Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕರು ಹಂಸಲೇಖ ಅವರ ವಿಧ್ಯಾರ್ಥಿಯಾಗಿರುವ ಹಿನ್ನಲೆಯಲ್ಲಿ ಅವರ ಹಾದಿಯಲ್ಲಿ ಶಾಲೆ-ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ನಾಡಪ್ರೇಮ ಬಿಂಬಿಸುವ ನಾಡಗೀತೆಯನ್ನು ಹೇಗೆ ಹಾಡಬೇಕು ಎಂಬ ತರಬೇತಿ ನೀಡುವ ಕಾರ್ಯಕ್ಕೆ ಡಾ.ಪ್ರಕಾಶ ಅವರು ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಅನುಮತಿ ಪತ್ರ ಪಡೆದುಕೊಂಡು ತಮ್ಮ ಸ್ವಂತ ಖರ್ಚಿನಿಂದ ದಿನಕ್ಕೆ ೨-೩ ಶಾಲೆಗಳಿಗೆ ಹೋಗಿ ನಾಡಗೀತೆಯ ತರಬೇತಿ ನೀಡುತ್ತಿದ್ದಾರೆ ಎಂದು ಸಂಸ್ಥೆಯ ಮುಖ್ಯ ಸಂಚಾಲಕಿ ಕಾಂಚನಾ ನಾಗರಬೆಟ್ಟ ಹೇಳಿದರು.ಸಿಂದಗಿ ಪಟ್ಟಣದ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಜರುಗಿದ ನಾಡಗೀತೆ ಹಾಡುವ ತರಬೇತಿಗೆ ಚಾಲನೆ ನೀಡಿ ಮಾತನಾಡಿ ಅವರು, ನಾಡಗೀತೆಗೆ ನೂರರ ಸಂಭ್ರಮದ ಪ್ರಯುಕ್ತ ಸಿಂದಗಿ, ಆಲಮೇಲ, ದೇವರಹಿಪ್ಪರಗಿ ಮೂರು ತಾಲೂಕುಗಳು ಸೇರಿ ೬೪೦ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ನಾಡಗೀತೆಯನ್ನು ಸುಶ್ರಾವ್ಯವಾಗಿ, ರಾಗಬದ್ಧವಾಗಿ ಹಾಗೂ ನಿಗದಿತ ಸಮಯಕ್ಕೆ ಪೂರ್ಣಗೊಳ್ಳುವ ತರಬೇತಿಯನ್ನು ನೀಡಲು ಯಾವುದೇ ಫಲಾಪೇಕ್ಷವಿಲ್ಲದೇ ಪಟ್ಟಣದ ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕ ಡಾ.ಪ್ರಕಾಶ ಮೂಡಲಗಿ ಅವರು ಮುಂದಾಗಿರುವ…
ಉಚ್ಚ ನ್ಯಾಯಾಲಯದ ನಿರ್ಣಯ ಸ್ವಾಗತಿಸಿದ ವಕೀಲರ ಸಂಘದ ತಾಲೂಕಾಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕು ಶಿಕ್ಷಣ ಕಾಶಿ ಎಂದೇ ಹೆಸರಾಗಿದೆ. ಮತ್ತು ಅನೇಕ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆಯೂ ಹೊಂದಿದೆ. ಇದೆಲ್ಲವನ್ನು ಪರಿಗಣಿಸಿದ ಉಚ್ಚ ನ್ಯಾಯಾಲಯವು ಸಿಂದಗಿ ತಾಲೂಕಿಗೆ ೬ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ ಎಂದು ವಕೀಲರ ಸಂಘದ ತಾಲೂಕಾಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ ತಿಳಸಿದ್ದಾರೆ.ಈ ಕುರಿತಾ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಮನವಿಯನ್ನು ಪರಿಗಣಿಸಿ ಸಿಂದಗಿ ತಾಲೂಕಿಗೆ ೬ನೇ ಜಿಲ್ಲಾ ನ್ಯಾಯಾಲಯದ ಅನುಮೋದನೆ ನೀಡಿದ ಹಾಗೂ ಸಹಕರಿಸಿದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವೈಬು ಬಕ್ರು, ಕಲಬುರಗಿ ಪೀಠ, ವಿಜಯಪುರ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸಚೀನ ಎಸ್. ಮಗದೂಮ, ಈ ಹಿಂದಿನ ಆಡಳಿತಾತ್ಮಕ ನ್ಯಾಯವಾದಿ ಎಂ.