Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿವಗಿರಿ ಶಾಖೆಯ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಆಗಸ್ಟ್ ೧೬ರಂದು ಬೆಳಿಗ್ಗೆ ೯ರಿಂದ ಸಂಜೆ ೫ರವರೆಗೆ ಕಿರಾಣಾ ಬಜಾರ್ ಮತ್ತು ಎಲ್.ಬಿ.ಎಸ್. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಮಳೆ ಆನಂದ್ ಎಲೆಕ್ಟ್ರಿಕಲ್ಸ್ ವತಿಯಿಂದ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳಲು ಲೈನ್ ಕ್ಲಿಯರೆನ್ಸ್ ನೀಡಬೇಕಿರುವುದರಿಂದ ಇಂಡಿ ರಸ್ತೆ, ಬಿಜ್ಜರಗಿ ಮೋಟಾರ್ಸ್, ಜ್ಯೋತಿ ಪೋಲ್ ಫ್ಯಾಕ್ಟರಿ, ಬೊಂಬಾಳ ಅಗಸಿ, ಎ.ಪಿ.ಎಂ.ಸಿ., ಗಣಪತಿ ಚೌಕ್, ಎಲ್.ಬಿ.ಎಸ್. ಮಾರುಕಟ್ಟೆ, ರಜಪೂತ್ ಗಲ್ಲಿ, ಕೆ.ಹೆಚ್.ಬಿ. ಹಂಚಿನಾಳ ಹಾಗೂ ವಿಜಯ್ ಟೈರ್ಸ್ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ, ವಿಜಯಪುರ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹು.ವಿ.ಸ.ಕಂ.ನಿ. ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ರೈತರು ಹಾಗೂ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ.ದಿನಾಂಕ ಆ.೧೭ರಂದು ಮಧ್ಯಾಹ್ನ ೩ ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ.ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ರೈತರು, ಗ್ರಾಹಕರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಉಪಯುಬಾಗ ಇವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ವಿಜಯಪುರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಲಂ ೧೬ರಡಿ ಆ.೧೩ ರಂದು ವಿಜಯಪುರ ನಗರದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ಓರ್ವ ಬಾಲಕಾರ್ಮಿಕ ಮಗುವನ್ನು ರಕ್ಷಿಸಿದ್ದಾರೆ.ದಾಳಿಯ ಸಂದರ್ಭದಲ್ಲಿ ಓರ್ವ ಬಾಲಕಾರ್ಮಿಕ ಮಗುವನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು.ಮಕ್ಕಳನ್ನು ಬಾಲಕಾರ್ಮಿಕರಾಗಿ ನೇಮಿಸಿಕೊಳ್ಳದಂತೆ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಾರ್ವಜನಿಕ ಸೇವೆ, ಶುಚಿತ್ವಕ್ಕೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಡಾ. ಕೆ. ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಗುರುವಾರ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ದಿಢೀರ್ ಭೇಟಿ ನೀಡಿ, ಕಚೇರಿಯ ದೈನಂದಿನ ಆಡಳಿತ ಕಾರ್ಯವೈಖರಿ ಹಾಗೂ ಹಾಲಿ ವ್ಯವಸ್ಥೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.ಕಚೇರಿ ಭೇಟಿಯ ವೇಳೆ ಕಚೇರಿಯ ಪರಿಸರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಇಡೀ ಕಚೇರಿಯ ಆವರಣದಲ್ಲಿ ಸಂಪೂರ್ಣ ಶುಚಿತ್ವ, ಶಿಸ್ತು ಹಾಗೂ ಚೊಕ್ಕಟವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಚುರುಕು ಮುಟ್ಟಿಸುವ ಮೂಲಕ ಕಟ್ಟು-ನಿಟ್ಟಿನ ಸೂಚನೆ ನೀಡಿದರು.ಕಚೇರಿಗೆ ಆಗಮಿಸುವ ಸಾರ್ವಜನಿಕರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.ಮೂಲಸೌಲಭ್ಯಕ್ಕೆ ಸೂಚನೆ: ಕಚೇರಿಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಸಮರ್ಪಕವಾಗಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ತಕ್ಷಣಕ್ಕೆ ಜನರಿಗೆ ಸ್ಪಂದಿಸಿ: ಜೊತೆಗೆ, ವಿವಿಧ ಕೆಲಸ-ಕಾರ್ಯಗಳಿಗಾಗಿ ಬರುವ ಸಾರ್ವಜನಿಕರ…

