Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಚನೆ- ಮಾಲತಿ ಹಿರೇಮಠ”ನಮ್ಮ ಕಥಾ ಅರಮನೆ*ಬರಹಗಾರರು ಉದಯರಶ್ಮಿ ದಿನಪತ್ರಿಕೆ ಮುಂಜಾನೆಯ ನಸುಕಿನಲಿಬೆಳಕಂತೆ ನೀ ಬಂದೆ ನನ್ನೆದುರಲ್ಲಿನನ್ನ ಬರಡು ಹೃದಯಕೆ ತಂಪೆರೆದೆಒಲವೆಂಬ ಪನ್ನೀರ ಸಿಂಚನದಲಿ ತಂಗಾಳಿಯಲಿ ತೇಲಿ ಬಂದಿದೆನಿನ್ನ ಮೈಗೆ ಲೇಪಿಸಿದ ಪರಿಮಳನನ್ನ ಒಣ ಅಧರಕ್ಕೆ ಮುತ್ತನಿಕ್ಕಿದೆಬಾಡಿದ ತನುವನ್ನು ಉತ್ತೇಜಿಸಿದೆ ಪ್ರೀತಿಯಲಿ ತನ್ಮಯತೆ ತುಂಬಿದೆಮನದಲ್ಲಿ ಅನುರಾಗ ಚಿಮ್ಮಿದೆನಮ್ಮ ಪ್ರಣಯದ ಅಂಕುರವಾಗಿದೆನಿನ್ನಲ್ಲಿ ಒಂದಾಗುವ ಬಯಕೆಯಾಗಿದೆ
ಸ್ಥಳೀಯರ ನಿರ್ಧಾರದಂತೆ ಯೋಜನಾ ಸ್ಥಳ ನಿಗದಿ ಮಾಡುವುದಾಗಿ ಸಚಿವ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಪ್ರಜಾಸೌಧ ಹಾಗೂ ಬಸ್ ಡೀಪೋ ಸ್ಥಳ ಬದಲಾವಣೆ ಮಾಡುವ ವಿಷಯದಲ್ಲಿ ಸ್ಥಳೀಯರ ಒಕ್ಕೋರಲ ನಿರ್ಧಾರದಂತೆ ಯೋಜನಾ ಸ್ಥಳ ನಿಗದಿ ಮಾಡುವುದಾಗಿ ಬಸವವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ಮಂಗಳವಾರ ವಿಜಯಪುರ ನಗರದಲ್ಲಿರುವ ತಮ್ಮ ಗೃಹ ಕಛೇರಿಗೆ ಭೇಟಿ ನೀಡಿದ ಕೊಲ್ಹಾರ ಪಟ್ಟಣದ ನಿಯೋಗದ ಮನವಿ ಆಲಿಸಿದ ಸಚಿವರು, ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಸಂತ್ರಸ್ತರ ಪುನರ್ವಸತಿ ಕೇಂದ್ರವಾದ ಕೊಲ್ಹಾರ ಪಟ್ಟಣ ಸೇರಿದಂತೆ ಇಡೀ ತಾಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಇದರ ಭಾಗವಾಗಿ ತಾಲೂಕ ಆಡಳಿತ ಸೌಧ ಹಾಗೂ ಬಸ್ ಡೀಪೋ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸ್ಥಳೀಯರಿಗೆ ಅನುಕೂಲ ಆಗುವ ರೀತಿಯಲ್ಲಿ ಸ್ಥಳೀಯರ ಒಕ್ಕೋರಲ ನಿರ್ಧಾರದಂತೆ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತದೆ. ಹೀಗಾಗಿ ಅಭಿವೃದ್ಧಿ ವಿಷಯದಲ್ಲಿ ಒಡಕಿನ, ಅಪಸ್ವರದ ಮಾತುಗಳು ಬೇಡ…
ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ | ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿನ್ನೆಯಷ್ಟೇ (ಜು.೧೪) ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.ಸುಶೀಲ್ ಕಾಳೆ ಕೊಲೆ ಆರೋಪಿಗಳು ಇಟ್ಟಂಗಿಹಾಳ ರಸ್ತೆ ಕಡೆಗೆ ಇರುವ ಬಗ್ಗೆ ಪೊಲೀಸರು ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ತೆರಳಿದಾಗಆರೋಪಿಗಳು ಪೊಲೀಸರ ಮೇಲೇ ಕಲ್ಲು ತೂರಾಟ ನಡೆಸಿ, ತಮ್ಮ ಬಳಿ ಇದ್ದ ಕಂಟ್ರಿ ಪಿಸ್ತೂಲ್ ನಿಂದ ಪೊಲೀಸರತ್ತ…
