Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ತಮಗೆ ಜ್ಞಾನ ನೀಡಿದ ಶಿಕ್ಷಕರನ್ನು ಸ್ಮರಿಸಿ ಗೌರವಿಸುವುದರ ಜೊತೆಗೆ ಅವರ ಮಾರ್ಗದರ್ಶನ ಪಡೆದಲ್ಲಿ ನೀವು ಜಗತ್ತು ಬೆಳಗುವ ತಾರೆಗಳಾಗುತ್ತೀರಿ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಜೆಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಂಜುನಾಥ.ಬಿ.ಕೋರಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಶಿಕ್ಷಣ ಶಾಸ್ತ್ರ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗೆ ಬಂದ ಮಗುವನ್ನು ಕೈ ಹಿಡಿದು ದಡ ಸೇರಿಸುವ ಅವರ ಬದುಕು ಬೆಳಗಿಸುವ ಏಕೈಕ ವ್ಯಕ್ತಿ ಯಾರಾದರೂ ಇದ್ದರೆ ಅದು ಶಿಕ್ಷಕ. ಶಿವ ಪಥವನ್ನು ಅರಿಯಬೇಕಾದರೆ ನಮ್ಮ ಜೊತೆ ಗುರು ಇರಬೇಕು. ಮುಂದೆ ಗುರಿ, ಹಿಂದೆ ಗುರು ಇದ್ದರೆ ಅಸಾಧ್ಯವಾದದ್ದನ್ನು ಸುಲಭ ಸಾಧ್ಯವಾಗಿಸಬಹುದು ಎಂದರು.ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಮಾತನಾಡಿ, ಇಂದು…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸದ್ಭಕ್ತರು ಸನ್ಮಾರ್ಗದಡೆಗೆ ಕೊಂಡೊಯ್ಯುವಲ್ಲಿ, ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಸಹಕಾರಿಯಾಗಿದ್ದು, ಜನಸಾಮಾನ್ಯರು ಸತ್ಸಂಗದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಪೂಜ್ಯ ವಿಜಯಾನಂದ ಸ್ವಾಮಿ ಹೇಳಿದರು.ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ರವಿವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು ದಯೆ, ದಾನ, ಧರ್ಮ, ಕಾಯಕ, ದಾಸೋಹ, ಪರಂಪರೆಯ ತತ್ವಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು, ಅನುದಿನವು ಗುರು ಸನ್ನಿಧಿಯಲ್ಲಿ ಕಾಲ ಕಳೆಯೋಣ ಎಂದರು.ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿಯಲ್ಲಿ ವಿಶೇಷ ಉಪನ್ಯಾಸ ನೀಡಿದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ರಮೇಶ ಶಾಸ್ತ್ರಿ ಯಾಳಗಿ ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಧರ್ಮದ ಜ್ಯೋತಿ ಹೊತ್ತಿಸಿ, ಜ್ಞಾನದ ಬೆಳಕು ಚೆಲ್ಲಿದ ಬಸವಾದಿ ಶರಣರು, ದಾಸ ಶ್ರೇಷ್ಠರು, ಸೂಫಿ ಸಂತರು, ಯೋಗಿಗಳು, ಮಹಾತ್ಮರು, ತೋರಿದ ತತ್ವ, ಚಿಂತನೆಯೊಂದಿಗೆ ಸಾಗಲು ಪ್ರತಿನಿತ್ಯವೂ ಸತ್ಸಂಗದಲ್ಲಿ ಸೇರೋಣ, ಅನುಭವದ ಅಮೃತಧಾರೆ ಸವಿದು ಸದ್ಗುರುವಿನ ಕೃಪೆಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾನುವಾರ ರಾತ್ರಿ ನಡೆದ ರಾಹುಗ್ರಸ್ತ ಚಂದ್ರಗ್ರಹಣ ನಿಮಿತ್ಯ ಅಂದು ರಾತ್ರಿ 9:55 ರಿಂದ 1. 25 ರವರೆಗೆ B.L.D.E ಟೀಚರ್ಸ್ ಕಾಲೋನಿ ಬಿ .ಎಂ ಪಾಟೀಲ್ ನಗರದ ಶಿವಾಲಯದಲ್ಲಿ ಲೋಕಕಲ್ಯಾಣಕ್ಕಾಗಿ ಮತ್ತು ಅಶುಭ ಫಲ ಇರುವ ರಾಶಿಯವರಿಗೆ ಶುಭ ಫಲವನ್ನು ಬಯಸಿ ಸಂಕಲ್ಪಿಸಿ ವೇ.ಮೂ ಫಕೀರಯ್ಯ ಶಾಸ್ತ್ರಿ ಹಾಗೂ ವೇ.ಮೂ ಸಿದ್ದರಾಮಯ್ಯ ಶಾಸ್ತ್ರಿ ಇವರ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಜಪವನ್ನು ಬಡಾವಣೆಯ ಸದ್ಭಕ್ತರೊಂದಿಗೆ ನಡೆಸಲಾಯಿತು.ನಂತರ ಸೋಮವಾರ ಗ್ರಹಣ ಮೋಕ್ಷದ ನಂತರ ಮಹಾಶಿವನಿಗೆ ವಿಶೇಷವಾಗಿ ರುದ್ರಾಭಿಷೇಕ ನೆರವೇರಿಸಿ ಸಮಾಜದ ಒಳಿತಿಗಾಗಿ ಹಾಗೂ ಆಯುಷ್ಯ ಆರೋಗ್ಯ ಅಭಿವೃದ್ಧಿಗಾಗಿ ಮಹಾ ಮೃತ್ಯುಂಜಯ ಹೋಮವನ್ನು ಮಾಡಲಾಯಿತು. ಬಡಾವಣೆಯ ಹಾಗೂ ಸುತ್ತಮುತ್ತಲಿನ ಎಲ್ಲ ಸದ್ಭಕ್ತರು ಈ ಮಹತ್ತರ ಕಾರ್ಯದಲ್ಲಿ ಪಾಲ್ಗೊಂಡು ಮೃತ್ಯುಂಜಯನ ಕೃಪೆಗೆ ಪಾತ್ರರಾಗಿ ಪುನೀತರಾಗಿದ್ದಾರೆ. ಪೂರ್ಣಾಹುತಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.ಶಿವನಗೌಡ ಬಿರಾದಾರ ಕನಾಳ ಸೇರಿದಂತೆ ಸ್ಥಳಿಯ ಮುಖಂಡರು, ಗಣ್ಯರು ಭಾಗಿಯಾಗಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಕತ್ತು ಮತ್ತು ಭುಜನೋವು, ಭುಜ ಹಿಡಿಯುವುದು, ಭುಜ ಎತ್ತುವಲ್ಲಿ ಅಶಕ್ತ(ಫ್ರೋಝನ್ ಶೋಲ್ಡರ್), ಕೀಲುಗಳಲ್ಲಿ ನೋವು, ಹಿಡಿತ, ಊತ (ರುಮಟಾಯ್ಡ ಅರ್ಥರೈಟಿಸ್) ರೋಗ, ಕೀಲುಗಳಲ್ಲಿ ನೋವು, ಸಂಧಿಗಳ ನೋವು ಹಾಗೂ ಮೂಳೆಗಳಲ್ಲಿ ಕ್ಯಾಲ್ಸಿಯಂ ಕೊರತೆ (ಆಸ್ಟಿಯೊಪೋರೊಸಿಸ್) ಸೇರಿದಂತೆ ನಾನಾ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ನೀಡಲಾಗುವುದು.ಸೆಪ್ಟೆಂಬರ್ 11 ರಂದು ದೇಶದ ಪ್ರತಿಷ್ಠಿತ ಆಯುರ್ವೇದ ಸಂಸ್ಥೆ ಝಂಡು ಹೆಲ್ತಕೇರ್ ಅವರ ಸಹಯೋಗದಲ್ಲಿ ಮೊದಲಿಗೆ ಬರುವ 100 ಜನರಿಗೆ ವಿಶೇಷವಾಗಿ ಮೂಳೆಗಳ ಸಾಂಧ್ರತೆ ಮಾಪನ ಯಂತ್ರದಿಂದ ಉಚಿತ ತಪಾಸಣೆ ಮಾಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಮೊ.7975160825 ಮತ್ತು 9513397413 ಸಂಪರ್ಕಿಸಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.