Author: editor.udayarashmi@gmail.com

ವಿಜಯಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ.ಎ ಸಲಹೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಊರು ಬದಲಾವಣೆಯಾದರೆ ಸಾಲದು ಅದರ ಜೊತೆಗೆ ವ್ಯವಸ್ಥೆ ಕೂಡ ಬದಲಾವಣೆಯಾಗಬೇಕು ಎಂದು ವಿಜಯಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಹೇಳಿದರು.ಪಟ್ಟಣದ ನ್ಯಾಯಾಲಯಕ್ಕೆ ಇಲ್ಲಿನ ನ್ಯಾಯವಾದಿಗಳ ಸಂಘದ ಆವ್ಹಾನದ ಮೇರೆಗೆ ಭೇಟಿ ನೀಡಿ, ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಕಾನೂನು ಮತ್ತು ಸಂವಿಧಾನದ ಮೌಲ್ಯಗಳನ್ನು ತಿಳಿದವರು ನಾವೆಲ್ಲ ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕು ಎಂದು ವಕೀಲರಿಗೆ ಸಲಹೆ ನೀಡುತ್ತ, ಇಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ಹೆಚ್ಚು ಪ್ರಕರಣಗಳು ಬಾಕಿ ಇರುವದರಿಂದ ಹೆಚ್ಚುವರಿ ನ್ಯಾಯಾಲಯದ ಬೇಡಿಕೆ ಸಂಘದಿಂದ ಬಂದಿದ್ದರಿಂದ ಈ ಪ್ರಸ್ತಾವನೆಯನ್ನು ಉಚ್ಛ ನ್ಯಾಯಾಲಯಕ್ಕೆ ರವಾನಿಸಿದ್ದೇನೆ. ಜು೧೨ ರಂದು ರಾಷ್ಟ್ರೀಯ ಲೋಕ್‌ಅದಾಲತ್ ಆಯೋಜಿಸಿದ್ದರಿಂದ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಎಲ್ಲ ವಕೀಲರಲ್ಲಿ ವಿನಂತಿಸುವದಾಗಿ ತಿಳಿಸಿದರು.೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಮಾತನಾಡಿ, ಪ್ರಧಾನ ಜಿಲ್ಲಾ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಗ್ರಾಮಿಣ ಬಾಗದ ಜನರಿಗೆ ಮತ್ತು ರೈತಾಪಿ ವರ್ಗಕ್ಕೆ ಅತ್ಯುನ್ನತ ಬ್ಯಾಂಕಿಂಗ್ ಸೇವೆ ಒದಗಿಸುವ ಮಹತ್ವಾಂಕ್ಷೆಯೊಂದಿಗೆ ಪ್ರಾರಂಭಗೊಂಡು ಅವರೊಂದಿಗೆ ಗ್ರಾಹಕ ಸ್ನೇಹಿ ಉತ್ತಮ ಪಾಲುದಾರಿಕೆಯೊಂದಿಗೆ ವ್ಯವಹರಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬ್ಯಾಂಕ್ ಆಗಿ ಬೆಳೆಯತ್ತಿರುವದು ಹೆಮ್ಮೆಯ ಸಂಗತಿಯಾಗಿದೆ ಎಂದು ತೆಲಸಂಗ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮ್ಯಾನೇಜರ್ ಸೀಮಾ ನಾಯಕ ಹೇಳಿದರು.ತೆಲಸಂಗ ಹೊಬಳಿ ಪತ್ರರ್ಕತರ ಗೆಳೆಯರ ಬಳಗದಿಂದ ತೆಲಸಂಗ ಗ್ರಾಮದ ಕೆ ವಿ ಜಿ ಬ್ಯಾಂಕಿನಲ್ಲಿ ಆಯೋಜಿಸಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಬ್ಯಾಂಕಿನ ವತಿಯಿಂದ ಸುಮಾರು ೫ ಸಾವಿರ ರೈತರಿಗೆ ಸರಕಾರ ಸಹಾಯದಿಂದ ಬೆಳೆಸಾಲವನ್ನು ವಿತರಿಸಲಾಗಿದೆ ಸದೃಡವಾದ ಆರ್ಥಿಕತೆಯನ್ನು ನಿರ್ಮಿಸಲು ಬ್ಯಾಂಕುಗಳು ಪಾರದರ್ಶಕ ಹಣಕಾಸಿನ ವ್ಯವಸ್ಥೆ ಅತ್ಯವಶ್ಯಕವಾಗಿರುತ್ತದೆ. ನಮ್ಮ ಕೆ ವಿ ಜಿ ಬಾಂಕ್ ಗ್ರಾಮಿಣ ಬಾಗದ ಆರ್ಥಿಕತೆಯನ್ನು ಸದೃಡಗೊಳಿಸಲು ಅವಶ್ಯವಿರುವ ಹಣಕಾಸಿನ ನೆರವು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ‌ ಎಂದರು.