Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಾಷ್ಟ್ರೀಯ ಪೋಷಣ ಮಾಸಾಚರಣೆ-ಸ್ವಸ್ಥನಾರಿ- ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆ ಸ್ವಸ್ಥವಾಗಿರಲು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಹೇಳಿದರು.ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ ಹಾಗೂ ಬಿ.ಎಲ್.ಡಿ.ಇ ಕಾನೂನು ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
ಪ್ರವಾಹದಿಂದ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ | ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಹ ಪರಿಸ್ಥಿತಿಯನ್ನು “ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ” ಎಂದು ಪ್ರತಿಪಕ್ಷ ಬಿಜೆಪಿ ಮಂಗಳವಾರ ಆರೋಪಿಸಿದೆ.ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡುವ ಬದಲು ವೈಮಾನಿಕ ಸಮೀಕ್ಷೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕಲಬುರಗಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಮಹಾರಾಷ್ಟ್ರದ ಉಜನಿ ಮತ್ತು ನೀರಾ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿ ಹಾನಿಗೀಡಾಗಿರುವ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.ಪ್ರವಾಹ ಪೀಡಿತ ಜಿಲ್ಲೆಗಳಿಗೆ ಹೋಗಿ ಅಲ್ಲಿನ ಅಧಿಕಾರಿಗಳು ಮತ್ತು ರೈತರೊಂದಿಗೆ ಕುಳಿತು ಬೆಳೆಗಳಿಗೆ ಪರಿಹಾರ ಘೋಷಿಸಬೇಕಾಗಿತ್ತು ಮತ್ತು ಹಾಳಾದ ರಸ್ತೆಗಳು, ಶಾಲೆಗಳು ಮತ್ತು ಅಂಗನವಾಡಿಗಳ ಪುನಶ್ಚೇತನಕ್ಕೆ ಹಣ…
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಕರೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೆಂಗಳೂರಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಒಕ್ಕಲಿಗರ ಸಂಘ ಹಾಗೂ ಬ್ರಾಹ್ಮಣ ಮಹಾಸಭಾಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಾಜಕೀಯ ಪ್ರೇರಿತ ಜಾತಿಗಣತಿ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿ ಮಹತ್ವದ ಮಧ್ಯಂತರ ಸೂಚನೆ ನೀಡಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರು ಇದನ್ನು ಬಹಿಷ್ಕರಿಸಬೇಕು. ಇಡೀ ಜಾತಿಗಣತಿ ಸಂಪೂರ್ಣವಾಗಿ ಐಚ್ಚಿಕ, ಗಣತಿದಾರರು ಯಾರನ್ನು ಮಾಹಿತಿ ನೀಡುವಂತೆ ಒತ್ತಾಯಿಸುವಂತಿಲ್ಲ. ಮತ್ತು ಸಾರ್ವಜನಿಕರ ಖಾಸಗಿತನ ಮತ್ತು ವ್ಯಕ್ತಿಯ ಸ್ವಾತಂತ್ರö್ಯ ಎತ್ತಿ ಹಿಡಿದಿರುವುದರಿಂದ ಸಾಮಾಜಿಕ ಸಮೀಕ್ಷೆ ಬಹಿಷ್ಕರಿಸಬೇಕು. ಈ ಕರೆಗೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದರು.ಈ ವೇಳೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್ ಜೀ ಫೌಂಡೇಶನ್ ರವರ ಸಹಯೋಗದೊಂದಿಗೆ ಔಪಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲೀಷ, ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಬೋಧಿಸಲು ಜಿಲ್ಲಾ ಹಂತದಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ:೦೪-೧೦-೨೦೨೫ ಕೊನೆಯ ದಿನಾಂಕ ಇರುತ್ತದೆ. ಒಂದು ಮದರಸಾಗೆ ತಲಾ ಎರಡು ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳು https://docs.google.com/forms/d/e/1FAIpQLSeJ76UQIEXjbAA2Wkak_E5BXBrIGDnRcHu0eYtGf