Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೀಯ ಸ್ವಯಂ ಸಂಘದ ಶತಮಾನೋತ್ಸವದ ಅಂಗವಾಗಿ ಸಿಂದಗಿ ನಗರದಲ್ಲಿ ಗಣವೇಷಧಾರಿಗಳಿಂದ ಪಥ ಸಂಚಲನ ಅದ್ದೂರಿಯಾಗಿ ಜರುಗಿತು.ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯೊಂದಿಗೆ ಪಟ್ಟಣದ ಸಾರಂಗಮಠದಿಂದ ಗಣವೇಷಧಾರಿಗಳ ಪಥ ಸಂಚಲನ ಅತ್ಯಂತ ಅದ್ದೂರಿಯಾಗಿ. ಪ್ರಾರಂಭಗೊಂಡಿತು.ಮಾಜಿ ವಿಪ ಸದಸ್ಯ ಅರುಣ ಶಹಾಪುರ, ರಮೇಶ ಭೂಸನೂರ, ಮುತ್ತು ಶಾಬಾದಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಂಭುಲಿಂಗ ಕಕ್ಕಳಮೇಲಿ, ಸಂತೋಷ ಪಾಟೀಲ ಡಂಬಳ, ಅಶೋಕ ಅಲ್ಲಾಪುರ, ಪ್ರದೀಪ ದೇಶಪಾಂಡೆ, ಶೇಖರ ಪಾಟೀಲ, ಡಾ.ಗಿರೀಶ ಕುಲಕರ್ಣಿ, ಡಾ.ಸಿದ್ರಾಮ ಚಿಂಚೊಳ್ಳಿ ಸೇರಿದಂತೆ ಅನೇಕ ಗಣ್ಯರು ಗಣವೇಷಧಾರಿ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.ಸಾರಂಗ ಮಠದಿಂದ ಪ್ರಾರಂಭಗೊಂಡು ಕನಕದಾಸ ವೃತ್ತ, ಹೆಗ್ಗೆರೇಶ್ವರ ದೇವಸ್ಥಾನ, ವಿ.ಎಮ್.ಕುಲಕರ್ಣಿ ಅಂಗಡಿ, ಹಳೆ ಬಜಾರ್, ನೀಲಗಂಗಾ ದೇವಸ್ಥಾನ, ವಿವೇಕಾನಂದ ವೃತ್ತ, ತೋಂಟದ ಸಿದ್ದಲಿಂಗ ಶ್ರೀಗಳ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ರೇ.ಚ.ರೇವಡಿಗಾರ ರಸ್ತೆಯ ಮಾರ್ಗ, ಅಂಬಿಗರ ಚೌಡಯ್ಯ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತದಿಂದ ಡಾ.ಎಂ.ಎಂ.ಕಲಬುರ್ಗಿ ರಸ್ತೆ ಮಾರ್ಗವಾಗಿ ಸಂಚರಿಸಿ ಆರ್.ಡಿ.ಪಾಟೀಲ ಕಾಲೇಜಿನ ಮೈದಾನಕ್ಕೆ ಪಥ ಸಂಚಲನ ಆಗಮಿಸಿ…

Read More

ಲೇಖನ- ವೀಣಾ ಹೇಮಂತ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಭಾರತ ದೇಶವು ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿರುವ ದೇಶ. ಹೆಜ್ಜೆ ಹೆಜ್ಜೆಗೂ ವಿವಿಧ ವೇಷ ಭೂಷಣ ಭಾಷೆ ಮತ್ತು ಸಂಸ್ಕೃತಿಗಳನ್ನು ಒಡಗೂಡಿಸಿಕೊಂಡಿರುವ ನಮ್ಮ ದೇಶದಲ್ಲಿ ಎಲ್ಲರೂ ಸಾರ್ವತ್ರಿಕವಾಗಿ ಆಚರಿಸುವ, ಆನಂದಿಸುವ ಹಬ್ಬ ದೀಪಾವಳಿ. ದೀಪಾವಳಿ ಎಂಬ ಹೆಸರನ್ನು ಕೇಳಿದ ಕೂಡಲೇ ಕಣ್ಣ ಮುಂದೆ ಕತ್ತಲನ್ನು ದೂರ ಮಾಡುವ ಬೆಳಕನ್ನು ಸೂಸುವ ಸಾಲು ಹಣತೆಗಳ ಸಾಲು ನರ್ತನಗೈಯುತ್ತದೆ.ದೀಪಾವಳಿ ಹಬ್ಬ ಎಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ, ಇದು ಸಾಲು ಸಾಲು ಹಬ್ಬಗಳ ಆಚರಣೆಯ ಹಬ್ಬ. ಸುಮಾರು ಐದು ದಿನಗಳ ಕಾಲ ಸಡಗರ ಸಂಭ್ರಮದಿಂದ ಆಚರಿಸಲ್ಪಡುವ ಈ ಹಬ್ಬ ಜಗತ್ತಿನಾದ್ಯಂತ ತನ್ನ ಬೆಳಕನ್ನು ಪಸರಿಸುತ್ತದೆ.