Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ಕಳ್ಳತನ ಹಾಗೂ ಖದೀಮರ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಝಳಕಿ ಠಾಣೆ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಝಳಕಿ ಠಾಣೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ತೀರಕನ್ನವರ ತಿಳಿಸಿದ್ದಾರೆ.ಗ್ರಾಮಸ್ಥರು ತಮ್ಮ ಚಿನ್ನಾಭರಣ, ಹಣ ಹಾಗೂ ಅಮೂಲ್ಯ ವಸ್ತುಗಳನ್ನು ಬ್ಯಾಂಕ್‌ನಲ್ಲಿ ಅಥವಾ ಮನೆಯಲ್ಲೇ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಕೇವಲ ಪೊಲೀಸ್ ಇಲಾಖೆ ಎಲ್ಲದಕ್ಕೂ ಹೊಣೆ ಎಂಬ ಮನೋಭಾವ ಬಿಟ್ಟು,ಯಾವುದೇ ಸಂದರ್ಭದಲ್ಲಿಯು ನಮ್ಮ ಪೋಲೀಸ್ ಇಲಾಖೆ ನಿಮ್ಮೊಂದಿಗೆ ಸದಾ ಇರುತ್ತೆವೆ ಮತ್ತು ಸಾರ್ವಜನಿಕರ ಸಹಕಾರವೂ ಅತೀ ಅಗತ್ಯವಾಗಿದೆ ಎಂದು ಅವರು ಹೇಳಿದರು.ಮೇಲಾಧಿಕಾರಿಗಳ ಆದೇಶದಂತೆ ಪ್ರತಿಯೊಂದು ಗ್ರಾಮಕ್ಕೂ ಒಬ್ಬರಂತೆ ಬೀಟ್ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಅವರು ರಾತ್ರಿ ವೇಳೆಯಲ್ಲಿ ಗ್ರಾಮಗಳ ಪ್ರಮುಖ ಪ್ರದೇಶಗಳಲ್ಲಿ ಗಸ್ತು ತಿರುಗಲಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ನಮ್ಮ ಸಿಬ್ಬಂಧಿಯವರಿಗೆ ಸಹಕರಿಸುವಂತೆ ಮನವಿ ಮಾಡಿದರು.ಕಳ್ಳರು ಯಾವುದೇ ರೂಪದಲ್ಲಿ ಬರಬಹುದು ಮಿಕ್ಸರ್ ರಿಪೇರಿ, ಚೈನ್ ರಿಪೇರಿ, ಗ್ಯಾಸ್ ರಿಪೇರಿ ಸೇರಿದಂತೆ ವಿವಿಧ ನೆಪಗಳಿಂದ ಗ್ರಾಮಗಳಿಗೆ…

Read More

ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ತದ್ದೇವಾಡಿ ಹಾಗೂ ಮಣಕಂಲಗಿ ಪ್ರದೇಶದ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ದಾಳಿಗೆ ಸಾಕುಪ್ರಾಣಿಗಳು ಬಲಿಯಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.ಒಂದಾದ ಮೇಲೊಂದರಂತೆ ದನ, ಕರು, ಆಡು ಹಾಗೂ ಕುರಿಗಳನ್ನು ಚಿರತೆ ಕೊಂದು ಹಾಕುತ್ತಿರುವ ಘಟನೆಗಳು ವರದಿಯಾಗಿವೆ.ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಕೂದಲೆಳೆಯ ಅಂತರದಲ್ಲಿ ಚಿರತೆ ದಾಳಿಯಿಂದ ಪಾರಾಗಿದ್ದ ಘಟನೆ ಕೂಡ ನಡೆದಿದ್ದು, ಮುಂದಿನ ದಿನಗಳಲ್ಲಿ ಮಾನವ ಜೀವಕ್ಕೂ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಕರ್ನಾಟಕ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ನಾಗೇಂದ್ರ ಬಿರಾದಾರ ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನುಗಳನ್ನು ಅಳವಡಿಸಿ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅವರು ತಿಳಿಸಿದ್ದಾರೆ.ಚಿರತೆಯನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಜನರಲ್ಲಿ ದೇಹದಾನದ ಮಹತ್ವದ ಕುರಿತು ಜಾಗೃತಿ ಹೆಚ್ಚಾಗುತ್ತಿದ್ದು, ಇಬ್ಬರ‌ ಪಾರ್ಥಿವ ಶರೀರಗಳನ್ನು ಅವರ ಕುಟುಂಬಸ್ಥರು ನಗರದ ಬಿ.ಎಲ್.ಡಿ.ಇ‌ ಆಸ್ಪತ್ರೆಗೆ ದಾನ ಮಾಡಿದ್ದಾರೆ.ಇಂಡಿ ತಾಲೂಕಿನ ಅಥರ್ಗಾ ಗ್ರಾಮ ನಿವಾಸಿಯಾದ ಶಿವಯೋಗಪ್ಪ ಎಸ್. ಇಂಗಳೇಶ್ವರ(82) ಡಿಸೆಂಬರ್ 10 ರಂದು ನಿಧನರಾಗಿದ್ದರು. ಮೃತರ ಇಚ್ಚೆಯಂತೆ ಅವರ ದೇಹವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.ಈ ಮಧ್ಯೆ, ತುಂಗಳ ಗ್ರಾಮದ ನಿವಾಸಿ ಡಾ. ಸಂಗಮೇಶ ಎಂ. ಬಿರಾದಾರ(88) ಅವರು ಡಿಸೆಂಬರ್ 15 ರಂದು ನಿಧನರಾಗಿದ್ದರು.‌‌ ಮೃತರ ಇಚ್ಚೆಯಂತೆ ಅವರ ದೇಹವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್. ಎಸ್. ಬುಲಗೌಡ ಅವರು ಪಾರ್ಥಿವ ಶರೀರ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಚಾಲನೆ | ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಲ್ಯದಲ್ಲಿಯೇ ಮಕ್ಕಳಿಗೆ ಅವರ ಆಸಕ್ತಿಯ ವಿವಿಧ ಕಲೆಗಳೆಡೆಗೆ ಆಸಕ್ತಿ ಹಾಗೂ ಅವುಗಳನ್ನು ರೂಢಿಸಿಕೊಳ್ಳಲು ಪಾಲಕರು ಪ್ರೋತ್ಸಾಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಯ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಲೆಗಳು ಸೃಜನಶೀಲತೆ, ಕೌಶಲ್ಯ, ಮಾನಸಿಕ ಸ್ಥೆöÊರ್ಯ ಹಾಗೂ ಸೌಂದರ್ಯವನ್ನು ವ್ಯಕ್ತಪಡಿಸುತ್ತವೆ. ಇವು ಮನರಂಜನೆಯೊಂದಿಗೆ ಜೀವನಶೈಲಿ ಪ್ರತಿಬಿಂಬಿಸುತ್ತವೆ. ಮನುಷ್ಯನ ಭಾವನೆ, ಸಂಸ್ಕೃತಿ ಹಾಗೂ ಪರಂಪರೆಯ ಅಭಿವ್ಯಕ್ತಿಯಾಗಿವೆ. ಸಂಗೀತ, ನೃತ್ಯ ಮುಂತಾದ ಕಲೆಗಳು ಮನಸ್ಸಿಗೆ ನೆಮ್ಮದಿ ಹಾಗೂ ಆತ್ಮ ಸಂತೃಪ್ತಿ ನೀಡುತ್ತವೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆ ರೂಢಿಸಿಕೊಳ್ಳಬೇಕು. ವಿವಿಧ ಕಲಾ ಪ್ರಕಾರಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೧೫ರವರೆಗೆ ವಿಸ್ತರಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ:೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ನಗರದ ಜ್ಞಾನಯೋಗಾಶ್ರಮದಲ್ಲಿ ಡಿಸೆಂಬರ್ ೨೩ ರಂದು ಬೆಳಿಗ್ಗೆ ೧೦ ರಿಂದ ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿ,ಸಿಬ್ಬಂದಿ ಹೊರತುಪಡಿಸಿ, ಜಿಲ್ಲೆಯ ಎಲ್ಲ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ಡಿಸೆಂಬರ್ ೨೧ರೊಳಗಾಗಿ ವಿಜಯಪುರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಶ್ರೀಮತಿ ಜಯಶ್ರೀ ಪಾಟೀಲ (ಮೊ: ೯೪೪೮೯೬೮೧೨೮) ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ನಾದ ಗ್ರಾಮದ ಜಮಖಂಡಿ ಸಕ್ಕರೆ ಕಾರ್ಖಾನೆ ಘಟಕ ೨ ಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿಯವರ ನೇತೃತ್ವದಲ್ಲಿ ಕಬ್ಬು ಪರಿಶೀಲನಾ ಸಮಿತಿ ಭೇಟಿ ನೀಡಿತು.