ನಾನು ಈ ಬ್ಯಾಂಕಿಗೆ ಮೊದಲ ಮಹಿಳಾ ಮ್ಯಾನೇಜರ್ ಆಗಿರುವದರಿಂದ ಈ ಬಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜು.೨೬ರಂದು ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತಗಿರಿಯಲ್ಲಿ ಸರ್ಕಾರದಿಂದ ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಸೌಲಭ್ಯ ಜಾರಿಗೊಳ್ಳಲು ಶ್ರಮಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ತಾಲೂಕು ಮಟ್ಟದ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲು ತೀರ್ಮಾನಿಸಲಾಯಿತು.ಈ ಕುರಿತು ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘದ ಅಧ್ಯಕ್ಷ ಮುತ್ತು ವಡವಡಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ಅಂದು ಬೆಳಿಗ್ಗೆ ೯ ಗಂಟೆಗೆ ಪ್ರಾರಂಭವಾಗುವ ಸಮಾರಂಭದಲ್ಲಿ ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮದ ಮೌಲ್ಯ, ಪತ್ರಕರ್ತರ ಕರ್ತವ್ಯ ಸೇರಿ ಹಲವು ವಿಷಯಗಳನ್ನು ತಿಳಿಸಿಕೊಡಲು ವಿಶೇಷ ಉಪನ್ಯಾಸ ಏರ್ಪಡಿಸಲು, ತಾಲೂಕಿನ ಸಂಘದ ಐವರು ಪತ್ರಕರ್ತರಿಗೆ ತಾಲೂಕು ಮಟ್ಟದ ಉತ್ತಮ ಪತ್ರಕರ್ತ ಪ್ರಶಸ್ತಿ ನೀಡಿ ಗೌರವಿಸಲು ಸಭೆಯಲ್ಲಿ ಎಲ್ಲರೂ ಒಪ್ಪಿಗೆ ನೀಡಿದರು.ಇದೇ ಸಮಾರಂಭದಲ್ಲಿ ಕೆಯುಡಬ್ಲುಜೆ ಜಿಲ್ಲಾ ನೂತನ ಅಧ್ಯಕ್ಷ ಪ್ರಕಾಶ ಬೆಣ್ಣೂರ ಅವರನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ ೯೨ ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. ಅಲ್ಲಲ್ಲಿ ಫಾಲ್ ಆರ್ಮಿವರ್ಮ ಕೀಟವು ಕಾಣಿಸಿಕೊಳ್ಳುತ್ತಿದ್ದು, ಮೂಲತಃ ಮೆಕ್ಕೆ ಜೋಳದ ಕೀಟವಾದರೂ ಜೋಳ, ಹತ್ತಿ, ಕಬ್ಬು, ಶೇಂಗಾ ಹಾಗೂ ಇತರೆ ಬೆಳೆಗಳನ್ನು ಬಾಧಿಸುತ್ತಿದೆ. ಕೀಟವು ಮೆಕ್ಕೆಜೋಳದ ಸುಳಿಯಲಿ ಹಗಲುರಾತ್ರಿ ಎಲೆ ಹಾಗೂ ಬೆಳೆ ಹಾನಿ ಮಾಡುತ್ತಿದೆ. ಕೀಟ ನಿಯಂತ್ರಣಕ್ಕೆ ರೈತರು ಸಾಮೂಹಿಕ ಹತೋಟಿ ಕ್ರಮಗಳನ್ನು ಕೈಗೊಳ್ಳಲು ಜಂಟಿ ಕೃಷಿ ನಿರ್ದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.ಈ ಕೀಟವು ಕಂದು ಬಣ್ಣದ ಪತಂಗವಾಗಿದ್ದು, ರೆಕ್ಕೆಯ ಅಂಚಿನಲ್ಲಿ ಬಿಳಿಯ ಪಟ್ಟಿಗಳನ್ನು ಹೊಂದಿರುತ್ತದೆ. ಇದರ ಜೀವಿತಾವಧಿ ೩೦ ರಿಂದ ೪೦ ದಿನಗಳಷ್ಟಾಗಿದ್ದು, ಸುಮಾರು ಸಾವಿರ ಮೊಟ್ಟೆಗಳನ್ನು ಇಡುವ ಶಕ್ತಿ ಹೊಂದಿದ್ದು, ೫೦ ರಿಂದ ೧೦೦ ಕಿ.