Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಮಖಂಡಿ ಉಪವಿಭಾಗಾಧಿಕಾರಿಗಳ ಪಿಠೋಪಕರಣ ಜಪ್ತಿ ಮಾಡಲು ಆದೇಶ ಮಾಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ವಕೀಲ ಎಲ್. ಎನ್. ಸುನಗದ ಅವರು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರ ಸರ್ಕಾರಿ ವಾಹನ ಜಪ್ತಿ ಮಾಡಿದ ಘಟನೆ ಸೋಮವಾರ ನಡೆದಿದೆ.ಘಟನೆ ಹಿನ್ನೆಲೆ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ಬಾಳಪ್ಪ ಕಪ್ಪಲಗುದ್ದಿ, ದರೆಪ್ಪ ಕಪ್ಪಲಗುದ್ದಿ ಎಂಬುವವರಿಗೆ ಸೇರಿದ 4 ಎಕರೆ 28 ಗುಂಟೆ ಜಮೀನನ್ನು ಕೆರೆ ನಿರ್ಮಾಣಕ್ಕೆಂದು 2005-06ರಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಘಟನೆ ನಡೆದು ಹಲವು ವರ್ಷ ಕಳೆದರೂ ಈವರೆಗೂ ಸರ್ಕಾರ ಪರಿಹಾರ ನೀಡಿಲ್ಲ. ಆದ್ದರಿಂದ ಬಾಳಪ್ಪ ಮತ್ತು ದರೆಪ್ಪ ಕಪ್ಪಲಗುದ್ದಿ ಎಂಬ ರೈತರು ತಮ್ಮ ಜಮೀನಿಗೆ ಪರಿಹಾರ ದೊರಕಿಸಿಕೊಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಸುಶಾಂತ ಮಹಾವೀರ ಚೌಗಲೆ ಅವರು ಬಡ್ಡಿ ಸಮೇತ 43.33,306 ಪರಿಹಾರ ನೀಡುವಂತೆ ಆದೇಶ ನೀಡಿದ್ದರು.ಆದರೆ ಇದುವರೆಗೂ ಪರಿಹಾರ ನೀಡದ ಹಿನ್ನೆಲೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರ್ಕಾರ ಮುಳುಗಡೆ ಕೆಲಸ ಪೂರ್ಣಗೊಳಿಸಬೇಕು. ಸರ್ಕಾರ ಅನುದಾನ ನೀಡುತ್ತಿಲ್ಲ, ಕೆಲಸಗಳಾಗುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿದೆ. ಹಣಕ್ಕಾಗಿ ಮತ ಮಾರಿಕೊಂಡವರು ಚುನಾಯಿತ ಸದಸ್ಯರಿಂದ ಯಾವ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ? ದುಡ್ಡಿಗಾಗಿ ವೋಟು ಹಾಕಿದವರು ಅಭಿವೃದ್ಧಿ ಕೇಳಲು ಹೇಗೆ ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.ನಗರದ ಕಡಪಟ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ರಮಾನಿವಾಸ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿದರು.ಅಭಿವೃದ್ಧಿ ಕೆಲಸಗಳನ್ನು ಕೇಳುವ ನೈತಿಕತೆಯನ್ನು ಹಣ ಪಡೆದ ಮತದಾರರು ಕಳೆದುಕೊಂಡಿದ್ದಾರೆ ಎಂದು ಹೇಳಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರಗಳಲ್ಲಿ ಶಾಲೆಗಳ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಸರ್ಕಾರಕ್ಕೆ ಮಾಹಿತಿ ನೀಡಿದ್ದೇನೆ. ಯಾವುದೇ ಕೆಲಸವಾಗುತ್ತಿಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಸಭಾಪತಿಗಳ ಗಮನ ಸೆಳೆದಾಗ ಸಭಾಪತಿಗಳು ಈ ರೀತಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.ನಂತರ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಹೊರಟ್ಟಿ ಅವರು, ಸಮಸ್ಯೆಯ ಕುರಿತು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಉತ್ತರ ಕರ್ನಾಟಕದ…

