Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರಾವಣ ಮಾಸದ ಪ್ರಯುಕ್ತ ವಿಜಯಪುರದಿಂದ ಶ್ರೀಶೈಲಕ್ಕೆ ಪ್ರಯಾಣಿಸುವ ಭಕ್ತಾಧಿಗಳಿಗೆ ವಿಶೇಷ ನಾನ್ ಎಸಿ ಸ್ಲೀಪರ್ ಬಸ್ ಸೌಲಭ್ಯ ಕಲ್ಪಿಸಲಾಗಿದೆ.ವಿಜಯಪುರದಿಂದ ಶ್ರೀಶೈಲಕ್ಕೆ ವ್ಹಾಯಾ ಬಸವನಬಾಗೇವಾಡಿ, ತಾಳಿಕೋಟಿ, ರಾಯಚೂರು ಹಾಗೂ ಕರ್ನೂಲ್ ಮಾರ್ಗವಾಗಿ “ಅಮೋಘ ವರ್ಷ” ನಾನ್ ಎ.ಸಿ. ಸ್ರ‍್ಲೀಪರ್ ಬಸ್ ಸೇವೆ ಪ್ರಾರಂಭಿಸಲಾಗಿದೆ.ಈ ಬಸ್ ಪ್ರತಿದಿನ ಸಂಜೆ ೬ ಕ್ಕೆ ವಿಜಯಪುರದಿಂದ ಹೊರಟು, ಬೆಳಿಗ್ಗೆ ೬ ಗಂಟೆಗೆ ಶ್ರೀಶೈಲ್ ತಲುಪಲಿದೆ. ಮಾರನೇ ದಿನ ಶ್ರೀಶೈಲದಿಂದ ಸಂಜೆ ೫.೩೦ ಗಂಟೆಗೆ ಬಿಟ್ಟು ಬೆಳಿಗ್ಗೆ ೫.೩೦ ಗಂಟೆಗೆ ವಿಜಯಪುರ ತಲುಪಲಿದೆ. ಇದೇ ಮಾದರಿಯಲ್ಲಿ ವಿಜಯಪುರದಿಂದ ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನಬಾಗೇವಾಡಿ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ಬೇಡಿಕೆ ಹಾಗೂ ಜನದಟ್ಟಣೆ ಅನುಗುಣವಾಗಿ ಶ್ರೀಶೈಲಕ್ಕೆ ಹೆಚ್ಚುವರಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಗಳನ್ನು ಕಾರ್ಯಾಚರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.ಅಲ್ಲದೇ, ಒಂದೇ ಗುಂಪಿನಲ್ಲಿ ಪ್ರಯಾಣಿಸಲು ಇಚ್ಛಿಸುವ ಭಕ್ತಾದಿಗಳಿಗಾಗಿ ಅವರ ವಾಸಸ್ಥಳದಿಂದಲೇ ಕರಾರು ಒಪ್ಪಂದದ ಆಧಾರದ ಮೇಲೆ ಬಸ್ ಗಳನ್ನು ಒದಗಿಸುವ ವ್ಯವಸ್ಥೆ ಸಹ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಜಿಲ್ಲೆಯ ಏಳು ಬ್ಲಾಕ್ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಒಟ್ಟು ೭ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ (Academic Resource Person for Mental Health) ಹುದ್ದೆಗೆ ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯದಲ್ಲಿ ಎಂ.ಎ./ಎಂ.ಎಸ್ಸಿ ಪದವಿ ಹೊಂದಿರಬೇಕು. ಅಲ್ಲದೇ ಶಾಲಾ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಭಾಷಾ ಜ್ಞಾನ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಪತ್ರಾಂಕಿತ…

