Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ‘ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತಿ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ ೧ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ: ೩೦-೧೧-೨೦೨೫ರೊಳಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನರಲ್ ಕೆ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೧೧-೨೦೨೫ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನರಲ್ ಕೆ ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೧೧-೨೦೨೫ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ,ಪದವಿ ಹಾಗೂ ವೃತ್ತಿಪರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ, ಪದವಿ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಶುಲ್ಕ ರಹಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:೩೦-೦೯-೨೦೨೫ರೊಳಗಾಗಿ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೧೯೯೩-೯೪ನೇ ಸಾಲಿನ ವಿದ್ಯಾರ್ಥಿಗಳಿಂದ ಗುರು ವಂದನೆ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮನುಷ್ಯ ಜೀವನ ಬಹಳ ಶ್ರೇಷ್ಠವಾದುದ್ದು, ನಮ್ಮ ಬದುಕಿಗೆ ಶ್ರೇಷ್ಠತೆ ಸಿಗಬೇಕಾದರೆ ಹೆತ್ತವರು ಮತ್ತು ವಿದ್ಯೆ ಕಲಿಸಿದ ಗುರುಗಳಿಂದ. ಹೀಗಾಗಿ ಹೆತ್ತವರು ಮತ್ತು ಬದುಕಿಗೆ ಬೆಳಕಾದ ಗುರುಗಳ ಸ್ಮರಣೆ ಮಾಡುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.ಅಫಜಲಪುರ ಪಟ್ಟಣದ ಮಳೇಂದ್ರ ಕಲ್ಯಾಣ ಮಂಟಪದಲ್ಲಿ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ೧೯೯೩-೯೪ನೇ ಸಾಲಿನ ವಿದ್ಯಾರ್ಥಿಗಳಿಂದ ನಡೆದ ಗುರುವಂದನೆ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಉದ್ಘಾಟಿಸಿ ಮಾತನಾಡಿದ ಅವರು, ಮಹಾಂತೇಶ್ವರ ಶಿಕ್ಷಣ ಸಂಸ್ಥೆ ಒಂದು ಸಂಸ್ಥಾನವಿದ್ದಂತೆ, ಅಲ್ಲಿ ಕಲಿತವರು ಇಂದು ರಾಜ್ಯದ ತುಂಬ ವಿವಿಧ ಹುದ್ದೆಗಳಲ್ಲಿದ್ದಾರೆ, ಉದ್ಯಮಿಗಳಾಗಿದ್ದಾರೆ, ಸಮಾಜಕ್ಕೆ ಮಾರ್ಗದರ್ಶಕರಾಗಿದ್ದಾರೆ, ರಾಜಕಾರಣಿಗಳಾಗಿದ್ದಾರೆ. ಅಂತಹ ವಿದ್ಯಾ ಸಂಸ್ಥೆಯಲ್ಲಿ ಕಲಿತವರು ತಮಗೆ ಕಲಿಸಿದ ಗುರುಗಳನ್ನು ಸ್ಮರಿಸಿ ಗುರುವಂದನೆ ಕಾರ್ಯಕ್ರಮ ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದರು.ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ, ೩೩ ವರ್ಷಗಳ ಬಳಿಕ ಹಳೆಯ ವಿದ್ಯಾರ್ಥಿಗಳು…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ನೂರು ಕೋಟಿ ಭಾರತೀಯರು ನೆಮ್ಮದಿಯಾಗಿ ಊಟ ಮಾಡಿ ಮಲಗೋದಕ್ಕೆ ಮುಖ್ಯಕಾರಣ ಅನ್ನದಾತರು. ಹೀಗಾಗಿ ರೈತರ ಬದುಕು ಹಸನಾಗಿಸುವ ಕೆಲಸ ಎಲ್ಲರೂ ಸೇರಿ ಮಾಡೋಣ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರೈತರಿಗೆ ಉಚಿತವಾಗಿ ನೀಡಿ ಮಾತನಾಡಿದ ಅವರು, ನಮ್ಮ ತಾಲೂಕಿನ ರೈತರು ಶ್ರಮಜೀವಿಗಳು, ಶ್ರಮಪಟ್ಟು ಕೃಷಿ ಮಾಡಿ ಬೆಳೆ ಬೆಳೆಯುತ್ತಾರೆ. ಹೀಗಾಗಿ ರೈತರ ಕಲ್ಯಾಣಕ್ಕಾಗಿ ನಾವು ಕೂಡ ಸಾಕಷ್ಟು ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ಇನ್ನೂ ಕೆಲವೇ ವರ್ಷಗಳಲ್ಲಿ ಇಡೀ ತಾಲೂಕು ನೀರಾವರಿ ಕ್ಷೇತ್ರವಾಗಿ ರೂಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ನಾವು ಮಾಡುತ್ತೇವೆ ಎಂದರು.ಸಹಾಯಕ ಕೃಷಿ ನಿರ್ದೇಶಕ ಎಸ್.ಎಚ್ ಗಡಗಿಮನಿ ಮಾತನಾಡಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರೈತರಿಗೆ ತೊಗರಿ, ಹೆಸರು, ಉದ್ದು ಬೀಜಗಳನ್ನು ವಿತರಿಸಲಾಯಿತು. ಸೂರ್ಯಕಾಂತಿ ಬೀಜಗಳು ಮಾತ್ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗಿದೆ ಎಂದ ಅವರು ಮುಂಗಾರು ಬಿತ್ತನೆ ಕಾರ್ಯ ತಾಲೂಕಿನಲ್ಲಿ ಭರದಿಂದ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿರುವ ಸಂಭ್ರಮದ ಅಂಗವಾಗಿ ಪಟ್ಟಣದ ಬಸ್ಟ್ಯಾಂಡ್ ಆವರಣದಲ್ಲಿ ಬಸ್ಸಿಗೆ ಪೂಜಾ ಮಾಡಿ ಸಾಂಕೇತಿಕವಾಗಿ ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಅಶೋಕಗೌಡ ಕೋಳಾರಿ ಟಿಕೇಟ ವಿತರಿಸಿದರು.ಈ ವೇಳೆ ಮಾತನಾಡಿದ ಅವರು, ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ನಮಗೆ ಹೆಮ್ಮೆಇದೆ ಎಂದು ಹೇಳಿದರು.ಮುಖಂಡ ರಮೇಶ ಬಂಟನೂರ ಮಾತನಾಡಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ನಡೆಸಿಕೊಟ್ಟರು ಎಂದು ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಸಾಧಿಕ್ ಸುಂಬಡ, ಡಾಕ್ಟರ್ ಮಲ್ಲು ಪ್ಯಾಟಿ, ಪ್ರಶಾಂತ ನಾಶಿ, ಅಬ್ದುಲ್ ವಾಬ ಸುಂಬಡ, ಅಪ್ಪುಗೌಡ ಹೊನ್ನಳ್ಳಿ, ಭೀಮು ಬೊಮ್ಮನಹಳ್ಳಿ,…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ನಿವಾಸಿ, ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ಪಾಕ ಆರ್.ಮುಲ್ಲಾ ಅವರಿಗೆ ಪಿ.ಆರ್.ಕೆ ಸಾಂಸ್ಕೃತಿಕ ವೇದಿಕೆಯವರು ಬೆಂಗಳೂರಿನ ಲಲಿತ ಕಲಾ ಮಹಲನಲ್ಲಿ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರಧಾನ ಮತ್ತು ಸನ್ಮಾನ ಸಮಾರಂಭದಲ್ಲಿ ಕರ್ನಾಟಕ ಭೂಷಣ ಪ್ರಶಸ್ತಿ-2025 ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಾ.ಕೃಷ್ಣ.ಟಿ, ಕಾರ್ಯದರ್ಶಿ ರತ್ನ ವೆಂಕಟೇಶ, ಸಹ-ಕಾರ್ಯದರ್ಶಿ ಪೂರ್ಣಿಮಾ ನಾರಾಯಣ ಸೇರಿದಂತೆ ಸಾಹಿತಿಗಳು, ಹಲವಾರು ಕ್ಷೇತ್ರದ ಸಾಧಕರಿದ್ದರು.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಧರ್ಮದ ಆಚರಣೆ, ಆರೋಗ್ಯ ರಕ್ಷಣೆಯ ಅರಿವು ಹಾಗೂ ಅಧ್ಯಾತ್ಮಿಕ ಚಿಂತನೆ ಕುರಿತು ಜಾಗೃತಿ ಮೂಡಿಸಲು ಶ್ರಾವಣ ಮಾಸದ ನಿಮಿತ್ತ ನಗರದ ವಿವಿಧ ಓಣಿಗಳಲ್ಲಿ ಓಲೆಮಠದ ಆಶ್ರಯದಲ್ಲಿ ಜು.25 ರಿಂದ ಆ.20ರವರೆಗೆ ವಚನ ಶ್ರಾವಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಓಲೆಮಠದ ಆನಂದ ದೇವರು ಹೇಳಿದರು.ಶ್ರಾವಣ ಮಾಸದ ನಿಮಿತ್ತ ಓಲೆಮಠದ ಆಶ್ರಯದಲ್ಲಿ ಹಮ್ಮಿಕೊಳ್ಳಲಿರುವ ವಚನ ಶ್ರಾವಣ ಕಾರ್ಯಕ್ರಮದ ಕುರಿತು ಶ್ರೀಮಠದ ಸಭಾಂಗಣದಲ್ಲಿ ಭಾನುವಾರ ನಡೆದ ಸದಕ್ಷರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಜು.25 ರಿಂದ ಆಗಸ್ಟ್ 20ರವರೆಗೆ ಪ್ರತಿದಿನ ಸಂಜೆ 6.30 ಗಂಟೆಗೆ ಕಾರ್ಯಕ್ರಮಗಳು ದಿನಕ್ಕೊಂದು ಓಣಿಯಲ್ಲಿ ನಡೆಯಲಿವೆ. ಸಂಜೆ 6.30 ರಿಂದ ಸಂಗೀತ ಸೇವೆ, 7ಗಂಟೆಯಿಂದ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ 7.30 ರಿಂದ ಶ್ರೀಗಳಿಂದ ಪ್ರವಚನ ನಡೆಯಲಿದೆ.ಆಸ್ತಿ, ಅಂತಸ್ತು, ಹಣ, ಚಿನ್ನ-ಬೆಳ್ಳಿ ಇವು ನಿಜವಾದ ಸಂಪತ್ತು ಅಲ್ಲ. ಕುಡಿಯುವ ನೀರು, ತಿನ್ನುವ ಅನ್ನ ಹಾಗೂ ಒಳ್ಳೆಯ ವಿಚಾರದ ಮಾತುಗಳು ನಿಜವಾದ ಸಂಪತ್ತು. ಆದ್ದರಿಂದ ಬಸವಾದಿ ಶಿವಶರಣರ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಮೀಪದ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಸೋಮವಾರ ಪೇಟೆಯ ನಾಮದೇವ ಗಲ್ಲಿಯ ಹನುಮ ದೇವಾಲಯದಲ್ಲಿ ಭಾನುವಾರ ಸಂಜೆ ಅರಳಿ ಮರದ ಕಾಂಡದಲ್ಲಿ ಶ್ರೀರಾಮನ ಬಂಟ ಹನುಮ ದೇವರನ್ನು ಹೋಲುವ ಆಕೃತಿ ಕಂಡುಬಂದಿದ್ದು, ಅದನ್ನು ವೀಕ್ಷಿಸಲು ಸಹಸ್ರಾರು ಜನರು ತಂಡೋಪತಂಡವಾಗಿ ಧಾವಿಸುತ್ತಿದ್ದಾರೆ.ಆಗಿದ್ದೇನು?: ಜೀರ್ಣೋದ್ದಾರ ಸಲುವಾಗಿ ದೇವಾಲಯ ಮುಂಭಾಗ ಇದ್ದ ಅರಳಿಮರ ಕಡಿದು ಕಟ್ಟಡ ನಿರ್ಮಾಣ ಮಾಡಲು ಸಮಿತಿ ಮುಂದಾಗಿತ್ತು. ಅರಳಿಮರದ ಕಾಂಡವನ್ನು ಅರ್ಧ ಕಡಿಯುವಷ್ಟರಲ್ಲಿ ಗರಗಸ ಸೇರಿದಂತೆ ಇತರೆ ಸಾಮಗ್ರಿಗಳು ಮುರಿದು ಹೋಗಿದ್ದು, ಮರಕ್ಕೆ ಯಾವುದೇ ರೀತಿ ಧಕ್ಕೆಯಾಗದೆ ಅರ್ಧಕ್ಕೆ ಕಾಂಡ ಮುರಿದಿದೆ. ಅದರೊಳಗೆ ಹನುಮನ ಚಿತ್ರ ಪ್ರತ್ಯಕ್ಷವಾಗುತ್ತಿದೆ ಎನ್ನಲಾಗಿದ್ದು, ಅಲ್ಲಿದ್ದಭಕ್ತರು ಪೂಜೆ ಸಲ್ಲಿಸಿ ಭಕ್ತಿ-ಭಾವ ಮೆರೆದರು.ವಿಷಯ ತಿಳಿದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಮರದಲ್ಲಿದ್ದ ಹನುಮನ ಆಕೃತಿ ನೋಡಿ ಅಚ್ಚರಿ ವ್ಯಕ್ತಪಡಿಸಿದರು.
