Author: editor.udayarashmi@gmail.com

ದೇಶಪ್ರೇಮ & ಜನಜಾಗೃತಿ ಮೂಡಿಸಿದ ರಂಗಕರ್ಮಿಗಳು | ಹಿರಿಯ ಕಲಾವಿದ ಸಿದ್ರಾಮ್ ತತ್ರಾಣಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆˌ (ಜಮಖಂಡಿ): ಭಾರತದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಕರ್ನಾಟಕದ ರಂಗಭೂಮಿ ಹಾಗೂ ನಾಟಕ ಕಲಾವಿದರು ಜನರಲ್ಲಿ ದೇಶಪ್ರೇಮ, ರಾಷ್ಟ್ರಾಭಿಮಾನ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು ಎಂದು ಹಿರಿಯ ಕಲಾವಿದ ಸಿದ್ರಾಮ್ ತತ್ರಾಣಿ ಹೇಳಿದರು.ನಗರದ ಬಸವೇಶ್ವರ ಸರ್ಕಲ್‌ ಸಮೀಪದ ವೀರುವ ವಿಶ್ವಜ್ಯೋತಿ ಪಂಚಾಕ್ಷರ ನಾಟ್ಯ ಸಂಘದ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಸ್ವಾತಂತ್ರ್ಯ ಚಳುವಳಿಯಲ್ಲಿ ನೇರವಾಗಿ ಧುಮುಕಿದವರಲ್ಲಿ ವೃತ್ತಿ ರಂಗಭೂಮಿಯ ಅನೇಕ ಕಲಾವಿದರು ಇದ್ದರು. ಅಂದಿನ ಸಂದರ್ಭದಲ್ಲಿ ನಾಟಕಗಳು ಕೇವಲ ಮನರಂಜನೆಯ ಮಾಧ್ಯಮವಾಗಿರದೆ, ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸುವ ಹಾಗೂ ಬ್ರಿಟಿಷರ ವಿರುದ್ಧ ಹೋರಾಟದ ಕಿಚ್ಚು ಹಚ್ಚುವ ಶಕ್ತಿಶಾಲಿ ಮಾಧ್ಯಮವಾಗಿದ್ದವು ಎಂದು ಅವರು ಹೇಳಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾಟಕದ ಸಂಗೀತ ನಿರ್ದೇಶಕ ಬಸವಲಿಂಗಪ್ಪ ಕೊಡ್ಲಿ ಮಾತನಾಡಿ, ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟಕ್ಕೆ ಸೀಮಿತವಾಗಿರಲಿಲ್ಲ. ರಂಗಭೂಮಿ, ನಾಟಕ,…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಶಿನಾಳ ಅಥಣಿ ಕೇಂದ್ರೀಯ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಶನಿವಾರ ಶಿಸ್ತು ಮತ್ತು ಸಂಯಮ ಹಾಗೂ ದೇಶ ಭಕ್ತಿಯಿಂದ ನೆರವೇರಿಸಲಾಯಿತು.ಈ ವೇಳೆ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಬಸವರಾಜ ಕುಂಚನೂರ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯೋತ್ಸವವು ಕೇವಲ ಆಚರಣೆಯ ದಿನವಲ್ಲ ದೇಶಭಕ್ತಿ, ಶಿಸ್ತು, ಜವಾಬ್ದಾರಿ, ಏಕತೆ ಹಾಗೂ ರಾಷ್ಟ್ರೀಯ ಕರ್ತವ್ಯದ ಮೌಲ್ಯಗಳನ್ನು ನೆನಪಿಸುವ ದಿನವಾಗಿದೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ನಮಗೆ ದೊರೆತ ಸ್ವಾತಂತ್ರ್ಯವನ್ನು ಯುವ ಜನರು ಜವಾಬ್ದಾರಿಯುತ ನಾಗರಿಕರಾಗಿ ಉಳಿಸಿ, ಬಲಿಷ್ಠ ಭಾರತದ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.ಇನ್ನು ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದು ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡು ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಸ್ವಾತಂತ್ರ್ಯೋತ್ಸವದ ಮಹತ್ವ ಕುರಿತು ಭಾಷಣಗಳು ನಡೆದವು. ವಿದ್ಯಾರ್ಥಿಗಳ ಸಮೂಹ ಗೀತೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತ್ತು ಹಾಗೂಬಾಲವಾಟಿಕಾ ವಿದ್ಯಾರ್ಥಿಗಳ ಉತ್ಸಾಹಭರಿತ ಸಮೂಹ ನೃತ್ಯ ಮತ್ತು ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಪ್ರದರ್ಶಿಸಿದ ಎರಡು ಸಮೂಹ ನೃತ್ಯಗಳು ಎಲ್ಲರ ಮೆಚ್ಚುಗೆಗೆ…

Read More

ಮಳೆಗಾಲದಲ್ಲಿ ವಿಜಯಪುರ ನಗರದ ಪ್ರವಾಹ ಪರಿಸ್ಥಿತಿ ನಿವಾರಣೆಗೆ ಕ್ರಮ | ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಳೆಗಾಲದಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ–೨ರಡಿ ೧೯ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ, ಮಳೆಗಾಲದಲ್ಲಿ ಸಾರ್ವಜನಿಕರಿಗೆ ಹಾಗೂ ಮನೆಗಳಿಗೆ ಉಂಟಾಗುವ ತೊಂದರೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಹೇಳಿದರು.ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ–೨ರಡಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಅವರು ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಈ ಯೋಜನೆಯಡಿ ಮಳೆನೀರು ಚರಂಡಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಹಕಾರಿ ಬ್ಯಾಂಕುಗಳು ರೈತರಿಗೆ ಸಂಕಷ್ಟ ದಿನಗಳಲ್ಲಿ ವರದಾನವಾಗಿವೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಶಿರಬೂರ ಗ್ರಾಮದಲ್ಲಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಬೃಹತ್ ಕಟ್ಟಡದ ಗೋದಾಮು ಉದ್ಘಾಟಿಸಿ ಅವರು ಮಾತನಾಡಿದರು.ಈಗ ಕೃಷಿ ಕ್ಷೇತ್ರ ಕಷ್ಟಕರವಾಗಿದೆ. ಆಲಮಟ್ಟಿ ಜಲಾಶಯ ಎತ್ತರ 524.256 ಮೀ. ಪೂರ್ಣವಾದರೆ ರೈತರ ಗೋಳು ನೀಗಲಿದೆ. ಸದ್ಯ ತೀವ್ರ ಬರಗಾಲದ ಪರಿಸ್ಥಿತಿ ಇದೆ. ರೈತರು ಎರಡು ಮೂರು ಬಾರಿ ಬಿತ್ತನೆ ಮಾಡಿ ಸೋತಿದ್ದಾರೆ. ಜಗತ್ತಿನಲ್ಲಿ ಪ್ರಕೃತಿ ಅಸಮತೋಲನ ಹೆಚ್ಚಿದೆ. ಇಂಥ ಸಂದರ್ಭದಲ್ಲಿ ಸಹಕಾರ ಸಂಘಗಳು ರೈತರಿಗೆ ಬಹಳಷ್ಟು ನೆರವು ಒದಗಿಸುತ್ತಿವೆ. ನೀರಾವರಿ ಪ್ರದೇಶಗಳ ರೈತರು ವಾಣಿಜ್ಯ ಬೆಳೆ ಬೆಳೆದು ಸದೃಢರಾಗುತ್ತಿದ್ದು, ಅವರು ಆರ್ಥಿಕ ಸ್ವಾವಲಂಬಿಗಳಾಗಬೇಕು ಎಂದು ಅವರು ಹೇಳಿದರು.12 ವರ್ಷಗಳಲ್ಲಿ ಕೇಂದ್ರ ಸರಕಾರ ರೂ. 10 ಲಕ್ಷ ಕೋ. ಉದ್ಯಮಿಗಳ ಸಾಲ ಮನ್ನಾ ಮಾಡಿದೆ ಎಂದು ಬಿಜೆಪಿಯ ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ.…