ಪೌರಾಣಿಕ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಗಳನ್ನು ಹೊಂದಿರುವ ದೀಪಾವಳಿ ಹಬ್ಬ ನಮ್ಮ ದೇಶದ ಪ್ರಮುಖ ರಾಷ್ಟ್ರೀಯ ಹಬ್ಬವಾಗಿ ಪರಿಗಣಿಸಲ್ಪಟ್ಟಿದೆ.ರಾಮನು ಸ್ವರ್ಣಲಂಕೆಯಲ್ಲಿ ರಾಕ್ಷಸೇಂದ್ರ ರಾವಣನನ್ನು ಕೊಂದು, ಆತನ ಸಹೋದರ ವಿಭೀಷಣನಿಗೆ ಪಟ್ಟ ಕಟ್ಟಿ, ಅಯೋಧ್ಯೆಯೆಡೆಗೆ ಪ್ರಯಾಣ ಬೆಳೆಸಿದ. ಕಾರ್ತಿಕದ ಆ…

Read More

ಇಂದು (ಅಕ್ಟೋಬರ್ ೨೦, ಸೋಮವಾರ) ಗದಗ ತೋಂಟದಾರ್ಯ ಮಠದ ತ್ರಿವಿಧ ದಾಸೋಹಿ ಡಾ.ಸಿದ್ದಲಿಂಗ ಜಗದ್ಗುರುಗಳು ಲಿಂಗೈಕ್ಯರಾಗಿ, ಬಯಲಲ್ಲಿ ಬಯಲಾದ ದಿನ. ಅವರ ಪುಣ್ಯಸ್ಮರಣೆ ನಿಮಿತ್ತ ಈ ವಿಶೇಷ ಲೇಖನ ಲೇಖನ- ಶಿಲ್ಪಾ ಮೃತ್ಯುಂಜಯ ಮಿಣಜಿಗಿಶಿಕ್ಷಕರುಧಾರವಾಡಮಾಹಿತಿಶರಣೆ ರತ್ನಕ್ಕ ಪಾಟೀಲ, ಗದಗ ಉದಯರಶ್ಮಿ ದಿನಪತ್ರಿಕೆ “ನುಡಿದರೆ ಮುತ್ತಿನ ಹಾರದಂತಿರಬೇಕು,ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು,ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು,ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು,ನುಡಿಯೊಳಗಾಗಿ ನಡೆಯದಿದ್ದರೆಕೂಡಲಸಂಗಮದೇವನೆಂತೊಲಿವನಯ್ಯ” ಎನ್ನುವ ವಚನದಂತೆ ತಮ್ಮ ಶಿವನುಭವ ಪ್ರವಚನದ ಮೂಲಕ ಶಿವ ಶರಣರ ವಚನ ತತ್ವಗಳನ್ನು ಭೋಧಿಸಿದಂತಹ ಮತ್ತು ಅನುಷ್ಠಾನಕ್ಕೆ ತಂದಂತಹ ಕೀರ್ತಿ ನಮ್ಮ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಸಲ್ಲುತ್ತದೆ ಪ್ರವಚನ ಅಷ್ಟೇ ಅಲ್ಲದೆ ತ್ರಿವಿಧ ದಾಸೋಹಿ ಎಂಬ ಹೆಗ್ಗಳಿಕೆಗೆ ಭಾಜನರದಂತಹ ಶ್ರೇಷ್ಠ ವ್ಯಕ್ತಿತ್ವ ಅವರದು.ತೋಂಟದಾರ್ಯ ಮಠದ ಇತಿಹಾಸ ಮತ್ತು ಪ್ರಮುಖ ಘಟನೆಗಳುತೋಂಟದಾರ್ಯ ಮಠವು 15ನೇ ಶತಮಾನದಲ್ಲಿ ಶಿವಯೋಗಿ ಸೂರ್ಯ ಶ್ರೀ ಯಡೆಯೂರು ತೋಂಟದ ಸಿದ್ಧಲಿಂಗ ಯತಿಗಳ ನೇರ ವಾರಸುದಾರಿಕೆಯ ಮಠವಾಗಿದೆ. ಈ ಮಠ ಲಿಂಗಾಯತ ಪರಂಪರೆಯಲ್ಲಿಯೇ ವಿಶೇಷ ಸ್ಥಾನ ಹೊಂದಿದೆ 19ನೇ ಪೀಠಾಧಿಕಾರಿಗಳಾಗಿ ಜಗದ್ಗುರು ಡಾ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಬತಗುಣಕಿ ಗ್ರಾಮದಲ್ಲಿ ಇತ್ತೀಚೆಗೆ ಬಯಲಾಟ ಕಲಾವಿದರ ಸಮೀಕ್ಷೆಯನ್ನು ನಡೆಸಲಾಯಿತು.ಗ್ರಾಮದ ಬಸವಣ್ಣ ದೇವರ ಗುಡಿಯ ಆವರಣದಲ್ಲಿ ಹಲವಾರು ಕಲಾವಿದರು ಪಾಲ್ಗೊಂಡು ತಮ್ಮ ತಮ್ಮ ಮಾಹಿತಿಯನ್ನು ದಾಖಲಿಸಿದರು.ರಾಜ್ಯ ಬಯಲಾಟ ಅಕಾಡೆಮಿ ಅಧ್ಯಕ್ಷ ಕೆ.ಆರ್. ದುರ್ಗಾ ದಾಸ್ ಅವರ ನಿರ್ದೇಶನದ ಮೇರೆಗೆ ವಿಜಯಪುರದ ಡಾ. ಮೀನಾಕ್ಷಿ ಪಾಟೀಲ್ ಅವರು ಕಲಾವಿದರ ಸಮೀಕ್ಷಾ ಕಾರ್ಯವನ್ನು ನಡೆಸಿದರು.