ವ್ಹಾಯ್.ಅರುಣ, ವಿಜಯಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಹರೀಶ್.ಎ, ಸಿಂದಗಿ ಹಿರಿಯ ಹೆಚ್ಚುವರಿ ನ್ಯಾಯಾಧೀಶ ನಾಗೇಶ ಮೋಗೆರ, ಕಾನೂನು…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಚಟುವಟಿಕೆಗಳ ಮೂಲಕ ಸಂತಸದಾಯಕವಾಗಿ ಮಕ್ಕಳು ಕಲಿಯಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಎಂ. ಗಳತಗಿ ಹೇಳಿದರುತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ವಾಲಿಕಾರ ವಸ್ತಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ, ಸಮೂಹ ಸಂಪನ್ಮೂಲ ಕೇಂದ್ರ ವತಿಯಿಂದ ಗುರುವಾರ ನಡೆದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಸೃಜನಾತ್ಮಕತೆ ಮತ್ತು ವಿಮರ್ಶನಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ಕುಂಠಿತಗೊಂಡ ಕಲಿಕೆಯನ್ನು ಮರುಸ್ಥಾಪಿಸಲು ಸಮುದಾಯದಡಿಯಲ್ಲಿ ಕಲಿಕಾ ಹಬ್ಬ ಮಕ್ಕಳಿಗೆ ಸಹಕಾರಿಯಾಗಿದೆ ಎಂದರು.ಗ್ರಾಮ ಪಂಚಾಯತಿ ಸದಸ್ಯ ಬಸನಿಂಗ ನಿಡೋಣಿ, ಬಸವರಾಜ ಅತ್ತಾಲಟ್ಟಿ ಮಾತನಾಡಿದರು. ಗ್ರಾಮಸ್ಥರು ಮಕ್ಕಳು ಮಾಡಿದ ಸಂತಸದಾಯಕ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜಕ್ಕಪ್ಪಾ ವಾಲಿಕಾರ, ಮುಖಂಡ ಸುರೇಶ ಪವಾರ, ಸಿದ್ದಪ್ಪ ಮುಚ್ಚಂಡಿ, ಮುಖ್ಯೋಪಾಧ್ಯಾಯನಿ ಗೀತಾ ದೊಡಮನಿ, ಶಂಕರ ಮಠ, ಶೇಖಸಾಬ ಮುಲ್ಲಾ, ಹಣಮಂತ ದಂಡಿನ, ದೇವಪ್ಪಾ ವಾಲಿಕಾರ, ಶ್ರೀಶೈಲ ವಾಲಿಕಾರ,…
ಭಾಗ್ಯವಿದಾತ ಗ್ರಂಥ ಬಿಡುಗಡೆ | ಜಾಲಹಳ್ಳಿ ಶ್ರೀಗಳಿಗೆ ತುಲಾಭಾರ ಸೇವೆ | ಕಾರ್ಯಕ್ರಮಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಚಾಲನೆ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಧರ್ಮದ ತಳಹದಿಯ ಮೇಲೆ ಶಿಕ್ಷಣ ಮತ್ತು ಸಂಸ್ಕಾರಗಳನ್ನು ನೀಡುವ ಮೂಲಕ ಮಠಮಾನ್ಯಗಳು ಮಾನವ ಕಲ್ಯಾಣ ಕೇಂದ್ರಗಳಾಗಿ ಅನಾದಿ ಕಾಲದಿಂದಲೂ ಮಾನವರನ್ನು ಉದ್ಧರಿಸುವ ಕಾರ್ಯ ಮಾಡುತ್ತಾ ಬಂದಿದ್ದು, ಈ ದಿಸೆಯಲ್ಲಿ ದಾನ ಧರ್ಮದ ಗುಣಗಳನ್ನು ಪ್ರತಿಯೊಬ್ಬರೂ ಅನುಸರಿಸಿ ನಡೆದಾಗ ಮಾತ್ರ ಉದಾತ್ತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.ಗ್ರಾಮದ ಜೆ ಜೆ ಶಿಕ್ಷಣ ಸಂಸ್ಥೆಯ ಆವರಣದ ಮಹಾಮಠದಲ್ಲಿ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮಹಾ ಸಂಸ್ಥಾನಮಠ ಜಾಲಹಳ್ಳಿ-ಕಲಕೇರಿಯ ಪೀಠಾಧಿಪತಿ ಶಿವಾಚಾರ್ಯ ರತ್ನ, ಜಗದಾರಾಧ್ಯ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರ ೭೦ನೇ ವರ್ಷದ ಹುಟ್ಟುಹಬ್ಬದ ವರ್ಧಂತಿ ಮಹೋತ್ಸವ ಹಾಗೂ ಅಭಿನಂದನಾ ಸಮಾರಂಭ ಸೇರಿದಂತೆ ವಿವಿದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಶಕ್ತಿವಂತರರು ರಕ್ಷಣೆ ಮಾಡುವುದು, ಸಿರಿವಂತರರು ದಾನ ಮಾಡುವುದು, ಅಧಿಕಾರದಲ್ಲಿದ್ದವರು ಬಡವರ ಸೇವೆ ಮಾಡುವ…
