Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ನಾಡಿನ ಬಹುದೊಡ್ಡ ಪರಂಪರೆಯನ್ನು ಎತ್ತಿ ಹಿಡಿಯುವ ಮೂಲಕ ಬಯಸಿ ಬಂದ ಭಕ್ತರ ಭವಬಂಧನ ಕಳೆದು ಸುಜ್ಞಾನದಡೆಗೆ ಕೊಂಡೊಯ್ಯುವ ಕೆಲಸ ಮಠ ಮಾನ್ಯಗಳು ಮಾಡುತ್ತಿವೆ ಎಂದು ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.ಪಟ್ಟಣದ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನ ಹಾಗೂ ಹಿರೇಮಠ ಸಂಸ್ಥಾನದಲ್ಲಿ ಆಶ್ರಯದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ “ಗುರುಪೂರ್ಣಿಮೆ” ಮತ್ತು ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಸಿಕ ಸತ್ಸಂಗದ ಜೊತೆ ಜೊತೆಗೆ ಸಾಹಿತ್ಯ, ಸಂಗೀತ, ಕಲೆ, ಸಾಂಸ್ಕೃತಿಕ, ಕಾರ್ಯಕ್ರಮಗಳನ್ನು ಆಯೋಜಿಸುವ ದೃಢ ಸಂಕಲ್ಪದೊಂದಿಗೆ ಆರಂಭಗೊಂಡ ಶಿವಾನುಭವ ಗೋಷ್ಠಿ ಹತ್ತು ವರ್ಷ ಪೂರೈಸುತ್ತಿರುವುದು ಹೆಮ್ಮೆಯ ವಿಷಯ ಎಂದವರು, ಸದ್ಭಕ್ತರ ಬಾಳಲಿ ಜ್ಞಾನ ದೀವಿಗೆ ಹೊತ್ತಿಸಲು ಹೊಸ ಭಾಷ್ಯ ಬರೆದ ಚನ್ನಬಸವ ಶಿವಾಚಾರ್ಯರ ಕಾರ್ಯ ಅಭಿನಂದನೀಯ ಎಂದರು.ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು, ಶಿವಾನುಭವ ಗೋಷ್ಠಿ ಸಾಹಿತ್ಯ ಸಂಗೀತ ಕಾರ್ಯಕ್ರಮ ಮುನ್ನಡೆಸುತ್ತಿರುವ ಮಹಾನ್ ಕಾರ್ಯಕ್ಕೆ ಸದ್ಭಕ್ತರ ಸಹಕಾರವಿದ್ದು, ಶಿವಾನುಭವ…

Read More

ಯಡ್ರಾಮಿಯಲ್ಲಿ ಲಿಂ.ಸಿದ್ಧರಾಮ ಮಹಾಸ್ವಾಮಿಗಳ 4ನೇ ಪುಣ್ಯಾರಾಧನೆ ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಪಟ್ಟಣದ ಶ್ರೀ ಮುರಘೇಂದ್ರ ಶಿವಯೋಗಿ ವಿರಕ್ತಮಠದ ಲಿಂ.ಪೂಜ್ಯ ಸಿದ್ಧರಾಮ ಮಹಾಸ್ವಾಮಿಗಳ 4ನೇ ಪುಣ್ಯಾರಾಧನೆ ಕಾರ್ಯಕ್ರಮ ರವಿವಾರ ಜು.13ರಂದು ಜರುಗಲಿದೆ ಎಂದು ಶ್ರೀಮಠದ ಸದ್ಭಕ್ತ ಮಂಡಳಿ ತಿಳಿಸಿದೆ.ಮಠದ ಪ್ರಸ್ತುತ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮಿಗಳ ನೇತೃತ್ವದಲ್ಲಿ ರವಿವಾರ ಬೆಳಿಗ್ಗೆ ಲಿಂ. ಸಿದ್ಧರಾಮ ಮಹಾಸ್ವಾಮಿಗಳ ಕತೃ ಗದ್ದುಗೆಗೆ ಮಹಾ ರುದ್ರಾಭಿಷೇಕ , ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮ ನೆರವೇರಲಿದೆ. 10 ಗಂಟೆಗೆ ಉಚಿತ ಆರೋಗ್ಯ, ನೇತ್ರ ತಪಾಸಣೆ, ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಮಧುಮೇಹ, ರಕ್ತದೊತ್ತಡ ಹಾಗೂ ರಕ್ತದಾನ ಶಿಬಿರ ಶ್ರೀಮಠದ ಆವರಣದಲ್ಲಿ ನಡೆಯಲಿದೆ.ಶ್ರೀ ಮುರಘೇಂದ್ರ ಶಿವಯೋಗಿ ಫೌಂಡೇಶನ್ ಹಾಗೂ ಜೇವರ್ಗಿ, ಯಡ್ರಾಮಿ ತಾಲೂಕು ಆರೋಗ್ಯ ಸಮುದಾಯ ಕೇಂದ್ರ, ತಾಲೂಕು ಖಾಸಗಿ ವೈದ್ಯರ ಸಂಘ, ಕಲಬುರಗಿ ಬಿಲ್ವ ಆಸ್ಪತ್ರೆ, ತಾಲೂಕು ಮೆಡಿಕಲ್ ಅಸೋಸಿಯೇಶನ್, ಅನುಗ್ರಹ ಕಣ್ಣಿನ ಆಸ್ಪತ್ರೆ, ತಾಲೂಕು ವಿವಿಧ ಸಂಘಟನೆಗಳು ಹಾಗೂ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಸಹಯೋಗದಲ್ಲಿ ಆರೋಗ್ಯ…

