Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಒಂದು ಊರಿನಲ್ಲಿ ಸುಭದ್ರ ಎಂಬ ಒಬ್ಬ ಶ್ರೀಮಂತನಾದ ವಜ್ರದ ವ್ಯಾಪಾರಿಯು ವಾಸವಾಗಿದ್ದು, ದೇಶ ವಿದೇಶಗಳಿಗೂ ವಜ್ರದ ಹರಳುಗಳನ್ನು ಮಾರಾಟವನ್ನು ಮಾಡುತ್ತಿದ್ದನು. ಈತನು ತನ್ನ ವ್ಯಾಪಾರದ ಅಂಗಡಿಯನ್ನು ಮತ್ತು ತನ್ನ ಮನೆಯನ್ನು ಕಾಯಲು ಮತ್ತು ರಕ್ಷಣೆಗಾಗಿ ದೊಡ್ಡ ಜಾತಿಯ ಒಂದು ನಾಯಿಯನ್ನು ಸಾಕಿದ್ದನು. ನಾಯಿಯನ್ನು ಪಕ್ಕದ ಪಟ್ಟಣದಿಂದ ಹೆಚ್ಚು ಬೆಲೆಯನ್ನು ಕೊಟ್ಟು ಖರೀದಿಸಿ ತಂದಿದ್ದನು. ನಾಯಿಯು ನೋಡಲು ಗಾತ್ರದಲ್ಲಿ ಬಹಳ ದೊಡ್ಡದಾಗಿದ್ದು, ನೋಡಲು ಅತ್ಯಂತ ಸುಂದರ ಮತ್ತು ಆಕರ್ಷಕವಾಗಿತ್ತು. ಆ ನಾಯಿಯೂ ಸುಭದ್ರನಿಗೆ ಅತ್ಯಂತ ಪ್ರೀತಿ ಪಾತ್ರವಾಗಿತ್ತು. ನಾಯಿಯ ಎತ್ತರವಾದ ನೋಟ ಮತ್ತು ಗಂಭೀರ ಮತ್ತು ಏರು ಧ್ವನಿಯ ಬೊಗಳುವ ಸದ್ದಿನಿಂದ ಸುತ್ತಮುತ್ತಲಿನ ಜನರೆಲ್ಲರೂ ಸುಭದ್ರನ ಮನೆಯ ಸುತ್ತ ಸುಳಿಯಲೂ ಹಿಂದೇಟು ಹಾಕುತ್ತಿದ್ದರು. ಸುಭದ್ರನು ತಾನು ಸಾಕಿದ ನಾಯಿಯ ಕುರಿತು ಒಳಗೊಳಗೆ ಹೆಮ್ಮೆಪಡುತ್ತಿದ್ದನು. ತನ್ನ ವಿಶೇಷ ಜಾರಿಯ ನಾಯಿಗೆ ಸುಭದ್ರನು ತಿನ್ನಲು ಎರಡು ಹೊತ್ತು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾ ಮಾನವತಾವಾದಿಯಾಗಿ, ಸಮಾಜದ ಕಣ್ಣರಳಿಸಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರು ಸಾರ್ವಕಾಲಿಕವಾಗಿ ಶ್ರೇಷ್ಠರೇನಿಸಿದ್ದಾರೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಭಾನುವಾರ ನಾರಾಯಣಗುರು ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಮಾತನಾಡಿದರು. ಕೇರಳದಲ್ಲಿ ಜನಿಸಿದ ಇವರು ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದರು. ಶಂಕರಾಚಾರ್ಯರ ಅದ್ವೈತ ಸಾರದಲ್ಲಿ ತಮ್ಮ ದಾರ್ಶನಿಕತೆ ಪ್ರತಿಪಾದಿಸಿ ಎಲ್ಲರನ್ನೂ ಒಂದಾಗಿ ಕಂಡ ಮಹಾನುಭಾವರೆನಿಸಿದ್ದಾರೆ ಎಂದರು.ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, ಸಾಮಾಜಿಕ ಸಮಾನತೆಯ ಹರಿಕಾರ, ಒಂದೇ ಜಾತಿ, ಒಂದೇ ಮತ, ಒಂದೇ ಧರ್ಮ. ದೇಶ ಸೇವೆಯೇ ಈಶ ಸೇವೆ ಎಂದು ಸಾರಿದ ಸ್ತ್ರೀ ಸಮಾನತೆಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರು ಇವರ ಆದರ್ಶಗಳು ಮತ್ತು ಸಂದೇಶಗಳು ನಮಗೆ ದಾರಿದೀಪಗಳಾಗಿವೆ ಎಂದರು.ಗ್ರಾಮ ಆಡಳಿತಾಧಿಕಾರಿ ಅನೀಲ ರಾಠೋಡ, ರಮೇಶ ಈಳಗೇರ, ರಾವುತ ಅಗಸರ ಸಿಬ್ಬಂದಿ ಚನ್ನಬಸು ಹೊಸಮನಿ, ಕಿಶೋರ…
