Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯ ವತಿಯಿಂದ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕ್ರೀಡಾ ಸಾಧಕರಿಂದ ಅರ್ಜುನ ಪ್ರಶಸ್ತಿ, ರಾಷ್ಟೀಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ ಹಾಗೂ ಧ್ಯಾನ್ ಚಂದ್ ಖೇಲ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಕ್ರೀಡಾ ಸಾಧಕರು ವೆಬ್‌ಸೈಟ್ ತಿತಿತಿ.ಜbಣಥಿಚಿs.sಠಿoಡಿಣs.govನಲ್ಲಿ ಅಕ್ಟೋಬರ್ ೨೮ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೧೧-೨೩೩೮೭೪೩೨, ಉಚಿತ ಸಹಾಯವಾಣಿ ಸಂಖ್ಯೆ: ೧೮೦೦-೨೦೨-೫೧೫೫, ೧೮೦೦-೨೫೮-೫೧೫೫ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಯ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಬೆಂಗಳೂರಿನ ವಿದ್ಯಾನಗರದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಖೇಲೋ ಇಂಡಿಯಾ ನಿಯಮನುಸಾರ ಸ್ಟೆçಂಥ್ ಆ್ಯಂಡ್ ಕಂಡಿಷನಿಂಗ್ ಎಕ್ಸರ‍್ಟ್ ಲೀಡ್, ಯಂಗ್ ಪ್ರೋಪೆಷನಲ್ ಹಾಗೂ ಮೆಸ್ ಗೌರವ ಧನದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಲಯದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳನ್ನು ನೋಟರಿ ಮಾಡಿಸಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ನವೆಂಬರ್ ೧೬ರೊಳಗಾಗಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫ ಹಾಗೂ ೭೦೧೯೦೦೮೪೪೩ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಯ ನಿರ್ದೇಶಕರಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗಾಯನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶ್ರೀಮತಿ ವಿಜಯಾ ಕೋಲ್ಹಾರ ಅವರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಹಾಗೂ ಸರ್ಕಾರಿ ನಿವೃತ್ತ ನೌಕರರ ಸಂಘ ವತಿಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಎಸ್. ಪಿ. ಬಿರಾದಾರ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ಜಗದೀಶ ಕೆಂಪಲಿಂಗಣ್ಣವರ, ರೇಣುಕಾ ಹುಣಸಗಿಡದ, ಯೋಶದ ಗುಜ್ಷರ, ಎ.ಎಸ್. ನಿಂಬಾಳ, ಮಲ್ಲಿಕಾರ್ಜುನ ಶಿಮಗೊಂಡ ಇತರರು ಉಪಸ್ಥಿತರಿದ್ದರು.