Read More

ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉ.ಕ ಸಹಾಯಕ ನಿರ್ದೇಶಕ ಡಾ.ಸಂಪತ್ ಗುಣಾರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ. ಕರುಳಿನಲ್ಲಿರುವ ಜಂತುಹುಳುಗಳು ಮನುಷ್ಯನ ಆಹಾರ ಮತ್ತು ರಕ್ತದಲ್ಲಿನ ಪೌಷ್ಟಿಕಾಂಶವನ್ನು ಹಂಚಿಕೊಳ್ಳುವುದರಿಂದ ಈ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉತ್ತರ ಕರ್ನಾಟಕದ ಸಹಾಯಕ ನಿರ್ದೇಶಕ ಡಾ. ಸಂಪತ್ ಗುಣಾರಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಜಯಪುರ ನಗರದ ಅಲ್ ಹಸ್ನಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಗರದ ಹಬೀಬ್ ನಗರದಲ್ಲಿರುವ ಅಲ್ ಹಸ್ನಾತ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾಹನ, ಜನದಟ್ಟಣೆ ನಿಯಂತ್ರಿಸುವ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಎನ್ ಎಚ್ ಎಂ ಕಟ್ಟಡದಲ್ಲಿ ನಡೆಯುತ್ತಿದ್ದ ಒಣದ್ರಾಕ್ಷಿ ಆಫ್‌ಲೈನ್ ಹರಾಜು ಸ್ಥಳವನ್ನು ಎಪಿಎಂಸಿ ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿದೆ.ಈ ಹಿಂದೆ ಎಪಿಎಂಸಿಯ ಎನ್‌ಎಚ್‌ಎಂ (ರಾಷ್ಟ್ರೀಯ ತೋಟಗಾರಿಕೆ ಮಿಷನ್) ಕಟ್ಟಡದಲ್ಲಿ ಪ್ರತಿ ಗುರುವಾರ ಒಣದ್ರಾಕ್ಷಿ ಆಫ್‌ಲೈನ್ (ಬಹಿರಂಗ ಹರಾಜು) ಟೆಂಡರ್ ಪ್ರಕ್ರಿಯೆ ನಡೆಯುತ್ತಿತ್ತು. ಇನ್ಮುಂದೆ ವಿಜಯಪುರ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಿ ನಡೆಸಲು ನಿರ್ಧರಿಸಲಾಗಿದೆ.ಆನ್‌ಲೈನ್ ಟ್ರೇಡಿಂಗ್ ಎಂದಿನಂತೆ: ಆನ್‌ಲೈನ್ ಇ-ಟೆಂಡರ್ ವಹಿವಾಟಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ಮಂಗಳವಾರ ಹಾಗೂ ಶನಿವಾರದಂದು ನಡೆಯುವ ಆನ್‌ಲೈನ್ ಟ್ರೇಡಿಂಗ್ ಪ್ರಕ್ರಿಯೆಯು ಎಂದಿನಂತೆ ಎನ್ ಎಚ್ ಎಂ ಕಟ್ಟಡದಲ್ಲೇ ನಡೆಯಲಿದೆ.ಇರೈತರಿಗೆ ತಮ್ಮ ಬೆಳೆಗಳಿಗೆ ಸೂಕ್ತ ಹಾಗೂ ಉತ್ತಮ ಬೆಲೆ ದೊರೆಯುವಂತೆ ಮಾಡಲು ಅಧಿಕೃತ ಲೈಸೆನ್ಸ್ ಹೊಂದಿರುವ ಎಲ್ಲ ಖರೀದಿದಾರರು ಹಾಗೂ ರೈತ ಬಾಂಧವರು ಈ ನೂತನ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ವ್ಯಾಪಾರ ವಹಿವಾಟಿನಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ…