೬೫ ಲಕ್ಷ.ರೂ ಹಣ ಸಂದಾಯವಾದರೂ ದೊರೆಯದ ಜಮೀನು | ಭ್ರಷ್ಟಾಚಾರದಲ್ಲಿ ಅಧಿಕಾರಿ ಶಾಮೀಲಿನ ಶಂಕೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿಷಯದಲ್ಲಿ ಸುಮಾರು ೬೫ ಲಕ್ಷ ರೂ.ಗಳ ಅವ್ಯವಹಾರ ಆಗಿದ್ದು ಕೂಡಲೇ ಇದರ ಕುರಿತು ಕೂಡಲೇ ಕೂಲಂಕುಷ ತನಿಖೆ ನಡೆಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ತಹಶೀಲ್ದಾರ ಪ್ರಕಾಶ ಸಿಂದಗಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶನಿವಾರ ಆಗಮಿಸಿದ ದಲಿತ ಸಂಘರ್ಷ ಸಮಿತಿ ಹಾಗೂ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಘನತ್ಯಾಜ್ಯ ವಿಲೇವಾರಿ ಘಟಕದ ಜಮೀನಿನ ಖರೀದಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದಿರುವ ಅವ್ಯವಹಾರದ ಕುರಿತು ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ ಮಾತನಾಡಿ, ಪಟ್ಟಣದ ಘನತ್ಯಾಜ್ಯ ವಿಲೇವಾರಿಗೆ ಅಗತ್ಯವಾದ ಜಮೀನು ಖರೀದಿಗಾಗಿ ೨೦೧೫-೧೬ನೇ ಸಾಲಿನ ೧೪ನೇ ಹಣಕಾಸು ಯೋಜನೆಯಲ್ಲಿ ೧೦.೦೨ ಲಕ್ಷ, ರೂ.ಗಳು ಹಾಗೂ ೧೮-೧೯ನೇ ಸಾಲಿನಲ್ಲಿ ೧೧.೬೪ ಲಕ್ಷ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯದಲ್ಲಿ 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಎಲ್ಲಾ ಭಾಗ್ಯಗಳ ಜೊತೆ ವೇತನಾನುದಾನ ಭಾಗ್ಯವನ್ನು ನೀಡುವಂತೆ ವಿಜಯಪುರ ಜಿಲ್ಲಾ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಪೂಜಾರಿ ಅವರು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಶನಿವಾರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ಹುಟ್ಟಿದ ಪ್ರತಿಯೊಂದು ಮಗುವಿಗೂ ಮಾತೃ ಭಾಷೆಯಲ್ಲಿ ಶಿಕ್ಷಣ ಕೊಡಬೇಕಾದದ್ದು ಸರ್ಕಾರದ ಜವಾಬ್ದಾರಿ. ಆದರೆ ಸರ್ಕಾರವೇ ರಾಜ್ಯದ ಎಲ್ಲಾ ಭಾಗಗಳಲ್ಲಿ ಶಾಲಾ-ಕಾಲೇಜುಗಳನ್ನು ತೆರೆದು ಶಿಕ್ಷಣ ನೀಡಲು ಸಾಧ್ಯವಾಗದ ಕಾರಣ ಖಾಸಗಿಯವರು ಮತ್ತು ಮಠ ಮಾನ್ಯಗಳು ಶಾಲಾ-ಕಾಲೇಜುಗಳನ್ನು ತೆರೆದು ಶಿಕ್ಷಣ ನೀಡುತ್ತಾ ಸರ್ಕಾರದ ಜವಾಬ್ದಾರಿಯನ್ನು ಕಡಿಮೆ ಮಾಡಿವೆ. ಸುಪ್ರಿಂ ಕೋರ್ಟ್ತೀರ್ಪಿನ ಪ್ರಕಾರ ಶಿಕ್ಷಣ ನೀಡುವ ಎಲ್ಲಾ ವಿದ್ಯಾಸಂಸ್ಥೆಗಳಿಗೆ ಅನುದಾನ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಈ ವಿಚಾರದಲ್ಲಿ ಮಲತಾಯಿ ಧೋರಣೆ ತಳೆದಿರುವುದು ಕನ್ನಡಿಗರ ದುರ್ದೈವ ! ಕರ್ನಾಟಕದಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಖಾಸಗಿ ಶಿಕ್ಷಣ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಂಧೆ ಅವ್ಯಾಹತವಾಗಿ ಜರುಗುತ್ತಿದ್ದು ಇದನ್ನು ತಡೆಗಟ್ಟಲು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶನಿವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಅಕ್ಕಿ ಅಕ್ರಮದ ಕುರಿತು ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಸನ ನದಾಫ್ ಮಾತನಾಡಿ, ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲಾಗುತ್ತಿದೆ. ಪಟ್ಟಣ ಸಹಿತ ತಾಲ್ಲೂಕಿನಲ್ಲಿ ಎಗ್ಗಿಲ್ಲದೆ ಅಕ್ಕಿ ಸಂಗ್ರಹಣೆಯ ದಂಧೆ ನಡೆಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ತಿಳಿಸಿದರು ಯಾವುದೇ ರೀತಿ ಸೂಕ್ತ ಕ್ರಮಕ್ಕೆ ಮುಂದಾಗಿಲ್ಲ. ಅಕ್ಕಿ ಕಳ್ಳರ ಜೊತೆ ಅಧಿಕಾರಿಗಳು ಶಾಮೀಲು ಆಗಿರುವ ಸಂಶಯ ಮೂಡುತ್ತಿದ್ದು ಕೂಡಲೇ ತಹಶೀಲ್ದಾರ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು.ಅಕ್ಕಿ ಅಕ್ರಮ ಸಂಗ್ರಹಣೆಯಲ್ಲಿ ತೊಡಗಿದವರನ್ನು ಕೂಡಲೇ ಪತ್ತೆ ಹಚ್ಚಿ ಅಂತವರ ವಿರುದ್ಧ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮಸಮಾಜದ ನಿರ್ಮಾಣ ನಮ್ಮ ಗುರಿಯಾಗಬೇಕು ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ನಾವೆಲ್ಲರೂ ಒಂದೇ ಎಂಬ ಸಮ ಸಮಾಜದ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ ಎಂದು ನಾರಾಯಣ ಗುರುಗಳ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ದ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ಎನ್.ಕೆ. ನದಾಫ್ , ಲೋಕೇಶ ಪೂಜಾರಿ, ಯಮನಪ್ಪ ಪೂಜಾರಿ ಬಾಪು ಈಳಗೇರ, ಶ್ರೀಶೈಲ ಹಂಡಿ ಮತ್ತು ಸಮಾಜದ ಹಿರಿಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ಸ್ವಾತಂತ್ರೋವದಲ್ಲಿ ಪರಕೀಯರನ್ನು ಹೊರಗಟ್ಟಲು ಅಸ್ತçವಾಗಿ ಭಾರತೀಯರನ್ನು ಸಂಘಟಿಸಲು ಆರಂಭವಾದ ಸಾರ್ವಜನಿಕ ಗಣೆತೋತ್ಸವ ಈಗ ಪ್ರತಿ ಹಳ್ಳಿಗಳಿಂದ ಹಿಡಿದು ದೇಶದೆಲ್ಲೆಡೆ ಆರಾಧಿಸಲ್ಪಡುತ್ತಿದೆ. ಎಂದು ಶಾಶಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ಬಸವರಾಜೇಂದ್ರ ಗಜಾನನ ಯುವಕ ಮಂಡಳಿ ವತಿಯಿಂದ ನಡೆದ ಗಣೇಶ ವಿಸರ್ಜನೆ ಹಾಗೂ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯ ಕ್ರಮ ಮದಲ್ಲಿ ಮಾತನಾಡಿದರು.