Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: 2025 ನೇ ವರ್ಷದ “ಶರಣ ಅಂಬಿಗ ಕುಮಾರ ಚೌಡಯ್ಯ ಗಣಾಚಾರ ಪ್ರಶಸ್ತಿ’ ಗೆ ಶರಣೆ ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದ ಆಯ್ಕೆಯಾಗಿದ್ದಾರೆ.ಬಸವ ಕೇಂದ್ರ-ಅಕ್ಕನ ಬಳಗ- ತರುಣ ಸಂಘ ಶರಣ ಸಂಸ್ಕೃತಿ ಮಹೋತ್ಸವ ಸಮಿತಿ, ಚಿತ್ತರಗಿ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನಮಠಇಳಕಲ್ಲ ಇವರ ಸಹಯೋಗದೊಂದಿಗೆ,ಶ್ರೀ ಅಂಬಿಗಚೌಡಯ್ಯ ಪ್ರತಿಷ್ಠಾನ, ಗದಗ-ಬೆಟಗೇರಿ ಇವರು ಆಯೋಜಿಸಿರುವ ನಿಜಶರಣ ಅಂಬಿಗ ಚೌಡಯ್ಯ ಜಯಂತ್ಯುತ್ಸವ ಆಚರಣೆ ಗಣಾಚಾರದ ಶರಣ ಅಂಬಿಗಕುಮಾರ ಚೌಡಯ್ಯನವರ ಶರಣೋತ್ಸವ ಆಚರಣೆ ಹಾಗೂ ಶ್ರೀ ಅಂಬಿಗ ಚೌಡಯ್ಯ ಮತ್ತು ಶ್ರೀ ಅಂಬಿಗ ಕುಮಾರ ಚೌಡಯ್ಯ ಶರಣರ ಗಣಾಚಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಆಯ್ಕೆಯಾಗಿದ್ದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ಸಾಹಿತಿ, ಪಾರ್ವತಿ ಸೊನ್ನದ ಅವರು ಬಸವ ಜನ್ಮ ಭೂಮಿಯಾಗಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನವರಾಗಿದ್ದಾರೆ. ಅವರು ಎಂ.ಎ., ಟಿ.ಸಿ.ಎಚ್. ಶಿಕ್ಷಣ ಓದಿರುವ ಇವರು ಇಂಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೈರೂಣಗಿ ತಾಲೂಕ ಇಂಡಿಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಶರಣೆ…

Read More

ಜಿಲ್ಲಾ ಉಸ್ತುವಾರಿ ಸಚಿವರಿಂದ ಗೃಹ ಆರೋಗ್ಯ ಯೋಜನೆ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಯ ಕೈಪಿಡಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಶುಕ್ರವಾರ ಸಚಿವರ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರು.ಜಿಲ್ಲೆಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಕಾರ್ಯಕ್ರಮದಡಿಯಲ್ಲಿ ೩೦ ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ೧೪ ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಡಯಾಬೆಟಿಕ್ ಫೂಟ್ ಮತ್ತು ಡಯಾಬೆಟಿಕ್ ರೆಟಿನೋಪತಿ, ಮಾನಸಿಕ ಆರೋಗ್ಯ ಮತ್ತು ನರ ವೈಜ್ಞಾನಿಕ ಕಾಯಿಲೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘ ಕಾಲಿನ ಮೂತ್ರಪಿಂಡ ಕಾಯಿಲೆ, ದೀರ್ಘ ಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ, ಪಿತ್ತ ಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ ಕಾಯಿಲೆಗಳ ಕುರಿತು ತಿಳುವಳಿಕೆ ನೀಡಿ…

