Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ನಗರದ ಕು.ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು ಮನಮುಟ್ಟುವಂತೆ ಮಾತನಾಡುವ ಮೂಲಕ ರಷ್ಯಾದಲ್ಲಿ ಶಾಂತಿ ಮಂತ್ರದ ಸಂದೇಶ ಸಾರಿದ್ದಾರೆ.ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟೀನ್, ಮಯನ್ಮಾರ್ ರಾಷ್ಟ್ರಪತಿ, ಅರ್ಮೇನಿಯಾ ಪ್ರಧಾನಿ, ಇತೋಫಿಯಾ ಪ್ರಧಾನಮಂತ್ರಿ, ಬೇಲಾರೂಸ್ ಪ್ರಧಾನಿ, ಸೇರಿದಂತೆ ಅನೇಕ ರಾಷ್ಟ್ರಗಳ ಪ್ರಧಾನಮಂತ್ರಿಗಳು, ರಾಷ್ಟ್ರಾಧ್ಯಕ್ಷರು, ಉಜ್ಬೇಕಿಸ್ತಾನ್, ಅರಬ್ ಗಣರಾಜ್ಯ, ಇರಾನ್, ಈಜಿಪ್ತ್ ಹಾಗೂ ನೈಜಿರೀಯಾ ಸೇರಿದಂತೆ ವಿವಿಧ ದೇಶಗಳ ವಿದೇಶಾಂಗ ಸಚಿವರು, ರಾಯಭಾರಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ ಶಿಫಾ ಸಮರ್ಥವಾಗಿ ವಿಶ್ವ ಶಾಂತಿ ಕುರಿತಾದ ತಮ್ಮ ವಿಚಾರಗಳನ್ನು ಪ್ರಸ್ತುತಪಡಿಸಿ ವಿಶ್ವ ಶಾಂತಿಯ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟರು.ಭಾರತೀಯ ಸಂಸ್ಕೃತಿ, ಸಹೋದರತೆಯ ಪ್ರತಿಬಿಂಬವಾಗಿರುವ `ವಸುಧೈವ ಕುಟುಂಬಕಂ’ (ಇಡೀ ಜಗತ್ತೇ ಒಂದು ಕುಟುಂಬ) ಎಂಬ ನೆಲೆಗಟ್ಟಿನ ಆಧರಿಸಿ ಸಮರ್ಥವಾಗಿ ತಮ್ಮ ವಿಚಾರಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶೈಕ್ಷಣಿಕ ಜೀವನದಲ್ಲಿ ಶಿಸ್ತು, ಸಮರ್ಪಣೆ ಮತ್ತು ನಾವೀನ್ಯತೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದು ಶ್ರೀಶರಣಬಸವೇಶ್ವರ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಎಚ್. ಶಿವಕುಮಾರ ಕಿವಿಮಾತು ಹೇಳಿದರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಾರಂಭದ ವರ್ಷದ ಬಿ.ಫಾರ್ಮಸಿ ಮತ್ತು ಡಿ.ಫಾರ್ಮಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ಸಂಸ್ಥೆ ತಮ್ಮಲ್ಲಿ ಓದಲು ಬರುವ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅಗತ್ಯ ಇರುವ ಸೌಲಭ್ಯ, ಸಂಪನ್ಮೂಲ ಕಲ್ಪಿಸಿ, ವಿದ್ಯಾರ್ಥಿಗಳ ಉನ್ನತಿಗೆ ಶ್ರಮಿಸುತ್ತದೆ ಎಂದರು.ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್.ಕೆ. ಪಾಟೀಲ, ಮುಖ್ಯ ಆಡಳಿತಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ಡಾ. ಶಿರಾಜ ಅವಟಿ, ನಿವೃತ್ತ ಕರ್ನಲ್ ಫಿರೋಜ್ ಕರ್ಲೇಕರ ಮಾತನಾಡಿದರು.