ಸರಣಿ ಕಳ್ಳತನ ತಡೆಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದರು ಕಳ್ಳತನ ನಿಯಂತ್ರಿಸಲು ಪೊಲೀಸ್ ಇಲಾಖೆ ಹರಸಾಹಸ ಪಡುತ್ತಿದ್ದರೂ ಸಂಪೂರ್ಣವಾಗಿ ತಡೆಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಬಳ್ಳೊಳ್ಳಿ ಗ್ರಾಮ ಘಟಕದ ಅಧ್ಯಕ್ಷ ಶಂಕರ ಬಡಿಗೇರ ಹೇಳಿದರು.ಬಳ್ಳೊಳ್ಳಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಸುರೇಶ ಪವಾರ(ಜಾಧವ) ಅವರಿಗೆ ಕಳ್ಳರ ಹಾವಳಿ ಹೆಚ್ಚಾಗಿರಿವುದರಿಂದ ಬಳ್ಳೊಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಂತೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಶಂಕರ ಬಡಿಗೇರ, ಬಳ್ಳೊಳ್ಳಿ ಗ್ರಾಮದಲ್ಲಿ ಈಗಾಗಲೇ ಹಲವು ಬಾರಿ ಸರಣಿ ಕಳ್ಳತನ ನಡೆದಿದ್ದು, ಈ ಕುರಿತು ಬಳ್ಳೂಳ್ಳಿ ಗಾ.ಪಂ.ಅಧ್ಯಕ್ಷ ಶಂಕರ ಬಡಿಗೇರ ಹಾಗೂ ಪಿಡಿಓ ಶ್ರೀಕಾಂತ ಕಲಮಡಿ ಅವರಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜನಸಾಮಾನ್ಯರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಜಲನಗರದಲ್ಲಿರುವ ಶ್ರೀ ಬಿ. ಎಂ. ಪಾಟೀಲ ಐ.ಸಿ.ಎಸ್.ಇ ಸ್ಕೂಲ್ ವಿದ್ಯಾರ್ಥಿನಿ ವರ್ಷಾ ಕುಂಬಾರ ನಗರಕ್ಕೆ ದ್ವಿತೀಯ ಮತ್ತು ಶಾಲೆಗೆ ಪ್ರಥಮ ಸ್ಥಾನ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ. ಅಲ್ಲದೇ, ಪರೀಕ್ಷೆಗೆ ಹಾಜರಾದ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪಾಸಾಗಿದ್ದು, ಶೇ. 100 ರಷ್ಟು ಫಲಿತಾಂಶ ಬಂದಿದೆ.ಈ ಪರೀಕ್ಷೆಯಲ್ಲಿ ವರ್ಷಾ ಕುಂಬಾರ ಒಟ್ಟು 600 ಅಂಕಗಳ ಪೈಕಿ 559 ಅಂಕ ಪಡೆದಿದ್ದಾಳೆ. ಈ ಮೂಲಕ ವಿಜಯಪುರ ನಗರಕ್ಕೆ ದ್ವಿತೀಯ ಮತ್ತು ಶಾಲೆಗೆ ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಅದೇ ರೀತಿ ವರ್ಷಾ ಹಿರೇಮಠ 600ಕ್ಕೆ 551 ಅಂಕ ಪಡೆದು ಶಾಲೆಗೆ ದ್ವಿತೀಯ ಮತ್ತು ಮತ್ತು ರೊಮಾ ಭೋಸಲೆ 600ಕ್ಕೆ 542 ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ವರ್ಷಾ ಕುಂಬಾರ ಶಾಲೆಯಲ್ಲಿ ಗುರುಗಳು ಮಾಡಿದ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಸೇತುವೆಯ ಹತ್ತಿರ ಗೌಡರ ಗಡ್ಡಿಯಲ್ಲಿ ಗುರುವಾರ ಬೆಳಿಗ್ಗೆ ಭಾರೀ ಅಪಘಾತ ಸಂಭವಿಸಿದೆ.ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕೋಳಿ ಸಾಗಾಣಿಕೆ ಮಾಡುತ್ತಿದ್ದ ಪಿಕಪ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.ಅಪಘಾತದ ತೀವ್ರತೆಯಿಂದ ವಾಹನಗಳು ಹಾನಿಗೊಳಗಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಈ ಘಟನೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ್ದು ಬೆಳಿಗ್ಗೆ ಶಾಲಾ-ಕಾಲೇಜು ಅವಧಿಯಲ್ಲೇ ನಡೆದಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಅಪಘಾತದ ಪರಿಣಾಮವಾಗಿ ಸೇತುವೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಕೆಲಸಕ್ಕೆ ಹೊರಟಿದ್ದ ಕಾರ್ಮಿಕರು ಹಾಗೂ ಸಾರ್ವಜನಿಕರು ದೀರ್ಘಕಾಲ ರಸ್ತೆ ಬದಿಯಲ್ಲಿ ನಿಂತು ತೊಂದರೆ ಅನುಭವಿಸಬೇಕಾಯಿತು.ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಗ್ರಾಮೀಣ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು. ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸಂಚಾರ ಪುನಃ ಆರಂಭಿಸಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲರವರು ನಾಳೆ ದಿ.19 ರಿಂದ ದಿ.24 ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ದಿ.19 ಶುಕ್ರವಾರ ಬೆ.11ಗಂ. ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಜರುಗಲಿರುವ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.ದಿ.20 ಶನಿವಾರ ಬೆ.10.30ಗಂ. ನಗರದಲ್ಲಿ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೊಸದಾಗಿ ವಿಜಯಪುರ ವಿಭಾಗಕ್ಕೆ ಹಂಚಿಕೆಯಾದ 25 ಸಿಟಿ ಬಸ್‍ಗಳನ್ನು ಲೋಕಾರ್ಪಣೆಯಲ್ಲಿ ಭಾಗವಹಿಸುವುದು.ದಿ.21 ರವಿವಾರ ಬೆ.10.30ಗಂ. ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಡೊಮನಾಳ ಎನ್.ಡಿ.ಪಾಟೀಲ ಅವರ ಬಿಸಿಲನಾಡಿನ ಪರಿಸರಪ್ರೇಮಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆ.11ಗಂ. ತಿಕೋಟಾದ ಹಳಚಾಪುರ ರಸ್ತೆಯ ಸಾತಲಿಂಗಯ್ಯ ಸಾಲಿಮಠ ಅವರ ತೋಟದಲ್ಲಿ ತಿಕೋಟಾ ತಾಲೂಕಾ ಘಟಕದಿಂದ ಆಯೋಜಿಸಿದ ರೈತಕ್ಷೇತ್ರೋತ್ಸವ ಹಾಗೂ ಜಿಲ್ಲೆಯ ಸಮಸ್ತ ಕಬ್ಬು ಬೆಳೆಗಾರರಿಗೆ ವಿಶೇಷ ತಜ್ಞರಿಂದ ಚಿಂತನಗೋಷ್ಠಿ, ಕೃಷಿಗೆ ಸಂಬಂಧಿಸಿದಂತೆ ಉಪನ್ಯಾಸ ಮತ್ತು ಕೃಷಿ ಉತ್ಪನ್ನಗಳಿಂದ ತುಲಾಭಾರ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪುರಸಭೆಯ ಸಾಮನ್ಯ ಸಭೆಯು ಪ್ರಮುಖ ನಿರ್ಧಾರ ಕೈಗೊಳ್ಳುವ ವೇದಿಕೆಯಾಗಿದೆ. ಪಟ್ಟಣದ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ. ಪ್ರತಿ ವಾರ್ಡ್ನಲ್ಲಿರುವ ಸಮಸ್ಯೆಗಳ ಬಗ್ಗೆ ಎಲ್ಲಾ ಸದಸ್ಯರು ಪ್ರಸ್ತಾವನೆ ಸಲ್ಲಿಸಿ ಚರ್ಚೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷೆ ಪ್ರೀಯಾ ರಾಮನಗೌಡ ಪೋಲೀಸ್ ಪಾಟೀಲ್ ಹೇಳಿದರು.ಬುಧವಾರ ಜರುಗಿದ ಪುರಸಭೆ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಶೌಚಾಲಯಗಳ ಬಗ್ಗೆ, ಪಟ್ಟಣದ ಅಭಿವೃದ್ಧಿ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿವೆ, ಹಲವಾರು ಕಡೆ ಚರಂಡಿ ಸಮಸ್ಯೆ, ನೀರಿನ ಸಮಸ್ಯೆ ಇದ್ದು. ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ದೂರುಗಳ ಬರದಂತೆ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದವರು. ಆಯಾಯ ವಾರ್ಡ್‌ಗಳಿಂದ ಚುನಾಯಿತರಾದ ಪ್ರತಿನಿಧಿಗಳು ತಮ್ಮ ವಾರ್ಡ್‌ನ ಸಮಸ್ಯೆಗಳನ್ನು ಮಂಡಿಸಬೇಕು. ಸಭೆಯ ಕಾರ್ಯದರ್ಶಿ ಪುರಸಭೆ ಮುಖ್ಯಾಧಿಕಾರಿಗಳು, ನಿರ್ಣಯಗಳ ಕೈಗೊಳ್ಳುವು ಮೂಲಕ ಜಾರಿಗೆ ಬರುವಂತೆ ಕ್ರಮವಹಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಮುಖ್ಯಾಧಿಕಾರಿ, ಪುರಸಭೆ ಸಿಬ್ಬಂದಿಗಳು, ಸೇರಿದಂತೆ ಇಂಜಿನಿಯರ್…
ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪಿ.ಜೆ.ಪಿ. ನಾಯಕರು ಪಿತೂರಿ ಮಾಡುತ್ತಿರುವ ಕಾನೂನು ಬಾಹಿರ ಪ್ರಕರಣ ಎಂಬುದಾಗಿ ಸಾಬೀತ ಆದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಜರುಗಿಸಲಾಯಿತು. ಹೊಟೇಲ್ ಗೋದಾವರಿ ಎದುರಿಗೆ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ವಿಜಯಪುರ ಜಿಲ್ಲಾ ಬಿ.ಜೆ.ಪಿ. ಕಚೇರಿವರೆಗೆ ತೆರಳಿ ಕಛೇರಿಯನ್ನು ಮುತ್ತಿಗೆ ಹಾಕಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡಿ ದಿಕ್ಕಾರ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮಾತನಾಡುತ್ತಾ, ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ವಿರುದ್ಧ ದುರುದ್ದೇಶದಿಂದ ಕೇಂದ್ರ ಬಿ.ಜೆ.ಪಿ. ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದೆ. ದೆಹಲಿಯ ನ್ಯಾಯಾಲಯವು ಈ ಪ್ರಕರಣವು ವಜಾಗೊಳಿಸಿದೆ. ಕಾಂಗ್ರೆಸ್ ನಾಯಕತ್ವವನ್ನು…
