Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಣ, ತಂತ್ರಜ್ಞಾನ, ಸಂಸ್ಕೃತಿಯನ್ನು ಸಂಯೋಜಿಸುವ ಒಂದು ವಿಶಿಷ್ಠ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿ ವೈಜ್ಞಾನಿಕ ಆಸಕ್ತಿ, ನಾವೀನ್ಯತೆ ಮತ್ತು ಸ್ಥಳೀಯ ಸಂಪ್ರದಾಯಗಳ ಅರಿವನ್ನು ಬೆಳೆಸುತ್ತದೆ ಎಂದು ಶಿಕ್ಷಕ ಸಿದ್ಧಲಿಂಗ ಚೌಧರಿ ಹೇಳಿದರು.ಸಿಂದಗಿ ಪಟ್ಟಣದ ವಿಜಯಪುರ ರಸ್ತೆಯ ಚಿಕ್ಕಸಿಂದಗಿ ಬಳಿ ಇರುವ ಶಿವಕಾಶಿ ಮಹಿಳಾ ಸಂಘದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಹಳ್ಳಿ ಹಬ್ಬ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಪೋಷಕರ ಮತ್ತು ಶಾಲೆಗಳ ಆದ್ಯ ಕರ್ತವ್ಯ. ಜ್ಞಾನ ಮತ್ತು ತಂತ್ರಜ್ಞಾನದೆಡೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಲ್ಲಿ ಶಾಲೆಯು ಉತ್ತಮ ವಾತಾವರಣ ಪ್ರದರ್ಶಿಸುತ್ತಿದೆ ಎಂದರು.ಈ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಸುಧಾಕರ ಚವ್ಹಾಣ ಮಾತನಾಡಿ, ಇದು ಪಠ್ಯಕ್ರಮದ ಒಂದು ಭಾಗವೇ ಆಗಿದ್ದು, ಮಕ್ಕಳಲ್ಲಿರುವ ಪ್ರತಿಭೆ ಅನಾವರಣ ಮಾಡಲು ಉತ್ತಮ ವೇದಿಕೆ ಎಂದರು.ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪತ್ರಕರ್ತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜ.೦೧ರ ಬೆಳೆಗ್ಗೆ ೧೦ ಗಂಟೆಗೆ ವಿಜಯಪುರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಉದ್ಘಾಟನೆಯನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ನೆರವೇರಿಸಲಿದ್ದು,ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.ನಗರ ಶಾಸಕ ಬಸವನಗೌಡ ಆರ್. ಪಾಟೀಲ ಯತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಜನವರಿ ೨ ರಿಂದ ೫ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜನವರಿ ೧ ರಂದು ಸಂಜೆ ೬:೩೫ಕ್ಕೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು, ಜ.೨ರ ಬೆಳಿಗ್ಗೆ ವಿಜಯಪುರಕ್ಕೆ ಆಗಮಿಸುವ ಅವರು, ಬೆಳಿಗ್ಗೆ ೧೧ ಗಂಟೆಯಿಂದ ಸರ್ಕಾರಿ ಕಚೇರಿಗಳ ಪರಿಶೀಲನೆ ನಡೆಸುವರು.