Read More

ಅರ್ಜುಣಗಿಯಲ್ಲಿ ಸರಕಾರಿ ಪ.ಪೂ ಕಾಲೇಜ್ & ಸರಕಾರಿ ಪಬ್ಲಿಕ್ ಸ್ಕೂಲ್ ಶಾಲಾ ಕಟ್ಟಡ ಉದ್ಘಾಟನೆ | ೨.೧೪ ಕೋಟಿ ರೂ.ವೆಚ್ಚದಲ್ಲಿ ಅತ್ಯಾಧುನಿಕ ಶಾಲಾ ಕಟ್ಟಡ ನಿರ್ಮಾಣ | ಸಚಿವ ಡಾ. ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಗತ್ತಿನಲ್ಲಿ ಅಟೋಮೊಬೈಲ್ ಸೆಕ್ಟರ್ ನಲ್ಲಿ ಟೋಯೋಟಾ ಕಿರ್ಲೊಸ್ಕರ್ ಕಂಪನಿ ಸುಪ್ರಸಿದ್ದ. ಈ ಕಂಪನಿಯು ತನ್ನ ಸಿಎಸ್ಸಾರ್ ಅನುದಾನದಡಿ ೨.೧೪ ಕೋಟಿ ರೂ.ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಭವ್ಯ ಶಾಲಾ ಕಟ್ಟಡವನ್ನು ನಿರ್ಮಿಸಿದೆ. ಈ ಭಾಗದ ವಿದ್ಯಾರ್ಥಿಗಳು ಇಲ್ಲಿ ಚೆನ್ನಾಗಿ ಓದುವ ಮೂಲಕ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಹೇಳಿದರು.ಟೋಯೋಟಾ ಕಿರ್ಲೋಸ್ಕರ್ ಕಂಪನಿ ಅವರ ಸಿ ಎಸ್ ಆರ್ ಅನುದಾನದಲ್ಲಿ ಅರ್ಜುಣಗಿಯಲ್ಲಿ ನಿರ್ಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಸರಕಾರಿ ಪಬ್ಲಿಕ್ ಸ್ಕೂಲ್ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಇಂದಿನ ಕಾಲದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಬಹುಮುಖ್ಯವಾಗಿದೆ. ಗ್ರಾಮೀಣ…