ಕಬ್ಬಿನ ತೂಕದ ಕುರಿತು ಪರಿಶೀಲನೆ ಮಾಡಿದರು. ಕಾರ್ಖಾನೆಯಲ್ಲಿ ಕಬ್ಬಿನ ತೂಕದ ಮಸೀನು, ಮತ್ತು ಇಳುವರಿ ಪರಿಸೀಲಿದರು.ಕಾರ್ಖಾನೆ ಸಿಬ್ಬಂದಿಗೆ ರೈತರಿಗೆ ತೂಕದಲ್ಲಿ ಯಾವದೇ ರೀತಿಯ ವ್ಯತ್ಯಾಸ ಆಗದಂತೆ ತಿಳಿಸಿದರು. ಎಷ್ಟು ಕಬ್ಬು ನುರಿಸಿದ್ದಾರೆ. ಎಷ್ಟು ಕಬ್ಬಿಗೆ ಹಣ ನೀಡಿದ್ದಾರೆ ಎಂಬ ಕುರಿತು ಪರಿಶಿಲನೆ ಮಾಡಿದರು.ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಅಧಿಕಾರಿ ಮಹಾದೇವಪ್ಪ ಏವೂರ, ಪೋಲಿಸ ಇಲಾಖೆ ಪಿ.ಎಸ್.ಐ ರಾಜು ಮಮದಾಪುರ, ಅಬಕಾರಿ ನಿರೀಕ್ಷಕರು ರಾಹುಲ ನಾಯಕ, ಅಹಾರ ನಿರಿಕ್ಷಕರು ಪರಮಾನಂದ ಹೂಗಾರ, ರೈತ ಮುಖಂಡ ಸಿದ್ದು ತಳವಾರ, ವಿಠ್ಠಲ ಬಿರಾದಾರ, ಪಾಲ್ಗೊಂಡಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಅಗತ್ಯತೆ ಇಂದು ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆಯ ಸುಕನ್ಯಾ ಚಳ್ಳಗೇರಿ ಹೇಳಿದರು.ಪಟ್ಟಣದ ೯ನೇಅಂಗನವಾಡಿ ಕೇಂದ್ರದಲ್ಲಿ ಬುಧವಾರ ಸ್ನೇಹಸಂಸ್ಥೆ, ಐಎಲ್‌ಪಿ ಯೋಜನೆ, ಶಿಶು ಅಭಿವೃದ್ಧಿ ಯೋಜನೆ ಸಿಂದಗಿ, ಪಟ್ಟಣ ಪಂಚಾಯಿತಿ ದೇವರ ಹಿಪ್ಪರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಬಾಲ್ಯವಿವಾಹ, ಭ್ರೂಣಹತ್ಯೆ, ಲಿಂಗಪತ್ಯೆಗಳ ಕುರಿತು ಅರಿವು ಮೂಡಿಸಿ ತಡೆಯಬೇಕಿದೆ. ಜೊತೆಗೆ ಸಮುದಾಯದ ಪಾಲಕರಲ್ಲಿ ಜಾಗೃತಿ ಉಂಟು ಮಾಡಬೇಕಿದೆ ಎಂದರು.ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಪುಷ್ಪಾವತಿ ಬಿರಾದಾರ ಮಾತನಾಡಿ, ಶಾಲಾ ಮಕ್ಕಳ ಕಡ್ಡಾಯ ಹಾಜರಾತಿ, ಅಪೌಷ್ಠಿಕ ಮಕ್ಕಳ ರಕ್ಷಣೆ, ವಲಸೆ ಹೋಗುವ ಮಕ್ಕಳ ರಕ್ಷಣೆ ಮತ್ತು ಪಾಲಕರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸಿದರು.ಸ್ನೇಹ ಸಂಸ್ಥೆ ಜಿಲ್ಲಾ ಸಂಯೋಜಕ ಸಾಗರ ಘಾಟಗೆ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಕಂಕಣ ಬದ್ಧರಾಗಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸ್ವಾತಂತ್ರ‍್ಯ ಪೂರ್ವದಲ್ಲೇ ಆಲಮಟ್ಟಿ-ಯಾದಗಿರಿ ಮಾರ್ಗ ರೈಲ್ವೆ ಕಾಮಗಾರಿ ಆರಂಭಗೊಂಡು ಅರ್ಧಕ್ಕೆ ನಿಂತಿರುವ ಯೋಜನೆಗೆ ಹೋರಾಟದ ಪರಿಣಾಮ ಮರುಸಮೀಕ್ಷೆಗೆ ಚಾಲನೆ ನೀಡಿರುವುದು ಮತ್ತು ಆಲಮಟ್ಟಿ-ಕುಷ್ಟಗಿಯ ಮಾರ್ಗ ಸಮೀಕ್ಷೆ ಪೂರ್ಣಗೊಳಿಸಿರುವದು ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಆಲಮಟ್ಟಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಸ್ವಾಗತಿಸಿದೆ.ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು ರೇಲ್ವೆ ಹೋರಾಟ ಸಮಿತಿಯ ಅವಿರತ ಪ್ರಯತ್ನದಿಂದಾಗಿ ಆಲಮಟ್ಟಿ-ಯಾದಗಿರಿ ಮಾರ್ಗ ಸಮೀಕ್ಷೆಗೆ ಟೆಂಡರ್ ಹಂತಕ್ಕೆ ಬಂದಿರುವುದು ಹಾಗೂ ಆಲಮಟ್ಟಿ -ಕುಷ್ಟಗಿಯವರೆಗೆ ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ ಪೂರ್ಣಗೊಂಡು ೨೦೨೬ಮೇ ಅಂತ್ಯದೊಳಗಾಗಿ ಕ್ರಿಯಾಯೋಜನೆ(ಡಿಪಿಎಆರ್) ವರದಿ ಪೂರ್ಣಗಳ್ಳುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿರುವದು ಹುಮ್ಮಸ್ಸು ಇಮ್ಮಡಿಯಾಗಿದೆ.ಆಲಮಟ್ಟಿ-ಯಾದಗಿರಿ ರೈಲ್ವೆ ನೂತನ ಮಾರ್ಗವು ಆಲಮಟ್ಟಿಯಿಂದ ಹುಲ್ಲೂರ ಗ್ರಾಮದವರೆಗೆ ಪೂರ್ಣಗೊಂಡಿತ್ತು.ಆ ವೇಳೆ ಸ್ವಾತಂತ್ರ‍್ಯ ಚಳುವಳಿ ಉಗ್ರಹೋರಾಟ ತಳೆದಿರುವ ವೇಳೆಗೆ ಬ್ರಿಟಿಷ್ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮರಳಿ ಸ್ವದೇಶಕ್ಕೆ ತೆರಳಿದ್ದರಿಂದ ಕಾಮಗಾರಿ ಅಷ್ಟಕ್ಕೇ ಸೀಮಿತಗೊಂಡಿತು.ಕಾಲಾನಂತರದಲ್ಲಿ ನೂತನ ಮಾರ್ಗ ನಿರ್ಮಾಣಕ್ಕೆ ಹಾಕಲಾಗಿದ್ದ ಜೆಲ್ಲಿಕಲ್ಲು ಸೇರಿದಂತೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಕೂಡಲಸಂಗಮ, ತಾಲ್ಲೂಕು ಘಟಕ ದೇವರಹಿಪ್ಪರಗಿ ಅಡಿಯಲ್ಲಿ ಹಿಂದೂಗಳ ಸಂಸ್ಕೃತಿ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಪಂಚಮಸಾಲಿ ಮೀಸಲಾತಿ ಪ್ರತಿಜ್ಞಾವಿಧಿ ಕಾರ್ಯಕ್ರಮ ದಿ:೨೧ ರಂದು ಭಾನುವಾರ ಜರುಗಲಿದೆ.ಪಟ್ಟಣದ ಇಂಡಿ ರಸ್ತೆಯಲ್ಲಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರದ ದಾನಗೊಂಡ ಲೇಔಟ್‌ನಲ್ಲಿ ಆರಂಭಗೊಳ್ಳಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಮ್ಮಿಗನೂರ ಹಂಪಿ ಸಾವಿರದೇವರಮಠದ ವಾಮದೇವ ಮಹಾಂತಶ್ರೀ ಹಾಗೂ ಸಗರ ಒಕ್ಕಲಿಗರ ಹಿರೇಮಠದ ಮರುಳ ಮಹಾಂತಶ್ರೀಗಳು ವಹಿಸಲಿದ್ದಾರೆ.ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಕೃಷಿ ಮಾರುಕಟ್ಟೆ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಪುಷ್ಪಾರ್ಚನೆ, ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಅಧ್ಯಕ್ಷತೆ ವಹಿಸಲಿದ್ದಾರೆ.ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭೆಯ ಜಿಲ್ಲಾಧ್ಯಕ್ಷ ಬಿ.ಎಂ .ಪಾಟೀಲ,…

Read More