ಎಸ್. ಎಸ್.ಬಿ. ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಪ್ರೊ. ಈರಣ್ಣ ಶೀರಾಳಶೆಟ್ಟಿ, ಪಿಯು ಕಾಲೇಜಿನ ಪ್ರಾಚಾರ್ಯ ಪ್ರಜ್ವಲ್ ವೇದಿಕೆ ಮೇಲೆ ಉಪಸ್ಥಿತರಿದ್ದರು.ಓರಿಯಂಟೇಶನ್‌ ಕಾರ್ಯಕ್ರಮದಲ್ಲಿ ಪಠ್ಯಕ್ರಮ, ಪರೀಕ್ಷಾ ವ್ಯವಸ್ಥೆ, ಕಾಲೇಜು ಒದಗಿಸುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ಆಕ್ಟೋಬರ್ 3 ರಂದು ನಗರದಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.2004 ರಿಂದ ಸಚಿವರಾದ ಶಿವಾನಂದ ಪಾಟೀಲ ಅವರು ನಗರದಲ್ಲಿರುವ ತೋಟದ ಮನೆಯಲ್ಲಿ ಸಾರ್ವಜನಿಕ ಬನ್ನಿ ವಿನಿಮಯದೊಂದಿ ವಿಜಯ ದಶಮಿ ಹಬ್ಬದ ಶುಭಾಶಯ ಸಮಾರಂಭ ಆಯೋಜಿಸುತ್ತಾ ಬರುತ್ತಿದ್ದಾರೆ.ಈ ಬಾರಿ ಆಕ್ಟೋಬರ್ 3 ರಂದು ಬೆಳಿಗ್ಗೆಯಿಂದ ವಿಜಯಪುರ ನಗರದ ರಿಂಗ್ ರಸ್ತೆಯ ಬಬಲೇಶ್ವರ ಮಾರ್ಗದ ತೋಟದ ಮನೆಯಲ್ಲಿ ಬನ್ನಿ ವಿನಿಮಯ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಲೇಖನ ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನ ಪ್ರೀತಿಯ ಪ್ರೀತಿ,ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ ಹೆಣ್ಣನ್ನು ಕಂಡೇ ಇರಲಿಲ್ಲ. ಸುರಿವ ಸುಡುವ ಬಿಸಿಲಲ್ಲಿ ಉರಿ ಉರಿ ಎನ್ನುವ ಧಗೆಯಲ್ಲಿ ನಿನ್ನ ಗಲ್ಲ ಕಾಶ್ಮೀರಿ ಸೇಬಿನಂತೆ. ಅಬ್ಬಾ! ಯಾರೀ ಪರಮ ಸುಂದರಿ ಎಂದೆ ಮನದಲ್ಲಿ ಬೆವರು ಒರೆಸುತ. ಉಲ್ಬಣಿಸಿದ ಉರಿಬಿಸಿಲಲ್ಲೂ ಕಣ್ರೆಪ್ಪೆ ಮಿಟುಕಿಸದೇ ನೋಡಬೇಕೆನ್ನುವ ಅಪರೂಪದ ರೂಪ ನಿನ್ನದು. ಹಸಿರು ಜರಿಯಂಚಿನ ಲಂಗಧಾವಣಿ ಅದಕ್ಕೊಪ್ಪುವಂತೆ ಕೈಗಳಲ್ಲಿ ಘಲ್ ಘಲ್ ಎಂದು ಸದ್ದು ಮಾಡುವ ಹಸಿರು ಬಳೆ ಫಳ ಫಳ ಹೊಳೆಯುವ ಬೆಳ್ಳನೆಯ ಅಂದದ ದುಂಡಾದ ಮುಖ ಪುಟ್ಟ ಜೋಡಿ ಪ್ರಣತೆಯಂತಹ ತೇಜಯುಕ್ತ ಕಂಗಳು ಉದ್ದನೆಯ ನಾಗರ ಜಡೆಗೆ ಮಲ್ಲಿಗೆ ಮಾಲೆ. ಕೊರಳಗೊಪ್ಪುವ ನಾಜೂಕಾದ ಬಂಗಾರದ ಚೈನಿನ ಎಳೆ. ಸಾಮಾನ್ಯ ಗ್ರಾಮೀಣ ಹೆಣ್ಣುಮಗಳಿಗಿಂತ ಏನೋ ವಿಶೇಷವಾದ ಸೆಳೆತ ಇತ್ತು. ಮೊನಲಿಸಾನಂಥ ನಗುವಿನಿಂದ ಸೂಜಿಗಲ್ಲಿನಂತೆ ಹಳ್ಳಿ ಹೈಕಳೆನ್ನಲ್ಲ ಸೆಳೆದೆ. ನಗುವಿಗೆ ಕಿರೀಟವಿಟ್ಟಂತೆ ನಿನ್ನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಸ್ವಾವಲಂಬಿಗಳಾಗಬೇಕಾದರೆ, ಉದ್ಯಮಶೀಲತೆಯ ಕೌಶಲ್ಯಗಳನ್ನು ಪಡೆಯುವುದು ಅಗತ್ಯ ಎಂದು ವಿಜಯಪುರ ಐಶ್ವರ್ಯ ಜ್ಯೂಟ್ ಹೌಸ್, ಉದ್ಯಮಿ ಯಶೋಧ ಗುಜ್ಜರ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಅಭಿಯಾನ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ಅಡಿಯಲ್ಲಿ ‘ವೃತ್ತಿ ಹಾಗೂ ವೈಯಕ್ತಿಕ ಜೀವನ ಸಮತೋಲನ’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರು ಉದ್ಯಮವನ್ನು ಆರಂಭಿಸುವಾಗ ಹಲವು ಸವಾಲುಗಳು ಎದುರಾಗುತ್ತವೆ. ನಮ್ಮ ಉದ್ಯಮದಲ್ಲಿ ಯಶಸ್ವಿಯಾಗಬೇಕಾದರೆ ಅಂತಹ ಸವಾಲುಗಳನ್ನು ಮೆಟ್ಟಿನಿಂತು, ಮುನ್ನಡೆಯಬೇಕು ಎಂದರು.ಇದೇ ಸಂದರ್ಭದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಸಿಕ್ಯಾಬ್ ಕಾಲೇಜು ಮತ್ತು ಇಂಜಿನಿಯರಿAಗ್ ಟೆಕ್ನಾಲಜಿನ ಸಹಾಯಕ ಪ್ರಾಧ್ಯಾಪಕ ಅಸಿಫ್ ಇಕ್ಬಾಲ್ ಎಂ. ದೊಡ್ಡಮಣಿ ಮಾತನಾಡಿ, ವೃತ್ತಿ ಜೀವನ ಮತ್ತು ಕೌಟುಂಬಿಕ ಜೀವನದಲ್ಲಿ ಸಮತೋಲನ ಸಾಧಿಸುವುದು ಅಗತ್ಯ, ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಬೇಕಾದರೆ, ಪರಿಶ್ರಮ, ಸಮಯ ಪಾಲನೆ, ಸ್ವ-ಆರೈಕೆ,…

Read More

ಉಮರಜದಲ್ಲಿ ರಾಷ್ಟ್ರಗೀತೆಯೊಂದಿಗೆ ನಾಡದೇವಿ ಪ್ರಭಾತಪೇರಿ ೬೯ರ ಸಂಭ್ರಮ ಉದಯರಶ್ಮಿ ದಿನಪತ್ರಿಕೆ ಚಡಚಣ: ಗಡಿಗ್ರಾಮ ಉಮರಜದಲ್ಲಿ ನವರಾತ್ರಿ ಉತ್ಸವ ಅತ್ಯಂತ ವಿಶಿಷ್ಟವಾದದ್ದು, ಇಲ್ಲಿ ನಾಡಹಬ್ಬವನ್ನು ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತದೆ. ಕಳೆದ ೬೯ ವರ್ಷಗಳಿಂದಲೂ ಈ ಕಾರ್ಯ ಅತ್ಯಂತ ವೈಭವದಿಂದ ಸದ್ದಿಲ್ಲದೇ ನಡೆಯುತ್ತಿದೆ.ಹಬ್ಬದ ಸಂದರ್ಭದಲ್ಲಿ ನಡೆಯುವ ಪ್ರಭಾತಪೇರಿ ಗಡಿ ಭಾಗದಲ್ಲಿ ಕನ್ನಡ ಭಾಷಾಭಿಮಾನ ಮೂಡಿಸುವ ‘ವೇದಿಕೆ’ಯಾಗಿದೆ. ನವರಾತ್ರಿಯ ಒಂಭತ್ತೂ ದಿನಗಳಲ್ಲಿ ಉಮರಜ ಗ್ರಾಮದಲ್ಲಿ ನಾಡು-ನುಡಿಯ ಹಬ್ಬದ ಸಂಭ್ರಮ ಮನೆ ಮಾಡಿರುತ್ತದೆ.೧೯೫೬ರಿಂದ ಪ್ರತಿವರ್ಷ ಈ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ರಾಷ್ಟçಧ್ವಜ, ಭಾರತಮಾತೆಯ ಭಾವಚಿತ್ರದೊಂದಿಗೆ ಗ್ರಾಮಸ್ಥರು, ಮಕ್ಕಳೆಲ್ಲರೂ ಸೇರಿ ಹೆಜ್ಜೆ ಹಾಕುತ್ತಾರೆ. ದೇಶಾಭಿಮಾನ, ಧಾರ್ಮಿಕ ಮನೋಭಾವ ಮೂಡಿಸುವ ದೃಷ್ಟಿಯಿಂದ ನಡೆದುಕೊಂಡು ಬರುತ್ತಿರುವ ಈ ಪ್ರಭಾತಪೇರಿಯ ಸಂಪ್ರಯದಾಯವನ್ನು ಜನತೆ ಈಗಲೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.ಇಲ್ಲಿ ಒಂಬತ್ತು ದಿನಗಳ ಕಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾಡದೇವಿಯ ಪ್ರಭಾತ ಪೇರಿ ನಡೆಯುತ್ತದೆ. ಅದರಂತೆ ಈ ವರ್ಷವೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೆಳಗಿನ ಜಾವ ನಾಡದೇವಿಯ ಭಾವಚಿತ್ರದೊಂದಿಗೆ ಪ್ರಭಾತಪೇರಿ ನಡೆಯಿತು. ಮಕ್ಕಳು…

