Author: editor.udayarashmi@gmail.com

ದಿ ಡಿ.ದೇವರಾಜ್ ಅರಸು ಅವರ ೧೧೦ನೇ ಜನ್ಮ ದಿನಾಚರಣೆಯಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ವಿಜಯಪುರ: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆ ಹಾಗೂ ಸಾಮಾಜಿಕ ಏಳಿಗೆಗೆ ಶ್ರಮಿಸಿದ್ದಾರೆ ಎಂದು ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೦ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಅವರು ಮಾತನಾಡಿದರು.ಡಿ.ದೇವರಾಜ್ ಅರಸು ಅವರು ಅನೇಕ ಜನಪರವಾದ ಯೋಜನೆ ರೂಪಿಸಿ, ಜಾರಿಗೆ…

Read More

ವಿಜಯಪುರ ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.ಅವರು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ಮತ್ತು ಅವುಗಳ ಪರಿಣಾಮಗಳ ಬಗ್ಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲತೆಯಿಂದ ಅಭಿಯಾನದಲ್ಲಿ ಭಾಗವಹಿಸಬೇಕು ಎಂದರು.ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ನಿರಂತರ ಜಾಗೃತಿ, ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಸೆಪ್ಟೆಂಬರ್ ೩೦ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು…

Read More

ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಕರೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದ್ದು ಪಕ್ಷಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಶ್ವತ ಲೋಕ್ ಅದಾಲತ್ ಅನ್ನು ಪರಿಚಯಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮಾಜದಲ್ಲಿ ಶಾಂತಿ ನೆಲೆಸಲಿ ಎಂಬ ಸದುದ್ದೇಶದಿಂದ ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದೆ. ಈ ಮೊದಲು ಪ್ರತೀ ಮೂರು ತಿಂಗಳಿಗೊಮ್ಮೆ ಲೋಕ್ ಅದಾಲತ್ ಹಮ್ಮಿಕೊಳ್ಳುವ ಮೂಲಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತಿದ್ದು. ಸಧ್ಯ ಶಾಶ್ವತ ಲೋಕ್ ಅದಾಲತ್ ಮೂಲಕ ಯಾವುದೇ ಸಂದರ್ಭದಲ್ಲಿಯೂ ಕೂಡ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕು ಬಣಜಿಗ ಕ್ಷೇಮಾಭಿವೃದ್ದಿ ಸಂಘದ ನೂತನ ಪದಾದಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸೆ.೨೮ ರಂದು ಹಮ್ಮಿಕೊಳ್ಳಲಾಗಿದೆ.ಈ ಕುರಿತು ಪಟ್ಟಣದ ಕಿಲ್ಲಾ ಹೊಸಮಠದಲ್ಲಿ ಬಣಜಿಗ ಸಮಾಜದ ತಾಲೂಕು ಘಟಕದ ನೂತನ ಅಧ್ಯಕ್ಷ ಅಶೋಕ ಚಟ್ಟೇರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಾಜ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು, ಸಮಾಜದ ನಿವೃತ್ತ ನೌಕರರನ್ನು ಸನ್ಮಾನಿಸಲು ಸಲಹೆ ನೀಡಿದರು.ಪ್ರತಿಭಾ ಪುರಸ್ಕಾರಕ್ಕೆ ೨೦೨೩-೨೪ ಮತ್ತು ೨೦೨೪-೨೫ ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ ಶೇ೯೦ ಪಲಿತಾಂಶ ಪಡೆದ ವಿದ್ಶಾರ್ಥಿಗಳ ವಿವರಗಳನ್ನು ಸ೧೫ ರ ಒಳಗಾಗಿ ಸಮಾಜದ ಸದಸ್ಶರಾದ ಎಮ್.ಜಿ.