Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ತಿಕೋಟಾದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ, ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಂ ಎಸ್ ಭೂಸಗೊಂಡ ಆಯ್ಕೆಯಾಗಿದ್ದಾರೆ.ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷರಾಗಿದ್ದ ಯು ಎಸ್ ಕೌಲಗಿ ಇವರು ಸ್ವಯಂ ನಿವೃತ್ತಿ ಪಡೆದ ನಿಮಿತ್ಯ ತೆರವಾದ ಸ್ಥಾನಕ್ಕೆ ಎಂ ಎಸ್ ಭೂಸಗೊಂಡ ಇವರನ್ನು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಆದರ್ಶ ಶಿಕ್ಷಕರ ವೇದಿಕೆ ಜಿಲ್ಲಾ ಪ್ರಧಾನಕಾರ್ಯದರ್ಶಿ ಬಿ ಬಿ ದೊರನಳ್ಳಿ ಮಾತನಾಡಿ, ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಂ ಎಸ್ ಭೂಸಗೊಂಡ ಅವರು, ಹಲವಾರು ವರ್ಷಗಳಿಂದ ಶಿಕ್ಷಕ ಸಂಘಟನೆಯಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಿ ಉತ್ತಮ ಹೆಸರು ಗಳಿಸಿದ್ದಾರೆ. ಆದರ್ಶ ಶಿಕ್ಷಕ ವೇದಿಕೆ ಚಟುವಟಿಕೆಗಳು ಕ್ರೀಯಾಶೀಲವಾಗಿ ನಿತ್ಯ ನಿರಂತರ ನಡೆಯಲು ವೇದಿಕೆ ಉತ್ತಮ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಬರುವ ದಿನಗಳಲ್ಲಿ ಕ್ರೀಯಾಶೀಲ ಪದಾಧಿಕಾರಿಗಳನ್ನು ನೇಮಿಸಿಕೊಂಡು ಇಡೀ ಜಿಲ್ಲಾದ್ಯಂತ ಶಿಕ್ಷಕಪರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.ಆದರ್ಶ ಶಿಕ್ಷಕರ ವೇದಿಕೆ ನೂತನ ಜಿಲ್ಲಾಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಿಂದಿ ಭಾಷಾ ಅನ್ ಬಾನ್ ಶಾನ್ ಎಂಬ ಒಂದು ವಿಶಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಜಯಪುರದ ಅಂಜುಮನ ಕಾಲೇಜಿನ ಪ್ರಾಧ್ಯಾಪಕ ಎಮ್.ಎ. ಪೀರಾ ಮಾತನಾಡಿ, ಕಬೀರ, ಸೂರದಾಸ, ತುಳಸಿದಾಸ, ಮೀರಾಬಾಯಿ ಹೀಗೆ ಹತ್ತು ಹಲವು ಕವಿಗಳು ಹಿಂದಿ ಸಾಹಿತ್ಯಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ. ಪ್ರೇಮಚಂದ್ ಅವರ “ಗೋದಾನ್, “ಗಬನ್” ಮುಂತಾದ ಕಾದಂಬರಿಗಳು ಸಾಮಾಜಿಕ ಜೀವನದ ನಿಜವಾದ ವಾಸ್ತವದ ಚಿತ್ರಣದ ಬಗ್ಗೆ ಹೇಳಿದ್ದಾರೆ ಎಂದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬಾಗಲಕೋಟೆಯ ಬಸವೇಶ್ವರ ಕಾಲೇಜಿನ ಪ್ರಾಧ್ಯಾಪಕ ಡಾ. ಮಂಜುಳಾ ಚೌವ್ಹಾಣ ಮಾತನಾಡಿ, ಹಿಂದಿ ಭಾಷೆಯಲ್ಲಿ ಶಾಯರಿ ಅತ್ಯಂತ ಪ್ರಮುಖವಾಗಿದೆ, ಏಕೆಂದರೆ ಇದು ಕವಿಗಳ ಭಾವನೆಗಳನ್ನು ವ್ಯಕ್ತಪಡಿಸಲು, ಕಾವ್ಯವನ್ನು ಸಂಕ್ಷಿಪ್ತ ರೂಪದಲ್ಲಿ ಪ್ರಸ್ತುತಪಡಿಸಲು ಮತ್ತು ಪ್ರೀತಿ, ದುಃಖ, ಸಂತೋಷ ಮತ್ತು ನೋವಿನಂತಹ ಮಾನವ ಭಾವನೆಗಳನ್ನು ಆಳವಾಗಿ ವಿವರಿಸಲು ಒಂದು ಪರಿಣಾಮಕಾರಿ ಮಾರ್ಗವಾಗಿದೆ ಎಂದರು.ಸಂಗಮೇಶ್ವರ ಸಂಸ್ಥೆಯ ನೀರ್ದೆಶಕ ಅಶೋಕ ಕುಲಕರ್ಣಿ ಕಾರ್ಯಕ್ರಮವನ್ನು ಉದ್ಘಾಟಿಸಿ…
ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಸಂಸ್ಕೃತಿ, ಸಂಸ್ಕಾರಗಳ ಮಹತ್ವ ಸಾರಿ, ಸಾವಯವ ಕೃಷಿಗೆ ಒತ್ತು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧಿಸಿರುವ ಕ್ರಮ ಖಂಡನೀಯ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಿ ಶ್ರೀಗಳ ಜಿಲ್ಲಾ ನಿಷೇಧ ಹೇರುವ ಮೂಲಕ ರಾಜ್ಯ ಸರ್ಕಾರ ತನ್ನ ಕುಟೀಲ ನೀತಿಯನ್ನು ಪ್ರಯೋಗಿಸಿದೆ. ಮುಖ್ಯಮಂತ್ರಿಗಳ ಕೃಪಾ ಘೋಷಿತ ಮಂಡಳಿ ಎಂಬ ಸತ್ಯವನ್ನು ಶ್ರೀಗಳು ಹೇಳಿದ್ದಾರೆ, ಇದನ್ನು ಅರಗಿಸಿಕೊಳ್ಳಲಾಗದ ರಾಜ್ಯ ಸರ್ಕಾರ ಶ್ರೀಗಳ ಮೇಲೆ ಈ ರೀತಿ ನಿರ್ಬಂಧ ಆದೇಶ ಹೊರಡಿಸಿದೆ, ಆದರೆ ಶ್ರೀಗಳು ಇದರಿಂದ ಹೆದರುವುದಿಲ್ಲ, ಶ್ರೀಗಳ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸ್ಪಷ್ಟಪಡಿಸಿದರು.ಕನೇರಿ ಶ್ರೀಗಳ ವ್ಯಕ್ತಿತ್ವ ಶ್ರೇಷ್ಠ, ಅಧ್ಯಾತ್ಮಿಕ ಮನೋಭಾವನೆ,…
ಲೇಖನ- ಮಲ್ಲಪ್ಪ ಸಿ. ಖೊದ್ನಾಪೂರ(ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಐನಸ್ಟೀನ್ ಅವರು “ತಾಳ್ಮೆ ದುರ್ಬಲತೆಯಲ್ಲ, ಮನುಷ್ಯನನ್ನು ದೀರ್ಘ ಕಾಲ ಸ್ಥಿರವಾಗಿ ನಿಲ್ಲಿಸುವ ಪ್ರಬಲವಾದ ಶಕ್ತಿ” ಎಂದು ಹೇಳಿದ್ದಾರೆ. ಬದುಕಿನಲ್ಲಿ ಯಶಸ್ಸು ಎನ್ನವುದು ರಾತ್ರಿ ಬೆಳಗಾಗುವುದರೊಳಗೆ ದೊರೆಯುವಂತದಲ್ಲ. ಅದು ಹಲವಾರು ವರ್ಷಗಳ ಅವಿರತ ಪ್ರಯತ್ನ, ಸಾಧನೆಯ ಫಲ ಮತ್ತು ಶ್ರಮ ವಹಿಸುವಿಕೆಯಿಂದ ಲಭಿಸುತ್ತದೆ. ಅದಕ್ಕೆ ಆ ಯಶಸ್ಸು ಪಡೆಯಲು ಆ ವ್ಯಕ್ತಿಯಲ್ಲಿ ಇರಬೇಕಾದದ್ದು ತಾಳ್ಮೆ. ಅದಕ್ಕಂತಲೇ ಹಿರಿಯರು ‘ತಾಳಿದವನು ಬಾಳಿಯಾನು’ ಎಂದು ಹೇಳಿದ್ದಾರೆ. ಬದುಕೆಂಬುದು ಒಂದು ಸಾಗರವಿದ್ದಂತೆ. ಅದರಲ್ಲಿ ಸಮಸ್ಯೆಗಳು, ಸವಾಲುಗಳು ಅಲೆಗಳಂತೆ ಒಂದರ ಮೇಲೊಂದರಂತೆ ಬರುತ್ತಲೇ ಇರುತ್ತವೆ. ಅವೆಲ್ಲವುಗಳನ್ನು ದುರಿಸಿ ಮುಂದೆ ಗುರಿಯತ್ತ ಸಾಗಬೇಕಾದರೆ ತಾಳ್ಮೆ ಅತೀ ಅಗತ್ಯವಾಗಿದೆ. ಗೌತುಮ ಬುದ್ಧ ಅವರು “ತಾಳ್ಮೆ ಎಂದರೆ ನಾವು ಗುರಿಯ ಬೆನ್ನು ಹತ್ತಿ ಹೊರಟಾಗ ಬಂದೆರಗುವ ಸಂಕಷ್ಟಗಳನ್ನು ಹೇಗೆ ಸಮರ್ಥವಾಗಿ ಎದುರಿಸುತ್ತೇವೆ ಎಂಬುದಲ್ಲ, ಹೊರತು ಆ ಸಂದರ್ಭದಲ್ಲಿ ನಾವು ತೋರುವ ಪ್ರತಿಕ್ರಿಯೆ ಮತ್ತು ಶಾಂತ-ಮುಕ್ತ ಮನಸ್ಸಿನಿಂದ ಆ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಲ್ಲಿ ಕಾಯುವ ಪ್ರತಿಯೊಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜಕ್ಕೆ ಇಂದು ಮಾನವೀಯತೆ, ಚಾರಿತ್ರ್ಯ ನಿರ್ಮಾಣ ಶಿಕ್ಷಣದ ಅಗತ್ಯವಿದ್ದು ಭಾವಿ ಶಿಕ್ಷಕರು ಈ ದಿಶೆಯಲ್ಲಿ ಸನ್ನದ್ಧರಾಗಬೇಕು ಎಂದು ಗದಗ- ಹುಲಕೋಟಿ ರಾಮಕೃಷ್ಣ ವಿವೇಕಾನಂದ ಸೇವಾ ಪ್ರತಿಷ್ಠಾನದ ಶ್ರೀ ಸ್ವಾಮಿ ಶಿವಪ್ರಿಯಾನಂದಜಿ ಮಹಾರಾಜ ಹೇಳಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ 45ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ದೀಪದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಇಂದು ಸಮಾಜಕ್ಕೆ ಸಮಭಾವದ, ಸಮಸಮಾಜ ಮತ್ತು ದೇಶದ ಐಕ್ಯತೆಯನ್ನು ಉಂಟುಮಾಡುವ ಶಿಕ್ಷಕರು ಬೇಕಾಗಿದ್ದಾರೆ. ಕಾಯಕದಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳುವ, ಸಚ್ಚಾರಿತ್ರ್ಯ, ಸದ್ಗುಣ, ಜ್ಞಾನಭರಿತ ಶಿಕ್ಷಕರು ತಾವಾಗಬೇಕು ಎಂದು ಅವರು ಹೇಳಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣವರ ಮಾತನಾಡಿ, ಪ್ರಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸದಾ ಸನ್ನದ್ಧರಾಗಿರಬೇಕು. ನಿರಂತರವಾಗಿ ಓದುವ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಜ್ಞಾನವನ್ನು ಹೊಂದಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆದರದೆ ಮೆಟ್ಟಿ ನಿಲ್ಲುವ ಮನೋಭಾವದೊಂದಿಗೆ ನಿರಂತರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ, ಜನಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವುದೇ ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಳಜಿಯಿಂದ ಕನೇರಿ ಗುರುಗಳು ಕೆಲವೊಂದು ವಿಚಾರಗಳನ್ನು ಪ್ರತಿಪಾದಿಸಿದ್ದರು, ರಾಜ್ಯ ಸರ್ಕಾರದ ಕೆಲವು ನೀತಿಗಳ ಬಗ್ಗೆ ವಿಭಿನ್ನ ಅಭಿಪ್ರಾಯ ಹಂಚಿಕೊಂಡ ಮಾತ್ರಕ್ಕೆ ಶ್ರೀಗಳಿಗೆ ಜಿಲ್ಲೆಗೆ ಪ್ರವೇಶಸಿದಂತೆ ನಿರ್ಬಂಧ ಹೇರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಶ್ರೀಗಳಿಗೆ ದೊಡ್ಡ ಅಪಮಾನ ಮಾಡಿ ಪ್ರಜಾಪ್ರಭುತ್ವ ತತ್ವಗಳಿಗೆ ವಿರೋಧವಾಗಿ ನಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.ಗ್ರಾಮೀಣ ಜೀವನೋಪಾಯ, ಸ್ವಾವಲಂಬಿ ಯೋಜನೆಗಳು, ಕೌಶಲ್ಯ ತರಬೇತಿ ಮುಂತಾದ ಕ್ಷೇತ್ರಗಳಲ್ಲಿ ಅನನ್ಯ ಸೇವೆ ನೀಡಿರುವ ಶ್ರೀ ಕನೇರಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ರೋಟರಿ ಸಂಸ್ಥೆಯ ಅಡಿಯಲ್ಲಿ ಬಾಗಲಕೋಟೆಯ ಡಾ.ಮಾಸೂರಕರ ಅವರ ಕಣ್ಣಿನ ಆಸ್ಪತ್ರೆಯ ಆಶ್ರಯದಲ್ಲಿ ಬಡವರಿಗೆ ಉಚಿತವಾಗಿ ಕಣ್ಣು ತಪಾಸಣೆ ಶಿಬಿರ ಆಯೋಜಿಸಲಾಗುವುದು. ಶೇ 50ರ ರಿಯಾಯಿತಿ ದರದಲ್ಲಿ ಕನ್ನಡಕ ವಿತರಿಸಲಾಗುವುದು. ರೋಟರಿ ಸಂಸ್ಥೆ ಸೂಚಿಸುವ ಕಡೆ ಶಿಬಿರವನ್ನು ಆಯೋಜಿಸಲಾಗುವುದು ಎಂದು ರೋಟರಿ ಜಿಲ್ಲೆ 3170ದ ಸಹಾಯಕ ಗವರ್ನರ ನಾರಾಯಣ ಹೆರಕಲ್ ಹೇಳಿದರು.ಇಲ್ಲಿನ ವಿಜಯಪುರ ರಸ್ತೆಯ ಹೊರವಲಯದಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆಯ ಆಶ್ರಯದಲ್ಲಿ ನಡೆದ ವಾರದ ಸಭೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಪಲ್ಸ್ ಪೋಲಿಯೋ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ವ್ಯವಸ್ಥೆ ಮಾಡಬೇಕು. ಮಳೆ ನೀರು ಕೊಯ್ದು, ಚೆಕ್ ಡ್ಯಾಂ ನಿರ್ಮಾಣದ ಮಹತ್ವ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ, ಶಾಲಾ-ಕಾಲೇಜು ಮಕ್ಕಳಿಗೆ ಗಣಕಯಂತ್ರ ಮತ್ತು ಸೈಕಲ್ ವಿತರಿಸುವಂತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು 13 ಸಲಹೆ ನೀಡಿದರು.ರೋಟರಿ ಜಿಲ್ಲೆ ಗವರ್ನರ ಆಗುವಂತ ಅರ್ಹತೆವುಳ್ಳ ವ್ಯಕ್ತಿಗಳನ್ನು ಗುರುತಿಸಿ ರೋಟರಿ ಸದಸ್ಯರನ್ನಾಗಿ…
