Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಜುಲೈನಿಂದ ಸುರಿದ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ಇದರಿಂದ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಬಹುತೇಕ ಭರ್ತಿಯಾಗಿದೆ.ಜಲಾಶಯ ಭರ್ತಿಯ ಹಂತ ತಲುಪಿದ್ದರೂ ಕೃಷ್ಣಾ ನದಿಗೆ ಸಾಂಪ್ರದಾಯಿಕವಾಗಿ ಸಲ್ಲಿಸುವ ಬಾಗಿನ ಅರ್ಪಣೆ ಮಾತ್ರ ಇನ್ನೂ ನಡೆದಿಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಆಲಮಟ್ಟಿಗೆ ಆಗಮಿಸಿ ಕೃಷ್ಣೆಗೆ ಬಾಗಿನ ಅರ್ಪಿಸಬೇಕು ಎಂಬ ಒತ್ತಾಯ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬಲವಾಗಿ ಕೇಳಿಬರುತ್ತಿದೆ.”ಕಾವೇರಿಗೆ ಸಿಗುವಷ್ಟೇ ಗೌರವ ಕೃಷ್ಣೆಗೂ ಸಿಗಲಿ”ಕೃಷ್ಣಾ ನದಿ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಲಕ್ಷಾಂತರ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ನೀಡುತ್ತಿದೆ. ಪ್ರತಿ ವರ್ಷ ಜಲಾಶಯ ಭರ್ತಿಯಾದಾಗ ಬಾಗಿನ ಅರ್ಪಿಸುವ ಪರಂಪರೆ ಇದೆ. ೨೦೦೨ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಈ ಪರಂಪರೆ ಆರಂಭಿಸಿದ್ದರು.ಆದರೆ ಕಾವೇರಿ ಜಲಾಶಯಗಳಿಗೆ ನೀಡುವಷ್ಟರ ಮಟ್ಟಿನ ಮಹತ್ವವನ್ನು ಕೃಷ್ಣಾ ನದಿಗೆ…

Read More

ಮುದ್ದೇಬಿಹಾಳ ನ್ಯಾಯಾಲಯದಲ್ಲಿ ಸಂಭ್ರಮದ ಸ್ವಾತಂತ್ರ‍್ಯ ದಿನಾಚರಣೆ | ನ್ಯಾ.ಕೌಶಿಕ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸ್ವಾತಂತ್ರ‍್ಯದ ನಿಜವಾದ ಅರ್ಥವನ್ನು ಅರಿತು, ದೇಶದ ಕಾನೂನು ಮತ್ತು ಸಂವಿಧಾನದ ಆಶಯಗಳನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ೮೦ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ರಾಷ್ಟçಧ್ವಜಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.ದೇಶಕ್ಕೆ ಸ್ವಾತಂತ್ರ‍್ಯ ದೊರೆತಿರುವುದು ಕೇವಲ ಸಂಭ್ರಮಿಸಲಿಕ್ಕಲ್ಲ. ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಮತ್ತು ದೇಶದ ಸಂವಿಧಾನ ನೀಡಿರುವ ಮೌಲ್ಯಗಳನ್ನು ನೆನಪಿಸಿಕೊಳ್ಳುವ ಜೊತೆಗೆ ಸ್ವಾತಂತ್ರ‍್ಯದ ಮೌಲ್ಯ ಉಳಿಸುವ ಹೊಣೆ ಪ್ರತಿಯೊಬ್ಬ ನಾಗರಿಕನಮೇಲಿದೆ ಎನ್ನುವದನ್ನು ಯಾರೊಬ್ಬರೂ ಮರೆಯಬಾರದು ಎಂದರು.ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್ ಅವರು ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ವಿಶೇಷವಾಗಿ ನ್ಯಾಯಾಂಗ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಭಾರತ ದೇಶದ ೮೦ನೇ ಸ್ವಾತಂತ್ರ‍್ಯೋತ್ಸವವನ್ನು ಸಮೀಪದ ಅರಳದಿನ್ನಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಧರ್ಮದ ಮಠದ ಧರ್ಮಾಧಿಕಾರಿಗಳಾದ ಶ್ರೀ ಚಂದ್ರಶೇಖರ್ ಧರ್ಮರ ಅವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ನಂತರ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಸವರಾಜ್ ಹೆರಕಲ್ ಅವರು ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ದೇಶಭಕ್ತಿ ಕಾರ್ಯಕ್ರಮಗಳುಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಸ್ವಾತಂತ್ರ‍್ಯ ಹೋರಾಟದ ಮಹತ್ವ ಮತ್ತು ದೇಶಭಕ್ತಿಯ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡಿದರು.ಗಣ್ಯರ ಉಪಸ್ಥಿತಿಈ ಕಾರ್ಯಕ್ರಮದಲ್ಲಿ ಗ್ರಾಮದ ಗಣ್ಯರಾದ ರಾಯನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಶಾಂತಪ್ಪ ಹೆರಕಲ್, ಬೊಮ್ಮಯ್ಯ ಹಿರೇಮಠ, ಕರಿಯಪ್ಪ ಭಾವಿಕಟ್ಟಿ, ಮಲ್ಲನಗೌಡ ಬಿರಾದಾರ, ಸುಬಾಸ ಚೋಪಡೆ, ಹಣಮಂತ ಕೊಳ್ಳಾರ, ಯಲಗೂರದಪ್ಪ ಟುಬಾಕಿ, ಹಣಮಂತ ಮಾದರ ಸೇರಿದಂತೆ ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಆಯ್ ಶೇಖ್, ನಿಡಗುಂದಿ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷರಾದ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ರಕ್ತದಾನ ಮಾಡುವುದರಿಂದ ಮತ್ತೊಂದು ಜೀವಕ್ಕೆ ಜೀವದಾನ ಮಾಡಿದಂತಾಗುತ್ತದೆ. ಜೀವ ಉಳಿಸುವಲ್ಲಿ ರಕ್ತ ಅತ್ಯಮೂಲ್ಯವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಸುರೇಶ ಚವಲರ ಹೇಳಿದರು.ತಿಕೋಟಾ ಪಟ್ಟಣದ ವಾಡೆ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಯುವಕರಿಂದ ದೇಶ ಸದೃಢವಾಗುತ್ತದೆ. ಯುವಶಕ್ತಿ ಸಮಾಜದ ಅಭಿವೃದ್ಧಿಗೆ ಪ್ರಮುಖವಾದುದು. ರಕ್ತದಾನ ಮಾಡುವ ಮೂಲಕ ಯುವಕರು ಮಾನವೀಯ ಸೇವೆಯ ಜೊತೆಗೆ ಮತ್ತೊಂದು ಕುಟುಂಬದ ಬದುಕಿಗೆ ಆಸರೆಯಾಗಬಹುದು ಎಂದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಘು ನಡುವಿನಮನಿ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಭಾಗವಹಿಸಿ, ಯುವಕರಿಗೆ ಮಾದರಿಯಾದರು. ಅವರ ಸೇವೆಯನ್ನು ಗಣ್ಯರು ಶ್ಲಾಘಿಸಿದರು.ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಗುರುಪಾದ ದಾಸ್ಯಾಳ ಮಾತನಾಡಿ ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ…

