Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲಾ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಶಂಕರ ಹಾವಿನಾಳ ತಿಳಿಸಿದ್ದಾರೆ.ವಿಜಯಪುರ ಜಿಲ್ಲಾ ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳು ಖಾಸಗಿ ಶಾಲೆಗಳಲ್ಲಿ ತಮ್ಮ ಸೇವೆ ಕಡ್ಡಾಯವಾಗಿರುವ ತಾಲೂಕಿಗೆ ಒಬ್ಬರಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಬಯೋ ಡಾಟಾ, ತಾವು ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯ ಅಧ್ಯಕ್ಷರ ಶಿಫಾರಸು ಪತ್ರ ಹಾಗೂ ಇತ್ತೀಚಿನ ಒಂದು ಭಾವಚಿತ್ರ, ಈ ಮೊದಲು ಪಡೆದಿರುವ ಪ್ರಶಸ್ತಿಗಳ ವಿವರ ಹೊಂದಿರುವ ವಿವರವಾದ ಪತ್ರದೊಂದಿಗೆ ಸೆ.5 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಿದ ಅರ್ಜಿಗಳು ಸ್ವೀಕರಿಸಲಾಗುವುದು.ಅಧ್ಯಕ್ಷರು/ಕಾರ್ಯದರ್ಶಿಗಳು, ಚಡಚಣ ತಾಲೂಕು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ ಚಡಚಣ. ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಒಂದಕ್ಕಿಂತ ಹೆಚ್ಚು ಅರ್ಜಿ ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಮೊ.ನಂ. : ೯೧೧೦೮೦೭೪೭೦, ೯೮೪೪೧೯೧೧೪೫, ೮೮೬೭೬೬೯೦೩೭ ಸಂಪರ್ಕಿಸಲು ಪ್ರಕಟಣೆಯಲ್ಲಿ…
ಬಿ ಎಲ್ ಡಿ ಇ ನೂತನ ಕಲಾ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಪ್ರಾರಂಭೋತ್ಸವ ಉದಯರಶ್ಮಿ ದಿನಪತ್ರಿಕೆ ತಿಕೋಟ: ವಿದ್ಯಾರ್ಥಿಗಳಾದವರು ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನುಗ್ಗಿದಾಗ ಮಾತ್ರ ಉತ್ತಮ ಸಾಧನೆ ಮಾಡಬಲ್ಲರು ಎಂದು ವಿಜಯಪುರ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಚಂದ್ರಕಾಂತ ಲೋಕರೆ ಅವರು ಹೇಳಿದರು.ಪಟ್ಟಣದಲ್ಲಿರುವ ಬಿ ಎಲ್ ಡಿ ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸದೊಂದಿಗೆ ಹೆಚ್ಚು ಹೆಚ್ಚು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುವುದು ಅಗತ್ಯವಿದೆ. ವಿಶೇಷವಾಗಿ ಸಾಂಸ್ಕೃತಿಕವಾಗಿ ನೃತ್ಯ, ಸಂಗೀತ, ನಾಟಕ ಅಭಿನಯ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾದರೆ ಪರಿಪೂರ್ಣ ಚಾರಿತ್ರ್ಯ ನಿರ್ಮಾಣ ಆದಂತಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಹೊಸ ವಿಚಾರಗಳ ಕಡೆ ಗಮನ ಹರಿಸಬೇಕೆಂದು ಸಲಹೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಣ್ಣ ಅಗಸಿ ಹತ್ತಿರ ಇರುವ ಮೊಮಿನ ಮೊಹಲ್ಲಾದಲ್ಲಿ ಶನಿವಾರದಂದು ಈದ ಮಿಲಾದ-ಉನ್-ನಬಿ ಕಮೀಟಿ ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಮೊಹಮ್ಮದ್ ಪೈಗಂಬರರ ಜಯಂತ್ಯೋತ್ಸವದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ಇಮಾಮ ಜಾಮಿಯಾ ಮಸೀದಿಯ ಮೌಲಾನಾ ಅಹ್ಮರಾಜಾ ಬರಕಾತಿ ಮುಲ್ಲಾ ಅವರು ಮಾತನಾಡಿ, ರಕ್ತದಾನ ಮಾಡುವುದರಿಂದ ದೇಹದಲ್ಲಿ ಕಬ್ಬಿಣ ಮತ್ತು ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿ ಶರೀರದ ಅವಶ್ಯಕತೆಗೆ ತಕ್ಕಂತೆ ಹೊಸ ರಕ್ತ ಉತ್ಪಾದಿಸುತ್ತದೆ ಇದು ಆರೋಗ್ಯಕರ ಹೃದಯಕ್ಕೆ ಕಾರಣವಾಗುವುದರ ಜೊತೆಗೆ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ, ರಕ್ತನಾಳಗಳನ್ನು ಬಲಪಡಿಸಿ ರಕ್ತ ಪರಿಚಲನೆ ಸುಧಾರಿಸುತ್ತದೆ, ವೈದ್ಯರು ಹೇಳಿದಂತೆ 18 ರಿಂದ 65 ವರ್ಷ ವಯಸ್ಸಿನ ಆರೋಗ್ಯವಂತ ವ್ಯಕ್ತಿ, ಕೆಲವು ದೈಹಿಕ ಮತ್ತು ಆರೋಗ್ಯ ಮಾನದಂಡಗಳನ್ನು ಪೂರೈಸಿದರೆ, ಪ್ರತಿ ಮೂರು ತಿಂಗಳಿಗೊಮ್ಮೆ ಅಥವಾ ಕನಿಷ್ಠ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡಬಹುದು ಒಂದು ದಾನದಲ್ಲಿ ೪೫೦ಮಿಲಿ ರಕ್ತ ಸಂಗ್ರಹಿಸಲಾಗುತ್ತದೆ. 36 ಗಂಟೆಯೊಳಗೆ ನಿಮ್ಮ ದೇಹವು ಕಡಿಮೆಯಾದ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಐತಿಹಾಸಿಕ ಸ್ಮಾರಕಗಳ ಶಿಲಾ ಶಾಸನಗಳು ನಮ್ಮ ಸಂಸ್ಕೃತಿ ಬಿಂಬಿಸುವ ಕುರುಹುಗಳು ಅವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಇತಿಹಾಸ ಅಕಾಡೆಮಿ ಸದಸ್ಯ ನಿಂಗನಗೌಡ ದೇಸಾಯಿ ಹೇಳಿದರು.ಪಟ್ಟಣದ ಹಿಲ್ ಟಾಪ್ನಲಿರುವ ಪದವಿ ಪೂರ್ವ ಕಾಲೇಜಿನಲ್ಲಿ ರವಿವಾರ ಹಮ್ಮಿಕೊಂಡ ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಥಳೀಯ ಇತಿಹಾಸ ಅರಿಯಬೇಕು, ಪ್ರತಿಯೊಬ್ಬರ ತಮ್ಮ ತಮ್ಮ ಊರು, ಗ್ರಾಮದಲ್ಲಿರುವ ಪ್ರಾಚೀನ ದೇವಾಲಯಗಳು, ಕೋಟಿ ಕೊತ್ತಲಗಳು, ಗುಮ್ಮಟಗಳು, ಅರಮನೆಗಳು, ಶಿಲಾಶಾಸನಗಳು ಹಿನ್ನೆಲೆ ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಮಾಡುವ ಮೂಲಕ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.ಹಿರೇಮಠದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಪ್ರಾಂಶುಪಾಲೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆ ಅಧ್ಯಕ್ಷ ವಿಶ್ವನಾಥರಡ್ಡಿ ಅಬ್ಬೆತುಮಕೂರು ಪ್ರಾಸ್ತಾವಿಕ ಮಾತನಾಡಿದರು, ಉಪನ್ಯಾಸಕರಾದ ಸುರೇಶ ಪರಸನಹಳ್ಳಿ, ರೇವಣಸಿದ್ದಪ್ಪ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸುನಿತಾ ಹಣಜಿ ನಿರೂಪಿಸಿದರು. ಬಾಪುಗೌಡ ಸ್ವಾಗತಿಸಿದರು,…
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ನವದೆಹಲಿ: ಮೈಸೂರು ಚಾಮುಂಡಿ ಬೆಟ್ಟದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬುಧವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ.ಇತ್ತೀಚೆಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು ಎಂದು ಕಿಡಿಕಾರಿದ್ದಾರೆ.ಚಾಮುಂಡಿ ತಾಯಿ ಈ ನಾಡಿನ ಹಿಂದೂಗಳ ಪಾಲಿನ ಅಧಿದೇವತೆ, ಪೂಜನೀಯಳು, ದಸರಾ ಸಮಯದಲ್ಲಿ ಚಾಮುಂಡಿಗೆ ಪೂಜೆ ಮಾಡಿಯೇ ಮುನ್ನುಡಿ ಇಡಲಾಗುತ್ತದೆ. ತಮ್ಮ ಹೈಕಮಾಂಡ್ ನ್ನು ಸಮಾಧಾನಗೊಳಿಸಲು,…
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿ ವಿವಾದಕ್ಕೀಡಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕ್ಷಮೆ ಕೇಳಬಾರದಿತ್ತು. ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರಶ್ನಿಸಿದ್ದಾರೆ.ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದಿದ್ದಾರೆ.ಒಂದು…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಾದ್ಯಂತ ಬುಧವಾರ ಗಣಪತಿಯ ಹಬ್ಬವನ್ನು ಭಕ್ತಿಯಿಂದ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.ಎಲ್ಲರ ಮನೆಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯಿತು. ಗಣೇಶನ ಮೂರ್ತಿ ನೋಡಿ ಫುಲ್ ಖುಷಿಯಲ್ಲಿ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸಿದ್ದರು.ಚಡಚಣ ತಾಲೂಕಿನಾದ್ಯಂತ ಯಾವುದಕ್ಕೂ ಏನು ಕಡಿಮೆ ಇಲ್ಲದಂತೆ ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.ಇಂದೇ ಹಬ್ಬವಾಗಿದ್ದರಿಂದ ಬಹುತೇಕ ಕಡೆ ಹೆಚ್ಚು ಗಣಪತಿ ಮೂರ್ತಿಗಳನ್ನ ಯುವಕರು ಪ್ರತಿಷ್ಠಾಪನೆ ಮಾಡಿದ್ದರು .
