Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆರೋಗ್ಯ ಸಂಪತ್ತು ಶ್ರೇಷ್ಠ ಸಂಪತ್ತು. ಇದನ್ನು ನಿಯಮಿತವಾಗಿ ಯೋಗ, ವ್ಯಾಯಾಮ, ಸಾತ್ವಿಕ ಆಹಾರ ಸೇವನೆ, ಸದ್ವಿಚಾರಗಳು ಮತ್ತು ದುಶ್ಚಟಗಳಿಂದ ದೂರವಿರುವುದರ ಮೂಲಕ ಪ್ರತಿಯೊಬ್ಬರೂ ಕಾಯ್ದುಕೊಳ್ಳಬೇಕು‌ ಎಂದು ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿಯವರು ಹೇಳಿದ್ದಾರೆ.ಗುರುಪೂರ್ಣಿಮೆಯ ಅಂಗವಾಗಿ ಇಂದು ಬುಧವಾರ ಮತ್ತು ನಾಳೆ ಗುರುವಾರ ನಗರದ ಜ್ಞಾನಯೋಗಾಶ್ರಮದಲ್ಲಿ, ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಅವರ ಮಹತ್ವಾಕಾಂಕ್ಷೆಯ ಜಲ, ವೃಕ್ಷ, ಶಿಕ್ಷಣ, ಆರೋಗ್ಯ ಅಭಿಯಾನದ ಮುಖಾಂತರ ವಿಜಯಪುರ ಜಿಲ್ಲೆಯನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ. ಆಶ್ರಮದ ಜ್ಞಾನದಾಸೋಹದಂತೆ ಬಿ. ಎಲ್.ಡಿ.ಇ. ಆಸ್ಪತ್ರೆಯು ಸ್ವಾಸ್ಥ್ಯ ದಾಸೋಹ ನೀಡುತ್ತಿದೆ ಎಂದು ಅವರು ಪ್ರಶಂಸಿಸಿದರು.ಶಿಬಿರದ ಸಂಚಾಲಕ ಮತ್ತು ಬಿ.ಎಲ್.ಡಿ.ಇ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ. ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.ರಾಜ್ಯ ಸಂಚಾಲಕ ಸಂತೋಷ ಪಾಟೀಲ ಡಂಬಳ ಮಾತನಾಡಿ, ತಮಿಳುನಾಡು 1968ರಿಂದಲೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನಾಟಕ ಸರ್ಕಾರ ರೈತರಿಗೆ ಗುಣಮಟ್ಟದ ಸಮರ್ಪಕ ವಿದ್ಯುತ್ ನೀಡುತ್ತಿದೆ, ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹಸುವಿನ ಯೋಜನೆಯನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ರೈತರಿಗೆ ಕರೆ ನೀಡಿದರು.ಸಿಂದಗಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಇಂಡಿ ಕೃಷಿ ವಿಜ್ಞಾನ ಕೇಂದ್ರ, ಸಿಂದಗಿಯ ಕೃಷಿಕ ಸಮಾಜ ಹಾಗೂ ಆಲಮೇಲ ಸಹಯೋಗದಲ್ಲಿ ೨೦೨೫-೨೬ ನೆಯ ಸಾಲಿನ ಕೃಷಿ ಯಂತ್ರೋಪಕರಣ ವಿತರಣೆ ಹಾಗೂ ಮುಂಗಾರು ಹಂಗಾಮಿನ ತಾಂತ್ರಿಕ ಮಾಹಿತಿ ಕಾರ್ಯಕ್ರಮದಕ್ಕೆ ಚಾಲನೆ ನೀಡಿ ಫಲಾನುಭವಿ ರೈತರಿಗೆ ಯಂತ್ರೋಪಕರಣ ವಿತರಿಸಿ ಅವರು ಮಾತನಾಡಿದರು.ಅಖಂಡ ಸಿಂದಗಿ ತಾಲೂಕು ಪರಿಪೂರ್ಣ ನೀರಾವರಿ ಕ್ಷೇತ್ರವಾಗಿದೆ. ರೈತರು ಹೆಚ್ಚು ವಾಣಿಜ್ಯ ಬೆಳೆ ಬೆಳಯುತ್ತಿದ್ದು, ನಿರಂತರ ಕೃಷಿ ಅಧಿಕಾರಿ ಮತ್ತು ವಿಜ್ಞಾನಿಗಳೊಂದಿಗೆ ಸಂಪರ್ಕದಲ್ಲಿ ಇರಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಅಸ್ಥಿತ್ವಕ್ಕೆ ಬಂದು ೨ವರ್ಷ ೨ತಿಂಗಳು ಕಳೆದಿವೆ. ಈ ಅವಧಿಯಲ್ಲಿ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿ ತಂದಿದ್ದಾರೆ.…