Read More

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ಝಳಕಿ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸನ್೨೦೨೫-೨೬ನೇ ಸಾಲಿನ ಸಂಸ್ಕೃತಿಕ ಕ್ರೀಡೆ, ರಾ. ಸೇ. ಯೋ, ರೇಡ್ ಕ್ರಾಸ್, ಸ್ಕೌಟ್ & ಗೈಡ್ಸ್ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಬಿ.ಎ., ಬಿ.ಕಾಮ್., ಬಿ.ಎಸ್.ಸಿ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಉದ್ಘಾಟನೆಯನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಜ್ಯೋತಿಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ವಿದ್ಯಾರ್ಥಿಗಳಿಗೆ ಬೇಕಾಗುವ ಶಿಕ್ಷಣ ಕೊಡೊದು ಶಿಕ್ಷಕರ ಕರ್ತವ್ಯ, ಅದನ್ನ ಉಪಯೋಗ ಪಡಿಸಿಕೊಂಡು ಜೀವನದಲ್ಲಿ ಪ್ರಗತಿ ಸಾಧಿಸೋದು ವಿದ್ಯಾರ್ಥಿಗಳ ಆದ್ಯಕರ್ತವ್ಯ ಎಂದರು, ನಮ್ಮ ಹಿರಿಯರು ಶಾಲಾ, ಕಾಲೇಜುಗಳಿಗೆ ದೇವಸ್ಥಾನ ಎಂದು ಶಿಕ್ಷಕರಿಗೆ ದೇವರು ಎಂದು ವಿದ್ಯಾರ್ಥಿಗಳಿಗೆ ಪೂಜಾರಿ ಸ್ಥಾನ ಕೊಟ್ಟಿರೋದು ಸುಮ್ಮನೆ ಅಲ್ಲ, ಶಾಲೆ ಮಠ ಮಾನ್ಯಗಳಿಗಿಂತ ದೊಡ್ಡದು, ಅದಕ್ಕಾಗಿ ಇವತ್ತು ಜಿಲ್ಲೆಯಲ್ಲಿ ಇರುವಂತಹ ಉನ್ನತ ಮಟ್ಟದ ಶಾಲಾ ಕಾಲೇಜುಗಳು ನಮ್ಮ ಇಂಡಿ ತಾಲೂಕಿನಲ್ಲಿ ಇರೋದು ನಮ್ಮ ಪುಣ್ಯ ಇದಕ್ಕೆಲ್ಲ ಕಾರಣ ನಮ್ಮ ಸರ್ಕಾರದ…