೦೭ ರಂದು ಬಸವನಾಡಿನಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-೨೦೨೫ ರಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನಾಡು ವಿಜಯಪುರ ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025ರಲ್ಲಿ ಐರನ್ ಮ್ಯಾನ್ ಖ್ಯಾತಿಯ ಹಿರಿಯ ಐಪಿಎಸ್ ಆಧಿಕಾರಿ ಮತ್ತು ಕೆ.ಎಸ್.ಆರ್.ಪಿ ಐಜಿಪಿ ಸಂದೀಪ ಪಾಟೀಲ ಪಾಲ್ಗೊಳ್ಳಲು ಒಪ್ಪಿಗೆ ಸೂಚಿಸಿದ್ದು, ಈ ಬಾರಿಯ ಓಟಕ್ಕೆ ಮೆರಗು ತರಲಿದೆ.ಸೋಮವಾರ ಬೆಂಗಳೂರಿನಲ್ಲಿ ಹೆರಿಟೇಜ್ ರನ್ ಪ್ರಾಯೋಜಕರಾದ ಕೆ.ಎಸ್.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ಪಿ. ಕೆ. ಎಂ ಮತ್ತು ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಅವರು ಕೆ.ಎಸ್.ಆರ್.ಪಿ ಐಜಿಪಿ ಸಂದೀಪ ಪಾಟೀಲ ಅವರನ್ನು ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.ಈ ಆಹ್ವಾನಕ್ಕೆ ಸಂತೋಷದಿಂದ ಒಪ್ಪಿಗೆ ಸೂಚಿಸಿದ ಸಂದೀಪ ಪಾಟೀಲ ಅವರು, ಜಲ, ವೃಕ್ಷ, ಶಿಕ್ಷಣ, ಆರೋಗ್ಯ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಆಯೋಜಿಸಲಾಗಿರುವ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಹೆಮ್ಮೆ ಎನಿಸುತ್ತದೆ. ಐತಿಹಾಸಿಕ ಗೋಳಗುಮ್ಮಟ, ಬಾರಾಕಮಾನ ಮತ್ತೀತರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸೋಂಪುರ ರಸ್ತೆಯಲ್ಲಿನ ಸರ್ವೇ ನಂ.೮೪೨/೨ ಜಾಗೆಯ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದಂತೆ ತೆರವುಗೊಳಿಸುವ ಕಾರ್ಯ ಸೋಮವಾರ ಪ್ರಾರಂಭಿಸಲಾಗಿದೆ ಎಂದು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆಡಳಿತ ಕಛೇರಿಯಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೇ ನಒ.೮೪೨ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವ ಯಾವ ಸಮಯದಲ್ಲಿ ಪ್ರಕರಣ ತೀರ್ಪು ಏನಾಗಿದೆ ಎಂಬುದನ್ನು ತಿಳಿಸಿದರು. ಈ ಜಾಗದಲ್ಲಿ ೧೪ಮನೆಗಳು, ೨೦ಕಚ್ಚಾ ಮನೆಗಳು, ೪೧ಶೆಡ್‌ಗಳು, ೯ ಖಾಲಿ ಜಾಗಗಳಿದ್ದು, ಇವುಗಳಲ್ಲಿ ೨೬ ಮಾರಾಟವಾಗಿವೆ ಎಂದರು.