Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 29 ನೆಯ ದಿನದ ಶರಣ ಮಾಲಿಕೆಯಲ್ಲಿ ಡಾ. ಚಂದ್ರ ಶೇಖರ ಹೆಗಡೆ ಅವರು ” ವಚನ ಗಳು ಮುಕ್ತ ಛಂದಸ್ಸಿನ ಕಾವ್ಯ ” ಎನ್ನುವ ವಿಷಯ ಕುರಿತು ಅತ್ಯಂತ ಪ್ರಭುದ್ದವಾಗಿ ಮಾತಾಡಿದರು.ಡಾ. ಚಂದ್ರಶೇಖರ ಅವರು ಮೊದಲಿಗೆ ವಚನಗಳ ವಿಶಿಷ್ಟತೆಗಳನ್ನು ವಿವರಿಸುತ್ತ ಹೋದರು. ವಚನಗಳ ಸಂಕ್ಷಿಪ್ತತೆ, ವಚನಗಳ ಕೊನೆಯಲ್ಲಿ ಅಂಕಿತಗಳು, ನಿಯತ ಛoದಸ್ಸಿಗೆ ಒಳಪಡದ ಸಾಲುಗಳು,ಗದ್ಯದ ಸರಳ ಶೈಲಿ, ಪದ್ಯದ ಸೌಂದರ್ಯ ರೀತಿ, ಲಯಬದ್ಧತೆ, ನಾದಮಯತೆ, ಸಾಲುಗಳ ಬಂಧನವಿಲ್ಲ, ಪ್ರಾಸಗಳ ಕಡ್ಡಾಯ ನಿಯಮ ವಿಲ್ಲ,ಜನಸಾಮಾನ್ಯರ ಸರಳವಾದ ಆಡು ಭಾಷೆ ಬಳಕೆ, ಮಾತನಾಡಿದಂತೆ ಕವನ, ಆತ್ಮವಿಮರ್ಶೆ, ಸ್ವ ನಿರೀಕ್ಷಣೆ, ಪ್ರಮಾಣಗಳು ಸಂವಾದಾತ್ಮಕತೆ ಭಾವಗೀತೆಗಳು, ಮುಕ್ತವಾದ ಛಂದಸ್ಸು, ತಾಳಮಾನಗಳ ಅಗತ್ಯತೆಯಿಲ್ಲ, ಮಾತ್ರಾಗಣ, ಅಕ್ಷರ ಗಣ, ಅಂಶಗಣಗಳ ಹಂಗಿಲ್ಲ ಎನ್ನುವುದರ ಪ್ರತಿಯೊಂದು ಲಕ್ಷಣಗಳನ್ನು ತಿಳಿಸಿ ಹೇಳಿದರು.ವಚನಗಳ ಮುಕ್ತಕ ರೂಪ, ವಚನಗಳ ಚಂದೋಗoಧಿತ್ವ, ವಚನಗಳಲ್ಲಿ ಪಂಚ ಮಾತ್ರಾಲಯ, ವಚನಗಳಲ್ಲಿ ಅಂಶಲಯ,ವಚನಗಳಲ್ಲಿ ಪ್ರಾಸ ಶ್ಲೇಷಾಲಂಕಾರಗಳು, ವಚನಗಳಲ್ಲಿ ಅನುಪ್ರಾಸ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಿ ಎಲ್ ಡಿ ಸೌಹಾರ್ದ ಬಿಜಾಪುರ ಲಿಂಗಾಯತ ಡೆವಲಪ್ಮೆಂಟ್ ಸೌಹಾರ್ದ ಸಹಕಾರಿ ಸಂಘ ನಿ. ವಿಜಯಪುರ ನೂತನ ಶಾಖೆ ಇದೆ ಆಗಸ್ಟ್ ತಿಂಗಳ 24 ನೇ ತಾರೀಖು ರವಿವಾರ ಬೆಳಿಗ್ಗೆ 10:30 ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಆರಂಭವಾಗಲಿದೆ. ತುಮಕೂರಿನ ಸಿದ್ದಗಂಗಾ ಮಠದ ಮ.ನಿ.ಪ್ರ ಶ್ರೀ ಶ್ರೀ ಸಿದ್ಧಲಿಂಗ ಮಹಾ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ವಹಿಸಲಿದ್ದಾರೆ.ಇದೇ ವೇಳೆ ಬೆಂಗಳೂರಿನಲ್ಲಿ ನೆಲೆಸಿರುವ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 5 ಜನ ಸಾಧಕರಿಗೆ ಗೌರವ ಸನ್ಮಾನ ಹಮ್ಮಿಕೊಂಡಿದ್ದು, ತಾಲೂಕಿನ ಬೋರಗಿ ಗ್ರಾಮದ ಹೆಡ್ ಕಾನ್ಸ್‌ಟೇಬಲ್ ಮೌಲಾಲಿ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಬ.ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ ಖರೀದಿ ಆರೋಪ | ಚುನಾವಣಾ ಆಯೋಗಕ್ಕೆ ದೂರು | ಮಾಜಿ ಸಚಿವ ಸಿಎಂ ಇಬ್ರಾಹಿಂ ಆರೋಪಕ್ಕೆ ಕಾನೂನು ಕ್ರಮಕ್ಕೆ ಒತ್ತಾಯ ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಗಳನ್ನು ಖರೀದಿಸಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಆರೋಪಿಸಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಬಿಜೆಪಿ ನಾಯಕರ ನಿಯೋಗ ಗುರುವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ಮಾಜಿ ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ಸಿ.