ಜನರಲ್ಲಿ ಭಕ್ತಿ ಭಾವನೆ ಬೆಳೆಸಲು ಗಣೇತೋತ್ಸವ ಸಹಕಾರಿ, ಬಸವರಾಜೇಂದ್ರ ದೇವಸ್ಥಾನದ ಗಣೇತೋತ್ಸವ ಎಲ್ಲ ಜಾತಿ ಧರ್ಮದವರನ್ನು ಒಳಗೊಂಡು ಮಾದರಿಯಾಗಿ ನಡೆಯುತ್ತಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನಗೊಂಡ ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕುಡಿಗನೂರ ಮಾತನಾಡಿದರು.ಪುರಸಭೆ ಸದಸ್ಯ ಸುಧೀರ ಕರಕಟ್ಟಿ, ವಿಶಾಲ ಸಿಂದಗಿ, ಗೀರಿಶ ಪೋಪಡಿ, ಆರ್.ವಿ.ಪಾಟೀಲ, ಸೋಮುಸುರಪುರ, ಮತ್ತಿತರಿದ್ದರು.ಇದೇ ವೇಳೆ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.
ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣನೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಾಮರಸ್ಯದ ಸಮಾಜ ಕಟ್ಟುವುದಕ್ಕಾಗಿ ಅಣ್ಣ ಬಸವಣ್ಣ, ಶಿರಡಿ ಸಾಯಿಬಾಬಾ, ಸಿದ್ಧೇಶ್ವರ ಶ್ರೀಗಳಂಥ ದೈವಿ ಪುರುಷರು ಕಾಲ ಕಾಲಕ್ಕೆ ಸಮಾಜೊದ್ದಾರಕ್ಕೆ ಜನ್ಮ ತಳೆಯುತ್ತಾರೆ. ಅಂಥ ವಿಶಿಷ್ಟ ಸಾಧನೆಯ ಸಂತ, ಮಹಾತ್ಮರಲ್ಲಿ ಚನ್ನಬಸವೇಶ್ವರ ಮಹಾರಾಜರು ಕೂಡ ಪ್ರಮುಖರು. ಜಾಗತಿಕ ಆಧ್ಯಾತ್ಮಿಕ ಪರಂಪರೆಗೆ ಭಾರತೀಯ ಧಾರ್ಮಿಕ ಪರಂಪರೆ ವಿಶಿಷ್ಠವಾಗಿದೆ. ಇಂಚಗೇರಿ ಮಠದ ವಿಶಿಷ್ಟ ಪರಂಪರೆ ಭಾರತೀಯ ಆಧ್ಯಾತ್ಮಿಕ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ತಾಲೂಕಿನ ಕೂಡಗಿ ಗ್ರಾಮದ ವಿಠ್ಠಲ ಮಂದಿರದಲ್ಲಿ ಹಮ್ಮಿಕೊಂಡಿದ್ದ ಇಂಚಗೇರಿ ಆಧ್ಯಾತ್ಮ ಸಂಪ್ರದ್ಧಾಯದ ಚನ್ನಬಸವೇಶ್ವರ ಮಹಾರಾಜರ 39ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ದೇವರ ದರ್ಶನ ಪಡೆದು, ಸನ್ಮಾನಗೊಂಡು ಮಾತನಾಡಿದ ಸಚಿವರು, 1400 ಕೋಟಿ ಜನಸಂಖ್ಯೆಯಲ್ಲಿ ಪದೇ ಪದೇ ಕೆಲವೇ ಕೆಲವರನ್ನು ಮಾತ್ರ ನೆನೆಯುತ್ತೇವೆ ಎಂದರೆ ಸಮಾಜಕ್ಕೆ ಅಂಥ ಸ್ಮರಣೀಯ…
ಇಟ್ಟಂಗಿಹಾಳದ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್‌ನಲ್ಲಿ ನಡೆದ ಶಿಕ್ಷಕರ ದಿನೋತ್ಸವದಲ್ಲಿ ವಾಗ್ಮಿ ಅಶೋಕ ಹಂಚಲಿ ಶಿಕ್ಷಕರಿಗೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾಸ್ತವದಲ್ಲಿ ಶಿಕ್ಷಕರು ವಿಶ್ವಗುರು ಭಾರತದ ಕಲ್ಪನೆಯನ್ನು ಬಿತ್ತಿದರೆ ಭವಿಷ್ಯದಲ್ಲಿ ಭಾರತವು ಮತ್ತೊಮ್ಮೆ ವಿಶ್ವಗುರುವಾಗುತ್ತದೆ. ಅದರ ಜೊತೆಗೆ ಮಕ್ಕಳ ಭವಿಷ್ಯವೂ ಕೂಡ ಉಜ್ವಲವಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು. ಸೇವಾ ಮನೋಭಾವನೆಯ ಮೂಲಕ ಮಕ್ಕಳಲ್ಲಿ ಕನಸುಗಳನ್ನು ಬಿತ್ತಿ, ಸಂಸ್ಕಾರದ ಗೊಬ್ಬರ ಹಾಕಿ, ಶ್ರೇಷ್ಠತೆಯ ಫಸಲು ತೆಗೆಯಬೇಕು ಎಂದು ಖ್ಯಾತ ವಾಗ್ಮಿ ಅಶೋಕ ಹಂಚಲಿ ಹೇಳಿದರು.ಇಟ್ಟಂಗಿಹಾಳದಲ್ಲಿರುವ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್‌ನಲ್ಲಿ ಜರುಗಿದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾರತ ವಿಶ್ವಗುರುವಾಗಿಸುವಲ್ಲಿ ಶಿಕ್ಷಕರ ಪಾತ್ರ ಎನ್ನುವ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.ನಮ್ಮ ದೇಶದ ಭವ್ಯ ಪರಂಪರೆ ಹಾಗೂ ಹೋರಾಟದ ಯಶೋಗಾಥೆಯನ್ನು ಮಕ್ಕಳಿಗೆ ಪ್ರತಿದಿನವೂ ಜ್ಞಾಪಿಸಿದಾಗ ಅವರಲ್ಲಿ ದೇಶಾಭಿಮಾನ ಮೂಡುತ್ತದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿದಾಗ ಅದರ ಲಾಭ ಭವಿಷ್ಯದ ಭಾರತಕ್ಕೆ ದೊರೆಯುತ್ತದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಶಿಕ್ಷಕ ವೃತ್ತಿ ಬಲು ದೊಡ್ಡದು, ಅದರ ಘನತೆಯನ್ನು ಕಾಪಿಟ್ಟುಕೊಳ್ಳುವವನೇ ನಿಜವಾದ ಶಿಕ್ಷಕ ಎಂದು ಪ್ರಾಚಾರ್ಯ ವೀರಭದ್ರ ಗೋಲಾ ಹೇಳಿದರು.ಅವರು ತಾಲ್ಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮೊಬೈಲ್ ಯುಗದಲ್ಲಿ ಪಠ್ಯಗಳು ಮಾಯಾವಾಗುತ್ತಿರುವುದು ಶೋಚನೀಯ ಸಂಗತಿ, ವಿದ್ಯಾರ್ಥಿಗಳಲ್ಲಿ ಅಧ್ಯಯನಶೀಲರಾಗಲು ಪುಸ್ತಕಗಳು ಸಹಾಯ ಮಾಡುತ್ತವೆ, ಮೊಬೈಲನಿಂದ ದೂರವಿದ್ದು ಪಠ್ಯಮತ್ತು ಸಾಂಸ್ಕೃತಿಕವಾಗಿ ತೊಡಗಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಉದ್ಘಾಟನೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಬಿ.ಎಸ್.ಪಾಟೀಲ ನೆರವೇರಿಸಿ ಮಾತನಾಡಿದರು.ಆಲಮೇಲ ಬೆರಗು ಪ್ರಕಾಶನದ ಸಂಚಾಲಕ ರಮೇಶ ಕತ್ತಿ ಮಾತನಾಡಿ, ‘ಗುರು ಮತ್ತು ಶಿಷ್ಯರ ನಡುವಿನ ಸಂಬಂಧ ಗಟ್ಟಿಗೊಳಿಸಲು ಆದರ್ಶತನ, ಪ್ರಾಮಾಣಿಕತೆಗಳು ಇಬ್ಬರಲ್ಲೂ ಬರಬೇಕು ಎಂದು ಸಲಹೆ ನೀಡಿದರು.ಮುಖ್ಯ ಅತಿರ್ಥಿಗಳಾಗಿ ಪ್ರೊ. ಎಸ್.ಎಂ.ಹರನಾಳ, ಪ್ರೊ. ಆರ್.ವೈ.ಕಂಬಾರ, ಪ್ರೊ. ವಿ.ಎಸ್.ಶಾ ಹಾಪೂರ, ಡಾ. ಐ.ಜಿ.ಕೋಣಸಿರಸಗಿ ಮಾತನಾಡಿದರು.ಸಂಸ್ಥೆಯ ಶಿಕ್ಷಕಿ ಆರ್ ವೈ ಚೌಗಲೆ ಮತ್ತು ಮಾಲಾಶ್ರೀ ಮಂದೇವಾಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿನೀಯರಾದ ಸಂಗೀತಾ ದುದ್ದಗಿ, ಜಯಶ್ರೀ…