ಬಸವನಬಾಗೇವಾಡಿ ಕ್ಷೇತ್ರಕ್ಕೆ 3 ಕೆ.ಪಿ.ಎಸ್ ಶಾಲೆಗಳು ಮಂಜೂರು | ಇವಣಗಿ, ಯಂಬತ್ನಾಳ ಗ್ರಾಮಗಳ ಮಕ್ಕಳಿಗೂ ಸೌಲಭ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ ರಾಜ್ಯದ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆ.ಪಿ.ಎಸ್.) ಉನ್ನತೀಕರಿಸಿ ಆದೇಶ ಹೊರಡಿಸಿದೆ.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ತವರು ಕ್ಷೇತ್ರವಾದ ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರಕ್ಕೂ 3 ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು ಮಾಡಿ ಆದೇಶಿಸಿದೆ.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೊಲ್ಹಾರದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಇವಣಗಿ ಸರ್ಕಾರಿ ಪ್ರೌಢ ಶಾಲೆ ಹಾಗೂ ಯಂಬತ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಇವುಗಳನ್ನು ಕೆ.ಪಿ.ಎಸ್. ಶಾಲೆಗಳಾಗಿ ಉನ್ನತೀಕರಿಸಲಾಗಿದೆ.ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆಯ ಪುನರ್ವಸತಿ ಕೇಂದ್ರ ಹಾಗೂ ತಾಲೂಕ ಕೇಂದ್ರವಾಗಿರುವ ಕೊಲ್ಹಾರ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇರಲಿಲ್ಲ. ಪರಿಣಾಮ ಖಾಸಗಿ ಶಿಕ್ಷಣ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪ್ರತಿಯೊಬ್ಬರೂ ಜ್ಞಾನಿಗಳಾಗಬೇಕೇ ಹೊರತು ಅಜ್ಞಾನಿಗಳಾಗಬಾರದು. ಚನ್ನಬಸವಣ್ಣನವರ ವಚನಗಳನ್ನು ಓದುತ್ತಿದ್ದರೆ ಉತ್ತಮ ಸಂಸ್ಕಾರಗಳು ಒಡಮೂಡಿ,ಉತ್ತಮ ವ್ಯಕ್ತಿತ್ವ ಅರಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಂಶೋಧಕ ಡಿ ಎನ್ ಅಕ್ಕಿ ಹೇಳಿದರು.ಗುರುವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾಲೂಕ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಕದಳಿ ವೇದಿಕೆ ಯುವ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸದಾಚಾರ, ಸದ್ವಿಚಾರಗಳನ್ನು ತಿಳಿಯುವುದು. ಸತ್ಯವನ್ನೇ ನುಡಿಯಬೇಕು, ಹಿಂಸೆಯನ್ನು ಮಾಡಬಾರದು, ಪರೋಪಕಾರ ಬುದ್ಧಿ ಇರಬೇಕು, ಕಾಯಕ ಶ್ರದ್ಧೆ ಬೆಳೆಸಿಕೊಳ್ಳಬೇಕು, ಯಾರಿಗೂ ಕೇಡು ಬಯಸಬಾರದು ಎಂಬ ಚನ್ನಬಸವಣ್ಣನವರ ಜೀವನ ಸಂದೇಶ ಇಂದಿನ ಯುವಪೀಳಿಗೆಗೆ ಪ್ರೇರಕವಾಗಿದೆ ಎಂದು ಹೇಳಿದರು.