Read More

ಕೆಬಿಜೆಎನ್‌ಎಲ್‌ ಎಂ.ಡಿ ಕೃಷ್ಣಮೂರ್ತಿ ಕುಲಕರ್ಣಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸ್ವಾತಂತ್ರ‍್ಯದ ನಂತರ ಪ್ರಗತಿಯ ಹಾದಿಯಲ್ಲಿ ಸಾಗಿದ ಭಾರತದ ಅಭಿವೃದ್ಧಿಗೆ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕೊಡುಗೆಯೂ ಸೇರಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಹೇಳಿದರು.ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ ೭೯ನೇ ಸ್ವಾತಂತ್ರ‍್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.”ಯುಕೆಪಿ ಈ ಭಾಗದ ಜೀವನಾಡಿ”ಯುಕೆಪಿ ಈ ಭಾಗದ ಲಕ್ಷಾಂತರ ಜನರ ಜೀವನಾಡಿಯಾಗಿದೆ. ಈಗಾಗಲೇ ಯುಕೆಪಿ ಹಂತ-೧ ಮತ್ತು ಹಂತ-೨ ನ್ನು ಯಶಸ್ವಿಯಾಗಿ ನಿರ್ವಹಿಸಿ ೬ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಈಗ ಹಂತ-೩ ರ ಕಾಮಗಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.ಭಾರತ ಕಲೆ, ಸಂಸ್ಕೃತಿ, ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಜಗತ್ತು ಭಾರತವನ್ನು ಎತ್ತರದ ಸ್ಥಾನದಲ್ಲಿ…

