Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಲೋಣಿ ಬಿ.ಕೆ. ವಲಯದ ಬರಡೋಲ ಗ್ರಾಮದಲ್ಲಿ ಬುಧವಾರ ನಡೆದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರದಲ್ಲಿ ತಾಲೂಕಿನ ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಟರಾಜ. ಎಲ್.ಎಮ್ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಆರ್ಥಿಕ ಸ್ಥಿರತೆ ಅಗತ್ಯ. ಒಕ್ಕೂಟಗಳ ಬಲಪಡಿಸುವಿಕೆ ಮತ್ತು ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಗ್ರಾಮೀಣ ಸಮಾಜದ ಅಭಿವೃದ್ಧಿಗೆ ವೇಗ ಸಿಗುತ್ತದೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಉದ್ದೇಶ ಮತ್ತು ಕಾರ್ಯಪದ್ಧತಿ, ಜೊತೆಗೆಒಕ್ಕೂಟ ರಚನೆ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಭೆಗಳ ಪರಿಣಾಮಕಾರಿ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಿದರು.ಬ್ಯಾಂಕಿಂಗ್ ಮತ್ತು ಸಾಲ ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಿ ಜಿಲ್ಲಾ ವಿಚಕ್ಷಣಾಧಿಕಾರಿ ಯಮನೂರಪ್ಪನವರು ಮಾತನಾಡಿ, ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ಪ್ರಗತಿ ನಿಧಿ ವಿತರಣೆ, ಸಾಲದ ಸದ್ವಿನಿಯೋಗ ಮತ್ತು ಸಂಘದ ಕಾರ್ಯಪದ್ಧತಿ, ಪ್ರಗತಿ ರಕ್ಷಾ ಕವಚ ಕಾರ್ಯಕ್ರಮ, ಸಿ.ಸಿ. ಖಾತೆ ನಿರ್ವಹಣೆ ಮತ್ತು ಲಾಭಾಂಶ ವಿತರಣೆ ಕುರಿತಾಗಿ ಮಾಹಿತಿ ನೀಡಿದರು.ಲೋಣಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕಾಂಗ್ರೆಸ್ ಪಕ್ಷದ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರನ್ನಾಗಿ ಮುಖಂಡ ತೌಫಿಕ ಪಾರ್ಥನಳ್ಳಿ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ, ಕಾನೂನು ಮಾನವ ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷ ಡಾ.ಎ.ಜೆ.ಅಕ್ರಂ ಪಾಶಾ ಅವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಾ.ಟಿ.ವೈ.ಕುಮಾರ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಟಕ ಕ್ಷೇತ್ರದಲ್ಲಿ ತಮ್ಮ ಅಪರೂಪದ ಅಭಿನಯದ ಮೂಲಕ ನಾಡಿನ ಜನರ ಹೃದಯ ಗೆದ್ದಿದ್ದ ಖ್ಯಾತ ಹಾಸ್ಯ ನಟ ಹಾಗೂ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆಯವರ ಕೊಡುಗೆ ನಾಡಿನ ಕಲಾಕ್ಷೇತ್ರಕ್ಕೆ ಅನನ್ಯವಾದದ್ದು. ಅವರಿಗೆ ಅವರೇ ಸರಿಸಾಟಿ. ಅವರ ಅಕಾಲಿನ ನಿಧನದಿಂದ ಸರ್ವಶ್ರೇಷ್ಠ ಹಾಸ್ಯ ನಟನನ್ನು ಕಳೆದುಕೊಂಡು ನಾಡಿನ ಸಾಂಸ್ಕೃತಿಕ ಕ್ಷೇತ್ರ ಬಡವಾಗಿದೆಯೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.ಬುಧವಾರ ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ದಿ.ರಾಜು ತಾಳಿಕೋಟಿಯವರ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಅಕಾಡೆಮಿಯ ಅಧಿಕಾರಿಗಳಾದ ಅನ್ನಪೂರ್ಣ ಸಂಗಳದ ಪುಷ್ಪಾ ಹಂಜಗಿ, ಸುಭಾಸ ಚಂದ್ರಗಿರಿ, ಸವರ್ಣಲತಾ ಮಠದ, ಪದ್ಮಶ್ರೀ ಮೇಟಿ, ಅರ್ಪಿತಾ, ಶಿವಕುಮಾರ, ಸ್ಟ್ಯಾನ್ಲಿಲೂಥರ, ಅಶೋಕ ಮೊದಲಾದವರು ಉಪಸ್ಥಿತರಿದ್ದರು