Read More

ವಿಜಯಪುರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ದ | ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸತತ ಮೂರು ವರ್ಷಗಳ ಕಾಲ ದೇಶಾದ್ಯಂತ ಸಂಚಲನ ಸೃಷ್ಠಿಸಿದ ಪಂಚ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರಕ್ಕೆ ವಿಶೇಷ ಗೌರವ ತರುವುದರ ಜೊತೆಗೆ ಇಡೀ ದೇಶಕ್ಕೆ ಮಾದರಿಯಾಗಿ ನಿಂತಿವೆ. ನಮ್ಮ ಸರ್ಕಾರ ಜಾರಿಗೊಳಿಸಿದ ಈ ಯೋಜನೆಗಳನ್ನು ಇಂದಿನ ಮುಖ್ಯಮಂತ್ರಿ ಅವರು ಮುಂದುವರಿಸುವುದರ ಜೊತೆಗೆ ಅಧಿಕಾರ ವಹಿಸಿಕೊಂಡ ೧೦೦ ದಿನಗಳಲ್ಲಿ ೪೫ ವಿಶೇಷ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ನಿರ್ಧರಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನ ವೀಕ್ಷಿಸಿ, ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.ದೇಶದ ಸ್ವಾತಂತ್ರ‍್ಯಕ್ಕಾಗಿ ಜಿಲ್ಲೆ ಸೇರಿದಂತೆ ದೇಶವ್ಯಾಪಿ ತಮ್ಮ ಜೀವದ ಹಂಗು ತೊರೆದು, ದೇಶಕ್ಕಾಗಿ ಪ್ರಾಣ ತೆತ್ತ ಕೆಚ್ಚೆದೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೋಲಾಪುರ ರಸ್ತೆಯಲ್ಲಿರುವ ಅರಿಹಂತ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ಭಾರತದ ನಕ್ಷೆಯ ಆಕಾರದಲ್ಲಿ ಕುಳಿತುಕೊಂಡು ದೇಶಭಕ್ತಿಯ ಸಂದೇಶ ಸಾರಿ ಗಮನ‌ ಸೆಳೆದರು.

Read More

ನಿರ್ಮಲಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ರಾಷ್ಟ್ರ ನಾಯಕರ ತನುಮನಧನಗಳ ತ್ಯಾಗ ಬಲಿದಾನದ ಪ್ರತೀಕವಾಗಿ ಸಿಕ್ಕಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ದೇಶವನ್ನು ಅಭಿವೃದ್ಧಿ ಪಥದ ಕಡೆಗೆ ಕೊಂಡೊಯ್ಯುವುದು ಯುವಶಕ್ತಿಯ ಆಧ್ಯ ಕರ್ತವ್ಯವಾಗಿದೆ ಎಂದು ಡಾ ಸಮೀರ್ ಹಾದಿಮನಿ ಹೇಳಿದರು.ಪಟ್ಟಣದ ನಿರ್ಮಲಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಸಹಿಷ್ಣುತೆ, ಸಾಮರಸ್ಯ ಅನಾದಿಕಾಲದಿಂದಲೂ ನೆಲೆಗೊಂಡಿದ್ದು, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ದೇಶ ಪ್ರೇಮವನ್ನು ಮೂಡಿಸಬೇಕು ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಸಿಸ್ಟರ್ ಐರಿನ್ ವಹಿಸಿದ್ದರು. ನಿರ್ಮಲಾಲಯ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕರಾದ ಸಿಸ್ಟರ್ ಒಲಿವಾ, ಸಂಸ್ಥೆಯ ವ್ಯವಸ್ಥಾಪಕರಾದ ಸಿಸ್ಟರ್ ರೀವಿಂಗ್ ಹಾಗೂ ಸಿಸ್ಟರ್ ಸಂಜುಕ್ತಾ ಅವರು ಉಪಸ್ಥಿತರಿದ್ದರು.ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.

