Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದೊಡನೆ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜರುಗಿದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರೋತ್ಸವದ ಸಂಭ್ರಮದ ಆಚರಣೆಗೆ ಎಲ್ಲ ಇಲಾಖೆ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಆದ್ದರಿಂದ ಸರ್ಕಾರದ ನಿರ್ದೇಶನ ಜೊತೆಗೆ ನಿಮ್ಮ ಸಲಹೆಗಳನ್ನು ಅನುಸರಿಸಿ ಆಚರಣೆ ಮಾಡೋಣ ಎಂದರು.ಸಭೆಯಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ರೈತಸಂಘದ ಸಿದ್ಧನಗೌಡ ಪಾಟೀಲ, ಅಜೀಜ್ ಯಲಗಾರ, ರೆಹಮಾನ್ ಕಣಕಾಲ್, ಕಾಶೀನಾಥ ತಳಕೇರಿ ಮಾತನಾಡಿದರು.ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರ ಸನ್ಮಾನ, ಶಾಲಾ ಮಕ್ಕಳಿಗೆ ಉಪಹಾರದ ವ್ಯವಸ್ಥೆ, ಕಾರ್ಯಕ್ರಮ ಪೂರ್ಣ ಶಾಸಕರ ಉಪಸ್ಥಿತಿ, ಸರ್ಕಾರದ ನಡಾವಳಿ ಅನುಸಾರ ವೇದಿಕೆಯಲ್ಲಿ ಗಣ್ಯರ ಹಾಜರಾತಿ ಕುರಿತು ಚರ್ಚೆಗಳಾದವು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಬಿಇಓ ಟಿಎಸ್. ಆಲಗೂರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಅಕ್ಷರದಾಸೋಹ ಸಹಾಯಕ ನಿರ್ದೇಶಕ…

Read More

ವಿಜಯಪುರದ ಮಹಿಳಾ ವಿವಿ ಮತ್ತು ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿವಿ ಮಧ್ಯ ಶೀಘ್ರದಲ್ಲೇ ಶೈಕ್ಷಣಿಕ ಸಹಕಾರ ಒಪ್ಪಂದ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಅವರ ನೇತೃತ್ವದ ನಿಯೋಗವು ಆಗಸ್ಟ್ ೪ ಮತ್ತು ೫ರಂದು ದೇಶದ ಪ್ರಪ್ರಥಮ ಮಹಿಳಾ ವಿಶ್ವವಿದ್ಯಾನಿಲಯವಾಗಿರುವ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಚರ್ಚ್ಗೇಟ್ ಹಾಗೂ ಜುಹು ಆವರಣಗಳಿಗೆ ಭೇಟಿ ನೀಡಿ, ಶೈಕ್ಷಣಿಕ ಹಾಗೂ ಸಂಶೋಧನಾ ಸಹಕಾರದ ಕುರಿತು ಮಹತ್ವದ ಚರ್ಚೆ ನಡೆಸಿತು.ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್ ಅವರು ನಿಯೋಗವನ್ನು ಸ್ವಾಗತಿಸಿ, ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಉನ್ನತ ಶಿಕ್ಷಣ, ಸಂಶೋಧನೆ, ನವೋದ್ಯಮ, ಕೌಶಲ್ಯಾಭಿವೃದ್ಧಿ ಮತ್ತು ವಿದ್ಯಾರ್ಥಿ-ಕೇಂದ್ರಿತ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.ವಿಜಯಪುರ ಮಹಿಳಾ ವಿವಿಯ ಈ ನಿಯೋಗದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಪಿ.ಜಿ.ತಡಸದ, ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಜಿ.ರಜಪೂತ, ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಬಿ. ಸೋನಾರ್ ಹಾಗೂ…