Read More

ಕಾಖಂಡಕಿಯಲ್ಲಿ ಶ್ರೀ ಹಣಮಂತ ದೇವರ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಖಂಡಕಿ ಮತ್ತು ಸುತ್ತಮುತ್ತಲಿನ ತಾಣಗಳು ಐತಿಹಾಸಿಕ ಹಿನ್ನೆಲೆಯ ಪುಣ್ಯಭೂಮಿಗಳಾಗಿದ್ದು, ಈ ಕುರಿತು ಹೆಚ್ಚಿನ ಸಂಶೋಧನೆ ನಡೆಸುವುದು ಅಗತ್ಯವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ಶ್ರೀ ಹಣಮಂತ ದೇವರ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಹಣಮಂತ ದೇವರ ನೂತನ ದೇಗುಲ ನಿರ್ಮಾಣಕ್ಕೆ ಈಗಾಗಲೇ ರೂ. 50 ಲಕ್ಷ ವೈಯಕ್ತಿಕ ದೇಣಿಗೆ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಉಳಿದ ರೂ 50 ಲಕ್ಷ ನೆರವು ನೀಡಲಾಗುವುದು. ಒಟ್ಟಾರೆಯಾಗಿ ರೂ. 1 ಕೋಟಿ ದೇಣಿಗೆಯನ್ನು ಈ ಪವಿತ್ರ ಕಾರ್ಯಕ್ಕೆ ಸಮರ್ಪಿಸುತ್ತಿರುವುದು ತೃಪ್ತಿ ತಂದಿದೆ. ಭಕ್ತಿ, ಶ್ರದ್ಧೆ, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿರುವ ಈ ಪವಿತ್ರ ದೇವಾಲಯದ ನಿರ್ಮಾಣ ಕಾಮಗಾರಿಯು ಗುಣಮಟ್ಟದಿಂದ, ಶೀಘ್ರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಇಟ್ಟಂಗಿಹಾಳ ರಸ್ತೆಯ ವೈಭವ ನಗರ (ಫೇಜ್ ೨) ಕೆ.ಎಚ್.ಬಿ. ಕಾಲನಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಅವರನ್ನು ಕಂಡು ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಬಡಾವಣೆ ನಿವಾಸಿಗಳು, ವೈಭವ ನಗರ (ಫೇಜ್ ೨)ದಲ್ಲಿ ಬೀದಿ ದೀಪಗಳಲ್ಲದೆ ಅಲ್ಲಲ್ಲಿ ಹೈಮಾಸ್ಕ್ ದೀಪಗಳನ್ನು ಅಳವಡಿಸಬೇಕು. ನಗರ ಸಾರಿಗೆ ಬಸ್ ನಿಲ್ದಾಣ ಮತ್ತು ಮಕ್ಕಳಿಗೆ ಆಟದ ಮೈದಾನ ನಿರ್ಮಿಸಬೇಕು. ವಿದ್ಯುತ್ ಪರಿವರ್ತಕಗಳನ್ನು ಚಾರ್ಜ್ ಮಾಡಿಸುವುದು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಒತ್ತಾಯಿಸಿದರು.ಈ ವೇಳೆ ಉದ್ಯಮಿ ಚಂದ್ರಕಾಂತ ಮ ಬಿರಾದಾರ, ಲವ ಎಂ ಚವಾಣ್, ಅರವಿಂದ ಲಂಬು, ಬಸವರಾಜ ಶಾರದಳ್ಳಿ, ಶ್ರೀಮಂತ ಪತ್ತಾರ, ಎಂ ಬಿ ಹತ್ತಿ, ಅಶೋಕ ಮಂಗಸೂಳಿ ಸೇರಿದಂತೆ ಇನ್ನಿತರರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ನಾಗರ ಪಂಚಮಿ ಅಂಗವಾಗಿ ಶೀಗಣಾಪುರ ಗ್ರಾಮದಲ್ಲಿ ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಜೀವಂತ ನಾಗರಹಾವು ಪ್ರತ್ಯಕ್ಷವಾಗಿ ದರ್ಶನ ನೀಡಿದ ಘಟನೆ ಭಕ್ತರಲ್ಲಿ ಕುತೂಹಲ ಹಾಗೂ ಭಕ್ತಿಭಾವ ಮೂಡಿಸಿದೆ.ಗ್ರಾಮದ ಸಮಸ್ತ ತಾಯಂದಿರು ತಮ್ಮ ಕೈಯಿಂದ ತಯಾರಿಸಿದ ನಾಗರ ಹಾವಿನ ಮೂರ್ತಿಗಳಿಗೆ ಹಾಲು ಎರೆಯಲು ತೆರಳಿದ್ದರು. ಈ ವೇಳೆ ಶ್ರೀ ಲಕ್ಷ್ಮೀ ತಾಯಿ ಹಾಗೂ ಪವಾಡ ಪುರುಷ ಶ್ರೀ ರುದ್ರಮಹಾಯೋಗಿಗಳ ಆವರಣದಲ್ಲಿ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಜೀವಂತ ನಾಗರಹಾವು ಪ್ರತ್ಯಕ್ಷವಾಗಿದೆ ಎಂದು ಭಕ್ತರು ತಿಳಿಸಿದ್ದಾರೆ.