Read More

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಸಿಪಿ-ಟಿಎಸ್‌ಪಿ ಇದೊಂದು ಕಾಯ್ದೆಯಾಗಿದೆ. ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ೨೦೨೫-೨೬ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಸೆಪ್ಟಂಬರ್ ೨೦೨೫ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಬೇಕು. ಸಂಬಂಧಿಸಿದ ಇಲಾಖೆಗಳು ಈ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇದ್ದ ಸಂದರ್ಭದಲ್ಲಿ ಶೋಕಾಸ್ ನೋಟಿಸ್ ನೀಡಲು ಹಾಗೂ ನಿಗದಿತ ಅವಧಿಯಲ್ಲಿ ಎಸ್‌ಸಿಪಿ ಟಿಎಸ್‌ಪಿ ಅನುದಾನ ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರುಗಿಸಲು ಅವಕಾಶವಿರುವುದರಿಂದ ಇದಕ್ಕೆ ಆಸ್ಪದ ನೀಡದೇ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅ.೧೯ರಿಂದ ೨೫ ರವರೆಗೆ ಆಚರಿಸುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦ ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಪಟಾಕಿ ಮಾರಾಟ ವರ್ತಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಹಾಗೂ ಪರಿಸರ ಹಾನಿ ಉಂಟಾಗುವ ಯಾವುದೇ ಪಟಾಕಿಗಳನ್ನು ಮಾರಾಟ ಮಾಡದಂತೆ ತಿಳಿಸಲಾಗಿದ್ದು, ಸಾರ್ವಜನಿಕರು ಹಸಿರು ಪಟಾಕಿ ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ನವೆಂಬರ್ ೧ರಂದು ಸನ್ಮಾನ ಮಾಡಲು ಉದ್ದೇಶಿಸಲಾಗಿದೆ.ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ, ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನು ಒಳಗೊಂಡಂತೆ ತಮ್ಮ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೭-೧೦-೨೦೨೫ ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸನಾತನಿಗಳ ಸಹವಾಸದಿಂದ ದೂರ ಇರಿ | ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ ಮೈಸೂರು: ರಾಜ್ಯದ ಜನತೆ ‘ಸನಾತನಿಗಳ’ ಸಹವಾಸವನ್ನು ತಪ್ಪಿಸಬೇಕು ಮತ್ತು ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.RSS ಹಾಗೂ ಸಂಘಪರಿವಾರ ಬಿ ಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಐತಿಹಾಸಿಕವಾಗಿ ವಿರೋಧಿಸಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.”ನಿಮ್ಮ ಸಹವಾಸವನ್ನು ಸರಿಯಾಗಿ ಇಟ್ಟುಕೊಳ್ಳಿ. ಸಾಮಾಜಿಕ ಬದಲಾವಣೆಯನ್ನು ವಿರೋಧಿಸುವವರೊಂದಿಗೆ ಅಥವಾ ‘ಸನಾತನಿಗಳ’ ಸಹವಾಸ ಬಿಡಿ, ಸಮಾಜಕ್ಕಾಗಿ ನಿಲ್ಲುವವರೊಂದಿಗೆ ಸಹವಾಸ ಮಾಡಿ”ಎಂದು ಮೈಸೂರು ವಿಶ್ವವಿದ್ಯಾಲಯದ ಬೆಳ್ಳಿ ಮಹೋತ್ಸವ ಆಚರಣೆಯನ್ನು ಉದ್ಘಾಟಿಸಿ ಮತ್ತು ಹೊಸ ಜ್ಞಾನ ದರ್ಶನ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ನಂತರ ಸಿದ್ದರಾಮಯ್ಯ ಕರೆ ನೀಡಿದ್ದಾರೆ.ಭಾರತದ ಮುಖ್ಯ ನ್ಯಾಯಮೂರ್ತಿ (ಬಿ ಆರ್ ಗವಾಯಿ) ಮೇಲೆ ಇತ್ತೀಚೆಗೆ ಶೂ ಎಸೆದ ಘಟನೆಯನ್ನು ಉಲ್ಲೇಖಿಸಿ, ಮುಖ್ಯಮಂತ್ರಿಗಳು, “ಒಬ್ಬ ‘ಸನಾತನಿಗಳು’ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವುದು ಸಮಾಜದಲ್ಲಿ ‘ಸನಾತನಿಗಳು’ ಮತ್ತು ಸಾಂಪ್ರದಾಯಿಕ ಅಂಶಗಳು ಇನ್ನೂ ಅಸ್ತಿತ್ವದಲ್ಲಿವೆ ಎಂಬುದನ್ನು ತೋರಿಸುತ್ತದೆ. ಈ…