ಸದರಿ ಸರ್ವೇ ನಂ.೮೪೨/೨ರ ಎಕರೆ ೧೦ಗುಂಟೆ ಜಮೀನು ಮರಿಯಂಬಿ ಕರಜಗಿಯವರು ಮಾಲೀಕರೆಂದು ಘೋಷಣೆ ಮಾಡಿ ಸದರಿ ಆಸ್ತಿಯನ್ನು ದಾವೆದಾರರಿಗೆ ಸ್ವಾಧೀನತೆ ನೀಡಲು ನ್ಯಾಯಾಲಯ ಪ್ರತಿವಾದಿಗಳಿಗೆ ಆದೇಶ ಮಾಡಿರುವ ಕಾರಣ ತೆರವು ಕಾರ್ಯಾಚರಣೆ ಪ್ರಾರಂಭ ಮಾಡಲಾಗಿದೆ ಎಂದರು.ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಎಸ್.ರಾಜಶೇಖರ ಮಾತನಾಡಿ, ೮೪೨/೨ರಲ್ಲಿ ವಾಸಿಸುವ ೮೦ಕುಟುಂಬಗಳನ್ನು ತಾತ್ಕಾಲಿಕವಾಗಿ ಅಲ್ಪಸಂಖ್ಯಾತರ ಬಾಲಕರ ವಸತಿ ನಿಲಯ, ರಾಜರಾಜೇಶ್ವರಿ ಕಲ್ಯಾಣ ಮಂಟಪ, ಅಬು ಪಂಕ್ಷನ್ ಹಾಲ್,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದೆ. ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ)ಹಾಗೂ ಎಚ್.ಜಿ.ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ೨೦೨೫-೨೬ ನೇ ಸಾಲಿನ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕುಗಳ ಪದವಿ ಪೂರ್ವ ಕಾಲೇಜುಗಳ ತಾಲೂಕಾ ಮಟ್ಟದ ಮೇಲಾಟಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಮೂಲ ಕ್ರೀಡೆ ಹಾಕಿ ಮರೆಮಾಚಿ ಹೊಗುತ್ತಿದೆ. ನಸಿಸಿ ಹೋಗುತ್ತಿರುವ ಕ್ರೀಡೆಗಳನ್ನು ದೈಹಿಕ ಶಿಕ್ಷಕರು ಶಾಲಾ ಕಾಲೇಜುಗಳಲ್ಲಿ ಹೆಚ್ಚು ಹೆಚ್ಚಾಗಿ ಮಕ್ಕಳಿಗೆ ಪ್ರೇರೆಪಿಸಿ ಭಾಗವಹಿಸುವಂತೆ ಮಾಡಬೇಕು. ಶಿಕ್ಷಣದಷ್ಟೇ ವಿವಿಧ ಕ್ರೀಡೆಗಳಿಗೆ ಪ್ರಾಮುಖ್ಯತೆ ನೀಡಬೇಕು. ಜಗತ್ತು ರಾಜಕಾರಣಿಗಳಿಂತ ಹೆಚ್ಚು ಶ್ರೇಷ್ಠ ಆಟಗಾರರ ಮೇಲೆಯೆ ಅಭಿಮಾನವಿದೆ. ಕ್ರೀಡೆಗಳು ನಮ್ಮ ಮಾನಸಿಕ ಮತ್ತು ದೈಹಿಕ ಸ್ಥಿತಿಯನ್ನು ವೃದ್ದಿ ಮಾಡುತ್ತದೆ ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಭಾನುವಾರ ರಾತ್ರಿ ಸಂಭವಿಸಿದ ಚಂದ್ರಗ್ರಹಣದ ಮೂಲಕ ಹಲವರು ಕೆಂಪು ಚಂದ್ರನನ್ನು ಕಣ್ತುಂಬಿಕೊಂಡರು.ಪಟ್ಟಣದಲ್ಲಿ ಕೆಲವರು ರಾತ್ರಿ ೧೧ ಗಂಟೆಯಿಂದಲೇ ಎಚ್ಚರವಾಗಿದ್ದು ಬದಲಾಗುತ್ತಿರುವ ಚಂದ್ರನ ಬಣ್ಣವನ್ನು ಮೊಬೈಲ್‌ಗಳಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು. ಅದರಲ್ಲೂ ೧೨ ರಿಂದ ೧೨.