Read More

ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.೫ ಉಪ ಚುನಾವಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ-೦೫ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ನಿಡಗುಂದಿ ತಹಶೀಲ್ದಾರ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಸಂಬಂಧಿಸಿದ ಮತಗಟ್ಟೆಗಳಲ್ಲಿ ಸಾರ್ವಜನಿಕರು ಹಾಗೂ ಮತದಾರರ ವೀಕ್ಷಣೆಗೆ ಕರಡು ಪ್ರತಿಯನ್ನು ಇರಿಸಲಾಗಿದೆ. ಪ್ರಕಟಿಸಲಾದ ಕರಡು ಮತದಾರ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ ೨೪ರೊಳಗೆ ನಿಡಗುಂದಿ ತಹಶೀಲ್ದಾರರಿಗೆ ಸಲ್ಲಿಸಬೇಕು. ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರ ಪಟ್ಟಿಯನ್ನು ೨೦೨೫ರ ಜುಲೈ ೨೫ರಂದು ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಿಂದ ಜಮಖಂಡಿಗೆ ತೆರಳುವ ವಸತಿ ಬಸ್ ಬಿಡುವ ವೇಳೆಯನ್ನು ಬದಲಾಯಿಸಬೇಕೆಂದು ಇಲ್ಲಿನ ವಿದ್ಯಾರ್ಥಿಗಳು, ಪಾಲಕರು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಗ್ರಾಮದ ವಿದ್ಯಾರ್ಥಿಗಳಿಗಾಗಿಯೇ ವಿಶೇಷವಾಗಿ ಬಿಡಲಾಗುವ ಈ ಬಸ್ ಗ್ರಾಮದಿಂದ ಪ್ರತಿದಿನ ಬೆಳಿಗ್ಗೆ ೭ ಘಂಟೆಗೆ ಇಲ್ಲಿನ ಬಸ್ ನಿಲ್ದಾಣದಿಂದ ಹೊರಡುತಿತ್ತು ಆದರೆ ಪ್ರಸಕ್ತ ಶೈಕ್ಷಣಿಕ ಅವಧಿಯಿಂದ ಈ ಬಸ್ಸಿನ ವೇಳಾಪಟ್ಟಿಯನ್ನು ೬ ಘಂ. ೩೦ ನಿಮಿಷಕ್ಕೇ ಬದಲಾಯಿಸಿರುವುದರಿಂದ ಹೊಲ ಗದ್ದೆಗಳಿಂದ ಬರುವ ಬಹುತೇಕ ವಿದ್ಯಾರ್ಥಿಗಳಿಗೆ ಬಸ್ ಸೇವೆ ಲಭ್ಯವಾಗುತ್ತಿಲ್ಲ, ಪ್ರತಿದಿನ ಅರ್ಧಘಂಟೆ ಮುಂಚಿತವಾಗಿ ಹೊರಡುತ್ತಿರುವುದರಿಂದ ಹೊಲ ಗದ್ದೆಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಸ್ ಹೋದನಂತರ ಸುಮಾರು ಒಂದು ಘಂಟೆಗಳಕಾಲ ಈ ಮಾರ್ಗದಲ್ಲಿ ಬೇರೆ ಬಸ್‌ಗಳಿಲ್ಲ ಅಲ್ಲದೇ ನಂತರ ಬರುವ ಬಸ್‌ಗಳು ಅನ್ಯ ರಾಜ್ಯಕ್ಕೆ ಹೋಗುವುದರಿಂದ ವಿದ್ಯಾರ್ಥಿನಿಯರು ಪ್ರತಿದಿನ ಬಸ್ ಟಿಕೇಟ ಪಡೆದು ಪ್ರಯಾಣಿಸುವಂತಾಗಿದೆ ಇದರಿಂದ ಬಡ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ಪ್ರತಿದಿನ ಕಾಲೇಜಿನಲ್ಲಿ ಬೆಳಗಿನ ತರಗತಿಗಳಿಗೆ ಗೈರು ಹಾಜರಾಗುತ್ತಿರುವುರಿಂದ ಶೈಕ್ಷಣಿಕ ಹಿನ್ನಡೆಯಾಗುತ್ತಿದೆ ಸಂಬಂದಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ ಭಾಜನರಾಗಿದ್ದಾರೆ. ಪರಶುರಾಮ ಶಿವಶರಣ ಅವರು ರಾಜ್ಯ ಮಟ್ಟದ ಕನ್ನಡ ದಿನ ಪತ್ರಿಕೆ ಹೊಸ ದಿಗಂತದ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ತಾವು ತೊಡಗಿಸಿಕೊಂಡು, ನಿರ್ಭಿತಿಯಾಗಿ ಜನಮುಖಿ, ಸಮಾಜಮುಖಿ ವರದಿಗಳನ್ನು ಮಾಡುತ್ತ ಖ್ಯಾತಿ ಪಡೆದವರು.ಪರಶುರಾಮ ಶಿವಶರಣ ಅವರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಸಾಹಿತಿಗಳು ಆಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರ ತಂದಿದ್ದು, ಜೀವಪೀಠ, ನೀಲಿ ಮಿಂಚು ಕವನ ಸಂಕಲನ, ರಾಣಿ ಬಗೀಚ್ ಕಥಾ ಸಂಕಲನ ಹಾಗೂ ವಾರ ನೋಟ ಅಂಕಣ ಸಂಕಲನಗಳನ್ನು ಹೊರ ತಂದಿದ್ದಾರೆ. ಇವರ ಕೃತಿಗಳು ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿವೆ. ಅದರಂತೆ ಶಿವಶರಣ ಅವರ ವಿರಚಿತ ಜೀವ ಪೀಠ ಕೃತಿಗೆ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ಅರಳು ಪ್ರತಿಭೆ ಪ್ರಶಸ್ತಿ ದೊರೆತಿದೆ.ವಿವಿಧ ಸಂಘ, ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಜು. ೧೯ ರಂದು ನಗರದ ಕಂದಗಲ್…