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗದು. ನಮ್ಮ ಬದುಕಿಗೆ ಬಣ್ಣ ಮತ್ತು ಜ್ಞಾನ ನೀಡಿದ ಶಿಕ್ಷಕರು ಜೀವನಕ್ಕೆ ದಾರಿ ತೋರುವ ಜ್ಯೊತಿ ಇದ್ದಹಾಗೆ ಎಂದು ಓಲೇಮಠದ ಆನಂದ ದೇವರು ಹೇಳಿದರು.ಇಲ್ಲಿನ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ 2006-07ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅಪೂರ್ವ ಸ್ನೇಹ ಸಂಗಮ ಹಾಗೂ ಗುರುಸ್ಮೃತಿ ಕಾರ್ಯಕ್ರಮದ ಸಾನ್ನಿದ್ಯವಹಿಸಿ ಮಾತನಾಡಿದರು.ಶಿಕ್ಷಕರು ಅಕ್ಷರ ಜ್ಞಾನದೊಂದಿಗೆ ಶಿಸ್ತು, ಸಂಯಮ ಮತ್ತು ಜೀವನ ಮೌಲ್ಯಗಳನ್ನು ಕಲಿಸಿ ನಮ್ಮನ್ನು ಉತ್ತಮ ಪ್ರಜೆಗಳಾಗಿ ರೂಪಿಸುವ ಶಕ್ತಿ ಹೊಂದಿದ್ದಾರೆ. ಯಾರ ಜೀವನದಲ್ಲಿ ಮುಳ್ಳಾಗದೆ ಇನ್ನೊಬ್ಬರ ಜೀವನಕ್ಕೆ ಮಾದರಿಯಾಗಬೇಕು ಎಂದರು. ಮುತ್ತೂರ ರಾಚೋಟೇಶ್ವರ ವಿರಕ್ತಮಠದ ಗುರುಸಿದ್ದೇಶ್ವರ ಸ್ವಾಮಿಗಳು ಮಾತನಾಡಿ, ಮಕ್ಕಳ ಜೀವನ ಉಜ್ವಲಗೊಳಿಸುವ ಕಾರ್ಯ ಶಿಕ್ಷಕರಿಗೆದೆ. ಒಬ್ಬ ಶ್ರೇಷ್ಠ ಗುರು ವ್ಯಕ್ತಿ ಅಲ್ಲ ಅದೊಂದು ಶಕ್ತಿ, ಸ್ನೇಹಿತರನ್ನು ಹಣದಿಂದ ಅಳೆಯಲು ಸಾದ್ಯವಿಲ್ಲ ಅವರನ್ನು ಒಳ್ಳೆಯ ಮನಸ್ಸಿನಿಂದ ಅಳೆಯಲು ಸಾದ್ಯ. ಅಪೂರ್ವ ಸ್ನೇಹ ಸಂಗಮ ಹೀಗೆ ಮುಂದುವರೆಯಲಿ ಎಂದರು.ಶಿಕ್ಷಕ ಪ್ರಭು ಹಿಡಕಲ್, ಆರ್.ಎಸ್.…

Read More

ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ರಾಜ್ಯ ಸರ್ಕಾರಕ್ಕೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಅತಿವೃಷ್ಟಿಯಿಂದ ಹಾಳಾದ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಹೆಕ್ಟೆರ್‌ಗೆ ೨೫ ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಒತ್ತಾಯಿಸಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲ್ಲೂಕು ಸೇರಿದಂತೆ ತಾಳಿಕೋಟೆ ತಾಲ್ಲೂಕಿನ ಕಲಕೇರಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು ೫೦ ಸಾವಿರ ಹೆಕ್ಟೆರ್‌ದಲ್ಲಿ ಬಿತ್ತನೆಯಾದ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು, ಕೂಡಲೇ ಜಿಲ್ಲಾಡಳಿತ ಈ ಪ್ರದೇಶದಲ್ಲಿ ನಷ್ಟದ ಕುರಿತು ವೈಜ್ಞಾನಿಕ ಸಮೀಕ್ಷೆ ಹಾಗೂ ವರದಿಯನ್ನು ಸರ್ಕಾರಕ್ಕೆ ನೀಡಿ ರೈತರಿಗೆ ನೆರವಿಗೆ ನಿಲ್ಲಬೇಕುತಾಲ್ಲೂಕು ವ್ಯಾಪ್ತಿಯಲ್ಲಿ ವಾಡಿಕೆಗಿಂತ ಪ್ರತಿಶತ ೬೦ ಕ್ಕಿಂತ ಹೆಚ್ಚಿನ ಮಳೆಯಾದ ಪರಿಣಾಮ ನೀರಾವರಿಯಿಂದ ವಂಚಿತವಾದ ಒಣಖುಷ್ಕಿ ಭೂಮಿ ಎಂದು ಕರೆಯಲ್ಪಡುವ ಜಮೀನುಗಳು ಸಂಪೂರ್ಣ ಹಾಳಾಗಿವೆ.