Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋಟೆಗೋಡೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸೌಂದರ್ಯಿಕರಣಕ್ಕೆ ಒತ್ತು ನೀಡುವಂತೆ ಸೂಚಿಸಿದ ಅವರು, ಐತಿಹಾಸಿಕ ವಿಜಯಪುರ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದರಿಂದ ನಗರದಾದ್ಯಂತೆ ಸ್ವಚ್ಛತೆಗೆ ಆದ್ಯತೆ ನೀಡಿ, ಅವಶ್ಯಕತೆ ಇದ್ದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮಳೆ ನೀರು ಒಂದೆಡೆ ನಿಂತು ಪ್ರವಾಹ ಪರಿಸ್ಥಿತಿಯಾಗದಂತೆ ನೋಡಿಕೊಳ್ಳಲು ಅವಶ್ಯಕವಿದ್ದೆಡೆ ಮಳೆ ನೀರು ಚರಂಡಿ ನಿರ್ಮಿಸಲು ಯೋಜನೆ ರೂಪಿಸಿ ಶಾಶ್ವತ ಪರಿಹಾರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಜಾನಪದ ಕಲೆಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅದು ನಮ್ಮ ಪರಂಪರೆಯ ಪ್ರತೀಕವಾಗಿದ್ದು, ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸುವುದು ಬಹಳ ಮುಖ್ಯವಾಗಿದೆ ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.ಗುರುವಾರದಂದು ಪಟ್ಟಣದ ಕರ್ನಾಟಕ ಬಿಎಡ್ ಕಾಲೇಜಿನಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ, ಭೀಮಾoತರಂಗ ಸಾಹಿತ್ಯಿಕ, ಸಾಂಸ್ಕೃತಿಕ ಜಗಲಿ ಕೇಂದ್ರ ಇಂಡಿ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆ ಇಂಡಿ ಅವರ ಸಹಯೋಗದಲ್ಲಿ ಹಮ್ಮಿಕೊಂಡ ಗೀಗಿ ಸಂಭ್ರಮ, ಸನ್ಮಾನ ಸಮಾರಂಭ, ಹರದೇಶಿ-ನಾಗೇಶಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಾನಪದ ಕಲೆಗಳು ಕಲಾವಿದರಿಗೆ ಸ್ಫೂರ್ತಿ ನೀಡಿ, ಸೃಜನಶೀಲತೆಯನ್ನು ಉತ್ತೇಜಿಸುತ್ತವೆ. ಜತೆಗೆ ಜಾನಪದ ಕಲೆಗಳು ಸಮುದಾಯಗಳನ್ನು ಒಂದುಗೂಡಿಸಿ ಪರಸ್ಪರ ಸಂಬಂಧಗಳನ್ನು ಬಲಪಡಿಸುತ್ತವೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ ಎಂ ಎಂ ಪಡಶೆಟ್ಟಿ ಮಾತನಾಡಿ, ಜಾನಪದ ಕಲೆಗಳು ಇತಿಹಾಸ, ನಂಬಿಕೆಗಳು ಮತ್ತು ಮೌಲ್ಯಗಳನ್ನು ಕಲಿಸುವ ಮಾರ್ಗವಾಗಿದ್ದು, ಈ ಜಾನಪದ ಕಲೆಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.ಬಾಗಲಕೋಟದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನಾಮಧೇಯ ಅಂದಾಜು ೪೦ ರಿಂದ ೪೫ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮಧೇಯ ವ್ಯಕ್ತಿಯ ವಾರಸುದಾರರ ಪತ್ತೆಗೆ ಠಾಣಾಧಿಕಾರಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಪತ್ತೆಯಾದ ವ್ಯಕ್ತಿಯು ೫.