Read More

ತಿಕೋಟಾ ತಾಲೂಕಿನ ಬಾಬಾನಗರ ಬಳಿ ನಿರ್ಮಾಣ | ಸುಮಾರು 400 ಎಕರೆ ಪ್ರದೇಶದಲ್ಲಿ ರೂ.557 ಕೋ. ವೆಚ್ಚ | ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಷ್ಟ್ರೀಯ ಸ್ವಯಂಸೇವಕ ಸಂಘದವತಿಯಿಂದ ಪಟ್ಟಣದ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಜು. ೨೦ ರವಿವಾರದಂದು ಗುರುಪೂಜಾ ಉತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.ಅಂದು ಸಾಯಂಕಾಲ ೬:೦೦ಕ್ಕೆ ಆರಂಭಗೊಳ್ಳಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ನಿವೃತ್ತ ಶಿಕ್ಷಕ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಗಂಗಾಧರಯ್ಯ ಮಠ ಅವರು ವಹಿಸಲಿದ್ದು, ವಕ್ತಾರರಾಗಿ ಉತ್ತರ ಕರ್ನಾಟಕ ಸಹಪ್ರಾಂತ ಪ್ರಚಾರಕರಾದ ಶ್ರೀನಿವಾಸ ಜೀ ಆಗಮಿಸಲಿದ್ದಾರೆಂದು ತಾಲೂಕಾ ಕಾರ್ಯವಾಹ ಸಂಜೀವ ಜಾಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ದಲಿತರ ಭೂಮಿ, ವಸತಿ ಹಕ್ಕು ಸಹಿತ ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಪ್ರತಿಭಟನಾ ಧರಣಿ ಕೈಗೊಂಡು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಆವರಣಕ್ಕೆ ಶುಕ್ರವಾರ ಆಗಮಿಸಿದ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಭೂಮಿ ಮಂಜೂರಾತಿಗೆ ಆಗ್ರಹಿಸಿ ೨ ಗಂಟೆಗಳ ಕಾಲ ಪ್ರತಿಭಟನಾ ಧರಣಿ ಕೈಗೊಂಡರು.ಈ ಸಂದರ್ಭದಲ್ಲಿ ತಾಲ್ಲೂಕು ಪ್ರಧಾನ ಸಂಚಾಲಕ ಸಾಯಬಣ್ಣ ದಳಪತಿ ಮಾತನಾಡಿ, ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಯ ನೆಪದಲ್ಲಿ ವಿದೇಶಿ ಬಂಡವಾಳಗಾರರಿಗಾಗಿ ಸ್ವಾಧೀನ ಪಡಿಸಿಕೊಳ್ಳುತ್ತಿವೆ. ಇದು ದಲಿತರನ್ನು ಭೂಮಿಯಿಂದ ಕೇವಲ ಹೊರದಬ್ಬುವ ಕುಂತಂತ್ರವಾಗಿದೆ.ಪರಿಶಿಷ್ಟ ಜಾತಿ, ವರ್ಗ, ಭೂರಹಿತ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಹಾಗೂ ವಜಾಗೊಳಿಸಿರುವ ಸಾಗುವಳಿ ಅರ್ಜಿಗಳನ್ನು ಮರುಪರಿಶೀಲಿಸಬೇಕು. ಎಸ್‌ಸಿಎಸ್‌ಪಿ-ಟಿಎಸ್‌ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಅಥವಾ ಏಕಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳನ್ನು ಉನ್ನತಿಕರಣಗೊಳಿಸಿ, ನಿಗದಿತ ಅವಧಿಯೊಳಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗಾಗಿ) ಬಾಲಕ-ಬಾಲಕೀಯರ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಆಗಸ್ಟ್ ೧೪ರ ಒಳಗಾಗಿ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ, ಗ್ರಾಮ ಒನ್ hಣಣಠಿs://gಡಿಚಿmಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಬೆಂಗಳೂರು ಒನ್ hಣಣಠಿs://ಞಟಚಿಠಿಠಿ.ಞಚಿಡಿಟಿಚಿಣಚಿಞಚಿoಟಿe.gov.iಟಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವನ್ನು ಹಾಗೂ ನಿಗಮದ ದೂರವಾಣಿ ಸಂಖ್ಯೆ: ೦೮೩೫೨-೨೫೮೧೨೮ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More