Read More

ಕರ್ನಾಟಕದಲ್ಲಿ ಲಿಂಗಾಯತರಿಗೆ ಅಲ್ಪ ಸಂಖ್ಯಾತ ಸ್ಥಾನಮಾನ ನೀಡಲು ಡಾ.ಶಶಿಕಾಂತ ಪಟ್ಟಣ ಆಗ್ರಹ ಮಾನ್ಯರೇ,೧೨ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮವು ಸಮಾನತೆ, ಮಾನವೀಯ ಘನತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯ, ಆಧ್ಯಾತ್ಮಿಕ ಸ್ವಾತಂತ್ರ್ಯ ಹಾಗೂ ಜಾತಿ ಆಧಾರಿತ ತಾರತಮ್ಯದ ನಿರಾಕರಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ.ಇಷ್ಟಲಿಂಗ ಧಾರಣೆ ಮತ್ತು ಪೂಜೆ, ವಚನ ಸಾಹಿತ್ಯ, ಹಾಗೂ ಶರಣ ಸಂಪ್ರದಾಯಗಳು ಲಿಂಗಾಯತ ಧರ್ಮದ ವಿಶಿಷ್ಟ ಧಾರ್ಮಿಕ ಅಡಿಪಾಯಗಳಾಗಿವೆ. ಲಿಂಗಾಯತ ಸಮುದಾಯದ ಅನೇಕರು ತಮ್ಮನ್ನು ಪ್ರಾಥಮಿಕವಾಗಿ ಲಿಂಗಾಯತ ಧರ್ಮದ ಅನುಯಾಯಿಗಳೆಂದು ಗುರುತಿಸಿಕೊಳ್ಳುತ್ತಿದ್ದು, ಇದನ್ನು ಪ್ರತ್ಯೇಕ ಧಾರ್ಮಿಕ ಸಂಪ್ರದಾಯವೆಂದು ಪರಿಗಣಿಸುತ್ತಾರೆ. ಈ ವಿಶಿಷ್ಟ ಧಾರ್ಮಿಕ ಅಸ್ತಿತ್ವವನ್ನು ಅಧ್ಯಯನ ಮಾಡಲು ಕರ್ನಾಟಕ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ ದಾಸ್ ಸಮಿತಿಯು ಲಿಂಗಾಯತ ಧರ್ಮದ ಐತಿಹಾಸಿಕ, ಧಾರ್ಮಿಕ, ತಾತ್ವಿಕ ಹಾಗೂ ಸಾಮಾಜಿಕ ಹಿನ್ನೆಲೆಯನ್ನು ಸಮಗ್ರವಾಗಿ ಪರಿಶೀಲಿಸಿ ತನ್ನ ವರದಿಯನ್ನು ಸಲ್ಲಿಸಿತು. ಸಮಿತಿಯ ವರದಿಯ ಆಧಾರದ ಮೇಲೆ ಕರ್ನಾಟಕ ಸಚಿವ ಸಂಪುಟವು 2018ರ ಮಾರ್ಚ್ ತಿಂಗಳಲ್ಲಿ ಲಿಂಗಾಯತ ಧರ್ಮಕ್ಕೆ…

Read More

ಕಲಕೇರಿಯಲ್ಲಿ ಹೆಚ್‌ಐವಿ ಏಡ್ಸ್ ಕುರಿತ ಜಾಗೃತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಇಂದಿನ ವೈಜ್ಞಾನಿಕ ಮತ್ತು ತಂತ್ರಜ್ಞಾನದ ಯುಗದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವ ದೃಷ್ಟಿಯಿಂದ ಆರೋಗ್ಯ ಇಲಾಖೆಯು ಜಾರಿಗೆ ತಂದಿರುವ ಯೋಜನೆಗಳನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳುವ ಮೂಲಕ ವಿಶೇಷವಾಗಿ ಯುವಕ ಯುವತಿಯರು ಆರೋಗ್ಯ ಇಲಾಖೆಯ ಸ್ಕ್ಯಾನರ್ ಬಳಸಿ ತಮ್ಮ ಆರೋಗ್ಯದ ಸ್ಥಿತಿಗತಿಯನ್ನು ತಾವೇ ಸ್ವಯಂ ದೃಢೀಕರಿಸಿಕೊಳ್ಳುವ ಮತ್ತು ಅವಶ್ಯಕ ಆರೋಗ್ಯ ಸೇವೆ ಹಾಗೂ ಪರಿಹಾರ ಪಡೆಯುವ ಅವಕಾಶವಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲಕೇರಿಯ ಸಮುದಾಯ ಆರೋಗ್ಯ ಕೇಂದ್ರ ಆಪ್ತ ಸಮಾಲೋಚಕರಾದ ಡಾ. ಸಂತೋಷ ಟೆಂಗಳಿ ಹೇಳಿದರು.ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮಾರ್ಗದರ್ಶನದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಆದರ್ಶ ಪ್ರಥಮದರ್ಜೆ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ನಡೆದ ಊIಗಿ/ಂIಆS ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಊIಗಿ/ಂIಆS ಹರಡುವಿಕೆ, ತಡೆಗಟ್ಟುವ ಕ್ರಮಗಳು, ಊIಗಿ ಪರೀಕ್ಷೆ, ಚಿಕಿತ್ಸೆ ಹಾಗೂ ಂಖಖಿ ಸೇವೆಗಳ ಹಾಗೂ ‘ಬ್ರೇಕ್ ಫ್ರೀ ಇಂಡಿಯಾ’…