ಮುಖ್ಯಮಂತ್ರಿಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಆಗ್ರಹ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಬಹಳ ಜನ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದುದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎಂದು ಕೆಯುಡಬ್ಲೂೃಜೆ ಆಗ್ರಹಿಸಿದೆ.ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದಿಸುವುದಾಗಿ ತಿಳಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಯೋಜನೆ ಎಲ್ಲಾ ಪತ್ರಕರ್ತರಿಗೂ ಸಿಗುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ.ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತೀ ವರ್ಷದಂತೆ ಈ ವರ್ಷವೂ ನಗರದ ಇಬ್ರಾಹಿಂಪುರದಲ್ಲಿ ಶ್ರೀ ಮರಗಮ್ಮ ದೇವಿ ಜಾತ್ರೆ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು.ಜಾತ್ರೆಗೂ ಮೊದಲು ಒಂದು ತಿಂಗಳು ವಾರ ಹಿಡಿಯಲಾಗಿತ್ತು. ಈ ಅವಧಿಯಲ್ಲಿ ಪ್ರತೀ ಮಂಗಳವಾರ, ಶುಕ್ರವಾರ ವಾಡಿಕೆಯಂತೆ ನೀರು ನೀಡಿ, ನೈವೇದ್ಯ ಸಮರ್ಪಣೆ ಮಾಡುವ ಮೂಲಕ ಶ್ರದ್ಧಾ ಭಕ್ತಿಯಿಂದ ದೇವಿಯ ಆರಾಧನೆ ಮಾಡಲಾಯಿತು. ಕೊನೆಯ ವಾರವಾದ ಮಂಗಳವಾರ ಅದ್ಧೂರಿಯಿಂದ ದೇವಿಯ ಜಾತ್ರೆ ನಡೆಯಿತು.ಜಾತ್ರೆಯ ದಿನ ಮರಗಮ್ಮ ದೇವಸ್ಥಾನದಲ್ಲಿ ದೇವಿಗೆ ಅಭಿಷೇಕ, ವಿಶೇಷ ಪೂಜೆ ನೆರವೇರಿಸಲಾಯಿತು. ದೇವಿಯ ಗದ್ದುಗೆಗೆ ಪುಷ್ಪಾಲಂಕಾರ ಮಾಡಲಾಗಿತ್ತು. ಇಬ್ರಾಹಿಂಪುರ ಸೇರಿದಂತೆ ಸುತ್ತಲಿನ ವಿವಿಧ ಬಡಾವಣೆಗಳಿಂದ ಸಹಸ್ರಾರು ಜನ ಭಕ್ತರು ಮರಗಮ್ಮ ದೇವಸ್ಥಾನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.ಇದೇ ಸಂದರ್ಭದಲ್ಲಿ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಿರಂತರ ಅನ್ನದಾಸೋಹ ನಡೆಯಿತು. ಸಂಜೆ ವಿವಿಧ ವಾದ್ಯವೈಭವದೊಂದಿಗೆ ಮರಗಮ್ಮ ದೇವಿ ಮೂರ್ತಿಯ ಪಲ್ಲಕ್ಕಿ ಉತ್ಸವ ನಡೆಯಿತು. ಮರಗಮ್ಮ ದೇವಿ ದೇವಸ್ಥಾನದಿಂದ ಹೊರಟ ಪಲ್ಲಕ್ಕಿ ಮೆರವಣಿಗೆ ಗ್ರಾಮದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ದಿನಾಂಕ: ೧೮-೦೭-೨೦೨೫ ರಂದು ಬೆಳಿಗ್ಗೆ ೧೧-೦೦ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ೫,೦೦೦ ರೂ.ಗಳ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇರಿಸಬೇಕು. ಕನಿಷ್ಠ ೧೦ನೇ ತರಗತಿ ಉತ್ತೀರ್ಣರಾಗಿರುವ ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಆಯಾ ಇಲಾಖೆಗೆ ಸಂಬಂಧಿಸಿದಂತೆ ಸೂಕ್ತ ಕಮಿಷನ್ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಅಂಜೆ ವಿಮಾ ಅಭಿವೃದ್ಧಿ ಅಧಿಕಾರಿ ಮೊಬೈಲ್:…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು https://swdservice.karnataka.gov.in/PrizeMoneyClientAPP/ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿಯಿಂದಾಗಿ ಪ್ಲಾಸ್ಟಿಕ್ ಸರ್ಜರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಅಪಘಾತ, ಸುಟ್ಟಗಾಯ, ಶೀಳುತುಟಿ, ಜನ್ಮದೋಷ, ಅಂಗವೈಕಲ್ಯ, ಹೆಚ್ಚವರಿ ಬೆರಳುಗಳನ್ನು ಸರಿಪಡಿಸುವುದು. ದೇಹ ಮತ್ತು ಮುಖದ ಆಕಾರವನ್ನು ಬದಲಿಸುವುದು, ಸುಕ್ಕುಗಳನ್ನು ಕಡಿಮೆ ಮಾಡಿ ಚರ್ಮದ ಕಾಂತಿ ಹೆಚ್ಚಿಸುವುದು ಈಗ ಸರಳವಾಗಿದೆ. ವಿಕಾರ ರೂಪವನ್ನು ಸುಂದರವಾಗಿ ಮಾರ್ಪಡಿಸಬಹುದಾಗಿದೆ. ಅಲ್ಲದೆ ಪ್ಲಾಸ್ಟಿಕ್ ಸರ್ಜರಿ ಈಗ ಅತೀ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಅವರು ಹೇಳಿದರು.ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಭೂಕರ್ ಪ್ರಶಸ್ತಿ ಪಡೆದ ಡಾ.ಬಾನು ಮುಷ್ಕಾಕ್ ಅವರ ಬರಹಗಳ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಜು.೧೭ ರಂದು ಬೆಳಿಗ್ಗೆ ೧೧-೦೦ ಗಂಟೆಗೆ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತಿ ಹಾಗೂ ಡಿವಾಯ್‌ಎಸ್ಪಿ ಬಸವರಾಜ ಯಲಿಗಾರ ಉದ್ಘಾಟಿಸುವರು.ಸಂಸ್ಥೆಯ ಅಧ್ಯಕ್ಷರಾದ ಅಲ್-ಹಜ್ ಜನಾಬ ಸಜ್ಜಾದೆ ಪೀರಾ ಮುಶ್ರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ವಿಷಯ ನಿರೂಪಕರಾಗಿ ಸಾಹಿತಿಗಳಾದ ಡಾ. ಮುರ್ತುಜಾಬೇಗಂ ಕೊಡಗಲಿ, ಡಾ.ಶಿವಾನಂದ ಕೆಲೂರ ಆಗಮಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಡಾ. ಸಿದ್ಧರಾಮ ಹೊನಕಲ್, ಮಹಾದೇವ ಬಸರಕೋಡ ಉಪಸ್ಥಿತರಿರುವರೆಂದು ಅಕಾಡೆಮಿಯ ಸದಸ್ಯ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಕೃತಿಯ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗುತ್ತಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ. ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ನೂರಾನಿ ಮುಗಲಾಯಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆರೋಗ್ಯ ಕೇಂದ್ರದ ಸಭಾಭವನದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಂತಾನ ನಿಯಂತ್ರಣಕ್ಕೆ ಮಾತ್ರಗಳು ಮತ್ತು ಚುಚ್ಚುಮದ್ದುಗಳು ಬಂದಿವೆ. ಅವುಗಳ ಕುರಿತು ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.ಈ ವೇಳೆ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಮಾತನಾಡಿ, ಕಲ್ಯಾಣ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳನ್ನು ಒದಗಿಸಬೇಕು. ಇದರಿಂದ ಜನಸಂಖ್ಯೆಯಲ್ಲಿ ಸ್ಥಿರತೆ ಕಾಪಾಡಬಹುದು. ಆದ್ದರಿಂದ ಇಲಾಖೆಯ ಸಿಬ್ಬಂದಿಯವರು…