ಹೊಕ್ರಾಣಿ ೯೪೪೯೫೭೮೬೯೬, ಲೋಹಿತ ನಾಲತವಾಡ ೭೭೬೦೧೭೧೭೦೦, ಚನ್ನಬಸವರಾಜ ಅಂಗಡಿ ೬೩೬೦೭೩೬೮೮೦, ಜಗದೀಶ ಲಕ್ಷಟ್ಟಿ ೯೦೬೦೧೦೭೦೭೭, ಶಿವರಾಜ ಹುರಕಡ್ಲಿ ೯೮೮೬೯೮೫೮೩೫, ಇವರ ಬಳಿ ನೊಂದಾಯಿಸಲು ಮತ್ತು ೨೦೨೨-೨೩ ಹಾಗೂ೨೦೨೩-೨೪ ರ ಸಾಲಿನ ಸರಕಾರಿ ಮತ್ತು ಅರೆ ಸರಕಾರಿಯಾಗಿ ಸೇವೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಸಹಯೋಗದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರದ ಕಂದಗಲ್ಲ ಶ್ರೀ ಹಣುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜರುಗಿತು.ಈ ಸಂದರ್ಭದಲ್ಲಿ ಚಡಚಣ ತಾಲೂಕಿನ ಹಿರಿಯ ಛಾಯಾಗ್ರಾಹಕರು ಹಾಗೂ ಪತ್ರಕರ್ತರಾದ ರಾಜಶೇಖರ ಡೋಣಜ(ಮಠ)ಅವರನ್ನು ಸನ್ಮಾನಿಸಲಾಯಿತು.ಅವರು ಸುಮಾರು ೨೫ ವರ್ಷಗಳ ಸೇವೆ ಸಲ್ಲಿಸಿದ್ದು ಅದರಲ್ಲಿ ವಿಶೇಷವಾಗಿ ಚಡಚಣ ತಾಲೂಕಿನ ಸಾರ್ವಜನಿಕರಿಗೆ ಪ್ರಪ್ರಥಮವಾಗಿ ಡಿಜಿಟಲ್ ಕಂಪ್ಯೂಟರ್ ಫೋಟೊ ಪರಿಚಯಿಸಿದವರಾಗಿದ್ದಾರೆ. ಅವರ ಅವಿರತ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದಲ್ಲಿ ಯುವ ಭಾರತ್ ಸಮೀತಿಯ ಅಧ್ಯಕ್ಷ ಉಮೇಶ ಕಾರಜೋಳ, ಖ್ಯಾತ ವಾಗ್ಮಿ, ಅಂಕಣಕಾರ, ಹವ್ಯಾಸಿ ಛಾಯಾಗ್ರಾಹಕರಾದ ಚಕ್ರವರ್ತಿ ಸೂಲಿಬೆಲೆ, ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾದ ನಾಗರಾಜ ಟಿ.ಸಿ.,ಯುವಮುಖಂಡ ಶ್ರೀಶೈಲಗೌಡ ಬಿರಾದಾರ(ಮಾಗಣಗೇರಿ),ಎಸ್.ಬಿ.ವಿಸ್ಡಮ್ ಅಕಾಡೆಮಿಯ ಸಂಸ್ಥಾಪಕರಾದ ಶರಣಯ್ಯ ಬಂಡಾರಿಮಠ, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ರಮೇಶ ಚವ್ಹಾಣ, ಚಡಚಣ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ಸಂಜಯ ರೇವೆ, ಗುರುರಾಜ ಬಿದರಿ,…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚೆಗೆ ವರ್ಗಾವಣೆಗೊಂಡ ಚಡಚಣ ಕ್ಷೇತ್ರಶಿಕ್ಷಣಾಧಿಕಾರಿ ಸುಜಾತಾ ಹುನೂರ ಅವರ ತೆರವಾಗಿರುವ ಸ್ಥಾನಕ್ಕೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಚಿದಾನಂದ ಕಟ್ಟಿಮನಿ ಅವರು ಅಧಿಕಾರ ಸ್ವೀಕರಿಸಿದರು.ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಮನೆಯ ಮಗನಾಗಿ ನಾನು ನನ್ನ ತಾಲೂಕಿನ ಎಲ್ಲ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ ಎಲ್ಲ ಶಿಕ್ಷಕರು ಭಯ ಮುಕ್ತ ವಾತಾವರಣದಲ್ಲಿ ತಮ್ಮ ಶೈಕ್ಷಣಿಕ ಸೇವೆ ಸಲ್ಲಿಸಲು ನಾನು ಶಿಕ್ಷಕ ಸಂಘಟನೆ ಹಾಗೂ ಶಿಕ್ಷಕರ ಬೆನ್ನೆಲುಬು ಆಗಿ ಕರ್ತವ್ಯ ನಿರ್ವಹಿಸುವೆ. ಶೀಘ್ರದಲ್ಲಿ ತಾಲೂಕಿನ ಗುರುಸ್ಪಂದನ ಕಾರ್ಯಕ್ರಮ ಏರ್ಪಡಿಸುವೆನ ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ಎಸ್ ಪಾಟೀಲ ಮಾತನಾಡಿ ನಮ್ಮ ತಾಲೂಕಿನವರೆ ಆದ ಕಟ್ಟಿಮನಿ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿಗಳು ಹಾಗೂ ಸ್ನೇಹ ಜೀವಿಗಳು. ಶಿಕ್ಷಕರಿಗೆ ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಶೈಕ್ಷಣಿಕ ಪ್ರಗತಿಗೆ ತಮ್ಮ ಜೊತೆಗೆ ನಮ್ಮೆಲ್ಲ ನೌಕರರ ಸಂಘ ಸದಾ ಬೆನ್ನೆಲುಬಾಗಿ ನಿಮ್ಮ ಜೊತೆ ಹೆಜ್ಜೆ ಹಾಕುತ್ತೇವೆ ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರ…