ಎನ್. ಅಶ್ವತ್ಥ ನಾರಾಯಣ್, ಮಾಜಿ ಎಂಎಲ್‌ಸಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಅರುಣ್ ಶಹಾಪುರ್ ಮತ್ತು ರಾಜ್ಯ ಕಾನೂನು ಕೋಶದ ಸಂಚಾಲಕ ವಸಂತ ಕುಮಾರ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಇಂದು ಬೆಂಗಳೂರಿನಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದೆ.2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ 7 ಕೋಟಿ ರೂ. ಹಂಚಬೇಕೆಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಾತನಾಡಿರುವ ವಿಡಿಯೋ ಕುರಿತಂತೆ ಸೂಕ್ತ ಕ್ರಮ…
ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಜನರ ಬಹುದಿನಗಳ ಬೇಡಿಕೆಯ ಮೀಸಲಾತಿ ಹೆಚ್ಚಳ ಮಾಡಿ ಒಳಮೀಸಲಾತಿ ನೀಡಿದ್ದ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ (ಝಳಕಿ) ತಿಳಿಸಿದ್ದಾರೆ.ಮಾಧ್ಯಮಗಳಿಗೆ ಪ್ರಕಟಣೆ ಮೂಲಕ ತಿಳಿಸಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತಿಲ್ಲ ಎಂದು ಆಕ್ಷೇಪಿಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಇವರು ಎ, ಬಿ, ಸಿ ಎಂದು ಮಾಡಿದ್ದಾರೆ.ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ…
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ ಗೆ ಪರೀಕ್ಷೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜುಲೈ ೨೦೨೬ನೇ ಅಧೀವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ಡೆಹರಾಡೂನಗೆ ೮ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರು ಮತ್ತು ಬಾಲಕಿಯರ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ ೦೭ ರಂದು ನಡೆಸಲಾಗುವುದು.ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ ೭ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ ೦೧-೦೭-೨೦೨೬ರಂತೆ ೧೧ ವರ್ಷದಿಂದ ೧೩ ವರ್ಷದೊಳಗಿರುವ ಅಂದರೆ ೦೨-೦೭-೨೦೧೩ ರಿಂದ ೦೧-೦೧-೨೦೧೫ರವರೆಗೆ ಜನಿಸಿರುವ ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜ, ಗರಹಿ ಕ್ಯಾಂಟ್, ಡೆಹರಾಡೂನ, ಉತ್ತರಾಖಂಡ-೨೪೮೦೦೩ ಮೂಲಕ ಪಡೆಯಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿ-ಪ್ರತಿಯಲ್ಲಿ ಅಗತ್ಯ ದಾಖಲೆ ಸಹಿತ ಅಕ್ಟೋಬರ್ ೧೫ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ…