Read More

ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟು ರಹಿತ ಅಂಗಡಿಗಳೇ ಹೆಚ್ಚಾಗಿವೆ. ಹೀಗಾಗಿ ಕೂಡಲೇ ಕೃಷಿ ಉತ್ಪನ್ನ ವಹಿವಾಟೇತರ ಅಂಗಡಿಗಳನ್ನು ಕೂಡಲೇ ತೆರವು ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿತು.ಸದರಿ ಸಮಸ್ಯೆ ಮುಂದಿಟ್ಟುಕೊಂಡು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಹೋರಾಟ ಮಾಡಿದ್ದೇವೆ. ಇದೀಗ ಕಳೆದ 46 ದಿನಗಳಿಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಇಲ್ಲಿನ ಜಲನಗರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕಳೆದ ೪ ದಿನಗಳಿಂದ ಮಹಾನಗರ ಪಾಲಿಕೆ ಪೌರ ಕಾರ್ಮಿಕರು ನಡೆಸುತ್ತಿರುವ ಮುಷ್ಕರಕ್ಕೆ ಜಿಲ್ಲಾ ಬಿಜೆಪಿ ಘಟಕದಿಂದ ಬೆಂಬಲ ಸೂಚಿಸಿದರು.ಈ ವೇಳೆ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ಬಿಜೆಪಿ ಸರ್ಕಾರವಿದ್ದಾಗ ೭ನೇ ವೇತನ ಆಯೋಗ ರಚಿಸಿತ್ತು. ಆದರೆ ೨ ವರ್ಷವಾದರೂ ರಾಜ್ಯ ಸರ್ಕಾರ ಜಾರಿ ಮಾಡಿಲ್ಲ. ಕಳೆದ ೪ ದಿನಗಳಿಂದ ಕೆಲಸ ಬಿಟ್ಟು ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಎದುರು ಧರಣಿ ನಡೆಸುತ್ತಿರುವ ಪೌರ ಕಾರ್ಮಿಕರ ಕಷ್ಟ ಕೇಳಲು ಜಿಲ್ಲೆಯ ಯಾವೊಬ್ಬ ಶಾಸಕರು ಬಂದಿಲ್ಲ. ಆದ್ದರಿಂದ ನಾಳೆಯಿಂದ ಅವರ ಮನೆಯ ಎದುರಿಗೆ ನಿಮ್ಮ ಕಸ ಹಾಕಿ ಆಗ ಅವರಿಗೆ ಬುದ್ದಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರ ನಾಯಕ ಮಾತನಾಡಿ, ಪೌರ ಕಾರ್ಮಿಕರ ೬ ಬೇಡಿಕೆಗಳು ಭಿಕ್ಷೆ ಅಲ್ಲ, ಅದು ನಿಮ್ಮ ಹಕ್ಕು. ಅದರಲ್ಲಿ ಹೊಸ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2022-23ನೇ ಸಾಲಿನಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆಗೊಂಡು, ಬಿಡುಗಡೆಯಾಗದೆ ಬಾಕಿ ಉಳಿದ ಅನುದಾನದಲ್ಲಿ ನಗರದ 7 ದೇವಸ್ಥಾನಗಳ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ರೂ.70 ಲಕ್ಷ ಅನುದಾನ ಮಂಜೂರಿಸಲಾಗಿದ್ದು, ಮೊದಲ ಕಂತಿನಲ್ಲಿ ರೂ.25 ಲಕ್ಷ ಬಿಡುಗಡೆಗೊಳಿಸಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.ವಾರ್ಡ್ ನಂ.22ರ ಜೋರಾಪುರ ಪೇಠ ಬಜಂತ್ರಿ ಓಣಿಯಲ್ಲಿರುವ ದುರ್ಗಾದೇವಿ ದೇವಸ್ಥಾನ ಹತ್ತಿರ ಸಮುದಾಯ ನಿರ್ಮಾಣಕ್ಕೆ ರೂ.10 ಲಕ್ಷ ಮಂಜೂರಾಗಿದ್ದು, ಇದರಲ್ಲಿ ರೂ.5 ಲಕ್ಷ ಬಿಡುಗಡೆ ಆಗಿದೆ. ವಾರ್ಡ್ ನಂ.2ರ ದರ್ಗಾದಲ್ಲಿರುವ ಕರಿಸಿದ್ದೇಶ್ವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.10 ಲಕ್ಷ ಮಂಜೂರಾಗಿದ್ದು, ಇದರಲ್ಲಿ ರೂ.5 ಲಕ್ಷ ಬಿಡುಗಡೆ ಆಗಿದೆ. ವಾರ್ಡ್ ನಂ.26ರ ದಿವಟಗೇರಿ ಗಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.10 ಲಕ್ಷ ಮಂಜೂರಾಗಿದ್ದು, ಇದರಲ್ಲಿ ರೂ.5 ಲಕ್ಷ ಬಿಡುಗಡೆ ಆಗಿದೆ.ವಾರ್ಡ್ ನಂ.9ರ ಚಂದಾಬಾವಡಿ ರಸ್ತೆಯಲ್ಲಿರುವ ಈಶ್ವರಲಿಂಗ ದೇವಸ್ಥಾನದ ಹತ್ತಿರ ಸಮುದಾಯ ಭವನ…

