Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರೋಗ್ಯ ಕೇಂದ್ರ ಹಾಗೂ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸಲು ಗೌರವಧನ ಆಧಾರದ ಮೇಲೆ ‘ಮಹಿಳಾ ವೈದ್ಯಾಧಿಕಾರಿಗಳು’, ‘ಮಹಿಳಾ ವಸತಿ ನಿಲಯಪಾಲಕರು’, ‘ಮಹಿಳಾ ಸ್ಟಾಫ್ ನರ್ಸ್’ ಹಾಗೂ ‘ಮಹಿಳಾ ಜ್ಯೂನಿಯರ್ ಇಂಜಿನಿಯರ್ (ಸಿವಿಲ್)’ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಬೇಕಾಗಿದ್ದು, ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. ೨೪ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ ಸಂಖ್ಯೆ: ೨೨೨ ರಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦ ಸಾವಿರ ರೂ.ಗಳ ಸಹಾಯಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦ ಸಾವಿರ ರೂಪಾಯಿಗಳು ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗುವುದು. ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ ೧೦ ಜೋಡಿಗಳು ಭಾಗವಹಿಸಿರತಕ್ಕದ್ದು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ ೧೮ ವರ್ಷದಿಂದ ಗರಿಷ್ಠ ೪೨ ವರ್ಷಗಳು, ವರನಿಗೆ ಕನಿಷ್ಠ ೨೧ ವರ್ಷದಿಂದ ಗರಿಷ್ಠ ೪೫ ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ೨.೫೦ ಲಕ್ಷ ರೂ.ಗಳು ಮತ್ತು ಒಟ್ಟಾರೆಯಾಗಿ ೫ ರೂ. ಲಕ್ಷಗಳನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಶನ್ ಅವರ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕ್ಟೋಬರ್ ೧೮ರಂದು ಟ್ರೇಜರಿ ಕಾಲೋನಿಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು.ಆಯ್ಕೆಯಾದ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ತಮ್ಮ ಇಮೇಲ್‌ನಲ್ಲಿ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅಕ್ಟೋಬರ್ ೧೭ರೊಳಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪಡೆಯಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವರ ಆಗಮಿಸಿತು.ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು ವಿಜಯ ಜ್ಯೋತಿ ಯಾತ್ರೆ ಮೂಲಕ ಜನರಿಗೆ ತಿಳಿಸಿಕೊಡುವುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಹೇಳಿದರು.ವಿಜಯ ಜ್ಯೋತಿ ಯಾತ್ರೆಯ ಮೆರವಣಿಗೆಯು ವಿವಿಧ ಜಾನಪದ ಕಲಾ ತಂಡಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಾಗಿತು.ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರಕ್ಕೆ ಆಗಮಿಸಿದ ರಥ ಯಾತ್ರೆ ಬೆಳಗಾವಿ ಜಿಲ್ಲೆಯ ಅಥಣಿಗೆ ಬೀಳ್ಕೊಡಲಾಯಿತು. ಬೆಳಗಾವಿ ಕಿತ್ತೂರಿನಲ್ಲಿ ಅಕ್ಟೋಬರ್ ೨೩ ರಿಂದ ೨೫ರವರೆಗೆ ನಡೆಯಲಿರುವ ಕಿತ್ತೂರ ಉತ್ಸವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರದ ಡಾ.