Read More

ಸಿಟಿ ಸರ್ವೇ ವ್ಯಾಪ್ತಿಯಲ್ಲಿ ಬರದಿದ್ದರೂ ಪ.ಪಂ.ನಿಂದ ಶೇ.40 ಉತಾರೆ ಹಂಚಿಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತೀಚಿಗೆ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಿರುವ ಡೈಮಂಡ ಪಾರ್ಕ ಸಂಪೂರ್ಣ ಕಾನೂನ ಬಾಹೀರವಾಗಿ ನಿರ್ಮಿಸಲಾಗಿದೆ ಎಂದು ಸೋಮಶೇಖರ ಚನ್ನಪ್ಪ ಪಟ್ಟಣಶೆಟ್ಟಿ ಆರೋಪಿಸಿದ್ದಾರೆ.ಪಟ್ಟಣವು ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದಜೆಗೇರಿ ಸುಮಾರು 9 ವರ್ಷ ಗತಿಸಿವೆ. ಆದರೆ, ಗ್ರಾ.ಪಂ.ನಿಂದ ಪ.ಪಂ.ಗೆ ಮೇಲ್ದಜೆಗೇರುವ ಸಮಯದಲ್ಲಿ ಹೊರಡಿಸಿದ ರಾಜ್ಯಪತ್ರದಲ್ಲಿ ನಮೂದಿಸಿದ ಸರ್ವೇ ನಂಬರಗಳ ಪೈಕಿ ಸಧ್ಯ ನಿರ್ಮಿಸಲಾಗಿರುವ ಡೈಮಂಡ ಪಾರ್ಕನ ಸ.ನಂ. 244/2, 245/1, 245/2, 246/* ಗಳು ಈ ಜಮೀನವು ಸಿಟಿ ಸರ್ವೇ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದರೂ ಈ ಸ.ನಂ.ಗಳನ್ನು ಭೂಪರಿವರ್ತನೆ ಮಾಡಿ, ಸುಮಾರು 40 ಎಕರೆ 38 ಗುಂಟೆ ಜಾಗೆಯಲ್ಲಿ ವಿವಿಧ ಅಳತೆಯ 759 ಪ್ಲಾಟುಗಳನ್ನು ಪೈಕಿ ಶೇ.40 ಪ್ಲಾಟುಗಳ ಉತಾರೆಯನ್ನು ಪ.ಪಂ.ಯಿಂದ ಪೂರೈಸಲಾಗಿದೆ ಎಂದು ಆರೋಪಿಸಿದ ಅವರು, ಈ ಪಾರ್ಕ ಎಲ್ಲ ಕಾನೂನುಗಳನ್ನು ಗಾಳಿಗೆ ತೂರಿ ಪಾರ್ಕನ್ನು ನಿರ್ಮಾಣ ಮಾಡಿದ್ದರೂ ಕೂಡ ಪ.ಪಂ.ನವರು ಇದನ್ನೆಲ್ಲ ಗಮನಿಸದೆ ಹೇಗೆ ಉತಾರೆಗಳನ್ನು ಪೂರೈಸಿದ್ದಾರೆ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಈಗಿನ ಜೀವನ ಕಾದ ಹೆಂಚಿನ ಮೇಲೆ ನಿಂತಂತಿದೆ. ಪ್ರತಿದಿನ ಒತ್ತಡ ಆತಂಕ ಇದ್ದೇ ಇರುತ್ತದೆ. ಹೀಗಾಗಿ ನಾವೆಲ್ಲ ಬೇರೆ ಬೇರೆ ಮಾನಸಿಕ ಕಾಯಿಲೆಗಳಿಗೆ ಈಡಾಗುವುದು ಸಾಮಾನ್ಯ ಎನ್ನುವಂತಾಗಿದೆ. ಇಂದು ಲಕ್ಷಾಂತರ ಜನರು ಖಿನ್ನತೆ ಮತ್ತು ಆತಂಕದಿಂದ ಬಳಲುತ್ತಿದ್ದಾರೆ. ಅದರ ಕಾರಣಗಳು ಹಲವು ಆಗಿರಬಹುದು. ಪ್ರೀತಿಪಾತ್ರರ ಹಠಾತ್ ಕಳೆದುಕೊಳ್ಳುವಿಕೆ. ಜೀವನಶೈಲಿಯ ಬದಲಾವಣೆಗಳು ದುಃಖ, ಮಾನಸಿಕ, ದೈಹಿಕ ಅಥವಾ ಲೈಂಗಿಕ ಕಿರುಕುಳ, ಆನುವಂಶಿಕ ಸಂಬಂಧದ ಸಮಸ್ಯೆಗಳು, ಒತ್ತಡ ಅನಿಯಮಿತ ಜೀವನ ವಿಧಾನಗಳು ಪ್ರಮುಖ ಕಾರಣಗಳಾಗಿವೆ. ಖಿನ್ನತೆಯು ಪ್ರಪಂಚದಾದ್ಯಂತ ಒಂದು ಸಾಮಾನ್ಯ ಕಾಯಿಲೆಯಾಗಿದ್ದು, ಸರಿಸುಮಾರು ೨೮೦ ಮಿಲಿಯನ್ ಜನರು ಖಿನ್ನತೆಯನ್ನು ಹೊಂದಿದ್ದಾರೆ ಎಂದರೆ ನಂಬಲೇಬೇಕು.ಖಿನ್ನತೆ ಎಂದರೆ..?ಖಿನ್ನತೆಯು ಸಾಮಾನ್ಯ ಮನಸ್ಥಿತಿಯ ಏರಿಳಿತಗಳಿಗಿಂತ ಭಿನ್ನವಾಗಿದೆ. ಖಿನ್ನತೆಯು ವೈದ್ಯಕೀಯ ಸ್ಥಿತಿಯಾಗಿದೆ. ಇದು ಸೋಮಾರಿತನ. ಸಾಮಾನ್ಯ ದುಃಖ ಅಥವಾ ನಿರುತ್ಸಾಹಕ್ಕೆ ತಾತ್ಕಾಲಿಕ ಪ್ರತಿಕ್ರಿಯೆಯಲ್ಲ. ಇದು ಗಂಭೀರ ಆರೋಗ್ಯ ಸ್ಥಿತಿಯಾಗಬಹುದು. ಇದು ಬಾಧಿತ ವ್ಯಕ್ತಿಯನ್ನು ಬಹಳವಾಗಿ ನರಳುವಂತೆ ಮಾಡುತ್ತದೆ. ವ್ಯಸನ ಹೆಚ್ಚಿನ ಸಮಯದವರೆಗೆ…