ಭಕ್ತರು ನಾಗದೇವರ ಮೂರ್ತಿಗೆ ಹಾಲು ಎರೆಯುತ್ತಿದ್ದ ವೇಳೆ ಸಮೀಪದಲ್ಲೇ ನಾಗರಹಾವು ಕಾಣಿಸಿಕೊಂಡಿದ್ದು, ಕೆಲಕಾಲ ಅಲ್ಲಿಯೇ ಇದ್ದು ಬಳಿಕ ತೆರಳಿದೆ ಎನ್ನಲಾಗಿದೆ. ಇದನ್ನು ಕಂಡ ಭಕ್ತರು ನಾಗರಾಜನೇ ಪ್ರತ್ಯಕ್ಷವಾಗಿ ದರ್ಶನ ನೀಡಿದ್ದಾನೆ ಎಂಬ ಭಾವನೆಯೊಂದಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರಾವಣ ಮಾಸದಲ್ಲಿ ಬರುವ ಪ್ರಮುಖ ಹಬ್ಬಗಳಲ್ಲಿ ನಾಗರ ಪಂಚಮಿ ವಿಶೇಷ ಸ್ಥಾನ ಪಡೆದಿದ್ದು, ಜಿಲ್ಲಾದ್ಯಂತ ಸೋಮವಾರ ನಾಗದೇವತೆಗೆ ಭಕ್ತಿಭಾವದಿಂದ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ನಾಗರ ಪಂಚಮಿ ಹಬ್ಬವು ಪ್ರಕೃತಿ, ನಾಗಾರಾಧನೆ ಹಾಗೂ ಕುಟುಂಬ ಬಾಂಧವ್ಯದ ಸಂಕೇತವಾಗಿದೆ. ವಿಶೇಷವಾಗಿ ಮಹಿಳೆಯರು ಕುಟುಂಬದ ಸದಸ್ಯರ, ಸಹೋದರರ ಆರೋಗ್ಯ, ಆಯುಷ್ಯ, ಸುಖ ಸಮೃದ್ಧಿ ಹಾಗೂ ಯಶಸ್ಸಿಗಾಗಿ ನಾಗದೇವತೆಯನ್ನು ಪೂಜಿಸಿ ಪ್ರಾರ್ಥಿಸಿದರು.ಮಕ್ಕಳು ಹಾಗೂ ಮಹಿಳೆಯರು ಹೊಸ ಬಟ್ಟೆ ಧರಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೆಳಗ್ಗೆಯಿಂದಲೇ ನಾಗದೇವರ ದೇವಸ್ಥಾನ ಹಾಗೂ ಕಲ್ಲಿನಿಂದ ಕೆತ್ತಿದ ನಾಗದೇವರ ಮೂರ್ತಿಗಳ ಬಳಿ ಮಹಿಳೆಯರು ಸಾಲುಗಟ್ಟಿ ಪೂಜೆ ಸಲ್ಲಿಸಿದರು. ನಾಗದೇವತೆಗೆ ಹಾಲು, ತುಪ್ಪ, ಅರಿಶಿಣ, ಕುಂಕುಮ, ಹೂವು, ಹಣ್ಣು ಹಾಗೂ ವಿವಿಧ ಬಗೆಯ ನೈವೇದ್ಯ ಅರ್ಪಿಸಿ ಭಕ್ತಿಯಿಂದ ಪ್ರಾರ್ಥಿಸಿದರು. ಕಡುಬು ಸೇರಿದಂತೆ ಹಬ್ಬದ ವಿಶೇಷ ಖಾದ್ಯಗಳನ್ನು ನೈವೇದ್ಯವಾಗಿ ಅರ್ಪಿಸಲಾಯಿತು.ಗ್ರಾಮೀಣ ಭಾಗದಲ್ಲಿ ನಾಗರ ಪಂಚಮಿ ಹಬ್ಬಕ್ಕೆ ವಿಶೇಷ ಸಾಂಪ್ರದಾಯಿಕ ಮೆರುಗು ಕಂಡುಬಂತು. ಮನೆಗಳಲ್ಲಿಯೂ ಹಿಟ್ಟಿನಿಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಎ.ಬಿ.ವಿ. (ಸಿ.ಬಿ.ಎಸ್.ಇ.) ಶಾಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಸಾಂಪ್ರದಾಯಿಕ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಆಚರಣೆಗಳ ಮಹತ್ವವನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಪರಿಚಯಿಸುವ ಉದ್ದೇಶದಿಂದ ಶಾಲೆಯಲ್ಲಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಆಚರಣೆ ನೆರವೇರಿಸಲಾಯಿತು.ಶಾಲೆಯ ಪ್ರಾಂಶುಪಾಲೆ ಐಶ್ವರ್ಯ ಸಂಗಮ, ಉಪಪ್ರಾಂಶುಪಾಲ ರವಿಕಾಂತ ಮೆಂಡೇಗಾರ ನಾಗರ ಪಂಚಮಿ ಹಬ್ಬದ ಮಹತ್ವವನ್ನು ತಿಳಿಸಿದರು.

Read More