ಬಾಬಾಸಾಹೇಬ ಅಂಬೇಡ್ಕರ ವೃತ್ತದಲ್ಲಿ ಅ.18 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘವು ಕುರುಬರ ಎಸ್ಟಿ ಮೀಸಲಾತಿಗಾಗಿ ವಿಜಯಪುರ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ಕುರುಬ ಸಮಾಜದ ಎಲ್ಲಾ ಸಂಘಟನೆಗಳು, ಎಲ್ಲ ಬಾಂಧವರು ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ತಾಲೂಕಾಧ್ಯಕ್ಷ ಸಿದ್ದಣ್ಣ ಹೆರಕಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮಸಬಿನಾಳ ವಿರಕ್ತಮಠದ ಸಿದ್ದರಾಮ ಸ್ವಾಮೀಜಿ, ಯಲ್ಲಾಲಿಂಗಮಠದ ಬಸವರಾಜ ಮಹಾರಾಜರ ನೇತೃತ್ವದಲ್ಲಿ ವಿವಿಧ ಬಸವ ಪರ ಸಂಘಟನೆಗಳಿಂದ ಗುರುವಾರ ಬಸವೇಶ್ವರ ವೃತ್ತದಲ್ಲಿ ಬಸವ ಸಂಸ್ಕೃತಿ ಅಭಿಯಾನ, ಲಿಂಗಾಯತ ಮಠಾಧೀಶರ ಒಕ್ಕೂಟದ ವಿರುದ್ಧ ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆ ಕನ್ಹೇರಿ ಸ್ವಾಮೀಜಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಿಎಂ ಅವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಮೂಲಕ ಸಲ್ಲಿಸಲಾಯಿತು.ಪಟ್ಟಣದ ವಿರಕ್ತಮಠದ ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ನಂತರ ಕೆಲ ಹೊತ್ತು ಪ್ರತಿಭಟನೆ ನಡೆಸಿ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಿದ ನಂತರ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಬೆಂಕಿ ಹಚ್ಚಿ ದಹಿಸಿ ಪ್ರತಿಭಟನೆಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆ ಉದ್ದೇಶಿಸಿ ಮಸಬಿನಾಳದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿಶ್ವಗುರು ಬಸವೇಶ್ವರರು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ವ್ಯಾಪಾರ ಅಭಿವೃದ್ಧಿ ಯೋಜನೆ ಅಳವಡಿಸಿಕೊಂಡ ನಂತರ ತನ್ನ ಸದಸ್ಯರಿಗೆ ಕೃಷಿ ಮತ್ತು ವಿವಿಧ ಕೃಷಿಯೇತರ ಉದ್ದೇಶಗಳಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡುತ್ತಿವೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕತೆಯ ಆಧಾರ ಸ್ಥಂಬಗಳಾಗಿವೆ ಎಂದು ವಿಜಯಪುರ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.ಪಟ್ಟಣದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ವಿಜಯಪುರ ಡಿಸಿಸಿ ಬ್ಯಾಂಕಿನ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವನಬಾಗೇವಾಡಿ ತಾಲೂಕಿನ ಪ್ಯಾಕುಗಳ ಸಮಾಲೋಚನೆ ಮತ್ತು ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಫ್ಯಾಕ್ಷುಗಳ ಮಟ್ಟದಲ್ಲಿ ಸದಸ್ಯರ ಠೇವಣಿ ರೂ.1039 ಕೋಟಿಗಳಷ್ಟಿದೆ. ಇದು ಸದಸ್ಯರು ಸಂಘಗಳ ಮೇಲೆ ಇಟ್ಟ ವಿಶ್ವಾಸವನ್ನು ಸ್ಪಷ್ಟಪಡಿಸುತ್ತದೆ. ಆದಾಗ್ಯೂ ಇನ್ನೂ ಅನೇಕ ಸಹಕಾರ ಸಂಘಗಳು ಅಭಿವೃದ್ಧಿಯತ್ತ ಸಾಗಬೇಕಿದೆ. ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ಪಟ್ಟರು.ಸಹಕಾರ ಸಂಘಗಳ ವಿಶ್ರಾಂತ ಅಪರ ನಿಬಂಧಕ, ವಿಜಯಪುರ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಆಂತರಿಕ ರಸ್ತೆಗಳನ್ನು ಸಿ.ಸಿ. ರಸ್ತೆಯಾಗಿ ಅಭಿವೃದ್ಧಿಪಡಿಸಲು ಹಾಗೂ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ರೂ. 1.25 ಕೋಟಿ ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ಇಂಗಳೇಶ್ವರ ಗ್ರಾಮಸ್ಥರು ಸಚಿವ ಶಿವಾನಂದ ಪಾಟೀಲ ಅವರನ್ನು ಗುರುವಾರ ವಿಜಯಪುರದ ನಿವಾಸದಲ್ಲಿ ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಅಭಿವೃದ್ಧಿಪರ ಕಾಳಜಿಯ ಕಾರಣದಿಂದ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇಂಗಳೇಶ್ವರ ಆಂತರಿಕ ರಸ್ತೆಗಳ ಸಿಸಿ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲು ಹಾಗೂ ಶಾಲೆಗಳ ಕೊಠಡಿಗಳ ನಿರ್ಮಾಣ ಕಾಮಗಾರಿಗಾಗಿ ರೂ.1.25ಕೋಟಿ ತಾಂತ್ರಿಕ ಮಂಜೂರಾತಿ ಸಿಕ್ಕಿದೆ. ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅನುದಾನದಲ್ಲಿ ಸದರಿ ಕಾಮಗಾರಿಗಳನ್ನು ಕೈಗೊಳ್ಳಲು ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಗಲಕೋಟೆಯ ಪುನರ್ವಸತಿ-ಪುನರ್ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರು ತಾಂತ್ರಿಕ ಮಂಜೂರಾತಿ ನೀಡಿ ಆದೇಶಿಸಿದ್ದಾರೆ.ತಮ್ಮೂರಿನ ರಸ್ತೆಗಳು ಸಿ.ಸಿ. ರಸ್ತೆಗಳಾಗಿ ಉನ್ನತೀಕರಣಗೊಳ್ಳಲು ಹಾಗೂ ಶಾಲೆಗಳಿಗೆ ಕಟ್ಟಡ ನಿರ್ಮಾಣಕ್ಕೆ ಸಚಿವರು ವಿಶೇಷ ಕಾಳಜಿ ತೋರಿದ್ದರಿಂದ…
ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ತಾಕೀತು ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ೬, ೭ ಮತ್ತು ೮ನೆಯ ವಾರ್ಡಿನಲ್ಲಿ ಸಿಸಿ ಮತ್ತು ಚರಂಡಿ ನಿರ್ಮಿಸುವುದು. ಜೊತೆಗೆ ೬ಲಕ್ಷ ರೂ. ಹಣದಲ್ಲಿ ಭೀಮಾಶಂಕರ ಮಠವನ್ನು ಅಭಿವೃದ್ಧಿ ಪಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಎಲ್ಲ ಕಾರ್ಯಗಳಿಗೆ ವಾರ್ಡಿನ ನಾಗರಿಕರು ಸಹಕರಿಸಬೇಕು. ಗುತ್ತಿಗೆದಾರರು ಒಳ್ಳೆಯ ರೀತಿಯಲ್ಲಿ ಕಾರ್ಯವನ್ನು ನಿರ್ವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಹಳೆಯ ಬಜಾರ್‌ದಲ್ಲಿ ಪುರಸಭೆ ಕಾರ್ಯಾಲಯದಿಂದ ೨೦೨೫-೨೬ನೆಯ ಸಾಲಿನ ೧೫ನೇ ಹಣಕಾಸಿನ ಯೋಜನೆಯಡಿಯಲ್ಲಿ ಮತ್ತು ೨೦೧೮-೧೯ನೇ ಸಾಲಿನ ಎಸ್‌ಎಫ್‌ಸಿ ಅನುದಾನದಡಿಯಲ್ಲಿ ಹಮ್ಮಿಕೊಂಡ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಯ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಸಿಂದಗಿ ನಗರದಲ್ಲಿ ೩೦ಲಕ್ಷ ರೂ. ಅನುದಾನದ ಕಾಮಗಾರಿಯನ್ನು ೧೫ನೇ ಹಣಕಾಸು ಮತ್ತು ಎಸ್‌ಎಫ್‌ಸಿ ಅನುದಾನದಲ್ಲಿ ನಾಲ್ಕು ಕಾಮಗಾರಿಗಳನ್ನು ಹಾಕಿಕೊಳ್ಳಲಾಗಿದೆ ಎಂದರು.ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಸಿಜೆಐ ಮೇಲೆ ಷೂ ಎಸೆದ ಪ್ರಕರಣಕ್ಕೆ ಖಂಡನೆ – ಪ್ರತಿಭಟನೆ | ಅಂಗಡಿ ಮುಗಟ್ಟುಗಳು ಬಂದ್ | ಬಸ್ ಸಂಚಾರ ಸಂಪೂರ್ಣ ಸ್ಥಗಿತ ಟೈರ್‌ಗಳಿಗೆ ಬೆಂಕಿ ಕಾವು ಜೋರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಗಳ ಮೇಲೆ ಷೂ ಎಸೆದ ಪ್ರಕರಣದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ವಿವಿಧ ದಲಿತ, ಪ್ರಗತಿಪರ, ಅಲ್ಪಸಂಖ್ಯಾತ ಸಂಘಟನೆಗಳು ಗುರುವಾರ ಕರೆ ನೀಡಿದ್ದ ವಿಜಯಪುರ ಬಂದ್‌ಗೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಬಂದ್ ಯಶಸ್ವಿಯಾಗಿದೆ.ವಿಜಯಪುರದ ಬಹುತೇಕ ಅಂಗಡಿ-ಮುಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಪೆಟ್ರೋಲ್, ಔಷಧಿ, ಆಸ್ಪತ್ರೆ, ಬ್ಯಾಂಕ್ ವ್ಯವಹಾರ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಿದ್ದವು.ಲಾಲ್ ಬಹಾದ್ದೂರ ಶಾಸ್ತ್ರಿ ಮಾರುಕಟ್ಟೆ ಸಂಕೀರ್ಣ, ಕೆ.ಸಿ. ಮಾರುಕಟ್ಟೆ ಸಂಕೀರ್ಣ, ಶ್ರೀ ಸಿದ್ದೇಶ್ವರ ಗುಡಿ, ಕಿರಾಣ ಬಜಾರ್, ತರಕಾರಿ ಮಾರುಕಟ್ಟೆ ಹೀಗೆ ಎಲ್ಲ ಕಡೆ ಬಂದ್ ಜೋರಾಗಿತ್ತು.ಪ್ರತಿಭಟನೆ ಕಾವು ಜೋರಾಗುವ ಹಿನ್ನೆಲೆಯಲ್ಲಿ ನಗರ ಸಾರಿಗೆ ಅಷ್ಟೇ ಅಲ್ಲದೇ ಗ್ರಾಮೀಣ ಭಾಗದ ಸಾರಿಗೆ ಸಂಚಾರ ಸಹ ಸಂಪೂರ್ಣ ಸ್ತಬ್ದವಾಗಿತ್ತು. ಸಾರಿಗೆ…