೧ ಪೂಟ್ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಕಪ್ಪು ತಲೆಗೂದಲು, ಬಿಳಿ ಹಾಗೂ ಕೆಂಪು ಪಟ್ಟಿ ಬಣ್ಣದ ಫುಲ್ ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಸಾರ್ವಜನಕರು ವಿಜಯಪುರ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ೦೮೩೫೨-೨೫೦೮೪೪ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ ೦೮೩೫೨-೨೫೦೯೨೩ಗೆ ಸಂಪರ್ಕಿಸಬಹುದಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದಡಿ ೨೦೨೫-೨೬ನೇ ಸಾಲಿಗೆ ವಿವಿಧ ವೃತ್ತಿಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ೩೫, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೪೫ ವರ್ಷ ವಯೋಮಿತಿಯುಳ್ಳ ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರದ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೫ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೋರಟಗಿಯ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಕುಂದು ಕೊರತೆ ಸಭೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ರೈತರಿಗೆ ಹಾಗೂ ಕುಡಿಯುವ ನೀರಿಗೆ ವಿದ್ಯುತ್ ಅಭಾವ ಆಗದಂತೆ ನಿಗಾ ವಹಿಸಿ ಗ್ರಾಹಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಎಇಇ ಚಂದ್ರಕಾಂತ ನಾಯಕ್ ಸೂಚಿಸಿದರು.ಗುರುವಾರ ಗ್ರಾಮದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡ ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಸಾಮಾನ್ಯವಾಗಿ ರೈತಾಪಿ ವರ್ಗ ಹೆಚ್ಚಿಗೆ ಇರುವುದರಿಂದ ನಮ್ಮ ಇಲಾಖೆಯ ಕೆಲವು ನಿಯಮಾವಳಿ ಗೊತ್ತಿರುವುದಿಲ್ಲ ರೈತರೊಂದಿಗೆ ಹೊಂದಿಕೊಂಡು ಇಲಾಖೆಯ ಮಾರ್ಗ ಸೂಚಿಗಳನ್ನು ವಿವರಿಸಬೇಕು ಮೋರಟಗಿ ಗ್ರಾಮವು ಕೆಲವೇ ದಿನಗಳಲ್ಲಿ ಹೂಬಳಿ ಆಗುವ ಎಲ್ಲ ಲಕ್ಷಣಗಳು ಎದ್ದು ಕಾಣುತ್ತಿವೆ. ಹೀಗಾಗಿ ಈ ಗ್ರಾಮವನ್ನು ಸೋಲಾರ ಗ್ರಾಮವೆಂದು ಪರಿಗಣಿಸಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳೊಂದಿಗೆ ಮಾತನಾಡಿ ಕಮರ್ಶಿಯಲ್ ಗಳಿಗೆ ಸೋಲಾರ್ ಅಳವಡಿಸುವ ವ್ಯವಸ್ಥೆ ಮಾಡುತ್ತೇವೆ ಗ್ರಾಹಕರೂ ಕೂಡಾ ಸಿಬ್ಬಂದಿಗಳ ಜೊತೆಗೆ ಸೌಜನ್ಯದಿಂದ ಇದ್ದು ತಮ್ಮ ವಿದ್ಯುತ್ ಬಿಲ್ಲನ್ನು ನಿಗದಿ ಪಡಿಸಿದ ದಿನಾಂಕದಂದು ಭರಣಾ ಮಾಡಬೇಕು ವಿದ್ಯುತ್ ಸಮಸ್ಯೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆ.೦೬ ರಂದು ಬುಧವಾರ ಬೆಂಗಳೂರಿನಲ್ಲಿ ಆಯೋಜಿಸಲಾದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ, ಚಡಚಣ ತಾಲೂಕಿನ ಹಾಲಹಳ್ಳಿಯ ನಿಲಯ ಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಹುಬ್ಬಳ್ಳಿ ಅವರಿಗೆ `’ಅತ್ಯುತ್ತಮ ನಿಲಯ ಪಾಲಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.ಈ ಪ್ರಶಸ್ತಿಯನ್ನು ರಾಜ್ಯದ ವಸತಿ ಮತ್ತು ವಕ್ಫ್ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಮಲ್ಲಿಕಾರ್ಜುನ ಹುಬ್ಬಳ್ಳಿ ಅವರು ನೈತಿಕತೆ, ಶಿಸ್ತು, ವಿದ್ಯಾರ್ಥಿ ಹಿತಪಾಲನೆ ಹಾಗೂ ನೈಜ ಸೇವಾಭಾವದಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದು, ಇದೇ ನಿಷ್ಠವಂತ ಕೆಲಸಗಳು ಅವರು ಈ ಗೌರವಕ್ಕೆ ಪಾತ್ರರಾಗಲು ಕಾರಣವಾಗಿದೆ.