Read More

ವಿಜಯಪುರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವೈಯಕ್ತಿಕ ಆರ್ಥಿಕ ನೆರವು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಳೆಯಿಂದ ನಷ್ಟ ಅನುಭವಿಸಿದ ನಗರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವರು ಆಗಷ್ಟ 15ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದು ರಾಮನಗರ ಬಳಿಯ ನೆಹರು‌ ನಗರ ನಿವಾಸಿ‌ ಅಚ್ಯುತ್ ಆಚಾರ ಪುರೋಹಿತ ಮತ್ತು ರಾಜಾಜಿನಗರದ ನಿವಾಸಿ ಜಾಫರ್ ಅಹ್ಮದ್ ಇನಾಮದಾರ ಅವರ ಕುಟುಂಬಕ್ಕೆ ತಲಾ ರೂ.50 ಸಾವಿರ ವೈಯಕ್ತಿಕ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು.ಅದರಂತೆ ಸಚಿವರು ಇದೀಗ ಎರಡೂ ಕುಟುಂಬಗಳಿಗೆ ತಲಾ ರೂ. 50 ಸಾವಿರ ಆರ್ಥಿಕ ನೆರವು ನೀಡಿದ್ದಾರೆ. ಸಚಿವರು ನೀಡಿದ ಹಣವನ್ನು ಕೆಪಿಸಿಸಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಮತ್ತು ಜಿಲ್ಲಾ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪಂಚಮಸಾಲಿ ಸಮಾಜದಿಂದ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಮತ್ತು ಪಿಯುಸಿಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕಪಡೆದ ಸಮಾಜದ ಮಕ್ಕಳಿಗೆ ಪ್ರತಿಭಾಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಪಂಚಮಸಾಲಿ ಸಮಾಜದ ಅಧ್ಯಕ್ಷ ಪಿ.ಎನ್. ಪಾಟೀಲ ಹೇಳಿದರು.ನಗರದ ಮೈಗೂರ ರಸ್ತೆಯಲ್ಲಿರುವ ರಾಣಿ ಚೆನ್ನಮ್ಮಾ ವಿವಿಧೋದ್ದೇಶಗಳ ಸಹಕಾರ ಸಂಘದ ಸಭಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ತಾಲೂಕಾ ವೀರಶೈವ ಪಂಚಮಸಾಲಿ ಸಂಘ ಹಾಗೂ ರಾಣಿ ಚೆನ್ನಮ್ಮಾ ವಿವಿಧೋದ್ದೇಶಗಳ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಸೆ.14 ರಂದು ಜಮಖಂಡಿ ತಾಲೂಕಾ ಪಂಚಮಸಾಲಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಮೈಗೂರ ರಸ್ತೆಯಲ್ಲಿರುವ ಪಂಚಮಸಾಲಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದರು.ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ 15ಸಾವಿರ, ದ್ವಿತೀಯ 10 ಸಾವಿರ, ತೃತಿಯ 5ಸಾವಿರ ನಗದು ಭಹುಮಾನ ನೀಡಲಾಗುವದು ಎಂದರು.ಸಮಾಜದ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ…