Read More

ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ತುಳಜಾ ಭವಾನಿ ಕಾಲೇಜ ಆಫ್ ನರ್ಸಿಂಗ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ತುಳಜಾ ಭವಾನಿ ನರ್ಸಿಂಗ ಕಾಲೇಜ್‌ನಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ನಿರ್ದೇಶನಾಲಯದ ರಾಜ್ಯ ಸಾಂಕ್ರಾಮಿಕ ರೋಗಗಳ ತಜ್ಞವೈದ್ಯರಾದ ಡಾ|| ಶ್ರೀನಿವಾಸ ಎಸ್ ಆರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್ ಗುಣಾರಿ ಜಂಟಿಯಾಗಿ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಅವರು ಮಾತನಾಡಿ, ಜನಸಂಖ್ಯೆ ದೇಶದ ಅಭಿವೃದ್ಧಿಗೆ ಒಂದು ಅತ್ಯಮೂಲ್ಯ ಸಂಪನ್ಮೂಲ. ಆದರೆ ಜನಸಂಖ್ಯೆ ಮಿತಿ ಮೀರಿದರೆ ದೇಶದ ಅಭಿವೃದ್ಧಿಗೆ ಮಾರಕ. ಇಂದು ಜಗತ್ತಿನ…

Read More

ಇಂಡಿಯಲ್ಲಿ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ & ಲೋಕಾರ್ಪಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ ವತಿಯಿಂದ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಸಮಾರಂಭ ಜುಲೈ ೧೪ರಂದು ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೧ ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಉಪಸ್ಥಿತರಿರಲಿದ್ದು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

Read More

ಐದೂ ವರ್ಷ ನಾನೇ ಸಿಎಂ |ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲಿ ನಡೆಯುತ್ತಿಲ್ಲ | ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನವದೆಹಲಿ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲಿ ನಾನು ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದೇವೆ. ನಿಗಮ-ಮಂಡಳಿಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆ ಮಾಡಿದ್ದೇವೆ, ಆದರೆ ನೇಮಕ ಪ್ರಕ್ರಿಯೆ ಪೂರ್ಣವಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಶುಕ್ರವಾರ ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ ಎಂದರು.ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ. ದೆಹಲಿ ಭೇಟಿಯಲ್ಲಿಯೂ ಅಧಿಕಾರ ಹಂಚಿಕೆ ಕುರಿತು ಚರ್ಚೆಯಾಗಿಲ್ಲ.ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ (ಮಹಾಬಲೇಶ್ವರ): ಮಹಾರಾಷ್ಟ್ರ, ಆಂದ್ರಪ್ರದೇಶ, ತೆಲಂಗಾಣ ರಾಜ್ಯಗಳೂ ಸೇರಿದಂತೆ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟ, ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಯ ರೈತ ಕುಟುಂಬಗಳಿಗೆ ಕೃಷ್ಣಾ ನದಿ ಜೀವನಾಡಿಯಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.ಮುಂಗಾರು ಹಂಗಾಮಿನ ಮೊದಲ ಹಬ್ಬವಾದ ಕಡ್ಲಿಗರ ಹುಣ್ಣಿಮೆಯಂದು ಮಹಾರಾಷ್ಟ್ರ ರಾಜ್ಯದ ಮಹಾಬಲೇಶ್ವರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಬಸವನ ಬಾಗೇವಾಡಿ ಮತಕ್ಷೇತ್ರದ ಹಾಗೂ ಅವಳಿ ಜಿಲ್ಲೆಗಳ ರೈತರ ನೂರಾರು ರೈತರೊಂದಿಗೆ ಕೃಷ್ಣೆಯ ಉಗಮ ಸ್ಥಾನವಾದ ಪಂಚಗಂಗಾ ನದಿಯಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಮಾತನಾಡಿದರು.ರೈತ ಕುಟುಂಬಗಳಿಗೆ ಕೃಷ್ಣಾ ನದಿ ಜೀವನಾಡಿಯಾಗಿದೆ. ಹೀಗಾಗಿ ಕಳೆದ ೧೯ ವರ್ಷಗಳಿಂದ ಕೃಷ್ಣೆಯ ಉಗಮ ಸ್ಥಾನವಾದ ಈ ಮಹಾಬಲೇಶ್ವರದಲ್ಲಿ ಬಸವನ ಬಾಗೇವಾಡಿ ಕ್ಷೇತ್ರವೂ ಸೇರಿದಂತೆ ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ರೈತಾಪಿ ಜನತೆಯೊಂದಿಗೆ ಗಂಗಾ ಪೂಜೆಯೊಂದಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಕೃಷ್ಣೆಯ ಜತೆಗೆ ಗಾಯತ್ರಿ, ಸಾವಿತ್ರಿ, ಕೋಯ್ನಾ, ವೆನ್ನಾ ನದಿಗಳಿಗೂ ಈ ಮಹಾಬಲೇಶ್ವರ ಉಗಮ ಸ್ಥಾನವಾಗಿದ್ದು ದಕ್ಷಿಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಹಾಗೂ ಹಿರಿಯ ಮುಖಂಡ ಎನ್.ತಿಪ್ಪಣ್ಣ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಅಧಿಕಾರಿಗಳು ಎರಡು ನಿಮಿಷಗಳ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು, ನಮ್ಮ ಮಹಿಳಾ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದ ಎನ್.ತಿಪ್ಪಣ್ಣ ಅವರು ವಿವಿ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆಯನ್ನು ಈ ಸಂದಭದಲ್ಲಿ ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ಚಿತ್ರದುರ್ಗ ಜಿಲ್ಲೆಯ ತುರುವನೂರಿನಲ್ಲಿ ಜನಿಸಿದ ಎನ್.ತಿಪ್ಪಣ್ಣ ಅವರು ಕರ್ನಾಟಕದ ಕಾನೂನು, ರಾಜಕೀಯ ಮತ್ತು ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆರು ದಶಕಗಳಿಗೂ ಹೆಚ್ಚು ಕಾಲ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ಅಗಲುವಿಕೆ ರಾಜ್ಯಕ್ಕೆ ಮತ್ತು ನಮ್ಮ ಮಹಿಳಾ ವಿವಿಗೆ ಅಪಾರ ನಷ್ಟ ಉಂಟು ಮಾಡಿದೆ ಎಂದರು.ಐಕ್ಯುಎಸಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಅವರು ಮಾತನಾಡಿ, ಎನ್.ತಿಪ್ಪಣ್ಣ ಅವರು, ಕರ್ನಾಟಕ ವಿಧಾನ ಪರಿಷತ್ತಿಗೆ ನಾಲ್ಕು…

Read More