Read More

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ | ಕೆಯುಡಬ್ಲ್ಯೂಜೆ ಸ್ವಾಗತ | ವಾರ್ತಾ ಇಲಾಖೆ ಆಯುಕ್ತರಿಗೆ ಸನ್ಮಾನ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್‌ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ.ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕಮಿಟಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರಂತರವಾಗಿ ನಡೆಸಿದ ಹೋರಾಟ ಮತ್ತು ಒತ್ತಾಯದ ಫಲವಾಗಿ, ಒಂದೇ ಹಂತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಮಂಜೂರು ಮಾಡಿರುವುದು ಇದೇ ಮೊದಲ ಬಾರಿ ಎನ್ನುವುದು ಸ್ವಾಗತಾರ್ಹ.ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾಖಲೆಗಳನ್ನು ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಿರುವ ವಾರ್ತಾ ಇಲಾಖೆಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.ಇದೇ ವೇಳೆ, ಇನ್ನೂ ಬಸ್…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಮಂದಿರವು ಕೇವಲ ಚಿಕಿತ್ಸಾ ಕೇಂದ್ರವಲ್ಲ, ಬದಲಿಗೆ ತಡೆಗಟ್ಟುವಿಕೆ, ಉತ್ತೇಜಕ, ಗುಣಪಡಿಸುವ, ಪುನರ್ವಸತಿ ಮತ್ತು ಉಪಶಮನಕಾರಿ ಸೇವೆಗಳನ್ನು ಒಳಗೊಂಡ ಒಂದು ಸಮಗ್ರ ಆರೋಗ್ಯ ಕೇಂದ್ರವಾಗಿದೆ. ದೇಶದ ಅಸ್ತಿತ್ವದಲ್ಲಿರುವ ಉಪ-ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಸಾರ್ವತ್ರಿಕವಾಗಿ ಉಚಿತ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಶಾಸಕ ವಿಠ್ಠಲ ಕಟಕದೋಂಡರವರು ಹೇಳಿದರು.ಶುಕ್ರವಾರದಂದು ರೇವತಗಾಂವ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕದ ವತಿಯಿಂದ ೧೫ ನೇ ಹಣಕಾಸಿನ ಆಯೋಗದಡಿಯಲ್ಲಿ ಆಯುಷ್ಮಾನ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು. ಈ ಕೇಂದ್ರಗಳು ಕೇವಲ ಕಾಯಿಲೆ ಗುಣಪಡಿಸುವುದಷ್ಟೇ ಅಲ್ಲದೆ, ತಾಯಿ-ಮಗುವಿನ ಆರೋಗ್ಯ, ಅಸಾಂಕ್ರಾಮಿಕ ರೋಗಗಳ ತಪಾಸಣೆ, ಮಾನಸಿಕ ಆರೋಗ್ಯ, ದಂತ, ಕಣ್ಣುಮತ್ತು ಕಿವಿ-ಮೂಗು-ಗಂಟಲು ಸಮಸ್ಯೆಗಳ ಜೊತೆಗೆ ಯೋಗ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ (ಜಮಖಂಡಿ): ಗ್ರಾಮೀಣ ಬದುಕಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಜಾನಪದ ಕಲೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿದ್ದು, ಅವುಗಳ ಸಂರಕ್ಷಣೆ ಹಾಗೂ ಬೆಳವಣಿಗೆಯಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಬೇಕು ಎಂದು ಸಮಾಜಮುಖಿ ಚಿಂತಕ ಕಂಬಾಗಿ ಸುರೇಶ್ ಕರೆ ನೀಡಿದರು.ಜಮಖಂಡಿ ತಾಲೂಕಿನ ತುಬಚಿ ಗ್ರಾಮದಲ್ಲಿ ದುರ್ಗಾದೇವಿ ವಾರದ ಅಂಗವಾಗಿ ಆಯೋಜಿಸಲಾದ “ಗೀ ಗೀ ಪದ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಆಧುನಿಕತೆಯ ವೇಗದಲ್ಲಿ ಅನೇಕ ಜಾನಪದ ಕಲಾಪ್ರಕಾರಗಳು ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗ್ರಾಮೀಣ ಬದುಕಿನ ಅನುಭವ, ಜನಜೀವನದ ಮೌಲ್ಯಗಳು ಹಾಗೂ ಜನಪದ ಜ್ಞಾನವನ್ನು ಒಳಗೊಂಡಿರುವ ಇಂತಹ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಜಾನಪದ ಗಾಯಕಿ ಪೂರ್ಣಿಮಾ ಹಂದಿಗುಂದ, “ಗೀ ಗೀ ಪದ” ಕೇವಲ ಮನರಂಜನೆಯ ಮಾಧ್ಯಮವಲ್ಲ. ಅದು ರೈತರ ಬದುಕು, ಸಾಮಾಜಿಕ ಕಳಕಳಿ, ಇತಿಹಾಸ ಹಾಗೂ ಜನರ ಭಾವನೆಗಳನ್ನು ಜೀವಂತವಾಗಿ ಕಟ್ಟಿಕೊಡುವ ಮೌಖಿಕ…

