Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪೌರ ಸೇವಾ ನೌಕರರು ಹಲವಾರು ಸಮಸ್ಯೆಗಳ ಮಧ್ಯಯೂ ಸರಕಾರದಿಂದ ನೀಡುವ ಸೌಲಭ್ಯಗಳು ಮುಟ್ಟದಿದ್ದರು ಕೂಡಾ ಇಡೀ ತಮ್ಮ ಜೀವನುದ್ದಕ್ಕೂ ಸೂರ್ಯ ಹುಟ್ಟವ ಮುನ್ನ ಬಿದಿಗಿಳಿದು ಜನರ ಸೇವೆಗಾಗಿ ನಿಂತವರು ಪೌರ ಕಾರ್ಮಿಕರು ಈ ದೇಶದ ಆಸ್ತಿಯಾಗಿದ್ದಾರೆ. ಇವರ ಸಮಸ್ಯೆಗಳ ಈಡೇರಿಕೆ ಸಿಎಂ ಅವರ ಜೊತೆಗೆ ಚರ್ಚಿಸಿ ಪರಿಹರಿಸವುದಾಗಿ ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಸಿಂದಗಿ ನಗರದ ಗುಂದಗಿ ಪಂಕ್ಷನ್ ಹಾಲ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ (ರಿ) ಬೆಂಗಳೂರು ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಮಾನ್ಯ ರಾಜ್ಯಾಧ್ಯಕ್ಷರಿಗೆ ಸನ್ಮಾನ ಸಮಾರಂಭ ಹಾಗೂ ರಾಜ್ಯ ಪರಿಷತ್ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರ ಮಗನಿಗೆ ಮಂತ್ರಿಸ್ಥಾನ ನೀಡಿದ ಕಾಂಗ್ರೆಸ್ ಸರಕಾರ ಪೌರ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂಧಿಸುತ್ತದೆ. ಪೌರ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆ, ಸೇವಾ ಭದ್ರತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಸಿಎಂ ಜೊತೆ ಚರ್ಚಿಸಿ ಸರಕಾರದ ಗಮನ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪೊಲೀಸ್ ಎಂದರೆ ಭಯಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ ಎಂದು ಪಿಎಸ್‌ಐ ಶ್ರೀಕಾಂತ ಕಾಂಬಳೆ ಹೇಳಿದರು.ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಪರಿಚಯಾತ್ಮಕ ಭೇಟಿಯ ಅಂಗವಾಗಿ ಸಿಂದಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ವಿಭಾಗಗಳ ಕುರಿತು ಮಾಹಿತಿ ಪಡೆಯಲು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿ ಅವರು, ವಿದ್ಯಾರ್ಥಿಗಳು ಅತಿಯಾಗಿ ಸಾಮಾಜಿಕ ಜಾಲತಾಣಗಳ ಬಳಕೆಗೆ ಒಳಗಾಗದೆ, ವಿದ್ಯಾಭ್ಯಾಸ ಹಾಗೂ ತಮ್ಮ ಭವಿಷ್ಯದ ರೂಪಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿಗಳು ಅಥವಾ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾದರೂ ಮುಕ್ತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.ಈ ವೇಳೆ ಕ್ರೈಂ ಪಿಎಸ್‌ಐ ಎಂ.ಬಿ.ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಅರಿವು ಹೊಂದಬೇಕು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದೆ, ಯಾವುದೇ ಅನುಮಾನಾಸ್ಪದ ಚಟುವಟಿಕೆ…
ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ವಿಜಯಪುರ ಜಿಲ್ಲಾ ಘಟಕದಿಂದ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಿಂಗಾಯತ ಧರ್ಮ ಮಾನ್ಯತೆ ಮತ್ತು ಅಲ್ಪಸಂಖ್ಯಾತ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.ಸಂಘಟನೆ ಗೌರವಾಧ್ಯಕ್ಷೆ ಡಾ. ಸರಸ್ವತಿ ಪಾಟೀಲ ಅವರ ಸಹಕಾರ, ನೇತೃತ್ವದಲ್ಲಿ, ಸಂಶೋಧನಾ ಕೇಂದ್ರ, ಪುಣೆಯ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾಧಿಕಾರಿಗಳನ್ನು ಆ.10 ರಂದು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದಪ್ಪ ಪಡನಾಡ, ಅಧ್ಯಕ್ಷ ಆರ್.ಎಸ್. ಬಿರಾದಾರ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರೇಣುಕಾ ಪಾಟೀಲ, ಡಾ. ಶಾರದಾಮಣಿ ಹುನಶಾಳ, ರತ್ನಕ್ಕ ಬಿರಾದಾರ, ರೇಖಾ ಬಿರಾದಾರ, ಶ್ರೀಮತಿ ಸರೋಜಾ ಪಾಟೀಲ ಮತ್ತು ಹಲವಾರು ಬಸವಾಭಿಮಾನಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2026ರ ನಾನಾ ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ದಾಖಲಿಸುವ ಮೂಲಕ ಬಿಎಲ್‌ಡಿಇ (ಡೀಮ್ಡ್ ವಿಶ್ವವಿದ್ಯಾಲಯ), ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.ಈ ಸಾಧನೆಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟ, ಅತ್ಯುತ್ತಮ ಬೋಧನೆ ಮತ್ತು ಕಲಿಕೆ, ಸಂಶೋಧನೆ ಹಾಗೂ ನಾವೀನ್ಯತೆ, ಆರೋಗ್ಯ ಸೇವೆಗಳು, ಕ್ಲಿನಿಕಲ್ ತರಬೇತಿ, ಆಧುನಿಕ ಮೂಲಸೌಕರ್ಯ ಹಾಗೂ ವಿದ್ಯಾರ್ಥಿ-ಕೇಂದ್ರಿತ ಶಿಕ್ಷಣದತ್ತ ಇರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ.ರಾಷ್ಟ್ರೀಯ ಮಾಧ್ಯಮ ಶ್ರೇಯಾಂಕಗಳು- 2026:2026ರ ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯವು ಇಂಡಿಯಾ ಟುಡೇ–ಎಂ.ಡಿ.ಆರ್.ಎ ಶ್ರೇಯಾಂಕದಲ್ಲಿ 15ನೇ ಸ್ಥಾನ, ಔಟ್‌ಲುಕ್–ಐಕೇರ್ ಶ್ರೇಯಾಂಕದಲ್ಲಿ 10ನೇ ಸ್ಥಾನ, ಹಾಗೂ ದಿ ವೀಕ್–ಹನ್ಸಾ ಶ್ರೇಯಾಂಕದಲ್ಲಿ 5ನೇ ಸ್ಥಾನ ಪಡೆದು ತನ್ನ ಶೈಕ್ಷಣಿಕ ಪ್ರತಿಷ್ಠೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.ಇದೇ ವೇಳೆ, ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಸಹ ಉತ್ತಮ ಸಾಧನೆ ಮಾಡಿದ್ದು, ಔಟ್‌ಲುಕ್–ಐಕೇರ್ ಶ್ರೇಯಾಂಕದಲ್ಲಿ 9ನೇ ಸ್ಥಾನ ಹಾಗೂ ದಿ ವೀಕ್–ಹನ್ಸಾ ಶ್ರೇಯಾಂಕದಲ್ಲಿ 17ನೇ ಸ್ಥಾನ ಗಳಿಸಿ ದೇಶದ ಪ್ರಮುಖ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ತನ್ನ ಸ್ಥಾನವನ್ನು ಮತ್ತೊಮ್ಮೆ ದೃಢಪಡಿಸಿದೆ.ಅದೇ ರೀತಿ, ಔಟ್‌ಲುಕ್-ಐಕೇರ್ ರಾಷ್ಟ್ರೀಯ ಶ್ರೇಯಾಂಕದಲ್ಲಿ, ಎ.ವಿ.ಎಸ್…
ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆˌ (ಜಮಖಂಡಿ): ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಮೀರಿಸುವಂತಹ ಸಾಧನೆ ಮಾಡುವ ಗುರಿ ಹೊಂದಬೇಕು. ಇಂದಿನ ಯುವಜನತೆ ಬುದ್ಧಿವಂತರಾಗಿದ್ದು, ಕೇವಲ ಪದವಿ ಪಡೆಯುವುದಷ್ಟೇ ಜೀವನದ ಗುರಿಯಾಗಬಾರದು. ಸಾಧಿಸಬೇಕೆಂಬ ಛಲವನ್ನು ಗುರಿ ತಲುಪುವವರೆಗೂ ಉಳಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.ನಗರದ ಮೈಗೂರ ರಸ್ತೆಯ ಪಂಚಮಸಾಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲ್ಲೂಕು ವೀರಶೈವ ಪಂಚಮಸಾಲಿ ಸಂಘ ಹಾಗೂ ರಾಣಿ ಚನ್ನಮ್ಮ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.“ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಸಾಧನೆಯೊಂದಿಗೆ ವಿನಯವನ್ನೂ ಬೆಳೆಸಿಕೊಳ್ಳಬೇಕು. ಒಂದು ಬಾರಿ ಸಾಧನೆ ಮಾಡಿದರೆ ಸಾಕೆಂದು ಭಾವಿಸದೆ, ಜೀವನದ ಪ್ರತಿಯೊಂದು ಮೆಟ್ಟಿಲಿನಲ್ಲೂ ಸಾಧನೆ ಮಾಡಬೇಕು. ತಮ್ಮ ಸಾಧನೆ ಇತರರಿಗೆ ಮಾದರಿಯಾಗಬೇಕು. ಪಾಲಕರು ಹಾಗೂ ಸಮಾಜ ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಗೌರವ ನೀಡಿ, ಸಮಾಜದ ಋಣ ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಮುರುಗೇಶ್ ನಿರಾಣಿ ಹೇಳಿದರು.ಚನ್ನಮ್ಮನ ಪ್ರತಿಮೆ ಸ್ಥಾಪನೆಗೆ ಸಿದ್ಧತೆ:…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಸುರಸಿಂಗಾರ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಜಯಪುರ, ವಿವೇಕಾನಂದ ಸೇವಾ ಸಂಘ ವಿಜಯಪುರ ಮತ್ತು ವಿಷ್ಣುಗುಪ್ತ ವಿಶ್ವ ವಿದ್ಯಾ ಪೀಠದ ಸ್ವರಾತ್ಮ ಗುರುಕುಲ ಗೋಕರ್ಣದ ವತಿಯಿಂದ ವಿಜಯಪುರದ ಐದನೇ ಶಾಸ್ತ್ರೀಯ ಸಂಗೀತೋತ್ಸವ ನಗರದ ವಿಶ್ರಾಮ ಹೋಟೆಲ್ ಸಭಾಂಗಣದಲ್ಲಿ ವಿಜೃಂಬಣೆಯಿಂದ ನಡೆಯಿತು.ವಿಜಯಪುರದ ೩೪ ಜನ ಕಲಾವಿದರು ಬೆಳಗ್ಗೆ ಒಂಬತ್ತು ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ನಿರಂತರವಾಗಿ ಅನೇಕ ರಾಗಗಳನ್ನು ಪ್ರಸ್ತುತಪಡಿಸಿ ನೆರೆದ ಅಪಾರ ಪ್ರೇಕ್ಷಕರ ಮನಗೆದ್ದರು.ಇದಕ್ಕೂ ಮೊದಲು ಕಾರ್ಯಕ್ರಮವನ್ನು ಸುರ ಸಿಂಗಾರದ ಅಧ್ಯಕ್ಷ ಡಾ ಸತೀಶ್ ಜಿಗಜಿನ್ನಿ ಉದ್ಘಾಟಿಸಿ ವಿಜಯಪುರದಲ್ಲಿ ಶಾಸ್ತ್ರೀಯ ಸಂಗೀತವು ಬೆಳೆಯುತ್ತಿರುವುದು ಅತ್ಯಂತ ಸಂತೋಷದ ವಿಷಯವೆಂದರು. ವಿಷ್ಣುಗುಪ್ತ ವಿವಿಯ ಮುಖ್ಯಸ್ಥ ಮಂಜುನಾಥ ಭಟ್ ಸುವರ್ಣಗದ್ದೆ ಮಾತನಾಡಿ, ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡದ ಕಲಾ ಸಂಬಂಧ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದರು.ವಿವೇಕಾನಂದ ಸೇವಾ ಸಂಘದ ಅಧ್ಯಕ್ಷ ಶಾಂತೇಶ ಕಳಸಗೊಂಡ ಮತ್ತು ಹೋಟೆಲ್ ಉದ್ಯಮಿ ಪ್ರಶಾಂತ್ ಶೆಟ್ಟಿ ಮಾತನಾಡಿದರು.ಕಲಾವಿದರಾದ ಶ್ರೀಮತಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನಾಡಿನ ಜನತೆಗೆ, ಜಗತ್ತಿನ ಜನರಿಗೆ ಜ್ಞಾನದ ಬುತ್ತಿಯನ್ನು ಉಣಬಡಿಸಿ ಸಮಾಜದಲ್ಲಿ ಸಾತ್ವಿಕ ನೆಲೆಗಟ್ಟಿನಲ್ಲಿ ಜೀವನ ಶೈಲಿಯನ್ನು ಆದರ್ಶಮಯವಾಗಿ ಅಳವಡಿಸಿಕೊಂಡು ಲಕ್ಷಾಂತರ ಜನರ ಮನದಲ್ಲಿ ಅಚ್ಚಳಿಯದೇ ಶಾಶ್ವತವಾಗಿ ನೆಲೆ ನಿಂತವರು ಪೂಜ್ಯ ಲಿಂ. ಶರಣ ದೈವಾಂಶ ಸಂಭೂತರಾದ ಸಿದ್ದೇಶ್ವರ ಮಹಾಸ್ವಾಮಿಗಳು ಜನಿಸಿದ ಈ ನೆಲವೇ ಪಾವನವಾಗಿದೆ ಎಂದು ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಹೇಳಿದರು.ಪಟ್ಟಣದ ಹಿರೇಮಠದ ಸಭಾಂಗಣದಲ್ಲಿ ನಡೆದ ಖ್ಯಾತ ಸಾಹಿತಿ ಬಿ.ಆರ್. ಪೋಲಿಸ್‌ಪಾಟೀಲ ಅವರು ರಚಿಸಿದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳ ಜೀವನ ಚರಿತ್ರೆಯ ನಾಟಕದ ಪುಸ್ತಕದ ಬಿಡುಗಡೆ ಸಮಾರಂಭದ ಸಾನಿದ್ಯವಹಿಸಿ ಮಾತನಾಡುತಿದ್ದರು.ಕಿಸೆಯಿಲ್ಲದ ಶುಭ್ರ ವಸ್ತ್ರ ಧಾರಿಯಾಗಿ ನಾಡಿನ ಸಂತ ಶ್ರೇಷ್ಠರಾಗಿ ಬದುಕಿನ ಜೀವನ ಶೈಲಿಯನ್ನು ನಮ್ಮೆಲ್ಲರಿಗೂ ತೋರಿಸಿಕೊಟ್ಟ ಮಹಾನ್ ತತ್ವಜ್ಞಾನಿಗಳು ಸಿದ್ದೇಶ್ವರರು ಎಂದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ವಿರಕ್ತರಲ್ಲಿ ವಿರಕ್ತರಾಗಿ ಜೋಳಿಗೆಯನ್ನೇ ಹಿಡಿಯದೇ ಭಕ್ತರು ಸಮರ್ಪಿಸಿದ ಕಾಣಿಕೆಯನ್ನು ಭಕ್ತರಿಗೆ ಅರ್ಪಿಸಿದ ಸಿದ್ದೇಶ್ವರ ಶ್ರೀಗಳು ಸದಾಕಾಲ ಸ್ಮರಣೀಯರು ಎಂದರು.ನಾಟಕಕಾರ ಬಿ.ಆರ್. ಪೋಲೀಸ್‌ಪಾಟೀಲ ಮಾತನಾಡಿ, ಮಾನವರು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಚಡಚಣ ವಲಯದಲ್ಲಿ ಆಯೋಜಿಸಲಾಯಿತು.ಕಾರ್ಯಾಗಾರವನ್ನು ವಿಜಯಪುರ ಜಿಲ್ಲಾ ನಿರ್ದೇಶಕ ಮೋಹನ್ ನಾಯ್ಕ ಹಾಗೂ ಇಂಡಿ ತಾಲ್ಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಜಿಲ್ಲಾ ನಿರ್ದೇಶಕ ಮೋಹನ್ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ವಿಶೇಷವಾಗಿ ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಬೆಳೆಸುವುದರೊಂದಿಗೆ ಅವರನ್ನು ಸ್ವಾವಲಂಬಿ ಜೀವನ ನಡೆಸುವಂತೆ ಮಾಡುವಲ್ಲಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ ಎಂದರು.ತಾಲ್ಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಉದ್ದೇಶ ಹಾಗೂ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಬಿ.ಸಿ. ಪ್ರಬಂಧಕ ಸಂತೋಷ್, ಜಿಲ್ಲಾ ವಿಚಕ್ಷಣಾಧಿಕಾರಿ ಶ್ರೀಕಾಂತ, ತಾಲ್ಲೂಕು ವಿಚಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಕೃಷಿ ಮೇಲ್ವಿಚಾರಕ ಸುದೀಪ್, ವಲಯ ಮೇಲ್ವಿಚಾರಕ ಶಿವಯ್ಯ, ವಲಯದ ಸೇವಾ ಪ್ರತಿನಿಧಿಗಳು ಹಾಗೂ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯಾಗಾರದಲ್ಲಿ…