ಶಿಕ್ಷಕ ಸಾಹಿತಿ ಸಂತೋಷ ಬಂಡೆ ಉಪನ್ಯಾಸ ನೀಡುತ್ತಾ ಮಾತನಾಡಿ, ಅರಿವು ಮತ್ತು ಆಚಾರದ ಮೂಲಕ ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ್ದ ಚನ್ನಬಸವಣ್ಣನವರ ಬದುಕು ಬಹು ವಿಶಿಷ್ಟವಾದುದು. ಎಲ್ಲ ವರ್ಗದ, ಎಲ್ಲ ವಯಸ್ಸಿನ ಜನರಿಗೆ ಚನ್ನಬಸವಣ್ಣನವರ ಬದುಕು ಮತ್ತು ವಚನಗಳು ಹೆಗ್ಗುರುತು ಆಗಬೇಕಿದೆ ಎಂದು ಹೇಳಿದರು.ಅರಿವು, ಆಚಾರ,…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಹಿನ್ನೆಲೆಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ ಎಲ್ಲರೂ ಸೇರಿ ಸಮೀಕ್ಷೆ ಪೂರ್ಣಗೊಳಿಸಲು ಶ್ರಮಿಸಬೇಕು ಎಂದು ಸಿಂದಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮುಜಿ ಅಗ್ನಿ ಸೂಚಿಸಿದರು.ತಾಲೂಕಿನ ದೇವಣಗಾಂವ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವಣಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳ ಗಣತಿದಾರ ಶಿಕ್ಷಕರ ಪ್ರಗತಿ ಪರಿಶೀಲನೆ ಮಾಡಿ ಮಾತನಾಡಿದರು.ಇನ್ನು ಮೂರು ದಿನಗಳಲ್ಲಿ ಗಣತಿಯನ್ನು ಪೂರ್ಣಗೊಳಿಸಬೇಕಿದೆ, ಸಮೀಕ್ಷೆ ಪೂರ್ಣಗೊಳಿಸಲು ಆಗುತ್ತಿರುವ ಅಡೆತಡೆಗಳು ಯಾವುವು ಅವುಗಳನ್ನು ಯಾವ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕೆಬುದನ್ನು ಇದೇ ಸಂದರ್ಭದಲ್ಲಿ ವಿವರಿಸಿದರು.ತಾಂತ್ರಿಕ ಅಡೆತಡೆಗಳಿರುವ ಸಮೀಕ್ಷೆಯನ್ನು ಪಂಚನಾಮಿ ಮಾಡುವ ಮೂಲಕ ಇತ್ಯರ್ಥ ಪಡಿಸಿಕೊಳ್ಳಬೇಕೆಂದು ಸೂಚಿಸಿದರು.ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಸಮೀಕ್ಷೆ ಪೂರ್ಣಗೊಳಿಸುವ ಉದ್ದೇಶದಿಂದ ಅವರನ್ನು ಬಳಸಿಕೊಂಡು ಶೇ.100 ಗುರಿಯನ್ನು ಸಾಧಿಸಿ ಎಂದು ಹೇಳಿದರು.ದೇವಣಗಾಂವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವಕುಮಾರ ದೊಡಮನಿ ಮಾತನಾಡಿ ಸಮೀಕ್ಷೆದಾರರಿಗೆ ಎಲ್ಲ ರೀತಿಯ ಸಹಾಯ…