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಾರಾಷ್ಟ್ರದ ಉಜನಿ, ವೀರ, ಸೀನಾ ಜಲಾಶಯದಿಂದ 3.50 ಲಕ್ಷ ಕ್ಯೂಸೆಕ್ ನೀರು ಭೀಮಾನದಿಗೆ ಹರಿಬಿಟ್ಟಿರುವುದರಿಂದ ಭೀಮಾನದಿ ತೀರದಲ್ಲಿ ಪ್ರವಾಹ ಉಂಟಾಗಿರುವುದರಿಂದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.ತಾಲೂಕಿನ ಹಾವನೂರ,ಶಿರವಾಳ,ಗೌರ(ಬಿ),ನಂದರಗಾ, ಜೇವರ್ಗಿ(ಬಿ), ಮಣ್ಣೂರ, ಸೊನ್ನ ಬ್ಯಾರೇಜ್,ಘತ್ತರಗಾ ಗ್ರಾಮಗಳಿಗೆ ಭೇಟಿ ನೀಡಿ, ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಪ್ರವಾಹ ಸೃಷ್ಟಿಯಾಗಿದೆ.ಹೀಗಾಗಿ ಜನರು ನದಿ ದಡದ ಕಡೆ ಹೋಗದೆ ಜಾಗೃತಿಯಿಂದ ಇರಬೇಕು. ಮನೆಗಳಿಗೆ ನುಗ್ಗಿರುವ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಮಣ್ಣೂರ ಮತ್ತು ದೇವಲ ಗಾಣಗಾಪುರ ಗ್ರಾಮದಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ದಿನನಿತ್ಯದ ನೀರಿನ ಪ್ರಮಾಣವನ್ನು ಜನರಿಗೆ ತಿಳಿಯುವಂತೆ ಗ್ರಾಮದಲ್ಲಿ ಡಂಗುರ ಸಾರಿ ತಿಳಿಸಲಾಗುವುದು. ಹೀಗಾಗಿ ಗ್ರಾಮಸ್ಥರೆಲ್ಲರೂ ಯಾವುದೇ ರೀತಿಯಲ್ಲೂ ಭಯಪಡುವ ಅಗತ್ಯವಿಲ್ಲ,ನಿಮ್ಮ ಜತೆ ಜಿಲ್ಲಾಡಳಿತ ಗಟ್ಟಿಯಾಗಿ ನಿಂತಿದೆ ಎಂದರು.ಜಿಪಂ ಸಿಇಒ ಭಂವರಾಸಿಂಗ್ ಮೀನಾ ಮಾತನಾಡಿ, ಪ್ರವಾಹದಿಂದ ಉಂಟಾಗಿರುವ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನವು ಜಾನಪದ ವಿದ್ವಾಂಸರಿಗೆ ಕೊಡಮಾಡುವ ರಾಜ್ಯಮಟ್ಟದ ದೇಸಿ ಸನ್ಮಾನ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಹೆಚ್.ಟಿ.ಪೋತೆ ಅವರಿಗೆ ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯು ೧೧ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಇದರ ಜೊತೆಗೆ ಪ್ರಶಸ್ತಿ ಪುರಸ್ಕೃರ ಸಾಹಿತ್ಯ ಸಾಧನೆ ಕುರಿತು ಕಿರು ಗ್ರಂಥ ಪ್ರಟಕಣೆ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಡಾ.ಚನ್ನಪ್ಪ ಕಟ್ಟಿ ತಿಳಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬನ್ನಟ್ಟಿ ಪಿಎ ಗ್ರಾಮದಲ್ಲಿ ದಲಿತ ವ್ಯಕ್ತಿಯ ಕೊಲೆಯ ಪ್ರಕರಣದ ಕುರಿತಾಗಿ ಕಳೆದ ನಾಲ್ಕು ತಿಂಗಳಿನಿಂದಲೂ ಆರೋಪಿಯನ್ನು ಬಂಧಿಸದ ಪೊಲೀಸರ ವಿರುದ್ಧ ಎಲ್ಲಾ ದಲಿತಪರ ಸಂಘಟನೆಗಳ ಪ್ರಮುಖರು ಡಾ.