Read More

ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಮೈಸೂರು: ಬಿಜೆಪಿಯ “ಧರ್ಮಸ್ಥಳ ಚಲೋ” ರ್‍ಯಾಲಿ “ರಾಜಕೀಯ ಲಾಭಕ್ಕಾಗಿ” ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ.ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ “ಬೂಟಾಟಿಕೆ”ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು.ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು…

Read More

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್. ಮುಕುಂದರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನುಷ್ಯ ಜಾತಿ ತಾನೊಂದೇ ವಲಂ ಎಂದು ಹೇಳಿ ಜಾತ್ಯತೀತ ತತ್ವವನ್ನು ಸಾರಿದ ಪಂಪ ಮತ್ತು ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಾರಿದ ಕನಕದಾಸರ ಕೀರ್ತನೆಗಳು ಕನ್ನಡ ಸಾಹಿತ್ಯದ ಉನ್ನತ ಪರಂಪರೆಯ ಕುರುಹುಗಳು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್. ಮುಕುಂದರಾಜ ಅವರು ಹೇಳಿದರು.ನಗರದ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗಗಳ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಂಪರೆ – ಅವಲೋಕನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಾರತದ ಯಾವುದೇ ಭಾಷೆಗೆ ಬರದಷ್ಟು ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ಬಂದಿವೆ. ಇದಕ್ಕೆ ಮುಕುಟಪ್ರಾಯವೆಂಬಂತೆ ಇತ್ತೀಚೆಗೆ ಭಾನು ಮುಸ್ತಾಕ್ ಅವರ ‘ಹೃದಯದ ಹಣತೆ’ ಕೃತಿಗೆ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಪರಂಪರೆಯ ಶ್ರೀಮಂತಿಕೆಯ ದ್ಯೋತಕವಾಗಿದೆ ಎಂದು ವಿಶ್ಲೇಷಿಸಿದರು.ಪತ್ರಕರ್ತ ಡಾ.ಗಣೇಶ್ ಅಮೀನಗಡ ಮಾತನಾಡಿ, ಹೆಣ್ಣು ಮಕ್ಕಳು ಇನ್‌ಸ್ಟಾಗ್ರಾಂ ಪ್ರೀತಿಗೆ ಮರುಳಾಗದೆ ಎಚ್ಚರಿಕೆಯಿಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ಸೆ.೩೦ರಿಂದ ಅಕ್ಟೋಬರ್ ೦೪ರವರೆಗೆ ರಾಜ್ಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಭೇಟಿ ನೀಡಲು ಸÀಮಾಜ ಕಲ್ಯಾಣ ಇಲಾಖೆ ವತಿಯಿಂದ ಬಸ್ಸು ಮತ್ತು ರೈಲಿನ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯದಿಂದ ನಾಗಪುರಕ್ಕೆ ಭೇಟಿ ನೀಡಲಿರುವ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ https://swd.karnataka.gov.inವೆಬ್‌ಸೈಟ್ ಮೂಲಕ ಸೆ.೯ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಿಜಯಪುರ ಜಿಲ್ಲೆಯ ಅನುಯಾಯಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮನವಿ ಮಾಡಿಕೊಂಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ ೨೦೨೫-೨೬ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್ ಪಾಸ್ ಬುಕ್, ಭಾವಚಿತ್ರವಿರುವ ಅಗತ್ಯ ದಾಖಲೆಗಳನ್ನು ದಿನಾಂಕ : ೩೦-೦೯-೨೦೨೫ರೊಳಗಾಗಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್‌ರೋಡ, ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟಂಬರ್ ೮ ರಿಂದ ೧೭ರವರೆಗೆ ನಗರದ ಇಂಡಿ ರಸ್ತೆಯಲ್ಲಿರುವ ಚಾಂದನಿ ಫಂಕ್ಷನ್ ಹಾಲ್‌ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.ಸೆ.೮ರಂದು ಬೆಳಿಗ್ಗೆ ೧೧ ಗಂಟೆಗೆ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಮಳಿಗೆ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಬಸನಗೌಡ ತುರವಿಹಾಳ ಅವರು ಪ್ರಾತ್ಯಕ್ಷಿಕೆ ಉದ್ಘಾಟನೆ ಮಾಡಲಿದ್ದಾರೆ.

Read More