ಅಂದು ಮಧ್ಯಾಹ್ನ ೩ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸರ್ಕಾರಿ ಕಚೇರಿ ಪರಿಶೀಲನೆ ನಡೆಸಲಿದ್ದಾರೆ. ಜ.೩ ಹಾಗೂ ೪ರಂದು ಪರಿಶೀಲನೆ ನಡೆಸುವರು. ಜ.೫ರ ಬೆಳಿಗ್ಗೆ ೭:೩೦ಕ್ಕೆ ಜೇವರ್ಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಗಳಿಬ್ಬರನ್ನು ಗೂಂಡಾ ಕಾಯ್ದೆಯಡಿ ಗೋಲಗುಂಬಜ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಗರದ ಬಡಿಕಮಾನ ರಸ್ತೆಯ ಫರ‍್ಹಾನ್ ಅಹ್ಮದಸಾಹೇಬ ಅಬ್ದುಲ ಅಜೀಜ್ ಅಹಮದಿ ಹಾಗೂ ಯೋಗಾಪೂರ ಕಾಲನಿಯ ಸಿದ್ದಪ್ಪ ಅಲಿಯಾಸ್ ಸಿದ್ದು ಶ್ಯಾಪೇಟಿ ತಂ. ಗುರುಪಾದ ಮೂಡಲಗಿ ಮೂಡಂಗಿ ಎಂಬುವರನ್ನು ಬಂಧಿಸಿದ್ದಾರೆ.ಆರೋಪಿಗಳು ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಅವರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಗೂಂಡಾ ಕಾಯ್ದೆಯಡಿ ಬಂಽಸಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಅವರು 2025 ಡಿ. 23 ರಂದು ಬಂಧನ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರೂ ರೌಡಿಗಳನ್ನು ಬಂಧಿಸಿ ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Read More

ಕೊಲ್ಹಾರ ತಾಲೂಕಿನ ಅರಷಣಗಿ, ಹಣಮಾಪುರ, ರೋಣಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಅರಷಣಗಿ, ಹಣಮಾಪುರ, ರೋಣಿಹಾಳ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಮಂಗಳವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಅರಷಣಗಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಾದ ಕಳೆದ ಮೂರು ವರ್ಷದ ತರಿಗೆ ವಸೂಲಾತಿ, ಸ್ವಚ್ಛ ಭಾರತ ಮಿಷನ್, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕೆ ಭೇಟಿ ಮಾಡಿ, ಅತೀ ತುರ್ತಾಗಿ ಕಾಮಗಾರಿಯನ್ನು ಮುಕ್ತಾಯಗೊಳಿಸಲು ಸೂಚಿಸಿದರು. ಇ-ಕೆವೈಸಿ, ಹೊಸ ಉದ್ಯೋಗ ಚೀಟಿಗಳು ಮತ್ತು ಪ್ರಗತಿ ಪರಿಶೀಲನೆ ನಡೆಸಿದರು.