Read More

ಸಿಂದಗಿಯಲ್ಲಿ ಸಾಹಿತಿ ಕೆ.ಎಚ್.ಸೋಮಾಪೂರ ಅವರ ೧೩ನೇ ಕೃತಿ ’ಬಿಚ್ಚುಗತ್ತಿ’ ಗ್ರಂಥ ಲೋಕಾರ್ಪಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಶಿಕ್ಷಕ ವರ್ಗ ಕೌಶಲ್ಯ ಆಧಾರಿತ ಜ್ಞಾನ ನೀಡುವುದು ಇಂದು ಅವಶ್ಯವಾಗಿದೆ. ತಂತ್ರಜ್ಞಾನ ಅತ್ಯಂತ ವೇಗವಾಗಿ ಸಾಗುತ್ತಿದೆ. ವಿದ್ಯಾರ್ಥಿಗಳು ಪದವಿ ಪಡೆದರೆ ಸಾಲದು ಅದರೊಂದಿಗೆ ಸ್ವಯಾರ್ಜಿತ ಶಕ್ತಿ ಸಾಮಥ್ಯವನ್ನು ಬೆಳೆಸಿಕೊಂಡು ಮೌಲ್ಯಯುತವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಬೆಳಗಾಂವ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಸಿ.ಎಂ.ತ್ಯಾಗರಾಜ ಅವರು ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಥಕ ಸಂಸ್ಥೆ, ಸಾರಂಗಮಠದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ, ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜು, ಮಾತೋಶ್ರೀ ಗುರುಬಸಮ್ಮ ಹ.ಸೋಮಾಪೂರ ಸೇವಾ ಸಂಸ್ಥೆ ಹಾಗೂ ಲಾಯನ್ಸ್ ಕ್ಲಬ್ ಸಿಂದಗಿ ಇವುಗಳ ಸಹಯೋಗದಲ್ಲಿ ಸಾಹಿತಿ ಕೆ.ಎಚ್.ಸೋಮಾಪೂರ ಅವರ ೧೩ನೇ ಕೃತಿ ಬಿಚ್ಚುಗತ್ತಿ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದರು.ಪದವಿ ಮುಖ್ಯವಲ್ಲ ಅದರ ಜೊತೆಗೆ ಕೌಶಲ್ಯ ಆಧಾರಿತ ಜ್ಞಾನ ಮುಖ್ಯ ಎಂದ ಅವರು ರಾಣಿ ಚೆನ್ನಮ್ಮ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಪ್ರಾರಂಭಕ್ಕೆ ನಿವೇಶನ ಮಂಜೂರು ಮಾಡುವಂತೆ ಕೋರಿ ಜಿಲ್ಲಾ ಅಗ್ನಿಶಾಮಕದಳ ಅಧಿಕಾರಿ ಶಶಿಧರ ನಿಲಗಾರ ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಬುಧವಾರ ಆಗಮಿಸಿದ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಸಿಬ್ಬಂದಿ ತಹಶೀಲ್ದಾರರನ್ನು ಕಂಡು ನಿವೇಶನ ಮಂಜೂರ ಕುರಿತಂತೆ ಚರ್ಚಿಸಿದರು.ಈ ಸಂದರ್ಭದಲ್ಲಿ ಅಧಿಕಾರಿ ಶಶಿಧರ ಮಾತನಾಡಿ, ದೇವರಹಿಪ್ಪರಗಿ ತಾಲ್ಲೂಕು ಬೆಳವಣಿಗೆ ಹೊಂದುತ್ತಿದೆ. ಈಗ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬು ಬೆಳೆಗೆ ಬೆಂಕಿ ಸೇರಿದಂತೆ ಇತರ ಕಾರಣಗಳಿಂದ ಅಗ್ನಿಕರೆಗಳು ಬರುತ್ತಿವೆ. ಹೀಗೆ ಕರೆಗಳು ಬಂದಾಗ ಪಕ್ಕದ ತಾಲ್ಲೂಕು ಕೇಂದ್ರಗಳಾದ ಸಿಂದಗಿ, ಬಸವನ ಬಾಗೇವಾಡಿ ಹಾಗೂ ಜಿಲ್ಲಾ ಕೇಂದ್ರ ವಿಜಯಪುರದಿಂದ ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ವ್ಯರ್ಥವಾಗುವುದರಿಂದ ಸೇವೆ ತನ್ನ ಮಹತ್ವ ಕಳೆದುಕೊಳ್ಳುವ ಸಾಧ್ಯತೆಯಿರುತ್ತದೆ.ಅಗ್ನಿಶಾಮಕ ದಳ ಸಾರ್ವಜನಿಕ ಸೇವಾ ನಿರತ ಪಡೆ ಹಾಗೂ ಇಲಾಖೆಯಾಗಿದ್ದು, ನೈಸರ್ಗಿಕ ವಿಕೋಪ ಹಾಗೂ ಮಾನವ ನಿರ್ಮಿತ ವಿಪತ್ತುಗಳಲ್ಲಿ ಸಾರ್ವಜನಿಕ ಪ್ರಾಣರಕ್ಷಣೆ…