Read More

ವಿಜಯಪುರದಲ್ಲಿ ವೈಜ್ಞಾನಿಕ ಬೆಳೆ ಹಾನಿ ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ -೧೪ ಎಂಎಂ ಮಳೆ ಕೊರತೆಯಿಂದಾಗಿ ಬಿತ್ತನೆಯಾದ ಬೆಳೆಗಳಿಗೆ ತೇವಾಂಶ ಕೊರತೆಯಾಗಿದ್ದು ರೈತರ ಜಮೀನಿನಲ್ಲಿ ಹಾನಿಗೀಡಾದ ಬೆಳೆಗಳ ಭಾವಚಿತ್ರದೊಂದಿಗೆ ವೈಜ್ಞಾನಿಕವಾದ ನಿಖರ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿರುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಆಧಾರಿತ ಕೃಷಿ ಬಹಳ ಕಷ್ಟ ಎಂಬುದನ್ನು ಬರ ಪರಿಸ್ಥಿತಿ ಅವಲೋಕನ ವೇಳೆ ಕಂಡುಕೊಂಡಿದ್ದೇನೆ. ಬಹುತೇಕ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೆರವಿಗೆ ಬರುವುದು ನಮ್ಮ ಕರ್ತವ್ಯವಾಗಿದೆ. ಈ ಕಾರ್ಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.ಜಿಲ್ಲೆಯ ಬಹುತೇಕ ಕಡೆಗಳಲ್ಲಿ ತೊಗರಿ, ಸೂರ್ಯಕಾಂತಿ, ಕಬ್ಬು ಬೆಳೆ ಹಾನಿ ಸೇರಿದಂತೆ ಪ್ರತಿಯೊಂದೂ ಬೆಳೆಯನ್ನು ಅವಲೋಕಿಸಿರುವೆ. ಮುಖ್ಯಮಂತ್ರಿ ಅವರಿಗೆ ಈ ಕುರಿತು ಮನದಟ್ಟು ಮಾಡಿಕೊಡುವ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ದೇಶದ ಆರ್ಥಿಕ ಬೆಳವಣಿಗೆ, ಗ್ರಾಮೀಣ ಉದ್ಯೋಗ ಸೃಷ್ಠಿ ಮತ್ತು ಪೌಷ್ಠಿಕಾಂಶ ಭದ್ರತೆಗೆ ವಿಶೇಷ ಕೊಡುಗೆ ನೀಡುತ್ತಿರುವ ತೋಟಗಾರಿಕೆ ಅಭಿವೃದ್ಧಿಗೆ ಸರ್ಕಾರದ ಧನಾತ್ಮಕ ನೆರವಿರಲೆಂದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ, ಚಿಂತಕ ಅರವಿಂದ ಕೊಪ್ಪ ಹೇಳಿದರು.ಪಟ್ಟಣದ ವಿದ್ಯಾನಗರದಲ್ಲಿರುವ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘ ಹಾಗೂ ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ, ಬಸರಕೋಡ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಣ್ಣು, ತರಕಾರಿ, ಹೂವು ಹಾಗೂ ಔಷಧೀಯ ಸಸ್ಯಗಳ ಉತ್ಪಾದನಾ ತಾಂತ್ರಿಕತೆಗಳಿಂದ ವಿಸ್ತರಣೆ ಮತ್ತು ಉತ್ಪಾದನೆಯಲ್ಲಿ ಗಣನೀಯ ಏರಿಕೆ ಕಾಣುತ್ತಿರುವ ಮಧ್ಯೆ ಕಾಡುತ್ತಿರುವ ಮಾರುಕಟ್ಟೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಸಮಗ್ರ ನೀತಿಯ ಜಾರಿ ಇಂದಿನ ಅಗತ್ಯವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಉಪಾಧ್ಯಕ್ಷ ಜಿ.ಎಂ.ಯಡವಣ್ಣವರ ಮಾತನಾಡಿ ದೇಶದ ಕೃಷಿ ಜಿಡಿಪಿಗೆ ಬಹುದೊಡ್ಡ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ರಾಜ್ಯದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅಥಣಿ ಪಟ್ಟಣಕ್ಕೆ ಆಗಮಿಸಿದ ಸಚಿವ ಲಕ್ಷ್ಮಣ ಸವದಿ ಅವರಿಗೆ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.ಶನಿವಾರ ಅಥಣಿ ಪಟ್ಟಣದ ಪ್ರವೇಶ ದ್ವಾರದಲ್ಲಿ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದು ಸಚಿವರ ಕಾರು ಆಗಮಿಸುತ್ತಿದ್ದಂತೆ ಡೊಳ್ಳು, ಬ್ಯಾಂಡ್, ವಾದ್ಯಗಳೊಂದಿಗೆ ಲಕ್ಷ್ಮಣ ಸವದಿ ಜೈ ಕಾರ ಘೋಷಣೆಗಳು ಮೊಳಗಿದವು.ಹೂವಿನಿಂದ ಸ್ವಾಗತ: ಅಭಿಮಾನಿಗಳು ಸಚಿವರ ಮೇಲೆ ಹೂವಿನ ಸುರಿಮಳೆ ಸುರಿಸಿದರು ಮಹಿಳೆಯರು ಆರತಿ ಬೆಳಗಿ, ಕುಂಕುಮ ಇಟ್ಟು ಬರಮಾಡಿಕೊಂಡರು. ವಿಶೇಷವಾಗಿ 21 ಅಡಿ ಉದ್ದದ ಬೃಹತ ಹೂವಿನ ಹಾರವನ್ನು ಸಚಿವರ ಕುತ್ತಿಗೆಗೆ ಹಾಕಿ ಗೌರವಿಸಲಾಯಿತು. ಈ ದೃಶ್ಯ ನೋಡಲು ಜನಸ್ತೋಮವೇ ನೆರೆದಿತ್ತು.ಕಾರ್ಯಕರ್ತರಲ್ಲಿ ಸಂಭ್ರಮಪ್ರಮಾಣವಚನದ ಬಳಿಕ ಮೊದಲ ಬಾರಿ ತಮ್ಮ ಕ್ಷೇತ್ರಕ್ಕೆ ಬಂದ ಸಚಿವರನ್ನು ನೋಡಲು ಅಥಣಿ ತಾಲೂಕಿನ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದರು ನೂತನ ಸಚಿವರಿಗೆ ಶುಭಾಶಯ ಕೋರಿ ಸಿಹಿ ಹಂಚಲಾಯಿತು ಪಟಾಕಿ ಸಿಡಿಸಿ, ಶಾಲು ಹೊದಿಸಿ ಸಚಿವರಿಗೆ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ…