ಈಗ ಇಂಥ ಪ್ರದೇಶದ ಬೆಳೆಗಳ ಸಮೀಕ್ಷೆಗಾಗಿ ಕೇವಲ ಗ್ರಾಮಾಡಳಿತಾಧಿಕಾರಿ, ಪಿಡಿಓ ಸಹಿತ ಮೂವರನ್ನು ನೇಮಕ ಮಾಡಲಾಗಿದೆ. ಇದರಿಂದ ಬೆಳೆಯ ಹಾನಿಯ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ನಿಡಗುಂದಿ ತಾಲೂಕಿನ ಹಿರಿಯ ರೈತ ಧುರೀಣ ಬಸವರಾಜ ಶಿವಪ್ಪ ಕುಂಬಾರ ಅವರು ಕನಾ೯ಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಸಮಿತಿಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜ ಕುಂಬಾರ ಅವರನ್ನು ರೈತ ಸಂಘದ ಕಾರ್ಯಕಾರಿ ಸಮಿತಿಗೆ ನೂತನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಸಂಘದ ನೀತಿ ಸಿದ್ದಾಂತಗಳಿಗೆ ಬಗ್ದರಾಗಿ ಕಾಯಕ ಗೈಯಲು ಸೂಚಿಸಿದ್ದಾರೆ.ಪ್ರತಿ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಸೇರಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೈತ ಸಂಘ,ಹಸಿರು ಸೇನೆ ಸಂಘಟನೆಯನ್ನು ಇನ್ನಷ್ಟು ಬಲವಾಗಿ ಸಂಘಟಿಸುವ ಹೊಣೆಗಾರಿಕೆ ಬಸವರಾಜ ಕುಂಬಾರ ಅವರಿಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ರೈತಪರ ಹಿತಕಾಪಾಡುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರಬೇಕೆಂದು ಆಶಿಸಿದ್ದಾರೆ. ಈ ನೇಮಕಾತಿ ಆದೇಶಕ್ಕೆ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹಾಗೂ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಜಂಟಿಯಾಗಿ ಅಂಕಿತ ಹಾಕಿ ಆದೇಶಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂದ್ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದಲ್ಲಿ ಅ.೧೬ ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯ ಮಾರಾಟ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರರು ಮದ್ಯ ಸಂಗ್ರಹಿಸುವುದು ಮತ್ತು ಮಾರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಅ.೧೬ರಂದು ವಿಜಯಪುರ ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ ನಿಗದಿತ ಸಮಯದಲ್ಲಿ ವಿಲೆಗೆ ಕ್ರಮ ವಹಿಸಬೇಕು. ಕಚೇರಿ, ಕಚೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.ತಹಶೀಲ್ದಾರ ಕಚೇರಿ ಎದುರಿನ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ನ್ಯಾಯ ಬೆಲೆ ಅಂಗಡಿಯಲ್ಲಿ ಸ್ಟಾಕ್ ರಜಿಸ್ಟರ್ ನಿರ್ವಹಣೆ ಮಾಡಬೇಕು. ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಆಹಾರ ಧಾನ್ಯಗಳನ್ನು ಎಲ್ಲ ಪಡಿತರ ಚೀಟಿದಾರರಿಗೆ ಹಂಚುವಂತೆ ಅವರು ಸೂಚನೆ ನೀಡಿದರು.ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ವಿವಿಧ ೨೪ ಸಹಕಾರಿ ಸಂಘಗಳು ನಿಯಮಾನುಸಾರ ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿರುವ ಸೌಹಾರ್ದ ಸಹಕಾರಿ ಸಂಘಗಳನ್ನು ಸಮಾಪನೆ ಮಾಡಲು ಕ್ರಮ ವಹಿಸಲಾಗುತ್ತಿದ್ದು, ಈ ಕುರಿತು ಇಂಡಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಆಕ್ಷೇಪಣೆಗಳನ್ನು ಆಹ್ವಾನಿಸಿದ್ದಾರೆ.ಇಂಡಿ ಉಪ ವಿಭಾಗದಲ್ಲಿ ನಿಯಮಾನುಸಾರ ಕಾರ್ಯನಿರ್ವಹಿಸದೇ ಇರುವ ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಇಂಡಿ, ಸಿಂದಗಿ ತಾಲೂಕಿನ ಶ್ರೀ ಬಿಸಿಲು ಸಿದ್ದೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ., ಗೋಡಿಹಾಳ, ಕೌಶಲ್ಯ ಸೌಹಾರ್ದ ಪತ್ತಿನ ಸಹಕಾರಿ., ಸಿಂದಗಿ, ಶ್ರೀ ಸಿದ್ಧರಾಮೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿ.,ಇಂಡಿ, ಶ್ರೀ ದುರ್ಗಾದೇವಿ ಪ.ಜಾ.ಮತ್ತು ಪ.ಪಂ. ಸೌಹಾರ್ದ ಪತ್ತಿನ ಸಹಕಾರಿ ನಿ., ಹೊರ್ತಿ, ಶ್ರೀ ಮುಕ್ತಾದೇವಿ ಪ.ಜಾ. ಮತ್ತು ಪ.ಪಂ. ವಿವಿದೋದ್ದೇಶಗಳ ಸೌಹಾರ್ದ ಪತ್ತಿನ ಸಹಕಾರಿ ನಿ., ಹಡಲಸಂಗ, ಸಮೃದ್ದಿ ಪತ್ತಿನ ಸೌಹಾರ್ದ ಪತ್ತಿನ ಸಹಕಾರಿ ನಿ., ದೇವರಹಿಪ್ಪರಗಿ, ಸಿಂದಗಿ ಶ್ರೀ ಓಂ ಸಾಯಿ ಸೌಹಾರ್ದ ಪತ್ತಿನ ಸಹಕಾರಿ ನಿ., ಸಿಂದಗಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಡಿಸೆಂಬರ್ ೨೧ ರಿಂದ ೨೩ ರವರೆಗೆ ಮೌಲ್ಯವರ್ಧನೆ ಮತ್ತು ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ತೋಟಗಾರಿಕಾ ಮೇಳದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ವ್ಯಾಪ್ತಿಯಲ್ಲಿ ಬರುವ ೨೪ ಜಿಲ್ಲೆಗಳ ಪ್ರತಿ ಜಿಲ್ಲೆಗೆ ಒಬ್ಬರಂತೆ ಶ್ರೇಷ್ಠ ರೈತ, ರೈತ ಮಹಿಳೆ ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಮುಖ್ಯಸ್ಥರು, ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ,ತಿಡಗುಂದಿ ಅಥವಾ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಇವರಿಂದ ಪಡೆಯಬಹುದು ಅಥವಾ ವೆಬ್‌ಸೈಟ್ www.uhsbagalkot.karnataka.gov.inಮೂಲಕ ಪಡೆದು, ಭರ್ತಿ ಮಾಡಿ, ನವೆಂಬರ್ ೫, ೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೊ: ೯೪೮೦೬೯೬೩೯೦ ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ ಸಂಖ್ಯೆ ೧೮೦೦ ೪೨೫ ೭೯೧೦ ಗೆ ಸಂಪರ್ಕಿಸಬಹುದು ಎಂದು ತಿಡಗುಂದಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ…

Read More