RGXZx5_qA/viewform?usp=headerಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೂರವಾಣಿ ಸಂಖ್ಯೆ:೦೮೩೫೨-೨೯೫೫೨೩ ಹಾಗೂವಿಜಯಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಮೊಬೈಲ್ ಸಂಖ್ಯೆ: ೮೧೨೩೭೧೦೭೬೬, ಬಸವನ ಬಾಗೇವಾಡಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: ೯೯೭೨೩೪೦೭೩೨೧, ಮುದ್ದೇಬಿಹಾಳ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: ೮೭೨೨೪೪೫೫೫೨, ಸಿಂದಗಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್ ಸಂಖ್ಯೆ: ೯೦೩೫೫೫೮೬೦೯, ಇಂಡಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ ಮೊಬೈಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಕಿಟ್‌ಗಳಿಗಾಗಿ ಅರ್ಜಿ ಆಹ್ವಾನಿಸಿದೆ.ಮೇಸನ್, ಇಲೇಕ್ಟ್ರೀಕಲ್,ಟೈಲ್ಸ್ ಮತ್ತು ವೆಲ್ಡಿಂಗ್‌ಟೋಲ್‌ಗಳನ್ನು ಕಾರ್ಮಿಕರಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು,ನೋಂದಾಯಿತ ಕಟ್ಟಡ ಕಾರ್ಮಿಕರು ಅರ್ಜಿಗಳೊಂದಿಗೆ ಚಾಲ್ತಿಯಲ್ಲಿರುವ ಗುರುತಿನ ಚೀಟಿ, ಆಧಾರ ಕಾರ್ಡ್, ಭಾವಚಿತ್ರವನ್ನು ಲಗತ್ತಿಸಬೇಕು.ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು, ಕಾರ್ಮಿಕರ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ಫಲಾನುಭವಿಸಗಳಿಗೆ ವಿತರಿಸಲಾಗುವುದು.ಬಸವನ ಬಾಗೇವಾಡಿಯಲ್ಲಿನ ವೀರಭದ್ರೇಶ್ವರ ನಗರ ಹೋಟಲ್ ವಿಮೋಚನ ಹಿಂದುಗಡೆ ಇರುವ ಕಾರ್ಮಿಕ ನಿರೀಕ್ಷಕರ ಕಚೇರಿ, ವಿನಾಯಕ ನಗರ ನಿಡಗುಂದಿ ಹಾಗೂ ಕೊಲ್ಹಾರದ ಬಸವ ವೃತ್ತ ಮುಖ್ಯ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಕ್ಟೋಬರ್ ೬ ರಿಂದ ೧೬ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಸವನ ಬಾಗೇವಾಡಿಯ ಕಾರ್ಮಿಕ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮತಕ್ಷೇತ್ರದ ಮಾಜಿಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅವರ ಸ್ವಗ್ರಹ ವಿಜಯಪುರದಲ್ಲಿ ದಿ:೩ ರಂದು ಶುಕ್ರವಾರ ಸಾಂಪ್ರದಾಯಿಕ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಜರುಗಲಿದೆ.ಮತಕ್ಷೇತ್ರದ ಶಾಸಕರ ಅಭಿಮಾನಿಗಳು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯ ದಶಮಿ ಅಂಗವಾಗಿ ಅ.2ರ ಗುರುವಾರ ದಂದು ಸಂಜೆ ಸಿದ್ದೇಶ್ವರ ದೇವಸ್ಥಾನ ಆವರಣಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಲಿದ್ದು, ಮರು ದಿನ ಅ.3 ರ ಶುಕ್ರವಾರ ಸಿಂದಗಿ ರಸ್ತೆಯಲ್ಲಿರುವ ತೋಟದ ಮನೆಯಲ್ಲಿ ಬನ್ನಿ ವಿನಿಮಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ರದ್ದುಪಡಿಸಲಾಗಿದೆ ಎಂದು ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ರೈತರು, ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳು, ವಿಜಯಪುರ ನಾಗರಿಕರು ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರು ತಮಗೂ ತಮ್ಮ ಕುಟುಂಬಕ್ಕೂ ಆರೋಗ್ಯ, ಸುಖ, ಶಾಂತಿ, ಸಮೃದ್ಧಿ ಅಷ್ಟ ಐಶ್ವರ್ಯ ಭಾಗ್ಯ ದಯಪಾಲಿಸಲಿ ಎಂದು ಶಾಸಕರು ಶುಭ ಹಾರೈಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪೇಪರ್ ಪುನರುತ್ಪಾದನಾ ಘಟಕದ ವತಿಯಿಂದ ಇತ್ತೀಚಿಗೆ ಆಯೋಜಿಸಿದ್ದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ಅಡಿಯಲ್ಲಿ ‘ಪೇಪರ್ ಪುನರುತ್ಪಾದನಾ ತಂತ್ರಜ್ಞಾನ’ದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ. ಪರಿಸರಕ್ಕೆ ಹಾನಿಯಾಗುವಂತಹ ಚಟುವಟಿಕೆಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹುಬ್ಬಳ್ಳಿಯ ಕೀರ್ತಿ ಪೇಪರ್ಸ್ ಪ್ರೈವೇಟ್ ಲಿಮಿಟೆಡ್‌ನ ತಾಂತ್ರಿಕ ಸಿಬ್ಬಂದಿ ನಿಂಗಪ್ಪ ಗೊಂಡಿ ಮಾತನಾಡಿ, ಇಂದು ಪುನರುತ್ಪಾದನಾ ತಂತ್ರಜ್ಞಾನದಿಂದ ತಯಾರಿಸಲ್ಪಟ್ಟ ವಸ್ತುಗಳಿಗೆ ಉತ್ತಮ ಬೇಡಿಕೆ ಇದೆ. ಈ ವಸ್ತುಗಳನ್ನು ತಯಾರಿಸಲು ಬೃಹತ್ ಯಂತ್ರೋಪಕರಣಗಳ ಅಗತ್ಯವಿಲ್ಲ, ಕಾರ್ಖಾನೆಗಳ ಅಗತ್ಯವೂ ಇಲ್ಲ. ಸಣ್ಣ ಪ್ರಮಾಣದ ಯಂತ್ರಗಳನ್ನು ಅಳವಡಿಸಿ ಈ…
ಅಕ್ಕಮಹಾದೇವಿ ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯ ಶಿವಯೋಗಪ್ಪ ಮಾಡ್ಯಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆತ್ಮರಕ್ಷಣಾ ತರಬೇತಿ ಶಿಬಿರಗಳು ಮಹಿಳೆಯರಿಗೆ ಅಗತ್ಯ ಕೌಶಲ್ಯ ಮತ್ತು ಆತ್ಮವಿಶ್ವಾಸ ನೀಡುತ್ತವೆ ಎಂದು ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯ ಶಿವಯೋಗಪ್ಪ ಮಾಡ್ಯಾಳ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಪಿಎಂ ಉಷಾ ಯೋಜನೆ ಅಡಿಯಲ್ಲಿ ‘ಆತ್ಮ ರಕ್ಷಣಾ ತರಬೇತಿ ಶಿಬಿರವನ್ನು’ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಸಮಾಜದಲ್ಲಿ ಮಹಿಳೆಯರು ಏಕಾಂಗಿಯಾಗಿ ಸಂಚರಿಸುವ ಸ್ವಾತಂತ್ರ‍್ಯವನ್ನು ಪಡೆದಿದ್ದರೂ, ಕೆಲ ಅಸಾಮಾಜಿಕ ಅಂಶಗಳು ಮತ್ತು ದುಷ್ಟರ ಕಾಟದಿಂದ ತಪ್ಪಿಸಿಕೊಳ್ಳಲು ಆತ್ಮರಕ್ಷಣಾ ತರಬೇತಿ ಶಿಬಿರಗಳು ಅತ್ಯಂತ ಅಗತ್ಯವಾದ ಕೌಶಲ್ಯ ಮತ್ತು ಜ್ಞಾನವನ್ನು ನೀಡುತ್ತವೆ. ಆದ್ದರಿಂದ ಇಂತಹ ತರಬೇತಿ ಶಿಬಿರಗಳು ಎಲ್ಲಾ ಮಹಿಳೆಯರಿಗೆ ದೊರೆಯುವಂತಾಗುವುದು ಅತ್ಯವಶ್ಯಕ. ಅಂದಾಗ ಮಾತ್ರ ನಿಜವಾದ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ದೈಹಿಕ ಶಿಕ್ಷಣ ಅಧ್ಯಯನ ಮತ್ತು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನಿಂದ ಡಾ ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮದ ದಿಕ್ಷೆಯನ್ನು ಪಡೆದ ಪವಿತ್ರ ಭೂಮಿ ನಾಗಪುರ ಕ್ಕೆ ಹೋಗುತ್ತಿರುವ ಯಾತ್ರಾರ್ಥಿಗಳು ಭಾರತ ರತ್ನ , ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನದ ಸಿದ್ಧಾಂತಗಳನ್ನು , ಆದರ್ಶಗಳನ್ನು ಪಾಲಿಸಬೇಕು, ಆ ಪುಣ್ಯ ಭೂಮಿಯನ್ನು ಸ್ಪರ್ಶಿಸುವವರು ಪುಣ್ಯವಂತರೆಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯ್ಕೆಗೊಂಡು ನಾಗಪುರ ದೀಕ್ಷಾ ಭೂಮಿ ಗೆ ತೆರಳುತ್ತಿರುವ ಬಸ್ಸ್ ಗೆ ಯುವ ನಾಯಕ ಸತ್ಯಜೀತ್ ಪಾಟೀಲ್ ಅವರು ಚಾಲನೆ ನೀಡಿ ಶುಭಹಾರೈಸಿದರು.ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಸಿ ಎಸ್ ಗಿಡಪ್ಪಗೋಳ, ಕಲ್ಲು ದೇಸಾಯಿ, ಆರ್ ಬಿ ಪಕಾಲಿ, ತಾನಾಜಿ ನಾಗರಾಳ, ಶಿವಾನಂದ ಅಂಗಡಿ, ದಶರಥ ಈಟಿ, ಮಾರುತಿ ಕುದರಿ , ಶೇಖು ಈಟಿ, ಸಚಿನ್ ಈಟಿ, ಮುತ್ತು ಕೊರ್ತಿ, ಯಮನೂರಿ ಮಾದರಿ, ಮಲ್ಲು ಪೂಜಾರಿ, ತಾಲೂಕಿನ ಡಿಎಸ್ ಎಸ್ ಮುಖಂಡರು ಹಾಗೂ ತಹಶೀಲ್ದಾರ್ ಸಂತೋಷ ಮ್ಯಾಗೇರಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುನೀಲ್ ಮದ್ದೀನ್,…