Read More

ಪೋತ್ರಜ ಕುಣಿತ | ಹಲಗೆನಾದದೊಂದಿಗೆ ಅದ್ಧೂರಿ ಮೆರವಣಿಗೆ | ಮಳೆ–ಬೆಳೆ ಸಮೃದ್ಧಿಗೆ ಭಕ್ತರ ಪ್ರಾರ್ಥನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಆಷಾಢ ಮಾಸದ ಅಂಗವಾಗಿ ಚಡಚಣ ಪಟ್ಟಣದಲ್ಲಿ ಕಟಬು–ಕಟಬರ ಕ್ಷತ್ರಿಯ ಸಮುದಾಯದ ಆರಾಧ್ಯ ದೈವವಾದ ಶ್ರೀ ದುರ್ಗಾದೇವಿ (ಮರಗಮ್ಮ ತಾಯಿ) ಜಾತ್ರಾ ಮಹೋತ್ಸವವು ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು.ಚಡಚಣ ತಾಲೂಕು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಆಷಾಢ ಮಾಸದ ಶುಕ್ರವಾರ ಹಾಗೂ ವಿಶೇಷ ದಿನಗಳಲ್ಲಿ ಮರಗಮ್ಮ ತಾಯಿಗೆ ವಿಶೇಷ ಪೂಜೆ, ಕುಂಕುಮಾರ್ಚನೆ, ಅಲಂಕಾರ, ಹರಕೆ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಗುತ್ತದೆ. ಜಾತ್ರೆಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು, ತಮ್ಮ ಇಷ್ಟಾರ್ಥಗಳು ಈಡೇರಲಿ ಹಾಗೂ ಕುಟುಂಬದಲ್ಲಿ ಸುಖ, ಶಾಂತಿ, ಆರೋಗ್ಯ ನೆಲೆಸಲಿ ಎಂದು ಪ್ರಾರ್ಥಿಸುತ್ತಾರೆ.ಆಷಾಢ ಮಾಸದಲ್ಲಿ ನಡೆಯುವ ಮರಗಮ್ಮ ತಾಯಿಯ ಜಾತ್ರೆಗೆ ತನ್ನದೇ ಆದ ವಿಶಿಷ್ಟ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವಿದೆ. ಜಾತ್ರೆಯ ನಿಮಿತ್ತ ಕಟಬು–ಕಟಬರ ಕ್ಷತ್ರಿಯ ಸಮುದಾಯದವರು ತಮ್ಮ ಬಂಧು–ಬಳಗ ಹಾಗೂ ಸ್ನೇಹಿತರನ್ನು…

Read More

ಬಿಜ್ಜರಗಿಯಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ದಾಸ ಸಾಹಿತ್ಯವು ಸಮಾಜದ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದೆ. ಕನಕದಾಸರಂಥ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ಎಲ್ಲರಿಗೂ ಮಾರ್ಗದರ್ಶಕವಾಗಿವೆ. ‌ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಹಂಜಗಿಸಿದ್ಧೇಶ್ವರ, ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಕನಕದಾಸ ಸರ್ಕಲ್ ಉದ್ಘಾಟಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಸಮರ್ಥ ನಾಯಕರಾಗಿದ್ದು, ಜಲಸಂಪನ್ಮೂಲ‌ ಸಚಿವರಾಗಿದ್ದಾಗ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ‌ ಈ ಭಾಗದ ರೈತರ ಬಾಳಿಗೆ ಬೆಳಕಾಗಿದ್ದಾರೆ. ಕೊಟ್ಟ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿ ಅಭಿವೃದ್ಧಿ ಮಾಡುತ್ತಾರೆ. ಈಗ ಕೈಗಾರಿಕೆ ಸಚಿವರಾಗಿ ವಿದೇಶಗಳಿಂದ ಬಂಡವಾಳ ಹೂಡಿಕೆದಾರರನ್ನು ರಾಜ್ಯಕ್ಕೆ ಕರೆತರುತ್ತಿದ್ದಾರೆ. ಈ ಮೂಲಕ ದೇಶದಲ್ಲಿ ಬಂಡವಾಳ ಹೂಡಿಕೆ…

Read More