌಡ ಪಾಟೀಲ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಮಿಟಿಯ ೨೮ ಜನ ಸದಸ್ಯರನ್ನು ಸನ್ಮಾನಿಸಲಾಯಿತು.ಪಿಎಸ್‌ಐ ಸಚೀನ ಆಲಮೇಲಕರ, ಕಾಸುಗೌಡ ಬಿರಾದಾರ(ಜಲಕತ್ತಿ), ಪಿ.ಎಸ್.ಮಿಂಚನಾಳ, ಬಾಬುಗೌಡ…
ಕಾನಿಪ ಸಂಘದ ಚುನಾವಣೆ 2025-2028 | ಅಂದೇ ಫಲಿತಾಂಶ ಪ್ರಕಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka union of working journalists)” ದ 2025-28 ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸುಮಾರು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ.ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ.ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅತಿವೃಷ್ಠಿಯಿಂದ ಹಾಗೂ ಭೀಮಾನದಿ ಪ್ರವಾಹದಿಂದ ಇಂಡಿ ತಾಲೂಕಿನ ಎಲ್ಲ ರೈತರ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣ ಹಾಳಾಗಿದ್ದು ಕೂಡಲೆ ಸರಕಾರ ೧ ಎಕರೆ ಕೃಷಿ ಇಲಾಖಾ ಬೆಳೆಗೆ ೨೫ ಸಾವಿರ ಹಾಗೂ ತೋಟಗಾರಿಕೆ ಇಲಾಖೆ ಬೆಳೆಗೆ ೫೦ ಸಾವಿರ ರೂಪಾಯಿ ನಿಗದಿ ಮಾಡಿ ಸಮಯ ವ್ಯರ್ಥ ಮಾಡದೆ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಬೇಕೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ (ಡೋಮನಾಳ) ಆಗ್ರಹಿಸಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸರ್ವೇ ಮಾಡಿಸುತ್ತಿರುವುದಾಗಿ ಪರಿಹಾರ ವಿಳಂಬ ಮಾಡುತ್ತಿದೆ. ಈಗಾಗಲೆ ರೈತರ ಪಹಣಿಯಲ್ಲಿ ಯಾವ ಬೆಳೆ ಇದೆ ಎಂಬ ಬಗ್ಗೆ ಉಲ್ಲೇಖವಿದೆ. ಆ ಪಹಣಿಯಲ್ಲಿನ ಬೆಳೆ ಅನ್ವಯ ಪರಿಹಾರ ನೀಡಬೇಕು. ರೈತರು ಸಂಪೂರ್ಣ ಸಂಕಷ್ಟದಲ್ಲಿದ್ದು ನೀವು ಈಗ ನಿಗದಿ ಮಾಡಿರುವ ಪರಿಹಾರ ರೈತರಿಗೆ ತೃಪ್ತಿ ತರುತ್ತಿಲ್ಲ. ಕೂಡಲೆ ಇನ್ನಷ್ಟು ಹೆಚ್ಚಿನ ಪರಿಹಾರ ನಿಗದಿ ಮಾಡಿ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.ಗ್ರಾಮೀಣ ಭಾಗದಲ್ಲಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಬಳ್ಳೊಳ್ಳಿ ಗ್ರಾಮದಲ್ಲಿ ಇಂದು ಅ. ೧೧ ರಂದು ಸಂಜೆ ೫ ಗಂಟೆಗೆ ಶ್ರೀ ಗೋಸಾಯಿ ಮಹಾ ಸಂಸ್ಥಾನಮಠ ಬೆಂಗಳೂರಿನ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಭಾರತಿ ಶ್ರೀ ಇವರಿಂದ ಆದ್ಯಾತ್ಮಿಕ ಪ್ರವಚನ ಮತ್ತು ಸಂಗೀತ ಕಾರ್ಯಕ್ರಮ ಗ್ರಾಮದ ಅಂಬಾಭವಾನಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಉದ್ದಿಮೆದಾರ ವಿಜಯಕುಮಾರ ಭೋಸಲೆ ತಿಳಿಸಿದ್ದಾರೆ.ಶ್ರೀ ಗಳು ಹೆಚ್ಚಿನ ಅಭ್ಯಾಸಕ್ಕಾಗಿ ಕಾಶಿಯಲ್ಲಿ ಸಂಸ್ಕೃತ ಮತ್ತು ಸಂಗೀತ ವಿಷಯದಲ್ಲಿ ಬಂಗಾರದ ಪದಕ ಪಡೆದಿದ್ದಾರೆ. ಆಧ್ಯಾತ್ಮ ಸಾದನೆಗಾಗಿ ಗೃಹ ಪರಿತ್ಯಾಗ , ಕರ್ನಾಟಕ ಪ್ರವಾಸದ ಸಮಯದಲ್ಲಿ ಪೂಜ್ಯರುಗಳ ಮಾರ್ಗಧರ್ಶನ,ಸಂಗೀತ ಸಾಧನೆ, ಸರಸ್ವತಿ ಮಾತೆಯ ವಿಶೇಷ ಉಪಾಸಣೆ ಮಾಡಿದ್ದು ಆದ್ಯಾತ್ಮಿಕ ಪ್ರಚವನ ನೀಡುವಲ್ಲಿ ಖ್ಯಾತಿ ಹೊಂದಿದ್ದಾರೆ.ನವರಾತ್ರಿಯ ನಂತರ ತುಳಜಾಪುರದಲ್ಲಿ ಹುಣ್ಣಿಮೆ ಕಾರ್ಯಕ್ರಮ ನಂತರ ಬಳ್ಳೊಳ್ಳಿ ಗ್ರಾಮದಲ್ಲಿ ಅಂಬಾಭವಾನಿ ಮಾತೆಯ ಕುರಿತು ಆದ್ಯಾತ್ಮಿಕ ಪ್ರವಚನ ನೀಡಲಿದ್ದಾರೆ .ಗೋ ಪೂಜೆ, ಗುರು ದೀಕ್ಷೆ, ಜ್ಞಾನೇಶ್ವರಿ ಪಾರಾಯಣ, ಶ್ರೀಮದ ಭಗವತ್ ಗೀತಾ ಪಾರಾಯಣ, ಭಜನೆ ಸಭಾ ಕಾರ್ಯಕ್ರಮ, ಶ್ರೀಗಳ ಪಾದಪೂಜೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಾಗ್ಯಲಕ್ಷ್ಮಿ ಯೋಜನೆಡಿಯಲ್ಲಿ ಬರುವ ಸನ್ 2006/07ನೇ ಸಾಲಿನಲ್ಲಿ ಜನಸಿದ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ಫಲಾನುಭವಿಗಳು ಅಕ್ಟೋಬರ್ 30ರ ಒಳಗೆ ಸಂಬಂಧಿಸಿದ ದಾಖಲಾತಿಗಳನ್ನು ಸಿಂದಗಿ ತಾಲೂಕ ಶಿಶು ಅಭಿವೃಧ್ಧಿ ಯೋಜನಾಧಿಕಾಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಪರಿಗಣಿಸುವದಿಲ್ಲ ಎಂದು ಸಿಂದಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿಲ ಕೆ ಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