ಇಂಡಿ ತಾಲೂಕಿನ ಬತಗುಣಕಿ ಗ್ರಾಮದಲ್ಲಿ ಬಯಲಾಟ ತಂಡದ ಮುಖ್ಯಸ್ಥರಾದ ಕಾಶಿನಾಥ ಪಾಟೀಲ್ ಅವರ ಮುಖಂಡತ್ವದಲ್ಲಿ ಸುಮಾರು 60ಕ್ಕಿಂತ ಹೆಚ್ಚು ಕಲಾವಿದರು ತಮ್ಮ ಹೆಸರನ್ನು ನೋಂದಾಯಿಸಿದರು.ಗ್ರಾಮೀಣ ಜನತೆ ತಮ್ಮ ನಿತ್ಯದ ಕೃಷಿ ಕಾಯಕದೊಂದಿಗೆ ಈಗಲೂ ಈ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಅಭಿಮಾನದ ಸಂಗತಿ ಎಂದು ಕಲಾವಿದರನ್ನು ಕುರಿತು ಡಾ. ಮೀನಾಕ್ಷಿ ಪಾಟೀಲ್ ಮಾತನಾಡಿದರು. ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಇಂಥ ಅಪರೂಪದ ಮೂಲ ಕಲೆಗಳು ಮರೆಯಾಗುತ್ತಿರುವುದನ್ನು ಮನಗಂಡು, ಮತ್ತೆ ಅದನ್ನು ಪುನಶ್ಚೇತನಗೊಳಿಸುವ ಪ್ರಯತ್ನವಾಗಿ ಆಗಾಗ ಬಿಡುವಿನ ವೇಳೆಯಲ್ಲಿ ಬಯಲಾಟ ಪ್ರದರ್ಶನವನ್ನು ಮಾಡುತ್ತಿರುವ ಕಲಾವಿದರ ಬಗ್ಗೆ…

Read More

ರಸ್ತೆ ಅಗಲೀಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸರ್ಕಾರ ರಸ್ತೆ ಅಗಲೀಕರಣ ಮಾಡಲು ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿನ ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮಾಡುವ ಈ ನಿಯಮಾವಳಿಗಳನ್ನು ಗಾಳಿ ತೂರಿ ರಸ್ತೆ ಅಗಲೀಕರಣ ಮಾಡುವ ಮೂಲಕ 142 ಕುಟುಂಬಗಳು ನಿರಾಶ್ರಿತರಾಗುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಅನ್ಯಾಯವಾದ ಜನರಿಗೆ ನ್ಯಾಯ ಸಿಗುವವರೆಗೂ ಈ ಹೋರಾಟಕ್ಕೆ ಸದಾ ನನ್ನಬೆಂಬಲವಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಮಿನಿವಿಧಾನಸೌಧದ ಆವರಣಗೋಡೆಗೆ ಹೊಂದಿಕೊಂಡಂತೆ ಹಾಕಲಾಗಿರುವ ಶಾಮಿಯಾನದಲ್ಲಿ ಕಳೆದ ಮೂರು ದಿನಗಳಿಂದ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ರಸ್ತೆ ಅಗಲೀಕರಣ ನೆಪದಲ್ಲಿ ಸ್ವಂತ ಮನೆಗಳನ್ನು ದ್ವಂಸಮಾಡಿ 142 ಕುಟುಂಬಗಳನ್ನು ಬೀದಿಗೆ ತಳ್ಳಿದ ಕ್ರಮವನ್ನು ಖಂಡಿಸಿ ಹಾಗೂ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡುವದು, ತಪಿಸ್ಥತ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು,…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುವ ಮೊಬೈಲ್ ದುರ್ಬಳಕೆಯಿಂದ ದೂರವಿದ್ದುಕೊಂಡು ಆಧುನಿಕ ಜಗತ್ತಿನಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲಲು ಸಕಾರಾತ್ಮಕ ಭಾವನೆಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವಂತಾಗಬೇಕೆಂದು ಕಂದಾಯ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್. ಎಸ್,ಐ ಕ್ಯೂ ಎ ಸಿ ಹಾಗೂ ವಿವಿಧ ಘಟಕಗಳ ಉದ್ಘಾಟನೆ ಸಮಾರಂಭ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ವೈಯಕ್ತಿಕ ಹಾಗೂ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಚ ಪಟ್ಟಣಶೆಟ್ಟಿ ಮಾತನಾಡಿ, ಈ ಕಾಲೇಜಿನಲ್ಲಿ ಉತ್ತಮ ಶಿಕ್ಷಣ ದೊರಕುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಈ ಕಾಲೇಜಿಗೆ, ನಿಮ್ಮ ತಂದೆ ತಾಯಂದಿರಿಗೆ ಕೀರ್ತಿ ತರುವ ಕಾರ್ಯ ವಿದ್ಯಾರ್ಥಿಗಳು ಮಾಡುವಂತಾಗಬೇಕು. ಕಾಲೇಜಿನ ಅಭಿವೃದ್ಧಿಗೆ ನಾನು ಸದಾ ಸಿದ್ಧನಾಗಿದ್ದೇನೆ. ಎಲ್ಲರೂ ಕಾಲೇಜಿನ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳಬಸವನಬಾಗೇವಾಡಿ: ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಭರದ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಟ್ಟಣದಲ್ಲಿ ಕೆಲ ದಿನಗಳಿಂದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಹೊಸ ಬಟ್ಟೆ, ಸೀರೆ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಟ್ಟೆ ಅಂಗಡಿಗಳಲ್ಲಿ ಕಂಡು ಬರುತ್ತಿದ್ದಾರೆ. ದೀಪಾವಳಿ ಹಬ್ಬವು ನಾಳೆಯಿಂದ ಆರಂಭವಾಗುತ್ತಿರುವದರಿಂದಾಗಿ ಶನಿವಾರ ಬಟ್ಟೆ ಅಂಗಡಿ ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ವಿವಿಧೆಡೆಗಳಿಂದ ಜನರು ಆಗಮಿಸಿದ್ದು ಕಂಡು ಬಂತು.ದೀಪಾವಳಿ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿಗಳು, ಆಕಾಶ ಬುಟ್ಟಿ, ಹೊಸ ಬಟ್ಟೆ ಸೇರಿದಂತೆ ಇನ್ನೀತರ ವಸ್ತುಗಳನ್ನು ಖರೀದಿಸುವಲ್ಲಿ ಜನರು ತುಂಬಾ ಬ್ಯುಸಿಯಾಗಿದ್ದಾರೆ. ದೀಪಾವಳಿ ಹಬ್ಬವನ್ನು ಎಲ್ಲ ಜನರು ಆಚರಿಸಲು ಸಿದ್ದಗೊಳ್ಳುತ್ತಿದ್ದಾರೆ.ವರ್ಷಕ್ಕೊಮ್ಮೆ ಬರುವ ಈ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲು ಕಳೆದ ಹಲವು ದಿನಗಳಿಂದಲೇ ಜನರು ತಮ್ಮ ಮನೆ, ಅಂಗಡಿ-ಮುಂಗಟ್ಟುಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ ಕೊಂಡಿದ್ದರು. ಇದೀಗ ಸಂಭ್ರಮದ ದೀಪಾವಳಿ ಹಬ್ಬಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಭಾನುವಾರ ನೀರು ತುಂಬುವ ಹಬ್ಬದಿಂದ ಆರಂಭವಾಗುವ ದೀಪಾವಳಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ೫೦ ನೇ ವರ್ಷದ ಸುವರ್ಣ ಮಹೋತ್ಸವ ಸಮಾರಂಭದ ಅಂಗವಾಗಿ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ-ಸಂಸ್ಥೆಗಳನ್ನು ಗುರುತಿಸುವುದಕ್ಕಾಗಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟುಗಳು ಇತರೆ) ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆ ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಮೂರು ವ್ಯಕ್ತಿಗಳಿಗೆ-ಸಂಸ್ಥೆಗಳಿಗೆ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಪರಿಸರ ಸಂರಕ್ಷಣೆ-ಪರಿಸರ ವ್ಯವಸ್ಥಾಪನೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ಆರಂಭಶೀಲತೆ, ಯೋಜನೆ, ಕಾರ್ಯಕ್ರಮಗಳ ಮೂಲಕ ನೀಡಿರುವ ಕೊಡುಗೆಯ ಮೌಲ್ಯನಿರ್ಣಯ ಮಾಡಲಾಗುವುದು.ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸರ್ಕಾರೇತರ ಸಂಸ್ಥೆಗಳಿದ್ದಲ್ಲಿ ನೊಂದಣಿಯಾಗಿ ಕನಿಷ್ಠ ಮೂರು ವರ್ಷಗಳಾಗಿರಬೇಕು. ಈ ಪ್ರಶಸ್ತಿಗಾಗಿ ಪರಿಗಣಿಸಲಾಗುವ ವ್ಯಕ್ತಿ, ಸಂಸ್ಥೆಯ ಆರಂಭಶೀಲತೆ, ಕಾರ್ಯಕ್ರಮಗಳು, ಸುಸ್ಥಿರ ಯೋಜನೆಗಳು, ಕೊಡುಗೆಗಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಕ್ಟೋಬರ್ ೨೧ ರಂದು ಬೆಳಿಗ್ಗೆ ೮ ಗಂಟೆಗೆ ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ವಿಜಯಪುರ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ಆಚರಿಸಲಾಗುವುದು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಹರೀಶ ಎ.ಅವರು ಆಗಮಿಸುವರು. ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಶೇಷ ಅತಿಥಿಗಳಾಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ ಉಪಸ್ಥಿತರಿರುವರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ವೀರ ಪರಿವಾರ ಸಹಾಯತಾ ಯೋಜನೆ-೨೦೨೫ರ ಅಡಿಯಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ಕಾನೂನು ಸಲಹೆಗಳನ್ನು ನೀಡಲು ಉಚಿತ ಕಾನೂನು ಸೇವೆಗಳ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ.ಪ್ರತಿ ಗುರುವಾರ ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೫ಗಂಟೆಯವರೆಗೆ ವಕೀಲರಾದ ಜಾವೇದ್ ಎಸ್ ಗುಡಗಂಟಿ ಅವರು ಕಾನೂನು ಸೇವೆಗಳ ಕುರಿತು ಜಿಲ್ಲಾ ಸೈನಿಕ ಕಾರ್ಯಲಯದಲ್ಲಿ ಸಲಹೆ ನೀಡಲಿದ್ದು, ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More