ಮೀ ವರೆಗೆ ವಲಸೆ ಹೋಗುವ ಈ ಕೀಟವು, ತರಕಾರಿ ಬೆಳೆಗಳು, ಭತ್ತ, ಕಬ್ಬು, ಹತ್ತಿ ಹಾಗೂ ಜೋಳದ ಬೆಳೆಗಳನ್ನು ಬಾಧಿಸಬಹುದಾಗಿದೆ. ಇದರ ಮೊಟ್ಟೆ ಹಾಗೂ ಮರಿ ಹುಳುಗಳನ್ನು ಆರಿಸಿ ತೆಗೆಯಬೇಕು. ಮರಿಹುಳು ಕಂಡ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಮೂಲಭೂತ ಸಲಕರಣೆಗಳು, ವಿದ್ಯುತ್ ಕಂಬಗಳು ಹಾಗೂ ತಂತಿಗಳು ತುಂಡಾಗಿ ಹರಿದು ಬಿದ್ದು, ಹಾನಿಯನ್ನುಂಟು ಮಾಡುವ ಸಂಭವವಿರುವುದರಿಂದ ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ ಹೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸುವ ಮೂಲಕ ಜೀವಹಾನಿಯನ್ನು ತಪ್ಪಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.ಸ್ಥಾಪಿಸಲಾದ ಉಚಿತ ಸಹಾಯವಾಣಿ ಸಂಖ್ಯೆ ೧೯೧೨, ಗ್ರಾಹಕರ ದೂರು ಕೇಂದ್ರದ ದೂರವಾಣಿ ಸಂಖ್ಯೆ:೦೮೩೫೨-೨೭೬೯೪೦ ಮೊ:೯೪೮೦೮೮೨೬೯೦, ನಗರ ಉಪ ವಿಭಾಗ-೨ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೊ: ೯೪೪೮೩೭೫೭೧೧ಸಂಪರ್ಕಿಸಬಹುದಾಗಿದೆ.ವಿಜಯಪುರದ ಶಾಖೆ ನಂ.೦೩ರ ಶಾಖಾಧಿಕಾರಿ ನವೀನಕುಮಾರ ಮೊ:೯೪೮೦೮೮೨೬೩೫, ಶಾಖೆ ನಂಬರ್ ೦೪ರ ಶಾಖಾಧಿಕಾರಿ ಅಮಿತ್ ದಿನ್ನಿ ಮೊ: ೯೪೮೦೮೮೨೬೩೬, ಗೋಲಗುಂಬಜ್ ವ್ಯಾಪ್ತಿಯ ಶಾಖಾಧಿಕಾರಿ ಶ್ರೀಮತಿ ಫರೀಜಾ ಖಾನ್ ಮೊ;೯೪೮೦೮೮೨೬೭೬ ಹಾಗೂ ನಗರದ ನವರಸಪುರ ಶಾಖೆಯ ಶಾಖಾಧಿಕಾರಿ ಶಹಬಾಜ್ ಪಟೇಲ ಮೊ: ೯೪೮೦೮೮೨೬೮೧ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಸ್ಕಾಂನ ವಿಜಯಪುರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸರ್ಕಾರದ ಮಹಂತ್ವಕಾAಕ್ಷಿ ಯುವನಿಧಿ ಯೋಜನೆಯಲ್ಲಿ ೨೦೨೩-೨೪ ಮತ್ತು ೨೦೨೫ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅದರಂತೆ, ದಿನಾಂಕ ೦೭-೦೭-೨೦೨೫ ರಿಂದ ೦೭-೦೮-೨೦೨೫ರ ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ನೇರವಾಗಿ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.inನಲ್ಲಿ ತಮ್ಮ ಹತ್ತಿರದ ಕರ್ನಾಟಕ್ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ ೦೮೩೫೨-೨೫೦೩೮೩ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿನಿಮಯ ಕೇಂದ್ರದ ಉದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ ಹಾಗೂ ಆಲಮಟ್ಟಿಡ್ಯಾಂಸೈಟ್ ಸಂಪರ್ಕ ಕಲ್ಪಿಸಲು ಅಡ್ಡಿಯಾಗಿರುವ ಆಲಮಟ್ಟಿ ರೈಲು ನಿಲ್ದಾಣದ ಬಳಿ ರೈಲ್ವೆ ಅಂಡರ್ಪಾಸ್ ನಿರ್ಮಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.ಸೋಮವಾರ ಆಲಮಟ್ಟಿಗೆ ಭೇಟಿ ನೀಡಿದ ಅವರು ರೈಲ್ವೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ರೈಲ್ವೆ ಅಂಡರ್ ಪಾಸ್ ನಿರ್ಮಾಣದ ವಿಷಯದ ಕುರಿತು ನೈರುತ್ಯ ರೇಲ್ವೆ ಜನರಲ್ ಮ್ಯಾನೇಜರ್ ಅವರೊಂದಿಗೂ ಚರ್ಚಿಸುವೆ ಎಂದು ಹೇಳಿದರು.ಅಂಡರ್ ಪಾಸ್ ನಿರ್ಮಾಣಕ್ಕೆ ತಾಂತ್ರಿಕ ತೊಂದರೆಯ ಬಗ್ಗೆ ಅಧಿಕಾರಿಗಳು ಹೇಳಿದ್ದಾರೆ, ಅದನ್ನು ಬಗೆಹರಿಸಿಯಾದರೂ ಅಂಡರ್ ಪಾಸ್ ನಿರ್ಮಿಸಲು ಸೂಚಿಸಿದ್ದೇನೆ, ನೈರುತ್ಯ ರೇಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ ಅವರೊಂದಿಗೆ ಮಾತನಾಡುವೆ ಎಂದರು.ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಆಲಮಟ್ಟಿ-ಯಾದಗೀರಿ ರೈಲು ಮಾರ್ಗ ಸಮೀಕ್ಷೆಗೆ ಆದೇಶಿಸಲಾಗಿದೆ. ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲೆಲ್ಲಾ ಅಭಿವೃದ್ಧಿಯ ಪರ್ವ ಹರಡಿದೆ. ವಿಜಯಪುರ ಜಿಲ್ಲೆಯಲ್ಲಿಯೇ ಕೇಂದ್ರದಿಂದ ೧.೨೦ ಲಕ್ಷ ಕೋಟಿ ರೂಗಳ ಕಾಮಗಾರಿ ನಡೆದಿದೆ. ರಾಜ್ಯ ಸರ್ಕಾರದ ವತಿಯಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಳೆದ ಆರು ತಿಂಗಳಿಂದ ಸಂಬಳ ನೀಡದ…

Read More

ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ ಮೈಸೂರು: ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.ಕೇಂದ್ರದಲ್ಲಿ ಎನ್‌ಡಿಎ ಸರ್ಕಾರದ 11 ವರ್ಷಗಳ ಆಡಳಿತವನ್ನು ಗುರುತಿಸಲು ನಡೆದ ಬಿಜೆಪಿ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವವರೆಗೆ ತಾನು ವಿಶ್ರಮಿಸುವುದಿಲ್ಲ ಎಂದು ಘೋಷಿಸಿದ ಅವರು, ಕೇಂದ್ರದೊಂದಿಗೆ ಸಮನ್ವಯದಿಂದ ಡಬಲ್ ಎಂಜಿನ್ ಸರ್ಕಾರವಾಗಿ ಕೆಲಸ ಮಾಡುವುದಾಗಿ ಹೇಳಿದರು.ಹಳೇ ಮೈಸೂರು ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳುವ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದರಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಕಳಪೆ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಜನರು ಸರ್ಕಾರವನ್ನು ಶಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.