Read More

ಸಾರ್ವಜನಿಕ ಸೇವೆ, ಶುಚಿತ್ವಕ್ಕೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಡಾ. ಕೆ. ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಗುರುವಾರ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ದಿಢೀರ್ ಭೇಟಿ ನೀಡಿ, ಕಚೇರಿಯ ದೈನಂದಿನ ಆಡಳಿತ ಕಾರ್ಯವೈಖರಿ ಹಾಗೂ ಹಾಲಿ ವ್ಯವಸ್ಥೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.ಕಚೇರಿ ಭೇಟಿಯ ವೇಳೆ ಕಚೇರಿಯ ಪರಿಸರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಇಡೀ ಕಚೇರಿಯ ಆವರಣದಲ್ಲಿ ಸಂಪೂರ್ಣ ಶುಚಿತ್ವ, ಶಿಸ್ತು ಹಾಗೂ ಚೊಕ್ಕಟವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಚುರುಕು ಮುಟ್ಟಿಸುವ ಮೂಲಕ ಕಟ್ಟು-ನಿಟ್ಟಿನ ಸೂಚನೆ ನೀಡಿದರು.ಕಚೇರಿಗೆ ಆಗಮಿಸುವ ಸಾರ್ವಜನಿಕರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಿದರು.ಮೂಲಸೌಲಭ್ಯಕ್ಕೆ ಸೂಚನೆ: ಕಚೇರಿಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಸಮರ್ಪಕವಾಗಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.ತಕ್ಷಣಕ್ಕೆ ಜನರಿಗೆ ಸ್ಪಂದಿಸಿ: ಜೊತೆಗೆ, ವಿವಿಧ ಕೆಲಸ-ಕಾರ್ಯಗಳಿಗಾಗಿ ಬರುವ ಸಾರ್ವಜನಿಕರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ರಚನಾ ಶರೀರ ವಿಭಾಗದ ವತಿಯಿಂದ ಬುಧವಾರ ಅಂತರ್- ಮಹಾವಿದ್ಯಾಲಯದಲ್ಲಿ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಈ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆರ್‌.ಕೆ. ಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಬಿ.ಎನ್‌.ಎಂ ನಾಗೂರ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಹಾಗೂ ಲುಕ್ಮಾನ್ ಯುನಾನಿ ಮೆಡಿಕಲ್ ಕಾಲೇಜು ಸೇರಿದಂತೆ ನಾಲ್ಕು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಒಟ್ಟು 22 ತಂಡಗಳು ಪಾಲ್ಗೊಂಡಿದ್ದವು.ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಯೋಜನಾ ಕಾರ್ಯದರ್ಶಿ ಡಾ. ಶಿವಕುಮಾರ ಯರಗಲ, ಡಾ. ರಫಿಯಾಬಾನು ತಾಳಿಕೋಟಿ, ಸಹ-ಆಯೋಜನಾ ಕಾರ್ಯದರ್ಶಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಬಿ.ಎಲ್.ಡಿ.ಇ ಡೀಮ್ಡ್ ಟುಬಿ ಯೂನಿವರ್ಸಿಟಿಯ ರಚನಾ ಶರೀರ ವಿಭಾಗದ ಡಾ. ಆರ್. ಎಸ್. ಬುಲಗೌಡ ಹಾಗೂ ಡಾ. ಖುರೇಷಿ ಅವರು ತೀರ್ಪುಗಾರರಾಗಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಆರ್‌. ಎಸ್. ಬುಲಗೌಡ,…

Read More

ಸಾತಿಹಾಳ ಗ್ರಾಮದ ವಿಬಿಜಿ–ರಾಮ್ ಜಿ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಕಡ್ಡಾಯವಾಗಿ ಲಭ್ಯವಿರುವಂತೆ ನೋಡಿಕೊಳ್ಳುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ತಾಲ್ಲೂಕಿನ ಸಾತಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋನಾಬಾಯಿ ಹಳ್ಳದ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ, ಕೂಲಿಕಾರರ ಹಾಜರಾತಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರುವಂತೆ ಪಿಡಿಓ ಕ್ರಮ ವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಪ್ರತಿದಿನ ಎನ್‌ಎಂಎಂಎಸ್ ಆ್ಯಪ್ ಮೂಲಕ ಕಡ್ಡಾಯವಾಗಿ ಹಾಜರಾತಿ ದಾಖಲಿಸುವಂತೆ ಟಿಆರ್‌ಎಂ ಅವರಿಗೆ ನಿರ್ದೇಶನ ನೀಡಿದರು.ಕೂಲಿಕಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೂಲಿ ಆಧಾರಿತ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳಿಸುವಂತೆ ಪಿಡಿಓ…

Read More

ವಿಕಲಚೇತನರು, ವೃದ್ಧರು, ವಿಧವೆಯರ ಮಾಸಾಶನ ನಿಲುಗಡೆಗೆ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಕಲಚೇತನರು, ವೃದ್ಧರು, ವಿಧವೆಯರು ಸೇರಿದಂತೆ ವಿವಿಧ ವರ್ಗದ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಮಾಶಾಸನವನ್ನು ತಡೆಹಿಡಿದಿರುವದನ್ನು ತೀವ್ರ ವಿರೋಧಿಸಿ ಮತ್ತು ವಿಜಯಪುರ ಜಿಲ್ಲೆಯನ್ನು ೩೭೧ಜೆ ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ, ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ತಾಲೂಕು ಪದಾಧಿಕಾರಿಗಳು ಮತ್ತು ತಾಲೂಕು ವಿಕಲ ಚೇತನರ ಒಕ್ಕೂಟದ ಪದಾಧಿಕಾರಿಗಳು, ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ಬಸವೇಶ್ವರ ವೃತ್ತದಿಂದ ಶುರುವಾದ ಪ್ರತಿಭಟನಾ ರ‍್ಯಾಲಿ ತಹಸೀಲ್ದಾರ ಕಚೇರಿವರೆಗೂ ಸಾಗಿತು.ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಕೆ.ಘಾಟಿ, ತಾಲೂಕಾ ಕಾರ್ಯದರ್ಶಿ ರುದ್ರಗೌಡ ಗೌಡರ, ಸದಸ್ಯರಾದ ಶಿವಪುತ್ರ ಮೋಟಗಿ, ನಾಗೇಶ ಅಮರಾವತಿ, ನ್ಯಾಯವಾದಿ ಚಂದ್ರಶೇಖರ ಹೊಸಮನಿ ಮಾತನಾಡಿ, ಮಾಶಾಸನ ನೀಡಲು ವಾರ್ಷಿಕ ಆದಾಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆ.೧೫ರಂದು ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಶುಕ್ರವಾರ ಪರಿಶೀಲಿಸಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಕ್ರೀಡಾಂಗಣದಲ್ಲಿ ಧ್ವಜಾರೋಹಣ ವೇದಿಕೆ, ಪಥಸಂಚಲನ,ಗಣ್ಯರು ಹಾಗೂ ಸಾರ್ವಜನಿಕರ ಆಸನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಅವರು ಪರಿಶೀಲಿಸಿ, ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ, ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ವಿಜಯಪುರ ತಹಶೀಲ್ದಾರರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಆ. ೧೪ ಮತ್ತು ೧೫ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಆ. ೧೪ರಂದು ಸಂಜೆ ೬ ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಲಬುರಗಿಗೆ ಪ್ರಯಾಣ ಬೆಳೆಸುವರು. ರಾತ್ರಿ ೭:೩೦ ಕ್ಕೆ ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ವಿಜಯಪುರಕ್ಕೆ ಆಗಮಿಸುವರು.ಆ. ೧೫ರಂದು ಬೆಳಿಗ್ಗೆ ೯ ಕ್ಕೆ ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-೨ ರಡಿ ಅರ್ಕಾಟ್ ದರ್ಗಾ, ಖಾದಿ ಗ್ರಾಮೊದ್ಯೋಗ ವೃತ್ತ ಹಾಗೂ ತಾಜೋದ್ದೀನ್ ಹೋಟೆಲ್ ಬಸ್ ನಿಲ್ದಾಣದ ಬಳಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವರು.ಮಧ್ಯಾಹ್ನ ೧ ಗಂಟೆಗೆ ಯತ್ನಾಳದಲ್ಲಿ ಯತ್ನಾಳ-ಜಾಲಗೇರಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವರು. ಮಧ್ಯಾಹ್ನ ೧:೩೦ಕ್ಕೆ ಡೋಕಳೇವಾಡಿಯಲ್ಲಿ ಸೇತುವೆ ಕಾಮಗಾರಿಗೆ…

Read More