Read More

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಮತ್ತು ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ವಿರೋಧ | ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾಧಿಕಾರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಮತ್ತು ಶಿಕ್ಷಕರ ನೇಮಕಾತಿ ಅಧಿಸೂಚನೆ ವಿರೋಧಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್(ನೋಂ) ವಿಜಯಪುರ ಜಿಲ್ಲಾ ಸಮಿತಿಯಿಂದ ಶುಕ್ರವಾರ ದಿನಾಂಕ 7 ಅಗಸ್ಟ್ ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಭಾಸಾಪ ಸಹ ಕಾರ್ಯದರ್ಶಿ ಮಯೂರಕುಮಾರ ತಿಳಗೂಳಕರ ಅವರು, “ಕರ್ನಾಟಕ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಐದನೆಯ ತರಗತಿಯವರೆಗೆ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ವಿವರಿಸಿದರು.ಈಗ ಶಾಲಾ ಶಿಕ್ಷಣ ಇಲಾಖೆಯು ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ನಿರೀಕ್ಷರ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಅದರಲ್ಲಿ ಕನ್ನಡ ಶಿಕ್ಷಕರ ನೇಮಕಾತಿಯನ್ನೇ ಕೈಬಿಡಲಾಗಿದೆ. ಅಲ್ಲದೆ ವಿಜ್ಞಾನ, ಗಣಿತ ಸೇರಿದಂತೆ ಎಲ್ಲಾ ವಿಷಯಗಳ ಶಿಕ್ಷಕರ ನೇಮಕಾತಿಗೆ ಆಂಗ್ಲಭಾಷಾ ಪ್ರೌಢಿಮೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.ಅಭಾಸಾಪ ಜಿಲ್ಲಾಧ್ಯಕ್ಷ ವಿವೇಕ ಕುಲಕರ್ಣಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾಲದ ಹಣಕ್ಕೆ ನೀಡಿದ್ದ ಚೆಕ್, ಬೌನ್ಸ್ ಆದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ರಾಮಮೂರ್ತಿ ಎನ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.ತಾಳಿಕೋಟೆ ನಿವಾಸಿ ರವಿಚಂದ್ರ ಬಿರಾದಾರ ಅವರ ಪರವಾಗಿ ಎನ್.ಜಿ.ಕುಲಕರ್ಣಿ ವಕೀಲರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಸಂಗಮೇಶ್ ಅಲಿಯಾಸ್ ಸಂಗು ದೇಸಾಯಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿತು.ದೂರಿನ ಪ್ರಕಾರ, ಆರೋಪಿ ೨೦೧೮ರಲ್ಲಿ ₹೨ ಲಕ್ಷ ಕೈ ಸಾಲ ಪಡೆದು, ಅದರ ಮರುಪಾವತಿಗಾಗಿ ನೀಡಿದ್ದ ಚೆಕ್ ಬ್ಯಾಂಕ್‌ನಲ್ಲಿ “ಈuಟಿಜs Iಟಿsuಜಿಜಿiಛಿieಟಿಣ” ಕಾರಣದಿಂದ ಅಮಾನ್ಯಗೊಂಡಿತ್ತು. ಬಳಿಕ ಕಾನೂನು ನೋಟಿಸ್ ನೀಡಿದರೂ ಹಣ ಪಾವತಿಸದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಅಂತಿಮವಾಗಿ, ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯ ಕಲಂ ೧೩೮ರಡಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ ನ್ಯಾಯಾಲಯ, ₹೨,೧೦,೦೦೦ ದಂಡ ವಿಧಿಸಿದೆ. ಅದರಲ್ಲಿ ₹೫,೦೦೦ ಸರ್ಕಾರಕ್ಕೆ ದಂಡವಾಗಿ ಹಾಗೂ ಉಳಿದ ₹೨,೦೫,೦೦೦ನ್ನು ದೂರುದಾರರಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದರೆ…

