Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.​ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ‍್ಯವು ಸುಲಭವಾಗಿ ಸಿಕ್ಕಿದ್ದಲ್ಲ. ಅಸಂಖ್ಯಾತ ವೀರ ಧೀರರ ತ್ಯಾಗ ಮತ್ತು ಬಲಿದಾನಗಳ ಫಲವಾಗಿ ನಮಗೆ ಸ್ವಾತಂತ್ರ‍್ಯ ದೊರೆತಿದೆ. ಇಂತಹ ಮಹನೀಯರ ಬಲಿದಾನವನ್ನು ನೆನಪಿಸಿಕೊಳ್ಳುವುದು ಮತ್ತು ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ಸ್ಮರಿಸಿದರು.​ವಿಜಯಪುರ ಜಿಲ್ಲೆಯಲ್ಲಿರುವ ಗಾಂಧಿ ಭವನವು ಮಾದರಿಯಾಗಿದೆ ಎಂದ ಅವರು, ಅತ್ಯಂತ ಪ್ರಶಾಂತ ವಾತಾವರಣದಲ್ಲಿ ಮೈದಾಳಿರುವ ಈ ಭವನವು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುವ ತಾಣವಾಗಿದೆ. ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸಿದ ಅಹಿಂಸೆ, ಸತ್ಯ, ಶಾಂತಿ ಹಾಗೂ ಸರಳತೆಯಂತಹ ಉನ್ನತ ತತ್ವಾದರ್ಶಗಳು ಪ್ರತಿಯೊಬ್ಬರ ಬದುಕಿಗೂ ಬೆಳಕಿದ್ದಂತೆ. ಗಾಂಧೀಜಿಯವರ ಹೋರಾಟದ ಹಾದಿ, ಅವರ ವಿಚಾರಧಾರೆಗಳು ಮತ್ತು ಬದುಕಿನ ಮೌಲ್ಯಗಳ ಸಮಗ್ರ ಮಾಹಿತಿಯನ್ನು ಈ ಭವನವು ಒಳಗೊಂಡಿದೆ. ಇಂದಿನ ಯುವ ಪೀಳಿಗೆ ಗಾಂಧಿ ಭವನಕ್ಕೆ ಭೇಟಿ…

