Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತ್ಯಾಗ ಬಲಿದಾನದ ಸಂಕೇತವಾಗಿರುವ ಸ್ವಾತಂತ್ರ್ಯವನ್ನು ನಾವೆಲ್ಲ ರಾಷ್ಟ್ರ ಭಕ್ತಿಯ ಮೂಲಕ ಕಾಪಾಡಿಕೊಂಡು ಹೋಗಬೇಕೆಂದು ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ ಹೇಳಿದರು.ನಗರದ ಶಿಖಾರಖಾನೆ ಸೇರಿದಂತೆ ವಿವಿಧ ಕಡೆ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ನಿಸ್ವಾರ್ಥ ಸೇವೆ ನಮ್ಮ ಆದ್ಯ ಕರ್ತವ್ಯವಾಗಬೇಕೆಂದರು.ಮುಖಂಡರಾದ ಮಹಾದೇವ ರಾವಜಿ, ಅಕ್ರಮ ಮಾಶಾಳಕರ, ಶಬ್ಬಿರಪಟೇಲ, ಅಬೀದ್ ಸಂಗಮ, ಜವಾಹರ ಗೋಸಾವಿ, ಹೊನುಟಗಿ, ಅಬ್ದುಲ್ ಅಜೀಜ, ನ್ಯಾಯವಾದಿ ಹಾಜಿ ಪಿಂಜಾರ ಸೇರಿದಂತೆ ಗಣ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯದಿನದ ಅಂಗವಾಗಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ ಜೊತೆಗೆ ಭ್ರಷ್ಟಾಚಾರ, ಬಡತನ, ನಿರುದ್ಯೋಗ ಮುಂತಾದ ಸಮಸ್ಯೆಗಳನ್ನು ಹೋಗಲಾಡಿಸಲು ಸಂಕಲ್ಪ ಮಾಡಬೇಕು ಎಂದು ಹೇಳಿದರು.ಇದೇ ವೇಳೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸ್ನಾತಕೋತ್ತರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಯಿತು.ಈ ಸಂದರ್ಭದಲ್ಲಿ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಪ್ರಾಚಾರ್ಯ, ಡಾ. ಅರವಿಂದ ಪಾಟೀಲ, ವೈದ್ಯಕೀಯ ನಿರ್ದೇಶಕ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ…
ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗ ಗತಿಯಲ್ಲಿ ನಡೆಯುತ್ತಿವೆ. ಆದರೆ, ಅಭಿವೃದ್ಧಿಯ ಜೊತೆ ಜೊತೆಗೆ ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಸಂಪೂರ್ಣ ಭ್ರಷ್ಟಾಚಾರ ನಿರ್ಮೂಲನೆಯಾದಾಗ ಮಾತ್ರ ರಾಜ್ಯ, ದೇಶ ಜಗತ್ತಿನಲ್ಲಿ ಅತ್ಯುನ್ನತ ಸ್ಥಾನಕ್ಕೇರುವದರಲ್ಲಿ ಸಂಶಯವಿಲ್ಲ ಎಂದು ಶಾಸಕ ವಿಠ್ಠಲ ಕಟಕಧೋಂಡ ಅವರು ಹೇಳಿದರು.ತಾಲೂಕಾಡಳಿತ ವತಿಯಿಂದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ೭೯ನೇ ಸ್ವಾತಂತ್ರೊತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಡಚಣ ಏತ ನೀರಾವರಿ ಬಗ್ಗೆ ಮಾತನಾಡಿದ ಅವರು ೨೧೦೦೦ ಹೆಕ್ಟೆರ್ ಜಮೀನಗಳು ೨೦೧೩ ರಲ್ಲಿ ನೀರಾವರಿ ಆಗಬೇಕಿತ್ತು ಆದರೆ ಕಾಂಟ್ರ್ಯಕ್ಟರ್ ಹಾಗೂ ಸರಕಾರಿ ಅಧಿಕಾರಿಗಳು ಈ ಭಾಗದ ರೈತರಿಗೆ ಮೋಸ ಮಾಡಿದ್ದಾರೆ ಎಂದರು.ಧ್ವಜಾರೋಹಣ ನೆರವೇರಿಸಿ, ಪ್ರಾಸ್ತಾವಿಕವಾಗಿ ಚಡಚಣ ತಹಶೀಲದಾರ ಸಂಜಯ ಇಂಗಳೆ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ಪ್ರೊ. ರವಿಕುಮಾರ ಅರಳಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.ಇದೇ ಸಂದರ್ಭದಲ್ಲಿ ತಾ.ಪಂ. ವತಿಯಿಂದ ಅಂಗವಿಕಲರಿಗೆ ೨೦೨೪-೨೫ನೇ ಸಾಲಿನ ೮ ತ್ರಿಚಕ್ರ ವಾಹನಗಳನ್ನು…
ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ ನೀವು ಉತ್ತರ ಕೊಟ್ಟಿದ್ದೀರಾ? | ಸ್ಪಷ್ಟನೆ ನೀಡುವ ಅಗತ್ಯವಿಲ್ಲ | ಸಿಎಂ ಸಿದ್ದರಾಮಯ್ಯ ಗುಡುಗು ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದು ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಹೆಚ್ಚಿನ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.ಗುರುವಾರ ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಕಾರಣಗಳ ಬಗ್ಗೆ ಸರಕಾರದಿಂದ ಸೂಕ್ತ ಉತ್ತರ ಬಂದಿಲ್ಲ.ರಾಜಣ್ಣನ ವಜಾಗೊಳಿಸುವ ಮೂಲಕ ದಲಿತ ನಾಯಕನನ್ನು ತುಳಿಯಲಾಗಿದೆ. ಇದು ಕಾಂಗ್ರೆಸ್ ಸಂಸ್ಕೃತಿಯೇ? ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ? ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಪಕ್ಷದಿಂದ…
ಪಠ್ಯೇತರ ಚಟುವಟಿಕೆಗಳ ಉದ್ಘಾಟಿಸಿದ ಪ್ರೊ.ಎಚ್.ಟಿ.ಪೋತೆ ಸಲಹೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ವಿದ್ಯಾರ್ಥಿಯ ಜೀವನದಲ್ಲಿ ಸಾಧನೆ ಮಾಡುವ ಮಾಡುವ ನಿಟ್ಟಿನಲ್ಲಿ ಕನಸನ್ನು ಕಟ್ಟಿಕೊಳ್ಳಬೇಕು. ಜ್ಞಾನದಿಂದ ಗುರುವನ್ನು ಮೀರಿಸುವಂತಹ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕಲಬುರ್ಗಿಯ ಕನ್ನಡ ಅಧ್ಯಯನದ ಸಂಸ್ಥೆಯ ನಿರ್ದೆಶಕ ಪ್ರೊ.ಎಚ್.ಟಿ.ಪೋತೆ ಹೇಳಿದರು.ಗುರುವಾರ ಗ್ರಾಮದ ಕಲ್ಪವೃಕ್ಷ ಪದವಿ ಮಹಾವಿದ್ಯಾಲಯ ಹಾಗೂ ಕಲ್ಪವೃಕ್ಷ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ಪಿ.ಯು.ಸಿ ಮತ್ತು ಪ್ರಥಮ ಸೆಮಿಸ್ಟರಿನ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಪಠ್ಯೇತರ ಚಟುವಟಿಕೆಗಳ ಉದ್ಘಾಟನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಸಮಯದ ಪ್ರಜ್ಞೆ ಇರಬೇಕು ಶಿಕ್ಷಕರನ್ನು ಗೌರವದಿಂದ ಕಾಣಬೇಕು ಪಠ್ಯಕ್ಕೆ ಎಷ್ಟು ಮಹತ್ವ ಕೊಡುತ್ತಿರೋ ಅದರಷ್ಟೇ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೆ ಮಹತ್ವ ನೀಡಿ ನಿಮ್ಮ ಪಾಲಕರು ಕಂಡ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಅದ್ಯಯನ ಮಾಡಿ ಸುಂದರವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕಲ್ಪವೃಕ್ಷ ಸಂಸ್ಥೆಯ ಸಂಸ್ಥಾಪಕ ಶಿವಶರಣಗೌಡ ಬಿರಾದಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಳೆ ಆಗಸ್ಟ್ ೧೫ ರಂದು ಜಿಲ್ಲಾಡಳಿತದಿಂದ ಆಚರಿಸುವ ಸ್ವಾತಂತ್ರ‍್ಯೋತ್ಸವದ ಆಚರಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಇಂದು ಸಂಜೆ ಜಿಲ್ಲಾದಿಕಾರಿ ಡಾ.ಆನಂದ.ಕೆ ಅವರು ಭೇಟ ನೀಡಿ,ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಉಪವಿಭಾಗಾಧಿಕಾರಿ ಗುರುನಾಥ್ ದಡ್ಡೆ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಿವೈ ಎಸ್ ಪಿ ಬಸವರಾಜ ಎಲಿಗಾರ, ಡಿಎಸ್‌ಪಿ ಡಿಎ ಆರ್ ಎಂ ಎ ಉಪಾಸೆ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ರಾಹುಲ್ ಕುಮಾರ್ ಭಾವಿದೊಡ್ಡಿ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧು ಇಲಾಖೆಯ ಮೋರಟಗಿ ವಲಯದ ಗಬಸಾವಳಗಿ ಅಂಗನವಾಡಿ-೦೨ನೇ ಕೇಂದ್ರದ ಮಕ್ಕಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಂದ ಹರ್ ಘರ್ ತಿರಂಗ ಕಾರ್ಯಕ್ರಮದ ಅಂಗವಾಗಿ ತಯಾರಿಸಲ್ಪಟ್ಟ ರಾಖಿಗಳನ್ನು ಪೋಲೀಸ ಇಲಾಖೆಗೆ ತೆರಳಿ ಪಿಎಸ್‌ಐ ಆರೀಫ್ ಮುಷಾಪುರಿ ಹಾಗೂ ಇಲಾಖೆ ಸಿಬ್ಬಂದಿಗಳಿಗೆ ರಾಖಿ ಕಟ್ಟುವ ಮೂಲಕ ಆಚರಣೆ ಮಾಡಲಾಯಿತು.ಅಂಗನವಾಡಿ ಮಕ್ಕಳು ಮತ್ತು ಕಾರ್ಯಕರ್ತೆಯರಿಂದ ತಯಾರಿಸಲ್ಪಟ್ಟ ರಾಖಿಗಳನ್ನು ವೀರ ಯೋಧರಿಗೆ ಅಂಚೆ ಮೂಲಕ ಕಳುಹಿಸಿಕೊಡಲಾಗಿದೆ. ಇದೇ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶೈಲಶ್ರೀ ಪಾಟೀಲ, ಗಬಸಾವಳಗಿ-೦೨ ನೇ ಕೇಂದ್ರ ಅಂಗನವಾಡಿ ಕಾರ್ಯಕರ್ತೆ ಕಲಾವತಿ ವಾಲಿಕಾರ, ರಾಷ್ಠ್ರೀಯ ಪೋಷಣಾ ಅಭಿಯಾನ ಯೋಜನೆಯ ತಾಲೂಕು ಸಂಯೋಜಕ ಪ್ರಮೊದ ಬೆಳಗಾವಿ ಸೇರಿದಂತೆ ಅನೇಕರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ಇರುವ ಆಲಮಟ್ಟಿ ಅಣೆಕಟ್ಟು ೫೧೯-೬೦ ಮೀ. ಎತ್ತರದಿಂದ ೧೨೩೩-೦೮೧ ಟಿಎಂಸಿ ನೀರು ರಾಜ್ಯದ ಪಾಲಾಗಿದ್ದು, ಇದರಲ್ಲಿ ವಿಜಯಪುರ, ಬಾಗಲಕೋಟ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರ ಜಿಲ್ಲೆಗಳಿಗೆ ಉಪಯೋಗಿಸಲಾಗುತ್ತಿದೆ. ಇನ್ನು ಅಣೆಕಟ್ಟು ೫೨೪-೨೫೬ ಮೀ.ಗೆ ಹೆಚ್ಚಳವಾದರೆ ೧೩೦ಟಿಎಂಸಿ ನೀರು ಹೆಚ್ಚುವರಿಯಾಗಿ ಲಿಭಿಸಲಿದೆ. ಹಾಗಾಗಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.ಸಿಂದಗಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾ|| ಬ್ರಜೇಶ್‌ಕುಮಾರ ನೇತೃತ್ವದ ೨ನೆಯ ನ್ಯಾಯಾಧೀಕರಣ ೨೦೧೦ರಲ್ಲಿ ತೀರ್ಪು ನೀಡಿತ್ತು. ೨೦೧೩ರಲ್ಲಿ ಸೃಷ್ಟಿಕರಣ ತೀರ್ಪು ನೀಡಿ, ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೨೪-೨೫೬ ನಿಲ್ಲಿಸಲು ಅನುಮತಿ ನೀಡಿದೆ. ತೀರ್ಪು ನೀಡಿ ೧೫ ವರ್ಷಗಳಾದರೂ ಇಲ್ಲಿಯವರೆಗೂ ಜಲಾಯಶಯದ ನೀರಿನ ಮಟ್ಟವನ್ನು ಹೆಚ್ಚಿಸಲು ಸರಕಾರ ಮುತುವರ್ಜಿ ವಹಿಸಿಲ್ಲ. ಅಲ್ಲದೇ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿಲ್ಲ. ಮಹಾರಾಷ್ಟ್ರ ಸರಕಾರದ ತಕರಾರಿನ ನೆಪವನ್ನು ಮುದ್ದಿಟ್ಟುಕೊಂಡು ಅನಾವಶ್ಯಕ ಕಾಲಹರಣ ಮಾಡುತ್ತಿದೆ. ಈ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಯೋಜನಾ ಶಾಖೆ ಆಲಮಟ್ಟಿ ಇವರು ಪ್ರತಿ ವರ್ಷದಂತೆ, ಈ ವರ್ಷವು ಕೂಡಾ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಕ್ರೀಡಾ ಕೂಟಗಳನ್ನು ಹಾಗೂ ನೇತ್ರದಾನ ಮತ್ತು ರಕ್ತಾದಾನ ಶಿಬಿರವನ್ನು ಆಯೋಜಿಸಿದ್ದರು.ಕ್ರೀಕೆಟ್ ಪಂದ್ಯಾವಳಿಗಳನ್ನು ಮುಖ್ಯ ಅಭಿಯಂತರ ಶಬಸವರಾಜ.ಡಿ ಇವರು ಉದ್ಘಾಟಿಸಿದ ಪಂದ್ಯದಲ್ಲಿ ೪ ತಂಡಗಳು ಭಾಗವಹಿಸಿದ್ದು ಅದರಲ್ಲಿ ಸರಕಾರಿ ನೌಕರರ ಸಂಘ ಪ್ರಥಮ ಸ್ಥಾನ ಮತ್ತು ಕೆ.ಬಿ.ಜೆ.ಎನ್.ಎಲ್ ಇಂಜಿನೀಯರ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡವು. ಮಹಿಳೆಯರಿಗಾಗಿ ಆಯೋಜಿಸಿದ ಮ್ಯೂಜಿಕಲ್‌ಚೇರ ಮತ್ತು ಶೇಟಲ್ ಬ್ಯಾಡ್ಮಿಟನ್ ಕ್ರೀಡೆಯನ್ನು ಮಾನ್ಯ ಅಧೀಕ್ಷಕ ಅಭಿಯಂತರ ವ್ಹಿ.ಆರ್.ಹಿರೇಗೌಡರ, ಇವರು ಉದ್ಘಾಟಿಸಿದ ಪಂದ್ಯಗಳಲ್ಲಿ ಗೌರಮ್ಮ ಪ್ರಥಮ ಮತ್ತು ಸೌಮ್ಯಾಶ್ರೀ ಹಿರೇಗೌಡರ ಇವರು ಮ್ಯೂಜಿಕಲ್‌ಚೇರ ಕ್ರೀಡೆಯಲ್ಲಿ ದ್ವಿತೀಯ ಸ್ಥಾನದ ಪಡೆದುಕೊಂಡರು ಅದರಂತೆ, ಮಹಿಳೆಯರಿಗಾಗಿ ನಡೆಸಲಾದ ಸಿಂಗಲ್ ಸೆಟಲ್ ಬ್ಯಾಡ್ಮಿಟನ್ ಪಂದ್ಯದಲ್ಲಿ . ವಿದ್ಯಾಶ್ರೀ ವಾಸಿ ಪ್ರಥಮ ಹಾಗೂ ಶ್ವೇತಾ ಅರಕೇರಿ ದ್ವಿತೀಯ ಸ್ಥಾನ ಪಡೆದುಕೊಂಡರು. ಅದರಂತೆ, ಶೇಟಲ್ ಬ್ಯಾಡ್ಮಿಟನ್ ಪಂದ್ಯಾವಳಿಗಳಲ್ಲಿ ವಿದ್ಯಾಶ್ರೀ ವಾಸಿ ಮತ್ತು…
ಸೆ.೧೩ ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ | ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ್ ಎ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ ೧೩ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ ಅವರು ತಿಳಿಸಿದರು.ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ ೧೩ ರಂದು ರಾಷ್ಟ್ರೀಯ ಲೋಕ್ ಅದಾಲತ್…