ಉತ್ತಮ ರಸ್ತೆಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಚಿವ ಶಿವಾನಂದ ಪಾಟೀಲ ಅವರು ನನ್ನ ಕಾರ್ಯವೈಖರಿ ನೋಡಿ ವಿಶ್ವಾಸವಿಟ್ಟು ನಾನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಿದ್ದಾರೆ. ನಾನು ಈ ಸ್ಥಾನಕ್ಕೆ ಯಾವುದೇ ಚ್ಯುತಿ ಬಾರದಂತೆ ಪಟ್ಟಣಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಅಭಿವೃದ್ದಿಗೆ ಆದ್ಯತೆ ನೀಡಿದ್ದೇನೆ ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.ಪಟ್ಟಣದ ಪುರಸಭೆ ಕಾರ್ಯಾಲಯದ ತಮ್ಮ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪದವೀಧರೆಯಾಗಿದ್ದು, ಮಹಿಳೆಯರು ಸಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗುವಂತಾಗಲೆಂಬ ಉದ್ದೇಶದಿಂದ ಹಾಗೂ ಜನರ ಸೇವೆ ಮಾಡುವ ಉದ್ದೇಶದಿಂದ ನಾನು ರಾಜಕೀಯ ಕ್ಷೇತ್ರಕ್ಕೆ ಬಂದಿರುವೆ. ನಾನು ಕಾನೂನು ಚೌಕಟ್ಟಿನಲ್ಲಿ ಪುರಸಭೆ ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವೆ. ನನ್ನ ಅಧಿಕಾರದಲ್ಲಿ ನನ್ನ ಪತಿ ಸೇರಿದಂತೆ ಯಾರೂ ಹಸ್ತಕ್ಷೇಪ ಮಾಡುವದಿಲ್ಲ. ನನಗೆ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯರು, ಮುಖಂಡರು ನೀಡುವ ಮಾರ್ಗದರ್ಶನದಲ್ಲಿ ನಾನು ಮುನ್ನೆಡೆಯುತ್ತಿರುವೆ ಎಂದರು.ನಾನು ಉಪಾಧ್ಯಕ್ಷರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬುವದು ಸತ್ಯಕ್ಕೆ ದೂರದ ಮಾತು. ಪುರಸಭೆಯಿಂದ ತುರ್ತಾಗಿ ಕೈಗೊಳ್ಳಬೇಕಾದ ಕಾರ್ಯಗಳ ಸಂದರ್ಭದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಲಂಚುಗುಳಿತನ, ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಜೆಡಿಎಸ್ ಪಕ್ಷದ ಹಿರಿಯ ಉಪಾಧ್ಯಕ್ಷ ಧುರೀಣ ಸೋಮನಗೌಡ(ಅಪ್ಪುಗೌಡ) ಪಾಟೀಲ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಮುಂಭಾಗ ರಾಜ್ಯ ಸರ್ಕಾರದ ಆಡಳಿತ ವಿಫಲಗೊಂಡಿದ್ದೆ ರಾಜ್ಯಪಾಲರು ಸರ್ಕಾರದ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ ಮನವಿ ಪತ್ರವನ್ನು ತಹಸೀಲ್ದಾರ ಅವರಿಗೆ ಸೋಮವಾರ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ಮುಖಂಡರು ರಾಜ್ಯ ಸರ್ಕಾರದ ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ದಾಖಲೆಗಳೊಂದಿಗೆ ಮಾಧ್ಯಮದಲ್ಲಿ ಆರೋಪಿಸಿದ್ದಾರೆ. ವಸತಿ ಇಲಾಖೆಯು ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಬಡತನದ ಕುಟುಂಬಗಳ ನಿವೇಶನ ಹಾಗೂ ವಸತಿ ರಹಿತ ನೈಜ ಫಲಾನುಭವಿಗಳಿಗೆ ಮೀಸಲಾಗಿರುವ ವಸತಿ ಯೋಜನೆಗಳನ್ನು ಲಂಚ ನೀಡುವವರಿಗೆ ಮಾತ್ರ ನೀಡುತ್ತಿದೆ. ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ…

Read More