ಈ ಸಾಧನೆಗೆ ಹಾಲಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಕುಮಾರ ಕಾಂಬಳೆ,ಮೋಹನಕುಮಾರ ದಿಬ್ಬದಳ್ಳಿ, ಜಿ.ಎಸ್. ಬನಸೋಡೆ, ಅಪ್ಪಾಸಾಹೇಬ ಅಂಕುಶ, ಸುನೀಲ ಅಗಸರ, ಸಂಗಮೇಶ ಹಿಟ್ನಳ್ಳಿ, ಗಿರೀಶ ಕಾಂಬಳೆ, ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೃದಯಪೂರ್ವಕವಾಗಿ ಪ್ರಶಸ್ತಿ ವೀಜೆತ ಮಲ್ಲಿಕಾರ್ಜುನ ಹುಬ್ಬಳ್ಳಿ ಅವರಿಗೆ ಗುರುವಾರ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆ.೦೬ ಬುಧವಾರ ರಂದು ಬೆಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ, ಚಡಚಣ ತಾಲೂಕಿನ ಹಾಲಹಳ್ಳಿ ಅಲ್ಪಸಂಖ್ಯಾತರ ವಸತಿ ಶಾಲೆಯ ವಿದ್ಯಾರ್ಥಿನಿ ಸ್ವಾಲೇಹಾ ರಜಾಕ್ ನದಾಫ ಅವರು ೨೦೨೪–೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೫ ಕ್ಕೆ ೬೦೬ ಅಂಕಗಳನ್ನು ಹಾಗೂ 96.96% ಗಳಿಸುವ ಮೂಲಕ ಪ್ರಭಾವಶಾಲಿ ಸಾಧನೆ ತೋರಿದ್ದಾರೆ.ಗಣಿತ ವಿಷಯದಲ್ಲಿ ೧೦೦ ಕ್ಕೆ ೧೦೦ ಅಂಕಗಳನ್ನು ಗಳಿಸಿರುವ ಇವಳ ಸಾಧನೆಗೆ ಮಾನ್ಯ ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರ ಸಮ್ಮುಖದಲ್ಲಿ ಒಂದು ಲ್ಯಾಪ್‌ಟಾಪ್ ಹಾಗೂ ₹೧೦,೦೦೦ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.ಈ ಸಾಧನೆಯಿಂದ ಹಾಲಹಳ್ಳಿ ವಸತಿ ಶಾಲೆಗೆ ಹೆಮ್ಮೆ ತಂದಿದ್ದು, ವಿದ್ಯಾರ್ಥಿನಿ ಸ್ವಾಲೇಹಾ ನದಾಫ ಅವರಿಗೆ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿಗಳು,ಹಾಲಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಕುಮಾರ ಕಾಂಬಳೆ,ನಿಲಯ ಪಾಲಕ ಮಲ್ಲಿಕಾರ್ಜುನ ಹುಬ್ಬಳ್ಳಿ, ಮೋಹನಕುಮಾರ ದಿಬ್ಬದಳ್ಳಿ, ಜಿ.ಎಸ್. ಬನಸೋಡೆ, ಅಪ್ಪಾಸಾಹೇಬ ಅಂಕುಶ, ಸುನೀಲ ಅಗಸರ, ಸಂಗಮೇಶ ಹಿಟ್ನಳ್ಳಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಐಶ್ವರ್ಯ ನಗರದ ಭಾಗ್ಯಶ್ರೀ ಡೊಣಗಿ ರಾಜ್ಯ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರು ಕೊಡಮಾಡುವ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ನಗರದ ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ಪ್ರತಿಭಾವಂತ ವಿದ್ಯಾರ್ಥಿನಿ ಭಾಗ್ಯಶ್ರೀ ಡೊಣಗಿ ಆಯ್ಕೆಯಾಗಿದ್ದು ಶ್ಲಾಘನೀಯ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ ೯೪.೪ ಅಂಕ ಪಡೆದ ಭಾಗ್ಯಶ್ರೀ ಉತ್ತಮ ಸಾಧನೆ ಮಾಡಿದ್ದು ಈ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದಾರೆ.ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜರುಗುವ ಸಮಾರಂಭವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವೆಂಕಪ್ಪ ಸುಗತೇಕರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ರಾಜ್ಯಧ್ಯಕ್ಷ ಸಿ ಎಸ್ ಷಡಾಕ್ಷರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ, ಜಿ ಪಂ ಸಿ ಇ ಓ ಶಶಿಧರ ಕುರೇರ, ಜಿಲ್ಲಾ ಎಸ್ ಪಿ ಸಿದ್ಧಾರ್ಥ ಗೋಯಲ್ ಆಗಮಿಸಲಿದ್ದಾರೆ.