೩೦ ರ ನಡುವಿನ ಅವಧಿಯಲ್ಲಿ ಬಹುತೇಕ ಕೆಂಬಣ್ಣಕ್ಕೆ ತಿರುಗಿದ ಚಂದ್ರಮ ಅಕ್ಷರಶ ರಕ್ತಚಂದಿರನಂತೆ ಕಂಡು ಬಂದನು.ಚಂದ್ರಗ್ರಹಣದ ಅಂಗವಾಗಿ ಭಾನುವಾರ ಕೆಲವರು ಜೋತಿಷ್ಯದ ಅನುಗುಣವಾಗಿ ಮಧ್ಯಾನ್ಹವೇ ಊಟೋಪಚಾರ ಮುಗಿಸಿದರೆ ಇನ್ನೂ ಕೆಲವರು ಸಾಯಂಕಾಲ ಬೇಗನೇ ಊಟ ಮುಗಿಸಿದರು. ರಾತ್ರಿ ಚಂದ್ರಗ್ರಹಣ ಆರಂಭವಾಗುತ್ತಿದ್ದಂತೆಯೇ ವಿವಿಧ ರಾಶಿಫಲಗಳಿಗೆ ಅನುಗುಣವಾಗಿ ಪೂಜೆ ಸಹಿತ ವಿವಿಧ ಧಾರ್ಮಿಕ ಕ್ರಿಯೆಗಳಲ್ಲಿ ನಿರತರಾದರು.ಹಿಂದಿನ ದಿನಗಳಲ್ಲಿ ಹಗಲಿನ ಗ್ರಹಣದ ನಂತರ ಭಾವಿ, ಬೊರೆವೆಲ್‌ಗಳ ಮುಂದೆ ನಿಂತು ನೀರು ಸುರಿದುಕೊಂಡು ಮನೆ ಸೇರುತ್ತಿದ್ದ ಜನರು ಇಂದು ಮಧ್ಯರಾತ್ರಿ ಗ್ರಹಣವಿದ್ದ ಕಾರಣ ಜನರು ಸಹ ಹಿಂದಿನ ಪದ್ಧತಿ ಬದಲಾಗಿ ಬೆಳಿಗ್ಗೆ ಎದ್ದು ಸ್ನಾನ ಕರ್ಮಾಧಿ ಮುಗಿಸಿ ದೋಷಗಳಿಗೆ ಅನುಗುಣವಾಗಿ ಮನೆ ಹಾಗೂ ದೇವಸ್ಥಾನಗಳಲ್ಲಿ ವಿಶೇಷ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ದೇವರಹುಲಗಬಾಳ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ಶ್ರೀಮತಿ ಶೈಲಾ ಭೂಪಾಲಪ್ಪ ಗೊಂಗಡಿ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದರು.ಸೆ.೫ ರಂದು ವಿಜಯಪುರದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವದ ಅಂಗವಾಗಿ, ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ವಿಜಯಪುರದಲ್ಲಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿದ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳಖಾದಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಖಾದಿ ಬಟ್ಟೆ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ. ಖಾದಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಮಸ್ಕಿ ಶಾಸಕ ಬಸನಗೌಡ ತುರವಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‌ನಲ್ಲಿ ಸೆ.೮ ರಿಂದ ೧೭ರವರೆಗೆ ಆಯೋಜಿಸಿದ ಖಾದಿ ಉತ್ಸವ-೨೦೨೫ರ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯದಲ್ಲಿ ಖಾದಿ ಉತ್ಪಾದನೆಗೆ ಇತಿಹಾಸವಿದೆ. ಖಾದಿ ನಮ್ಮ ಸ್ವಾಭಿಮಾನ-ಸ್ವಾವಲಂಬನೆಯ ಸಂಕೇತವಾಗಿದೆ. ವಿಶಿಷ್ಟ ಸ್ಥಾನ…