Read More

ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಸಂಭ್ರಮಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೆ ಎಷ್ಟು ಜನರು ಪ್ರಾಣ ತೆತ್ತಿದ್ದಾರೋ ಆ ಸ್ವಾತಂತ್ರವನ್ನು ಉಳಿಸಿಕೊಳ್ಳುವುದಕ್ಕಾಗಿ ವೀರ ಯೋಧರು ಸಹ ಪ್ರಾಣ ನೀಡಿದ್ದಾರೆ. ಈರ್ವರ ತ್ಯಾಗ ಹಾಗೂ ಬಲಿದಾನದ ಫಲವಾಗಿ ಇಂದು ಭಾರತದಲ್ಲಿ ನಾವೆಲ್ಲ ನೆಮ್ಮದಿಯಾಗಿ ಬದುಕುತ್ತಿದ್ದೇವೆ ಎಂದು ಭೂಸೇನೆಯ ನಿವೃತ್ತ ಸುಬೇದಾರ ಮೇಜರ್ ಗಿರಿಮಲ್ಲೇಶ ಬಿ.ಜಿ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೮೦ ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಯುವಕರು ದೇಶದ ವಿಚಾರಕ್ಕೆ ಬಂದಾಗ ದೇಶವೇ ಮೊದಲು ಮಿಕ್ಕಿದ್ದೆಲ್ಲ ನಂತರ ಎನ್ನುವ ಮಟ್ಟದಲ್ಲಿ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜಗತ್ತಿನಲ್ಲಿಯೇ ಭಾರತ ಮತ್ತಷ್ಟು ಬಲಶಾಲಿ ರಾಷ್ಟ್ರವಾಗಿ ಹೊರ ಹೊಮ್ಮುತ್ತದೆ ಎಂದು ಹೇಳಿದರು.ನಾನು ಸಹ ಹತ್ತಾರು ಆಪರೇಷನ್‌ಗಳಲ್ಲಿ ಭಾಗವಹಿಸಿ ಈ ದೇಶವನ್ನು ಕಾಯುವುದಕ್ಕಾಗಿ ಈ ದೇಶದ ಅಸ್ಮಿತೆಗಾಗಿ ಹೋರಾಟ ಮಾಡಿದ್ದು ಭಾರತ ದೇಶದಲ್ಲಿ ಜನಿಸಿದಕ್ಕೆ ಧನ್ಯವಾಯಿತು ಎನ್ನುವ ಭಾವ ನನ್ನಲ್ಲಿ ಮನೆ ಮಾಡಿದೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಪ್ರಾಚಾರ್ಯ ಸಿಧ್ಧರಾಮ ಹೂಗಾರ ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು, ಅನೇಕ ಹೋರಾಟಗಾರರ ತ್ಯಾಗ ಬಲಿದಾನದ ನಂತರ ನಮಗೆ ಸ್ವಾತಂತ್ರ್ಯ ದೊರಕಿತು. ಅಂತಹ ಪವಿತ್ರವಾದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದರು.ಇದೇ ವೇಳೆ ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ, ಅಲೋಕ ಬಡದಾಳ ಮಾತನಾಡಿದರು.ಈ ವೇಳೆ ಶಾಲೆಯ ವತಿಯಿಂದ ಬಿ.ಎಲ್.ಡಿ.ಇ.ಆಸ್ಪತ್ರೆಗೆ ದೇಹದಾನ ಮಾಡಿರುವ ಆಶಾ ಕಾರ್ಯಕರ್ತೆ, ಮಹಿಳಾ ಮುಖಂಡರು ಗಂಗೂಬಾಯಿ ಅಮಲಝೇರಿ ರವರಿಗೆ ಸನ್ಮಾನಿಸಲಾಯಿತು.ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ ಬಡದಾಳ, ಸದಸ್ಯರಾದ ಅಶೋಕ ವಾರದ,ಅಲೋಕ ಬಡದಾಳ, ಅಕ್ಷಯ ಕುಲಕರ್ಣಿ, ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ,ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ಅಂಜಲಿ ಕನ್ನೊಳ್ಳಿ, ಐಶ್ವರ್ಯ ಬೇಪಾರಿ ಮುಂತಾದವರು ಇದ್ದರು

Read More