Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು ಬೋಧನೆಯ ಜೊತೆಗೆ, ಕಟ್ಟಡ, ಕಲಿಕಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಶಿಕ್ಷಕರ ಅತ್ಯುತ್ತಮ ಮಾರ್ಗದರ್ಶನದಲ್ಲಿ ರೈತರ ಮತ್ತು ಬಡ ಮಕ್ಕಳ ಕಲಿಯಲು ಉತ್ತಮ ಶೈಕ್ಷಣಿಕ ವಾತಾವರಣದ ವ್ಯವಸ್ಥೆ ಮಾಡಲಾಗುತ್ತಿದೆ. ಪಾಲಕರು ತಮ್ಮ ಮಕ್ಕಳಿಗೆ, ಅದರಲ್ಲೂ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಶ್ರೀ ಮಲಕಯ್ಯ ಹಿರೇಮಠ, ಶಾಹಿ ಕಂಪನಿಯ ಉಸ್ತುವಾರಿ ಎಂಜನಿಯರ ಧನಂಜಯಕುಮಾರ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲಾ ಪರಿಷತ್‌ನ ಆಕಳವಾಡಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಗೆ ಗುಜರಾತ ರಾಜ್ಯದ ತಾಪಿದಾಸ ವಜ್ರದಾಸ ತುಲಸಿದಾಸ ಚಾರಿಟೇಬಲ್ ಟ್ರಸ್ಟ್ ನ ಮುಂಬೈ ಶಾಖೆ ವತಿಯಿಂದ ಅತ್ಯಾಧುನಿಕ ಡಿಜಿಟಲ್ ಇಂಟರ್‌ಯಾಕ್ಟಿವ್ ಸ್ಮಾರ್ಟ್ ಬೋರ್ಡ್, ಪ್ರೊಜೆಕ್ಟರ್ ಹಾಗೂ ₹1,25,000 ಮೌಲ್ಯದ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಟ್ರಸ್ಟ್ ನ ಪ್ರತಿನಿಧಿ ವಿ.ಎಂ. ಸಿಂದಗಿ ಮಾತನಾಡಿ, ಗುಜರಾತ ರಾಜ್ಯದ ತಾಪಿದಾಸ ವಜ್ರದಾಸ ತುಲಸಿದಾಸ ಚಾರಿಟೇಬಲ್ ಟ್ರಸ್ಟ್ ಕೈಗೊಂಡಿರುವ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ವಿವರಿಸಿದರು. “ಉಚಿತ ಪುಸ್ತಕ ವಿತರಣೆ, ಪ್ರೋಜೆಕ್ಟರ್ ಮತ್ತು ಸೌಂಡ್ ಸಿಸ್ಟಮ್, ಶಾಲಾ ಫರ್ನಿಚರ್ ಮತ್ತು ಡಿಜಿಟಲ್ ಸ್ಮಾರ್ಟ್ ಬೋರ್ಡ್ ವಿತರಣೆಗಳ ಮೂಲಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಟ್ರಸ್ಟ್ ನಿರಂತರವಾಗಿ ಕೊಡುಗೆ ನೀಡುತ್ತಿದೆ. ಸಮಾಜದ ಬೆಳವಣಿಗೆಗೆ ಬೇಕಾದ ಸ್ಥಳಗಳಲ್ಲಿ ಸಾಧ್ಯವಾದ ಮಟ್ಟಿಗೆ ದಾನ ಮಾಡುವುದೇ ನಿಜವಾದ ಸೇವೆ,” ಎಂದರು.ಕಾರ್ಯಕ್ರಮವನ್ನು ಶಿಕ್ಷಕ ನದಾಫ ನಿರೂಪಿಸಿದರು. ಶಿಕ್ಷಕರಾದ ಡಿ.ಎಲ್. ಕಾಂಬಳೆ, ಎಸ್.ಎಂ. ಹಿರೇಮಠ ಹಾಗೂ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಉತ್ತಮ ಅಂಶಗಳನ್ನು ಅನುಕರಣೆಯ ಮೂಲಕವಾದರೂ ಅಭ್ಯಾಸ ಮಾಡಲೇ ಬೇಕಾಗಿದೆ ಎಂದು ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷ ಪ್ರಭುಲಿಂಗ ಕಡಿ ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಪುರಸಭೆ ಸದಸ್ಯೆ ಸಂಗಮ್ಮ ಹಣಮಂತ ದೇವರಳ್ಳಿಯವರ ಮನೆಯ ಸಭಾಂಗಣದಲ್ಲಿ ಶಿರಸಿ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಭಿಯಾನದ ಅರಿವು ವ್ಯಕ್ತಿವ್ಯಕ್ತಿಯನ್ನು ತಲುಪಿಸಬೇಕಾದಲ್ಲಿ ಗೃಹ ಕೇಂದ್ರೀಕೃತವಾಗುವುದು ಸೂಕ್ತ. ಗೃಹ ಕೇಂದ್ರೀಕೃತದ ನಂತರದಲ್ಲಿ ಮನಕೇಂದ್ರೀಕೃತವಾಗಲು ಈ ರೀತಿ ಸತ್ಸಂಗಗಳು ತೀರಾ ಅವಶ್ಯಕ. ಗೀತಾ ಅಭಿಯಾನ ಬಹಳ ಮಹತ್ವವಿದೆ. ಈ ರೀತಿ ಅಭಿಯಾನದಿಂದ ನಾವು ನಮ್ಮ ಬದುಕನ್ನು ಅರ್ಥಮಾಡಿಕೊಳ್ಳ ಬೇಕಾಗಿದೆ. ಭಗವದ್ಗೀತೆ ಓದುವುದು ಎಂದರೆ ಕೃಷ್ಣ ಪರಮಾತ್ಮನೊಂದಿಗೆ ನೇರವಾಗಿ ಮಾತನಾಡಿದಂತೆ. ನಮ್ಮ ಪರಂಪರೆಯನ್ನು ನಾವು ಮೊದಲು ನಮ್ಮ ನಮ್ಮ ಮನೆಯಿಂದ ಹಿಡಿದು ಸಮಾಜಕ್ಕೆ ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ ಎಂದರು.ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಮಾತನಾಡಿ ಭಗವದ್ಗೀತೆ ಕೇವಲ ಪೂಜಾ ಮಂದಿರದಲ್ಲಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಒಳಮೀಸಲಾತಿ ಜಾರಿಮಾಡಿದ ನಂತರ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಡಿ.೮ ರಿಂದ ನಡೆಯುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಅನ್ಯಾಯ ಸರಿಪಡಿಸಲು ರಾಜ್ಯ ಸರಕಾರ ಮುಂದಾಗ ಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ರಾಜಕುಮಾರ ಜಾಧವ, ಜಿಲ್ಲಾಕಾರ್ಯಧ್ಯಕ್ಷ ಶಿವಾನಂದ ಲಮಾಣಿ ಆಗ್ರಹಿಸಿದರು.ಈ ಕುರಿತು ಮಾಧ್ಯಮ ಮೂಲಕ ಒತ್ತಾಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಒಳಮೀಸಲಾತಿಯಿಂದ ಪರಿಶಿಷ್ಟ ಜಾತಿಯ ೧೦೧ ಸಮುದಾಯಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಚುನಾವಣೆ ಸಮಯದಲ್ಲಿ ಭರವಸೆ ನೀಡಿದ್ದರು. ಆದರೆ, ಸರಕಾರಿ ಹುದ್ದೆಗಳ ನೇಮಕದ ರೋಸ್ಟರ್ ಬಿಡುಗಡೆಯಾದ ಬಳಿಕ ನಮಗೆ ಅವಕಾಶಗಳು ಕಡಿಮೆಯಾಗಿವೆ ಎಂದು ಆರೋಪಿಸಿದರು.ಸರಕಾರಿ ನೇಮಕಾತಿಯಲ್ಲಿ ಬೆಳಕಿಗೆ ಬಂದಿದೆ ಹಿಂದೆ ೧೦೦ ಹುದ್ದೆಗಳಲ್ಲಿ ಶೇ.೧೭ರಷ್ಟು ಮೀಸಲಾತಿ ಅನ್ವಯ ಪರಿಶಿಷ್ಟ ಜಾತಿಯ ಎಲ್ಲರಿಗೂ ೧೭-೧೮ ಹುದ್ದೆಗಳಿಗೆ ಸ್ಪರ್ಧಿಸುವ ಅವಕಾಶವಿತ್ತು. ಆದರೆ, ಹೊಸ ರೋಸ್ಟರನಂತೆ ೧೦೦ ಹುದ್ದೆಗಳಲ್ಲಿ ೧ರಿಂದ೨ ಹುದ್ದೆಗಳು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ೨೦೨೫-೨೬ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ದೆಗಳನ್ನು ಆಯೋಜಿಸಿದ್ದು, ಸರ್ಕಾರದಿಂದ ಮಾನ್ಯತೆ ಪಡೆದಿರುವ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಸ್ಪರ್ದೆಯಲ್ಲಿ ಭಾಗವಹಿಸಲು ಅರ್ಹರಿದ್ದು ಭಾಗಿಯಾಗುವಂತೆ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಡಗುಂದಿ ಸಮೀಪ 1203 ಎಕರೆ ರೈತರ ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವುದನ್ನು ಸಂಪೂರ್ಣವಾಗಿ ವಿರೋಧಿಸಿ, ಈ ಯೋಜನೆಯನ್ನು ಇಲ್ಲಿಗೆ ಕೈಬಿಡಬೇಕು ಇಲ್ಲವಾದಲ್ಲಿ 350 ಕುಟುಂಬ ಬಿದಿಗೆ ಬೀಳಲಿದೆ. ಕೃಷಿಯನ್ನೆ ನಂಬಿರುವ ಅನೇಕ ಕುಟುಂಬ ಹಾಗೂ ಉನ್ನತ ಶಿಕ್ಷಣ ಪಡೆದ ಯುವಕರು ಮತ್ತೆ ದೂರದ ಪಟ್ಟಣಗಳಿಗೆ ದಿನಗೂಲಿ ಕೆಲಸಕ್ಕಾಗಿ ಅಲೆದಾಡಬೇಕಾಗುತ್ತದೆ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ್ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತ, ಈಗಾಗಲೇ ರಾಜ್ಯದ ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲರಿಗೆ, ಮುಖ್ಯಮಂತ್ರಿಗಳಿಗೆ, ರಾಜ್ಯಪಾಲರಿಗೆ, ಹಾಗೂ ಕೈಗಾರಿಕಾ ಇಲಾಖೆಯ ಸರ್ಕಾರದ ಅಧಿನ ಕಾರ್ಯದರ್ಶಿಗಳಿಗೆ 3 ಬಾರಿ ಮನವಿ ಸಲ್ಲಿಸಲಾಗಿದೆ. ಆದಾಗ್ಯೂ ಕೂಡಾ ಕೆ.ಐ.ಡಿ.ಬಿ ಅಧಿಕಾರಿಗಳು ಕೆಲವೊಬ್ಬ ರೈತರನ್ನು ಪ್ರತ್ಯೇಕವಾಗಿ ಕರೆದು ಅವರಿಗೆ ವಿವಿಧ ಆಸೆಗಳನ್ನು ಹಚ್ಚಿ ಭೂಮಿ ಪಡೆದುಕೊಳ್ಳುವ ಕಳ್ಳರ ಕೆಲಸ ಮಾಡುತ್ತಿದ್ದಾರೆ.ವಿಜಯಪುರ ಜಿಲ್ಲೆಯ ನಾಗಠಾಣ ಹೋಬಳಿಯ ತಿಡಗುಂದಿ ವ್ಯಾಪ್ತಿಯ ಒಟ್ಟು…
೧೦ ಲಕ್ಷ ರೈತರೊಂದಿಗೆ ಬೃಹತ್ ಹೋರಾಟ | ೧ ಲಕ್ಷ ಕೋಟಿ ರೈತರಿಗೆ ಮೀಸಲಿಡಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಡಿಸೆಂಬರ್ ೮-೧೯ ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚುನ್ನಪ್ಪಾ ಪೂಜೇರಿ, ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಗುರೂಜಿ ಅವರ ನೇತೃತ್ವದಲ್ಲಿ ಡಿಸೆಂಬರ್- ೧೧, ೧೨ ರಂದು ಇಡೀ ರಾಜ್ಯದ ೩೧ ಜಿಲ್ಲೆ, ತಾಲೂಕ, ಹೋಬಳಿ ಹಾಗೂ ಗ್ರಾಮಗಳ ಮನೆ ಮನೆಯಿಂದ ಲಕ್ಷಾಂತರ ರೈತರು ಬೆಳಗಾವಿ ಚಲೋ ಎಂಬ ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ, ಮನೆ ಮನೆಯಿಂದ ರೈತರೆಲ್ಲರೂ ಬೆಳಗಾವಿಗೆ ಬರುವಂತೆ ಕರೆ ನೀಡಿದರು.ತಿಕೋಟಾ ತಾಲೂಕಿನ ಹಲವಾರು ಗ್ರಾಮಗಳಿಗೆ ಬೇಟಿ ನೀಡಿ ಸಂಘದ ಪದಾಧಿಗಳಿಗೆ ಹಾಗೂ ರೈತರಿಗೆ, ರೈತ ಮಹಿಳೆಯರಿಗೆ, ರೈತ ಕಾರ್ಮಿಕರಿಗೆ ಬರುವಂತೆ ಕರೆ ಮನವಿ ಮಾಡಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮಾತನಾಡುತ್ತಾ ವಿಜಯಪುರ ಜಿಲ್ಲೆಯಲ್ಲಿ ಕೂಡಾ ರೈತರಿಗೆ…
ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆದರೆ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.ಡಿಸಿಎಂ ಡಿಕೆ ಶಿವಕುಮಾರ್ ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಈಗ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದರು.ಕಾಂಗ್ರೆಸ್ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಪ್ರತಿಪಕ್ಷಗಳ ವಿರುದ್ಧ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ “ಬಿ.ಎಲ್.ಡಿ.ಇ ಧ್ವನಿ 98.6 FM ಸಮುದಾಯ ಬಾನುಲಿ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ರವಿವಾರ ಉದ್ಘಾಟಿಸಿದರು.ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಬಿ.ಎಲ್.ಡಿ.ಇ ಧ್ವನಿ 98.6 FM ಆಕಾಶವಾಣಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ, ಯುವಕರು, ಮಹಿಳೆಯರು ಮತ್ತು ರೈತ ಸಮುದಾಯಗಳಿಗಾಗಿ ವಿನೂತನ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ರೇಡಿಯೋ ಮೂಲಕ ಶುಭ ಹಾರೈಸಿದರು.ನಮ್ಮ ಭಾಗದ ರೈತರಿಗೆ ಇರುವ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವುದು, ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ ನೀಡಿಸುವುದರ ಜೊತೆಗೆ ರೈತರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.ಮಹಿಳೆಯರ ಆರೋಗ್ಯ ಮತ್ತು ಗುಡಿ ಕೈಗಾರಿಕೆಗಳು ಸಣ್ಣ ಮಟ್ಟದ ಉದ್ಯೋಗವಕಾಶ ಎಲ್ಲ ಬಗೆಯ ಬೆಳವಣಿಗೆ ಬಗ್ಗೆ ತಿಳಿಸುವಂತಾಗಬೇಕು ಎಂದು ಅವರು ಹೇಳಿದರು.ಮಾಹಿತಿ ಮತ್ತು ಮನೋರಂಜನೆಯೊಂದಿಕೆ ನೂತನ ರೇಡಿಯೋ ಬಹಳಷ್ಟು ಜನರನ್ನು ತಲುಪಲಿ ಎಂದು ಅವರು ಆಶಿಸಿದರು.ಇದೇ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದ ಅಂಗವಾಗಿ, ಚಡಚಣದ ಶ್ರೀ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆನೀಡಲಾಯಿತು.ಕಾರ್ಯಕ್ರಮದ ಕುರಿತು ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಡಚಣ ವಲಯ ಮೇಲ್ವಿಚಾರಕರಾದ ಶಿವಯ್ಯ ಹಿರೇಮಠ ಅವರು ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರಲು ಹೇಳಿದ ಅವರು ಅದರಿಂದಾಗುವ ಶಾರೀರಿಕ ಹಾನಿ,ಆರ್ಥಿಕ ಹಾನಿ, ಸಮಾಜದಲ್ಲಿ ಸಿಗುವಗೌರವದ ಹಾನಿ, ಕುಟುಂಬದ ಹಾನಿಯ ಬಗ್ಗೆ ವಿವರಿಸಿದರು.ದುಶ್ಚಟಮುಕ್ತ ಸಮಾಜ ನಿರ್ಮಾಣದ ಅಗತ್ಯತೆಯನ್ನು ಉಲ್ಲೇಖಿಸಿದ ಅವರು, ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಪ್ರತಿಪಾದಿಸಿದರು.ಮುಂದುವರೆದು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಚಟುವಟಿಕೆಗಳಾದ ಸ್ವಸಹಾಯ ಸಂಘ ರಚನೆ, ಬಿ.ಸಿ. (ಬೆಲೆ ಕಟ್ಟುವ) ಕಾರ್ಯಕ್ರಮ, ಕೃಷಿ ಅಭಿವೃದ್ಧಿ, ವಿಮಾ ಸೌಲಭ್ಯ,ನಮ್ಮೂರು–ನಮ್ಮ ಕೆರೆ, ಶುದ್ಧ ಗಂಗಾ ಘಟಕ,ಸಮುದಾಯ ಅಭಿವೃದ್ಧಿ, ಜನಮಂಗಳ ಯೋಜನೆ,ಜ್ಞಾನ ವಿಕಾಸ ಕಾರ್ಯಕ್ರಮ ಹೀಗೆ ಇನ್ನು ಅನೇಕ ಮಹತ್ವದ ಯೋಜನೆಗಳ ಕುರಿತು ವಿವರಿಸಿದರು.ಸಮುದಾಯ ಆರೋಗ್ಯ ಕೇಂದ್ರ…