ಹಣಮಾಪುರ ಗ್ರಾಪಂ. ಭೇಟಿ ನೀಡಿ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ವೀಕ್ಷಣೆ ಮಾಡಿ, ರೋಣಿಹಾಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯ, ನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ, ಗೊಧಾಮು, ರಾಜೀವ್ ಗಾಂಧಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾನೂನು-ಸುವ್ಯವಸ್ಥೆ ಕಾಪಾಡಲು ದಿನದ ೨೪ ಗಂಟೆಗಳ ಕಾಲ ಕರ್ತವ್ಯ ಸನ್ನದ್ಧರಾಗುವ ಆರಕ್ಷಕರು ಸಮಾಜದ ಸುರಕ್ಷತೆಯ ಬಹುಮುಖ್ಯ ಅಂಗ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದರು.ವಿಜಯಪುರದ ಸಾಯಿ ಉದ್ಯಾನವನದ ಆವರಣದಲ್ಲಿ ಎ.ಆರ್.ಜೆ. ಗುರುಕುಲ ಅಂತಾರಾಷ್ಟ್ರೀಯ ಶಾಲೆಯ ಹಾಗೂ ಜಿಲ್ಲಾ ಪೋಲಿಸ್ ಇಲಾಖೆ ಸಹಯೋಗದಲ್ಲಿ ದೇಶ ರಕ್ಷಕರಿಗೆ, ಆರಕ್ಷಕರಿಗೆ ಹಾಗೂ ಹಲವಾರು ಸೇವಾ ನಿರತರಿಗೆ ಗೌರವಿಸಲು ಆಯೋಜಿಸಿದ್ದ ಸೆಲ್ಯೂಟ್’ ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರ ಭಾಷೆ ಕಠಿಣವಿರಬಹುದು, ಅಪರಾಧಿಕ ಚಟುವಟಿಕೆಗಳ ವಿರುದ್ಧ ಸೆಣಸಾಟದಲ್ಲಿ ಅಪರಾಧಿಗಳಿಗೆ ಕಠಿಣ ಭಾಷೆಯೇ ಪ್ರಯೋಗಿಸಬೇಕಾಗುತ್ತದೆ, ಆದರೆ ಪೊಲೀಸರು ಜನಸ್ನೇಹಿ. ಈಗ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು. ಈಗ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ, ಪೊಲೀಸರ ಜವಾಬ್ದಾರಿಯೂ ಅಧಿಕವಾಗುತ್ತದೆ, ಗಡಿಯಾರ ನೋಡದೇ ಕೆಲಸ ಮಾಡುವ ಆರಕ್ಷಕರು, ವೀರಯೋಧರನ್ನು ನಾವು ಸದಾ ಗೌರವಿಸುವ ಕಾರ್ಯ ಮಾಡಬೇಕು, ಅವರನ್ನು ಗೌರವಿಸಲು ಅಪೂರ್ವವಾದಸೆಲ್ಯೂಟ್’ ಕಾರ್ಯಕ್ರಮ ಆಯೋಜಿಸಿರುವುದು ಅರ್ಥಪೂರ್ಣ ಎಂದರು.ಲಾಡಲಿ ಫೌಂಡೇಷನ್ ರಾಯಭಾರಿ…

Read More

ಪಂಚಮಸಾಲಿ ಸಮಾಜದ ಮುಖಂಡರಿಂದ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಅನಾವರಣಗೊಳ್ಳಲಿರುವ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯು ಸರ್ಕಾರದ ಯಾವುದೇ ಪ್ರತಿನಿಧಿ ಗಳಿಂದಾಗಲಿಅಥವಾ ಯಾವುದೇ ಸಮಾಜದ ಸ್ವತಂತ್ರ ಹೋರಾಟಗಾರರ ಮೂಲಕ ಉದ್ಘಾಟನೆಗೊಳ್ಳಲಿ ಎಂದು ಪಂಚಮಸಾಲಿ ಸಮಾಜದ ಮುಖಂಡರು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಜಿಲ್ಲೆಯ ಪಂಚಮಸಾಲಿಗರ ಹಾಗೂ ಕೆಲವು ದಾನಿಗಳ ಸಹಕಾರದಿಂದ ಕಿತ್ತೂರು ರಾಣಿ ಚನ್ನಮ್ಮನ ಪ್ರತಿಮೆ ವಿಜಯಪುರ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡಿದೆ. ಇದರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಮಂತ್ರಿಸಿರುವ ಸುದ್ದಿ ಕೇಳಿ ಸಮಾಜ ಬಾಂಧವರಿಗೆ ತುಂಬಾ ನೋವಾಗಿದೆ. ಏಕೆಂದರೆ ಕಳೆದ ಐದು ವರ್ಷಗಳಿಂದ ಪಂಚಮಸಾಲಿ ಬಡ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ನಮ್ಮ ಜಗದ್ಗುರುಗಳ ನೇತೃತ್ವದಲ್ಲಿ ನ್ಯಾಯಸಮ್ಮತ ಹೋರಾಟ ಮಾಡುತ್ತಾ ಬಂದಿದ್ದೇವೆ. ಕಳೆದ ವರ್ಷ ಸಿದ್ದರಾಮಯ್ಯನವರು ಬೆಳಗಾಂವಿಯಲ್ಲಿ ಶಾಂತಿಯುತವಾಗಿ ಸಮಾವೇಶ ಮಾಡುವಾಗನಮ್ಮ ಸಾವಿರಾರು ಹೋರಾಟಗಾರರಮೇಲೆ ಕಾನೂನು ಬಾಹಿರವಾಗಿ ಪೋಲೀಸರ ಮೂಲಕ ಹಲ್ಲೆ ಮಾಡಿಸಿದ್ದಾರೆ. ಅಷ್ಟೇ ಅಲ್ಲ ಇದುವರೆಗೂ ಸಮಾಜದಬೇಡಿಕೆಗೆ ಸ್ಪಂದಿಸುವ ಪ್ರಯತ್ನನೂ…

Read More

ಕನ್ಹೇರಿ ಶ್ರೀ ಹೇಳಿಕೆಗೆ ಅಮರ ಜ್ಞಾನ ಪೀಠ, ಶ್ರೀ ಕೊಡೇಕಲ್ಲ ಬಸವೇಶ್ವರ ಶಾಖ ಮಠ ಚಿಕ್ಕಹೆಸರೂರು ತೀವ್ರ ಖಂಡನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿನ್ನೆ ಬಬಲೇಶ್ವರದಲ್ಲಿ ನಡೆದ ಹಿಂದುತ್ವವಾದಿಗಳ ಸಮ್ಮೇಳನದಲ್ಲಿ ಮಾತನಾಡುತ್ತಾ, ಬಸವಾದಿ ಶರಣರನ್ನು ಹಿಂದೂಗಳೆಂದು, ವೇದಪ್ರಿಯರೆಂದು, ಲಿಂಗಾಯತ ಪ್ರತ್ಯೇಕ ಧರ್ಮ ಪ್ರತಿಪಾದಕರನ್ನು ಬುಡುಬುಡಿಕೆಗಳೆಂದು, ಲಿಂಗಾಯತವನ್ನು ಸಮರ್ಥಿಸುವವರು ಕಾವಿ ವಿಭೂತಿ ರುದ್ರಾಕ್ಷಿ ಹಾಗೂ ಮಠ ತೊರೆದು ಬಿಡಲಿ ಎಂದು ಕರೆ ನೀಡಿದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮಿ ಹೇಳಿಕೆಯನ್ನು ಅಮರ ಜ್ಞಾನ ಪೀಠ, ಶ್ರೀ ಕೊಡೇಕಲ್ಲ ಬಸವೇಶ್ವರ ಶಾಖ ಮಠ ಚಿಕ್ಕಹೆಸರೂರು ತೀವ್ರವಾಗಿ ಖಂಡಿಸಿದೆ.ಈ ಕುರಿತು ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಈ ತಲೆ ತಿರುಕ ಅಸ್ವಾಮಿ ತನ್ನ ವಿಷ ಪೂರಿತ ಹೇಳಿಕೆಯ ಮೂಲಕ ಮಹಾನ್ ಶರಣ ಚಳುವಳಿಗೆ ಮತ್ತದರ ನಾಯಕ ಬಸವಣ್ಣನವರಿಗೆ ಹಾಗೂ ಸಮಸ್ತ ಲಿಂಗಾಯತರಿಗೆ ಮತ್ತು ಲಿಂಗಾಯತ ಮಠಗಳಿಗೆ ಅವಮಾನ ಮಾಡಿದ್ದಾನೆ. ಹಾಗಾಗಿ ರಾಜ್ಯ ಸರ್ಕಾರ, ಕೂಡಲೇ ಈ ಸ್ವಾಮೀಜಿ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ಉದ್ದೇಶದಿಂದ ಏರ್ಪಡಿಸಿದ್ದ ಸಮಾವೇಶ ವಿಫಲಗೊಂಡಿದೆ ಎಂದು ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ತಿಳಿಸಿದ್ದಾರೆ.