Read More

ಜಿಪಂ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿ.ಪಂ. ಸಿಇಒ ರಿಷಿ ಆನಂದ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ವೀರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೊರೆತ ಸ್ವಾತಂತ್ರ್ಯ ವನ್ನು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಯಿಂದ ಸ್ಮರಿಸುವುದರ ಜೊತೆಗೆ, ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಹೇಳಿದರು.೮೦ನೇ ಸ್ವಾತಂತ್ರೋತ್ಸವದ ಅಂಗವಾಗಿ ಶನಿವಾರ ಜಿಲ್ಲಾ ಪಂಚಾಯತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಸಂಖ್ಯಾತ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟು, ಅವರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಆದ್ದರಿಂದ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಹಾಗೂ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಜನಕಲ್ಯಾಣವೇ ಆಡಳಿತದ ಪ್ರಮುಖ ಉದ್ದೇಶವಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತಿದ್ದು, ಈ ಹುದ್ದೆಗಳಲ್ಲಿ ಒಂದು ಹುದ್ದೆಯೂ ಉರ್ದು ಮಾಧ್ಯಮದ ಹುದ್ದೆಗಳಿಗೆ ಪರಿಗಣಿಸಿರುವುದಿಲ್ಲ. ಇದರಿಂದಾಗಿ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಉರ್ದು ಮಾಧ್ಯಮದ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಗುಣಮಟ್ಟಕ್ಕೆ ಗಂಭೀರವಾದ ತೊಂದರೆ ಉಂಟಾಗುವ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ‌.ಪಾಟೀಲ ಅವರಿಗೆ ಜಿಲ್ಲಾ ಉರ್ದು ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜುಬೇರ ಎಸ್.ಕೆರೂರ ಅವರು ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಜುಬೇರ ಕೆರೂರ, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಹೊರಡಿಸಿರುವ ಅಧಿಸೂಚನೆಯಲ್ಲಿ ಕೇವಲ ಕನ್ನಡ ಮತ್ತು ಆಂಗ್ಲ ಮಾಧ್ಯಮದ ವಿವಿಧ ವೃಂದದ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲು ಪರಿಗಣಿಸಲಾಗಿದೆ. ಜಿಲ್ಲೆಯಲ್ಲಿ ಬಹಳಷ್ಟು ಉರ್ದು ಮಾಧ್ಯಮದ ಶಾಲೆಗಳಲ್ಲಿ ಪಿ.ಎಸ್.ಟಿ, ಜಿ.ಪಿ.ಟಿ, ಎಚ್.ಎಸ್.ಟಿ, ಹಾಗೂ ಸಿ.ಎಸ್.ಟಿ ಶಿಕ್ಷಕರ ಕೊರತೆ ಇದ್ದು, ಆದರೆ ಸದರಿ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿಗಾಗಿ ಪರಿಗಣಿಸದೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ನಾವು ಬ್ರಿಟೀಷರ ಆಳ್ವಿಕೆಯಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದಾಗ ನಮ್ಮ ಹಿರಿಯರು ಅನೇಕರು ಅವರ ವಿರುದ್ಧ ಹೋರಾಡಿದ ಫಲವಾಗಿ ನಮಗೆ ಸ್ವಾಂತತ್ರ್ಯ ಸಿಕ್ಕಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರು ಹೇಳಿದರು.ಸ್ಥಳೀಯ ಶ್ರೀ ಸಂಗಮೇಶ್ವರ ಕಾಲೇಜು ಆವರಣದಲ್ಲಿ ತಾಲೂಕಾಡಳಿತ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ನಾವು ಇಂದು ಸ್ಮರಿಸುತ್ತ ನಮ್ಮ ದೇಶದ ಒಳತಿಗಾಗಿ ನಾವು ಜಾತಿ, ಪಂಗಡ, ಮೇಲು, ಕೀಳು ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಶಾಸಕರು ಹೇಳಿದರು.ಧ್ವಜಾರೋಹಣ ನೆರವೇರಿ ತಹಶೀಲದಾರ ಸಂಜಯ ಇಂಗಳೆ ಮಾತನಾಡಿದರು.ಸಾಲೋಟಗಿಯ ಸಾಹಿತಿ ಗೀತಯೋಗಿ ಅವರು ಅತಿಥಿ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಪತ್ರಕರ್ತ ಅಲ್ಲಮಪ್ರಭು ಕರ್ಜಗಿ, ಸಾಹಿತಿ ವಿದ್ಯಾ ಕಲ್ಯಾಣಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.ಧ್ವಜಾರೋಹಣದ ನಂತರ ಪೊಲೀಸ್ ಇಲಾಖೆ, ಗೃಹರಕ್ಷಕ ಇಲಾಖೆ ಹಾಗೂ ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಣಾಧಿಕಾರಿ ಅಶೋಕಕುಮಾರ ರಾಠೋಡ, ಬಿ.ಇ.ಓ. ನಾಗೇಂದ್ರಪ್ಪ…