Read More

ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ಮಹೇಶ ಜೋಶಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲ್ಲೂಕಿನ ಕಲ್ಹಳ್ಳಿ ಗ್ರಾಮದ ಸತ್ಯಕಾಮ ಪ್ರತಿಷ್ಠಾನದ ಸುಮ್ಮನೆ ಮನೆ(ಸಭಾಭವಣದಲ್ಲಿ) ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗುವದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.ಇಲ್ಲಿನ ರಮಾ ನಿವಾಸದಲ್ಲಿ ಮಂಗಳವಾರ ಸುದ್ದಿಗೊಷ್ಠೀಯಲ್ಲಿ ಮಾತನಾಡಿ, ವಾರ್ಷಿಕ ಸಾಮಾನ್ಯ ಸಭೆಯನ್ನು ಕಲ್ಹಳ್ಳಿಯಲ್ಲಿ ನಡೆಸಲು ಉದ್ದೇಶಿಸಿದ್ದು, ಸ್ಥಳವನ್ನು ನೋಡಿ ಹಾಗೂ ಕಾರ್ಯಕಾರಣಿ ಸಮಿತಿಯನ್ನು ಏರ್ಪಡಿಸಿ ಅನುಮೋದನೆಯನ್ನು ಪಡೆದು ಅಂತಿಮವಾಗಿ ಘೋಷಣೆ ಮಾಡಲಾಗುವದು ಎಂದರು.ನಮಗೆ ಎಲ್ಲಿ ಬೇಕಾದರು ಸಾಮಾನ್ಯ ಸಭೆಯನ್ನು ಮಾಡಬಹುದು ಎಂದು ನ್ಯಾಯಾಲಯ ಸ್ಪಷ್ಟವಾದ ಆದೇಶವನ್ನು ನೀಡಿದೆ, ಆದ್ದರಿಂದ ಹಳ್ಳಿ ಹಳ್ಳಿಗಳಿಗೆ ಸಾಮಾನ್ಯ ಸಭೆಯನ್ನು ಮಾಡುವದರಿಂದ ಜನರಲ್ಲಿ ಕನ್ನಡದ ಆಸಕ್ತಿ ಬರುತ್ತದೆ, ನಾವು ಇಗಾಗಲೇ ಹೋಬಳಿ ಮಟ್ಟದಲ್ಲಿ ಘಟಕವನ್ನು ಸ್ಥಾಪಿಸುತ್ತಿದ್ದೆವೆ, ಗ್ರಾಮಮಟ್ಟದಲ್ಲಿ ಘಟಕ ಮಾಡಿ ಜನಸಾಮಾನ್ಯರ ಪರಿಷತ್ತು ಮಾಡಲಾಗುವದು.ಸಂಡೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಭೆ ನಡೆಯಬೇಕಿತ್ತು ಆದರೆ ಕೆಲವರ ಕುತಂತ್ರದಿಂದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಹಡಲಸಂಗ ಗ್ರಾಮದ ಮನೆಗಳು ಬಿದ್ದು ಹಾನಿಯಾಗಿದೆ. ಗ್ರಾಮದ ಭಿಮಸೇನ ರಜಪೂತ, ಭೀಮಾಶಂಕರ ಮಂದೇವಾಲೆ, ಕಲ್ಲಪ್ಪ ನಾಟಿಕಾರ, ದೌಲತ ವಾಲಿಕಾರ, ಶಿವಪ್ಪ ಕಟ್ಟಿಮನಿ, ಹೇಮಸಿಂಗ ಷಮಶಾಪುರ, ಶಂಕರ ಲೋಧಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಮನೆಗಳ ಬಿದ್ದಿವೆ. ಗ್ರಾಮಸ್ಥರಿಗೆ ಇರಲು ತೊಂದರೆ ಯಾಗುತ್ತಿದೆ ಶಾಲೆಯಲ್ಲಿ ಇರುವ ವ್ಯವಸ್ಥ ಮಾಡಲು ಗ್ರಾಮಸ್ಥರ ಆಗ್ರಹವಾಗಿದೆ.ಯಾವದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಬಿಜೆಪಿ ದುರೀಣ ಕಾಸುಗೌಡ ಬಿರಾದಾರ ಭೇಟಿ ನೀಡಿದ್ದು, ಕೂಡಲೇ ಪರಿಹಾರಕ್ಕೆ ನೀಡಬೇಕು ಗ್ರಾಮಸ್ಥರಿಗೆ ಗಂಜಿ ಕೇಂದ್ರ ಸ್ಥಾಪಿಸಲು ಆಗ್ರಹಿಸಿದ್ದಾರೆ.ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಶರಣಪ್ಪ ಉಡಚಾಣ ಇವರ ಮನೆ ಬಿದ್ದಿದೆ. ಯಾವದೇ ತರಹದ ಪ್ರಾಣ ಹಾನಿಯಾಗಿಲ್ಲ. ಮನೆಯಲ್ಲಿದ್ದ ಕಾಳು ನಷ್ಟವಾಗಿವೆ. ಮನೆಯವರು ಅಲ್ಲಿ ವಾಸಿಸದೇ ಶಾಲೆಯಲ್ಲಿ ವಾಸಿಸುತ್ತಿದ್ದಾರೆ.

Read More