ಬಿ.ಆರ್.ಅಂಬೇಡ್ಕರ್ ವೃತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ೭ನೇ ದಿನಕ್ಕೆ ಕಾಲಿಟ್ಟಿದೆ.ಈ ವೇಳೆ ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹೊಳಿ ಬಂಟನೂರ ಮಾತನಾಡಿ, ಒಬ್ಬ ಪರಿಶಿಷ್ಟ ಜಾತಿಯ ವ್ಯಕ್ತಿ ಕೊಲೆಯಾಗಿ ೪ತಿಂಗಳುಗಳ ಕಾಲ ಕಳೆದರೂ ಕೊಲೆಗಾರರನ್ನು ಬಂಧಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆರಂಭವಾದ ಅಹೋರಾತ್ರಿ ಧರಣಿ ಸತ್ಯಾಗ್ರಹ ೭ನೆಯ ದಿನಕ್ಕೆ ಕಾಲಿಟ್ಟಿದೆ. ಮಾನವೀಯತೆ ನೆಲೆಗಟ್ಟಿನ ಮೇಲೆ ಸೌಜನ್ಯಕ್ಕೂ ಸಾವಿನ ಮನೆಗೆ ಭೇಟಿ ನೀಡದ ಹಾಲಿ ಹಾಗೂ ಮಾಜಿ ಶಾಸಕರ ನಡೆಗೆ ಧಿಕ್ಕಾರ ಎಂದು ಖಂಡಿಸಿದ್ದಾರೆ. ದೀನದಲಿತರು, ಹಿಂದುಳಿದವರ ಮತಗಳನ್ನು ಪಡೆದು ಅವರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನಲ್ಲಿ ಹರಿಯುವ ಭೀಮಾನದಿಯ ಪ್ರವಾಹಕ್ಕೆ ಒಳಗಾಗಿರುವ ಜನರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮೇಲೆ ಮಳೆ.. ಕೆಳಗೆ ಹೊಳೆ.. ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಜನತೆ ಬದುಕುತ್ತಿದ್ದಾರೆ.ನದಿ ಪಾತ್ರದ ಜನರು ಕಳೆದ ಒಂದು ವಾರದಿಂದ ಏರುತ್ತದೆ ಸಾಗಿರುವ ಭೀಮಾನದಿಯ ನೀರಿನ ಹರಿವಿನ ಪ್ರಮಾಣ ಗುರುವಾರ ರಾತ್ರಿ ಇಡೀ ಏರಿಕೆ ಕಂಡು ಶುಕ್ರವಾರ ಬೆಳಗಿನಿಂದ ಸಾಯಂಕಾಲದವರೆಗೆ ಅದೇ ಸ್ಥಿತಿಯಲ್ಲಿ ಮುಂದುವರೆದಿದೆ. ಈ ಎರಡು ದಿನವಿಡೀ ಸುರಿದ ಮಳೆಗೆ ಜನ ಕಂಗಾಲಾಗಿದ್ದಾರೆ. ಎರಡು-ಮೂರು ದಿನಗಳಿಂದ ವಿಶ್ರಾಂತಿ ಕೊಟ್ಟಿದ್ದ ಮಳೆರಾಯ ಶುಕ್ರವಾರ ಇಡಿ ದಿನ ಮಳೆಸುರಿದ ಪರಿಣಾಮ ಜನತೆಯಲ್ಲಿ ಭಯ ಹುಟ್ಟಿಸುವಂತಾಗಿದೆ, ಮಳೆಯೊಂದಿಗೆ ತಂಪಾದ ಗಾಳಿ ಬೀಸುತ್ತಿದ್ದು ಇದು ಕೂಡ ಜನರ ಜೀವನದ ಮೇಲೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುವತ್ತ ಸಾಗಿದೆ.ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ ನಲ್ಲಿ ಗುರುವಾರ 3 ಲಕ್ಷ 50 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿತ್ತು ಶುಕ್ರವಾರ ಬೆಳಗಿನ ಶುಭೋದಯ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಸಾಯಂಕಾಲದವರಿಗೆ…

Read More