Read More

ಶ್ರಾವಣ ಮಾಸ ಮುಗಿಯುವವರೆಗೆ ಪ್ರತಿದಿನ ಬೆಳಿಗ್ಗೆ ಪ್ರವಚನ | ಭಕ್ತರಿಗೆ ನಿತ್ಯ ಪ್ರಸಾದ ವ್ಯವಸ್ಥೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಕರ್ನಾಟಕ–ಮಹಾರಾಷ್ಟ್ರ ಗಡಿ ಭಾಗದ ಬಾಲಗಾವ್, ಕಾತ್ರಾಳ, ಅಕ್ಕಲವಾಡಿ ಹಾಗೂ ಬೋರಗಿ ಗ್ರಾಮಗಳ ಮಧ್ಯಭಾಗದಲ್ಲಿರುವ ಗುರುದೇವ ಆಶ್ರಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪರಮಪೂಜ್ಯ ಡಾ. ಅಮೃತಾನಂದ ಸ್ವಾಮೀಜಿಯವರಿಂದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗುರುದೇವ ಆಶ್ರಮ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಪರಮಪೂಜ್ಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ನಿರ್ಮಾಣಗೊಂಡಿರುವ ಗುರುದೇವ ಆಶ್ರಮವು ಈ ಭಾಗದ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಗುರುತಿಸಿಕೊಂಡಿದೆ. ಸಿದ್ದೇಶ್ವರ ಮಹಾಸ್ವಾಮಿಗಳು ಆಶ್ರಮದಲ್ಲಿ ಹಲವು ದಿನಗಳ ಕಾಲ ವಾಸ್ತವ್ಯವಿದ್ದು, ಭಕ್ತರಿಗೆ ಆಧ್ಯಾತ್ಮಿಕ ಜ್ಞಾನ, ಧ್ಯಾನ, ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕುರಿತು ತಮ್ಮ ಪ್ರವಚನಗಳ ಮೂಲಕ ಅಮೂಲ್ಯ ಸಂದೇಶಗಳನ್ನು ನೀಡಿದ್ದರು.ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಅಂಗವಾಗಿ ಆಗಸ್ಟ್ 17ರಿಂದ ಶ್ರಾವಣ ಮಾಸ ಮುಗಿಯುವವರೆಗೆ ಪ್ರತಿದಿನ ಬೆಳಿಗ್ಗೆ 6.30ರಿಂದ 7.30ರವರೆಗೆ ಗುರುದೇವ ಆಶ್ರಮದಲ್ಲಿ ಡಾ. ಅಮೃತಾನಂದ ಸ್ವಾಮೀಜಿಯವರ…