ಸಿಂದಗಿ ಪಿಕೆಪಿಸಿಎಆರ್‌ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಕೆಪಿಸಿಎಆರ್‌ಡಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವು ಎಸ್.ಹತ್ತಿ ಹಾಗೂ ಉಪಾಧ್ಯಕ್ಷರಾಗಿ ಸಿದ್ದಾರ್ಥ ರೂಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಿಂದಗಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷ ಶಿವು ಎಸ್.ಹತ್ತಿ, ಉಪಾಧ್ಯಕ್ಷ ಸಿದ್ದಾರ್ಥ ರೂಗಿ ಹಾಗೂ ಸದಸ್ಯರನ್ನು ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿ, ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಬ್ಯಾಂಕ್ ಮತ್ತಷ್ಟು ಅಭಿವೃದ್ಧಿ ಹೊಂದಿ, ತಾಲೂಕಿನ ರೈತರು ಹಾಗೂ ಗ್ರಾಮೀಣ ಜನರ ಆರ್ಥಿಕ ಪ್ರಗತಿಗೆ ಪರಿಣಾಮಕಾರಿಯಾಗಿ ಶ್ರಮಿಸಲಿ ಎಂದು ಶಾಸಕ ಅಶೋಕ ಮನಗೂಳಿ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಆಲಮೇಲ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಅಶೋಕ ಕೊಳಾರಿ, ಕುಮಾರ ದೇಸಾಯಿ, ಅರವಿಂದ ಹಂಗರಗಿ, ವಾಯ್.ಸಿ.ಮಯೂರ, ಚನ್ನು ವಾರದ, ಶಶಿಧರ ಗಾಯಕವಾಡ, ಬ್ಯಾಂಕಿನ ನಿರ್ದೇಶಕರು, ಪ್ರಮುಖ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದ ಭವಿಷ್ಯವಾಗಿರುವ ಯುವಜನತೆ ವಿವಿಧ ರೀತಿಯ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಯುವಶಕ್ತಿಯನ್ನು ರಕ್ಷಿಸುವುದು ಸರ್ಕಾರದೊಂದಿಗೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್.ಎಸ್. ಪಾಟೀಲ ಹೇಳಿದರು.ಸಿಂದಗಿ ನಗರದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಪಾಯಕಾರಿ ಮಾದಕ ವಸ್ತುಗಳ ಸೇವನೆಯತ್ತ ಯುವಜನರು ಆಕರ್ಷಿತರಾಗುತ್ತಿರುವುದು ಗಂಭೀರ ವಿಚಾರವಾಗಿದೆ. ಭಾರತ ಯುವ ಸಂಪನ್ಮೂಲವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಸಂಪದ್ಭರಿತ ದೇಶ. ಯುವಜನರ ಆರೋಗ್ಯ, ವ್ಯಕ್ತಿತ್ವ ಹಾಗೂ ಬೌದ್ಧಿಕ ವಿಕಸನಕ್ಕೆ ಆದ್ಯತೆ ನೀಡುವುದು ಅಗತ್ಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿದ ಪ್ರಾಚಾರ್ಯೆ ಡಾ.ಜೆ.ಸಿ.ನಂದಿಕೋಲ ಮಾತನಾಡಿ, ೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸೇವಿಸುವುದು ದಂಡನೀಯ ಅಪರಾಧವಾಗಿದೆ. ಸಿಗರೇಟ್, ಗುಟಖಾ ಹಾಗೂ…