Read More

ವಿಜಯಪುರ ನಗರದ ಕೋಟೆಗೋಡೆ ಸುತ್ತಮುತ್ತ ಮಳೆ ನೀರು ಹರಿವಿಗೆ ಅಡೆತಡೆ ತೆರವು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶಿವಾಜಿ ಸರ್ಕಲ್‌ನಿಂದ ಲಿಂಗದಗುಡಿ ರಸ್ತೆ ಹಾಗೂ ಗಚ್ಚಿನ ಕಟ್ಟಿ ಕಾಲೋನಿಗೆ ಹೊಂದಿಕೊಂಡಿರುವ ಕೋಟೆಗೋಡೆ ಸುತ್ತಲೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಮತ್ತು ಪ್ರವಾಹ ಉಂಟಾಗದಂತೆ ತಡೆಯಲು ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ನಿರ್ಧರಿಸಲಾಗಿದೆ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಪಾಲಿಕೆ ಆಯುಕ್ತರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ತಿಳಿಸಿದ ಅವರು, ಕೋಟೆಗಳ ಸುತ್ತಮುತ್ತಲೂ ಬೆಳೆದಿರುವ ಕಂಟಿ ಬೇಲಿ ಹಾಗೂ ಗಿಡ-ಗಂಟಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಉಭಯ ಅಧಿಕಾರಿಗಳು ತೀರ್ಮಾನಿಸಿದರು.ಜೊತೆಗೆ ಕೋಟೆ ಕಂದಕದ ಸುತ್ತಮುತ್ತ ಹೂಳೆತ್ತಿ, ನೀರಿನ ಹರಿವಿಗೆ ಅನುಕೂಲವಾಗುವಂತೆ ಅಗಲೀಕರಣಗೊಳಿಸಲು ನಿರ್ಧರಿಸಿದರು.ನೀರು ಸುಗಮವಾಗಿ ಹರಿಯಲು ತಡೆಗೋಡೆ ನಿರ್ಮಾಣ ಮತ್ತು ಮಾರ್ಗ ಮಧ್ಯೆದಲ್ಲಿರುವ ಅಡೆತಡೆಗಳನ್ನು ತೆರವುಗೊಳಿಸಲು ಸಭೆ ನಿರ್ಧರಿಸಿತು.ಶಾಶ್ವತ ಪರಿಹಾರ:ಈ ಕಾಮಗಾರಿಗಳು…

Read More