Read More

ಬಿ.ಎಲ್.ಡಿ.ಇ‌ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಯುವ ಸಂಕಲ್ಪಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ವಿಕ್ಷಿತ್ ಭಾರತ್ ಸಂಕಲ್ಪ ಅಭಿಯಾನದಡಿಯಲ್ಲಿ ಕಾಲೇಜಿನಲ್ಲಿ ಆ.೧೪ ರಂದು ಎನ್‌ ಎಸ್‌ ಎಸ್ ಘಟಕ-I ಮತ್ತು ಘಟಕ-II ಸಹಯೋಗದಲ್ಲಿ ‘ನಶಾ ಮುಕ್ತ ಯುವ’ ಸಂಕಲ್ಪ ಪ್ರತಿಜ್ಞೆ ವಿಧಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಆರೋಗ್ಯಕ್ಕೆ ಉಂಟಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸಲು ಪ್ರತಿಯೊಬ್ಬರೂ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮಿಲನ್ ರಾಠೋಡ್, ಡಾ. ತರನ್ನುಮ್ ಜಬೀನ್ ಖಾನ್ ಮಹಾವಿದ್ಯಾಲಯದ ಇನ್ನಿತರ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ | ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೀರ್ತಿ ನಗರದಲ್ಲಿರುವ ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ೮೦ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ದೇಶದ ಐಕ್ಯತೆ ಮತ್ತು ಸಾರ್ವಭೌಮತೆ ಕಾಪಾಡಲು ವಿದ್ಯಾರ್ಥಿಗಳು ಈ ದಿನ ಪಣ ತೊಡಬೇಕು ಎಂದು ಕರೆ ನೀಡಿದರು.ವಸತಿ ನಿಲಯದ ಅಧೀಕ್ಷಕಿ ವಿಜಯಲಕ್ಷ್ಮಿ ಎಂ ದೇವನಗಾಂವ ಅವರು ಮಹಾತ್ಮ ಗಾಂಧೀಜಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಗಳಿಗೆ ಪೂಜೆ ನೆರವೇರಿಸಿದರು.ಸಮಾರಂಭದಲ್ಲಿ ವಸತಿ ನಿಲಯದ ಬಾಲಕಿಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‌ಎಂಸಿಎ) ಸಂಸ್ಥೆಯಲ್ಲಿ ನಡೆದ ೮೦ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಬಿ. ಆನಂದ್‌ ರವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸಂಭ್ರಮದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಲಾಸ್ ಕಾಂಬಳೆ ಮಾತನಾಡಿ, ಸ್ವಾತಂತ್ರ್ಯವು ಕೇವಲ ಆಚರಣೆಗೆ ಸೀಮಿತವಾಗದೆ, ಅದರ ಹಿಂದಿರುವ ಹೋರಾಟದ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಯುವಜನರು ದೇಶದ ಭವಿಷ್ಯವಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಪ್ರಾಮಾಣಿಕತೆ, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಹಿರಿಯ ಉಪನ್ಯಾಸಕರಾದ ಶಾಂತಿನಾಥ ಬನೋಜ್ ಮಾತನಾಡಿ, ಭಾರತವು ವಿವಿಧ ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಪರಂಪರೆಗಳನ್ನು ಹೊಂದಿರುವ ವೈವಿಧ್ಯಮಯ ರಾಷ್ಟ್ರವಾಗಿದೆ. ಈ ವೈವಿಧ್ಯತೆಯಲ್ಲಿಯೇ ಏಕತೆಯನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸಂತೋಷ್ ಉಂಡಾಡಿ ಸುರೇಶ, ಕುಮಾರ ತಕತರಾವ ರಾಜು ಭಜಂತ್ರಿ ಹರೀಶ ನಾಗರತ್ನ ರೇಣುಕೇಗೌಡರ ಶಿಲ್ಪಾ ರಾಮನ್ನಗೊಳ ಸುರೇಖಾ ದೇವರಡ್ಡಿ ಬಿ ಆರ್ ಮುಗ್ಗನ್ನವರ ರಾಘವೇಂದ್ರ…

Read More

ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆˌ (ಜಮಖಂಡಿ): ಶ್ರೀ ಪಡಸಲಗೇಶ್ವರ ಸಹಕಾರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.ಸಂಘದ ಅಧ್ಯಕ್ಷ ಹನಮಂತ ಕಾರಜೋಳ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಹನಮಂತ ಕಾರಜೋಳ, “ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಯುವ ಪೀಳಿಗೆ ದೇಶಭಕ್ತಿ, ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದರು.ಉಪಾಧ್ಯಕ್ಷ ಸದಾಶಿವ ಬಡಿಗೇರ ಮಾತನಾಡಿ, “ಸ್ವಾತಂತ್ರ್ಯೋತ್ಸವವು ಕೇವಲ ಆಚರಣೆಗೆ ಸೀಮಿತವಾಗದೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡುವ ದಿನವಾಗಿದೆ” ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಡಾ. ಎಚ್.ಎನ್. ಹಳ್ಳಿ, ಡಾ. ಎ.ಜೆ. ಜನವಾಡ, ಸಿದ್ದಪ್ಪ ನ್ಯಾಮಗೌಡ, ಅಪ್ಪಾಸಾಬ ನ್ಯಾಮಗೌಡ, ಮಲ್ಲು ಕೋರಿ, ಪರಪ್ಪ ಲಿಗಾಡಿ ಹಾಗೂ ಭೀರಪ್ಪ ಮಿರ್ಜಿ ಉಪಸ್ಥಿತರಿದ್ದರು.ಗ್ರಾಮಸ್ಥರಾದ ಈಶ್ವರ…

Read More