ಸಸ್ಯ ಅಧ್ಯಯನ, ಚಿತ್ರಕಲೆ, ಯೋಗ, ಭಾಷಣ, ಕ್ವಿಜ್ ನಲ್ಲಿ ಪ್ರಶಸ್ತಿ ಪಡೆದ ಭಾಗ್ಯಶ್ರೀ ಕೊರೋನಾ ಅರಿವು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶತಮಾನ ಕಂಡ ಸರ್ಕಾರಿ ಉರ್ದು ಶಾಲೆಯ ಸ್ಥಳಾಂತರವನ್ನು ವಿರೋಧಿಸಿ ರಾಜ್ಯ ಮುಸ್ಲಿಂ ಕೌನ್ಸಿಲ್ ಮತ್ತು ಶಾಲೆಯ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಧರಣಿ ಉಪವಾಸ ಸತ್ಯಾಗ್ರಹ ಶಿಕ್ಷಣ ಇಲಾಖೆಯ ಭರವಸೆಯ ಮೇರೆಗೆ ತಾತ್ಕಾಲಿಕ ಅಂತ್ಯ ಕಂಡಿದೆ.ಪಟ್ಟಣದ ಹೃದಯ ಭಾಗದ ಶ್ರೀ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ಇರುವ ಸರ್ಕಾರಿ ಉರ್ದು ಶಾಲೆಗೆ ಅಂದಾಜು ೧೨೫ ವರ್ಷಗಳ ಇತಿಹಾಸವಿದೆ. ಈ ಶಾಲೆಯನ್ನು ಸಾರ್ವಜನಿಕರ ಗಮನಕ್ಕೆ ತರದೇ ಸ್ಥಳಾಂತರಿಸಲಾಗಿದೆ. ಈ ಶಾಲೆಯನ್ನು ಪುರಸಭೆಗೆ ಹಸ್ತಾಂತರಿಸುವ ಕುತಂತ್ರ ನಡೆದಿದೆ ಎಂದು ಆರೋಪಿಸಿ ಮತ್ತು ಕೂಡಲೇ ಶಾಲೆಯನ್ನು ಪುನರ್ ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮುಸ್ಲಿಂ ಕೌನ್ಸಿಲ್ ಮತ್ತು ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎದುರು ಬುಧವಾರ ಬೆಳಿಗ್ಗೆ ಧರಣಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.ಧರಣಿಯ ಕಾವು ಹೆಚ್ಚುತ್ತಿದ್ದಂತೆಯೇ ಧರಣಿ ನಿರತರ ಬಳಿ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ನಾನು ಈಗಾಗಲೇ ಈ ಶಾಲೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ತಾಲೂಕಿನ ಶಿವಣಗಿ ಗ್ರಾಮದದ ಹನುಮಾನ ದೇವಸ್ಥಾನದ ಹತ್ತಿರ ಇರುವ ಮಾರುಕಟ್ಟೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಮಾರುಕಟ್ಟೆಯಲ್ಲಿ ಉಪಜೀವನಕ್ಕಾಗಿ ಮಾರುಕಟ್ಟೆಗೆ ವ್ಯಾಪಾರ ಮಾಡಲು ಸುತ್ತ ಮುತ್ತಲಿನ ಗ್ರಾಮದಿಂದ ಬಂದ ವ್ಯಾಪಾರಸ್ಥರಿಗೆ ಶೌಚಾಲಯ, ಶುದ್ದ ಕುಡಿಯುವ ನೀರಿನ ಘಟಕ ಮುಂತಾದ ಮೂಲಭೂತ ಸೌಲಭ್ಯದಿಂದ ಬಳಲುತ್ತಿದ್ದಾರೆ. ಇದೇ ಜಾಗದಲ್ಲಿ ಮಳೆಯಾದರೆ ಚರಡಂಡಿ ಅಸ್ತವ್ಯಸ್ಥಗೊಂಡು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಲ್ಲಿರುವ ಮಾರುಕಟ್ಟೆಗಾಗಿ ನಿರ್ಮಿಸಿದ ಜಾಗವು ತುಂಬಾ ಚಿಕ್ಕದಾಗಿದ್ದು, ಸಾರ್ವಜನಿಕರಿಗೆ ಸಂಚಾರ ಮಾಡಲು ಅಥವಾ ವ್ಯಾಪಾರ ಮಾಡಲು ಗಿಜಿಗಿಜಿಯಾಗಿ ಆಡಚಣೆಯಾಗುತ್ತಿದೆ. ಆದ ಕಾರಣ ಇಂತಹ ಗಂಭೀರ ವಿಷಯವನ್ನು ಪರಿಗಣಿಸಿ ಶಿವಣಗಿ ಮಾರುಕಟ್ಟೆ ಜನರಿಗೆ ಅನುಕೂಲ ಕಲ್ಪಿಸಿಕೊಡಲು ಒತ್ತಾಯಿಸಿದರು.ಇಲ್ಲಿಯ ವ್ಯಾಪಾರಸ್ಥರಿಗೆ ಸಾರ್ವಜನಿಕರಿಗೆ ಮೂಲಭೂತ ಅವಕಾಶ ಕಲ್ಪಿಸಿಕೊಡದೇ ಹೋದಲ್ಲಿ ಮುಂಬರುವ ದಿನದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದರು.ಈ…