Read More

ಜ್ಞಾನ ಯೋಗಾಶ್ರಮದಲ್ಲಿ ಗುರುಪೂರ್ಣಿಮಾ ಮಹೋತ್ಸವ | ಮೊದಲ ದಿನವೇ 600ಕ್ಕೂ ಹೆಚ್ಚು ಭಕ್ತರಿಗೆ ತಪಾಸಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜ್ಞಾನ ಯೋಗಾಶ್ರಮದಲ್ಲಿ ಗುರುಪೂರ್ಣಿಮಾ ಮಹೋತ್ಸವ ಅಂಗವಾಗಿ ನಗರ ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರಾದ ಬಸನಗೌಡ ಪಾಟೀಲ ಯತ್ನಾಳ ರವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ (ಜೆ.ಎಸ್.ಎಸ್) ವತಿಯಿಂದ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಬುಧವಾರ ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.ಪ್ರತಿ ವರ್ಷದಂತೆ ನಗರದ ಜ್ಞಾನ ಯೋಗಾಶ್ರಮದಲ್ಲಿ ವೇದಾಂತ ಕೇಸರಿ ಮಲ್ಲಿಕಾರ್ಜುನ ಮಹಾಶಿವಯೋಗಿಗಳವರ ಸ್ಮರಣೋತ್ಸವ ಹಾಗೂ ಗುರುಪೂರ್ಣಿಮಾ ಅಂಗವಾಗಿ ಜೆ.ಎಸ್.ಎಸ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು, 6 ಜನ ನುರಿತ ವೈದ್ಯರು ಹಾಗೂ 10 ಜನಶುಶ್ರೂಕಿಯರ ತಂಡವು ಮೊದಲ ದಿನವೇ ವಿವಿಧೆಡೆಯಿಂದ ಆಗಮಿಸಿದ 600ಕ್ಕೂ ಹೆಚ್ಚು ಭಕ್ತರಿಗೆ ರಕ್ತದೊತ್ತಡ, ಮದುಮೇಹ ಹಾಗೂ ಇಸಿಜಿ ತಪಾಸಣೆ ನಡೆಸಲಾಯಿತು. ಗುರುಪೂರ್ಣಿಮೆ ದಿನವಾದ ಗುರುವಾರ 1,000ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ೨೦೧೬ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜು.೦೯ರಂದು ಅಧಿಕಾರ ಸ್ವೀಕರಿಸಿದರು.ವಿಜಯಪುರ ನಿರ್ಗಮಿತ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಬರ ಮಾಡಿಕೊಂಡು, ಹೂಗುಚ್ಛ ನೀಡಿ ಸ್ವಾಗತಿಸಿ, ಬುಧವಾರ ಅಧಿಕಾರ ಹಸ್ತಾಂತರಿಸಿದರು.ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವೈದ್ಯಕೀಯ ಪದವಿ ಪಡೆದಿರುವ ಇವರು, ಕಳೆದ ೨ ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಡಾ.ಆನಂದ ಕೆ ಅವರು ವಿಜಯಪುರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಯಾಗಿದ್ದಾರೆ.ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ, ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ತದನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಗಳಾಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ ಹಾಗೂ ಜಿಲ್ಲೆಯ ಇಂಡಿ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಕಾನೂನು ಪದವೀಧರರು sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ನಮೂನೆ, ಅಗತ್ಯ ದಾಖಲೆ ಸಹಿತ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿ ವಯೋ ನಿವೃತ್ತರಾಗಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಕನಾ೯ಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಮಖಂಡಿ ತಾಲೂಕು ಘಟಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕ್ಷೇತ್ರ ಸಮನ್ವಯಾಧಿಕಾರಿಗಳ ಕಾಯಾ೯ಲಯದಲ್ಲಿ ಪ್ರಸ್ತುತ 2025-26 ನೇ ಸಾಲಿನ ಜಮಖಂಡಿ ತಾಲ್ಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಗಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಚಿಕ್ಕಪಡಸಲಗಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಬಸವರಾಜ ಅನಂತಪೂರ ಹಾಗೂ ಜಮಖಂಡಿ ಡಿ.ಬಿ.ಇ.ಸಂಸ್ಥೆಯ ದೈಹಿಕ ಶಿಕ್ಷಕ ಮಲ್ಲು ಪಟ್ಟಣಶೆಟ್ಟಿ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಇಒ ಅಶೋಕ ಬಸಣ್ಣವರ, ಅನುಪಮ ಸೇವೆ ಸಲ್ಲಿಸಿ ವಿಶ್ರಾಂತ ಜೀವನಕ್ಕೆ ಕಾಲಿರಿಸಿರುವ ಈ ಮಹನೀಯರ ಸೇವಾವಧಿಯಲ್ಲಿನ ಕಾಯಕಗಳು ಕಾರ್ಯಕ್ಷಮತೆಯಿಂದ ಸಾಗಿವೆ.ಅನಂತಪೂರ ಅವರು ವೃತ್ತಿಯಿಂದ ನಿವೃತ್ತಿ ಹೊಂದಿದರು ಸಹ ಇನ್ನೂ ಚಿಕ್ಕಪಡಸಲಗಿ ಹರಳಯ್ಯ ಪ್ರೌಢಶಾಲೆಗೆ ಅವರ ಸೇವೆ ಲಭಿಸುತ್ತಿದೆ.ಇಂಥ ಸೇವಾಭಾವದ ಮನೋಭಾವವುಳ್ಳವರನ್ನು ಕಾಣುವುದು ವಿರಳ.ಮಕ್ಕಳಿಗೆ…

Read More

ಶಾಸಕರ ಸಮಸ್ಯೆ ಇತ್ಯರ್ಥವಾಗಲಿದೆ | ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹೆಚ್ಚಾಗಿದ್ದು, ಈ ನಡುವಲ್ಲೇ ಊಹಾಪೋಹಗಳಿಗೆ ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಹಲವು ಆಸೆಗಳು ಇರಬಹುದು. ಪಕ್ಷದಲ್ಲಿ ಹೈಕಮಾಂಡ್‌ ಇದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಗೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಇಬ್ಬರೂ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ತಾರತಮ್ಯ ಮಾಡದಂತೆ ಮನವೊಲಿಸಲು ಅವರು ಆಗಾಗ್ಗೆ ದೆಹಲಿಗೆ ಭೇಟಿ ನೀಡುತ್ತಾರೆ. ಇಬ್ಬರೂ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ ಹೇಗಿದೆ? ಗ್ಯಾರಂಟಿ ಯೋಜನೆಗಳ ಪರಿಣಾಮ ಇತ್ಯಾದಿ ಬಗ್ಗೆ ನಿರ್ದಿಷ್ಟ ಪ್ರಶ್ನೆಗಳಿಗೆ ಶಾಸಕರಿಂದ ಉತ್ತರ ಪಡೆಯುತ್ತಿದ್ದೇವೆ. ಶಾಸಕರಾಗಿ…

Read More