Read More

ರಸ್ತೆ ಅಗಲೀಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸರ್ಕಾರ ರಸ್ತೆ ಅಗಲೀಕರಣ ಮಾಡಲು ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿನ ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮಾಡುವ ಈ ನಿಯಮಾವಳಿಗಳನ್ನು ಗಾಳಿ ತೂರಿ ರಸ್ತೆ ಅಗಲೀಕರಣ ಮಾಡುವ ಮೂಲಕ 142 ಕುಟುಂಬಗಳು ನಿರಾಶ್ರಿತರಾಗುವಂತೆ ಮಾಡಲಾಗಿದೆ. ಈ ಘಟನೆಯಲ್ಲಿ ಅನ್ಯಾಯವಾದ ಜನರಿಗೆ ನ್ಯಾಯ ಸಿಗುವವರೆಗೂ ಈ ಹೋರಾಟಕ್ಕೆ ಸದಾ ನನ್ನಬೆಂಬಲವಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಮಿನಿವಿಧಾನಸೌಧದ ಆವರಣಗೋಡೆಗೆ ಹೊಂದಿಕೊಂಡಂತೆ ಹಾಕಲಾಗಿರುವ ಶಾಮಿಯಾನದಲ್ಲಿ ಕಳೆದ ಮೂರು ದಿನಗಳಿಂದ ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ರಸ್ತೆ ಅಗಲೀಕರಣ ನೆಪದಲ್ಲಿ ಸ್ವಂತ ಮನೆಗಳನ್ನು ದ್ವಂಸಮಾಡಿ 142 ಕುಟುಂಬಗಳನ್ನು ಬೀದಿಗೆ ತಳ್ಳಿದ ಕ್ರಮವನ್ನು ಖಂಡಿಸಿ ಹಾಗೂ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡುವದು, ತಪಿಸ್ಥತ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಬತಗುಣಕಿ ಗ್ರಾಮದಲ್ಲಿ ಇತ್ತೀಚೆಗೆ ಬಯಲಾಟ ಕಲಾವಿದರ ಸಮೀಕ್ಷೆಯನ್ನು ನಡೆಸಲಾಯಿತು.ಗ್ರಾಮದ ಬಸವಣ್ಣ ದೇವರ ಗುಡಿಯ ಆವರಣದಲ್ಲಿ ಹಲವಾರು ಕಲಾವಿದರು ಪಾಲ್ಗೊಂಡು ತಮ್ಮ ತಮ್ಮ ಮಾಹಿತಿಯನ್ನು ದಾಖಲಿಸಿದರು.ರಾಜ್ಯ ಬಯಲಾಟ ಅಕಾಡೆಮಿ ಅಧ್ಯಕ್ಷ ಕೆ.ಆರ್. ದುರ್ಗಾ ದಾಸ್ ಅವರ ನಿರ್ದೇಶನದ ಮೇರೆಗೆ ವಿಜಯಪುರದ ಡಾ. ಮೀನಾಕ್ಷಿ ಪಾಟೀಲ್ ಅವರು ಕಲಾವಿದರ ಸಮೀಕ್ಷಾ ಕಾರ್ಯವನ್ನು ನಡೆಸಿದರು.ಇಂಡಿ ತಾಲೂಕಿನ ಬತಗುಣಕಿ ಗ್ರಾಮದಲ್ಲಿ ಬಯಲಾಟ ತಂಡದ ಮುಖ್ಯಸ್ಥರಾದ ಕಾಶಿನಾಥ ಪಾಟೀಲ್ ಅವರ ಮುಖಂಡತ್ವದಲ್ಲಿ ಸುಮಾರು 60ಕ್ಕಿಂತ ಹೆಚ್ಚು ಕಲಾವಿದರು ತಮ್ಮ ಹೆಸರನ್ನು ನೋಂದಾಯಿಸಿದರು.ಗ್ರಾಮೀಣ ಜನತೆ ತಮ್ಮ ನಿತ್ಯದ ಕೃಷಿ ಕಾಯಕದೊಂದಿಗೆ ಈಗಲೂ ಈ ಕಲೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಅಭಿಮಾನದ ಸಂಗತಿ ಎಂದು ಕಲಾವಿದರನ್ನು ಕುರಿತು ಡಾ. ಮೀನಾಕ್ಷಿ ಪಾಟೀಲ್ ಮಾತನಾಡಿದರು. ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಇಂಥ ಅಪರೂಪದ ಮೂಲ ಕಲೆಗಳು ಮರೆಯಾಗುತ್ತಿರುವುದನ್ನು ಮನಗಂಡು, ಮತ್ತೆ ಅದನ್ನು ಪುನಶ್ಚೇತನಗೊಳಿಸುವ ಪ್ರಯತ್ನವಾಗಿ ಆಗಾಗ ಬಿಡುವಿನ ವೇಳೆಯಲ್ಲಿ ಬಯಲಾಟ ಪ್ರದರ್ಶನವನ್ನು ಮಾಡುತ್ತಿರುವ ಕಲಾವಿದರ ಬಗ್ಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ೨೦೨೫-೨೬ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಮತ್ತು ಭೀಮಾ ನದಿಯಿಂದ ಉಂಟಾಗಿರುವ ಪ್ರವಾಹದಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು ಸರಕಾರದ ಮಾರ್ಗಸೂಚಿಯಂತೆ ಬೆಳೆ ಹಾನಿ ಸಮೀಕ್ಷೆಯನ್ನು ಕೃಷಿ, ತೋಟಗಾರಿಕೆಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳ ತಣಡವನ್ನು ರಚಿಸಿ ಜಂಟಿ ಸಮೀಕ್ಷೆ ಮಾಡಲಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.ಇಂಡಿ ತಾಲೂಕಿನಲ್ಲಿ ೬೪೦೭೨ ಹೆಕ್ಟರ ಪ್ರದೇಶದಲ್ಲಿ ತೊಗರಿ, ಮೆಕ್ಕೆಜೋಳ, ಹತ್ತಿ, ಮತ್ತು ಈರುಳ್ಳಿ ಬೆಳೆಗಳ ಹಾನಿಯ ಜಂಟಿ ಸಮೀಕ್ಷೆಯ ವರದಿಯನ್ನು ಗ್ರಾ.ಪಂ ಗ್ರಾಮಗಳಲ್ಲಿ ನೋಟಿಸ ಬೋರ್ಡು ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ಪಡಿಸಲಾಗಿದೆ.ಈ ಕುರಿತು ರೈತರಲ್ಲಿ ಹಾನಿ ಕ್ಷೇತ್ರ, ಬೆಳೆಗಳ ವಿವರ, ಮತ್ತು ನೀರಾವರಿ ಮಳೆಯಾರ್ಷಿತ ಕುರಿತಂತೆ ಯಾವುದೇ ಆಕ್ಷೆಪಣೆಗಳಿದ್ದಲ್ಲಿ ತಕ್ಷಣ ಸುಕ್ತ ದಾಖಲೆಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ಅಥವಾ ತಹಸೀಲ್ದಾರ ಕಚೇರಿಗೆ ಅಕ್ಷೆಪಣೆಸಲ್ಲಿಸಬಹುದು.ಪರಿಹಾರ ಸಂದಾಯವಾಗಲು ಪ್ರುಟ್ ಐಡಿ ಕಡ್ಡಾಯ ವಾಗಿದ್ದು ಪ್ರುಟ್ ಐಡಿ ಎಫ್ ಐ ಡಿ ಯಾಗದ ರೈತರು ಕೂಡಲೆ ಆಧಾರ…

Read More