ಸೋಮವಾರ ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಬಲೇಶ್ವರ ಗುರುಪಾದೇಶ್ವರ ಮಹಾಸ್ವಾಮಿಜಿಗಳು, ಶಾಂತವೀರ ಅಪ್ಪಗಳವರ ಪುಣ್ಯಕ್ಷೇತ್ರವಾಗಿರುವ ಬಬಲೇಶ್ವರದಲ್ಲಿ ಬಸವಾದಿ ಶರಣರ ಆಶಯದಂತೆ ಎಲ್ಲ ಜಾತಿ ಜನಾಂಗದವರು ಶ್ರದ್ಧೆ, ಭಕ್ತಿಯಿಂದ ನಡೆದುಕೊಂಡು ಪ್ರೀತಿಯಿಂದ ಬಾಳುವ ಇವರ ಮಧ್ಯೆ ಧರ್ಮದ ಹೆಸರಿನಲ್ಲಿ ಕಿಡಿ ಹಚ್ಚಿ, ರಾಜಕಾರಣದ ಮೂಲಕ ತಮ್ಮ ಬೆಳೆ ಬೆಯಿಸಲು ಕನ್ಹೇರಿ ಶ್ರೀಗಳು ಮಾಡಿದ ಬಯಲಾಟ ಪ್ರೇಕ್ಷರಿಲ್ಲದೆ ನಿಂತುಹೋಗಿದೆ ಎಂದರು.ಬಿಜೆಪಿಯಿಂದ ಉಚ್ಚಾಟಿತರು, ಪರಾಜೀತ ಅಭ್ಯರ್ಥಿಗಳು, ಟಿಕೆಟ್ ವಂಚಿತರು, ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರು ಒಂದಡೆ ಸೇರಿಸಿ, ಸಮಾವೇಶವನ್ನು ಮಾಡುವ ಮೂಲಕ ಈ ಸ್ವಾಮೀಗಳು ಅಧೀಕೃತವಾಗಿ ಬಿಜೆಪಿ ನಿರಾಶ್ರಿತರ ಗುಂಪಿನಲ್ಲಿ ಸೇರಿಕೊಂಡಿದ್ದಾರೆ. ಜಿಲ್ಲೆಯ ಮತ್ತು ರಾಜ್ಯದಲ್ಲಿ ಮಠ-ಮಂದಿರಗಳನ್ನು ಕಟ್ಟಿದ, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ, ಸಮಾಜಮುಖಿ ಕಾಯಕ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರಿಗೆ ಆರ್ಯುರ್ವೇದ ವಿಶ್ವ ರತ್ನ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಶುಕ್ರವಾರ ನಡೆದ ಎರಡನೇಯ ಆಯುರ್ವೇದ ವಿಶ್ವಸಮ್ಮೇಳನದಲ್ಲಿಡಾ. ಅಶೋಕ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ವಿಶ್ವ ಆಯುರ್ವೇದ ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಶಾಂತಿ ಆಯುರ್ವೇದ ಕೇಂದ್ರದ ಖ್ಯಾತ ವೈದ್ಯ ಡಾ. ಗಿರಿಧರ ಕಜೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ಇತರೆ ಆಯುರ್ವೇದ ಸಾಧಕ ವೈದ್ಯರಿಗೂ ಪ್ರಶಸ್ತಿ ಕೊಡಮಾಡಲಾಯಿತು.19 ವರ್ಷಗಳಿಂದ ಅಧ್ಯಾಪಕ ವೃತ್ತಿಯಲ್ಲಿ ತೊಡಗಿರುವ ಅವರು ಅನೇಕ ಸಂಶೋಧನೆಗಳನ್ನು ಕೈಗೊಂಡು 35ಕ್ಕೂ ಹೆಚ್ಚು ಪ್ರಭಂದಗಳನ್ನು ಮಂಡಿಸಿದ್ದಾರೆ. ಅಲ್ಲದೇ, ನಾನಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿ ಸಂಶೋಧನ ಪರಿಣಿತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲ, ಪಿ.ಎಚ್.ಡಿ ಪದವಿದರರಿಗೆ ಮಾರ್ಗದರ್ಶಕರಾಗಿಯೂ ಅನುಭವ ಹೊಂದಿದ್ದಾರೆ.ಡಾ. ಅಶೋಕ ಪಾಟೀಲ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ.…

Read More