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಂದ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಇಂದು ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ ಗಿಡ, ಕಬ್ಬು, ಮಾವಿನ ಎಲೆಗಳು, ರಿಬ್ಬನ್ ಕಟ್ಟಿ ಶೃಂಗರಿಸಿದ ಎರಡು ಬಸ್ಸುಗಳ ಸಂಚಾರಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಲ್ಲು ದಳವಾಯಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಈ ಭಾಗದ ಗ್ರಾಮಸ್ಥರಿಗೆ ಅನುಕೂಲಕ್ಕಾಗಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ನಿವಾಸಿ, ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚನ್ನಬಸವ ಕೊಟಗಿಯವರಿಗೆ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.ಕೊಟಗಿಯವರು ಒಬ್ಬ ಕಲಾವಿದ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಚಂದನ ವಾಹಿನಿಯಲ್ಲಿ ಕರ್ತವ್ಯದಲ್ಲಿರುವ ಇವರ ಸೇವೆಯನ್ನು ಗುರುತಿಸಿ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.ಸೆ೧೩ ರಂದು ಫರಿದಾಬಾದ್‌ನ ದಿ ಕ್ಯಾಸ್ಟಲ್ ಆಫ್ ಆರ್ಟ್ ಥಿಯೇಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸದರಿ ವಿಶ್ವವಿದ್ಯಾಲಯದ ನಿರ್ದೇಶಕರು, ಡೀನ್, ರಿಜಿಸ್ಟಾçರ್ ಹಾಗೂ ಸಂಸ್ಥೆಯ ಸಂಪರ್ಕ ಅಧಿಕಾರಿ…
ಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ ‘ಹೂ ಮಾಲೆ’ ಗ್ರಂಥ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಲೇಖಕಿ ಭಾರತಿ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಠ್ಯಪುಸ್ತಕ ರಚನೆ ರಾಜಕೀಯ ಪ್ರೇರಿತವಾಗಿರಬಾರದು, ಅದು ರಾಜಕೀಯ ಮುಕ್ತವಾಗಿರಬೇಕು, ಮಾನವೀಯತೆ, ಪ್ರೀತಿ ಬೋಧಿಸುವ ಪಠ್ಯ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ ಎಂದು ಖ್ಯಾತ ಲೇಖಕಿ ಭಾರತಿ ಪಾಟೀಲ ಹೇಳಿದರು.ವಿಜಯಪುರದ ಜಿಲ್ಲಾ ಪಂಚಾಯತ ಬಳಿ ಇರುವ ಗಾಂಧೀ ಭವನದಲ್ಲಿಶ್ರೀ ಹಲಗಣೀಶ ಪ್ರಕಾಶನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿಆಯೋಜಿಸಲಾಗಿದ್ದಪತ್ರಕರ್ತೆ ಪ್ರೇಮಾ ಕುಲಕರ್ಣಿ ಅವರು ರಚಿಸಿರುವ ‘ಹೂ ಮಾಲೆ’ ಗ್ರಂಥ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಅವರು, ಇಂದು ಹೊಡಿ, ಬಡಿ, ಕಡಿ ಸಾಹಿತ್ಯವೇ ಮಕ್ಕಳಲ್ಲಿ ಪ್ರಭಾವ ಬೀರುತ್ತಿದೆ, ಮಕ್ಕಳಿಗೆ ಹಾಡು ಹೇಳಲು ಹೇಳಿದರೆ ಹೊಡಿ ಮಗ ಹಾಡು ಹೇಳುತ್ತಾರೆ, ಹೀಗಾಗಿ ಪಠ್ಯದಲ್ಲಿ ಮಾನವೀಯತೆ, ಪ್ರೀತಿ ಪ್ರತಿಪಾದಿಸುವ ವಿಷಯಗಳು ಪಠ್ಯದಲ್ಲಿರಬೇಕು ಎಂದರು.ಇಂದು ವಾಕ್ ಸ್ವಾತಂತ್ರ್ಯ ದುರಪಯೋಗವಾಗಿ ಒಂದು ರೀತಿ ವಾಕರಿಕೆ ಸ್ವಾತಂತ್ರ್ಯವಾಗಿ ಬುರುಡೆ ಸ್ವಾತಂತ್ರ್ಯ ರೀತಿಯಲ್ಲಿ ಪ್ರತಿಧ್ವನಿತವಾಗುತ್ತಿರುವುದು ನೋವಿನ ಸಂಗತಿ…