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಪಟ್ಟಿ ಪ್ರಕಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ:೧೯-೦೮-೨೦೨೫ ರಿಂದ ೦೧-೦೯-೨೦೨೫ ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಹೆದ್ದಾರಿ-೫೨ರ ಅರ್ಜನಾಳ ಕ್ರಾಸ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.ರಾಷ್ಟ್ರೀಯ ಹೆದ್ದಾರಿ-೫೨ರ ಅರ್ಜನಾಳ ಕ್ರಾಸ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ದಾಳಿ ನಡೆಸಿ, ಒಟ್ಟು ೧೨೧.೩೦ ಕ್ವಿಂಟಲ್ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದು ಅರ್ಶದ ದಾಂಡೇವಾಲೆ ಇವರ ಮೇಲೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ದಾಳಿಯಲ್ಲಿ ಇಂಡಿ ತಾಲ್ಲೂಕಿನ ಆಹಾರ ನಿರೀಕ್ಷಕರಾದ ಸಿದ್ರಾಮೇಶ ಹಲಸಂಗಿ, ಝಳಕಿ ಪಿಎಸ್‌ಐ ಮಂಜುನಾಥ ತಿರಕ್ಕಣ್ಣವರ ಪೋಲಿಸ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿಗಳು ಇದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟ ಉದ್ಘಾಟನಾ ಸಮಾರಂಭವು ಆಗಸ್ಟ್ ೨೫ ಹಾಗೂ ೨೬ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆಕಾರ್ಯಕ್ರಮದಲ್ಲಿ ಕತ್ರಾಳ-ಬಾಲಗಾಂವ-ಗುರುದೇವ ಆಶ್ರಮದ ಪರಮಪೂಜ್ಯ ಶ್ರೀ ಅಮೃತಾನಂದ ಸ್ವಾಮೀಜಿ ಅವರು ದಿವ್ಯ ಸಾನಿದ್ಯ ವಹಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಂ.ಬಿ.ಪಾಟೀಲ ಅವರು ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿಲಿದ್ದಾರೆ.ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ್ರ ಸಚಿವರಾದ ಈಶ್ವರ ಖಂಡ್ರೆ ಅವರು ಘನ ಉಪಸ್ಥಿತಿರಿರಲಿದ್ದು, ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್. ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ…
ಉಜನಿ ಹಾಗೂ ವೀರ್ ಜಲಾಶಯದಿಂದ ೧.೭೫ ಲಕ್ಷ ಕ್ಯೂಸೆಕ್ಸ್ ನೀರು ಉದಯರಶ್ಮಿ ದಿನಪತ್ರಿಕೆ ಚಡಚಣ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಜನಿ ಜಲಾಶಯದಿಂದ ವೀರ್‌ಧರಣ ಜಲಾಶಯದಿಂದ ೧.೭೫ ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿದೆ.ಬುಧವಾರದಂದು ರಾತ್ರಿ ೦೮:೩೦ ಕ್ಕೆ ಪ್ರವಾಹ ನಿಯಂತ್ರಣಕ್ಕಾಗಿ ಉಜನಿ ಜಲಾಶಯದ ಸ್ವಿಲ್‌ವೇಯಿಂದ ೬೦ ಸಾವಿರ ಹಾಗೂ ಪವರ್ ಹೌಸ್‌ನಿಂದ ೧೬ ನೂರು ಕ್ಯೂಸೆಕ್ ನೀರನ್ನು ಬಿಡಲಾಗಿದೆ ಅಲ್ಲದೆ ವೀರ್ ಜಲಾಶಯದ ಪ್ರದೇಶದಲ್ಲಿ ಮಳೆ ಹೆಚ್ಚಾದ ಕಾರಣ ರಾತ್ರಿ ೦೬ ಗಂಟೆಗೆ ೪೨೭೨೪ ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಹೀಗೆ ಒಟ್ಟು ಮೊದಲಿದ್ದ ನೀರಿನ ಪ್ರಮಾಣ ಸೇರಿದಂತೆ ಒಟ್ಟು ೧.೭೫ ಲಕ್ಷ ಕ್ಯೂಸೆಕ್ ನೀರನ್ನು ಬೀಮಾ ನದಿಗೆ ಹರಿಬಿಡಲಾಗಿದೆ ಎಂದು ಪಂಢರಪುರದ ಭೀಮಾ ನೀರಾವರಿ ಇಲಾಖೆಯ ಉಪ ಕಾರ್ಯನಿರ್ವಾಹಕ ಅಭಿಯಂತ್ರರಾದ ಪಿ.ಎಂ.ಪಾಟೀಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದರಿಂದ ಚಡಚಣ ತಾಲೂಕಿನಲ್ಲಿ ಭೀಮಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಉಮರಜ, ಉಮರಾಣಿ, ಶಿರನಾಳ, ಹಿಂಗಣಿ, ಧೂಳಖೇಡ ಮುಂತಾದ ಗ್ರಾಮಗಳ ಬಳಿ ಇರುವ ೮ ಬ್ರಿಜ್…
